ನವದೆಹಲಿ: ಪಂಜಾಬ್‌ನ ಜಲಂಧರ್‌ನಲ್ಲಿ ಕಣ್ಗಾವಲು ಡ್ರೋನ್ ಪತ್ತೆಯಾಗಿದ್ದು, ಅದನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ತಡೆದಿವೆ ಎಂದು ಜಲಂಧರ ಉಪ ಆಯುಕ್ತರು ತಿಳಿಸಿದ್ದಾರೆ. ಸಶಸ್ತ್ರ ಪಡೆಗಳು ರಾತ್ರಿ 9:20 ರ ಸುಮಾರಿಗೆ ಮಾಂಡ್ ಗ್ರಾಮದ ಬಳಿ ಕಣ್ಗಾವಲು ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ. ತಜ್ಞರ ತಂಡವು ಅವಶೇಷಗಳನ್ನು ಹುಡುಕುತ್ತಿದೆ” ಎಂದು ಜಲಂಧರ ಜಿಲ್ಲಾಧಿಕಾರಿ ಹಿಮಾಂಶು ಅಗರ್ವಾಲ್ ಸಂದೇಶದಲ್ಲಿ ತಿಳಿಸಿದ್ದಾರೆ. ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ ಜನರು ಅವಶೇಷಗಳ ಬಳಿ ಹೋಗಬೇಡಿ ಮತ್ತು ಏನಾದರೂ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅವರು ವಿನಂತಿಸಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ, “ಜಲಂಧರದಲ್ಲಿ ರಾತ್ರಿ 10 ಗಂಟೆಯಿಂದ ಯಾವುದೇ ಡ್ರೋನ್ ಚಟುವಟಿಕೆ ಕಂಡುಬಂದಿಲ್ಲ” ಎಂದು ಅವರು ದೃಢಪಡಿಸಿದ್ದಾರೆ. ಅಧಿಕಾರಿಗಳು ಯಾವಾಗಲೂ ಜಾಗರೂಕರಾಗಿರುತ್ತಾರೆ ಮತ್ತು ಚಿಂತಿಸಬೇಕಾಗಿಲ್ಲ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು. ಕೆಲವು ಪ್ರದೇಶಗಳಲ್ಲಿ ವರದಿಯಾಗಿರುವಂತೆ ಜನರು ಶಾಂತವಾಗಬೇಕು...
Top Stories
ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್..!
ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್ ಉಪಪ್ರಧಾನಿ..!
ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಕಾರ್ಯಕ್ರಮ
ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..!
ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!
ಸಂಸದ ತರೂರ್ ನಿಲುವಿಗೆ ಕಾಂಗ್ರೆಸ್ ಅತೃಪ್ತಿ ; ಆದ್ರೆ ಪಾಕ್ ಭಯೋತ್ಪಾದನೆ ವಿರುದ್ಧ ಸರ್ಕಾರದ ಜಾಗತಿಕ ಸಂಪರ್ಕ ಯೋಜನೆಯಲ್ಲಿ ಪ್ರಮುಖ ಪಾತ್ರ..?
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ: ಗಣಪತಿ ಉಳ್ವೇಕರ
ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್ ನಿವೃತ್ತ ಏರ್ ಮಾರ್ಷಲ್..!
ಪ.ಜಾತಿ ಒಳ ಮೀಸಲಾತಿ ಸಮೀಕ್ಷೆ: ಅವಧಿ ವಿಸ್ತರಣೆ
ಜಿಲ್ಲೆಯಲ್ಲಿ “ಮುಂಗಾರು” ಸಮಸ್ಯೆಗಳನ್ನು ಎದುರಿಸಲು 24×7 ಸಿದ್ದವಾಗಿರಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?
ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?
ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..!
ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ; ಬಿಬಿಎಂಪಿ..!
ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!
ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಮೂಲಕ ರೂ. 1095 ಕೋಟಿ ನೆರವು..!
ಗೋಕರ್ಣದಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆ : ಎಸ್ಪಿ ನಾರಾಯಣ್
ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ
ಆಪರೇಷನ್ ಸಿಂಧೂರ ಹೆಸರಿನ ಭಾರತದ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ನಡೆಸಿದ ನಿಖರ ದಾಳಿಯ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ರಾವಲ್ಪಿಂಡಿಯಲ್ಲಿರುವ ಜನರಲ್ ಹೆಡ್‌ಕ್ವಾರ್ಟರ್ಸ್ (GHQ) ನಲ್ಲಿರುವ ಸುರಕ್ಷಿತ ಬಂಕರ್‌ಗೆ ಸ್ಥಳಾಂತರಿಸಲಾಗಿದೆ ಎಂದು ಕೆಲ ವರದಿಗಳು ತಿಳಿಸಿವೆ. ಮೂಲಗಳು ಹೇಳುವಂತೆ ಪಾಕಿಸ್ತಾನಿ ಸೇನಾ ಮುಖ್ಯಸ್ಥರನ್ನು ಸುರಕ್ಷಿತ ಬಂಕರ್‌ಗೆ ಸ್ಥಳಾಂತರಿಸಿರುವುದು ಯುದ್ಧತಂತ್ರದ ಪ್ರತಿಕ್ರಿಯೆಯನ್ನು ಮಾತ್ರವಲ್ಲದೆ, ಭಾರತದ ಪ್ರಬಲ ಭೇದಿಸುವ ಸಾಮರ್ಥ್ಯವು ಪಾಕಿಸ್ತಾನದ ಮಿಲಿಟರಿ ನಾಯಕತ್ವದ ಮೇಲೆ ಬೀರಿರುವ ಮಾನಸಿಕ ಪ್ರಭಾವವನ್ನೂ ಪ್ರತಿಬಿಂಬಿಸುತ್ತದೆ. ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಮುನೀರ್ ತಾತ್ಕಾಲಿಕವಾಗಿ ಬಂಕರ್ ನಲ್ಲಿ ಆಶ್ರಯ ಪಡೆದಿರುವುದು ಪಾಕಿಸ್ತಾನದ ಉನ್ನತ ಅಧಿಕಾರಿಗಳಲ್ಲಿ ಹೆಚ್ಚಿದ ಅಭದ್ರತೆಯ ಭಾವನೆಯನ್ನು ಒತ್ತಿಹೇಳುತ್ತದೆ. ಭವಿಷ್ಯದ ದೃಷ್ಟಿಯಿಂದ ಅವರ ಕಾರ್ಯಾಚರಣೆಯ ನೆಲೆಯನ್ನು ಸ್ಥಳಾಂತರಿಸಲಾಗುವುದು ಎಂದು ವರದಿಗಳು ಈಗ ಸೂಚಿಸುತ್ತಿವೆ. ಪಾಕಿಸ್ತಾನವು ಭಾರತದ ಮಿಲಿಟರಿ ನೆಲೆಗಳು ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ನಡೆಸಿದ ಸರಣಿ ಸಂಘಟಿತ ದಾಳಿಗಳಿಗೆ ಉತ್ತರವಾಗಿ ಭಾರತದ...
ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು, ಪ್ರತಿಭಟನೆ..!
ಬೆಳಗಾವಿ : ತಾಲೂಕಿನ ಸಂತಿಬಸ್ತವಾಡ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಗ್ರಂಥ ಕುರಾನ್ (Quran) ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಆಕ್ರೋಶ ಭುಗಿಲೆದ್ದಿದೆ. ಸಂತಿಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಆರೋಪಿಗಳ ಬಂಧನಕ್ಕಾಗಿ ತಂಡ ರಚನೆ ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು. ಸೋಮವಾರ ಪ್ರಾರ್ಥನೆ ಮಾಡಲು ಮಸೀದಿಗೆ ಆಗಮಿಸಿದ ವೇಳೆ ಕುರಾನ್, ಹದೀಸ್ ನಾಪತ್ತೆಯಾಗಿರುವುದು ಕಂಡುಬಂದಿದೆ. ಪ್ರಾರ್ಥನೆ ಮುಗಿದ ಬಳಿಕ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಬೆಳಕಿಗೆ ಬಂದಿದೆ. ಘಟನೆ ಖಂಡಿಸಿ ಬೆಳಗಾವಿ ನಗರದಲ್ಲಿ ಸಾವಿರಾರು ಮುಸ್ಲಿಂ ಸಮುದಾಯದಿಂದ ಬೃಹತ್ ಪ್ರತಿಭಟನೆ ನಡೆಯಿತು. ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..! ಬೆಳಗಾವಿ ಪೊಲೀಸ್ ಆಯುಕ್ತ ಇಯಾಡಾ ಮಾರ್ಟಿನ್...
ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!
ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕನೊರ್ವನಿಗೆ, 6ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕ ಚಾಕುವಿನಿಂದ ಇರಿದ ಪರಿಣಾಮ ಬಾಲಕ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಕಮರಿಪೇಟೆಯ ಜೀ ಅಡ್ಡಾದಲ್ಲಿ ನಡೆದಿದೆ. ಚೇತನ ರಕ್ಕಸಗಿ (12:)ಎಂಬಾತ ಚಾಕು ಇರಿತಕ್ಕೆ ಸಾವನ್ನಪ್ಪಿದ್ದಾನೆ. ಇನ್ನು ಸಾಯಿ ಹಬೀಬ್ ಎಂಬಾತ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ. ಎಂದಿನಂತೆ ಚೇತನ ಮನೆಯಲ್ಲಿ ಚಹ ಕುಡಿದು, ಮೊದಲೇ ಮನೆಯಲ್ಲಿ ಸಂಬಂಧಿಕರ ಮದುವೆ ಹಿನ್ನೆಲೆಯಲ್ಲಿ ತನಗೆ ಹೊಸ ಬಟ್ಟೆ ತರುವಂತೆ ತನ್ನ ತಾಯಿಗೆ ತಿಳಿಸಿ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಸಾಯಿ ಹಬೀಬ್ ಜೊತೆಗೆ ಜಗಳ ಏರ್ಪಟಿದೆ, ಈ ವೇಳೆ ಸಾಯಿ ಹಬೀಬ್ ರೇಡಿಯಂ ಕಟರ್ ದಿಂದ ಇರಿದಿದ್ದಾನೆ. ಪರಿಣಾಮ ಚೇತನ್ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಆಪರೇಶನ್ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..! ಈ ಕುರಿತಂತೆ ಹುಬ್ಬಳ್ಳಿಯ...
ಆಪರೇಶನ್ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..!
ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಆರಂಭಿಸಲಾದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಯಲ್ಲಿ ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಭಾರತ ಸೋಮವಾರ ತಿಳಿಸಿದೆ. ಭಾರತೀಯ ಸೇನೆಯು X ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ಪಾಕಿಸ್ತಾನದ ಮಿರಾಜ್ ಜೆಟ್‌ನ ತುಂಡಾಗಿ ಬಿದ್ದಿರುವ ಅವಶೇಷಗಳು ಕಂಡುಬಂದಿವೆ. ಪಾಕಿಸ್ತಾನದ ಮಿರಾಜ್ ಜೆಟ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸಶಸ್ತ್ರ ಪಡೆಗಳ ಹಿರಿಯ ಅಧಿಕಾರಿಗಳು ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಈ ಬ್ರೀಫಿಂಗ್‌ಗೆ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ ಘಾಯ್, ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ವೈಸ್ ಮಾರ್ಷಲ್ ಎಕೆ ಭಾರ್ತಿ ಮತ್ತು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎ.ಎನ್. ಪ್ರಮೋದ್ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿದರು. ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!! ಎರಡೂ ದೇಶಗಳ ನಡುವಿನ ದಿನಗಟ್ಟಲೆ ನಡೆದ ಮಿಲಿಟರಿ...
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ಕಾರವಾರ: ಕಾರವಾರದ ಗ್ರಾಸಿಂ ಅನಿಲ ಘಟಕದಲ್ಲಿ ಬಾಂಬ್ ದಾಳಿಯಿಂದ ಹಾನಿಗೀಡಾದ ಕಟ್ಟಡದಲ್ಲಿ ಸಿಲುಕಿದ್ದ 37 ಮಂದಿಯ ಸುರಕ್ಷಿತ ರಕ್ಷಣೆ, ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಿಂದ 11 ಮಂದಿಯ ಸುರಕ್ಷಿತ ರಕ್ಷಣೆ, ನೌಕಾನೆಲೆ ಪ್ರದೇಶದ ಸಿವಿಲ್ ಕಾಲೋನಿಯಲ್ಲಿ ಬೆಂಕಿ ಆಕಸ್ಮಿಕದಿಂದ 11 ಮಂದಿಯನ್ನು ಸುರಕ್ಷಿತ ರಕ್ಷಣೆ, ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡ 10 ಜನರ ರಕ್ಷಣೆ, ರವೀಂದ್ರ ನಾಥ್ ಕಡಲತೀರದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡವರನ್ನು ರಕ್ಷಿಸಿ ಇಡೀ ಬೀಚ್‌ನಲ್ಲಿದ್ದ ಸಾವಿರಾರು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ, ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ವಿಕಿರಣ ಸೋರಿಕೆಯ ಮುನ್ನೆಚ್ಚರಿಕಾ ಕ್ರಮವಾಗಿ ಹರ್ಟುಗಾ ಗ್ರಾಮದ ಎಲ್ಲಾ ನಾಗರೀಕರ ಸ್ಥಳಾಂತರ. ಇದೆಲ್ಲಾ ನೈಜ ಘಟನೆಯಲ್ಲ.. ಯುದ್ದದಂತಹ ತುರ್ತು ಸಂದರ್ಭದಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೇಂದ್ರ ಗೃಹಸಚಿವಾಲಯದ ನಿರ್ದೇಶನದಂತೆ ಸೋಮವಾರ ಕಾರವಾರದ ವಿವಿಧ ಭಾಗಗಳಲ್ಲಿ ಕೈಗೊಂಡ “ಆಪರೇಷನ್ ಅಭ್ಯಾಸ್” ನಾಗರೀಕ ರಕ್ಷಣಾ...
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಕಾರವಾರ: ಜಿಲ್ಲೆಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಶನ್ ಶಕ್ತಿ ಯೋಜನೆ ಮತ್ತು ಇತರೆ ಯೋಜನೆಗಳ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿನ ಎಲ್ಲಾ ಅಂಗನವಾಡಿಗಳ ವ್ಯಾಪ್ತಿಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಆರೋಗ್ಯ ಇಲಾಖೆಯ ಮೂಲಕ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗೆ ಒಳಪಡಿಸುವ ಮೂಲಕ ಯಾವುದೇ ಮಗು ಅಪೌಷ್ಠಿಕತೆಯಿಂದ ಬಳಲದಂತೆ ಎಚ್ಚರಿಕೆ ವಹಿಸಿ, ಈ ಮಕ್ಕಳು ಸಂಪೂರ್ಣ ಆರೋಗ್ಯವಂತರಾಗುವವರೆಗೆ ನಿಗಾ ವಹಿಸುವುದರ ಜೊತೆಗೆ ಎಲ್ಲಾ ಮಕ್ಕಳ ಸಂಪೂರ್ಣ ವಿವರಗಳನ್ನು ಇಟ್ಟುಕೊಳ್ಳಬೇಕು ಎಂದರು. ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ...
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ನವದೆಹಲಿ: ಈ ವರ್ಷ ಭಾರತದ ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ವರ್ಷ ನೈಋತ್ವ ಮಾನ್ಸೂನ್ ಮೇ 27ರ ಸುಮಾರಿಗೆ ಕೇರಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಶನಿವಾರ ಪ್ರಕಟಿಸಿದೆ. ಮೇ 27 ರಂದು ಭಾರತದ ದಕ್ಷಿಣ ಕರಾವಳಿಗೆ ಮಾನ್ಸೂನ್ ಮಳೆ ಬರುವ ನಿರೀಕ್ಷೆಯಿದೆ, ಇದು ಸಾಮಾನ್ಯಕ್ಕಿಂತ ಐದು ದಿನಗಳು ಮುಂಚಿತವಾಗಿ ಬರಲಿದೆ, ಇದು ಐದು ವರ್ಷಗಳಲ್ಲಿಯೇ ಅತ್ಯಂತ ಮುಂಚಿನ ಆಗಮನವಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ದೇಶದ $4 ಟ್ರಿಲಿಯನ್ ಆರ್ಥಿಕತೆಯ ಜೀವನಾಡಿಯಾದ ಮಾನ್ಸೂನ್, ಭಾರತಕ್ಕೆ ಕೃಷಿಭೂಮಿಗೆ ನೀರುಣಿಸಲು ಮತ್ತು ಜಲಚರಗಳು ಮತ್ತು ಜಲಾಶಯಗಳನ್ನು ಮರುಪೂರಣ ಮಾಡಲು ಅಗತ್ಯವಿರುವ ಮಳೆಯ ಸುಮಾರು 70%ರಷ್ಟನ್ನು ನೀಡುತ್ತದೆ. ಯಾವುದೇ ನೀರಾವರಿ ಸೌಲಭ್ಯವಿಲ್ಲದೆ, ಭಾರತದ ಕೃಷಿಭೂಮಿಯ ಸುಮಾರು ಅರ್ಧದಷ್ಟು, ಹಲವಾರು ಬೆಳೆಗಳನ್ನು ಬೆಳೆಯಲು ಜೂನ್-ಸೆಪ್ಟೆಂಬರ್ ಮಳೆ ನೈಋತ್ವ ಮಾನ್ಸೂನ್ ಅನ್ನು ಅವಲಂಬಿಸಿದೆ. ಕರ್ನಾಟಕದ 12ಕ್ಕೂ ಹೆಚ್ಚು...
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕರ್ನಾಟಕದಾದ್ಯಂತ ಮೇ 13ರಿಂದ ಮಳೆ(Rain)ಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ ಹಾಗೂ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ ಎಂದು ತಿಳಿಸಿದೆ. ಇಂದು, ಸೋಮವಾರ ( ಮೇ 12) ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮೇ 17 ರವರೆಗೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,...
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಕನ್ನಡ ಕಿರುತೆರೆಯ ಪ್ರತಿಭಾವಂತ ಹಾಸ್ಯ ಕಲಾವಿದ, ಕಾಮೆಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಇಡೀ ರಾಜ್ಯಕ್ಕೆ ಚಿರಪರಿಚಿತರಾಗಿದ್ದ ರಾಕೇಶ್ ಪೂಜಾರಿ ಉಡುಪಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದಿದ್ದ ರಾಕೇಶ್ ಪೂಜಾರಿಗೆ ಬಿಪಿ ಲೋ ಆಗಿತ್ತು. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅಷ್ಟಕ್ಕೂ ರಾಕೇಶ್ ಪೂಜಾರಿ ಯಾರು..? ರಾಕೇಶ್ ಪೂಜಾರಿ ಮೂಲತಃ ಉಡುಪಿಯವರು. ತಮ್ಮದೇ ಆದ ವಿಶಿಷ್ಟ ಮ್ಯಾನರಿಸಂ ಹೊಂದಿದ್ದ ರಾಕೇಶ್ ಪೂಜಾರಿ ಪ್ರತಿಭಾವಂತ ಕಲಾವಿದ. ಕಳೆದ ಕೆಲವು ವರ್ಷಗಳಿಂದ ರಾಕೇಶ್ ಪೂಜಾರಿ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನಿಂದ ರಾಕೇಶ್ ಪೂಜಾರಿ ಕನ್ನಡಿಗರ ಮನೆ ಮಾತಾದರು. ‘ಕಾಮಿಡಿ ಕಿಲಾಡಿಗಳು ಸೀಸನ್ 3’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿ, ವಿವಿಧ ಅವತಾರಗಳನ್ನ ತಾಳಿ ಕನ್ನಡ ವೀಕ್ಷಕರನ್ನ ನಗೆಗಡಲಲ್ಲಿ ತೇಲಿಸಿದವರು ರಾಕೇಶ್ ಪೂಜಾರಿ. ಕನ್ನಡಿಗರು ಹಾಗೂ ತೀರ್ಪುಗಾರರ ಮನಗೆದ್ದ ರಾಕೇಶ್ ಪೂಜಾರಿ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ಕಾರ್ಯಕ್ರಮದಲ್ಲಿ ವಿನ್ನರ್ ಆದರು. ಅಂದು ರಾಕೇಶ್...