ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ..!

ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ..!

ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ(BBMP) ಸ್ವಾಧೀನಾನುಭವ ಪ್ರಮಾಣ ಪತ್ರ( Occupancy certificates) ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಕುರಿತು ಬಿಬಿಎಂಪಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿ ವಿದ್ಯುತ್‌ ಸಂಪರ್ಕಕ್ಕೆ ಕೋರಿ ಸುಮಾರು 66,400 ಅರ್ಜಿಗಳು ಬಂದಿವೆ. ಸುಪ್ರೀಂ ಕೋರ್ಟ್‌ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೀಡಿರುವ ಆದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ / ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, ನೀರು ಸರಬರಾಜು / ಒಳಚರಂಡಿ ಸಂಪರ್ಕ ನೀಡುವಂತೆ ಆದೇಶಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುಪ್ರಿಂಕೋರ್ಟ್ ಆದೇಶ ಹಿನ್ನಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕೋರಿರುವ ಕಟ್ಟಡಗಳಿಗೆ ಬಿಬಿಎಂಪಿಯಿಂದ ‘ಎ’ ಖಾತಾ ಅಥವಾ ‘ಬಿ’ ಖಾತಾ ಪಡೆಯಲಾಗಿರುವ ಬಗ್ಗೆ, ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯಲಾಗಿರುವ ಬಗ್ಗೆ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರ, ಪೂರ್ಣತಾ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿರುವ,...

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಮೇ 1ರಂದು ಮೊಹಮ್ಮದ್‌ ಫಾಝಿಲ್‌ ಕೊಲೆ ಪ್ರಕರಣದ ಆರೋಪಿ ಸುಹಾಸ ಶೆಟ್ಟಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಕೊಚ್ಚಿ ಕೊಲೆಗೈದಿದ್ದರು. ಘಟನೆಗೆ ಸಂಬಂಧಿಸಿಂದಂತೆ ಮಂಗಳೂರು ಪೊಲೀಸರು ಈಗಾಗಲೇ 8 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳಾದ ಅಬ್ದುಲ್ ಖಾದರ್ ಮತ್ತು ನೌಷದ್ ಎಂಬವರನ್ನು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ....

ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಕಾರವಾರ- ಜಿಲ್ಲೆಯಲ್ಲಿ ಐ.ಪಿ.ಎಲ್ ಬೆಟ್ಟಿಂಗ್, ಅನಧಿಕೃತ ಲಾಟರಿ/ಮಟ್ಕಾ ಹಾವಳಿಯ ಪ್ರಕರಣಗಳು ನಡೆಯದಂತೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣ ಪ್ಲೆಯಿಂಗ್ ಸ್ಕ್ವಾಡ್‌ನ 2024-25 ನೇ ಸಾಲಿನ ನಾಲ್ಕನೆಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..! ಪ್ರಸಕ್ತ ತ್ರೈಮಾಸಿಕದಲ್ಲಿ ಒಟ್ಟು 31 ಮಟ್ಕಾ ಪ್ರಕರಣಗಳಲ್ಲಿ 86 ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿರುವ ಬಗ್ಗೆ ಹಾಗೂ ಯಾವುದೇ ಅನಧಿಕೃತ ಲಾಟರಿ ಹಾವಳಿ ಪ್ರಕರಣಗಳು ದಾಖಲಾಗದೇ ಇರುವ ಬಗ್ಗೆ ಮಾಹಿತಿ ಪಡೆದು, ಜಿಲ್ಲೆಯನ್ನು ಸಂಪೂರ್ಣ ಅನಧಿಕೃತ ಲಾಟರಿ/ಮಟ್ಕಾ ಹಾವಳಿ ಮುಕ್ತ ವಲಯವನ್ನಾಗಿ ಮಾಡಲು ಪ್ಲೈಯಿಂಗ್ ಸ್ಕ್ಯಾಡ್‌ನ ಸದಸ್ಯರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಸಭೆಯಲ್ಲಿ ಪೋಲಿಸ್ ನಿರೀಕ್ಷಕರಾದ ನಿತ್ಯಾನಂದ ಪಂಡಿತ್, ವಾಣಿಜ್ಯ ತೆರಿಗೆ...

ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಮೂಲಕ ರೂ. 1095 ಕೋಟಿ ನೆರವು..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಮೂಲಕ ರೂ. 1095 ಕೋಟಿ ನೆರವು..!

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.99.91 ರಷ್ಟು ಸಾಧನೆ ಮಾಡಿದ್ದು, ಇದುವರೆಗೆ 1095.03 ಕೋಟಿ ರೂ ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮಹಿಳೆಯನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿರುವ 3,61,481 ಪಡಿತರ ಚೀಟಿಗಳಿದ್ದು, ಅವುಗಳಲ್ಲಿ ತೆರಿಗೆ ಪಾವತಿದಾರರು, ಮರಣ ಹೊಂದಿರುವವರು, ಯೋಜನೆ ನಿರಾಕರಿಸಿರುವವರು, ವಲಸೆ ಹೋಗಿರುವ ಕಾರಣದಿಂದ 25,676 ಮಂದಿ ಗೃಹಲಕ್ಷ್ಮೀ ಯೋಜನೆಗೆ ಅನರ್ಹರಾಗಿದ್ದು , ಬಾಕಿ ಉಳಿದ ಅರ್ಹ 3,35,805 ಪಡಿತರ ಚೀಟಿಗಳಲ್ಲಿ 3,35,498 ಮಂದಿಯನ್ನು ಯೋಜನೆಗೆ ಯಶಸ್ವಿಯಾಗಿ ನೋಂದಾಯಿಸಿ ಶೇ.99.91 ಸಾಧನೆ ಮಾಡಲಾಗಿದೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಗೃಹಲಕ್ಷ್ಮಿ ಯೋಜನೆಗೆ ಅನರ್ಹರಾಗಿರುವವರಲ್ಲಿ 10,377 ಮಂದಿ ಆದಾಯ ತೆರಗೆ ಮತ್ತು ಜಿ.ಎಸ್.ಟಿ ಪಾವತಿದಾರರು, 4875 ಮಂದಿ ಮರಣ ಹೊಂದಿರುವವರು, 7503 ಮಂದಿ ವಲಸೆ...

ಗೋಕರ್ಣದಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆ : ಎಸ್ಪಿ ನಾರಾಯಣ್

ಗೋಕರ್ಣದಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆ : ಎಸ್ಪಿ ನಾರಾಯಣ್

ಕಾರವಾರ: ಗೋಕರ್ಣ ಪ್ರವಾಸಿ ತಾಣದಲ್ಲಿ ಸಾರ್ವಜನಿಕರ ಮತ್ತು ಪ್ರವಾಸಿಗರ ಸೂಕ್ತ ರಕ್ಷಣೆಗೆ ಮತ್ತು ಇಲ್ಲಿ ಯಾವುದೇ ಅಪರಾಧ ಪ್ರಕ್ರಿಯೆ ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಈ ಹಿಂದೆ ಇದ್ದ ಸಿಸಿ ಕ್ಯಾಮೆರಾ ಜೊತೆ ಇನ್ನೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಿ ಡಿಜಿಟಲ್ ಪೊಲೀಸ್ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಎಂ. ನಾರಾಯಣ್ ಹೇಳಿದರು. ಅವರು ಬುಧವಾರ ಗೋಕರ್ಣದಲ್ಲಿ , ಸಾರ್ವಜನಿಕರ ಮತ್ತು ಪ್ರವಾಸಿಗರ ಸುರಕ್ಷತೆ ಹಾಗೂ ಜಾಗೃತಿಗಾಗಿ ಪೊಲೀಸ್ ಮಾಹಿತಿ ಕೇಂದ್ರ, ಸಿಸಿ ಕ್ಯಾಮರಾಗಳು, ಜಾಗೃತಿ ಫಲಕಗಳು ಹಾಗೂ ಪೊಲೀಸ್ ಚೌಕಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ ಗೋಕರ್ಣವು ನೈಸರ್ಗಿಕ ಕಡಲ ತೀರಗಳು, ಕಡಿಮೆ ಜೀವನದ ವೆಚ್ಚ, ರಮಣೀಯ ಪರಿಸರ ವೈವಿದ್ಯಮಯವನ್ನು ಹೊಂದಿದ್ದು, ಪ್ರವಾಸಿಗರ ನೆಚ್ಚಿನ ಪ್ರವಾಸಿ ತಾಣವಾಗಿದೆ. ಇಲ್ಲಿಗೆ ಪ್ರತಿ ವಷÀð 1.5 ಲಕ್ಷ ಪ್ರವಾಸಿಗರು ಆಗಮಿಸುತ್ತಾರೆ ಮತ್ತು 8 ರಿಂದ 10 ವಿದೇಶಿಗರು ಪ್ರತಿ...

ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ

ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ

ಕಾರವಾರ: ಸಾರ್ವಜನಿಕರ ಕುಂದು ಕೊರತೆ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸಲು, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೇ 17 ರಂದು ಬೆಳಗ್ಗೆ 10 ಗಂಟೆಗೆ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್‌ನ ಕಮಲಾವತಿ ಶ್ಯಾನುಭೋಗ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಜಿಲ್ಲೆಯ ಸಾರ್ವಜನಿಕರು ತಮ್ಮ ಕುಂದು ಕೊರತೆಗಳಿದ್ದಲ್ಲಿ ಈ ಕಾರ್ಯಕ್ರಮದಲ್ಲಿ ಪರಿಹಾರ ಪಡೆದುಕೊಳ್ಳಬಹುದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!

ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಕಾರವಾರ- ಜಿಲ್ಲೆಯಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತಂತೆ ಆ ಕಾಲೋನಿಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಅಗತ್ಯವಿರುವ ಮೂಲ ಸೌಕರ್ಯಗಳ ಕುರಿತು ವರದಿ ನೀಡುವಂತೆ ತಿಳಿಸಿದ ಅವರು, ಈ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು ಒದಗಿಸುವ ಕುರಿತು ಆದ್ಯತೆಯಲ್ಲಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!...

ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!

ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!

 ಮುಂಡಗೋಡ ತಾಲೂಕಿನ ಹನಮಾಪುರ ಗ್ರಾಮದಲ್ಲಿ ದೇವಸ್ಥಾನ ಶೆಡ್ಡ್ ತೆರವುಗೊಳಿಸುವ ಸಲುವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಣೇಶ ಬಸಲಿಂಗಪ್ಪ ಸುಣಗಾರ ಎಂಬುವ ವ್ಯಕ್ತಿಯ ಮೇಲೆ ಹಲ್ಲೆ‌ ನಡೆದಿದೆ ಅನ್ನೊ ಆರೋಪ ಕೇಳಿ ಬಂದಿದೆ. ಸದ್ಯ ತಾಲೂಕಾಸ್ಪತ್ರೆಗೆ ದಾಖಲಾಗಿ ಹಲ್ಲೆಗೊಳಗಾದವ ಚಿಕಿತ್ಸೆ ಪಡೆಯುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಹನುಮಾಪುರ ಗ್ರಾಮದ ಜನರೇಲ್ಲ ಸೇರಿ, ಗ್ರಾಮದ ಮಾಸ್ತಿ ಗುಡಿಯ ಹತ್ತಿರ ಇದ್ದ, ಬಸವಣ್ಣನ ಮೂರ್ತಿ ಯನ್ನು ಸ್ಥಳಾಂತರ ಮಾಡಿದ್ದರು. ಹೀಗಾಗಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು ಗ್ರಾಮಸ್ಥರು ಹಾಗೂ ಅದೊಂದು ಕುಟುಂಬದ ನಡುವೆ ಗಲಾಟೆ ನಡೆದಿದೆ. ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..! ಇದೆ ವೇಳೆ ನನ್ನ ಮೇಲೂ ಹಲ್ಲೆ ನಡೆದಿದೆ, ಅಲ್ದೆ ಜೀವ ಬೆದರಿಕೆ ಹಾಕಿದ್ದಾರೆ ಅಂತಾ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆಗೆ ದಾಖಲಾಗಿರೊ ಹಲ್ಲೆಗೊಳಗಾದವ ಆರೋಪಿಸಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು...

ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!

ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಉಪ ಚುನಾವಣೆ ಘೋಷಣೆ ಆಗ್ತಿದ್ದಂತೆ, ಚುನಾವಣಾ ಪ್ರಕ್ರಿಯೆಗಳು ಜಾರಿಯಾಗಿವೆ. ಅಗಡಿಯ ವಾರ್ಡ್ ನಂಬರ್ 2 ರ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಇವತ್ತು ಬುಧವಾರ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಹೀಗಾಗಿ, ಬಹುತೇಕ ಅವಿರೋಧ ಆಯ್ಕೆಯಾಗುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. ಅಂದಹಾಗೆ, ಸದ್ಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮೀ ಹನಮಂತ ಲಮಾಣಿ ನಾಮಪತ್ರ ಸಲ್ಲಿಸಿದ್ದು, ಇವ್ರೇ ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ ಎಲ್ಲಾ ಲಕ್ಷಣಗಳು ಇದ್ದು, ಅವಿರೋಧವಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಇಲ್ಲಿನ ಮುಖಂಡರ ಸತತ ಪ್ರಯತ್ನ ಫಲಕೊಟ್ಟಿದೆ ಎನ್ನಲಾಗಿದೆ. ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಶಾಕಸ ಶಿವರಾಮ್ ಹೆಬ್ಬಾರರ ಮಾರ್ಗದರ್ಶನದಲ್ಲಿ ಸ್ಥಳೀಯ ಮುಖಂಡರಾದ ಎಚ್. ಎಂ‌.ನಾಯ್ಕ್, ಯುವ ಮುಖಂಡ ಬಸವರಾಜ್ ಆಸ್ತಕಟ್ಟಿ, ಗ್ರಾಮ ಪಂಚಾಯತಿ ಅಧ್ಯಕ್ಷ ಷರೀಪಸಿಂಗ್ ಸಿಗ್ಗಟ್ಟಿ, ಸದಸ್ಯರಾದ ಸಿದ್ದನಗೌಡ ಪಾಟೀಲ, ತುಕಾರಾಮ್ ಹೊನ್ನಳ್ಳಿ, ಈಶ್ವರಗೌಡ...

ಮುಂಗಾರಿನ ಮಳೆಗಾಲದಲ್ಲಿ ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಸಿಡಿಲಿನಿಂದ ರಕ್ಷಿಸಿಕೊಳ್ಳಿ..!

ಮುಂಗಾರಿನ ಮಳೆಗಾಲದಲ್ಲಿ ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಸಿಡಿಲಿನಿಂದ ರಕ್ಷಿಸಿಕೊಳ್ಳಿ..!

ಸಾಮ್ಯಾನವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಗುಡುಗು-ಸಿಡಿಲು ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮ್ಯಾನವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹಚ್ಚಾಗಿರುತ್ತದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಕೊಳ್ಳುವ ಮೂಲಕ ಸಿಡಿಲಿನಿಂದ ರಕ್ಷಿಸಿಕೊಳ್ಳಬಹುದಾಗಿದೆ ಗುಡುಗು-ಸಿಡಿಲಿ ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು:  • ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting protocol (CAP) ಮುಖಾಂತರ ಬರುವ ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. • ಪ್ರತಿಕೂಲ ಹವಾಮಾನ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮ್ಯಾನ ಪ್ರಯಾಣಕ್ಕಾಗಿ ಹೊರಗೆ ಹೋಗದಿರುವುದು. • ಗುಡುಗು-ಸಿಡಿಲಿ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ,ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು. • ಬೆಟ್ಟಗಳು,ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು. • ನೀರಿನ ಮೂಲಗಳಾದ ಕೆರೆ ಮತ್ತು...

error: Content is protected !!