ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಹೀಗಾಗಿ, ಗಾಲಿ ಜನಾರ್ಧನ ರೆಡ್ಡಿ ಇನ್ನಿಲ್ಲದ ಸಂಕಷ್ಟ ಶುರುವಾಗಿದ್ದು, ಏಳು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.
Top Stories
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!
Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್
‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!
ಈಗ ಯೂ ಟರ್ನ್ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!
ಪಾಕಿಸ್ತಾನ ಪರ ಬೇಹುಗಾರಿಕೆ, ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ..!
ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!
ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು..!
ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳ ವಿಚಾರಣೆ, ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ: ಸಚಿವ ಮಂಕಾಳ ವೈದ್ಯ
ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಪರವಾಗಿ ನಾನಿದ್ದೇನೆ; ಸಚಿವ ಮಂಕಾಳ ವೈದ್ಯ ಹೇಳಿಕೆ..!
ಮೇ. 7 ಮಾಕ್ ಡ್ರಿಲ್, ಅಷ್ಟಕ್ಕೂ ಈ ಮಾಕ್ ಡ್ರಿಲ್ ಅಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!
ಪಹಲ್ಗಾಮ್ ದಾಳಿ ಬಳಿಕ ಭಾರತ-ಪಾಕ್ ನಡುವೆ ಹೆಚ್ಚಿದ ಉದ್ವಿಗ್ನತೆ ನಡುವೆಯೇ ನೆರೆ ದೇಶಕ್ಕೆ ತಕ್ಕ ತಿರುಗೇಟು ನೀಡಲು ಭಾರತ ರಣಕಹಳೆ ಮೊಳಗಿಸಿದೆ. ಪಾಕ್ ಮೇಲೆ ದಾಳಿಗೆ ಸನ್ನದ್ಧವಾಗುತ್ತಿರುವ ಸೂಚನೆ ನೀಡಿದೆ. ಮೇ 7ರಂದು ಭದ್ರತಾ ಅಣಕು ಕವಾಯತು ನಡೆಸುವಂತೆ (ಸೆಕ್ಯೂರಿಟಿ ಮಾಕ್ ಡ್ರಿಲ್) ಎಲ್ಲಾ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಮೇ 6) ನಿರ್ದೇಶನ ನೀಡಿದೆ. 1971ರಲ್ಲಿ ಭಾರತ-ಪಾಕ್ ಯುದ್ಧದ ಬಳಿಕ ಇಂತಹ ಅಣಕು ಕವಾಯತಿಗೆ ಇದೇ ಮೊದಲ ಬಾರಿಗೆ ಸೂಚಿಸಲಾಗಿದೆ. ಕಾಶ್ಲೀರದ ಪಹಲ್ಗಾಮ್‌ನಲ್ಲಿ ಏ.22ರಂದು ನಡೆದ ಉಗ್ರ ದಾಳಿ ಬಳಿಕ ಪಾಕಿಸ್ತಾನ ಸತತ 11 ದಿನಗಳಿಂದ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಮೂಲಕ ಭಾರತವನ್ನು ಕೆಣಕುತ್ತಿದೆ. ಮತ್ತೊಂದೆಡೆ, ಉಗ್ರರು ಕನಸಿನಲ್ಲೂ ಊಹಿಸಿರದಂತಹ ತಿರುಗೇಟು ನೀಡುವುದಾಗಿ ಭಾರತ ಶಪಥ ಮಾಡಿದೆ. ಈ ಬೆಳವಣಿಗೆಗಳನ ನಡುವೆಯೇ ಕೇಂದ್ರ ಸರಕಾರ ಯುದ್ಧದ ಸಂದರ್ಭದಲ್ಲಿ ಕೈಗೊಳ್ಳುವ ರಕ್ಷಣಾ ಕಾರ್ಯಾಚರಣೆಯ ಅಣುಕು ಕವಾಯತು ನಡೆಸುವಂತೆ ರಾಜ್ಯಗಳಿಗೆ ಸೂಚಿಸಿರುವುದು ಮಹತ್ವ ಪಡೆದುಕೊಂಡಿದೆ. ಮಾಕ್ ಡ್ರಿಲ್‌ಗೆ ಭಾರತ ಸಜ್ಜು...
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!
ಬೆಳ್ಳಂ ಬೆಳ್ಳಿಗ್ಗೆ ಹುಬ್ಬಳ್ಳಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ 5 ಜನ ಸ್ಥಳದಲ್ಲೇ ಕಂಡಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎನ್ನಲಾಗಿದೆ. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವ್ರು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಹೋಗಿದ್ದರು ಎನ್ನಲಾಗಿದೆ. ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಬಸಕ್ಕೆ ಕಾರಿನಲ್ಲಿದ್ದ 5 ಜನ ಸ್ಥಳದಲ್ಲೇ ಸಾವು ಸಾವನಪ್ಪಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್
ಶಿರಸಿ: ಮಾನವ ಮತ್ತು ಜೀವ ಸಂಕುಲದ ಏಕೈಕ ಆವಾಸ ಸ್ಥಾನವಾಗಿರುವ ಭೂಮಿ ಮತ್ತು ಇಲ್ಲಿನ ಪ್ರಕೃತಿ ಸಂಪತ್ತನ್ನು ಸಂರಕ್ಷಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳು ಯೋಧರಾಗಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಅವರು ಸೋಮವಾರ ಶಿರಸಿಯ ಅರಣ್ಯ ಕಾಲೇಜು ಆವರಣದಲ್ಲಿ ‘ದೇಶ ಕಟ್ಟುವಿಕೆಯಲ್ಲಿ ಅರಣ್ಯ ವಿಜ್ಞಾನದ ಪಾತ್ರ’ ವಿಷಯದ ಕುರಿತಾಗಿ ಅರಣ್ಯ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಪ್ರಕೃತಿಯು ನಮಗೆ ಎಲ್ಲವನ್ನು ನೀಡಿದೆ ಆದರೆ ಅದನ್ನು ದುರ್ಬಳಕೆ ಮಾಡಿಕೊಳ್ಳದೆ ನಮ್ಮ ಅವಶ್ಯಕತೆಗೆ ತಕ್ಕಂತೆ ಮಿತವಾಗಿ ಬಳಸಬೇಕು, ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸಬೇಕು. ಈ ಪ್ರಕೃತಿಯು ಮಾನವನಿಗೆ ಮಾತ್ರವಲ್ಲದೇ ಪ್ರಾಣಿ ಪಕ್ಷಿಗಳು ಮರ ಗಿಡಗಳು ಸೇರಿದಂತೆ ಎಲ್ಲಾ ಜೀವ ಸಂಕುಲಕ್ಕೆ ಸೇರಿದೆ , ಇಂದಿನ ಯುವ ಪೀಳಿಗೆ ಈ ಸತ್ಯದೊಂದಿಗೆ ಅಧ್ಯಯನ ನಡೆಸುತ್ತ, ಮುಂದಿನ ಪೀಳಿಗೆಗೂ ಅರಿವು ಮೂಡಿಸಬೇಕು ಎಂದರು. ನಮ್ಮ ದೇಶದಲ್ಲಿ ವೈದಿಕ ಯುಗದಿಂದಲೂ ಪರಿಸರ ಮತ್ತು ಅರ್ಥ ವ್ಯವಸ್ಥೆ ಪರಸ್ಪರ ಒಟ್ಟಾಗಿ ಸಾಗಿದೆ. ಭಾರತವು ಸಾಂಸ್ಕೃತಿಕವಾಗಿ ಸಿರಿವಂತವಾಗಿದೆ....
ಶಿರಸಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ತಾಯಿ ಹೆಸ್ರಲ್ಲಿ ಗಿಡ ನೆಟ್ಟರು..!
ಶಿರಸಿ; ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಶಿರಸಿ ಮತ್ತು ಸಿದ್ಧಾಪುರ ದಲ್ಲಿ ನಡೆಯುವ ಕಾರ್ಯಕ್ರಮಗಳಿಗಾಗಿ ಶಿರಸಿ ಮಾರಿಕಾಂಬ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್ ಗೆ ಬಂದಿಳಿದರು. ರಾಜ್ಯಪಾಲ ಥಾವರ ಚಂದ್ ಗೆಹಲೊಟ್, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್ ವೈದ್ಯ ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿಕೊಂಡರು. ಶಿರಸಿಯಲ್ಲಿ ನಡೆದ ಅರಣ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಉಪರಾಷ್ಟ್ರಪತಿ ಗಳು, ತಾಯಿಯ ಸ್ಮೃರಣೆಯಲ್ಲಿ ಒಂದು ವೃಕ್ಷ ದಡಿ, ಶಿರಸಿಯ ಅರಣ್ಯ ಕಾಲೇಜಿನ ಆವರಣದಲ್ಲಿ ತಮ್ಮ ದಿವಂಗತ ತಾಯಿ ಶ್ರೀಮತಿ ಕೇಸರಿ ದೇವಿ ಹೆಸರಿನಲ್ಲಿ ಅಶೋಕ ವೃಕ್ಷ ನೆಟ್ಟರು. ಇದೇ ವೇಳೆ ರಾಜ್ಯಪಾಲ ಥಾವರ ಚಂದ್ ಗೆಹಲೊಟ್, ಅವರು ತಮ್ಮ ತಾಯಿ ದಿವಂಗತ ಶ್ರೀಮತಿ ಸುಮನ್ ಬಾಯಿ ಹೆಸರಿನಲ್ಲಿ ಮತ್ತು ಗೌರವಾನ್ವಿತ ಉಪ ರಾಷ್ಟ್ರಪತಿ ಅವರ ಪತ್ನಿ ಶ್ರೀಮತಿ ಡಾ. ಸುದೇಶ್ ಧನಕರ್ ಅವರು ತಮ್ಮ ತಾಯಿ ದಿವಂಗತ ಶ್ರೀಮತಿ ಭಗವತಿ ದೇವಿ ಅವರ ಹೆಸರಿನಲ್ಲಿ ಅಶೋಕ ವೃಕ್ಷ ನೆಟ್ಟರು.
ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!
ಮುಂಡಗೋಡ ತಾಲೂಕಿನ ಅತ್ತಿವೇರಿ ಜಲಾಶಯದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಆಕಸ್ಮಿಕವಾಗಿ ಬಿದ್ದು ಸಾವು ಕಂಡಿರೋ ಘಟನೆ ನಡೆದಿದೆ. ಹುನಗುಂದ ಗ್ರಾಮದ ಅಂದಾನಯ್ಯ ಗದಗಯ್ಯ ಚಿಕ್ಕಮಠ(45) ಎಂಬುವವನೇ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ. ಶನಿವಾರ ಬೆಳಿಗ್ಗೆ ಮನೆಯಿಂದ ಹೋಗಿದ್ದ ಮೃತ ವ್ಯಕ್ತಿ, ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದರು. ಆದ್ರೆ, ರವಿವಾರ ಸಂಜೆ ವೇಳೆಗೆ ಅತ್ತಿವೇರಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನೀರು ಕುಡಿಯಲು ಹೋಗಿ ಜಲಾಶಯದಲ್ಲಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?
ಮುಂಡಗೋಡ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಆಗಿ ವಿನೋದ್ ರೆಡ್ಡಿ ಚಾರ್ಜ್ ತಕ್ಕೊಂಡು ನಾಲ್ಕೈದು ದಿನ ಆಗಿದೆ. ನಮ್ಮ ಹನ್ಮಂತ್ ಗುಡುಗುಂಟಿಯವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಹುತೇಕ ನಿರೀಕ್ಷೆಯಂತೆಯೇ ರೆಡ್ಡಿ ಸಾಹೇಬ್ರು ಬಂದು ಕೂತಿದ್ದಾರೆ. ನಿಜ ಅಂದ್ರೆ, ಸದ್ಯಕ್ಕಂತೂ, ಪಕ್ಕಾ ಎನರ್ಜೆಟಿಕ್ ಆಗಿರೋ ಹೊಸ ಕ್ರೈಂ ಪಿಎಸ್ಐ, ತಾಲೂಕಿನ ಕ್ರೈಮು ಗಳಿಗೆ ಕಡಿವಾಣ ಹಾಕಲು ಉತ್ಸುಕರಾದಂತೆ ಕಾಣ್ತಿದಾರೆ. ಇವ್ರು ಗಟ್ಟಿ ಹೆಜ್ಜೆ ಇಟ್ಟು ಬಂದ ಕಡೆಯಲ್ಲೇಲ್ಲಾ ಇವ್ರ ಪರವಾಗಿ ಒಂದಿಷ್ಟು ಒಳ್ಳೆಯ ಮಾತುಗಳೇ ಕೇಳಿ ಬರ್ತಿವೆ. ಆದ್ರೆ, ಮುಂದೆ ಏನಿದೆಯೋ ನಂಗಂತೂ ಗೊತ್ತಿಲ್ಲ. ನಮ್ಮ ಕ್ರೈಂ ಟೀಂ..! ಅಸಲು, ಮುಂಡಗೋಡ ಠಾಣೆಯ ಪಡಸಾಲೆಗೆ ಹೆಜ್ಜೆ ಇಟ್ಟ ಗಳಿಗೆಯಿಂದಲೇ ಕ್ರೈಂ ಟೀಂ ನ್ನು ಬಡಿದೆಬ್ಬಿಸಿರೋ ವಿನೋದ್ ರೆಡ್ಡಿ, ಒಂದಿಷ್ಟು ನಿರೀಕ್ಷೆ ಹುಟ್ಟುವಂತೆ ಮಾಡಿರೋದು ಸತ್ಯ. ಆದ್ರೆ, ಮುಂಡಗೋಡಿನಲ್ಲಿ ಕಳೆದ ಕೆಲ ವರ್ಷಗಳಿಂದಲೇ ಕಣ್ಣಿದ್ದರೂ ಕುರುಡು, ಕಾಲಿದ್ದರೂ ನಡೆಯಲು ಆಗದ ಸ್ಥಿತಿಯಲ್ಲಿರೋ ಕ್ರೈಂ ಟೀಂ ಗೆ ಗಟ್ಟಿಯಾಗಿ ಬೆನ್ನು ತಟ್ಟುವ ಕೈಗಳ ಕೊರತೆ ಇತ್ತು....
ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ಪ್ರಶಸ್ತಿ
ಕಾರವಾರ: ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ನಾಲ್ಕು ಪ್ರಶಸ್ತಿಗಳು ಲಭಿಸಿವೆ ಎಂದು ಕಾರವಾರ ವಿಭಾಗದ ಅಂಚೆ ಅಧೀಕ್ಷಕ ಧನಂಜಯ ಆಚಾರ್ಯ ರವರು ಹರ್ಷ ವ್ಯಕ್ತಪಡಿಸಿದ್ದಾರೆ. 2024-25 ಆರ್ಥಿಕ ವರ್ಷದಲ್ಲಿ ನಿವ್ವಳ ಖಾತೆಗಳ ಸಂಖ್ಯೆಯ ವಿಭಾಗದಲ್ಲಿ ಹಾಗೂ ಅಂಚೆ ಉಳಿತಾಯ ಯೋಜನೆಯ ವಿವಿಧ ಹೊಸ ಖಾತೆಯನ್ನು ತೆರೆಯುವ ವಿಭಾಗದಲ್ಲಿ ಕಾರವಾರ ಅಂಚೆ ವಿಭಾಗ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿದೆ. ಅಂಚೆ ಕಚೇರಿ ಉಳಿತಾಯ ಯೋಜನೆಯ ವಿವಿಧ ಹೊಸ ಖಾತೆಗಳನ್ನು ತೆರೆಯುವ ಉಪ ಅಂಚೆ ಕಚೇರಿಗಳ ವಿಭಾಗದಲ್ಲಿ ಹೊನ್ನಾವರ ಅಂಚೆ ಕಚೇರಿಯ ಅಂಚೆ ಪಾಲಕ ಎಮ್.ಎಸ್. ಗೊಂಡ ಅವರು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕಳೆದ ಆರ್ಥಿಕ ವರ್ಷದಲ್ಲಿ ಕಾರವಾರ ವಿಭಾಗಕ್ಕೆ ಒಟ್ಟು 39,872 ಸಣ್ಣ ಉಳಿತಾಯ ಯೋಜನೆಗಳ ಖಾತೆಗಳನ್ನು ತೆರೆಯುವ ಗುರಿಗಳನ್ನು ನೀಡಲಾಗಿದ್ದು, ಎಲ್ಲಾ ಅಂಚೆ ಸಿಬ್ಬಂದಿಗಳ ಅವಿರತ ಪರಿಶ್ರಮದಿಂದ 88,331 ಸಣ್ಣ ಉಳಿತಾಯ ಖಾತೆಗಳನ್ನು ತೆರೆದು ಗುರಿಯನ್ನು ದಾಟಿ ಶೇಕಡಾ 221.54% ಗುರಿ ಸಾಧಿಸಿ ಕರ್ನಾಟಕ ವೃತ್ತ ಮಟ್ಟದಲ್ಲಿ ದ್ವಿತೀಯ...
ಉತ್ತರ ಕನ್ನಡದಲ್ಲಿ ಮೇ.5 ರಿಂದ ಪ.ಜಾತಿ ಸಮುದಾಯದ ಸಮೀಕ್ಷೆ : ಜಿಲ್ಲಾಧಿಕಾರಿ
ಕಾರವಾರ: ನ್ಯಾಯ ಮೂರ್ತಿ ಹೆಚ್.ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ- 2025 ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಮೇ.5 ರಿಂದ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರು, ಪ್ರತಿ 10 ಗಣತಿದಾರರಿಗೆ ಒರ್ವ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಮೇ.5 ರಿಂದ 17 ವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದು, ಮೇ.19 ರಿಂದ 21 ವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ನಡೆಯಲಿದೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗಳು ತಮ್ಮ ಆಧಾರ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ನೀಡಿ ಗಣತಿ ಕಾರ್ಯಕ್ಕೆ ಸಹಕರಿಸಬೇಕು. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ/ವಿವರಗಳಿಗಾಗಿ ಜಿಲ್ಲಾಧಿಕಾರಿಗಳ...
ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು..!
ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರು ಸೇರಿಕೊಂಡು ಸುತ್ತಾಡಲು ಹೋದಾಗ ಕೃಷಿ ಹೊಂಡದಲ್ಲಿ ಮೂವರು ಬಾಲಕರು ಬಿದ್ದಿದ್ದಾರೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ(13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13)ಮೃತಪಟ್ಟ ಬಾಲಕರಾಗಿದ್ದಾರೆ. ಇನ್ನು ತಿರುಗಾಡಲು ಹೊರಗೆ ಹೋದ ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆ ವೇಳೆ, ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರೋ ವಿಚಾರ ಸ್ಥಳೀಯರಿಂದ ತಿಳಿದಿದೆ. ಹೀಗಾಗಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹಗಳನ್ನ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶಿಲ್ದಾರ ಭೇಟಿ ನೀಡಿದ್ದಾರೆ. ಅಂಕಲಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದ್ದು, ಮಕ್ಕಳನ್ನ ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.