ಬೆಂಗಳೂರು : ಬಹುಭಾಷಾ ಗಾಯಕ ಸೋನು ನಿಗಮ್ ಅವರು ಕನ್ನಡಾಭಿಮಾನವನ್ನು ಪಹಲ್ಗಾಮ್ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಗರ ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಯಾವುದೇ ರೀತಿಯ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಹಾಗೂ ಮುಂದಿನ ವಿಚಾರಣೆವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಹಿನ್ನೆಲೆ ಗಾಯಕ ಸೋನು ನಿಗಮ್ ಸಲ್ಲಿಸಿರುವ ಅರ್ಜಿಯನ್ನು ನಾಯಮೂರ್ತಿ ಶಿವಶಂಕರ ಅಮರಣ್ಣವರ ಅವರ ರಜಾಕಾಲೀನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. “ಮುಂದಿನ ವಿಚಾರಣೆವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ತಡೆಯಾಜ್ಞೆ ನೀಡಲಾಗಿದೆ. ಸೋನು ನಿಗಮ್ ತನಿಖೆಗೆ ಸಹಕರಿಸಿದರೆ ಅವರ ವಿರುದ್ಧ ಸರ್ಕಾರ ಯಾವುದೇ ತೆರನಾದ ಬಲವಂತದ ಕ್ರಮಕೈಗೊಳ್ಳಬಾರದು. ಸೋನು ನಿಗಮ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ತನಿಖಾಧಿಕಾರಿ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಬಹುದು. ತನಿಖಾಧಿಕಾರಿ ಖುದ್ದು ಹೇಳಿಕೆ ದಾಖಲಿಸಲು...
Top Stories
ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!
Death News :ಸೂಟ್ಕೇಸ್ ನಲ್ಲಿ ಹುಡುಗಿಯ ಶವ ಪತ್ತೆ, ಚಲಿಸುತ್ತಿರುವ ರೈಲಿನಿಂದ ಎಸೆದಿರುವ ಶಂಕೆ..!
Police News:ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಡಾ.ಎಂ.ಎ. ಸಲೀಂ ನೇಮಕ..!
Naxalar Encounter News:ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು..!
ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!
Business News :2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ..!
Achievement News: ಕನ್ನಡದ ಲೇಖಕಿ ಬಾನು ಮುಷ್ತಾಕ್ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಘೋಷಣೆ..!
Police Death News:ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್ ; ಪೊಲೀಸ್ ಅಧಿಕಾರಿ ಸಾವು..!
ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ
Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!
Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!
Road Problem News:ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ..!
ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ
ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್
ಚಿನ್ನದ ಬೆಲೆ ಒಂದೇ ದಿನ ₹2400 ಏರಿಕೆ, ಬೆಳ್ಳಿ ₹3000 ಜಿಗಿತ; ಆಭರಣ ಖರೀದಿದಾರರಿಗೆ ಬಿಗ್ ಶಾಕ್..!
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!
ಭಾರೀ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು: ಸಂಚಾರಕ್ಕೆ ಅಡಚಣೆ..!
ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!
ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್..!
ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್ ಉಪಪ್ರಧಾನಿ..!
ಆಪರೇಶನ್ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದ್ದು, ಅದನ್ನು ಒಪ್ಪಕೊಳ್ಳದ ಪಾಕಿಸ್ತಾನದ ಈಗ ಪದೇಪದೇ ಮುಜುಗರಕ್ಕೆ ಒಳಗಾಗುತ್ತಿದೆ. ಈಗ ಪಾಕಿಸ್ತಾನಕ್ಕೆ ಅದರ ಉಪಪ್ರಧಾನಿಯೇ ಮತ್ತೊಂದು ಮುಜುಗರಕ್ಕೆ ಕಾರಣರಾಗಿದ್ದಾರೆ. ಪಾಕಿಸ್ತಾನದ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವರಾದ ಇಶಾಕ್ ದಾರ್ ಅವರು ಸೆನೆಟ್ ಅನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ನಕಲಿ ಸುದ್ದಿಯನ್ನು ಉಲ್ಲೇಖಿಸಿ ತನ್ನ ದೇಶದಲ್ಲೇ ನಗೆಪಾಟಲಿಗೆ ಈಡಾಗಿದ್ದಾರೆ. ಅವರ ಸ್ವಂತ ದೇಶದ ಪತ್ರಿಕೆಗಳೇ ಅವರು ಉಲ್ಲೇಖಿಸಿರುವುದು ನೈಜ ಸುದ್ದಿಯಲ್ಲಿ, ಇದು ಸುಳ್ಳು ಸುದ್ದಿ ಎಂದು ಹೇಳಿವೆ. ಗುರುವಾರ, ಇಶಾಕ್ ದಾರ್ ತಮ್ಮ ದೇಶದ ವಾಯುಪಡೆಯನ್ನು ಶ್ಲಾಘಿಸುವಾಗ ಬ್ರಿಟನ್ ಮೂಲದ ದಿ ಡೈಲಿ ಟೆಲಿಗ್ರಾಫ್ ಪತ್ರಿಕೆಯ ಪುಟವನ್ನು ಉಲ್ಲೇಖಿಸಿದರು. ಪಾಕಿಸ್ತಾನವು ಭಾರತದ ಆರು ಯುದ್ಧವಿಮಾನಗಳನ್ನು ಹೊಡೆದುರುಳಿಸಿದೆ. ದಿ ಡೈಲಿ ಟೆಲಿಗ್ರಾಫ್ ಪತ್ರಿಕೆಯು “ಪಾಕಿಸ್ತಾನ ವಾಯುಪಡೆಯು ಆಕಾಶದ ನಿರ್ವಿವಾದ ರಾಜ (Pakistan Air Force is the undisputed king of the skies)” ಎಂದು ಬರೆದಿದೆ ಎಂದು ದಾರ್ ತಮ್ಮ ಭಾಷಣದಲ್ಲಿ ಹೇಳಿದ್ದರು....
ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಕಾರ್ಯಕ್ರಮ
ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಮತ್ತು ತಾಲೂಕಾ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಸಮಾರಂಭವು ಮೇ.17 ರಂದು ಬೆಳಗ್ಗೆ 9 ಗಂಟೆಗೆ ಭಟ್ಕಳದ ನ್ಯೂ ಇಂಗ್ಲೀಷ್ ಸ್ಕೂಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಗೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದಾರೆ. ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..! ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ, ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ ಕೆ. ಸೈಲ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ...
ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..!
ಮೈಸೂರು: ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಸುಹಾಸ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೂ(Puneeth Kerehalli) ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ವಾಟ್ಸಪ್ ಕರೆ ಮಾಡಿದ ಕಿಡಿಗೇಡಿಗಳು ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನನ್ನು ಮುಗಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ‘NEXT YOU WILL KILL’ ಎಂದು ಬರೆದು ಜೀವ ಬೆದರಿಕೆ ಹಾಕಿದ್ದ ಆರೋಪಿ, ವಾಟ್ಸಾಪ್ ಕಾಲ್ ಹಾಗೂ ವೀಡಿಯೊ ಕಾಲ್ ಮೂಲಕವೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ, Next You ಎಂದು ಬೆದರಿಕೆ ಹಾಕಿದ್ದಾರೆ ಎಂದು...
ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.
ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in/bcwd ಆನ್‌ಲೈನ್ ಮೂಲಕ ಜೂನ್ 16 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..! ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ. & ಎಸ್.ಟಿ. ರೂ. 2,50,000/- ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1,00,000 ಒಳಗಿರಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ www.bcwd.karnataka.gov.inನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ...
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!
ಬೆಂಗಳೂರು ಸೇರಿದಂತೆ ಕರ್ನಾಟಕದ 23 ಜಿಲ್ಲೆಗಳಿಗೆ ಮಳೆಯಾಗಲಿದ್ದು, ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 17ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಮಳೆ ಅಥವಾ...
ಸಂಸದ ತರೂರ್ ನಿಲುವಿಗೆ ಕಾಂಗ್ರೆಸ್ ಅತೃಪ್ತಿ ; ಆದ್ರೆ ಪಾಕ್ ಭಯೋತ್ಪಾದನೆ ವಿರುದ್ಧ ಸರ್ಕಾರದ ಜಾಗತಿಕ ಸಂಪರ್ಕ ಯೋಜನೆಯಲ್ಲಿ ಪ್ರಮುಖ ಪಾತ್ರ..?
ನವದೆಹಲಿ: ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಗಳು ಪಕ್ಷದ ನಾಯಕರು ‘ಲಕ್ಷ್ಮಣ ರೇಖೆ’ಯನ್ನು ಮೀರಿದೆ ಎಂದು ಹೇಳಿದ ನಂತರ, ಶಶಿ ತರೂರ ಅವರಿಗೆ ಪಾಕಿಸ್ತಾನದಲ್ಲಿ ಭಯೋತ್ಪಾದನೆ ವಿರುದ್ಧದ ಭಾರತದ ಅಭಿಯಾನದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರ ರಾಜತಾಂತ್ರಿಕ ಪ್ರಯತ್ನಕ್ಕಾಗಿ ಶಶಿ ತರೂರ್ ಬಹುಪಕ್ಷೀಯ ನಿಯೋಗದ ನೇತೃತ್ವ ವಹಿಸಬಹುದು ಎಂದು ಅದು ಹೇಳಿದೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ಅಂತಾರಾಷ್ಟ್ರೀಯ ಸಮುದಾಯಕ್ಕೆ ಸ್ಪಷ್ಟವಾಗಿ ತಿಳಿಸುವ ಪ್ರಯತ್ನದ ಭಾಗವಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಮಹತ್ವದ ಜಾಗತಿಕ ಸಂಪರ್ಕದ ಉಪಕ್ರಮವನ್ನು ಪ್ರಾರಂಭಿಸುತ್ತಿದೆ. ಭಾರತದಲ್ಲಿ ವಿದೇಶಾಂಗ ವ್ಯವಹಾರಗಳ ಸಂಸದೀಯ ಸಮಿತಿಯ ಮುಖ್ಯಸ್ಥರೂ ಆಗಿರುವ ಶಶಿ ತರೂರ್ ಅವರು ಹಲವಾರು ದೇಶಗಳಿಗೆ ಹೋಗುವ ಬಹುಪಕ್ಷೀಯ ನಿಯೋಗದ ನೇತೃತ್ವ ವಹಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಶಶಿ ತರೂರ್ ಅವರ ಆಪ್ತ ಮೂಲಗಳು, ಮುಂಬರುವ ಬಹುಪಕ್ಷೀಯ ನಿಯೋಗದ...
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ: ಗಣಪತಿ ಉಳ್ವೇಕರ
ಕಾರವಾರ : ಡೆಂಗ್ಯೂ ಸ್ರಾಂಕ್ರಾಮಿಕ ರೋಗವಾಗಿದ್ದು, ಬಹಳ ಬೇಗ ಒಬ್ಬರಿಂದ ಒಬ್ಬರಿಗೆ ಹರಡಲಿದ್ದು, ಈ ರೋಗದ ಕುರಿತಂತೆ ನಗರಸಭೆ, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರು ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಗಣಪತಿ ಡಿ ಉಳ್ವೆಕರ್ ಹೇಳಿದರು. ಅವರು ಶುಕ್ರವಾರ, ನಗರ ಸಭೆ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಡೆಂಗಿ ದಿನ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಮಾತನಾಡಿ, ಕಾರವಾರದ ಸ್ವಚ್ಚತೆಗೆ ಪೌರಕಾರ್ಮಿಕರು ಕಾರಣರಾಗಿದ್ದಾರೆ. ಆರೋಗ್ಯ ಸುರಕ್ಷಿತ ದೃಷ್ಠಿಯಿಂದ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು. ಆಶಾ ಕಾರ್ಯಕರ್ತೆಯರು ಮನೆ ಮನೆ ತೆರಳಿ ಜನರಿಗೆ ಅರಿವನ್ನು ಮೂಡಿಸುತ್ತಾರೆ. ಸಾರ್ವಜನಿಕರು ಇದನ್ನು ಅರಿತುಕೊಂಡು ಜಾಗೃತರಾಗಿರಬೇಕು ಎಂದರು. ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್ ನಿವೃತ್ತ ಏರ್...
ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್ ನಿವೃತ್ತ ಏರ್ ಮಾರ್ಷಲ್..!
ಇಸ್ಲಾಮಾಬಾದ್:“ಆಪರೇಷನ್ ಸಿಂಧೂರ” ಹೆಸರಿನಲ್ಲಿ ಭಾರತ ನಡೆಸಿದ ನಿಖರ ದಾಳಿಯ ಸಮಯದಲ್ಲಿ ಪಾಕಿಸ್ತಾನವು ಪ್ರಮುಖ ವಾಯುಗಾಮಿ ಆಸ್ತಿಯನ್ನು ಕಳೆದುಕೊಂಡಿದೆ ಎಂದು ಪಾಕಿಸ್ತಾನ ವಾಯುಪಡೆಯ ನಿವೃತ್ತ ಉನ್ನತ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ. ನಿವೃತ್ತ ಏರ್ ಮಾರ್ಷಲ್ ಮಸೂದ್ ಅಖ್ತರ್ ಅವರು ಸಂದರ್ಶನವೊಂದರಲ್ಲಿ, ಮೇ 9-10ರ ರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯ ಸಮಯದಲ್ಲಿ ಪಾಕಿಸ್ತಾನ ವಾಯುಪಡೆಯು ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ (AWACS) ವಿಮಾನವನ್ನು ಕಳೆದುಕೊಂಡಿತು ಎಂದು ಹೇಳಿದ್ದಾರೆ. ಅಖ್ತರ್ ಪ್ರಕಾರ, ಕರಾಚಿ ಬಳಿಯ ಭೋಲಾರಿ ವಾಯುನೆಲೆಯ ಮೇಲೆ ಭಾರತೀಯ ಪಡೆಗಳು ನಡೆಸಿದ ದಾಳಿಯ ಸಮಯದಲ್ಲಿ ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ (AWACS)ಯನ್ನು ಹೊಡೆದುರುಳಿಸಲಾಯಿತು. ಭಾರತದ ಪ್ರತೀಕಾರದ ಕಾರ್ಯಾಚರಣೆಯ ಭಾಗವಾಗಿ ದಾಳಿಗೊಳಗಾದ 11 ಮಿಲಿಟರಿ ಸ್ಥಾಪನೆಗಳಲ್ಲಿ ಈ ವಾಯುನೆಲೆಯೂ ಒಂದಾಗಿತ್ತು. ಭೋಲಾರಿ ನೆಲೆಗೆ ನೇರ ದಾಳಿಯಾಗಿದೆ ಎಂದು ಭಾರತೀಯ ರಕ್ಷಣಾ ಮೂಲಗಳು ಈ ಹಿಂದೆ ಹೇಳಿಕೊಂಡಿದ್ದವು ಮತ್ತು ಮ್ಯಾಕ್ಸರ್ ಟೆಕ್ನಾಲಜೀಸ್ ಬಿಡುಗಡೆ ಮಾಡಿದ ಹೆಚ್ಚಿನ ರೆಸಲ್ಯೂಶನ್ ಉಪಗ್ರಹ ಚಿತ್ರಣಗಳು ಇದನ್ನು ಮತ್ತಷ್ಟು ಪುಷ್ಟೀಕರಿಸುತ್ತವೆ....
ಪ.ಜಾತಿ ಒಳ ಮೀಸಲಾತಿ ಸಮೀಕ್ಷೆ: ಅವಧಿ ವಿಸ್ತರಣೆ
ಕಾರವಾರ: ಗೌರವಾನ್ವಿತ ನ್ಯಾಯ ಮೂರ್ತಿ ಹೆಚ್.ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ- 2025 ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಮೇ.5 ರಿಂದ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಆಯೋಗದ ನಿರ್ದೇಶನದಂತೆ ಮೇ. 25 ರವರೆಗೆ ಮನೆ ಮನೆ ಸಮೀಕ್ಷೆ ಕಾರ್ಯವನ್ನು ವಿಸ್ತರಿಸಲಾಗಿದೆ ಹಾಗೂ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕಾರ್ಯವನ್ನು ಮೇ.26 ರಿಂದ 28 ರವರೆಗೆ ಮರು ನಿಗಧಿಪಡಿಸಲಾಗಿದೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗಳು ತಮ್ಮ ಆಧಾರ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ನೀಡಿ ಗಣತಿ ಕಾರ್ಯಕ್ಕೆ ಸಹಕರಿಸಬೇಕು. ಜಿಲ್ಲೆಯಲ್ಲಿ “ಮುಂಗಾರು” ಸಮಸ್ಯೆಗಳನ್ನು ಎದುರಿಸಲು 24×7 ಸಿದ್ದವಾಗಿರಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ/ವಿವರಗಳಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಕಂಟ್ರೋಲ್...