ನವದೆಹಲಿ: ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಗಳು ಪಕ್ಷದ ನಾಯಕರು ‘ಲಕ್ಷ್ಮಣ ರೇಖೆ’ಯನ್ನು ಮೀರಿದೆ ಎಂದು ಹೇಳಿದ ನಂತರ, ಶಶಿ ತರೂರ ಅವರಿಗೆ ಪಾಕಿಸ್ತಾನದಲ್ಲಿ ಭಯೋತ್ಪಾದನೆ ವಿರುದ್ಧದ ಭಾರತದ ಅಭಿಯಾನದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರ ರಾಜತಾಂತ್ರಿಕ ಪ್ರಯತ್ನಕ್ಕಾಗಿ ಶಶಿ ತರೂರ್ ಬಹುಪಕ್ಷೀಯ ನಿಯೋಗದ ನೇತೃತ್ವ ವಹಿಸಬಹುದು ಎಂದು ಅದು ಹೇಳಿದೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ಅಂತಾರಾಷ್ಟ್ರೀಯ ಸಮುದಾಯಕ್ಕೆ ಸ್ಪಷ್ಟವಾಗಿ ತಿಳಿಸುವ ಪ್ರಯತ್ನದ ಭಾಗವಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಮಹತ್ವದ ಜಾಗತಿಕ ಸಂಪರ್ಕದ ಉಪಕ್ರಮವನ್ನು ಪ್ರಾರಂಭಿಸುತ್ತಿದೆ. ಭಾರತದಲ್ಲಿ ವಿದೇಶಾಂಗ ವ್ಯವಹಾರಗಳ ಸಂಸದೀಯ ಸಮಿತಿಯ ಮುಖ್ಯಸ್ಥರೂ ಆಗಿರುವ ಶಶಿ ತರೂರ್ ಅವರು ಹಲವಾರು ದೇಶಗಳಿಗೆ ಹೋಗುವ ಬಹುಪಕ್ಷೀಯ ನಿಯೋಗದ ನೇತೃತ್ವ ವಹಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಶಶಿ ತರೂರ್ ಅವರ ಆಪ್ತ ಮೂಲಗಳು, ಮುಂಬರುವ ಬಹುಪಕ್ಷೀಯ ನಿಯೋಗದ...
Top Stories
ಕಡಿಮೆ CIBIL ಸ್ಕೋರ್ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
ಬಿರುಗಾಳಿ-ಆಲಿಕಲ್ಲು ಮಳೆಯ ಹೊಡೆತಕ್ಕೆ ಇಂಡಿಗೋ ವಿಮಾನಕ್ಕೆ ಹಾನಿ ; ಕಿರುಚಿಕೊಂಡ ಪ್ರಯಾಣಿಕರು..!
ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..!
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..!
ಪಾಕಿಸ್ತಾನಿಯ ಜೊತೆ ನನ್ನ ಮದುವೆ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!
ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!
Death News :ಸೂಟ್ಕೇಸ್ ನಲ್ಲಿ ಹುಡುಗಿಯ ಶವ ಪತ್ತೆ, ಚಲಿಸುತ್ತಿರುವ ರೈಲಿನಿಂದ ಎಸೆದಿರುವ ಶಂಕೆ..!
Police News:ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಡಾ.ಎಂ.ಎ. ಸಲೀಂ ನೇಮಕ..!
Naxalar Encounter News:ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು..!
ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ: ಗಣಪತಿ ಉಳ್ವೇಕರ
ಕಾರವಾರ : ಡೆಂಗ್ಯೂ ಸ್ರಾಂಕ್ರಾಮಿಕ ರೋಗವಾಗಿದ್ದು, ಬಹಳ ಬೇಗ ಒಬ್ಬರಿಂದ ಒಬ್ಬರಿಗೆ ಹರಡಲಿದ್ದು, ಈ ರೋಗದ ಕುರಿತಂತೆ ನಗರಸಭೆ, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರು ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಗಣಪತಿ ಡಿ ಉಳ್ವೆಕರ್ ಹೇಳಿದರು. ಅವರು ಶುಕ್ರವಾರ, ನಗರ ಸಭೆ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಡೆಂಗಿ ದಿನ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಮಾತನಾಡಿ, ಕಾರವಾರದ ಸ್ವಚ್ಚತೆಗೆ ಪೌರಕಾರ್ಮಿಕರು ಕಾರಣರಾಗಿದ್ದಾರೆ. ಆರೋಗ್ಯ ಸುರಕ್ಷಿತ ದೃಷ್ಠಿಯಿಂದ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು. ಆಶಾ ಕಾರ್ಯಕರ್ತೆಯರು ಮನೆ ಮನೆ ತೆರಳಿ ಜನರಿಗೆ ಅರಿವನ್ನು ಮೂಡಿಸುತ್ತಾರೆ. ಸಾರ್ವಜನಿಕರು ಇದನ್ನು ಅರಿತುಕೊಂಡು ಜಾಗೃತರಾಗಿರಬೇಕು ಎಂದರು. ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್ ನಿವೃತ್ತ ಏರ್...
ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್ ನಿವೃತ್ತ ಏರ್ ಮಾರ್ಷಲ್..!
ಇಸ್ಲಾಮಾಬಾದ್:“ಆಪರೇಷನ್ ಸಿಂಧೂರ” ಹೆಸರಿನಲ್ಲಿ ಭಾರತ ನಡೆಸಿದ ನಿಖರ ದಾಳಿಯ ಸಮಯದಲ್ಲಿ ಪಾಕಿಸ್ತಾನವು ಪ್ರಮುಖ ವಾಯುಗಾಮಿ ಆಸ್ತಿಯನ್ನು ಕಳೆದುಕೊಂಡಿದೆ ಎಂದು ಪಾಕಿಸ್ತಾನ ವಾಯುಪಡೆಯ ನಿವೃತ್ತ ಉನ್ನತ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ. ನಿವೃತ್ತ ಏರ್ ಮಾರ್ಷಲ್ ಮಸೂದ್ ಅಖ್ತರ್ ಅವರು ಸಂದರ್ಶನವೊಂದರಲ್ಲಿ, ಮೇ 9-10ರ ರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯ ಸಮಯದಲ್ಲಿ ಪಾಕಿಸ್ತಾನ ವಾಯುಪಡೆಯು ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ (AWACS) ವಿಮಾನವನ್ನು ಕಳೆದುಕೊಂಡಿತು ಎಂದು ಹೇಳಿದ್ದಾರೆ. ಅಖ್ತರ್ ಪ್ರಕಾರ, ಕರಾಚಿ ಬಳಿಯ ಭೋಲಾರಿ ವಾಯುನೆಲೆಯ ಮೇಲೆ ಭಾರತೀಯ ಪಡೆಗಳು ನಡೆಸಿದ ದಾಳಿಯ ಸಮಯದಲ್ಲಿ ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ (AWACS)ಯನ್ನು ಹೊಡೆದುರುಳಿಸಲಾಯಿತು. ಭಾರತದ ಪ್ರತೀಕಾರದ ಕಾರ್ಯಾಚರಣೆಯ ಭಾಗವಾಗಿ ದಾಳಿಗೊಳಗಾದ 11 ಮಿಲಿಟರಿ ಸ್ಥಾಪನೆಗಳಲ್ಲಿ ಈ ವಾಯುನೆಲೆಯೂ ಒಂದಾಗಿತ್ತು. ಭೋಲಾರಿ ನೆಲೆಗೆ ನೇರ ದಾಳಿಯಾಗಿದೆ ಎಂದು ಭಾರತೀಯ ರಕ್ಷಣಾ ಮೂಲಗಳು ಈ ಹಿಂದೆ ಹೇಳಿಕೊಂಡಿದ್ದವು ಮತ್ತು ಮ್ಯಾಕ್ಸರ್ ಟೆಕ್ನಾಲಜೀಸ್ ಬಿಡುಗಡೆ ಮಾಡಿದ ಹೆಚ್ಚಿನ ರೆಸಲ್ಯೂಶನ್ ಉಪಗ್ರಹ ಚಿತ್ರಣಗಳು ಇದನ್ನು ಮತ್ತಷ್ಟು ಪುಷ್ಟೀಕರಿಸುತ್ತವೆ....
ಪ.ಜಾತಿ ಒಳ ಮೀಸಲಾತಿ ಸಮೀಕ್ಷೆ: ಅವಧಿ ವಿಸ್ತರಣೆ
ಕಾರವಾರ: ಗೌರವಾನ್ವಿತ ನ್ಯಾಯ ಮೂರ್ತಿ ಹೆಚ್.ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ- 2025 ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಮೇ.5 ರಿಂದ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಆಯೋಗದ ನಿರ್ದೇಶನದಂತೆ ಮೇ. 25 ರವರೆಗೆ ಮನೆ ಮನೆ ಸಮೀಕ್ಷೆ ಕಾರ್ಯವನ್ನು ವಿಸ್ತರಿಸಲಾಗಿದೆ ಹಾಗೂ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕಾರ್ಯವನ್ನು ಮೇ.26 ರಿಂದ 28 ರವರೆಗೆ ಮರು ನಿಗಧಿಪಡಿಸಲಾಗಿದೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗಳು ತಮ್ಮ ಆಧಾರ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ನೀಡಿ ಗಣತಿ ಕಾರ್ಯಕ್ಕೆ ಸಹಕರಿಸಬೇಕು. ಜಿಲ್ಲೆಯಲ್ಲಿ “ಮುಂಗಾರು” ಸಮಸ್ಯೆಗಳನ್ನು ಎದುರಿಸಲು 24×7 ಸಿದ್ದವಾಗಿರಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ/ವಿವರಗಳಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಕಂಟ್ರೋಲ್...
ಜಿಲ್ಲೆಯಲ್ಲಿ “ಮುಂಗಾರು” ಸಮಸ್ಯೆಗಳನ್ನು ಎದುರಿಸಲು 24×7 ಸಿದ್ದವಾಗಿರಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಕಂಡು ಬರಬಹುದಾದ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಲು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು 24×7 ಸನ್ನದ್ದರಾಗಿರುವಂತೆ ಹಾಗೂ ಎಲ್ಲಾ ತಾಲೂಕುಗಳಲ್ಲಿ ಕಂಟ್ರೋಲ್ ರೂಂ ಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. ಅವರು ಶುಕ್ರವಾರ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಸಿದ್ದತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಎಲ್ಲಾ ತಹಸೀಲ್ದಾರ್ ಕಚೇರಿಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಅರಣ್ಯ, ಹೆಸ್ಕಾಂ, ಬಿ.ಎಸ್.ಎನ್.ಎಲ್ ಕಚೇರಿಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವಂತೆ ತಿಳಿಸಿದರು.. ಈ ಹಿಂದಿನ ಅವಧಿಯಲ್ಲಿ ಅರಗಾ, ಚೆಂಡಿಯಾ, ತೋಡೂರು, ಮುದಗಾ, ಬಿಣಗಾ ಪ್ರದೇಶಗಳಲ್ಲಿನ ಜನವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿ...
ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?
ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. ಪಟ್ಟಣದ ಅಂಬೇಡ್ಕರ ಓಣಿಯಲ್ಲಿ ಕಳುವಾಗಿದ್ದ ಬೈಕ್ ಪತ್ತೆ ಹಚ್ಚಿದ್ದಾರೆ. ಅಂದಹಾಗೆ, ನಿನ್ನೆ ಗುರುವಾರ ಅಂಬೇಡ್ಕರ್ ಓಣಿಯ ತುಕರಾಮ ಭೀಮಣ್ಣ ಕೊರವರ ಎಂಬುವವರ ಮನೆಯ ಮುಂದಿನ ಅಂಗಳದಲ್ಲಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ ಮಾಡಲಾಗಿತ್ತು. ದೂರು ದಾಖಲಿಸಿಕೊಂಡ ಮುಂಡಗೋಡ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಬೈಕ್ ಕಳುವು ಮಾಡಿಕೊಂಡು ಹೋಗಿದ್ದ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಕಳ್ಳತನ ಮಾಡಿದ ಮೋಟಾರ್ ಸೈಕಲ್ ನಂಬರ- ಕೆಎ-31/ಎಕ್ಸ್-7004 ನೇದನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಂಡಿದ್ದಾರೆ ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಈ ಪ್ರಕರಣದಲ್ಲಿ ಉತ್ತರ ಕನ್ನಡ ಎಸ್ಪಿ ಎಮ್. ನಾರಾಯಣ, ಅಡಿಶನಲ್ ಎಸ್ಪಿ ಕೃಷ್ಣಮೂರ್ತಿ ಜಿ. ಮತ್ತು ಜಗದೀಶ ನಾಯ್ಕ ಶಿರಸಿ ಡಿವೈಎಸ್ಪಿ...
ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?
ದೋಹಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಪಲ್ ಸಿಇಒ ಟಿಮ್ ಕುಕ್ ಅವರ ಜೊತೆ ನೇರ ಸಂಭಾಷಣೆ ನಡೆಸಿದ್ದು, ಭಾರತೀಯ ಮಾರುಕಟ್ಟೆಗೆ ಸೇವೆ ಸಲ್ಲಿಸುವ ಉದ್ದೇಶವನ್ನು ಹೊರತುಪಡಿಸಿ, ಭಾರತದಲ್ಲಿ ಆಪಲ್ ಉತ್ಪಾದನಾ ಹೆಜ್ಜೆಗುರುತನ್ನು ವಿಸ್ತರಿಸುವುದು ಬೇಡ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ. “ಭಾರತದಲ್ಲಿ ನೀವು ನಿರ್ಮಾಣ ಮಾಡುವುದರ ಬಗ್ಗೆ ನಮಗೆ ಆಸಕ್ತಿ ಇಲ್ಲ, ಅವರು ತಮ್ಮನ್ನು ತಾವು ನೋಡಿಕೊಳ್ಳಬಹುದು ಎಂದು ಆಪಲ್ ಸಿಇಒ ಟಿಮ್ ಕುಕ್ ಅವರಿಗೆ ಹೇಳಿದ್ದೆವು” ಎಂದು ಟ್ರಂಪ್ ಮೇ 15 ರಂದು ಕತಾರ್‌ನ ದೋಹಾದಲ್ಲಿ ನಡೆದ ವ್ಯವಹಾರ ಕಾರ್ಯಕ್ರಮದಲ್ಲಿ (business event) ಹೇಳಿದರು ಎಂದು ಬ್ಲೂಮ್‌ಬರ್ಗ್ ವರದಿ ತಿಳಿಸಿದೆ. ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..! ಟಿಮ್ ಕುಕ್ ಅವರೊಂದಿಗೆ “ಸಣ್ಣ ಸಮಸ್ಯೆ” ಇದೆ. “ಅವರು ನನ್ನ ಸ್ನೇಹಿತ, ನಾನು ಅವರಿಗೆ ಹೇಳಿದೆ, ನಾನು ನಿಮ್ಮನ್ನು ತುಂಬಾ ಚೆನ್ನಾಗಿ ನಡೆಸಿಕೊಳ್ಳುತ್ತಿದ್ದೇನೆ. ನೀವು $500 ಬಿಲಿಯನ್ ಗಳಿಸುತ್ತೀರಿ, ಆದರೆ...
ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..!
ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆನಂದ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್‌ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಅವರ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ಆನಂದ ಗುರೂಜಿ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದಾರೆ. ಆನಂದ್ ಗುರೂಜಿ ದೂರಿನ ಮೇರೆಗೆ ಪೊಲೀಸರು ಇಬ್ಬರ ವಿರುದ್ಧ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕೃಷ್ಣಮೂರ್ತಿ ಹಾಗೂ ದಿವ್ಯಾ ವಸಂತ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಆನಂದ ಗುರೂಜಿ ಅವರು ವೀಡಿಯೊ ಹಾಗೂ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದು, ಆದರೂ, ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಮಾಡಿ, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ...
ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ; ಬಿಬಿಎಂಪಿ..!
ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ(BBMP) ಸ್ವಾಧೀನಾನುಭವ ಪ್ರಮಾಣ ಪತ್ರ( Occupancy certificates) ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಕುರಿತು ಬಿಬಿಎಂಪಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕಕ್ಕೆ ಕೋರಿ ಸುಮಾರು 66,400 ಅರ್ಜಿಗಳು ಬಂದಿವೆ. ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೀಡಿರುವ ಆದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ / ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, ನೀರು ಸರಬರಾಜು / ಒಳಚರಂಡಿ ಸಂಪರ್ಕ ನೀಡುವಂತೆ ಆದೇಶಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುಪ್ರಿಂಕೋರ್ಟ್ ಆದೇಶ ಹಿನ್ನಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕೋರಿರುವ ಕಟ್ಟಡಗಳಿಗೆ ಬಿಬಿಎಂಪಿಯಿಂದ ‘ಎ’ ಖಾತಾ ಅಥವಾ ‘ಬಿ’ ಖಾತಾ ಪಡೆಯಲಾಗಿರುವ ಬಗ್ಗೆ, ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯಲಾಗಿರುವ ಬಗ್ಗೆ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರ, ಪೂರ್ಣತಾ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿರುವ,...
ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!
ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಮೇ 1ರಂದು ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಆರೋಪಿ ಸುಹಾಸ ಶೆಟ್ಟಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಕೊಚ್ಚಿ ಕೊಲೆಗೈದಿದ್ದರು. ಘಟನೆಗೆ ಸಂಬಂಧಿಸಿಂದಂತೆ ಮಂಗಳೂರು ಪೊಲೀಸರು ಈಗಾಗಲೇ 8 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳಾದ ಅಬ್ದುಲ್ ಖಾದರ್ ಮತ್ತು ನೌಷದ್ ಎಂಬವರನ್ನು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ....