Police Death News:ಬೆಂಗಳೂರಿನ ಹೊರವಲಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ ಎರಡು ಮೋಟಾರ್ಸೈಕಲ್ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ಬಳಿ ಸೋಮವಾರ ಬೆಳಿಗ್ಗೆ 10:30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರನ್ನು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಿಯೋಜಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾಗರಾಜು (52) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದ್ದು, ಕೆಎಸ್ಆರ್ಟಿಸಿ ಬಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಎರಡು ಮೋಟಾರ್ಸೈಕಲ್ಗಳಿಗೆ ಡಿಕ್ಕಿ ಹೊಡೆದಿರುವುದನ್ನು ತೋರಿಸುತ್ತದೆ. ಸೆಕೆಂಡುಗಳ ನಂತರ, ಬಸ್ ರಸ್ತೆಯಿಂದ ಪಕ್ಕಕ್ಕೆ ಕೆಳಕ್ಕೆ ಉರುಳಿ ಬಿದ್ದಿದೆ. ಅದು ದೊಡ್ಡ ತೆರೆದ ಚರಂಡಿಗೆ ಉರುಳಿದೆ. ನಂತರ...
Top Stories
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!
ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ
ಕಡಿಮೆ CIBIL ಸ್ಕೋರ್ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
ಬಿರುಗಾಳಿ-ಆಲಿಕಲ್ಲು ಮಳೆಯ ಹೊಡೆತಕ್ಕೆ ಇಂಡಿಗೋ ವಿಮಾನಕ್ಕೆ ಹಾನಿ ; ಕಿರುಚಿಕೊಂಡ ಪ್ರಯಾಣಿಕರು..!
ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..!
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..!
ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ
Dharwad Accident News: ಧಾರವಾಡ: ಬೇಲೂರಿಗೆ ಬರುತ್ತಿದ್ದ ವೇಳೆಯಲ್ಲಿ, ಸ್ಕೂಟಿಯೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ನರೇಂದ್ರ ಬೈಪಾಸ್ ಬಳಿ ಸಂಭವಿಸಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ. ಮದಿಹಾಳದ ಪಿಜಿಯಲ್ಲಿ ಇರುತ್ತಿದ್ದ ವಿಶ್ವಾಸ ಎಂಬಾತ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮತ್ತೋರ್ವ ಗಾಯಾಳುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!
Achievement News: ಮಂಗಳವಾರ ಟೈಮ್ ನಿಯತಕಾಲಿಕೆಯು ಲೋಕೋಪಕಾರದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಮೊದಲ ಪಟ್ಟಿಯಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ ಅಂಬಾನಿ ಮತ್ತು ನೀತಾ ಅಂಬಾನಿ, ವಿಪ್ರೋದ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್ಜಿ ಮತ್ತು ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರನ್ನು ಹೆಸರಿಸಿದೆ. ಮುಕೇಶ ಅಂಬಾನಿ ಮತ್ತು ನೀತಾ ಅಂಬಾನಿ ಸ್ಥಾನ ಪಡೆದುಕೊಂಡಿದ್ದಾರೆ. ದಾನ ಮತ್ತು ಲೋಕೋಪಕಾರಿ ಕ್ಷೇತ್ರದಲ್ಲಿ ಭವಿಷ್ಯವನ್ನು ರೂಪಿಸುತ್ತಿರುವ 100 ಜಾಗತಿಕ ನಾಯಕರನ್ನು ಈ ಪಟ್ಟಿ ಒಳಗೊಂಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ ಅಂಬಾನಿ ಮತ್ತು ರಿಲಯನ್ಸ್ ಫೌಂಡೇಶನ್ನ ಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ 2024ರಲ್ಲಿ 407 ಕೋಟಿ ರೂ. ಗಳನ್ನು (ಸುಮಾರು 48 ಮಿಲಿಯನ್ ಡಾಲರ್) ದೇಣಿಗೆ ನೀಡುವ ಮೂಲಕ ದೇಶದ ಅತಿದೊಡ್ಡ ದಾನಿಗಳಲ್ಲಿ ಸ್ಥಾನ ಪಡೆದಿದ್ದಾರೆ. ದಂಪತಿಯ ಲೋಕೋಪಕಾರಿ ಉಪಕ್ರಮಗಳು ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ, ಕ್ರೀಡೆ ಮತ್ತು ವಿಪತ್ತು ಪರಿಹಾರ ಮೊದಲಾದ...
Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!
Achievement News: ಮಂಗಳವಾರ ಟೈಮ್ ನಿಯತಕಾಲಿಕೆಯು ಲೋಕೋಪಕಾರದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಮೊದಲ ಪಟ್ಟಿಯಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ ಅಂಬಾನಿ ಮತ್ತು ನೀತಾ ಅಂಬಾನಿ, ವಿಪ್ರೋದ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್ಜಿ ಮತ್ತು ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರನ್ನು ಹೆಸರಿಸಿದೆ. ಮುಕೇಶ ಅಂಬಾನಿ ಮತ್ತು ನೀತಾ ಅಂಬಾನಿ ಸ್ಥಾನ ಪಡೆದುಕೊಂಡಿದ್ದಾರೆ. ದಾನ ಮತ್ತು ಲೋಕೋಪಕಾರಿ ಕ್ಷೇತ್ರದಲ್ಲಿ ಭವಿಷ್ಯವನ್ನು ರೂಪಿಸುತ್ತಿರುವ 100 ಜಾಗತಿಕ ನಾಯಕರನ್ನು ಈ ಪಟ್ಟಿ ಒಳಗೊಂಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ ಅಂಬಾನಿ ಮತ್ತು ರಿಲಯನ್ಸ್ ಫೌಂಡೇಶನ್ನ ಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ 2024ರಲ್ಲಿ 407 ಕೋಟಿ ರೂ. ಗಳನ್ನು (ಸುಮಾರು 48 ಮಿಲಿಯನ್ ಡಾಲರ್) ದೇಣಿಗೆ ನೀಡುವ ಮೂಲಕ ದೇಶದ ಅತಿದೊಡ್ಡ ದಾನಿಗಳಲ್ಲಿ ಸ್ಥಾನ ಪಡೆದಿದ್ದಾರೆ. ದಂಪತಿಯ ಲೋಕೋಪಕಾರಿ ಉಪಕ್ರಮಗಳು ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ, ಕ್ರೀಡೆ ಮತ್ತು ವಿಪತ್ತು ಪರಿಹಾರ ಮೊದಲಾದ...
Road Problem News:ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ..!
Road Problem News:ಬೆಂಗಳೂರಿನ 43 ವರ್ಷದ ವ್ಯಕ್ತಿಯೊಬ್ಬರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಗೆ ಕಾನೂನು (ಲೀಗಲ್) ನೋಟಿಸ್ ಕಳುಹಿಸಿದ್ದು, ನಗರದಲ್ಲಿನ ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ಉಂಟಾದ “ದೈಹಿಕ ಯಾತನೆ ಮತ್ತು ಭಾವನಾತ್ಮಕ ಆಘಾತ”ಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದಾರೆ. ರಿಚ್ಮಂಡ್ ಟೌನ್ ನಿವಾಸಿ ದಿವ್ಯ ಕಿರಣ ಎಂಬವರು ತಮ್ಮ ನೋಟಿಸ್ನಲ್ಲಿ, ತೆರಿಗೆ ಪಾವತಿಸುವ ನಾಗರಿಕನಾಗಿದ್ದರೂ, ಬಿಬಿಎಂಪಿಯ “ಮೂಲಭೂತ ನಾಗರಿಕ ಮೂಲಸೌಕರ್ಯವನ್ನು ನಿರ್ವಹಿಸುವಲ್ಲಿನ ಸ್ಪಷ್ಟ ವೈಫಲ್ಯ” ದಿಂದಾಗಿ “ನಿರಂತರ ದೈಹಿಕ ಯಾತನೆ ಮತ್ತು ಮಾನಸಿಕ ಯಾತನೆ” ಅನುಭವಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಆಳವಾದ ಗುಂಡಿಗಳು, ಮುರಿದುಬಿದ್ದ ಮತ್ತು ಅಸಮವಾದ ಮಾರ್ಗಗಳು ಮತ್ತು ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆ ಮೇಲ್ಮೈಗಳು ಇದರಲ್ಲಿ ಸೇರಿವೆ. ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ ದಿವ್ಯ ಕಿರಣ ಅವರು “ತೀವ್ರವಾದ ಕುತ್ತಿಗೆ ಮತ್ತು ಬೆನ್ನು ನೋವನ್ನು ಅನುಭವಿಸಿದ್ದಾಗಿ ಹೇಳಿಕೊಂಡಿದ್ದಾರೆ. ಇದು ಈ ಅಪಾಯಕಾರಿ ರಸ್ತೆಗಳಲ್ಲಿ ಪ್ರಯಾಣಿಸುವಾಗ ಉಂಟಾಗುವ ಸೆಳೆತ ಮತ್ತು ಆಘಾತಕ್ಕೆ...
ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ
ZP CEO Meeting News: ಕಾರವಾರ: ಜಿಲ್ಲೆಯಲ್ಲಿ ಮಾನ್ಸೂನ್ ಮಳೆಗಾಲವು ಈ ವರ್ಷ ಬೇಗ ಶುರುವಾಗಿದ್ದು. ಈಗಾಗಲೇ ಪ್ರಗತಿಯಲ್ಲಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಿಗೂ ನೀರಿನ ಹಂಚಿಕೆ ಸರಿಯಾಗಿ ಮಾಡಬೇಕು, ಪೈಪ್ಲೈನ್ಗಳ ಕೆಲಸಗಳು ಸಮರ್ಪಕವಾಗಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ಕುಡಿಯುವ ನೀರಿನ ಸರಬರಾಜಿನಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ತಾಲೂಕಿನ ಎಲ್ಲಾ ಇಂಜಿನೀಯರ್ಗಳು, ಸಹಾಯಕ ಇಂಜಿನೀಯರ್ಗಳು ಕ್ಷೇತ್ರಗಳಿಗೆ ಭೇಟಿ ನೀಡಿ ಸರ್ವೇ, ನೀರಿನ ತೆರಿಗೆಯನ್ನು ಸಂಗ್ರಹಿಸುವಂತೆ, ಮತ್ತು ನೀರಿನ ಗುಣಮಟ್ಟವನ್ನು ಪರೀಕ್ಷಿಸಲು ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕು. ನೀರಿನ ಪೈಪ್ ಮತ್ತು ನೀರಿನ ಟ್ಯಾಂಕ್ಗಳನ್ನು ಸ್ವಚ್ಚಗೊಳಿಸಬೇಕು. ಜಿಲ್ಲೆಯಲ್ಲಿ ಮುಂದಿನ...
ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್
Kadamba Karwar News: ಕಾರವಾರ: ಭಾರತವು ತನ್ನ ವೈಭವದ ಇತಿಹಾಸವನ್ನು ಪುನಃ ಬರೆಯಲಿದ್ದು, ಪ್ರಧಾನ ಮಂತ್ರಿಯವರ ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ಭಾರತವು ತನ್ನ ವೈಭವದ ಭೂತಕಾಲ ಮತ್ತು ಇತಿಹಾಸದೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಅಭಿವೃದ್ಧಿಯತ್ತ ನಡೆದಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು. ಅವರು ಬುಧವಾರ ಕಾರವಾರದ ಕದಂಬ ನೌಕಾನೆಲೆಯಲ್ಲಿ ಐಎನ್ಎಸ್ವಿ ಕೌಂಡಿನ್ಯ ಹಡಗು ಲೋಕಾರ್ಪಣೆ ಮಾಡಿ ಮಾತನಾಡಿದರು. ಭಾರತವು ಅದ್ಭುತವಾದ ಇತಿಹಾಸ ಹೊಂದಿದ್ದು, ಸಾವಿರಾರು ವರ್ಷಗಳ ಕಾಲ, ಭಾರತದ ಸಂಪತ್ತು, ಜ್ಞಾನ, ವಿಜ್ಞಾನವು ಅಗಾಧವಾಗಿದ್ದು, ಜ್ಞಾನ ಮತ್ತು ವಿಜ್ಞಾನದ ದೃಷ್ಟಿಕೋನದಿಂದ ಇಡೀ ಜಗತ್ತಿಗೆ ಆಕರ್ಷಣೀಯ ಕೇಂದ್ರವಾಗಿತ್ತು. ಭಾರತವನ್ನು ತಿಳಿದುಕೊಳ್ಳಲು, ಗುರುತಿಸಲು, ನೋಡಲು, ಭಾರತದಿಂದ ಕಲಿಯಲು ವಿಶ್ವದ ಅನೇಕ ಜನರು ಭಾರತಕ್ಕೆ ಬಂದರು. ಸಾವಿರಾರು ವರ್ಷಗಳ ದಾಳಿಗಳು ಮತ್ತು ಪ್ರಯತ್ನಗಳ ಹೊರತಾಗಿಯೂ, ನಮ್ಮ ಶ್ರೇಷ್ಠ ಸಂಸ್ಕೃತಿ ಕೊನೆಗೊಂಡಿಲ್ಲ. ಶಾಶ್ವತವಾಗಿದ್ದ ಆ ಪ್ರಭಾವವನ್ನು ಮುರಿಯಲು, ಆ ಪ್ರಭಾವವನ್ನು ಕೊನೆಗೊಳಿಸಲು, ಸಾಧ್ಯವಾಗಲಿಲ್ಲ ಇದು ನಮ್ಮ ಸಂಸ್ಕೃತಿಯ ಮೇಲೆ...
ಚಿನ್ನದ ಬೆಲೆ ಒಂದೇ ದಿನ ₹2400 ಏರಿಕೆ, ಬೆಳ್ಳಿ ₹3000 ಜಿಗಿತ; ಆಭರಣ ಖರೀದಿದಾರರಿಗೆ ಬಿಗ್ ಶಾಕ್..!
Gold Rate Today: ಇತ್ತೀಚೆಗೆ ಸ್ವಲ್ಪ ಪ್ರಮಾಣದಲ್ಲಿ ಏರಿಳಿತ ಕಾಣುತ್ತಿದ್ದ ಚಿನ್ನದ ಬೆಲೆ ಇಂದು ಬುಧವಾರ ದಿಢಿರ್ ಏರಿಕೆ ಕಂಡಿದ್ದು, ಆಭರಣ ಖರೀದಿದಾರರಿಗೆ ಶಾಕ್ ನೀಡಿದೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ₹2400 ಏರಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಸ್ವಲ್ಪ ಏರಿಳಿತದಿಂದ ಕೂಡಿತ್ತು. ಆದರೆ, ಇಂದು ಬುಧವಾರ ದಿಢೀರ್ ಏರಿಕೆಯಾಗಿದೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ಒಂದೇ ದಿನದಲ್ಲಿ ₹2400 ಏರಿಕೆಯಾಗಿದ್ದು, ಆಭರಣ ಖರೀದಿದಾರರಿಗೆ ಶಾಕ್ ನೀಡಿದೆ. ಬೆಳ್ಳಿ ಬೆಲೆ ಕೂಡ ದುಬಾರಿಯಾಗಿದ್ದು, ಪ್ರತಿ ಕೆಜಿಗೆ ₹3000 ಏರಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಲ್ಲಿ ಇಂದಿನ ಚಿನ್ನದ ಬೆಲೆ..! ಬೆಂಗಳೂರಲ್ಲಿ ನಿನ್ನೆ ಮಂಗಳವಾರ ಬಂಗಾರದ ಬೆಲೆಯಲ್ಲಿ ₹490 ಇಳಿಕೆಯಾಗಿತ್ತು. ಆದರೆ, ಇಂದು ಬುಧವಾರ 22 ಕ್ಯಾರೆಟ್ ಆಭರಣದ ಚಿನ್ನದ ಬೆಲೆಯಲ್ಲಿ ಪ್ರತಿ 10...
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!
Accident News: ಮುಂಡಗೋಡ ತಾಲೂಕಿನ ಶಿರಸಿ ರಸ್ತೆಯ ನಂದಿಪುರ ಬಳಿ VRL ಖಾಸಗಿ ಬಸ್ ಹಾಗೂ KSRTC ಬಸ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ KSRTC ಬಸ್, ಶಿರಸಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಮುಖಾಮುಕಿ ಡಿಕ್ಕಿಯಾಗಿವೆ. ಹೀಗಾಗಿ, ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಓರ್ವ ವೃದ್ದೆಯ ಕೈಗೆ ಗಂಭೀರ ಗಾಯವಾಗಿದೆ ಅನ್ನೊ ಮಾಹಿತಿ ಇದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಾರೀ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು: ಸಂಚಾರಕ್ಕೆ ಅಡಚಣೆ..!
Heavy rain Hill collapses: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಲವು ಅವಾಂತರಳಿಗೆ ಕಾರಣವಾಗುತ್ತಿದೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಗುಡ್ಡ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತಿದ್ದು , ಈ ಹಿಂದೆ ಗುಡ್ಡವನ್ನು ತುಂಡರಿಸಿ ರಸ್ತೆ ಮಾಡಲಾಗಿತ್ತು. ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ರಸ್ತೆ ಬದಿಯಲ್ಲಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಕಲ್ಲು ಮಣ್ಣು ಬಿದ್ದ ಪರಿಣಾಮ, ಕುಮಟಾ-ಶಿರಸಿ ಹೆದ್ದಾರಿಯ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ರಸ್ತೆ ಕಾಮಗಾರಿ ಪ್ರಗತಿಯಲ್ಲಿ ಇರೋದ್ರಿಂದ ಸಂಚಾರ ಕಿರಿಕಿರಿ ಆಗಿದೆ. ರಸ್ತೆ ಮೇಲಿನ ಮಣ್ಣು, ಕಲ್ಲು ತೆರವು ಕಾರ್ಯ ನಡೆದಿದೆ.