Post Scheme News :ಯಾವುದೇ ರಿಸ್ಕ್ ಇಲ್ಲದೆ ನಿಯಮಿತವಾಗಿ ಆದಾಯ ಬಯಸುವವರು ಸಾಮಾನ್ಯವಾಗಿ ನಿಶ್ಚಿತ ಠೇವಣಿ(FD)ಯಲ್ಲಿ ಹೂಡಿಕೆ ಮಾಡುತ್ತಾರೆ. ಆದರೆ, ಅಂಚೆ ಕಚೇರಿಯ ಈ ಯೋಜನೆಗಳು FD ಗಿಂತಲೂ ಹೆಚ್ಚಿನ ಆದಾಯ ನೀಡುತ್ತವೆ. ಪೋಸ್ಟ್ ಆಫೀಸ್ ಟೈಮ್ ಠೇವಣಿ ( Post Office Time Deposit- POTD) ಮೊದಲನೆಯದು ಪೋಸ್ಟ್ ಆಫೀಸ್ ಟೈಮ್ ಠೇವಣಿ (ಟಿಡಿ) ಖಾತೆ, ಇದನ್ನು ನೀವು 1 ರಿಂದ 5 ವರ್ಷಗಳವರೆಗೆ ತೆರೆಯಬಹುದು. ಇದರಲ್ಲಿ, 1 ರಿಂದ 3 ವರ್ಷಗಳ ಅವಧಿಗೆ 6.9% ಬಡ್ಡಿ ಮತ್ತು 5 ವರ್ಷಗಳವರೆಗಿನ ಠೇವಣಿಗೆ 7.5% ವರೆಗೆ ಬಡ್ಡಿ ಲಭ್ಯವಿದೆ. ಇದರ ವಿಶೇಷ ಲಕ್ಷಣವೆಂದರೆ ಇದು ಸಂಪೂರ್ಣವಾಗಿ ಸರ್ಕಾರಿ ಖಾತರಿಯ ಹೂಡಿಕೆಯಾಗಿದ್ದು, ಈ ಕಾರಣದಿಂದಾಗಿ ಇದನ್ನು FD ಗಿಂತ ಉತ್ತಮ ಮತ್ತು ಅಷ್ಟೇ ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ. ಇದನ್ನೂ ಓದಿ👉 ಪಮೋದಿ ಟೀಂ ಇಂಡಿಯಾ ಮಂತ್ರ : ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟವಲ್ಲ..! ಮಾಸಿಕ ಆದಾಯ ಯೋಜನೆ (post...
Top Stories
ಮೋದಿ ಟೀಂ ಇಂಡಿಯಾ ಮಂತ್ರ : ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟವಲ್ಲ..!
ಪಾಕ್ ಉಗ್ರವಾದಕ್ಕೆ 4 ದಶಕದಲ್ಲಿ 20000 ಭಾರತೀಯರು ಬಲಿ!
ಜಪಾನ್ ಹಿಂದಿಕ್ಕಿ ಭಾರತ ಈಗ ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯ ದೇಶ : ನೀತಿ ಆಯೋಗದ ಸಿಇಒ..!
ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ವ್ಯಕ್ತಿ ಸಾವು..!
ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮೊದಲೇ RCB ತಂಡಕ್ಕೆ ಸಂತಸದ ಸುದ್ದಿ ಸಿಕ್ಕಿದೆ..!
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!
ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!
ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..!
ವಾಡಿಕೆಗಿಂತ ಒಂದು ವಾರ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ..!
ದೇಶದಲ್ಲಿ ಮತ್ತೆ ಕೋವಿಡ್ ಆತಂಕ : ರಾಜ್ಯದಲ್ಲಿ 38 ಕೇಸ್, ಬೆಂಗಳೂರಲ್ಲೇ 32 ಸೋಂಕಿತರು..!
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್..!
ಮುಂಡಗೋಡಲ್ಲಿ ಮೊಳಗಿದ ದೇಶ ಭಕ್ತಿಯ ಘೋಷವಾಕ್ಯ..! “ಆಪರೇಷನ್ ಸಿಂಧೂರ” ವೀರ ಸೈನಿಕರಿಗೆ ಗೌರವದ ಬೆಂಬಲ..!
ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ
RCB ಕನಸು ಭಗ್ನಗೊಳಿಸಿದ ಸನ್ ರೈಸರ್ಸ್, ಇನ್ನೇನಿದ್ರೂ ಪಂಜಾಬ್ ಮೇಲೆ ಬೆಂಗಳೂರಿಗರ ಕಣ್ಣು..!
ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!
ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!
ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!
ಮೋದಿ ಟೀಂ ಇಂಡಿಯಾ ಮಂತ್ರ : ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟವಲ್ಲ..!
ನವದೆಹಲಿ: ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಟೀಂ ಇಂಡಿಯಾ ರೀತಿ ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟಕರವಲ್ಲ. ರಾಜ್ಯಗಳು ‘1 ರಾಜ್ಯ, 1 ಅಂತಾರಾಷ್ಟ್ರೀಯ ಪ್ರವಾಸಿ ಸ್ಥಳ’ ಪರಿಕಲ್ಪನೆಯ ಅಡಿ ತಮ್ಮ ರಾಜ್ಯದ ಕನಿಷ್ಠ ಒಂದು ಪ್ರವಾಸಿ ಸ್ಥಳವನ್ನಾದರೂ ಅಂತಾರಾಷ್ಟ್ರೀಯ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು. ರಾಜ್ಯಗಳು ವಿಕಸಿತವಾದಾಗ ದೇಶ ವಿಕಸಿತವಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ಶನಿವಾರ ಮಾತನಾಡಿದರು. ‘2024ರ ವಿಕಸಿತ ಭಾರತಕ್ಕೆ ವಿಕಸಿತ ರಾಜ್ಯ’ ಈ ಬಾರಿಯ ಆಯೋಗದ ಸಭೆಯ ಮುಖ್ಯ ವಿಷಯವಾಗಿತ್ತು. ಇದನ್ನೂ ಓದಿ👉ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..! ರಾಜ್ಯಗಳು ವಿಕಸಿತವಾಗಲಿ..! ‘ದೇಶದಲ್ಲಿ ಅಭಿವೃದ್ಧಿಗೆ ವೇಗ ನೀಡುವ ಅಗತ್ಯವಿದ್ದು, ಈಗಾಗಲೇ ನಾವು ಅದರ ವೇಗ ಹೆಚ್ಚಿಸಿದ್ದೇವೆ. ವಿಕಸಿತ ಭಾರತ ಎಲ್ಲಾ ಭಾರತೀಯರ ಗುರಿ. ಪ್ರತಿ ರಾಜ್ಯವೂ ವಿಕಸಿತವಾದಾಗ ಭಾರತದ ವಿಕಾಸ ಸಾಧ್ಯವಾಗುತ್ತದೆ. ವಿಕಸಿತ ಭಾರತವು 140 ಕೋಟಿ ಭಾರತೀಯರ ಆಕಾಂಕ್ಷೆ’ ಎಂದರು.
ಪಾಕ್ ಉಗ್ರವಾದಕ್ಕೆ 4 ದಶಕದಲ್ಲಿ 20000 ಭಾರತೀಯರು ಬಲಿ!
Pak terror:ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ ನಡೆಸಿದ್ದಾರೆ. ವಿಶ್ವಸಂಸ್ಥೆ: ‘ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ವ್ಯಕ್ತಿ ಸಾವು..! ಶುಕ್ರವಾರ ರಾತ್ರಿ ವಿಶ್ವಸಂಸ್ಥೆಯ ಸಭೆಯೊಂದರಲ್ಲಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಪರ್ವತನೇನಿ ಹರೀಶ್, ‘ಭಾರತವು 65 ವರ್ಷಗಳ ಹಿಂದೆ ಉತ್ತಮ ನಂಬಿಕೆಯಿಂದ ಸಿಂಧು ಜಲ ಒಪ್ಪಂದವನ್ನು ಮಾಡಿಕೊಂಡಿತ್ತು. ಬಳಿಕ ಭಾರತದ ಮೇಲೆ 3 ಯುದ್ಧಗಳು ಮತ್ತು ಸಾವಿರಾರು ಭಯೋತ್ಪಾದಕ ದಾಳಿಗಳನ್ನು ನಡೆಸುವ ಮೂಲಕ ಪಾಕಿಸ್ತಾನ ವಿಶ್ವಾಸದ್ರೋಹ ಎಸಗಿದೆ. ಕಳೆದ...
ಜಪಾನ್ ಹಿಂದಿಕ್ಕಿ ಭಾರತ ಈಗ ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯ ದೇಶ : ನೀತಿ ಆಯೋಗದ ಸಿಇಒ..!
Economy News: ಜಾಗತಿಕ ಆರ್ಥಿಕ ಶ್ರೇಯಾಂಕದಲ್ಲಿ ಭಾರತವು ಒಂದು ಸ್ಥಾನ ಮೇಲೇರಿದೆ. ಭಾರತ ಈಗ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಶನಿವಾರ ಹೇಳಿದ್ದಾರೆ.ದೇಶದ ಜಿಡಿಪಿ $4 ಟ್ರಿಲಿಯನ್ ಗಡಿಯನ್ನು ತಲುಪಿದೆ, ಈಗ ಭಾರತವು ಅಮೆರಿಕ, ಚೀನಾ ಮತ್ತು ಜರ್ಮನಿಗಿಂತ ಹಿಂದಿದೆ. ನೀತಿ ಚಿಂತಕರ ಚಾವಡಿಯ 10 ನೇ ಆಡಳಿತ ಮಂಡಳಿ ಸಭೆಯ ನಂತರ ಮಾತನಾಡಿದ ಸುಬ್ರಹ್ಮಣ್ಯಂ, ದೇಶೀಯ ಸುಧಾರಣೆಗಳ ಸಂಯೋಜನೆ ಮತ್ತು ಭಾರತದ ಪರವಾಗಿ ಹೆಚ್ಚು ಹೆಚ್ಚು ಒಲವು ತೋರುತ್ತಿರುವ ಜಾಗತಿಕ ವಾತಾವರಣವೇ ಈ ಏರಿಕೆಗೆ ಕಾರಣ ಎಂದು ಹೇಳಿದ್ದಾರೆ. “ನಾವು ಈಗ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದ್ದೇವೆ. ನಾವು $4 ಟ್ರಿಲಿಯನ್ ಆರ್ಥಿಕತೆಯನ್ನು ತಲುಪಿದ್ದೇವೆ” ಎಂದು ಅವರು ವರದಿಗಾರರಿಗೆ ತಿಳಿಸಿದರು. “ಅಮೆರಿಕ, ಚೀನಾ ಮತ್ತು ಜರ್ಮನಿ ಮಾತ್ರ ನಮ್ಮ ಮುಂದಿವೆ. ನಾವು ನಮ್ಮ ಹಾದಿಯಲ್ಲಿಯೇ ಮುಂದುವರಿದರೆ, ನಾವು ಕೇವಲ 2.5 ರಿಂದ 3 ವರ್ಷಗಳಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಬಹುದು”...
ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ವ್ಯಕ್ತಿ ಸಾವು..!
Covid Death News:ಬೆಂಗಳೂರಿನಲ್ಲಿ ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ 84 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಅವರ ಕೋವಿಡ್ -19 ಪರೀಕ್ಷೆಯ ಫಲಿತಾಂಶಗಳು ಶನಿವಾರ ಪಾಸಿಟಿವ್ ಬಂದಿವೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮೇ 13 ರಂದು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಅವರು ಮೇ 17 ರಂದು ನಿಧನರಾದರು. ಅವರು ಜೀವಂತವಾಗಿದ್ದಾಗ ಅವರಿಗೆ ನಡೆಸಲಾದ ಕೋವಿಡ್ -19 ಪರೀಕ್ಷೆಯ ಫಲಿತಾಂಶಗಳು ಶನಿವಾರ ಬಂದಿದ್ದು, ಪಾಸಿಟಿವ್ ಎಂದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಿಶ್ಚಿತ ಠೇವಣಿಗಿಂತಲೂ ಹೆಚ್ಚು ಆದಾಯ ನೀಡುವ ಪೋಸ್ಟ್ ಆಫೀಸ್ ಯೋಜನೆಗಳಿವು; ಇಲ್ಲಿದೆ ಪೂರ್ಣ ವಿವರ..! ಆರೋಗ್ಯ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ 32 ಸೇರಿದಂತೆ ರಾಜ್ಯದಲ್ಲಿ 38 ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಕಳೆದ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ. “ಯಾರೂ ಭಯಬೀತರಾಗುವ ಅಗತ್ಯವಿಲ್ಲ, ರಾಜ್ಯ ಸರ್ಕಾರವು ಜಾಗರೂಕವಾಗಿದೆ ಮತ್ತು ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಅಗತ್ಯವಿರುವ...
ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!
Crime News:ದಾಂಡೇಲಿಯ ಅಂಬೆವಾಡಿಯ ರೈಲು ನಿಲ್ದಾಣದ ಹತ್ತಿರ ಬರ್ಚಿ ರಸ್ತೆಯಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಕ್ಕಳು ಸೇರಿ ಒಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬರ್ಚಿ ಮಾರ್ಗವಾಗಿ ದಾಂಡೇಲಿಗೆ ಬರುತ್ತಿದ್ದ ಬೈಕ್ ಸವಾರ ಹಾಗೂ ದಾಂಡೇಲಿಯಿಂದ ಮೌಳಂಗಿ ಕಡೆ ಹೋಗುತ್ತಿದ್ದ ಸ್ಕೂಟಿ ಸವಾರ ಇಬ್ಬರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಕಾರಣ ಬೈಕ್ ನಲ್ಲಿದ್ದ ನಾಲ್ವರಿಗೆ ಸ್ಥಳದಲ್ಲಿ ಗಂಭೀರ ಗಾಯಗಳಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಸಾರ್ವಜನಿಕರು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಇಮ್ತಿಯಾಜ್ ಪಟೇಲ್, ಆಸೀಫ್ ಪಟೇಲ್, ಹಾಗು ಸಿಮ್ರಾನ್ ಪಟೇಲ್ ಗೆ ಧಾರವಾಡಕ್ಕೆ ಕಳಿಸಲಾಗಿದೆ. ಭೀಮರಾವ್ ಕೆಂಭಾವಿ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮೊದಲೇ RCB ತಂಡಕ್ಕೆ ಸಂತಸದ ಸುದ್ದಿ ಸಿಕ್ಕಿದೆ..!
IPL RCB vs LSG Match: ಐಪಿಎಲ್ 18ನೇ ಆವೃತ್ತಿಯಲ್ಲಿ ಈಗಾಗಲೇ ನಾಲ್ಕು ತಂಡಗಳು ಪ್ಲೇಆಫ್ಗೆ ಎಂಟ್ರಿ ಪಡೆದಿರುವುದು ಗೊತ್ತೇ ಇದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ಎರಡು ಲೀಗ್ ಪಂದ್ಯಗಳು ಬಾಕಿ ಇರುವಾಗಲೇ ಪ್ಲೇಆಫ್ಗೆ ಎಂಟ್ರಿ ಪಡೆದುಕೊಂಡಿತ್ತು. ಸದ್ಯ ಇನ್ನೊಂದು ಲೀಗ್ ಪಂದ್ಯ ಬಾಕಿ ಇದೆ. ಇದರ ನಡುವೆಯೇ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ. ಕಳೆದ ಎರಡು ದಿನಗಳ ಹಿಂದೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಹಿಂದಿನ ಪಂದ್ಯದಲ್ಲಿ ಸೋಲನ್ನು ಕಂಡಿದ್ದ ಬೆಂಗಳೂರು ತಂಡ ಕೊನೆಯ ಪಂದ್ಯದಲ್ಲಿ ಮೇ27ರಂದು ಲಕ್ನೋ ಸೂಪರ್ ಜೈಂಟ್ಸ್ (RCB vs LSG) ವಿರುದ್ಧ ಸೆಣಸಲಿದೆ. ಏತನ್ಮಧ್ಯೆ ಈ ಪಂದ್ಯದಲ್ಲಿ ಬೆಂಗಳೂರು ತಂಡ ಉತ್ತಮ ರನ್ ರೇಟ್ನೊಂದಿಗೆ ಗೆಲುವು ಸಾಧಿಸಿದರೇ ಅಗ್ರ ಎರಡು ಸ್ಥಾನಗಳಲ್ಲಿ ಉಳಿಯಬಹುದಾಗಿದೆ. ಇದರೊಂದಿಗೆ ಪ್ಲೇಆಫ್ ಪಂದ್ಯದಲ್ಲಿ ಗೆಲುವು ಸಾಧಿಸಿದರೇ ನೇರವಾಗಿ ಫೈನಲ್ಗೆ ತಲುಪಲಿದೆ. ಒಂದು ವೇಳೆ ಸೋತರು ಎಲಿಮಿನೇಟರ್ ಪಂದ್ಯ ಆಡುವ ಮತ್ತೊಂದು ಅವಕಾಶ ಇರಲಿದೆ. ಇದಕ್ಕಾಗಿ ತಂಡದ ಆಟಗಾರರು...
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!
Crime News Belagavi: ಬೆಳಗಾವಿಯಲ್ಲಿ ಮಲತಂದೆಯಿಂದ ಮೂರು ವರ್ಷದ ಕಂದಮ್ಮನ ಬರ್ಬರ ಹತ್ಯೆ. ಕಟ್ಟಿಗೆಯಿಂದ ಹೊಡೆದು ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ ಪಾಪಿಗಳು. ಎರಡನೇ ಮದುವೆಯಾಗಿ ಬಿಹಾರ್ ದಿಂದ ಕೆಲಸಕ್ಕೆಂದು ಬಂದಿದ್ದ ಮಹಿಳೆಯೊಬ್ಬಳು, ತನ್ನೊಟ್ಟಿಗೆ ಮೂರು ವರ್ಷದ ಮಗ ಕಾರ್ತಿಕ್ ನನ್ನ ಕರೆದುಕೊಂಡು ಬಂದಿದ್ದಳು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿ ಹತ್ತಿ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಮತ್ತು ಎರಡನೇ ಗಂಡ, ಕುಡಿದು ಬಂದು ಹೆಂಡತಿ ಜೊತೆಗೆ ಜಗಳ ಮಾಡಿದ್ದ ಮಹೇಶ್ವರ್ ಮಾಂಜಿ. ಮಗನನ್ನ ಯಾಕೆ ಕರೆದುಕೊಂಡು ಬಂದೀಯಾ ಅಂತಾ ಜಗಳ ಮಾಡಿದ್ದ. ಇದನ್ನೂ ಓದಿ: ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..! ಈತನೊಟ್ಟಿಗೆ ಮೂರು ಜನ ಸೇರಿಕೊಂಡು ಮಹಿಳೆ ಮೇಲೆ ಹಲ್ಲೆಗೆ ಯತ್ನ ಮಾಡಿದ್ದಾರೆ, ಈ ವೇಳೆ ಮಗನನ್ನ ಬಿಟ್ಟು ಓಡಿ ಹೋದ ತಾಯಿ, ಬಳಿಕ ಅಲ್ಲೇ ಇದ್ದ ಕಾರ್ತಿಕ್ ಮೇಲೆ ರಾಕ್ಷಸಿಯ ವರ್ತನೆ ತೋರಿದ ಪಾಪಿಗಳು. ತಲೆಗೆ ಕಟ್ಟಿಗೆಯಿಂದ ಹೊಡೆದು ಬಳಿಕ...
ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!
Karwar Crime News: ಕಾರವಾರ: ಕಾಲು ಜಾರಿ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ,ಕಾರವಾರ ತಾಲೂಕಿನ ಸುಂಕೇರಿ ಬಳಿ ನಡೆದಿದೆ. ಕಡವಾಡ ಗ್ರಾಮದ ಮಾಡಿಭಾಗದ ಸಂತೋಷ ರಾಯ್ಕರ್(35) ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಂಕೇರಿ ಸೇತುವೆ ಬಳಿ ಕಾಲು ಜಾರಿ ಬಿದ್ದಿದ್ದ ಸಂತೋಷ, ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಮತ್ತು ಪೊಲೀಸರಿಂದ ಹುಡುಕಾಟ ಶುರುವಾಗಿದೆ. ರಬ್ಬರ್ ಬೋಟ್ ಸಹಾಯದಿಂದ ನದಿ ಹಿನ್ನೀರಿನಲ್ಲಿ ಹುಡುಕಾಟ, ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..!
Kodi Shri Astrology: ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದ್ದು, ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ 5 ವರ್ಷ ಕಾಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಕೋವಿಡ್ ಕುರಿತು ಮಾತನಾಡಿದ ಅವರು, ಜನರು ಹುಷಾರಾಗಿರೋದು ಒಳ್ಳೇಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ 5 ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸ ನರಮನೆಗೆ ಕಾರ್ಮೋಡ ಕವಿದಿತ್ತು ಎಂದು ನುಡಿದಿದ್ದಾರೆ. ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದ್ದು, ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿ ನಂತರ ಎನಾಗುತ್ತೆ ನೋಡಬೇಕು ಎಂದು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ.