ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ವಿಧಿವಶರಾದ ಹಿನ್ನೆಲೆಯಲ್ಲಿ ರಾಜ್ಯಾಧ್ಯಂತ ಇಂದು ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ, ಶುಕ್ರವಾರ ರಾಜ್ಯದ ಶಾಲಾ ಕಾಲೇಜುಗಳು ಸೇರಿ ಸರ್ಕಾರಿ ಕಚೇರಿಗಳು ತೆರೆದಿರುವುದಿಲ್ಲ ಅಂತಾ ಸರ್ಕಾರ ಆದೇಶ ಹೊರಡಿಸಿದೆ.
Top Stories
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿರೋ ಅವ್ರು ಭಾರತದ 13 ನೇಯ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಪಂಜಾಬಿನ ಗಾಹ್ ನಲ್ಲಿ ಜನಿಸಿದ್ದ ಮನಮೋಹನ್ ಸಿಂಗ್, 2004 ರಿಂದ 2014 ರವರೆಗೆ ಹತ್ತು ವರ್ಷಗಳ ಕಾಲ್ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬೆಳಗಾವಿ ನಾಳಿನ ಕಾರ್ಯಕ್ರಮ ರದ್ದು..! ಇನ್ನು ಬೆಳಗಾವಿಯಲ್ಲಿ ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ರದ್ದು ಮಾಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ. ಇನ್ನು, ಬೆಳಗಾವಿಯಲ್ಲಿರೋ AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ಮುಖಂಡರು ದೆಹಲಿಯತ್ತ ಪ್ರಯಾಣ ಬೆಳಸಿದ್ದಾರೆ.
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆಯಬಾರದ ಭಾರಿ ಘಟನೆಯೊಂದು ನಡೆದುಹೋಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ ಪಾಪಿಗಳು. ಇಡೀ ಗ್ರಾಮವೇ ಈ ಘಟನೆಯಿಂದ ಅಕ್ಷರಶಃ ಥರಗುಟ್ಟಿ ಹೋಗಿದೆ. ಪ್ರಕಾಶ ಓಲೇಕಾರ (48) ಹತ್ಯೆಯಾದ ದುರ್ದೈವಿಯಾಗಿದ್ದಾನೆ. ಬೇರೆಯವರ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ, ಬಸವರಾಜನ ಮನೆಗೆ ಹೋದಾಗ ಹತ್ತಕ್ಕೂ ಅಧಿಕ ಜನರಿಂದ ಹತ್ಯೆ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ, ಗಾಯಾಳುಗಳಿಗೆ ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ಹುಬ್ಬಳ್ಳಿಯಲ್ಲಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿ 9 ಜನ ಗಂಭೀರವಾಗಿದ್ದ ಪ್ರಕರಣದಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಾಲಾಧಾರಿಗಳು ಸಾವು ಕಂಡಿದ್ದಾರೆ. ನಿಜನಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ ಪ್ರಕಾಶ್ ಸವದತ್ತಿ (17) ಸಾವು ಕಂಡಿರೋ ಅಯ್ಯಪ್ಪ ಮಾಲಾಧಾರಿಗಳು. ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್ ಸೋರಿಕೆ ಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಒಟ್ಟೂ ಒಂಬತ್ತು ಜನ ಅಯ್ಯಪ್ಪ ಮಾಲಾಧಾರಿಗಳಿಗೆ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು..
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಶಿಗ್ಗಾವಿ ತಾಲೂಕಿನ ತಡಸ ಕ್ರಾಸ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರುಗಳ ನಡುವೆ ನಡೆದ ಮುಖಾಮುಕಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ನಾಲ್ವರು ಭಯಾನಕ ಸಾವು ಕಂಡಿದ್ದಾರೆ. ಹಾವೇರಿ-ಧಾರವಾಡ ಗಡಿಯ ಸಮೀಪ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಮಹೀಂದ್ರಾ ಎಕ್ಸ್‌ಯುವಿ 700 ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಕ್ರೋಜ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕೆಂಪು ವಾಹನದಲ್ಲಿ 10-12 ವರ್ಷದ ಒಂದು ಮಗು ಸೇರಿದಂತೆ 4 ಜನರಿದ್ದರು, ಅವರೆಲ್ಲರೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 2 ಜನರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತ ಪಟ್ಟವರು ಚಂದ್ರಮ್ಮ( 59) , ಬೆಂಗಳೂರಿನ ಚಾಮರಾಜಪೇಟೆಯವರು, ಮೀನಾ(38) (ಮೃತ ಚಂದ್ರಮ್ಮ ಅವರ ಪುತ್ರಿ) ( ದಾವಣಗೆರೆ ಜಿಲ್ಲೆ ಹರಿಹರ ಮೂಲದವರು), ಮಹೇಶ್ ಕುಮಾರ್ ಸಿ (41) (ದಾವಣಗೆರೆ ಜಿಲ್ಲೆ ಹರಿಹರದವರು) (ಕಾರು ಚಾಲಕ ಹಾಗೂ ಮಾಲೀಕ), ಧನವೀರ್(11) (ದಾವಣಗೆರೆ ಜಿಲ್ಲೆ...
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ಮುಂಡಗೋಡ: ತಾಲೂಕಿನ ಬೆಡಸಗಾಂವ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ ಮುಗಿದಿದೆ. ಇನ್ನೇನು ಚುನಾವಣೆಯ ಮತ ಎಣಿಕೆ ಕಾರ್ಯ ಮಾತ್ರ ಬಾಕಿ ಉಳಿದಿದೆ. ಹೀಗಿರೋವಾಗಲೇ ಧಾರವಾಡ ಹೈಕೋರ್ಟ್ ಪೀಠ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ತಡೆಯಾಜ್ಞೆ ನೀಡಿದೆ. ಏನಾಯ್ತು..? ಅಂದಹಾಗೆ, ಈಗ ತಾಲೂಕಿನೆಲ್ಲೆಡೆ ವ್ಯವಸಾಯ ಸೇವಾ ಸಹಕಾರಿ ಸಂಘಗಳ ಚುನಾವಣೆ ನಡೀತಿದೆ. ಇಡೀ ತಾಲೂಕಿನಲ್ಲಿ ಈ ಚುನಾವಣೆ ಅನ್ನೋದು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ಈ ಕಾರಣಕ್ಕಾಗಿ, ಹೇಗಾದ್ರೂ ಸರಿ ಅಧಿಕಾರದ ಚುಕ್ಕಾಣಿ ನಮ್ಮ ಸುಪರ್ದಿಯಲ್ಲೇ ಇರಬೇಕು ಅಂತ ಎರಡೂ ರಾಜಕೀಯ ಪಕ್ಷಗಳು ಮುಗಿಬಿದ್ದಿವೆ. ಹೀಗಾಗಿ, ಬೆಡಸಗಾಂವ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ ಮಂಗಳವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ವರೆಗೂ ನಡೆಯಿತು. ನಂತರ ಮತ ಎಣಿಕೆ ಕಾರ್ಯವನ್ನು ನಡೆಸಬೇಕಿತ್ತು. ಆದರೆ ಮತದಾನದ ಅನರ್ಹತೆಯಾದಿಯಲ್ಲಿನ ರೈತರು ಹಾಗೂ ಸಂಘದ ಸದಸ್ಯರು ಒಟ್ಟು ಹತ್ತೊಂಬತ್ತು ಜನರು ನಮಗೆ ಮತದಾನದ ಹಕ್ಕು ಬೇಕು ಎಂದು ಧಾರವಾಡ ಹೈಕೋರ್ಟ...
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!
ಮುಂಡಗೋಡ ತಾಲೂಕಿನ ಶಿಂಗನಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಅಡಿಕೆ ಕಳ್ಳರು ಕರಾಮತ್ತು ತೋರಿಸಿದ್ದಾರೆ. ಮನೆಯ ಅಂಗಳದಲ್ಲಿ ರಾಶಿ ಮಾಡಿದ್ದ ಸುಮಾರು 8 ಕ್ವಿಂಟಾಲ್ ಅಡಿಕೆಯನ್ನು ಅನಾಮತ್ತಾಗಿ ಕದ್ದೊಯ್ದಿದ್ದಾರೆ. ಹಾಗೆ ಕದ್ದು ಒಯ್ದಿರೋ ಅಡಿಕೆಯ ಅಂದಾಜು ಮೌಲ್ಯ ಏನಿಲ್ಲವೆಂದ್ರೂ ಮೂರೂವರೇ ಲಕ್ಷಕ್ಕೂ ಹೆಚ್ಚು. ಹೀಗಾಗಿ , ಈ ಭಾಗದ ಜನ ಕಂಗಾಲಾಗಿದ್ದಾರೆ. ಅಂದಹಾಗೆ, ಸಿಂಗನಳ್ಳಿಯ ರೈತ ಪ್ರಭು ಪಾಟೀಲ್ ಎಂಬುವವರ ಅಡಿಕೆ ಕಳ್ಳತನವಾಗಿದೆ. ಇವರ ಮನೆ ಪಕ್ಕದಲ್ಲೇ ಕಣ ಮಾಡಿ ಅಡಿಕೆ ಒಣಗಲು ಇಡಲಾಗಿತ್ತು. ಇದನ್ನು ಗಮನಿಸಿರೋ ಅಡಿಕೆ ಕಳ್ಳರು ರಸ್ತೆ ಪಕ್ಕದಲ್ಲೇ ವಾಹನ ನಿಲ್ಲಿಸಿ ಅಡಿಕೆ ಕದ್ದೊಯ್ದಿದ್ದಾರೆ. ಖಾಲಿ ಚೀಲಗಳನ್ನು ಅಲ್ಲೇ ಬಿಟ್ಟು ಹೋಗಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!
ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಮನೆ ಕಳ್ಳತನವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಎರಡು ಮನೆಗಳಿಗೆ ಕಳ್ಳರು ನುಗ್ಗಿದ್ದು ಒಂದು ಮನೆಯಿಂದ 25 ಸಾವಿರ ನಗದು ಹಾಗೂ ಅರ್ದ ತೊಲೆ ಚಿನ್ನ ಎಗರಿಸಿಕೊಂಡು ಹೋಗಿದ್ದಾರೆ. ಮತ್ತೊಂದು ಮನೆಯ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಅಂದಹಾಗೆ, ಹುನಗುಂದದ ದೇವಕ್ಕ ಹನ್ಮಂತಪ್ಪ ವಡ್ಡರ ಎಂಬುವವರ ಮನೆಗೆ ನುಗ್ಗಿರೋ ಕಳ್ಳರು 25ಸಾವಿರ ಹಣ, ಹಾಗೂ ಅರ್ಧ ತೊಲೆ ಚಿನ್ನ ಕದ್ದೊಯ್ದಿದ್ದಾರೆ. ಹಾಗೆಯೇ, ಅದೇ ಮನೆಯ ಹತ್ತಿರದ ಹಸನ್ ಸಾಬ್ ನಬಿಸಾಬ್ ಮೊರಬ ಎಂಬುವವರ ಮನೆಗೆ ನಿಗ್ಗಿರೋ ಕಳ್ಳರು, ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಠಕ್ಕರ್ ಕೊಟ್ಟ ಕಾಂಗ್ರೆಸ್, ಹಲವು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಮುಂಡಗೋಡ ತಾಲೂಕಿನ ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಕಾಂಗ್ರೆಸ್ ಠಕ್ಕರ್ ಕೊಟ್ಟಿದೆ. ಚಿಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ನಿಂದ “ಅಪರೇಶನ್ ಹಸ್ತ” ನಡೆದು ಹೋಗಿದೆ ಪರಿಣಾಮ ಹಲವು ಬಿಜೆಪಿಗರು ಅನಾಯಾಸವಾಗಿ “ಕೈ” ವಶವಾಗಿದ್ದಾರೆ. ಚಿಗಳ್ಳಿಯ ಸಹಕಾರಿ ಧುರೀಣ, ಬಿಜೆಪಿ ಮುಖಂಡ ಅಶೋಕ ಶಿರ್ಮಾಪುರ, ಮಹಾದೇವ ಬಯಲವಾಡ, ಚಂದ್ರು ಅಜ್ಜಳ್ಳಿ, ಸಂಪತ್ ಕೆಮೋಜ್ಜಿ, ರಾಮಚಂದ್ರ ನಿಂಬಾಯಿ, ನಾಮದೇವ ಜಾಧವ, ನಾಗಣ್ಣ ಹಂಚಿನಮನಿ, ಬಾಬುರಾಯ್ ಆಲದಕಟ್ಟಿ ಸೇರಿದಂತೆ ಹಲವರು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಹಾಗೂ ಯುವ ನಾಯಕರು, ಕೆ.ಪಿ.ಸಿ.ಸಿ ಸದಸ್ಯ ವಿವೇಕ್ ಹೆಬ್ಬಾರ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡ ಮುಖಂಡರು ಅಚ್ಚರಿ ಮೂಡಿಸಿದ್ದಾರೆ. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ನಿಕಟಪೂರ್ವ ಅಧ್ಯಕ್ಷ ಜ್ಞಾನೇಶ್ವರ ಗುಡಿಹಾಳ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕಾಧ್ಯಕ್ಷ ರಾಜಶೇಖರ ಹಿರೇಮಠ, ಪ್ರಮುಖರಾದ ಎಚ್.ಎಮ್.ನಾಯ್ಕ, ರವಿಗೌಡ ಪಾಟೀಲ್, ಎಮ್.ಪಿ.ಕುಸೂರ, ಗುಡ್ಡಪ್ಪ ಕಾತೂರ, ನಾಗಭೂಷಣ ಹಾವಣಗಿ ಸೇರಿದಂತೆ...
ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!
ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅಕ್ಷರಶಃ ಸಂಭ್ರಮಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಇನ್ನೇನು ಬಿಜೆಪಿಯಿಂದ ಉಚ್ಚಾಟನೆಯೋ ಅಥವಾ ಇನ್ಯಾವುದೋ ಕಠಿಣ ಕ್ರಮದ ಮಾತು ಹೊರಬಿದ್ದ ಗಳಿಗೆಯಿಂದ ಹೆಬ್ಬಾರ್ ಪಡಸಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಯಾಕಂದ್ರೆ, ಇಲ್ಲಿ ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು, ಎರಡೂ ಒಂದೇಯಾಗುವ ಸಮಯ ಬಹುತೇಕ ಹತ್ತಿರವಾಗಿದೆ ಅಂತಲೇ ಹೆಬ್ಬಾರ್ ಬಳಗದಲ್ಲಿ ಚರ್ಚೆಯಾಗ್ತಿದೆ. STS ಹಾಗೂ ಹೆಬ್ಬಾರ್ ಮೇಲೆ ಕ್ರಮ..! ಅಸಲು, ವಿಜಯಪುರ ಶಾಸಕ, ಬಿಜೆಪಿಯ ಫೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಎಸ್ ವೈ ಬಣದ ನಡುವೆ ಠಫ್ ವಾರ್ ನಡೀತಿದೆ. ಹೀಗಾಗಿ, ರಾಜ್ಯದ ಬಿಜೆಪಿ ಸದ್ಯ ಬೀದಿ ರಂಪಾಟ, ಹಾದಿ ರಂಪಾಟದಲ್ಲಿ ಬಸವಳಿದಿದೆ. ಇದೇ ಹೊತ್ತಲ್ಲಿ, ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ಮುಖಂಡರು ಹೈಕಮಾಂಡ್ ಬಾಗಿಲು ತಟ್ಟಿದ್ದಾರೆ. ಜೊತೆಗೆ, ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ವಿರುದ್ಧವೂ ಕ್ರಮವಾಗಲಿ ಅಂತಾ ಹೈಕಮಾಂಡಿಗೆ ಮನವಿ ಮಾಡಿದ್ದಾರೆ. ಅಲ್ರಿ ಇದು ಯಾವ ಲೆಕ್ಕ..? ಅಸಲು,...