ಕಾರವಾರ: ಮಾರ್ಚ್ 22 ರಿಂದ ಆರಂಭವಾಗ್ತಿರೋ IPL ಕ್ರಿಕೆಟ್ ಟೂರ್ನಿಗಾಗಿ ಇಡೀ ದೇಶವೇ ಕಾದು ಕುಳಿತಿದೆ. ಅದ್ರ ಜೊತೆ ಅಕ್ರಮಿಗಳು ಇದೇ ಒಂದು ಹಬ್ಬ ಅಂತ ಅನಕೊಂಡು ಕ್ರಿಕೆಟ್ ಬೆಟ್ಟಿಂಗ್ ದಂಧೆಗೂ ರೆಡಿಯಾಗ್ತಿದಾರೆ ಅನ್ನೊ ಅನುಮಾನವಿದೆ. ಹೀಗಾಗಿ, ಐಪಿಎಲ್ ಟೂರ್ನಿಯುದ್ದಕ್ಕೂ ಮನರಂಜನೆಗಿಂತ ಬೆಟ್ಟಿಂಗ್ ದಂಧೆಯೇ ಬಲು ಜೋರಾಗಿದ್ದು ಯುವಕರು ಜೀವನಕ್ಕೆ ಮಾರಕವಾಗೋ ಸಾಧ್ಯತೆ ಇದೆ. ಹೀಗಾಗಿ, ಉತ್ತರ ಕನ್ನಡ ಖಡಕ್ ಎಸ್ಪಿ ಎಂ ನಾರಾಯಣ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಟ್ಟಿಂಗ್ ಭೂತದಿಂದ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಎದುರಾಗುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ದಂಧೆಗೆ ಕಡಿವಾಣ ಹಾಕಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರಂತೆ. ಐಪಿಎಲ್ ಬಂತೆಂದರೆ ಸಾಕು 2 ತಿಂಗಳ ಕಾಲ ಯುವಕರು ಫುಲ್ ಬ್ಯುಸಿ. ಹಳ್ಳಿ ಹಳ್ಳಿಗಳಲ್ಲೂ ಬೆಟ್ಟಿಂಗ್ದೇ ಮಾತು. ಬೆಟ್ಟಿಂಗ್ ದಂಧೆಗೆ ಬಲಿಯಾಗಿ ಯುವಕರು ತಮ್ಮ ಹಣ ಮಾತ್ರವಲ್ಲ ಭವಿಷ್ಯವನ್ನೇ ಕಳೆದುಕೊಳ್ತಿದ್ದಾರೆ. ಕೋಟ್ಯಂತರ ರೂಪಾಯಿ ಹಣದ ವ್ಯವಹಾರ ನಡೆಯುವ ಈ ಬೆಟ್ಟಿಂಗ್ ದಂಧೆಗೆ ಕಡಿವಾಣ...
Top Stories
Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!
Road Problem News:ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ..!
ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ
ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್
ಚಿನ್ನದ ಬೆಲೆ ಒಂದೇ ದಿನ ₹2400 ಏರಿಕೆ, ಬೆಳ್ಳಿ ₹3000 ಜಿಗಿತ; ಆಭರಣ ಖರೀದಿದಾರರಿಗೆ ಬಿಗ್ ಶಾಕ್..!
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!
ಭಾರೀ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು: ಸಂಚಾರಕ್ಕೆ ಅಡಚಣೆ..!
ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!
ಸೆನ್ಸೆಕ್ಸ್ 873 ಪಾಯಿಂಟ್ಸ್ ಕುಸಿತ: ಮಂಗಳವಾರ ಷೇರು ಮಾರುಕಟ್ಟೆ ಕರೆಕ್ಷನ್ಗೆ 5 ಕಾರಣಗಳು!
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!
ಚಿನ್ನದ ರೇಟು ದಿಢೀರ್ ₹490 ಇಳಿಕೆ, ಬೆಳ್ಳಿ ಬೆಲೆಯೂ ₹1000 ಕುಸಿತ; ಇವತ್ತು 10 ಗ್ರಾಂ ಬಂಗಾರದ ಬೆಲೆ ಎಷ್ಟು..?
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!
ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ
ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!
ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ..! ಗದ್ದಾರ್ ಗಳು ಅಂದ್ರೆ ಇವ್ರೇ ಅಲ್ವಾ..?
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಈ ಸುದ್ದಿ ಬರೆಯುವ ಮುನ್ನ.. ನನ್ನ ಮುಂಡಗೋಡ ತಾಲೂಕಿನ ಪ್ರಾಮಾಣಿಕ ಶಿಕ್ಷಕ ವೃಂದಕ್ಕೆ ನಾನು ತಲೆ ಬಾಗಿ ನಮನ ಸಲ್ಲಿಸ್ತಿನಿ. ಇಡೀ ಶಿಕ್ಷಕ ಸಮುದಾಯದ ಬಗೆಗೆ ನನ್ನ ಹೃದಯದಲ್ಲಿ ಬಹು ಉನ್ನತ ಸ್ಥಾನ ಇದೆ. ಹೆಮ್ಮೆ ಇದೆ. ಹೀಗಾಗಿ, ಬಹುತೇಕ ಪ್ರಾಮಾಣಿಕ ಶಿಕ್ಷಕ ದೇವರುಗಳ ಪಾದಕ್ಕೆ ಶಿರ ಸಾಸ್ಟಾಂಗ ನಮನಗಳನ್ನು ಅರ್ಪಿಸಿ, ನಿಮ್ಮೊಳಗೇ ಮೆರೆದಾಡುವ ಕೆಲ ಕೂಟದ ವಿರುದ್ಧ ಸಮರ ಸಾರಬೇಕಿರೋದು ಸದ್ಯದ ಅವಶ್ಯಕತೆ. ಹಾಗಂತ, ತಾವೇ ಬಹುತೇಕರು ನನಗೆ ನೂರಾರು ಫೋನ್ ಕರೆ ಮಾಡಿ ತಮ್ಮೊಳಗಿನ ಆಕ್ರೋಶ, ನೋವು, ಸಂಕಟ ಹೇಳಿಕೊಂಡಿದ್ದಿರಿ… ಹೀಗಾಗಿ ಇಲ್ಲಿ ಪಬ್ಲಿಕ್ ಫಸ್ಟ್ ತಮ್ಮ ದನಿಯಾಗಲು ರೆಡಿಯಾಗಿದೆ ಅಷ್ಟೆ..! ಪವಿತ್ರ ಶಿಕ್ಷಕ ವೃತ್ತಿಯ ಹೆಸರಲ್ಲಿನ ಕೆಲವರ ಅಟ್ಟಹಾಸಗಳಿಗೆ ಕೊನೆ ಹಾಡಬೇಕಿದೆ..! ಜೊತೆಯಾಗಿರಿ ಅಷ್ಟೆ..! ಈಗ ವಿಷಯಕ್ಕೆ ಬರೋಣ..! ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..? ಮುಂಡಗೋಡಿನಲ್ಲಿ ಮಂಗಳವಾರ ನಡೆದ ಖಾಸಗಿ ಗೋಲ್ಡ್ ಲೋನ್ ಫೈನಾನ್ಸ್...
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಕಾರವಾರ: ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ 125 ಸರಕಾರಿ, 150 ಅನುದಾನಿತ, 92 ಅನುದಾನ ರಹಿತ, 25 ವಸತಿ ಶಾಲೆಗಳ ಒಟ್ಟು 20035 ವಿದ್ಯಾರ್ಥಿಗಳು ಪರೀಕ್ಷೆಗಳು ಹಾಜರಾಗಲಿದ್ದು, ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ ಎಂದರು. CCTV ಕಣ್ಗಾವಲು..! ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಿದ್ದು, ರಾಜ್ಯ ಮತ್ತು ಜಿಲ್ಲಾ ಹಂತಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು. ಎಲ್ಲಾ ಸಿಸಿಟಿವಿಗಳ ವೆಬ್ ಕಾಸ್ಟಿಂಗ್ನ್ನು ಡ್ರೈರನ್ ಮಾಡಲಾಗಿದ್ದು, ಜಿಲ್ಲಾ ಪಂಚಾಯತ್ ನಲ್ಲಿ ಇದಕ್ಕಾಗಿ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಪ್ರಶ್ನೆಪತ್ರಿಕೆಗಳನ್ನು ಸ್ವೀಕರಿಸಿದ್ದು, ತಾಲೂಕು ಖಜಾನೆಗಳಲ್ಲಿ ಪೊಲೀಸ್ ಭದ್ರತೆಯಲ್ಲಿ...
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಮುಂಡಗೋಡ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ, ಖಾಸಗಿ ಫೈನಾನ್ಸ್ ಶಾಖೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮುಂಡಗೋಡ ಬಿಇಓ ಸುಮಾ ಜಿ. ಯವರು ಮಾಹಿತಿ ನೀಡಿದ್ದಾರೆ. ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಇಲಾಖೆಯ ಅಧಿಕಾರಿಗಳು, ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಮೂರು ದಿನಗಳ ಒಳಗಾಗಿ ಸೂಕ್ತ ಕಾರಣ ನೀಡಿ ಉತ್ತರಿಸುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಅಂದಹಾಗೆ, ಸರ್ಕಾರಿ ಸೇವೆಯಲ್ಲಿರೋ ಅಧಿಕಾರಿಗಳು ತಮ್ಮ ಕರ್ತವ್ಯದ ಸಂರ್ಭದಲ್ಲಿ ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುಂತಿಲ್ಲ, ಹಾಗೊಂದು ವೇಳೆ ಭಾಗವಹಿಸುವ ಅನಿವಾರ್ಯತೆ ಇದ್ರೆ ರಜೆ ಪಡೆದು ಭಾಗವಹಿಸಬಹುದು ಅಂತಾ ಬಿಇಓ ಸುಮಾ ಜಿ. ಮೇಡಂ ತಿಳಿಸಿದ್ದಾರೆ.
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್ ಆಗಿದ್ದಾರೆ. ಬೇಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಆಕ್ಟಿವ್ ಆಗಿದ್ದ ಕಳ್ಳಿಯರ ಖರ್ತನಾಕ್ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಬೆಳಗಾವಿ ಮಾರ್ಕೆಟ್ ಎಸಿಪಿ ಸಂತೋಷ ಸತ್ಯನಾಯಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮೂವರು ಖರ್ತನಾಕ್ ಕಳ್ಳಿಯರ ಅರೇಸ್ಟ್ ಆಗಿದ್ದಾರೆ. ಬೆಳಗಾವಿ ನಗರದ ವಡ್ಡರವಾಡಿಯ ನಿವಾಸಿಗಳಾದ ಅನೀತಾ ಚೌಗಲೆ 58, ನಿಶಾ ಲೊಂಡೆ 25, ಗಿಡ್ಡಿ ಲೊಂಡೆ 35 ಅರೇಸ್ಟ್ ಆದ ಆರೋಪಿಗಳು. ಆರೋಪಿಗಳಿಂದ 12 ಲಕ್ಷ 70 ಸಾವಿರ ಮೌಲ್ಯದ 143 ಗ್ರಾಂ ಚಿನ್ನದ ಒಡವೆ ಜಪ್ತಿ ಮಾಡಲಾಗಿದೆ. ಹುಬ್ಬಳ್ಳಿ ಮೂಲದ ಕಾಂಚನ್ ಗೌಡರ ಎಂಬುವರ ಚಿನ್ನ ಕಳ್ಳತನ ಆಗಿತ್ತು. ಈ ಬಗ್ಗೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕಾಂಚನಾ ದೂರು ನೀಡಿದ್ದರು. ಕೇಸ್ ದಾಖಲಿಸಿಕೊಂಡ ಮಾರ್ಕೆಟ್ ಪೊಲೀಸರು ಕಳ್ಳಿಯರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಹೊರಗಡೆ ಇಸ್ಪೀಟ್ ಆಡೋರನ್ನ ಹಿಡಿಯೋ ಪೋಲೀಸರು ಖುದ್ದು ತಾವೇ, ಅದೂ ಪೊಲೀಸ್ ಠಾಣೆಯಲ್ಲೇ ಜೂಜಾಟ ಆಡಿರೋ ವಿಡಿಯೋ ಇದೀಗ ಕಲಬುರಗಿಯಲ್ಲಿ ಸಕತ್ ವೈರಲ್ ಆಗಿದೆ. ಚಿತ್ತಾಪುರ ತಾಲೂಕಿನ ವಾಡಿ ಪೋಲೀಸ್ ಠಾಣೆಯಲ್ಲಿ ಈ ಪ್ರಸಂಗ ನಡೆದಿದ್ದು ಬೆಳಕಿಗೆ ಬಂದಿದೆ. ವಿಷ್ಯ ಬಟಾ ಬಯಲಾಗ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಜೂಜಾಟ ನಡೆಸಿದ್ದ ASI ಮೆಹಮೂದ್ ಮಿಯಾ, ಮುಖ್ಯ ಪೇದೆಗಳಾದ ನಾಗರಾಜ್ ಸಾಯಿಬಣ್ಣಾ ಇಮಾಮ್, ಮತ್ತು ಪೇದೆ ನಾಗಭೂಷಣ್ ಸೇರಿ ಒಟ್ಟು ಐವರನ್ನ ಸಸ್ಪೆಂಡ್ ಮಾಡಿದ್ದಾರೆ. ಅಷ್ಟೇಅಲ್ಲ PSI ತಿರುಮಲೇಶಗೂ ಕಾರಣ ಕೇಳಿ ನೋಟಿಸ್ ಜಾರಿಮಾಡಿದ್ದಾರೆ.
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಕಾರವಾರ: ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮ (ಪಿಎಂಎಫ್ಎಂಇ) ಯೋಜನೆಯು ಉತ್ತಮ ಯೋಜನೆಯಾಗಿದ್ದು, ಈ ಯೋಜನೆಯ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಮೂಲಕ ಯೋಜನೆಯ ಸೌಲಭ್ಯ ಪಡೆಯಲು ಹೆಚ್ಚಿನ ಅರ್ಜಿಗಳನ್ನು ಸಲ್ಲಿಸಲು ಜನರಿಗೆ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ನಿರ್ದೇಶನ ನೀಡಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಗ್ರಣಿ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಬ್ಯಾಂಕ್ಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪಿಎಂಎಫ್ಎಂಇ ಯೋಜನೆಯಡಿ ಸೌಲಭ್ಯ ಪಡೆಯಲು ಕಡಿಮೆ ಪ್ರಮಾಣ ಅರ್ಜಿಗಳು ಬ್ಯಾಂಕ್ಗಳಿಗೆ ಸಲ್ಲಿಕೆಯಾಗಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಜನರಿಗೆ ಜಾಗೃತಿ ಮೂಡಿಸಬೇಕು. ಯೋಜನೆಯಡಿ ಕೇಂದ್ರ ಸರ್ಕಾರದಿಂದ ಶೇ. 35 ಮತ್ತು ರಾಜ್ಯ ಸರ್ಕಾರದಿಂದ ಶೇ.15 ಸೇರಿದಂತೆ ಶೇ.50 ರಷ್ಟು ಸಬ್ಸಿಡಿ ಸೌಲಭ್ಯವಿದ್ದು, ಇದರ ಪ್ರಯೋಜನವನ್ನು ಜಿಲ್ಲೆಯ ಜನತೆ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಜಾಗೃತಿ ಮೂಡಿಸುವಂತೆ ತಿಳಿಸಿದರು....
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಕಾರವಾರ: ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವದ ಯಶಸ್ವಿಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕೂಡಲೇ ಸಭೆಗಳನ್ನು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ , ವಿಡೀಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಸಮಿತಿಯ ಸಭೆಗಳನ್ನು ನಡೆಸಿ, ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಯಾವುದೇ ಸಮಿತಿಗೆ ಹಣಕಾಸಿನ ಅಗತ್ಯವಿದ್ದಲ್ಲಿ ಈ ಬಗ್ಗೆ ಅಂದಾಜು ಪಟ್ಟಿಯನ್ನು ಸಿದ್ದಪಡಿಸಿ ಕೂಡಲೇ ಸಲ್ಲಿಸುವಂತೆ ಸೂಚಿಸಿದರು. ಕದಂಬ ಜ್ಯೋತಿ ಹೊರಡುವ ದಿನದಂದು ವಿವಿಧ ಕಲಾತಂಡಗಳಿಂದ ಆಕರ್ಷಕ ಮೆರವಣಿಗೆಯನ್ನು ಆಯೋಜಿಸಬೇಕು ಅಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದರು. ಕದಂಬೋತ್ಸವದ ಅಂಗವಾಗಿ ನಡೆಯುವ ಕ್ರೀಡಾ ಸ್ಪರ್ಧೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಸೂಚಿಸಿದ ಅವರು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಕಲಾವಿದರಿಂದ ಅರ್ಜಿ ಸ್ವೀಕಾರ ಮಾಡುವ ಕೊನೆಯ ದಿನಾಂಕವನ್ನು ಪ್ರಕಟಿಸಿ,...
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
ಕಾರವಾರ: ಮಾರ್ಚ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ವಿತರಿಸಲಾಗುವ ಪಡಿತರ ಅಕ್ಕಿಯ ದುರುಪಯೋಗವಾಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಡಿತರ ಚೀಟಿದಾರರಿಗೆ ವಿತರಿಸಿದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಅನಧಿಕೃತವಾಗಿ ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅಕ್ಕಿ ವಿತರಣೆ ಕುರಿತಂತೆ ಪಡಿತರ ಅಂಗಡಿಗಳಲ್ಲಿ ಪ್ರತಿದಿನದ ವಿತರಣೆಯ ವಿವರ ಮತ್ತು ದಾಸ್ತಾನು ವಿವರಗಳನ್ನು ಪರಿಶೀಲಿಸಬೇಕು, ಪಡಿತರ ವಿತರಣೆಯ ತಂತ್ರಾಂಶ ಕಾರ್ಯನಿರ್ವಹಣೆಗೆ ಇಂರ್ಟನೆಟ್ ಸಮಸ್ಯೆಯಿದಲ್ಲಿ ಬಿ.ಎಸ್.ಎನ್.ಎಲ್ ಮೂಲಕ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗಡಿಬಾಗದಲ್ಲಿ ಅನಧಿಕೃವಾಗಿ ಅಕ್ಕಿಯ ಮಾರಾಟ ಮತ್ತು ಸಾಗಾಟದ ಬಗ್ಗೆ ನಿಗಾ ವಹಿಸಬೇಕು ಎಂದರು. ಜಿಲ್ಲೆಯಲ್ಲಿ ಪಡಿತರ ಚೀಟಿಯ ಕೆವೈಸಿ ಯಲ್ಲಿ ಶೇ.97 ರಷ್ಟು ಪ್ರಗತಿಯಾಗಿದ್ದು, ಮಾರ್ಚ್ ತಿಂಗಳ ಕೊನೆಯವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಬಾಕಿ...
ಮುಂಬರುವ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನಧ್ದರಾಗಿ-ಡಿಸಿ ಲಕ್ಷ್ಮೀ ಪ್ರಿಯ
ಕಾರವಾರ: ಜಿಲ್ಲೆಯಲ್ಲಿ ಮಾನ್ಸೂನ್ ಅವಧಿಯಲ್ಲಿ ಕಂಡು ಬರುವ ನರೆ ಮತ್ತು ಗುಡ್ಡ ಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಈಗಿನಿಂದಲೇ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಮಟ್ಟದಲ್ಲಿ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದ ಸಂದರ್ಭದಲ್ಲಿ ರಾಷ್ಟೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಮತ್ತು ನೌಕಾನೆಲೆಯ ಸಮೀಪದ ಪ್ರದೇಶದಲ್ಲಿ ನೆರೆ ಪರಿಸ್ಥಿತಿ ಉಂಟಾಗದಂತೆ, ಈ ಭಾಗದಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗುವ ಕುರಿತಂತೆ ನೀರು ಹರಿಯುವ ಪ್ರದೇಶದಲ್ಲಿ ಯಾವುದೇ ಅಡೆ ತಡೆಗಳು ಇಲ್ಲದಂತೆ ಸ್ವಚ್ಛಗೊಳಿಸಬೇಕು, ಬಿಣಗಾ, ಚೆಂಡಿಯಾ, ಅರಗಾ ವ್ಯಾಪ್ತಿಯಲ್ಲಿ ನೀರು ಹರಿಯುವ ನಾಲೆಗಳ ಡ್ರೆಜ್ಜಿಂಗ್ ಮತ್ತು ಅಗಲೀಕರಣ ಕೆಲಸಗಳನ್ನು ಕೈಗೊಳ್ಳಬೇಕು. ಹಾಗೂ ಈ ಕಾರ್ಯವನ್ನು ನೌಕಾಪಡೆ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಈ ಬಗ್ಗೆ ಸಂಪೂರ್ಣ ವರದಿಯನ್ನು ನೀಡುವಂತೆ...