ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಶಿರಸಿ- ಕುಮಟಾ ರಸ್ತೆಯ ದೇವಿಮನೆ ಮತ್ತು ರಾಗಿ ಹೊಸಳ್ಳಿ ಮದ್ಯೆ ರಸ್ತೆ ಮೇಲೆ ಗುಡ್ಡು ಕುಸಿದಿದೆ. ಪರಿಣಾಮ ಶಿರಸಿ- ಕುಮಟಾ ರಸ್ತೆ ಬಂದ್ ಆಗಿದೆ. ರಾತ್ರಿ ಎರಡು ಗಂಟೆ ಸುಮಾರಿಗೆ ನಿರಂತರ ಮಳೆಯಿಂದ ರಸ್ತೆ ಮೇಲೆಯೇ ಗುಡ್ಡ ಕುಸಿದಿದ್ದು, ತೆರವು ಕಾರ್ಯಾಚರಣೆ ನಡೆಸಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Top Stories
ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಬಂದಿದ್ದ ಅಪ್ರಾಪ್ತೆಯನ್ನ ಆ ಹುಡುಗ ಅತ್ಯಾಚಾರ ಮಾಡಿದ್ನಾ..? ಹಾಗಿದ್ರೆ ಕೇಸ್ ಏನಾಯ್ತು..?
ಟ್ಯಾಕ್ಸ್ ವಸೂಲಿಯಲ್ಲಿ ಮುಂಡಗೋಡ ತಾಲೂಕು ರಾಜ್ಯಕ್ಕೇ ಪ್ರಥಮ..! ತಾಪಂ ಗ್ರಾಪಂ ಅಧಿಕಾರಿ, ಸಿಬ್ಬಂದಿಗಳ ಸಾಧನೆ..!!
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಯಕ್ಕಂಬಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದ KSRTC ಬಸ್..!
ನಿಯಂತ್ರಣ ತಪ್ಪಿ KSRTC ಬಸ್ ರಸ್ತೆ ಬದಿಗೆ ಇಳಿದ ಘಟನೆ ಎಕ್ಕಂಬಿ ಸಮೀಪ ನಡೆದಿದೆ. ಶ ಹಾವೇರಿಯಿಂದ ಶಿರಸಿಗೆ ಬರುತ್ತಿದ್ದ ಬಸ್, ಎಕ್ಕಂಬಿ ಮತ್ತು ಮಾವಿನಕೊಪ್ಪ ರಸ್ತೆ ಮದ್ಯೆ ರಸ್ತೆ ಬದಿಯ ಗಟಾರಕ್ಕೆ ಇಳಿದಿದೆ. ಪರಿಣಾಮ ಬಸ್ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್ಸಿನ ಸೆಂಟ್ರಿಂಗ್ ಬೊಲ್ಟ್ ಕಟ್ಟಾಗಿ ಘಟನೆ ನಡೆದಿದೆ ಅಂತಾ ಹೇಳಲಾಗ್ತಿದೆ. ಪ್ರಯಾಣಿಕರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಲಾಗಿದೆ.
ಮಳೆ ಅವಾಂತರ ಹಿನ್ನೆಲೆ, ಮತ್ತೆ ಎರಡು ತಾಲೂಕುಗಳಿಗೂ ರಜೆ ಘೋಷಿಸಿದ ಜಿಲ್ಲಾಧಿಕಾರಿ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ ಈಗಾಗಲೇ ಎಂಟು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಿ ಆದೇಶಿಸಿದ್ದ ಡಿಸಿ ಮೇಡಮ್ಮು, ಈಗ ದಾಂಡೇಲಿ, ಯಲ್ಲಾಪುರ ಸೇರಿ ಮತ್ತೆರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಈಗ ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೂ ರಜೆ ಘೊಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಅದ್ರಲ್ಲೂ, ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..
ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
ಅಮೇರಿಕಾದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಿನ್ನೆ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ರ್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಟ್ರಂಪ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದೆ. ಘಟನೆ ನಡೆಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರೆದು ರಕ್ಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಕೈಗೊಂಡಿರುವ ಅಮೇರಿಕಾದ ಸೀಕ್ರೆಟ್ ಸರ್ವಿಸ್, ಟ್ರಂಪ ಸುರಕ್ಷಿತವಾಗಿದ್ದಾರೆ ಎಂದು ಹೇಳಿದೆ. ಅಲ್ಲದೆ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆದಿದ್ದು, ಗುಂಡಿನ ದಾಳಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಅದು ಹೇಳಿದೆ.
ಕಾತೂರು ಬಳಿ ಬೈಕ್ ಗೆ ಗುದ್ದಿದ ಬೊಲೆರೋ, ಬೈಕ್ ಸವಾರ ಗಂಭೀರ..!
ಮುಂಡಗೋಡ ತಾಲೂಕಿನ ಕಾತೂರು ಬಳಿ ಹಿಟ್ ಆಂಡ್ ರನ್ ಕೇಸ್ ಆಗಿದೆ. ಬೊಲೆರೋ ವಾಹನ ಬೈಕ್ ಗೆ ಗುದ್ದಿ ಪರಾರಿಯಾಗುತ್ತಿದ್ದ ವೇಳೆ ಸಾರ್ವಜನಿಕರೇ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಬೈಕ್ ಸವಾರರಿಗೆ ಗಾಯವಾಗಿದೆ. ಅದ್ರಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಅಂದಹಾಗೆ, ಕಾತೂರು ಬಳಿಯ ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು. ಗಾಯಗೊಂಡಿರೋ ಬೈಕ್ ಸವಾರರನ್ನು ಚಳಗೇರಿಯ ರವಿ ರಾಮಲಿಂಗ್ ಸಾಳುಂಕೆ(26) ಖಾನು ಗೌಳಿ ಅಂತಾ ಗುರುತಿಸಲಾಗಿದೆ. ಇದ್ರಲ್ಲಿ ರವಿ ಸಾಳುಂಕೆ ಗಂಭೀರ ಗಾಯಗೊಂಡಿದ್ದಾನೆ ಅನ್ನೊ ಮಾಹಿತಿ ಬಂದಿದೆ. ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೈಕ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ, ಮಗನ ಸಾವು ಕಂಡು ತಾಯಿಯೂ ಆತ್ಮಹತ್ಯೆ..!
ಹಾವೇರಿ: 18 ವರ್ಷದ ಬಾಲಕನೊಬ್ಬ ಬೈಕ್ ಕೊಡಿಸು ಅಂತಾ ಹಠ ಹಿಡಿದು, ತಾಯಿಯೊಂದಿಗೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಮಗ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡ ತಾಯಿಯೂ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂತಹದ್ದೊಂದು ಮನಕಲಕುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಧನರಾಜ ಸುರೇಶ ನಾಯಕ್ (18) ಹಾಗೂ ಈತನ ತಾಯಿ ಬಾಗ್ಯಮ್ಮ ನಾಯಕ (43) ಎಂದು ತಿಳಿದು ಬಂದಿದೆ. ಧನರಾಜ ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ತನಗೆ ಬೈಕ್ ತೆಗೆದುಕೊಳ್ಳಲು ಹಣ ಬೇಕೆಂದು ತಂದೆ- ತಾಯಿ ಬಳಿ ಶನಿವಾರ ಬೆಳಿಗ್ಗೆ ಜಗಳ ತೆಗೆದಿದ್ದ. ಕೂಲಿ ಮಾಡಿಕೊಂಡಿರುವ ತಂದೆ ಸುರೇಶ ಆಯ್ತು ಹೇಗಾದರೂ ಮಾಡಿ ಕೊಡಿಸುತ್ತೇನೆ ಎಂದು ಕೆಲಸಕ್ಕೆ ಹೋಗಿದ್ದರು. ನಂತರದಲ್ಲಿ ತಾಯಿ ಮಗನಿಗೆ ಬೈಕ್ ತಗೆದುಕೊಳ್ಳವುದು ಬೇಡ ಎಂದು ತಮ್ಮ ಸ್ಥಿತಿಯ ಬಗ್ಗೆ ಬುದ್ದಿ ಮಾತು ಹೇಳಿದ್ದರಂತೆ. ಹೀಗಾಗಿ, ತಾಯಿ ಮಗನ ನಡುವೆ ಜಗಳ ನಡೆದಿದೆ. ಈ ವೇಳೆ ತಾಯಿ...
ಶಿಗ್ಗಾವಿ ಬಳಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ
ಶಿಗ್ಗಾವಿ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಐದು ಜನರು ತೀವ್ರ ಗಾಯಗೊಂಡ ಘಟನೆ ಶಿಗ್ಗಾವಿ- ಹನುಮರಹಳ್ಳಿ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ ಮರಕ್ಕೆ ಡಿಕ್ಕಿ ಹೊಡೆದ ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮೃತರು ಸವಣೂರ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (19) ಮೃತ ದುರ್ದೈವಿಗಳಾಗಿದ್ದಾರೆ, ಐದು ಜನ ತೀವ್ರ ಗಾಯಗೊಂಡಿದ್ದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇವನಹಳ್ಳಿ ಇಂದ ನಂದಗಡಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಘಟನೆಯಲ್ಲಿ ಸ್ವಿಫ್ಟ್ ಡಿಸೈರ್ ಕಾರು ನಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಂಬಂಧಿಗಳು ಹಾಗೂ ಶಿಗ್ಗಾವಿ ಪೊಲೀಸ್ ರು ಬೇಟಿ ನೀಡಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು.
ಕಣಜೀರಿಗೆ ಹುಳು ಕಡಿತದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ 15 ಲಕ್ಷ ಪರಿಹಾರ.! ಚೆಕ್ ವಿತರಿಸಿದ ಶಾಸಕ ಶಿವರಾಮ ಹೆಬ್ಬಾರ್
ಮುಂಡಗೋಡ: ನಿಜಕ್ಕೂ ಇದು ವಿಶೇಷದಲ್ಲಿ ಅತಿ ವಿಶೇಷ ಪ್ರಕರಣ, ಶಾಸಕ ಶಿವರಾಮ್ ಹೆಬ್ಬಾರ್ ರವರ ಪ್ರಯತ್ನದ ಫಲವಾಗಿ ಜಾರಿಯಾದ ಮಹತ್ವದ ತೀರ್ಮಾನ. ಕಣಜೀರಿಗೆ ಹುಳು ಕಡಿತಕ್ಕೆ ಒಳಗಾಗಿ ಮೃತಪಟ್ಟ ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮದ ದನಗರ ಗೌಳಿ ಸಮುದಾಯದ ಯುವಕ ಜನ್ನು ದೂಳು ಕೊಕರೆ ಕುಟುಂಬಕ್ಕೆ ಬರೋಬ್ಬರಿ 15 ಲಕ್ಷ ರೂ. ಪರಿಹಾರ ಬಂದು ದೊರಕಿದೆ. ಮುಂಡಗೋಡ ಪ್ರವಾಸಿ ಮಂದಿರದಲ್ಲಿ ಇಂದು, ಶಾಸಕ ಶಿವರಾಮ ಹೆಬ್ಬಾರ್, ಮೃತ ಯುವಕ ಜನ್ನು ದೂಳು ಕೊಕರೆ ಅವರ ಕುಟುಂಬಸ್ಥರಿಗೆ 15 ಲಕ್ಷ ರೂಪಾಯಿಯ ಪರಿಹಾರ ಧನದ ಚೆಕ್ ಹಸ್ತಾಂತರಿಸಿದರು. ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ಜಿಲ್ಲೆಯಲ್ಲಿ ಕಡಿಮೆಯಾದ ಮಳೆ, ಕಾಳಜಿ ಕೇಂದ್ರಗಳಿಂದ ಮನೆಗಳಿಗೆ ತೆರಳಿದ ಸಂತ್ರಸ್ಥರು : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಕಾರವಾರ: ಜಿಲ್ಲೆಯಲ್ಲಿ ಬುಧವಾರದಂದು ಮಳೆ ಕ್ಷೀಣಗೊಂಡಿದೆ. ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದ ಎಲ್ಲಾ ಸಂತ್ರಸ್ಥರು ತಮ್ಮ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಜೂನ್ 1 ರಿಂದ ಇದುವರೆಗೆ ಮಳೆಯಿಂದಾಗಿ 1 ಸಾವಾಗಿದೆ. 8 ಮನೆಗಳು ಸಂಪೂರ್ಣ ಹಾನಿಯಾಗಿವೆ, 18 ಮನೆಗಳು ತೀವ್ರ ಹಾನಿ, 119 ಮನೆಗಳಿಗೆ ಭಾಗಶಃ ಹಾನಿ ಹಾಗೂ 2 ಜಾನುವಾರು ಸಾವು ಸಂಭವಿಸಿದೆ. 830 ಮನೆಗಳು ನೀರಿನಿಂದ ಜಲಾವೃತ್ತವಾಗಿದ್ದು, 809 ಜನರಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಿ, ವೈದ್ಯಕೀಯ ನೆರವು ಮತ್ತು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ. ಇನ್ನು, ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ...