ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನ ನೂತನ ಶಾಖೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿದ್ರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ್ ನಾಯಕ, ನಿರ್ದೇಶಕ ಎಲ್.ಟಿ.ಪಾಟೀಲ್, ಪ್ರಮೋದ ದವಳೆ, ಪ್ರಕಾಶ ಗುನಗಿ, ಬಾಬು ಸುಂಕೇರಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರವಿಗೌಡ ಪಾಟೀಲ್, ಪ್ರಮುಖರಾದ ಎಚ್.ಎಮ್.ನಾಯ್ಕ, ಕೃಷ್ಣ ಹಿರೇಹಳ್ಳಿ, ದೇವು ಪಾಟೀಲ್, ಸಿದ್ದಪ್ಪ ಹಡಪದ, ಕೆ.ಸಿ.ಗಲಭಿ, ನಾಗಭೂಷಣ ಹಾವಣಗಿ, ಗ್ರಾಪಂ ಅಧ್ಯಕ್ಷ ಶಶಿಧರ್ ಪರ್ವಾಪುರ, ಹುನಗುಂದ ಗ್ರಾಪಂ ಅಧ್ಯಕ್ಷ ಷರೀಫ್ ಸಿಂಗ್ ಶಿಗ್ಗಟ್ಟಿ, ನಂದಿಕಟ್ಟಾ ಗ್ರಾಪಂ ಅಧ್ಯಕ್ಷ ಸಂತೋಷ ಭೊಸಲೆ ಸೇರಿದಂತೆ ಸ್ಥಳೀಯ ಮುಖಂಡರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
Top Stories
ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಬಂದಿದ್ದ ಅಪ್ರಾಪ್ತೆಯನ್ನ ಆ ಹುಡುಗ ಅತ್ಯಾಚಾರ ಮಾಡಿದ್ನಾ..? ಹಾಗಿದ್ರೆ ಕೇಸ್ ಏನಾಯ್ತು..?
ಟ್ಯಾಕ್ಸ್ ವಸೂಲಿಯಲ್ಲಿ ಮುಂಡಗೋಡ ತಾಲೂಕು ರಾಜ್ಯಕ್ಕೇ ಪ್ರಥಮ..! ತಾಪಂ ಗ್ರಾಪಂ ಅಧಿಕಾರಿ, ಸಿಬ್ಬಂದಿಗಳ ಸಾಧನೆ..!!
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಚವಡಳ್ಳಿ ಗ್ರಾಪಂ ನೂತನ ಉಪಾಧ್ಯಕ್ಷರಾಗಿ ಪ್ರದೀಪ್ ಚವ್ಹಾಣ ಅವಿರೋಧ ಆಯ್ಕೆ..!
ಮುಂಡಗೋಡ ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯತಿಗೆ ನೂತನ ಉಪಾಧ್ಯಕ್ಷರಾಗಿ ಪ್ರದೀಪ್ ಚೌವ್ಹಾಣ ಅವಿರೋಧ ಆಯ್ಕೆಯಾಗಿದ್ದಾರೆ. 13 ಸದಸ್ಯ ಬಲದ ಚವಡಳ್ಳಿ ಪಂಚಾಯತಿಯಲ್ಲಿ, ಈ ಹಿಂದಿನ ಉಪಾಧ್ಯಕ್ಷ ಸುನಿಲ್ ರಾಠೋಡ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಲೋಕಪ್ಪ ಕೋಣನಕೇರಿ ಹಾಗೂ ಪ್ರದೀಪ್ ಚವ್ಹಾಣ್ ನಾಮಪತ್ರ ಸಲ್ಲಿಸಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಲೋಕಪ್ಪ ಕೋಣನಕೇರಿ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಪ್ರದೀಪ್ ಚವ್ಹಾಣ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಆದಂತಾಗಿದೆ. ಇನ್ನು ಚುನಾವಣಾಧಿಕಾರಿಯಾಗಿ ಎಂ.ಎಸ್. ಕುಲಕರ್ಣಿ ಕಾರ್ಯನಿರ್ವಹಿಸಿದ್ರು.
ಮೈನಳ್ಳಿಯಲ್ಲಿ ಜನಶಕ್ತಿ ದನಗರ ಸಹಕಾರಿ ಸಂಘ ಉದ್ಘಾಟಿಸಿದ ಶಾಸಕ ಹೆಬ್ಬಾರ್..!
ಮುಂಡಗೋಡ: ತಾಲೂಕಿನ ಮೈನಳ್ಳಿಯಲ್ಲಿ ಜನಶಕ್ತಿ ಧನಗರ ಸಹಕಾರಿ ಸಂಘವನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿ, ನೂತನ ಸಹಕಾರಿ ಸಂಘಕ್ಕೆ ಶುಭ ಹಾರೈಸಿದರು. ದೀಪ ಬೆಳಗಿಸುವುದರ ಮೂಲಕವಾಗಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕರು ನೂತನ ಸಹಕಾರಿ ಸಂಘದ ಹುಟ್ಟಿನಿಂದ ಬಡವರ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಅನೂಕುಲವಾಗಲಿದೆ ಇಂತಹ ಸಹಕಾರಿ ಸಂಘವು ಜನರ ಹಣಕ್ಕೆ ಭದ್ರತೆಯನ್ನು ನೀಡುವುದರ ಜೊತೆಯಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರು ಜವಾಬ್ದಾರಿಯಿಂದ ನಡೆದುಕೊಂಡು ಸಾರ್ವಜನಿಕರ ಹಣವನ್ನು ಕಾಯುವ ಕಾವಲುಗಾರರಾಗಿ ಕಾರ್ಯನಿರ್ವಾಹಿಸಬೇಕು ಹಾಗೂ ಧನಗರ ಗೌಳಿ ಸಮುದಾಯದ ಈ ಸಹಕಾರಿ ಸಂಘದ ಬಲವರ್ಧನೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇನೆ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆ.ಪಿ.ಸಿ.ಸಿ ಸದಸ್ಯರಾದ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಪ್ರಮುಖರಾದ ಎಚ್.ಎಮ್.ನಾಯ್ಕ, ಕೃಷ್ಣ ಹಿರೇಹಳ್ಳಿ, ದೇವು ಪಾಟೀಲ್, ಸಿದ್ದಪ್ಪ ಹಡಪದ, ಕೆ.ಸಿ.ಗಲಭಿ, ನಾಗಭೂಷಣ ಹಾವಣಗಿ, ಸಹಕಾರಿ ಸಂಘದ ಅಧ್ಯಕ್ಷ ಕೊಂಡು ಯಾಮಕರ್ ಸೇರಿದಂತೆ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಡಿಸಿ ಆದೇಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಅವಾಂತರಗಳು ಚಾಲ್ತಿಯಲ್ಲಿವೆ. ಅದ್ರಲ್ಲೂ, ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಹೀಗಾಗಿ, ಕರಾವಳಿ ಭಾಗದ ಎರಡು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ಕಾರಣಕ್ಕಾಗಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಹೊನ್ನಾವರ, ಕುಮಟಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9 ರಂದು ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..
ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 8 ಕಾಳಜಿ ಕೇಂದ್ರಗಳಲ್ಲಿ 313 ಜನರಿಗೆ ಆಶ್ರಯ : ಡಿಸಿ ಲಕ್ಷ್ಮೀಪ್ರಿಯಾ ಕೆ.
ಕಾರವಾರ; ಜಿಲ್ಲೆಯಲ್ಲಿ ಸೋಮವಾರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಹೊನ್ನಾವರ ತಾಲ್ಲೂಕಿನಲ್ಲಿ ತೆರೆಯಲಾದ 8 ಕಾಳಜಿ ಕೇಂದ್ರಗಳಲ್ಲಿ 313 ಮಂದಿ ಆಶ್ರಯ ಪಡೆದಿದ್ದಾರೆ, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಅಂತಾ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ. ಕದ್ರಾ ಜಲಾಶಯದಲ್ಲಿ ನೀರಿನ ಮಟ್ಟವು ಜಿಲ್ಲಾಡಳಿತ ನಿಗಧಿಪಡಿಸಿದ ಮಟ್ಟಕ್ಕಿಂತ ಹೆಚ್ಚಾದ ಹಿನ್ನೆಲೆಯಲ್ಲಿ ಜಲಾಶಯದಿಂದ 10600 ಕೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ತೀವ್ರ ಹಾನಿ ಹಾಗೂ 13 ಮನೆಗಳಿಗೆ ಭಾಗಶಃ ಹಾನಿಯಾಗಿದೆ....
ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..!
ಹಿರೇಕೆರೂರಿನ, ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರ್ ನಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಾಪಕುಮಾರನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು * ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಪ್ರಕರಣ. * ದಾವಣಗೆರೆ ತಾಲೂಕಿನ ಕತ್ತಲಗೇರಿ ಗ್ರಾಮದ ನಿವಾಸಿ. * ಕಳೆದ 12 ವರ್ಷಗಳ ಹಿಂದೆ ಬಿ.ಸಿ.ಪಾಟೀಲ್ ಮಗಳ ಜೊತೆಗೆ ಮದುವೆ. * ಬಿ.ಸಿ.ಪಾಟೀಲ್ ಹಿರಿಯ ಪುತ್ರಿ ಸೌಮ್ಯಳನ್ನ ಮದುವೆಯಾಗಿದ್ದ ಪ್ರತಾಪಕುಮಾರ ಕೆ.ಜಿ. * ವಿಶೇಷಚೇತನಾಳಗಿದ್ದ ಸೌಮ್ಯಳನ್ನ ಮದುವೆ ಆಗಿದ್ದ ಪ್ರತಾಮಕುಮಾರ ಕೆ.ಜಿ. * ಬಿ.ಸಿ.ಪಾಟೀಲ್ ಮನೆಯ ಅಳಿಯನಾಗಿ, ಕೃಷಿಯ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದ. * ಬಿ.ಸಿ.ಪಾಟೀಲ್ ಅವರ ರಾಜಕೀಯ ಕೆಲಸಗಳನ್ನ ನಿರ್ವಹಣೆ ಮಾಡ್ತಾ ಇದ್ದ. * ಮದುವೆ ಆದ ನಂತ್ರ ಹಿರೇಕೆರೂರನಲ್ಲಿ ವಾಸವಿದ್ದ ಪ್ರತಾಮಕುಮಾರ...
ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಜಿಲ್ಲಾಧಿಕಾರಿ ಆದೇಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಅವಾಂತರಗಳು ಚಾಲ್ತಿಯಲ್ಲಿವೆ. ಅದ್ರಲ್ಲೂ, ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಹೀಗಾಗಿ, ಕರಾವಳಿ ಭಾಗದ ಐದು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ಕಾರಣಕ್ಕಾಗಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..
ಮುಂದುವರೆದ ಮಳೆ ಅವಾಂತರ, ಹೊನ್ನಾವರ ಬಳಿ ರಾ.ಹೆದ್ದಾರಿ ಮೇಲೆ ಗುಡ್ಡ ಕುಸಿದು ರಸ್ತೆ ಸಂಚಾರ ಅಸ್ತವ್ಯಸ್ತ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಸದ್ಯ ಮಳೆಯ ಅಬ್ಬರ ಕೊಂಚ ತಣ್ಣಗಾಗಿದ್ದರೂ, ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮೇಲೆಯೇ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಅಸ್ಯವ್ಯಸ್ತವಾಗಿದೆ. ಹೊನ್ನಾವರ ಸಮೀಪದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ, ಕರ್ನಲ್ ಹಿಲ್ ಗುಡ್ಡ ಕುಸಿದಿದ್ದು ರಸ್ತೆಯ ಮೇಲೆ ಮಣ್ಣು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ, ಒಂದು ಕಡೆಯಿಂದ ಮಾತ್ರ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಐಆರ್ಬಿ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಇನ್ನೊಂದು ಗಂಟೆಯಲ್ಲಿ ರಸ್ತೆ ಸಂಚಾರ ಸುಗಮವಾಗಲಿದೆ ಅಂತಾ ಮಾಹಿತಿ ತಿಳಿದು ಬಂದಿದೆ.
ಮುಂಡಗೋಡಿನಲ್ಲಿ ಯಶಸ್ವಿಯಾಗಿ ನಡೆದ ಸಂಪೂರ್ಣತಾ ಅಭಿಯಾನ ಉತ್ಸವ..!
ಮುಂಡಗೋಡ ಪಟ್ಟಣದ ಟೌನ್ ಹಾಲ್ನಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ನ ಸಹೋಗದಲ್ಲಿ, ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕು ಕಾರ್ಯಕ್ರಮದ ಸಂಪೂರ್ಣತಾ ಅಭಿಯಾನ ಉತ್ಸವ ಹಮ್ಮಿಕೊಳ್ಳಲಾಗಿತ್ತು. ನೀತಿ ಆಯೋಗದ ಪ್ರತಿನಿಧಿಯಾದ ರೀಷಬ್ ಜೈನ್, ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿಗಳಾದ ವಿನೋದ ಅಣ್ವೇಕರ, ತಾಲೂಕಾ ಪಂಚಾಯತ್ ಇಓ ಟಿ.ವೈ. ದಾಸನಕೊಪ್ಪ ಅವರು ಜಂಟಿಯಾಗಿ ಉದ್ಘಾಟಿಸಿದರು.. ಉತ್ಸವ ಉದ್ಘಾಟನೆಗೂ ಮುನ್ನ ತಾಲ್ಲೂಕು ಪಂಚಾಯತಿ ಕಚೇರಿಯಿಂದ ನಗರದ ಟೌನ್ ಹಾಲ್ ವರೆಗೂ ಆಶಾ, ಅಂಗನವಾಡಿ, ತಾಪಂ ಅಧಿಕಾರಿಗಳು, ಸಿಬ್ಬಂದಿಗಳು ಕಾಲ್ನಡಿಗೆ ಜಾಥಾ ನಡೆಸಿ ಸಾರ್ವಜನಿಕರ ಗಮನ ಸೆಳೆದ್ರು. ನಂತರ, ಕೃಷಿ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ ಇಲಾಖೆ ಸೇರಿದಂತೆ ಎನ್ಆರ್ಎಲ್ಎಂ ಯೋಜನೆಯಡಿ ನೊಂದಾಯಿತ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳಿಂದ ತಯಾರಿತ ಹಲವು ಬಗೆಯ ಆದಾಯೋತ್ಪನ್ನ ಚಟುವಟಿಕೆಗಳ ಮೇಳವನ್ನು ಉದ್ಘಾಟಿಸಿ ಅಗತ್ಯ ಮಾಹಿತಿ ಪಡೆಯುವ ಮೂಲಕ ಅನೇಕ ಸಲಹೆ-ಸೂಚನೆ ನೀಡಿದರು. ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿ...
ಉತ್ತರ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀ ಪ್ರಿಯ ಕೆ. ಅಧಿಕಾರ ಸ್ವೀಕಾರ..!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಕೆ. ಇಂದು ಮೊದಲ ಬಾರಿ ಕಾರವಾರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ರು. ನಂತರ, ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀ ಪ್ರಿಯ ಕೆ. ಅಧಿಕಾರ ಸ್ವೀಕರಿಸಿದರು.