ಶಿಗ್ಗಾವಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಶಿಗ್ಗಾವಿ ಪಟ್ಟಣದ ಹಿರೇಕೆರೆಯಲ್ಲಿ ಮಂಗಳವಾರ ಸಂಜೆ ಜರುಗಿದೆ. ಮೃತ ವ್ಯಕ್ತಿಗಳನ್ನ ಶಿಗ್ಗಾವಿ ಪಟ್ಟಣದ ಸಾಲಗೇರಿ ಓಣಿಯ ಹಜರತ ಅಲಿ ಇಬ್ರಾಹಿಂ ಮುಕ್ಕೇರಿ (27), ಅಕ್ಸರ್ ಹಿಮಾಮ್ ಖಾಸೀಮ್ ಸುಲ್ತಾನಖಾನವರ (35) ಎಂದು ಗುರುತಿಸಲಾಗಿದೆ. ಮೀನು ಹಿಡಿಯುವಾಗ ಆಯತಪ್ಪಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಗಳ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮೃತ ವ್ಯಕ್ತಿಗಳ ಮೃತದೇಹಗಳು ಸಿಗಬೇಕಿದೆ. ಮೃತ ವ್ಯಕ್ತಿಗಳನ್ನ ಪಟ್ಟಣದ ಜನತೆ ತಂಡೋಪತಂಡವಾಗಿ ನೋಡಲು ಆಗಮಿಸುತ್ತಿರುವುದು ಕಂಡು ಬಂದಿದೆ.
Top Stories
ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಬಂದಿದ್ದ ಅಪ್ರಾಪ್ತೆಯನ್ನ ಆ ಹುಡುಗ ಅತ್ಯಾಚಾರ ಮಾಡಿದ್ನಾ..? ಹಾಗಿದ್ರೆ ಕೇಸ್ ಏನಾಯ್ತು..?
ಟ್ಯಾಕ್ಸ್ ವಸೂಲಿಯಲ್ಲಿ ಮುಂಡಗೋಡ ತಾಲೂಕು ರಾಜ್ಯಕ್ಕೇ ಪ್ರಥಮ..! ತಾಪಂ ಗ್ರಾಪಂ ಅಧಿಕಾರಿ, ಸಿಬ್ಬಂದಿಗಳ ಸಾಧನೆ..!!
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ 3 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶವು ಪ್ರಕಟವಾಗಲಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಹುಬ್ಬಳ್ಳಿಯ ಯುವಕನೋರ್ವನ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುದೀಪ್, ಕಿರಣ್ ಪೊಲೀಸರ ಗುಂಡು ತಿಂದ ಆರೋಪಿಗಳಾಗಿದ್ದಾರೆ. ಆಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಶಿವರಾಜ್ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಆದ್ರೆ ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಬಂಧಿಸಲು ತೆರಳಿದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಂಕತರ ಮೇಲೆ ಫೈರಿಂಗ್ ಮಾಡಿದ್ದು, ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಗುಂಡು ತಗುಲಿದ್ದರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಿಮ್ಸ್ ಆಸ್ಪತ್ರೆಗೆ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
ಮುಂಡಗೋಡ: ಪಟ್ಟಣದ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆ ಉಸಿರೆಳೆದಿದ್ದಾರೆ.
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಇದು ಪ್ರಸಕ್ತ ವರ್ಷದ ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ.. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿಯ ದೈವ ವಾಣಿ ಕಾರ್ಣಿಕ ಶುಕ್ರವಾರ ಸಂಜೆ ಜರುಗಿತು. ನಾಗಪ್ಪಜ್ಜ ಉರ್ಮಿ 21 ಅಡಿ ಬಿಲ್ಲನ್ನು ಏರಿ “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ವಿಜಯದಶಮಿಯ ಮುನ್ನಾದಿನ ಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ಕಾರ್ಣಿಕ ನುಡಿಯುವ ಸಂಪ್ರದಾಯವಿದೆ. “ದಸರಾ ಸಂದರ್ಭದಲ್ಲಿ ಕಾರ್ಣಿಕ ನುಡಿಯುವ ನಾಗಪ್ಪ ಉರ್ಮಿ 21 ಅಡಿ ಬಿಲ್ಲನ್ನು ಏರಿ ಆಯುಧಪೂಜೆಯ ದಿನದಂದು ಭವಿಷ್ಯ ನುಡಿದಿರುತ್ತಾರೆ. “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ಪ್ರತೀ ವರ್ಷ ನಿಜಾಂಶವನ್ನು ತಿಳಿಸುವಂತಹ ಭವಿಷ್ಯವಾಣಿ ಇದಾಗಿರುತ್ತದೆ ಎನ್ನುವುದು ಭಕ್ತರ ನಂಬಿಕೆಯಾಗಿದೆ. ಈ ವರ್ಷದ ಕಾರ್ಣಿಕವು ಉತ್ತಮವಾಗಿದ್ದು, ಭವಿಷ್ಯವಾಣಿಯನ್ನು ರೈತಾಪಿ ವರ್ಗದ ಪರವಾಗಿ ವಿಶ್ಲೇಷಿಸಲಾಗುತ್ತಿದೆ.
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ಮುಂಡಗೋಡ; ಕರಡಿ ದಾಳಿಯಿಂದ ಯುವಕನೋರ್ವನಿಗೆ ಗಂಭೀರ ಗಾಯವಾದ ಘಟನೆ, ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ್ ವ್ಯಾಪ್ತಿಯ ಸಿಂಗನಹಳ್ಳಿ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ವಿಪರ್ಯಾಸ ಅಂದ್ರೆ ಐದು ದಿನಗಳ ಹಿಂದೆ ನಡೆದಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮು ಜಾನು ಕೋಕರೆ(31) ಕರಡಿ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಕಳೆದ ಐದು ದಿನಗಳ ಹಿಂದೆ ಕರಡಿ ದಾಳಿಯಾಗಿತ್ತು. ಈ ವೇಳೆ ವ್ಯಕ್ತಿಯ ತಲೆಗೆ ಕಚ್ಚಿ ತೀವ್ರ ಗಾಯಗೊಳಿಸಿತ್ತು. ದುರಂತ ಅಂದ್ರೆ ಇಷ್ಟೊಂದು ಗಾಯವಾಗಿದ್ರೂ ಈ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗಲೇ ಇಲ್ಲವೆನೋ ಅನ್ನೋ ಅನುಮಾನ ಶುರುವಾಗಿದೆ. ಈಗಾಗಲೇ ತಾಲೂಕಾಸ್ಪತ್ರಗೆ ಗಾಯಾಳು ವ್ಯಕ್ತಿಯನ್ನು ಚಿಕಿತ್ಸೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಶಿರಸಿ : ಗ್ರಾಮೀಣ ಪ್ರದೇಶದ ಜನರಿಗೆ ಸರಕಾರದ ಅಗತ್ಯ ಸೌಲಭ್ಯಗಳ ಪೂರೈಕೆ ಹಾಗೂ ಮೂಲಭೂತ ಸಮಸ್ಯೆಗಳ ನಿವಾರಣೆಗಾಗಿ ಶ್ರಮಿಸುವ ಆರ್ಡಿಪಿಆರ್, ಕಂದಾಯ, ಪೋಲಿಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಪ್ರತಿಯೊಬ್ಬ ನೌಕರರು ಜನಸಾಮಾನ್ಯರು ಮತ್ತು ಜನಪ್ರತಿನಿಧಿಗಳ ನಡುವಿನ ಸಂಪರ್ಕಕೊಂಡಿಯಾಗಿ ನಿರಂತರ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬ ನೌಕರರು ಈ ಎಲ್ಲ ಒತ್ತಡಗಳ ನಡುವೆಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ವ್ಯಾಯಾಮ, ಯೋಗ, ಕ್ರೀಡೆ ಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಹಾಗೂ ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ರವರು ಹೇಳಿದರು. ಅವರು ಶನಿವಾರ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರಿಡಾಂಗಣದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾಜದಲ್ಲಿ ಮಹತ್ತರ ಬದಲಾವಣೆ ತರುವಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಾತ್ರ...
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಿದೆ. ತಾಲೂಕಾ ಕಾಂಗ್ರೆಸ್ ನ ಹಿರಿಯ ಮುಖಂಡ ಕೃಷ್ಣ ಹಿರೇಹಳ್ಳಿಯವರನ್ನು ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಸೆಪ್ಟೆಂಬರ್ 20 ರಂದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದ್ರೆ, ಅದು ಒಂದು ವಾರದ ನಂತರ ಬಹಿರಂಗವಾಗಿದೆ. ದಿಟ್ಟ ಹೆಜ್ಜೆ..! ಅಸಲು, ಮುಂಡಗೋಡ ಕಾಂಗ್ರೆಸ್ ಗೆ ಇಂತಹದ್ದೊಂದು ಬದಲಾವಣೆಯ ಅವಶ್ಯಕತೆ ಇತ್ತು. ಹಾಗಂತಾ ಕಳೆದ ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ತಾಲೂಕಾ ಕಾಂಗ್ರೆಸ್ ನಲ್ಲಿ ಬಹಿರಂಗವಾಗೇ ಅಧ್ಯಕ್ಷರ ಬದಲಾವಣೆಗೆ ಆಗ್ರಹ, ಆಕ್ರೋಶಗಳು ಭುಗಿಲೆದ್ದಿದ್ದವು ಹೀಗಾಗಿ, ನಿರ್ಗಮಿತ ಅಧ್ಯಕ್ಷ ಜ್ಞಾನದೇವ ಗುಡಿಹಾಳರ ವಿರುದ್ಧ ರಾಜ್ಯ ನಾಯಕರ ಎದುರು ಸಾಕಷ್ಟು ಆರೋಪಗಳೂ ಸ್ಫೋಟಗೊಂಡಿದ್ದವು ಹೀಗಾಗಿ, ರಾಜ್ಯ ಕಾಂಗ್ರೆಸ್ ಮಹತ್ವದ ತೀರ್ಮಾನ ಮಾಡಿದೆ. ಕೃಷ್ಣ ಹಿರೇಹಳ್ಳಿಯವರನ್ನ ಅಧ್ಯಕ್ಷರನ್ನಾಗಿ ನೇಮಿಸಿದೆ.
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಮುಂಡಗೋಡ ಪಟ್ಟಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೋಲ್ಡ್ ಸ್ಮಿತ್ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಭೂ ವ್ಯವಹಾರದಲ್ಲಿ ಆಗಿರೋ ದಗಲ್ಬಾಜಿಗೆ ಮನನೊಂದು ಸುಸೈಡ್ ಮಾಡಿಕೊಂಡಿದ್ದಾರೆ ಅಂತಾ ಮೃತನ ಪತ್ನಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪರಿಣಾಮ ಹುಬ್ಬಳ್ಳಿಯ 6 ಜನರ ವಿರುದ್ಧ ಕೇಸು ದಾಖಲಾಗಿದೆ. ಜ್ಯುವೇಲ್ಲರಿ ಶಾಪ್ ಮಾಲೀಕ..! ಅಂದಹಾಗೆ, ಮುಂಡಗೋಡ ಪಟ್ಟಣದಲ್ಲಿ ಜ್ಯುವೇಲ್ಲರಿ ಶಾಪ್ ನಡೆಸುತ್ತಿದ್ದ ಆಶ್ರಿತ್ ಮೋಹನ್ ವೇರ್ಣೇಕರ್(45) ಎಂಬುವವನೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೂ ವ್ಯವಹಾರದಲ್ಲಿ ಮೋಸ..! ಅಸಲು, ಮುಂಡಗೋಡಿನಲ್ಲಿ ಬಸ್ ನಿಲ್ದಾಣದ ಎದುರುಗಡೆಯೇ ಮನೆ ಹಾಗೂ ಜ್ಯವೇಲ್ಲರಿ ಅಂಗಡಿ ನಡೆಸುತ್ತಿದ್ದ ಆಶ್ರಿತ್ ಹುಬ್ಬಳ್ಳಿಯಲ್ಲೊಂದು ಜಾಗ ಖರೀದಿಸಿದ್ದ. ಈತನಿಗೆ ಹುಬ್ಬಳ್ಳಿಯ ಶಮಶುದ್ದೀನ ಅಬ್ದುಲ ಲತೀಫ್ ಪಟವೇಗರ, ಕುಶಾಲಚಂದ್ರ ಬಾಬುಲಾಲ ಜೈನ್, ಉಪಾದೇವಿ ಕೋಂ ಕುಶಾಲಚಂದ್ರ ಜೈನ್, ಸಾಧಿಕ ಜಕಾಡಿ, ಮುನಾಫ್ ಪಟವೇಗರ ಹಾಗೂ ಜಾವೀದ್ ಅಹ್ಮದ ಬ್ಯಾಳಿ ಇವರೆಲ್ಲರೂ ಸೇರಿ ಹುಬ್ಬಳ್ಳಿಯ ಗಾರ್ಡನಪೇಟದಲ್ಲಿರೊ ಆಸ್ತಿ ಮಾರಾಟ ಮಾಡಿರ್ತಾರೆ. ಧಮ್ಕಿ ಹಾಕಿದ್ರು..! ಮಾರಾಟ...
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಮುಂಡಗೋಡ : ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ ಶೇರಖಾನೆ ಅವರನ್ನು ನೇಮಕ ಮಾಡಲಾಗಿದೆ. ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಕಾ ಲಂಬಾ ಅವರು ಹಾಗೂ ಡಾ.ಬಿ.ಪುಷ್ಪ ಅಮರನಾಥ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಇವರ ಆದೇಶದ ಮೇರೆಗೆ ಸಲ್ಮಾ ಕಿರಣ ಶೇರಖಾನೆ ಅವರನ್ನು ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಾತಿ ಮಾಡಲಾಗಿದೆ. ಅಖಿಲ ಭಾರತದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳು ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಅವರ ಮಾರ್ಗದರ್ಶನದಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತ ಮುಖ್ಯವಾಹಿನಿಗೆ ತರುವ ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ದುಡಿಯುತ್ತಿರೆಂದು ನಂಬಿ ತಮಗೆ ಈ ಜವಾಬ್ದಾರಿಯನ್ನು ವಹಿಸಿದ್ದೇವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುಜಾತಾ ರ್ ಅವರು ಸಲ್ಮಾ...