Road Problem News:ಬೆಂಗಳೂರಿನ 43 ವರ್ಷದ ವ್ಯಕ್ತಿಯೊಬ್ಬರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಗೆ ಕಾನೂನು (ಲೀಗಲ್) ನೋಟಿಸ್ ಕಳುಹಿಸಿದ್ದು, ನಗರದಲ್ಲಿನ ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ಉಂಟಾದ “ದೈಹಿಕ ಯಾತನೆ ಮತ್ತು ಭಾವನಾತ್ಮಕ ಆಘಾತ”ಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದಾರೆ. ರಿಚ್ಮಂಡ್ ಟೌನ್ ನಿವಾಸಿ ದಿವ್ಯ ಕಿರಣ ಎಂಬವರು ತಮ್ಮ ನೋಟಿಸ್ನಲ್ಲಿ, ತೆರಿಗೆ ಪಾವತಿಸುವ ನಾಗರಿಕನಾಗಿದ್ದರೂ, ಬಿಬಿಎಂಪಿಯ “ಮೂಲಭೂತ ನಾಗರಿಕ ಮೂಲಸೌಕರ್ಯವನ್ನು ನಿರ್ವಹಿಸುವಲ್ಲಿನ ಸ್ಪಷ್ಟ ವೈಫಲ್ಯ” ದಿಂದಾಗಿ “ನಿರಂತರ ದೈಹಿಕ ಯಾತನೆ ಮತ್ತು ಮಾನಸಿಕ ಯಾತನೆ” ಅನುಭವಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಆಳವಾದ ಗುಂಡಿಗಳು, ಮುರಿದುಬಿದ್ದ ಮತ್ತು ಅಸಮವಾದ ಮಾರ್ಗಗಳು ಮತ್ತು ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆ ಮೇಲ್ಮೈಗಳು ಇದರಲ್ಲಿ ಸೇರಿವೆ. ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ ದಿವ್ಯ ಕಿರಣ ಅವರು “ತೀವ್ರವಾದ ಕುತ್ತಿಗೆ ಮತ್ತು ಬೆನ್ನು ನೋವನ್ನು ಅನುಭವಿಸಿದ್ದಾಗಿ ಹೇಳಿಕೊಂಡಿದ್ದಾರೆ. ಇದು ಈ ಅಪಾಯಕಾರಿ ರಸ್ತೆಗಳಲ್ಲಿ ಪ್ರಯಾಣಿಸುವಾಗ ಉಂಟಾಗುವ ಸೆಳೆತ ಮತ್ತು ಆಘಾತಕ್ಕೆ...
Top Stories
Police News:ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಡಾ.ಎಂ.ಎ. ಸಲೀಂ ನೇಮಕ..!
Naxalar Encounter News:ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು..!
ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!
Business News :2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ..!
Achievement News: ಕನ್ನಡದ ಲೇಖಕಿ ಬಾನು ಮುಷ್ತಾಕ್ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಘೋಷಣೆ..!
Police Death News:ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್ ; ಪೊಲೀಸ್ ಅಧಿಕಾರಿ ಸಾವು..!
ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ
Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!
Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!
Road Problem News:ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ..!
ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ
ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್
ಚಿನ್ನದ ಬೆಲೆ ಒಂದೇ ದಿನ ₹2400 ಏರಿಕೆ, ಬೆಳ್ಳಿ ₹3000 ಜಿಗಿತ; ಆಭರಣ ಖರೀದಿದಾರರಿಗೆ ಬಿಗ್ ಶಾಕ್..!
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!
ಭಾರೀ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು: ಸಂಚಾರಕ್ಕೆ ಅಡಚಣೆ..!
ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!
ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ
ZP CEO Meeting News: ಕಾರವಾರ: ಜಿಲ್ಲೆಯಲ್ಲಿ ಮಾನ್ಸೂನ್ ಮಳೆಗಾಲವು ಈ ವರ್ಷ ಬೇಗ ಶುರುವಾಗಿದ್ದು. ಈಗಾಗಲೇ ಪ್ರಗತಿಯಲ್ಲಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಿಗೂ ನೀರಿನ ಹಂಚಿಕೆ ಸರಿಯಾಗಿ ಮಾಡಬೇಕು, ಪೈಪ್ಲೈನ್ಗಳ ಕೆಲಸಗಳು ಸಮರ್ಪಕವಾಗಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ಕುಡಿಯುವ ನೀರಿನ ಸರಬರಾಜಿನಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ತಾಲೂಕಿನ ಎಲ್ಲಾ ಇಂಜಿನೀಯರ್ಗಳು, ಸಹಾಯಕ ಇಂಜಿನೀಯರ್ಗಳು ಕ್ಷೇತ್ರಗಳಿಗೆ ಭೇಟಿ ನೀಡಿ ಸರ್ವೇ, ನೀರಿನ ತೆರಿಗೆಯನ್ನು ಸಂಗ್ರಹಿಸುವಂತೆ, ಮತ್ತು ನೀರಿನ ಗುಣಮಟ್ಟವನ್ನು ಪರೀಕ್ಷಿಸಲು ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕು. ನೀರಿನ ಪೈಪ್ ಮತ್ತು ನೀರಿನ ಟ್ಯಾಂಕ್ಗಳನ್ನು ಸ್ವಚ್ಚಗೊಳಿಸಬೇಕು. ಜಿಲ್ಲೆಯಲ್ಲಿ ಮುಂದಿನ...
ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್
Kadamba Karwar News: ಕಾರವಾರ: ಭಾರತವು ತನ್ನ ವೈಭವದ ಇತಿಹಾಸವನ್ನು ಪುನಃ ಬರೆಯಲಿದ್ದು, ಪ್ರಧಾನ ಮಂತ್ರಿಯವರ ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ಭಾರತವು ತನ್ನ ವೈಭವದ ಭೂತಕಾಲ ಮತ್ತು ಇತಿಹಾಸದೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಅಭಿವೃದ್ಧಿಯತ್ತ ನಡೆದಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು. ಅವರು ಬುಧವಾರ ಕಾರವಾರದ ಕದಂಬ ನೌಕಾನೆಲೆಯಲ್ಲಿ ಐಎನ್ಎಸ್ವಿ ಕೌಂಡಿನ್ಯ ಹಡಗು ಲೋಕಾರ್ಪಣೆ ಮಾಡಿ ಮಾತನಾಡಿದರು. ಭಾರತವು ಅದ್ಭುತವಾದ ಇತಿಹಾಸ ಹೊಂದಿದ್ದು, ಸಾವಿರಾರು ವರ್ಷಗಳ ಕಾಲ, ಭಾರತದ ಸಂಪತ್ತು, ಜ್ಞಾನ, ವಿಜ್ಞಾನವು ಅಗಾಧವಾಗಿದ್ದು, ಜ್ಞಾನ ಮತ್ತು ವಿಜ್ಞಾನದ ದೃಷ್ಟಿಕೋನದಿಂದ ಇಡೀ ಜಗತ್ತಿಗೆ ಆಕರ್ಷಣೀಯ ಕೇಂದ್ರವಾಗಿತ್ತು. ಭಾರತವನ್ನು ತಿಳಿದುಕೊಳ್ಳಲು, ಗುರುತಿಸಲು, ನೋಡಲು, ಭಾರತದಿಂದ ಕಲಿಯಲು ವಿಶ್ವದ ಅನೇಕ ಜನರು ಭಾರತಕ್ಕೆ ಬಂದರು. ಸಾವಿರಾರು ವರ್ಷಗಳ ದಾಳಿಗಳು ಮತ್ತು ಪ್ರಯತ್ನಗಳ ಹೊರತಾಗಿಯೂ, ನಮ್ಮ ಶ್ರೇಷ್ಠ ಸಂಸ್ಕೃತಿ ಕೊನೆಗೊಂಡಿಲ್ಲ. ಶಾಶ್ವತವಾಗಿದ್ದ ಆ ಪ್ರಭಾವವನ್ನು ಮುರಿಯಲು, ಆ ಪ್ರಭಾವವನ್ನು ಕೊನೆಗೊಳಿಸಲು, ಸಾಧ್ಯವಾಗಲಿಲ್ಲ ಇದು ನಮ್ಮ ಸಂಸ್ಕೃತಿಯ ಮೇಲೆ...
ಚಿನ್ನದ ಬೆಲೆ ಒಂದೇ ದಿನ ₹2400 ಏರಿಕೆ, ಬೆಳ್ಳಿ ₹3000 ಜಿಗಿತ; ಆಭರಣ ಖರೀದಿದಾರರಿಗೆ ಬಿಗ್ ಶಾಕ್..!
Gold Rate Today: ಇತ್ತೀಚೆಗೆ ಸ್ವಲ್ಪ ಪ್ರಮಾಣದಲ್ಲಿ ಏರಿಳಿತ ಕಾಣುತ್ತಿದ್ದ ಚಿನ್ನದ ಬೆಲೆ ಇಂದು ಬುಧವಾರ ದಿಢಿರ್ ಏರಿಕೆ ಕಂಡಿದ್ದು, ಆಭರಣ ಖರೀದಿದಾರರಿಗೆ ಶಾಕ್ ನೀಡಿದೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ₹2400 ಏರಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಸ್ವಲ್ಪ ಏರಿಳಿತದಿಂದ ಕೂಡಿತ್ತು. ಆದರೆ, ಇಂದು ಬುಧವಾರ ದಿಢೀರ್ ಏರಿಕೆಯಾಗಿದೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ಒಂದೇ ದಿನದಲ್ಲಿ ₹2400 ಏರಿಕೆಯಾಗಿದ್ದು, ಆಭರಣ ಖರೀದಿದಾರರಿಗೆ ಶಾಕ್ ನೀಡಿದೆ. ಬೆಳ್ಳಿ ಬೆಲೆ ಕೂಡ ದುಬಾರಿಯಾಗಿದ್ದು, ಪ್ರತಿ ಕೆಜಿಗೆ ₹3000 ಏರಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಲ್ಲಿ ಇಂದಿನ ಚಿನ್ನದ ಬೆಲೆ..! ಬೆಂಗಳೂರಲ್ಲಿ ನಿನ್ನೆ ಮಂಗಳವಾರ ಬಂಗಾರದ ಬೆಲೆಯಲ್ಲಿ ₹490 ಇಳಿಕೆಯಾಗಿತ್ತು. ಆದರೆ, ಇಂದು ಬುಧವಾರ 22 ಕ್ಯಾರೆಟ್ ಆಭರಣದ ಚಿನ್ನದ ಬೆಲೆಯಲ್ಲಿ ಪ್ರತಿ 10...
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!
Accident News: ಮುಂಡಗೋಡ ತಾಲೂಕಿನ ಶಿರಸಿ ರಸ್ತೆಯ ನಂದಿಪುರ ಬಳಿ VRL ಖಾಸಗಿ ಬಸ್ ಹಾಗೂ KSRTC ಬಸ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ KSRTC ಬಸ್, ಶಿರಸಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಮುಖಾಮುಕಿ ಡಿಕ್ಕಿಯಾಗಿವೆ. ಹೀಗಾಗಿ, ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಓರ್ವ ವೃದ್ದೆಯ ಕೈಗೆ ಗಂಭೀರ ಗಾಯವಾಗಿದೆ ಅನ್ನೊ ಮಾಹಿತಿ ಇದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಾರೀ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು: ಸಂಚಾರಕ್ಕೆ ಅಡಚಣೆ..!
Heavy rain Hill collapses: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಲವು ಅವಾಂತರಳಿಗೆ ಕಾರಣವಾಗುತ್ತಿದೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಗುಡ್ಡ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತಿದ್ದು , ಈ ಹಿಂದೆ ಗುಡ್ಡವನ್ನು ತುಂಡರಿಸಿ ರಸ್ತೆ ಮಾಡಲಾಗಿತ್ತು. ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ರಸ್ತೆ ಬದಿಯಲ್ಲಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಕಲ್ಲು ಮಣ್ಣು ಬಿದ್ದ ಪರಿಣಾಮ, ಕುಮಟಾ-ಶಿರಸಿ ಹೆದ್ದಾರಿಯ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ರಸ್ತೆ ಕಾಮಗಾರಿ ಪ್ರಗತಿಯಲ್ಲಿ ಇರೋದ್ರಿಂದ ಸಂಚಾರ ಕಿರಿಕಿರಿ ಆಗಿದೆ. ರಸ್ತೆ ಮೇಲಿನ ಮಣ್ಣು, ಕಲ್ಲು ತೆರವು ಕಾರ್ಯ ನಡೆದಿದೆ.
ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!
Rain Alert Today: ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಇಂದು ಕರ್ನಾಟಕ ಕರಾವಳಿಗೆ ಹತ್ತಿರದ ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲೆ ಮೇಲ್ಮಟ್ಟದ ವಾಯುಭಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಇಂದು (ಮೇ21) ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅತ್ಯಂತ ಭಾರಿಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಹಾಸನ, ಕೊಡಗು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..! Rain Alert Today: ಉಳಿದಂತೆ ರಾಜ್ಯದ ಎಲ್ಲಾ...
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!
Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ ಬುಧವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
Car Fire News:ಏಕಾಏಕಿಯಾಗಿ ಕಾರೊಂದು ಬೆಂಕಿಯಿಂದ ಧಗಧಗ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ತಾರಿಹಾಳ ಟೋಲ್ ಬಳಿ ಘಟನೆ ನಡೆದಿದೆ. ಧಾರವಾಡತ್ತ ಹೊರಟಿದ್ದ ಕಾರಿನಲ್ಲಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅದರಲ್ಲಿದ್ದ ಕುಟುಂಬ ಕೆಳಗೆ ಇಳದಿದೆ. ಆಗ ಕಾರು ಬೆಂಕಿಯಿಂದ ಹೊತ್ತಿ ಉರಿದಿದೆ. ಸಧ್ಯ ಆ ಕಾರು ಯಾರದು ಎಲ್ಲಿಗೆ ಹೊರಟಿತ್ತು ಎಂಬದು ಪೊಲೀಸರಿಂದ ತಿಳಿಯಬೇಕಿದೆ.
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!
Hescom News; ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆಯ ಅವಧಿಯಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಕಂಡು ಬರಬಹುದಾದ ಯಾವುದೇ ರೀತಿಯ ವ್ಯತ್ಯಯ ಮತ್ತು ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಕುರಿತಂತೆ ಜಿಲ್ಲೆಯ ಹೆಸ್ಕಾಂ ವಿಭಾಗದ ವತಿಯಿಂದ ಸರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮಳೆಗಾಲದ ಸಮಯದಲ್ಲಿ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ವಿದ್ಯುತ್ ಸಂಪರ್ಕ ವ್ಯವಸ್ಥೆ ಹಾಳಾಗುವ ಸಾಧ್ಯತೆಗಳಿರುವುದರಿಂದ ಈಗಾಗಲೇ ಶಿರಸಿ, ದಾಂಡೇಲಿ, ಕಾರವಾರ ಮತ್ತು ಹೊನ್ನಾವರ ಉಪ ವಿಭಾಗಗಳಲ್ಲಿ ವಿದ್ಯುತ್ ತಂತಿಗಳ ಮೇಲಿನ ಮರದ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಶಿರಸಿ ವಿಭಾಗದಲ್ಲಿ 30 ಬ್ಯಾಚ್ ಗಳಲ್ಲಿ 300 ಮಂದಿ ಕಾರ್ಮಿಕರು, ದಾಡೇಲಿ ವಿಭಾಗದಲ್ಲಿ 5 ಬ್ಯಾಚ್ ನಲ್ಲಿ 50, ಕಾರವಾರ ವಿಭಾಗದಲ್ಲಿ 11 ಬ್ಯಾಚ್ ನಲ್ಲಿ 103 , ಹೊನ್ನಾವರದಲ್ಲಿ 18 ಬ್ಯಾಚ್ ನಲ್ಲಿ 144 ಸೇರಿದಂತೆ ಒಟ್ಟು 64 ಬ್ಯಾಚ್ ಗಳಲ್ಲಿ 597 ಗುತ್ತಿಗೆ ಕಾರ್ಮಿಕರನ್ನು ಮಾನ್ಸೂನ್ ಅವಧಿಯಲ್ಲಿ ಕಾರ್ಯನಿರ್ವಹಿಸಲು ನೇಮಿಸಿಕೊಳ್ಳಲಾಗಿದೆ....