ಮುಂಡಗೋಡ ಪಟ್ಟಣದ ಟೌನ್ ಹಾಲ್ನಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ನ ಸಹೋಗದಲ್ಲಿ, ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕು ಕಾರ್ಯಕ್ರಮದ ಸಂಪೂರ್ಣತಾ ಅಭಿಯಾನ ಉತ್ಸವ ಹಮ್ಮಿಕೊಳ್ಳಲಾಗಿತ್ತು. ನೀತಿ ಆಯೋಗದ ಪ್ರತಿನಿಧಿಯಾದ ರೀಷಬ್ ಜೈನ್, ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿಗಳಾದ ವಿನೋದ ಅಣ್ವೇಕರ, ತಾಲೂಕಾ ಪಂಚಾಯತ್ ಇಓ ಟಿ.ವೈ. ದಾಸನಕೊಪ್ಪ ಅವರು ಜಂಟಿಯಾಗಿ ಉದ್ಘಾಟಿಸಿದರು.. ಉತ್ಸವ ಉದ್ಘಾಟನೆಗೂ ಮುನ್ನ ತಾಲ್ಲೂಕು ಪಂಚಾಯತಿ ಕಚೇರಿಯಿಂದ ನಗರದ ಟೌನ್ ಹಾಲ್ ವರೆಗೂ ಆಶಾ, ಅಂಗನವಾಡಿ, ತಾಪಂ ಅಧಿಕಾರಿಗಳು, ಸಿಬ್ಬಂದಿಗಳು ಕಾಲ್ನಡಿಗೆ ಜಾಥಾ ನಡೆಸಿ ಸಾರ್ವಜನಿಕರ ಗಮನ ಸೆಳೆದ್ರು. ನಂತರ, ಕೃಷಿ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ ಇಲಾಖೆ ಸೇರಿದಂತೆ ಎನ್ಆರ್ಎಲ್ಎಂ ಯೋಜನೆಯಡಿ ನೊಂದಾಯಿತ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳಿಂದ ತಯಾರಿತ ಹಲವು ಬಗೆಯ ಆದಾಯೋತ್ಪನ್ನ ಚಟುವಟಿಕೆಗಳ ಮೇಳವನ್ನು ಉದ್ಘಾಟಿಸಿ ಅಗತ್ಯ ಮಾಹಿತಿ ಪಡೆಯುವ ಮೂಲಕ ಅನೇಕ ಸಲಹೆ-ಸೂಚನೆ ನೀಡಿದರು. ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿ...
Top Stories
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಉತ್ತರ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀ ಪ್ರಿಯ ಕೆ. ಅಧಿಕಾರ ಸ್ವೀಕಾರ..!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಕೆ. ಇಂದು ಮೊದಲ ಬಾರಿ ಕಾರವಾರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ರು. ನಂತರ, ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀ ಪ್ರಿಯ ಕೆ. ಅಧಿಕಾರ ಸ್ವೀಕರಿಸಿದರು.
ಶಿಗ್ಗಾವಿ “ಕೈ” ಟಿಕೆಟ್ ಗಾಗಿ ನಿಲ್ಲದ ರಂಪಾಟ, ಇಂದು ಮತ್ತೆ ಉಸ್ತುವಾರಿಗಳ ಜತೆ ಹೈ ವೋಲ್ಟೇಜ್ ಮೀಟಿಂಗ್
ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಸಂಬಂಧ ಕಾಂಗ್ರೆಸ್ ನಲ್ಲಿ ಬಣಗಳ ತಿಕ್ಕಾಟ ಮಿತಿ ಮೀರಿದೆ. ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರ ಬಹುತೇಕ ಕಗ್ಗಂಟಾಗಿದೆ. ಹೀಗಾಗಿ, ಇಂದು ಟಿಕೆಟ್ ಹಂಚಿಕೆ ಉಸ್ತುವಾರಿ ಸಮಿತಿ ಶಿಗ್ಗಾವಿಗೆ ಬಂದಿಳಿಯಲಿದೆ. ಸಚಿವ ಈಶ್ವರ ಖಂಡ್ರೆ ನೇತೃತ್ವದ ಸಮಿತಿಯಿಂದ ಶಿಗ್ಗಾವಿಯಲ್ಲಿ ಬಡಿದಾಟದ ಬಣಗಳ ಜೊತೆ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಭೆ ನಿಕ್ಕಿಯಾಗಿದೆ. ಪೊಲೀಸ್ ಬಂದೋಬಸ್ತ್..! ಅಸಲು, ಎರಡು ದಿನಗಳ ಹಿಂದಷ್ಟೇ ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಸಚಿವ ಸತೀಶ್ ಜಾರಕೀಹೊಳಿ ನೇತೃತ್ವದಲ್ಲಿ ಸಭೆಯೊಂದು ನಡೆದಿತ್ತು. ಆ ವೇಳೆ ಇಲ್ಲಿನ ಖಾದ್ರಿ ಬಣ ಹಾಗೂ ಪಠಾಣ್ ಬಣಗಳ ಕಾರ್ಯಕರ್ತರು ಪರಸ್ಪರ ಕಚ್ಚಾಡಿಕೊಂಡಿದ್ರು. ಈ ಕಾರಣಕ್ಕಾಗಿ, ಇಂದಿನ ಸಭೆಯಲ್ಲಿಯೂ ಗಲಾಟೆ ಸಾಧ್ಯತೆ ಹಿನ್ನೆಲೆಯಲ್ಲಿ, ಸಭೆ ನಡೆಯುವ ಖಾಸಗಿ ಕಲ್ಯಾಣ ಮಂಟಪದ ಸುತ್ತ ಪೊಲೀಸ್ ಬಂದೊಬಸ್ತ್ ಏರ್ಪಡಿಸಲಾಗಿದೆ. ಎರಡು ಪ್ರತ್ಯೇಕ ವೇದಿಕೆ..! ಇನ್ನು ಟಿಕೆಟ್ ಹಗ್ಗಜಗ್ಗಾಟದಲ್ಲಿ ಪರಸ್ಪರ ಕಚ್ಚಾಟಕ್ಕೆ ಇಳಿದಿರೋ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಹಾಗೂ ಯಾಸಿರ್ ಖಾನ್ ಪಠಾಣ್ ಬೆಂಬಲಿಗರ ಅಭಿಪ್ರಾಯ ಕೇಳಲಾಗತ್ತೆ. ಹೀಗಾಗಿ,...
ಜಿಲ್ಲೆಯಲ್ಲಿ ಇನ್ಮೇಲೆ ಅಕ್ರಮಿಗಳು ಬಾಲ ಬಿಚ್ಚಂಗಿಲ್ಲ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕ್ತಿವಿ : ನೂತನ ಎಸ್ಪಿ ನಾರಾಯಣ್ ಮೊದಲ ಮಾತು
ಕಾರವಾರ: ಉತ್ತರ ಕನ್ನಡದಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಜಿಲ್ಲೆಯಲ್ಲಿ ಅಪರಾಧ ಸಂಖ್ಯೆಗಳನ್ನು ಕಡಿಮೆ ಮಾಡಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಮಾಡುವುದಾಗಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಹೇಳಿದ್ರು. ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡು ಮಾತನಾಡಿದರು. ಇಲ್ಲಿ ಕೆಲಸ ಮಾಡೋದು ಸವಾಲು..! ಬಹುತೇಕ ಅರಣ್ಯ ಪ್ರದೇಶದಿಂದ ಕೂಡಿಕೊಂಡಿರುವ ಉತ್ತರ ಕನ್ನಡ ಜಿಲ್ಲೆ ಪ್ರಕೃತಿ ಸೌಂದರ್ಯದಿಂದ ಭರಿತವಾಗಿದೆ. ಗಡಿಭಾಗದ ಜಿಲ್ಲೆಯಾಗಿರುವುದರಿಂದ ಇಲ್ಲಿ ಕೆಲಸ ಮಾಡುವುದು ಸವಾಲಾಗಿದೆ, ಜಿಲ್ಲೆಯ ಎಲ್ಲರ ಸಹಕಾರದಿಂದ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳ ಜೊತೆಗೂಡಿ ಜನರಿಗೆ ಉತ್ತಮ ಸೇವೆ ನೀಡಲಾಗುವುದು ಎಂದರು. ನಾನು ಜಿಲ್ಲೆಗೆ ಹೊಸಬನಲ್ಲ..! ಉತ್ತರ ಕನ್ನಡ ಜಿಲ್ಲೆ ಹೊಸ ಜಿಲ್ಲೆಯಲ್ಲ. ಈ ಹಿಂದೆ ಜಿಲ್ಲೆಯ ಭಟ್ಕಳದಲ್ಲಿ ಕಾರ್ಯನಿರ್ವಹಿಸಿದ ಅನುಭವವಿದ್ದು, ಮರಳಿ ಮನೆಗೆ ಬಂದ ಹಾಗೆ ಆಗಿದೆ. ಜಿಲ್ಲೆಯ ಜನರ ರಕ್ಷಣೆ ಪೊಲೀಸ್ ಇಲಾಖೆ ಮೇಲೆ ಇದ್ದು,...
ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ NDRF ತಂಡ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್
ಕಾರವಾರ; ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಕೋರಿದ್ದು, ಈಗಾಗಲೇ ಈ ತಂಡಗಳು ಬೆಂಗಳೂರಿನಿಂದ ಹೊರಟಿವೆ. ಶುಕ್ರವಾರ ಈ ತಂಡಗಳು ಜಿಲ್ಲೆಗೆ ಆಗಮಿಸಲಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ. 2 NDRF ತಂಡ.. ಈ ಎನ್.ಡಿ.ಆರ್.ಎಫ್ ನ ಪ್ರತಿ ತಂಡದಲ್ಲಿ ತಲಾ 25 ಮಂದಿ ರಕ್ಷಣಾ ಸಿಬ್ಬಂದಿಗಳಿರಲಿದ್ದು, ಯಾವುದೇ ರೀತಿಯ ತುರ್ತು ಕಾರ್ಯಚರಣೆಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಅಗತ್ಯ ರಕ್ಷಣಾ ಸಾಧನಗಳೊಂದಿಗೆ ಬರುವ ಈ ತಂಡವನ್ನು ಕಾರವಾರ, ಕುಮಟಾ ಮತ್ತು ಅಂಕೋಲ ಭಾಗದಲ್ಲಿ ನಿಯೋಜಿಸಲಾಗುವುದು. ಸದ್ಯ 7 ಕಾಳಜಿ ಕೇಂದ್ರ ಸ್ಥಾಪನೆ..! ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ಹೊನ್ನಾವರ, ಕುಮಟಾ ಮತ್ತು ಅಂಕೋಲ ತಾಲೂಕು...
ಜಾಗ್ರತೆಯಿರಲಿ..! ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿ..!?
ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಗೆ ಮೊದಲ ಬಲಿಯಾಗಿದೆ. ಅಂಕೋಲದ ಬಾವಿಕೇರಿಯ ನಿವಾಸಿ ಹರೇ ರಾಮ್ ಗೋಪಾಲ್ ಭಟ್ (32) ಡೆಂಗ್ಯೂ ನಿಂದ? ಸಾವನ್ನಪ್ಪಿದ್ದಾರೆ. ಒಂದು ವಾರದ ಹಿಂದೆ ಡೆಂಗ್ಯೂ ನಿಂದ ಬಳಲಿ, ಬೆಳಗಾವಿಯಲ್ಲಿ ಚಿಕಿತ್ಸೆ ಪಡೆಯುತಿದ್ದ ಹರೇ ರಾಮ್ ಭಟ್, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾರೆ. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ 119 ಜನರಲ್ಲಿ ಡೆಂಗ್ಯು ಪತ್ತೆಯಾಗಿದೆ.
ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ, ದರ್ಶನ್ ಪ್ರಕರಣದಲ್ಲಿ ಆರೋಪಿ ಅಷ್ಟೆ ಅಪರಾಧಿ ಅಲ್ಲ: ದರ್ಶನ್ ಬಗ್ಗೆ ಮೌನ ಮುರಿದ ಸುಮಲತಾ ಅಂಬರೀಶ್
ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ, ದರ್ಶನ್ ಪ್ರಕರಣದಲ್ಲಿ ಆರೋಪಿ ಅಷ್ಟೆ ಇನ್ನು ಯಾವುದು ಸಾಬೀತಾಗಿಲ್ಲ ಅಥವಾ ಶಿಕ್ಷೆಯಾಗಿಲ್ಲ. ದರ್ಶನ್ ನಿರಾಪರಾಧಿ ಎಂದು ಸಾಬೀತುಪಡಿಸಿ ಹೊರ ಬರುತ್ತಾರೆ. ದರ್ಶನ್ ಬಗ್ಗೆ ಪೋಸ್ಟ್ ಹಾಕಿದ ಮಾಜಿ ಸಂಸದೆ ಸುಮಲತಾ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೊನೆಗೂ ಮೌನ ಮುರಿದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಘಟನೆ ಬಗ್ಗೆ ಸುದೀರ್ಘ ಮಾಹಿತಿ ಹಂಚಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿರುವ ಸುಮಲತಾ ಅಂಬರೀಶ್, ರೇಣುಕಾಸ್ವಾಮಿ ಕೊಲೆಗೆ ಸಂತಾಪ ಸೂಚಿಸಿದ್ದಾರೆ. ಕುಟುಂಬಕ್ಕೆ ನೋವನ್ನ ಭರಿಸುವ ಶಕ್ತಿ ದೇವರು ನೀಡಲಿ,ಅವರಿಗೆ ನ್ಯಾಯ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಘಟನೆ ನನ್ನ ಹೃದಯವನ್ನ ಛಿದ್ರಗೊಳಿಸಿದೆ, ಬಹಳ ದಿನ ಆಘಾತ ಹಾಗೂ ನೋವು ತಂದಿದೆ. ಸುಮಲತಾ ಹಾಗೂ ದರ್ಶನ್ ಸಂಬಂಧದ ಬಗ್ಗೆ ಕೂಡ ಫೋಸ್ಟ್..! ದರ್ಶನ್ ಸ್ಟಾರ್ ಆಗುವುದಕ್ಕೂ ಮೊದಲು ಪರಿಚಯ. ಸ್ಟಾರ್ ಗಿಂತ ನನ್ನ ಕುಟುಂಬದ ಸದಸ್ಯ, ಯಾವಾಗಲೂ ನನಗೆ ಮಗನಂತೆ. ನನಗೆ ತಾಯಿಯ ಗೌರವ ಮತ್ತು ಸ್ಥಾನ ಹಾಗೂ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅರ್ಭಟ, ಹಲವು ಶಾಲೆಗಳಿಗೆ ರಜೆ ಘೋಷಣೆ..! ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ..!
ಉತ್ತರ ಕನ್ನಡದಲ್ಲಿ ಮಳೆಯ ಅರ್ಭಟ ಜೋರಾಗಿದೆ. ಪರಿಣಾಮ, ಹೊನ್ನಾವರ ತಾಲೂಕಿನ ಗುಂಡಬಾಳ ನದಿಯ ನೆರೆ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಅಧಿಕಗೊಳ್ಳುತ್ತಿದೆ. ಹೀಗಾಗಿ, ಹೊನ್ನಾವರ ತಾಲೂಕಿನ ಕೆಲವು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಆದೇಶ ಹೊರಡಿಸಿದ್ದಾರೆ. ಹೊನ್ನಾವರ ತಾಲೂಕಿನ ಜನತಾ ವಿದ್ಯಾಲಯ ಅನಿಲಗೋಡ್, ಹಿರಿಯ ಪ್ರಾಥಮಿಕ ಶಾಲೆ ಅನಿಲಗೋಡ, ಗುಂಡ ಬಾಳ ನಂ-2, ಗುಂಡಿ ಬೈಲ್ ನಂ 2, ಹುಡ್ಗೋಡ ಇಟ್ಟಿಹಾದ ಪಬ್ಲಿಕ್ ಸ್ಕೂಲ್ ವಲ್ಕಿ, ಕಿರಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ..! ಗುಂಡ ಬಾಳ ನದಿಗೆ ಪ್ರವಾಹ ಹಿನ್ನಲೆಯಲ್ಲಿ, ಚಿಕ್ಕನಕೋಡ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಹರಿಜನಕೇರಿ ಮತ್ತು ಹಿತ್ತಲಕೇರಿ ಮಜೇರಿಯ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಈ ಭಾಗದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾಳಜಿ ಕೇಂದ್ರ ತೆರೆಯಲಾಗಿದೆ ಅಂತಾ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾಹಿತಿ ನೀಡಿದ್ದಾರೆ. ವಾಸ್ತವ್ಯ ಇರುವ...
ಶಿಗ್ಗಾವಿಯಲ್ಲಿ ಕೈ ಟಿಕೆಟ್ ಗಾಗಿ ಜೋರಾದ ಕಿತ್ತಾಟ, ಐಬಿಯಲ್ಲಿ ಜಾರಕಿಹೊಳಿ ಆಗಮನಕ್ಕೂ ಮುನ್ನವೇ ಕಿತ್ತಾಡಿಕೊಳ್ತಿದಾರೆ ಕೈ ಮುಖಂಡರು..!
ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೈ ಟಿಕೆಟ್ ಗಾಗಿ ಇಡೀ ಕ್ಷೇತ್ರದ ಕಾಂಗ್ರೆಸ್ ಪಾಳಯ ಬಹುತೇಕ ಇಬ್ಬಾಗವಾದಂತಾಗಿದೆ. ಅದ್ಯಾವುದೋ ಕಾಣದ ಕೈ ಇಲ್ಲಿನ ಕಾಂಗ್ರೆಸ್ ಗೆ ಕೂಸು ಹುಟ್ಟೊಕೆ ಮುಂಚೆಯೇ ಕುಲಾಯಿ ಹೊಲಿಸೋ ಮೂಡ್ ಕ್ರಿಯೇಟ್ ಮಾಡಿ ಮಜಾ ತಕ್ಕೊತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಅಂದಹಾಗೆ, ಇವತ್ತು ಸಚಿವ ಸತೀಶ ಜಾರಕೀಹೊಳಿ ಶಿಗ್ಗಾವಿಗೆ ಆಗಮಿಸುತ್ತಿದ್ದಾರೆ. ಆದ್ರೆ, ಅದಕ್ಕೂ ಮೊದಲು ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿಯೇ ನಡೆದು ಹೋಗಿದೆ. ಜಾರಕಿಹೋಳಿ ಸಾಹೇಬರ ಆಗಮನಕ್ಕೂ ಮುನ್ನವೇ ಎರಡು ಬಣಗಳ ನಡುವೆ ಕಿತ್ತಾಟ ಮಾಡಿಕೊಂಡಿವೆ. ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಣ ಮತ್ತು ಯಾಸೀರ್ ಖಾನ್ ಬಣದ ನಡುವೆ ಮಾತಿನ ಚಕಮಕಿ ನಡೆದಿದೆ. ಒಂದೆಡೆ, ಪ್ರವಾಸಿ ಮಂದಿರದ ಹೊರಗಡೆ ಬೆಂಬಲಿಗರೊಂದಿಗೆ ಅಜ್ಜಂಪೀರ್ ಖಾದ್ರಿ ಕುಳಿತಿದ್ದಾರೆ. ಅತ್ತ, ಪ್ರವಾಸಿ ಮಂದಿರದ ಒಳಗೆ ಕುಳಿತ ಯಾಸೀರ್ ಖಾನ್ ಪಠಾಣ್, ಮಾಜಿ ಎಂಎಲ್ ಸಿ ಸೋಮಣ್ಣ ಬೇವಿನಮರದ ಭಾರೀ ಚರ್ಚೆಯಲ್ಲಿ ತೊಡಗಿಕೊಂಡಿದ್ದಾರೆ.
ಲಂಚಕ್ಕಾಗಿ ಕೈಚಾಚಿದ್ದ ಹೊನ್ನಾವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ..!
ಹೊನ್ನಾವರ: ಇಲ್ಲಿನ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಖಾತಾ ಬದಲಾವಣೆಗಾಗಿ ವ್ಯಕ್ತಿ ಓರ್ವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣ ಪಂಚಾಯತದಲ್ಲಿ ನಡೆದಿದೆ. ಪಟ್ಟಣ ಪಂಚಾಯತ ಅಧಿಕಾರಿ ಪ್ರವೀಣ ಕುಮಾರ ಎಂಬುವವರು ಚಂದ್ರಹಾಸ ಎಂಬುವವರ ಬಳಿ ಜಮೀನಿಗೆ ಸಂಬಂಧಿಸಿ A ಖಾತಾ ಬದಲಾವಣೆಗಾಗಿ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ ಮೊದಲ ಹಂತವಾಗಿ ಚಂದ್ರಹಾಸ ಅವರು ಇಂದು 60ಸಾವಿರ ನಗದು ಕೊಡುತ್ತಿದ್ದ ವೇಳೆ ಲೋಕಾಯುಕ್ತರು ನಡೆಸಿದ ದಾಳಿಯ ವೇಳೆ ಸಿಕ್ಕಿಬಿದ್ದಿದ್ದಾರೆ. ಕಾರವಾರ ಲೋಕಾಯುಕ್ತ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಈ ಅಧಿಕಾರಿ ಇದೇ ರೀತಿ ಅನೇಕರಿಂದ ಲಂಚ ಪಡೆಯುತ್ತಿದ್ದ ಆರೋಪ ಕೂಡ ಹಿಂದಿನಿಂದಲ್ಲೂ ಕೇಳಿ ಬಂದಿತ್ತು. ಇದೆ ವಿಚಾರವಾಗಿ ಕೆಲ ದಿನಗಳ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಈತನಿಗೆ ತರಾಟೆಗೆ ತೆಗೆದುಕೊಂಡಿದ್ದರು.