ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಉಪ ಚುನಾವಣೆ ಘೋಷಣೆ ಆಗ್ತಿದ್ದಂತೆ, ಚುನಾವಣಾ ಪ್ರಕ್ರಿಯೆಗಳು ಜಾರಿಯಾಗಿವೆ. ಅಗಡಿಯ ವಾರ್ಡ್ ನಂಬರ್ 2 ರ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಇವತ್ತು ಬುಧವಾರ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಹೀಗಾಗಿ, ಬಹುತೇಕ ಅವಿರೋಧ ಆಯ್ಕೆಯಾಗುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. ಅಂದಹಾಗೆ, ಸದ್ಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮೀ ಹನಮಂತ ಲಮಾಣಿ ನಾಮಪತ್ರ ಸಲ್ಲಿಸಿದ್ದು, ಇವ್ರೇ ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ ಎಲ್ಲಾ ಲಕ್ಷಣಗಳು ಇದ್ದು, ಅವಿರೋಧವಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಇಲ್ಲಿನ ಮುಖಂಡರ ಸತತ ಪ್ರಯತ್ನ ಫಲಕೊಟ್ಟಿದೆ ಎನ್ನಲಾಗಿದೆ. ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಶಾಕಸ ಶಿವರಾಮ್ ಹೆಬ್ಬಾರರ ಮಾರ್ಗದರ್ಶನದಲ್ಲಿ ಸ್ಥಳೀಯ ಮುಖಂಡರಾದ ಎಚ್. ಎಂ.ನಾಯ್ಕ್, ಯುವ ಮುಖಂಡ ಬಸವರಾಜ್ ಆಸ್ತಕಟ್ಟಿ, ಗ್ರಾಮ ಪಂಚಾಯತಿ ಅಧ್ಯಕ್ಷ ಷರೀಪಸಿಂಗ್ ಸಿಗ್ಗಟ್ಟಿ, ಸದಸ್ಯರಾದ ಸಿದ್ದನಗೌಡ ಪಾಟೀಲ, ತುಕಾರಾಮ್ ಹೊನ್ನಳ್ಳಿ, ಈಶ್ವರಗೌಡ...
Top Stories
ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ
RCB ಕನಸು ಭಗ್ನಗೊಳಿಸಿದ ಸನ್ ರೈಸರ್ಸ್, ಇನ್ನೇನಿದ್ರೂ ಪಂಜಾಬ್ ಮೇಲೆ ಬೆಂಗಳೂರಿಗರ ಕಣ್ಣು..!
ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!
ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!
ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!
ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ
ಕಡಿಮೆ CIBIL ಸ್ಕೋರ್ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!
ಮುಂಗಾರಿನ ಮಳೆಗಾಲದಲ್ಲಿ ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಸಿಡಿಲಿನಿಂದ ರಕ್ಷಿಸಿಕೊಳ್ಳಿ..!
ಸಾಮ್ಯಾನವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಗುಡುಗು-ಸಿಡಿಲು ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮ್ಯಾನವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹಚ್ಚಾಗಿರುತ್ತದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಕೊಳ್ಳುವ ಮೂಲಕ ಸಿಡಿಲಿನಿಂದ ರಕ್ಷಿಸಿಕೊಳ್ಳಬಹುದಾಗಿದೆ ಗುಡುಗು-ಸಿಡಿಲಿ ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು: • ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting protocol (CAP) ಮುಖಾಂತರ ಬರುವ ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. • ಪ್ರತಿಕೂಲ ಹವಾಮಾನ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮ್ಯಾನ ಪ್ರಯಾಣಕ್ಕಾಗಿ ಹೊರಗೆ ಹೋಗದಿರುವುದು. • ಗುಡುಗು-ಸಿಡಿಲಿ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ,ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು. • ಬೆಟ್ಟಗಳು,ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು. • ನೀರಿನ ಮೂಲಗಳಾದ ಕೆರೆ ಮತ್ತು...
ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ..!
ಕಾರವಾರ: ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಶ್ಯಾಮ ಪ್ರಸಾದ ಹೇಳಿದರು. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಿದ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಬೇಸಿಗೆ ಶಿಬರವನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..! ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ಸೃಜನಾತ್ಮಕ ಕಲೆಯನ್ನು ವೃದ್ಧಿಸಲು ಇಂತಹ ಶಿಬಿರಗಳು ಸಹಾಯವಾಗಲಿದೆ. ಮಕ್ಕಳಿಗೆ ಆಟ-ಪಾಠಗಳ ಜೊತೆಗೆ ನೃತ್ಯ, ಸಾಂಸ್ಕೃತಿಕ ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಇಂತಹ ಶಿಬಿರಗಳು ಮೂಲ ಪ್ರೇರಣೆಯಾಗುತ್ತವೆ. ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ. ಮಕ್ಕಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು....
ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!
ಕಾರವಾರ ಜಿಲ್ಲೆಯಲ್ಲಿ ಸಂಭವಿಸುವ ಯಾವುದೇ ರೀತಿಯ ಪ್ರಾಕೃತಿಕ ವಿಕೋಪ ಸೇರಿದಂತೆ ಎಲ್ಲಾ ತುರ್ತು ಸಂದರ್ಭಗಳಲ್ಲಿ ಗಾಯಾಳು ಸಂತ್ರಸ್ಥರಿಗೆ ವೈದ್ಯಕೀಯ ಸೇವೆ ನೀಡುವಲ್ಲಿ ಯಾವುದೇ ವಿಳಂಬವಾಗದಂತೆ ಸದಾ ಸನ್ನದ್ದ ಸ್ಥಿತಿಯಲ್ಲಿರುವಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಮಂಗಳವಾರ ಕ್ರಿಮ್ಸ್ ನಲ್ಲಿ, ಪೊಲೀಸ್ ಇಲಾಖೆ , ಕೊಂಕಣ ರೈಲ್ವೆ, ಜಿಲ್ಲಾ ವಿಪ್ತು ನಿರ್ವಹಣಾ ಪ್ರಾಧಿಕಾರ, ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ತೇಜಸ್ ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ವಿಪತ್ತು ನಿರ್ವಹಣಾ ವಿಭಾಗ ಕರ್ಸ್ತೂಬಾ ಮೆಡಿಕಲ್ ಕಾಲೇಜು ಮಣಿಪಾಲ , ಕೈಗಾ , ಗ್ರಾಸಿಂ ಹಾಗೂ ಕಾರವಾರ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ನಡೆದ , ವಿಪತ್ತು ಸಂದರ್ಭದಲ್ಲಿ ತುರ್ತು ವೈದ್ಯಕೀಯ ನೆರವು ಒದಗಿಸುವ ಕುರಿತ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..! ಜಿಲ್ಲೆಯಲ್ಲಿ ಅನೇಕ ಸೂಕ್ಷ್ಮ ಸ್ಥಳಗಳಿದ್ದು ಮಳೆಗಾಲದ ಸಂದರ್ಭದಲ್ಲಿ...
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಮುಂಡಗೋಡ: CBSE , SSLC, ಫಲಿತಾಂಶ ಪ್ರಕಟವಾಗಿದೆ. ಮುಂಡಗೋಡಿನ ಲೊಯೊಲಾ ಕೇಂದ್ರೀಯ ವಿದ್ಯಾಲಯದ CBSE SSLC ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 100 ರಷ್ಟು ಫಲಿತಾಂಶವಾಗಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಸಂತಸ ವ್ಯಕ್ತಪಡಿಸಿದೆ. ಇನ್ನು ಮಾನಸಿ ಸಿದ್ಧಿ (500/452) 90.4 ಶೇಕಡಾ ಅಂಕಗಳೊಂದಿಗೆ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಅನ್ವೆಶ್ ನಾಯ್ಕ್ (500/443) 88.6 ಶೇಕಡಾ ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡದಿದ್ದಾನೆ. ರಿತೇಶ್ ಬಾಡ್ಕರ್ (500/442) 88.4 ಶೇಕಡಾ ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾನೆ. ಐಶ್ವರ್ಯ ವೇರ್ಣೇಕರ್-88.2%, ಮುಹಮ್ಮದ್ ಫಾಝಿಲ್- 87.6%, ದಿಶಾ ಜಾಲಗಾರ್-85.4%, ರಾಘವೇಂದ್ರ ಕಲಾಲ್ -83%, ಆದಿತ್ಯ ಚವಾಣ್- 82.2% ಕ್ರಮವಾಗಿ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಒಟ್ಟು, SSLC CBSE ಪರೀಕ್ಷೆ ಬರೆದೆ 42 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಶೇಕಡಾ 75 ರಷ್ಟು ಅಂಕದೊಂದಿಗೆ15 ವಿದ್ಯಾರ್ಥಿಗಳು, ಶೆಕಡಾ 60 ರಷ್ಟು ಅಂಕಗಳೊಂದಿಗೆ 14 ವಿದ್ಯಾರ್ಥಿಗಳು, ಶೇಕಡಾ 50...
ಕೊಲ್ಕೊತ್ತಾದ ಮೇಲೆ ದಾಳಿ ಮಾಡಿ ವಶ ಪಡಿಸಿಕೊಳ್ತಿವಿ, ಆತ್ಮಹತ್ಯಾ ಬಾಂಬ್, ತಾಲಿಬಾನಿ ಶೈಲಿಯ ದಾಳಿ ಮಾಡ್ತಿವಿ ಅಂತ ಅಂದವನು ಯಾರೀತ..?
ಬಾಂಗ್ಲಾದೇಶದ ಇಸ್ಲಾಮಿಸ್ಟ್ ಎಂದು ನಂಬಲಾದ ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ಸೇರಿದಂತೆ ತಾಲಿಬಾನ್ ಶೈಲಿಯ ತಂತ್ರಗಳನ್ನು ಬಳಸಿಕೊಂಡು ಕೋಲ್ಕತ್ತಾದ ಮೇಲೆ ದಾಳಿ ಮಾಡಿ ವಶಪಡಿಸಿಕೊಳ್ಳುವ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್’ ಎಕ್ಸ್ ಹ್ಯಾಂಡಲ್‌ನಲ್ಲಿ ಈ ವ್ಯಕ್ತಿಯ ವೀಡಿಯೊ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಆತ ತನ್ನ ಮಾತೃಭಾಷೆಯಲ್ಲಿ ಮಾತನಾಡುವುದನ್ನು ಕೇಳಬಹುದು. “ಬಾಂಗ್ಲಾದೇಶದ ಸೈನ್ಯ ಈಗ ಹೋಗಿ ಕೋಲ್ಕತ್ತಾ ವಶಪಡಿಸಿಕೊಳ್ಳಿ ಎಂದು ಹೇಳಿದರೆ, ನಾನು ಒಂದು ಯೋಜನೆ ಹಾಕುತ್ತೇನೆ. 70 ಫೈಟರ್ ಜೆಟ್‌ಗಳನ್ನು ಬಳಸುವುದನ್ನು ಮರೆತುಬಿಡಿ, ಕೋಲ್ಕತ್ತಾವನ್ನು ವಶಪಡಿಸಿಕೊಳ್ಳಲು ನಾನು ಏಳು ವಿಮಾನಗಳನ್ನು ಸಹ ಬಳಸುವುದಿಲ್ಲ. ನನಗೆ 70 ವಿಮಾನಗಳು ಏಕೆ ಬೇಕು? ಅಲ್ಲಿ ಯಾರು ವಾಸಿಸುತ್ತಾರೆ, ಪ್ರತಿಮೆಗಳನ್ನು ಪೂಜಿಸುವ ಜನರು ಎಂದು ನನಗೆ ತಿಳಿದಿದೆ” ಎಂದು ಆತ ಹಿಂದೂಗಳನ್ನು ಉಲ್ಲೇಖಿಸಿ ಹೇಳಿದ್ದಾನೆ. “ಅವರ ನೆಚ್ಚಿನ ಆಹಾರಗಳು ಮೂತ್ರ, ಸಗಣಿ ಮತ್ತು ಆಮೆಗಳಂತಹ ಕೊಳಕು ವಸ್ತುಗಳು ಎಂದು ನನಗೆ ತಿಳಿದಿದೆ, ಅವರು ಎಷ್ಟು ಕಡಿಮೆ ಅರ್ಥಮಾಡಿಕೊಳ್ಳುತ್ತಾರೆಂದು ನನಗೆ...
ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ..! ಕದನ ವಿರಾಮಕ್ಕೆ ನಾವೇ ಕಾರಣ ಅಂದ “ದೊಡ್ಡಣ್ಣ”
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಂಟಾದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೀರ್ತಿಯನ್ನು ಪಡೆದುಕೊಂಡಿದ್ದಾರೆ. ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, “ಶನಿವಾರ, ನನ್ನ ಆಡಳಿತವು ಭಾರತ ಮತ್ತು ಪಾಕಿಸ್ತಾನದ ನಡುವೆ ತಕ್ಷಣದ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಿತು. ಅದು ಶಾಶ್ವತವಾದದ್ದು ಎಂದು ನಾನು ಭಾವಿಸುತ್ತೇನೆ. ಈ ದೇಶಗಳು ಸಾಕಷ್ಟು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿವೆ” ಎಂದು ಹೇಳಿದರು. ಕದನ ವಿರಾಮದ ಕೀರ್ತಿ ತಮ್ಮದು ಎಂದು ಹೇಳಿಕೊಂಡರು. “ನಾವು ಪರಮಾಣು ಸಂಘರ್ಷವನ್ನು ನಿಲ್ಲಿಸಿದ್ದೇವೆ. ಅದು ಕೆಟ್ಟ ಪರಮಾಣು ಯುದ್ಧವಾಗಬಹುದಾಗಿತ್ತು, ಲಕ್ಷಾಂತರ ಜನರು ಕೊಲ್ಲಲ್ಪಡಬಹುದಿತ್ತು ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ನನಗೆ ಅದರ ಬಗ್ಗೆ ತುಂಬಾ ಹೆಮ್ಮೆ ಇದೆ” ಎಂದು ಟ್ರಂಪ್ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಯುದ್ಧ ಮುಂದುವರಿದರೆ ವ್ಯಾಪಾರ ನಿಲ್ಲಿಸುವುದಾಗಿ...
ಪ್ರಧಾನಿ ಮೋದಿ ಭಾಷಣ ಮುಗಿಸಿದ ಕೆಲವೇ ಹೊತ್ತಲ್ಲಿ ಜಲಂಧರ್ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ
ನವದೆಹಲಿ: ಪಂಜಾಬ್‌ನ ಜಲಂಧರ್‌ನಲ್ಲಿ ಕಣ್ಗಾವಲು ಡ್ರೋನ್ ಪತ್ತೆಯಾಗಿದ್ದು, ಅದನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ತಡೆದಿವೆ ಎಂದು ಜಲಂಧರ ಉಪ ಆಯುಕ್ತರು ತಿಳಿಸಿದ್ದಾರೆ. ಸಶಸ್ತ್ರ ಪಡೆಗಳು ರಾತ್ರಿ 9:20 ರ ಸುಮಾರಿಗೆ ಮಾಂಡ್ ಗ್ರಾಮದ ಬಳಿ ಕಣ್ಗಾವಲು ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ. ತಜ್ಞರ ತಂಡವು ಅವಶೇಷಗಳನ್ನು ಹುಡುಕುತ್ತಿದೆ” ಎಂದು ಜಲಂಧರ ಜಿಲ್ಲಾಧಿಕಾರಿ ಹಿಮಾಂಶು ಅಗರ್ವಾಲ್ ಸಂದೇಶದಲ್ಲಿ ತಿಳಿಸಿದ್ದಾರೆ. ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ ಜನರು ಅವಶೇಷಗಳ ಬಳಿ ಹೋಗಬೇಡಿ ಮತ್ತು ಏನಾದರೂ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅವರು ವಿನಂತಿಸಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ, “ಜಲಂಧರದಲ್ಲಿ ರಾತ್ರಿ 10 ಗಂಟೆಯಿಂದ ಯಾವುದೇ ಡ್ರೋನ್ ಚಟುವಟಿಕೆ ಕಂಡುಬಂದಿಲ್ಲ” ಎಂದು ಅವರು ದೃಢಪಡಿಸಿದ್ದಾರೆ. ಅಧಿಕಾರಿಗಳು ಯಾವಾಗಲೂ ಜಾಗರೂಕರಾಗಿರುತ್ತಾರೆ ಮತ್ತು ಚಿಂತಿಸಬೇಕಾಗಿಲ್ಲ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು. ಕೆಲವು ಪ್ರದೇಶಗಳಲ್ಲಿ ವರದಿಯಾಗಿರುವಂತೆ ಜನರು ಶಾಂತವಾಗಬೇಕು...
ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ
ಆಪರೇಷನ್ ಸಿಂಧೂರ ಹೆಸರಿನ ಭಾರತದ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ನಡೆಸಿದ ನಿಖರ ದಾಳಿಯ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ರಾವಲ್ಪಿಂಡಿಯಲ್ಲಿರುವ ಜನರಲ್ ಹೆಡ್‌ಕ್ವಾರ್ಟರ್ಸ್ (GHQ) ನಲ್ಲಿರುವ ಸುರಕ್ಷಿತ ಬಂಕರ್‌ಗೆ ಸ್ಥಳಾಂತರಿಸಲಾಗಿದೆ ಎಂದು ಕೆಲ ವರದಿಗಳು ತಿಳಿಸಿವೆ. ಮೂಲಗಳು ಹೇಳುವಂತೆ ಪಾಕಿಸ್ತಾನಿ ಸೇನಾ ಮುಖ್ಯಸ್ಥರನ್ನು ಸುರಕ್ಷಿತ ಬಂಕರ್‌ಗೆ ಸ್ಥಳಾಂತರಿಸಿರುವುದು ಯುದ್ಧತಂತ್ರದ ಪ್ರತಿಕ್ರಿಯೆಯನ್ನು ಮಾತ್ರವಲ್ಲದೆ, ಭಾರತದ ಪ್ರಬಲ ಭೇದಿಸುವ ಸಾಮರ್ಥ್ಯವು ಪಾಕಿಸ್ತಾನದ ಮಿಲಿಟರಿ ನಾಯಕತ್ವದ ಮೇಲೆ ಬೀರಿರುವ ಮಾನಸಿಕ ಪ್ರಭಾವವನ್ನೂ ಪ್ರತಿಬಿಂಬಿಸುತ್ತದೆ. ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಮುನೀರ್ ತಾತ್ಕಾಲಿಕವಾಗಿ ಬಂಕರ್ ನಲ್ಲಿ ಆಶ್ರಯ ಪಡೆದಿರುವುದು ಪಾಕಿಸ್ತಾನದ ಉನ್ನತ ಅಧಿಕಾರಿಗಳಲ್ಲಿ ಹೆಚ್ಚಿದ ಅಭದ್ರತೆಯ ಭಾವನೆಯನ್ನು ಒತ್ತಿಹೇಳುತ್ತದೆ. ಭವಿಷ್ಯದ ದೃಷ್ಟಿಯಿಂದ ಅವರ ಕಾರ್ಯಾಚರಣೆಯ ನೆಲೆಯನ್ನು ಸ್ಥಳಾಂತರಿಸಲಾಗುವುದು ಎಂದು ವರದಿಗಳು ಈಗ ಸೂಚಿಸುತ್ತಿವೆ. ಪಾಕಿಸ್ತಾನವು ಭಾರತದ ಮಿಲಿಟರಿ ನೆಲೆಗಳು ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ನಡೆಸಿದ ಸರಣಿ ಸಂಘಟಿತ ದಾಳಿಗಳಿಗೆ ಉತ್ತರವಾಗಿ ಭಾರತದ...
ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು, ಪ್ರತಿಭಟನೆ..!
ಬೆಳಗಾವಿ : ತಾಲೂಕಿನ ಸಂತಿಬಸ್ತವಾಡ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಗ್ರಂಥ ಕುರಾನ್ (Quran) ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಆಕ್ರೋಶ ಭುಗಿಲೆದ್ದಿದೆ. ಸಂತಿಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಆರೋಪಿಗಳ ಬಂಧನಕ್ಕಾಗಿ ತಂಡ ರಚನೆ ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು. ಸೋಮವಾರ ಪ್ರಾರ್ಥನೆ ಮಾಡಲು ಮಸೀದಿಗೆ ಆಗಮಿಸಿದ ವೇಳೆ ಕುರಾನ್, ಹದೀಸ್ ನಾಪತ್ತೆಯಾಗಿರುವುದು ಕಂಡುಬಂದಿದೆ. ಪ್ರಾರ್ಥನೆ ಮುಗಿದ ಬಳಿಕ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಬೆಳಕಿಗೆ ಬಂದಿದೆ. ಘಟನೆ ಖಂಡಿಸಿ ಬೆಳಗಾವಿ ನಗರದಲ್ಲಿ ಸಾವಿರಾರು ಮುಸ್ಲಿಂ ಸಮುದಾಯದಿಂದ ಬೃಹತ್ ಪ್ರತಿಭಟನೆ ನಡೆಯಿತು. ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..! ಬೆಳಗಾವಿ ಪೊಲೀಸ್ ಆಯುಕ್ತ ಇಯಾಡಾ ಮಾರ್ಟಿನ್...