ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಜುಲೈ ಮಾಹೆಯಲ್ಲಿ ವಾಡಿಕೆ ಮಳೆಗಿಂತ ಶೇ. 81 ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್ ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ಮಾಹೆಯಲ್ಲಿ ವಾಡಿಕೆ ಮಳೆಯ ಪ್ರಮಾಣ 993. 4 ಮಿಮಿ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ.81 ರಷ್ಟು ಅತ್ಯಧಿಕ ಮಳೆ ದಾಖಲಾಗಿದ್ದು, ಜನವರಿ 2024 ರಿಂದ ಇಲ್ಲಿಯವರೆಗೆ 1882.3 ಮಿಮಿ ವಾಡಿಕೆ ಮಳೆ ಇದ್ದು, 2745.7 ಮಿಮೀ ಮಳೆ ಸುರಿಯುವ ಮೂಲಕ ಶೇ.46 ರಷ್ಟು ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಇದುವರೆಗೆ 13 ಜೀವ ಹಾನಿ ಪ್ರಕರಣಗಳಿಗೆ 65 ಲಕ್ಷ ರೂ ಪರಿಹಾರ ನೀಡಲಾಗಿದ್ದು, ತೀವ್ರ ಮತ್ತು ಸಂಪೂರ್ಣ ಹಾನಿಯಾದ 211 ಮನೆಗಳಲ್ಲಿ 148 ಮನೆಗಳಿಗೆ 1,52,40,000 ರೂ ಗಳ ಪರಿಹಾರ ಹಾಗೂ ಭಾಗಶಃ ಹಾನಿಯಾದ 724 ಮನೆಗಳಲ್ಲಿ 449 ಮನೆಗಳಿಗೆ 24,44,000 ರೂ ಗಳ ನೆರವು ನೀಡಲಾಗಿದ್ದು, 22...
Top Stories
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ- ಅಪಾರ ಹಾನಿ, ಒಟ್ಟೂ ಹಾನಿಯ ವಿವರ ಇಲ್ಲಿದೆ ನೋಡಿ..!
ಉ. ಕನ್ನಡ ಜಿಲ್ಲೆಯಲ್ಲಿ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಅಗಷ್ಟ 3 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 4 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2, ಅಂಕೋಲ ದ 1, ಹೊನ್ನಾವರ ದ 9 ಮತ್ತು ಕುಮಟಾ ದ 2 ಸೇರಿದಂತೆ ಒಟ್ಟು 14 ಕಾಳಜಿ ಕೇಂದ್ರಗಳಲ್ಲಿ 503 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶುಕ್ರವಾರ ಅಗಷ್ಟ 2 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 13 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2, ಅಂಕೋಲ ದ 1, ಹೊನ್ನಾವರ ದ 9,ಜೋಯಿಡಾ ದ 1 ಮತ್ತು ಕುಮಟಾ ದ 1 ಸೇರಿದಂತೆ ಒಟ್ಟು 14 ಕಾಳಜಿ ಕೇಂದ್ರಗಳಲ್ಲಿ 550 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಇಂದು ಗುರುವಾರ ಶಾಲಾ ಕಾಲೇಜುಗಳಿಗೆ ಮಳೆಯ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಗುರುವಾರ ಅಗಷ್ಟ 1 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ, ಇಂದು ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಬುಧವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಬುಧವಾರ ದಿನಾಂಕ: 31 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಯರೇಬೈಲಿನ ಬೇಡ್ತಿ ಹಳ್ಳದಲ್ಲಿ ಹೆಚ್ಚಾದ ನೀರಿನ ಪ್ರಮಾಣ, ತಹಶೀಲ್ದಾರ್ ಹಾಗೂ ಜಿಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ..!
ನಿರಂತರ ಮಳೆ ಹಿನ್ನೆಲೆಯಲ್ಲಿ, ಮುಂಡಗೋಡ ತಾಲೂಕಿನ ಯರೆಬೈಲು ಬೇಡ್ತಿ ಹಳ್ಳದಲ್ಲಿ ನೀರಿನ ಪ್ರಮಾಣ ಕೊಂಚ ಜಾಸ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಡಗೋಡ ತಹಶಿಲ್ದಾರ ಶಂಕರ್ ಗೌಡಿ ಹಾಗೂ ಜಿಪಂ ಇಂಜಿನಿಯರ್ ಪ್ರದೀಪ್ ಭಟ್ಟ ಯರೆಬೈಲಿನ ಹಳ್ಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡ್ರು. ಇನ್ನು, ಸ್ಥಳೀಯರಿಗೆ ಈ ಬಗ್ಗೆ ಸೂಚನೆ ನೀಡಿದ ತಹಶೀಲ್ದಾರರು, ನೀರಿನ ಪ್ರಮಾಣ ಹೆಚ್ಚಾದರೆ ತಾಲೂಕಾಡಳಿತಕ್ಕೆ ಮಾಹಿತಿ ನೀಡುವಂತೆ ತಿಳಿಸಿದ್ರು. ದನಕರುಗಳನ್ನು ಹಳ್ಳದ ನೀರಲ್ಲಿ ಬಿಡದಂತೆ ಹಾಗೂ ಜನರು ಹಳ್ಳದಲ್ಲಿ ಇಳಿಯದಂತೆ ಸೂಚಿಸಿದ್ರು. ಸ್ಥಳೀಯ ಪಿಡಿಓ ಸೇರಿದಂತೆ ಹಲವರಿಗೆ ಎಚ್ಚರ ವಹಿಸಲು ಖಡಕ್ ಸೂಚನೆ ನೀಡಿದ್ರು.
ಶಿರಸಿ ನಗರ ಠಾಣೆ ASI ಅಶೋಕ್ ರಾಥೋಡ್ ಗೆ ಪದೋನ್ನತಿ, PSI ಆಗಿ ಚಿಕ್ಕಮಗಳೂರಿಗೆ ವರ್ಗಾವಣೆ..!
ಶಿರಸಿ ನಗರ ಠಾಣೆಯ ASI ಆಗಿ ಕಾರ್ಯನಿರ್ವಹಿಸುತ್ತಿದ್ದ, ಅಶೋಕ ರಾಥೋಡ ಇವರು ಪದೋನ್ನತಿಯೊಂದಿಗೆ PSI ಆಗಿ ಚಿಕ್ಕಮಗಳೂರಿನ ಜೈಪುರ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಈ ಮೊದಲು ಅಶೋಕ್ ರಾಥೋಡ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿಯೂ ASI ಆಗಿ ಕಾರ್ಯನಿರ್ವಹಿಸಿದ್ದರು.
ಚಿಗಳ್ಳಿಯ ಸಂಗೂರಮಠರ ಮನೆಗೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಆರೋಗ್ಯ ವಿಚಾರಣೆ..!
ಮುಂಡಗೋಡ ತಾಲೂಕಿನ ಚಿಗಳ್ಳಿಗೆ ಇಂದು ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ ನೀಡಿದ್ರು. ಹಿರಿಯ ರಾಜಕೀಯ ಧುರೀಣ ಪಿ.ಎಸ್.ಸಂಗೂರ್ ಮಠ್ ಅವರ ನಿವಾಸಕ್ಕೆ ಭೇಟಿ ನೀಡಿದ ಹೆಬ್ಬಾರ್, ಸಂಗೂರಮಠರ ಆರೋಗ್ಯ ವಿಚಾರಿಸಿದ್ರು. ಈ ವೇಳೆ ಎಚ್.ಎಂ.ನಾಯ್ಕ್, ಸಿದ್ದಪ್ಪ ಹಡಪದ, ಫಣಿರಾಜ್ ಹದಳಗಿ, ಗುಡ್ಡಪ್ಪ ಕಾತೂರು ಸೇರಿದಂತೆ ತಾಲೂಕಿನ ಹಲವು ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ರು.
ಉತ್ತರ ಕನ್ನಡದ ರಾಮನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ರಾಜ್ಯ ಡಕಾಯಿತರ ಬಂಧನ..!
ರಾಮನಗರ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ಟೀಂ ನಿಜಕ್ಕೂ ಅದ್ಭುತ ಕಾರ್ಯ ಮಾಡಿದೆ. ದರೋಡೆಗೆ ಸಂಚು ರೂಪಿಸಿ ಬಸ್ ಹತ್ತಿ ಹೊರಟಿದ್ದ, ಇಬ್ಬರು ಖತರ್ನಾಕ್ ಅಂತರ್ ರಾಜ್ಯ ದರೋಡೆಕೋರರನ್ನ ಹೆಡೆಮುರಿ ಕಟ್ಟಿದ್ದಾರೆ. ಫಿಲ್ಡಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಕ್ರಿಮಿಗಳು ಮಾತ್ರ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇನ್ನಿಬ್ಬರು ಪರಾರಿಯಾಗಿದ್ದಾರೆ. ಅನಮೋಡ್ ಚೆಕ್ ಪೊಸ್ಟ್..! ಅಂದಹಾಗೆ, ನಿನ್ನೆ ಶನಿವಾರ, ಅಂದ್ರೆ, ಜುಲೈ 27 ರಂದು ರಾಮನಗರದ ಅನಮೋಡ್ ಅಬಕಾರಿ ಚೆಕ್ ಪೊಸ್ಟ್ ನಲ್ಲಿ ಸಿಬ್ಬಂದಿಯವ್ರು ತಪಾಸಣೆ ಕಾರ್ಯ ಮಾಡ್ತಿರ್ತಾರೆ. ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡುವ ಅಕ್ರಮಿಗಳ ಮೇಲೆ ಹದ್ದಿನ ಕಣ್ಣಿಟ್ಟಿರ್ತಾರೆ. ಈ ವೇಳೆ ಪೊಲೀಸ್ರನ್ನ ನೋಡಿ ಅದೊಂದಿಷ್ಟು ಜನ ಮೆಲ್ಲಗೇ ಕಾಲ್ಕಿಳೋಕೆ ಟ್ರೈ ಮಾಡ್ತಾ ಇರ್ತಾರೆ. ಹೀಗಾಗಿ ಅಲರ್ಟ್ ಆದ ಪೊಲೀಸ್ರು ಅವ್ರನ್ನ ಬೆನ್ನತ್ತಿ ಹೋಗಿದ್ದಾಗ ಅವ್ರೇಲ್ಲ ಕಾಡಿನಲ್ಲಿ ಪರಾರಿಯಾಗಿ ಬಿಡ್ತಾರೆ. ಅವ್ರು ನಾಲ್ಕು ಜನ..! ಹೀಗಾಗಿ, ರಾತ್ರಿಯಿಡಿ ಆಗಂತುಕರಿಗಾಗಿ ಕಣ್ಣಿಟ್ಟು ಕೂತಿದ್ದ ರಾಮನಗರ ಪೊಲೀಸರಿಗೆ ಕೊನೆಗೂ ಆ...
ಶಿರೂರು ಗುಡ್ಡ ಕುಸಿತ, ಶೋಧ ಕಾರ್ಯ ಸ್ಥಗಿತವಾಗಿಲ್ಲ, ಆದ್ರೆ ಸದ್ಯ ಕಾರ್ಯಾಚರಣೆ ಮಾಡಲು ಸಾಧ್ಯವಾಗ್ತಿಲ್ಲ- ಮಂಕಾಳು ವೈದ್ಯ
ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ಪತ್ತೆ ಕಾರ್ಯಾಚರಣೆ ಸದ್ಯ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸ್ಥಗಿತವಾಗಿದೆ ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದ್ರು. ಕಳೆದ 13 ದಿನಗಳಿಂದ ಕಾರ್ಯಾಚರಣೆ ನಡೆದಿದೆ. 8 ಜನರ ಶವ ಪತ್ತೆಯಾಗಿದೆ ಇನ್ನೂ ಮೂವರ ಶವ ಪತ್ತೆಯಾಗಬೇಕಿದೆ. ಆದ್ರೆ ,ಇದು ಅಂದಾಜು ಮಾತ್ರ ಇನ್ನೂ ಎಷ್ಟು ಜನರ ಶವ ಇದೆಯೋ ಗೊತ್ತಿಲ್ಲ. ನಾವು ಪ್ರಾಮಾಣಿಕವಾಗಿ ಕಾರ್ಯಾಚರಣೆ ಮಾಡಿದ್ದಿವಿ, ಇಲ್ಲಿನ ಶಾಸಕರು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ನಾನೂ ಕೂಡ ಆರು ದಿನಗಳಿಂದ ಇಲ್ಲೇ ಇದ್ದಿನಿ. ಆರ್ಮಿ, ಅಗ್ನಿಶಾಮಕ ಸೇರಿ ಪರಿಣಿತ ತಂಡಗಳೂ ಕೂಡ ಕಾರ್ಯಾಚರಣೆ ಮಾಡಿವೆ. ಆದ್ರೆ ಇನ್ನೂ ಮೂವರ ಶವಗಳು ಪತ್ತೆಯಾಗಿಲ್ಲ. ಅದರ ಬಗ್ಗೆ ತುಂಬಾ ಬೇಸರವಿದೆ ಅಂತಾ ಮಂಕಾಳು ವೈದ್ಯ ಬೇಸರ ತೋಡಿಕೊಂಡ್ರು. ಇನ್ನು, ಪತ್ತೆಯಾದ ಎಂಟು ಶವಗಳ ಕುಟುಂಬಸ್ಥರಿಗೆ ಪರಿಹಾರದ ಹಣ ಈಗಾಗಲೇ ನೀಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಈಗಾಗಲೇ ನಾಪತ್ತೆಯಾದ ಮೂವರ ಕುಟುಂಬಗಳಿಗೂ ಪರಿಹಾರದ ಹಣ ನೀಡಲು ತಯಾರಾಗಿದ್ದೇವೆ...