ಮುಂಡಗೋಡ ತಾಲೂಕಿನ ಕಾತೂರು ಉಮ್ಮಚಗಿ ರಸ್ತೆಯ ಅಟ್ಟಣಗಿ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ತಾಯಿ ಮಗನಿಗೆ ಗಂಭೀರ ಗಾಯವಾಗಿದೆ. ಹಿಂದಿನಿಂದ ಬೈಕ್ ಗೆ ಲಾರಿ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಅಟ್ಟಣಗಿ ಗ್ರಾಮದ ಶಿವಪುತ್ರ ರಾಮಣ್ಣ ಹೋತ್ನಳ್ಳಿ (45) ಹಾಗೂ ಆತನ ತಾಯಿ ದೇವಕ್ಕ ರಾಮಣ್ಣ ಹೋತ್ನಳ್ಳಿ(70) ಗಾಯಗೊಂಡಿದ್ದಾರೆ. ಇನ್ನು, ಸ್ಥಳಕ್ಕೆ ಬಂದ 108 ಅಂಬ್ಯುಲೆನ್ಸ್ ಸಿಬ್ಬಂದಿ, ವೈದ್ಯಕೀಯ ತಂತ್ರಜ್ಞ ಧನರಾಜ್ ಮತ್ತು ಚಾಲಕ ಕೆಂಚೇಶ್ ತಕ್ಷಣ ಧಾವಿಸಿ ರೋಗಿಗಳಿಗೆ ಪ್ರಥಮ ಚಿಕಿತ್ಸೆ ಕೊಟ್ಟು ತಾಲ್ಲೂಕು ಆಸ್ಪತ್ರೆ ಮುಂಡಗೋಡಿಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ಪುರಸಭೆಯಲ್ಲಿ ಗೋಲಮಾಲ್ ಆರೋಪ, ಸಚಿವ ಶಿವಾನಂದ ಪಾಟೀಲ್ ದಿಢೀರ್ ಭೇಟಿ, ಮುಖ್ಯಾಧಿಕಾರಿಗೆ ತರಾಟೆ..!
ಶಿಗ್ಗಾವಿ ಪುರಸಭೆಗೆ ಇಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ದೀಡೀರ್ ಭೇಟಿ ನೀಡಿದ್ರು. ಶಿಗ್ಗಾವಿ ಪುರಸಭೆಯಲ್ಲಿನ ಅವಾಂತರಗಳ ಬಗ್ಗೆ ಪರಿಶೀಲನೆ ನಡೆಸಿದ್ರು. ಅಲ್ದೆ ಮುಖ್ಯಾಧಿಕಾರಿ ಸೇರಿದಂತೆ ಇನ್ನುಳಿದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ್ರು. ಸಮಸ್ಯೆಗಳ ಸರಮಾಲೆ..! ಇನ್ನು ಸಚಿವ್ರು ಪುರಸಭೆಯ ಅಂಗಳಕ್ಕೆ ಕಾಲಿಡುತ್ತಿದ್ದಂತೆ, ಸಾರ್ವಜನಿಕರಿಂದ ಪುರಾಭೆಯ ದುರಾಡಳಿತದ ಬಗ್ಗೆ ಸಮಸ್ಯೆಗಳ ಸುರಿಮಳೆಯೇ ಸುರಿಸಲಾಯಿತು. ಇನ್ನು ಸ್ಟ್ರೀಟ್ ಲೈಟ್ ಅಳವಡಿಕೆಯಲ್ಲಿ ಭಾರೀ ಗೋಲ್ ಮಾಲ್ ನಡೆದಿದೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ ಪುರಸಭೆಯ ಮುಖ್ಯಾಧಿಕಾರಿ ಸಂಗನಬಸಯ್ಯರನ್ನು ತೀವ್ರ ತರಾಟೆಗೆ ಪಡೆದ ಸಚಿವ್ರು ಗರಂ ಆದ್ರು. ಒಟ್ನಲ್ಲಿ, ಮಾಜಿ ಸಿಎಂ ಬೊಮ್ಮಾಯಿ ತವರು ಕ್ಷೇತ್ರದ ಶಿಗ್ಗಾವಿ ಪುರಸಭೆಯಲ್ಲಿ ಭಾರೀ ಬ್ರಷ್ಟಾಚಾರ, ದುರಾಡಳಿತದ ಆರೋಪಗಳು ಬಂದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರು ದಿಢೀರ್ ಭೇಟಿ ನೀಡಿದ್ದು ಸಂಚಲನ ಸೃಷ್ಟಿಸಿದೆ.
ಮುಂಡಗೋಡ PWD ಇಂಜಿನೀಯರ್ ಆಗಿದ್ದ ಎಂ.ರಾಮರಾವ್ ಹೃದಯಾಘಾತದಿಂದ ವಿಧಿವಶ..!
ಮುಂಡಗೋಡಿನ ಲೋಕೋಪಯೋಗಿ ಇಲಾಖೆಯ ಇಂಜಿನೀಯರ್ ಆಗಿ ಕಾರ್ಯನಿರ್ವಹಿಸಿದ್ದ, ಸದ್ಯ ಕಲಘಟಗಿ PWD ಉಪವಿಭಾಗದ ಸಹಾಯಕ ಇಂಜಿನೀಯರ್ ಆಗಿ ಕಾರ್ಯ ನಿರ್ವಹಿಸ್ತಿದ್ದ ಎಂ.ರಾಮರಾವ್ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದು, ಹುಬ್ಬಳ್ಳಿಯ ಸನ್ಪೋಲ್ ಚರ್ಚ್ ಹತ್ತಿರ ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಎಂ.ರಾಮರಾವ್ ರವರ ಅಂತಿಮ ಸಂಸ್ಕಾರ ನಾಳೆ ದಿನಾಂಕ 28 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಹುಬ್ಬಳ್ಳಿಯ ಗದಗ ರಸ್ತೆಯ ಸನ್ ಪೀಟರ್ ಚರ್ಚನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಅಂತಾ ಕುಟುಂಬದವರು ಮಾಹಿತಿ ನೀಡಿದ್ದಾರೆ.
ಸಮಯಕ್ಕೆ ಬಾರದ ಬಸ್ ಹುನಗುಂದದಲ್ಲಿ ವಿದ್ಯಾರ್ಥಿಗಳಿಂದ ಬಸ್ ತಡೆದು ದಿಢೀರ್ ಪ್ರತಿಭಟನೆ..!
ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ನಿತ್ಯವೂ ಶಾಲಾ, ಕಾಲೇಜಿಗೆ ತೆರಳಲು ಸಮಯಕ್ಕೆ ಸರಿಯಾಗಿ ಬಸ್ ಬಾರದ ಹಿನ್ನೆಲೆ ಸುಮಾರು 3 ತಾಸಿಗೂ ಹೆಚ್ಚು ಕಾಲ ಬಸ್ ತಡೆದು ಪ್ರತಿಭಟಿಸಿದ್ದಾರೆ. ಸೋಮವಾರ ಮುಂಜಾನೆ 7 ಗಂಟೆಯಿಂದ ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಯಾವೊಂದು ಬಸ್ಸೂ ಕೂಡ ಸಮಯಕ್ಕೆ ಸರಿಯಾಗಿ ಬರುವುದೇ ಇಲ್ಲ. ಹೀಗಾಗಿ, ನಿತ್ಯವೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡುವಂತಾಗುತ್ತದೆ. ಕೆಲವು ಸಾರಿ ಸಮಯ ಮೀರಿ ಕಾಲೆಜುಗಳಿಗೆ ವಿದ್ಯಾರ್ಥಿಗಳು ಹೋಗದೇ ಮನೆಯಲ್ಲೇ ಉಳಿಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ, ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಬಸ್ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಹಿನ್ನೆಲೆ, ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ..!
ಪುತ್ತೂರು : ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಹಿನ್ನೆಲೆಯಲ್ಲಿ ಮನನೊಂದು, ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಮೃತ ಯುವತಿ ನಿಶಾ(17) ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ಎಂದು ಗುರುತಿಸಲಾಗಿದೆ. ನಿಶಾ ಬಿ ಎಮ್ ರವರು ಪುತ್ತೂರು ನಗರ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದು ಬೇಸರದಲ್ಲಿದ್ದಳು. ಆದ್ರೆ, ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದಳು. ನಂತರ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ...
ಬಂಧಿಸಲು ಹೋದ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ, ರೌಡಿ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ ಹುಬ್ಬಳ್ಳಿ ಪೊಲೀಸರು..!
ಹುಬ್ಬಳ್ಳಿ: ಕೊಲೆ ಯತ್ನ, ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡ ರೌಡಿಯೊಬ್ಬ ಹಿಡಿಯಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಪ್ರತಿಯಾಗಿ ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಗೆ ಯತ್ನ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ಎಂಬಾತನ ಕಾಲಿಗೆ ಗುಂಡೇಟು ಬಿದ್ದಿದೆ. ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ ಗೋನಾ ತಲೆಮರೆಸಿಕೊಂಡು ತಿರುಗಾಡುತ್ತಿದ್ದ. ಶನಿವಾರ ಗದಗ ರಸ್ತೆಯಲ್ಲಿ ಈತ ಇದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಹಿಡಿಯಲು ಹೋದಾಗ, ಅವರ ಮೇಲೆ ಕಲ್ಲು ತೂರಿದ್ದಲ್ಲದೆ, ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಶಹರ ಠಾಣೆ ಇನ್ಸ್ಪೆಕ್ಟರ್ ರಫಿಕ್ ತಹಶೀಲ್ದಾರ್ ಹಲ್ಲೆಗೆ ಮುಂದಾದ ರೌಡಿಯನ್ನು ತಡೆಯಲು ಆತನ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ. ಸದ್ಯ ಗಾಯಗೊಂಡಿರೋ ರೌಡಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರೌಡಿಶೀಟರ್ ನ ದಾಳಿಯಿಂದಾಗಿ ಶಹರ ಠಾಣೆ ಪಿಎಸ್ ಐ ವಿನೋದ...
ಬಗಡಗೇರಿ ಗ್ರಾ. ಪಂಚಾಯತಿ ಸದಸ್ಯನ ಕೊಲೆ- ಇಬ್ಬರ ಬಂಧನ, ಆಸ್ತಿ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!
ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣವನ್ನು ಕಲಘಟಗಿ ಪೊಲೀಸರು ಬೇಧಿಸಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಕೊಲೆಯಾದ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ನಿಂಗಪ್ಪನ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದರು. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಓಪನ್ ನ್ಯಾಷನಲ್ ಮಾಸ್ಟರ್ ಗೇಮ್ ನಲ್ಲಿ ಸಾಧನೆ, ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಗೆ ಇಬ್ಬರು ಆಯ್ಕೆ..!
ಹುಬ್ಬಳ್ಳಿ: ಮಾಸ್ಟರ್ ಗೇಮ್ ಆಫ್ ಕರ್ನಾಟಕ ವತಿಯಿಂದ ಧಾರವಾಡದಲ್ಲಿ ಇತ್ತೀಚಿಗೆ ನಡೆದ ಓಪನ್ ಮಾಸ್ಟರ್ ಗೇಮ್ ನಲ್ಲಿ ನಿಂಗಪ್ಪ ಪುಟ್ಟಣ್ಣವರು, ಮಾರುತಿ ಬಸವರಾಜ್ ಅವರು ಉತ್ತಮ ಸಾಧನೆ ಮಾಡಿ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಗೆ ಆಯ್ಕೆಯಾಗಿದ್ದಾರೆ. ರೈಲ್ವೆ ಹೆಡ್ ಕಾನ್ಸ್ಟೇಬಲ್(RPF) ನಿಂಗಪ್ಪ ಪುಟ್ಟಣ್ಣವರು 60 ಮೀಟರ್,100 ಮೀಟರ್, 200 ಮೀಟರ್, 300 ಮಿಟರ್, 400 ಮಿಟರ್, ಲಾಂಗ್ ಜಂಪ್ ಮತ್ತು ಪುರುಷರ ರಿಲೇ 400 ಮಿಟರ್ ಮತ್ತು ಮಿಕ್ಸ್ ರಿಲೇ 400 ಮಿಟರ್ ಸ್ಪರ್ಧೆಯಲ್ಲಿ ಒಟ್ಟು ಏಳು ಚಿನ್ನದ ಪದಕ ಗಳಿಸಿದ್ದಾರೆ. ಹಾಗೂ ಇವರು ಕಬ್ಬಡಿಯ ಯುನಿವರ್ಸಿಟಿ ಬ್ಲೂ ನ್ಯಾಷನಲ್ ಕಬಡ್ಡಿ ಆಟಗಾರ ಆಗಿರುತ್ತಾರೆ. ಈ ಸಾಧನೆಗೈದ ಕ್ರೀಡಾಪಟುಗಳಿಗೆವಹಲವು ಗಣ್ಯರು ಶುಭ ಹಾರೈಸಿದ್ದಾರೆ.
ವಾಹನ ಬಿಡುಗಡೆಗೆ ಹಣದ ಬೇಡಿಕೆ, ಶಿಗ್ಗಾವಿ ಠಾಣೆ ಪೊಲೀಸಪ್ಪ ಸಸ್ಪೆಂಡ್..!
ಶಿಗ್ಗಾವಿ: ವಾಹನ ಬಿಡುಗಡೆಗೆ ಹಣದ ಬೇಡಿಕೆ ಇಟ್ಟ ಪೊಲೀಸಪ್ಪನೊಬ್ಬ ಅಮಾನತು ಗೊಂಡಿದ್ದಾನೆ. ವಾಹನ ಬಿಡುಗಡೆಗೆ ಸಾರ್ವಜನಕರಿಂದ ಹಣದ ಬೇಡಿಕೆಯನ್ನು ಇಟ್ಟ ರಮೇಶ್ ಭಜಂತ್ರಿ ಎಂಬುವವರನ್ನು ಅಮಾನತು ಮಾಡಿ ಹಾವೇರಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ರಮೇಶ ಭಜಂತ್ರಿಯನ್ನು ಅಮಾನತು ಗೊಳಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾತಿ ಅಂಶುಕುಮಾರ್, ಗುರುವಾರ ರಾತ್ರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ರಮೇಶ ಭಜಂತ್ರಿ ಪ್ರಕರಣವೊಂದರಲ್ಲಿ ವಾಹನವನ್ನು ಬಿಡುಗಡೆ ಮಾಡಲು ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕವಾಗಿ ಚರ್ಚಿಯಾಗಿತ್ತು. ಜವಾಬ್ದಾರಿಯುತ ಹುದ್ದೆಯಲ್ಲಿರುವ ಸದರಿ ಸಿಹೆಚ್ ಸಿ ರಮೇಶ ಭಜಂತ್ರಿ ಗಂಭೀರ ದುರ್ನಡತೆಯನ್ನು ಪ್ರದರ್ಶಿಸಿರುತ್ತಾರೆ. ಆದ್ದರಿಂದ ರಮೇಶ ಭಜಂತ್ರಿ, ಸಿಹೆಚ್ ಸಿ-631, ಶಿಗ್ಗಾವಿ ಪೊಲೀಸ್ ಠಾಣೆ ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತು ಮಾಡಲಾಗಿದ್ದು, ಇಲಾಖಾ ವಿಚಾರಣಾ ನಡೆಸಿ ಅವರ ಮೇಲೆ ಮುಂದಿನಕಾನೂನು ಕ್ರಮ ಜರುಗಿಸಲಾಗುವದು ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಅತ್ತಿವೇರಿ ಬಸವಧಾಮದಲ್ಲಿ ಡಿಸೆಂಬರ್ 3 ರಂದು ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ- ಮಾತೆ ಬಸವೇಶ್ವರಿ
ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ನಡೆಯಲಿದೆ. ಇದೇ ಡಿಸೆಂಬರ್ 3 ರಂದು ನಡೆಯಲಿರೋ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಳಿಯಾಳದ ಸುಮಂಗಲಾ ಅಂಗಡಿಯವರು ಆಯ್ಕೆಯಾಗಿದ್ದಾರೆ ಅಂತಾ ಅತ್ತಿವೇರಿ ಬಸವಧಾಮದ ಶ್ರೀ ಮಾತೆ ಬಸವೇಶ್ವರಿಯವರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 3 ರಂದು ಜರುಗುವ ವಚನ ಸಾಹಿತ್ಯ ಸಮ್ಮೇಳನದಲ್ಲಿ ನಾಡಿನ ಮೂವರು ಹಿರಿಯ ಶ್ರೀಗಳು ಭಾಗಿಯಾಗಲಿದ್ದಾರೆ. ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಚಿತ್ತರಗಿ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಸ್ವಾಮಿಗಳ ಸಾನಿದ್ಯದಲ್ಲಿ ಹಾಗೂ ಶ್ರೀ ನಿಜಗುಣಾನಂದ ಸ್ವಾಮಿಗಳ ಸಮ್ಮುಖದಲ್ಲಿ ಜರುಗಲಿದೆ ಅಂತಾ ಮಾತೆ ಬಸವೇಶ್ವರಿ ಮಾಹಿತಿ ನೀಡಿದ್ರು. ಶರಣರ ವಚನ ಸಾಹಿತ್ಯವನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಸಹಕಾರಿಯಾಗಲಿದೆ. ಹೀಗಾಗಿ, ಶರಣರ ವಚನ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ.