ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಗೆ ನಾಳೆ ಬುಧವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬಹುತೇಕ ಹುನಗುಂದ ಗ್ರಾಮ ಪಂಚಾಯತಿಯ ಅಧ್ಯಕ್ಷ ಗಾದಿಯಲ್ಲಿ ಅಚ್ಚರಿಯ ಅಭ್ಯರ್ಥಿ ಖುರ್ಚಿ ಏರುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. “ಅ” ವರ್ಗಕ್ಕೆ ಮೀಸಲು..! ಅಂದಹಾಗೆ, ಕಾಂಗ್ರೆಸ್ ಬೆಂಬಲಿತ 8 ಸದಸ್ಯರನ್ನು ಹೊಂದಿರೋ ಹುನಗುಂದ ಗ್ರಾಮ ಪಂಚಾಯತಿಯಲ್ಲಿ, ಬಿಜೆಪಿ ಬೆಂಬಲಿತ 6 ಜನ ಸದಸ್ಯರಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಯಲ್ಲಮ್ಮ ಇಟ್ಲಾಪುರ ಅಧ್ಯಕ್ಷರಾಗಿದ್ದರು. ಆದ್ರೆ, ಇವಾಗ ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಗೆ ಒಳ ಏಟುಗಳ ಹೊಡೆತ ಬೀಳುವ ಎಲ್ಲಾ ಸಾಧ್ಯತೆ ಇದ್ದು ಈ ಬಾರಿ ಅಚ್ಚರಿಯ ಫಲಿತಾಂಶದ ನಿರೀಕ್ಷೆ ಇದೆ. “ಅ” ವರ್ಗಕ್ಕೆ ಅಧ್ಯಕ್ಷ ಸ್ಥಾನದ ಮೀಸಲು ಘೋಷಣೆಯಾಗಿದ್ದು, ಸಾಮಾನ್ಯ ಮಹಿಳೆಗೆ ಉಪಾಧ್ಯಕ್ಷ ಪದವಿ ಮೀಸಲಾಗಿದೆ. ಹೀಗಾಗಿ, ಕಾಂಗ್ರೆಸ್ ನಲ್ಲಿ ಇಬ್ಬರು ಮಹಿಳೆಯರ ನಡುವೆ ತೀವ್ರ ಜಿದ್ದಾಜಿದ್ದು ಏರ್ಪಟ್ಟಿದ್ದು ಇವರೀರ್ವರ ಗುದ್ದಾಟದಲ್ಲಿ ಮೂರನೇ ಅಭ್ಯರ್ಥಿ ಗೆ ಪಟ್ಟ ಒಲಿಯೊ ಸಾಧ್ಯತೆ ಇದೆ....
Top Stories
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಮುಂಡಗೋಡ ತಾಲೂಕಿನ ಈ ಭಾಗಗಳಲ್ಲಿ ಇಂದು ಕರೆಂಟ್ ಇರಲ್ಲ..! ಎಲ್ಲೇಲ್ಲಿ ಗೊತ್ತಾ..?
ಮುಂಡಗೋಡ ಪಟ್ಟಣವೂ ಸೇರಿದಂತೆ, ತಾಲೂಕಿನ ಹಲವು ಭಾಗಗಳಲ್ಲಿ ಇವತ್ತು ಮಂಗಳವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮುಂಡಗೋಡ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಹೆಸ್ಕಾಂ ಮುಂಡಗೋಡ ಉಪ ವಿಭಾಗದಲ್ಲಿ 110/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಹೊಸ ಬ್ಯಾಟರಿ ಯೂನಿಟ್ ಗಳ ಅಳವಡಿಕೆ ಹಾಗೂ ತುರ್ತು ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ, ಇಂದು ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪವರ್ ಕಟ್ ಇರಲಿದೆ. ಎಲ್ಲೆಲ್ಲಿ ಪವರ್ ಕಟ್..? ಮುಂಡಗೋಡ ಪಟ್ಟಣ, ಟಿಬೇಟಿಯನ್ ಕಾಲೋನಿ, ಬಾಚಣಕಿ, ನಂದಿಕಟ್ಟಾ, ಇಂದೂರು, ಹುನಗುಂದ, ಮೈನಳ್ಳಿ, ಚೌಡಳ್ಳಿ, ಗುಂಜಾವತಿ, ಚಿಗಳ್ಳಿ ಹಾಗೂ ಸಾಲಗಾಂವ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ಇರುವುದಿಲ್ಲ. ಹೀಗಾಗಿ, ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂ ಮುಂಡಗೋಡ ಉಪವಿಭಾಗದಿಂದ ಪ್ರಕಟಣೆ ಮೂಲಕ ತಿಳಿಸಲಾಗಿದೆ.
ತಡಸ ಕತ್ರಿ ಸಮೀಪದ ನೀರಲಗಿ ಕ್ರಾಸ್ ಬಳಿ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು, ರಾ.ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ..!
ಶಿಗ್ಗಾವಿ ತಾಲೂಕಿನ ತಡಸ ಸಮೀಪದ ರಾ.ಹೆದ್ದಾರಿ 4 ರ ನೀರಲಗಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ರಸ್ತೆ ಬದಿ ನಿಂತಿದ್ದ ಇಬ್ಬರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೀಗಾಗಿ, ಅಪಘಾತದಿಂದ ಆಕ್ರೋಶಗೊಂಡ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ 4 ನ್ನು ತಡೆದು ಪ್ರತಿಭಟನೆ ನಡೆಸ್ತಿದಾರೆ. ಎನ್ ಎಮ್ ತಡಸ್ ನೀರಲಗಿ ಗ್ರಾಮದ ಚಿದಾನಂದ ನಿಂಗಪ್ಪ ಶೆರೆವಾಡ (55) ವಿರೂಪಾಕ್ಷಪ್ಪ ಕಾಳೆ(60) ಸ್ಥಳದಲ್ಲೇ ಸಾವು ಕಂಡ ದುರ್ದೈವಿಗಳಾಗಿದ್ದಾರೆ. ತಮ್ಮ ಗ್ರಾಮದಿಂದ ಬೆಳಿಗ್ಗೆ ಶಿಗ್ಗಾವಿಗೆ ತೆರಳಲು ಬಸ್ ಗಾಗಿ ಕಾಯುತ್ತ ನಿಂತಿದ್ದ ವೇಳೆ, ಹುಬ್ಬಳ್ಳಿ ಕಡೆಯಿಂದ ಬಂದ KA 22 MB 8197 ನೋಂದಣಿ ಸಂಖ್ಯೆಯ ಕಾರ್ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ. ಇಬ್ಬರೂ ಅಮಾಯಕರು ದುರಂತ ಸಾವು ಕಂಡಿದ್ದಾರೆ. ರಸ್ತೆ ತಡೆದು ಪ್ರತಿಭಟನೆ..! ಇನ್ನು ಈ ಘಟನೆ ಖಂಡಿಸಿ ಎನ್ ಎಂ ತಡಸ ನೀರಲಗಿ ಕ್ರಾಸ್ ಬಳಿ ಯುವ ಕರವೇ ಜಿಲ್ಲಾಧ್ಯಕ್ಷ ಸಂತೋಷ್ ಚಾಕಲಬ್ಬಿ ಸೇರಿ ಗ್ರಾಮಸ್ಥರು ರಾಷ್ಟ್ರೀಯ...
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ..! ಬ್ಯಾಂಕಾಕ್ ಗೆ ತೆರಳಿದ್ದಾಗಲೇ ಹಾರ್ಟ್ ಅಟ್ಯಾಕ್ ನಿಂದ ಸಾವು..!
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ಅಕಾಲಿಕ ಸಾವು ಕಂಡಿದ್ದಾರೆ. ಪತಿ ವಿಜಯ್ ರಾಘವೇಂದ್ರ ಜೊತೆಗೆ ಬ್ಯಾಂಕಾಕ್ಗೆ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಜತೆಗೆ ಲೋ ಬಿಪಿ ಕೂಡ ಇದ್ದು ಅದೂ ಕಾರಣ ಎನ್ನಲಾಗಿದೆ. ದಿಗ್ಭ್ರಮೆ..! ಇನ್ನು, ಈ ಸುದ್ದಿ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ವಿಜಯರಾಘವೇಂದ್ರ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಂ ಅವರ ಪುತ್ರಿಯಾಗಿದ್ದು ವಿಜಯ ರಾಘವೇಂದ್ರ ಅವರನ್ನು 2007, ಆಗಸ್ಟ್ 26 ರಂದು ಪ್ರೀತಿಸಿ ಮದುವೆಯಾಗಿದ್ದರು. ಇವರು 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಾಗ ಈ ದುರಂತ ನಡೆದಿದ್ದು ವಿಧಯಾಟ ಇವರ ಬಾಳಲ್ಲಿ ಭಾರೀ ಆಘಾತ ನೀಡಿದೆ.
ಎಚ್ಚರ..! ಎಚ್ಚರ..! ಮುಂಡಗೋಡ ಸಮೀಪದ ಸ್ಮಶಾನದ ಆಸುಪಾಸು ಚಿರತೆ ಬಂದಿದ್ದು ನಿಜ..! ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು, ಪರಿಶೀಲನೆ..!
ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಮುಸ್ಲಿಂ ಸಮಾಜ ಬಾಂಧವರ ಸ್ಮಶಾನದ ಆಸು ಪಾಸಿನಲ್ಲೇ ಕಳೆದ ಹಲವು ದಿನಗಳಿಂದ ಚಿರತೆಯ ಹೆಜ್ಜೆಗಳು ದಾಖಲಾಗಿವೆ. ಅದ್ರಲ್ಲೂ ನಿನ್ನೆ ಶನಿವಾರ ಸಂಜೆ ಸ್ಮಶಾನದ ಕಂಪೌಂಡಿನ ಮೇಲೆ ಚಿರತೆಯು ಸಂಚರಿಸಿದ್ದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಸದ್ಯ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. RFO ಸುರೇಶ್ ಕುಲ್ಲೊಳ್ಳಿ ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಶನಿವಾರ ಸಂಜೆ..! ಅಂದಹಾಗೆ, ಶನಿವಾರ ಸಂಜೆ ಚಿರತೆ ಕಂಪೌಂಡಿನ ಮೇಲೆ ಸಂಚರಿಸ್ತಿರೋದನ್ನು ಅಲ್ಲಿನ ರೈತರು ಹಾಗೂ ದಾರಿಹೋಕರು ಕಣ್ಣಾರೆ ಕಂಡಿದ್ದಾರೆ. ತಕ್ಷಣವೇ ತಮ್ಮ ಮೊಬೈಲ್ ಕ್ಯಾಮೆರಾ ಮೂಲಕ ಚಿರತೆಯ ದೃಷ್ಯ ಸೆರೆ ಹಿಡಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ. ಆದ್ರೆ, ಇದು ಎಲ್ಲಿಯದು..? ಅಷ್ಟಕ್ಕೂ ಇದು ಮುಂಡಗೋಡಿನದ್ದೇ ವಿಡಿಯೋನಾ ಅನ್ನೋ ಸಾಕಷ್ಟು ಅನುಮಾನಗಳಿದ್ದವು. ಹೀಗಾಗಿ, ಪಬ್ಲಿಕ್ ಫಸ್ಟ್ ಸ್ಥಳಕ್ಕೆ ಭೇಟಿ ನೀಡಿದಾಗ ಚಿರತೆ ಬಂದಿರೋದಕ್ಕೆ ಪೂರಕವಾದ ಸಾಕ್ಷಿಗಳು ಸಿಕ್ಕಂತಾಗಿದೆ....
ಮೂರು ದಿನದ ಹಸುಗೂಸನ್ನು ಆಸ್ಪತ್ರೆ ತೊಟ್ಟಿಲಲ್ಲೇ ಬಿಟ್ಟು ಹೋದ ಹೆತ್ತವರು..!
ಮುಂಡಗೋಡ: ಪಟ್ಟಣದ ಜ್ಯೋತಿ (ಕ್ರಿಶ್ಚಿಯನ್) ಆಸ್ಪತ್ರೆಯಲ್ಲಿ ಮೂರು ದಿನದ ಹಸುಗೂಸನ್ನು ಬಿಟ್ಟು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಹಾಕಲಾಗಿರೋ ವಿಶೇಷ ತೊಟ್ಟಿಲಿನಲ್ಲಿ ಮುದ್ದು ಕಂದಮ್ಮನನ್ನು ಹೆತ್ತವರೇ ಬಿಟ್ಟು ಹೋಗಿದ್ದಾರೆ. ಸದ್ಯ ಆ ಹಸುಗೂಸು ಸಂಬಂಧಪಟ್ಟ ಅಧಿಕಾರಿಗಳ ಆರೈಕೆಯಲ್ಲಿದೆ. ಬೆಳ್ಳಂ ಬೆಳಿಗ್ಗೆ..! ಅಂದಹಾಗೆ, ಆಸ್ಪತ್ರೆಯಲ್ಲಿ ಮಕ್ಕಳನ್ನು ಹೆತ್ತು, ಸಾಕಲು ಆಗದವರಿಗಾಗಿ ತೊಟ್ಟಿಲೊಂದನ್ನು ಕಟ್ಟಿಡಲಾಗಿದೆ. ಕಂದಮ್ಮಗಳನ್ನು ಸಾಕಲು ಆಗದವರು, ಆ ತೊಟ್ಟಿಲಿನಲ್ಲಿ ಇಟ್ಟು ಹೋಗಬಹುದಾಗಿದೆ. ಹಾಗಂತ ನಾಮಫಲಕವನ್ನೂ ಹಾಕಲಾಗಿದೆ. ಹೀಗಾಗಿ, ಅದ್ಯಾರೋ ಹೆತ್ತವರು ಪುಟ್ಟ ಹಸುಗೂಸನ್ನು ಶುಕ್ರವಾರ ಬೆಳ್ಳಂ ಬೆಳಿಗ್ಗೆ ತೊಟ್ಟಿಲಲ್ಲಿ ಹಾಕಿ ಹೋಗಿದ್ದಾರೆ. ಇನ್ನು, ಮಗುವನ್ನು ಗಮನಿಸಿದ ಆಸ್ಪತ್ರೆಯವರು ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಮಗುವನ್ನು ಶಿರಸಿಯ ದತ್ತು ಕೇಂದ್ರಕ್ಕೆ ನೀಡಲು ಕ್ರಮ ವಹಿಸಿದ್ದಾರೆ. ಈ ವೇಳೆ ಕ್ರೈಂ ಪಿಎಸ್ಐ ಎಚ್ ಬಿ ಕುಡಗುಂಟಿ, ಹಾಗೂ ಸಿಬ್ಬಂದಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಮುಂಡಗೋಡ ಠಾಣೆಯಲ್ಲಿ “ಮಂತ್ಲಿ” ಬಾಬತ್ತಿಗಾಗಿ ಬರಗೆಟ್ಟವನ ಕಳ್ಳಾಟಗಳು ಒಂದಾ..? ಎರಡಾ..? ಪಿಐ ಬರಮಪ್ಪ ಸಾಹೇಬ್ರೆ ಕೊಂಚ ಗಮನಿಸಿ..!
ಮುಂಡಗೋಡ ಪೊಲೀಸ್ ಠಾಣೆಗೆ ನೂತನ ಪಿಐ ಆಗಿ ಬರಮಪ್ಪ ಲೋಕಾಪುರ ಅಧಿಕಾರ ಸ್ವೀಕರಿಸಿದ್ದಾರೆ. ಜೊತೆಗೆ ತಮ್ಮ ಹೊಸ ಠಾಣೆಯ ಜವಾಬ್ದಾರಿ ಹೊತ್ತಿದ್ದಾರೆ. ಇದ್ರೊಂದಿಗೆ ಮುಂಡಗೋಡಿಗರು ಮತ್ತೊಮ್ಮೆ ಮೂಟೆ ಮೂಟೆಗಳಷ್ಟು ಭರವಸೆ ಹೊತ್ತು, ಬೆರಗುಗಣ್ಣಿನಿಂದ ಹೊಸ ಅಧಿಕಾರಿಯತ್ತ ನೋಡುತ್ತಿದ್ದಾರೆ. ಯಾಕಂದ್ರೆ, ಇತ್ತಿತ್ತಲಾಗಿ ನಮ್ಮ ಮುಂಡಗೋಡ ಪೊಲೀಸ್ ಠಾಣೆ ಅನ್ನೋದು ಅದ್ಯಾರ್ಯಾರದ್ದೋ “ರಾಜೀ” ಲೆಕ್ಕಗಳ ಅಡ್ಡೆಯಾದಂತಾಗಿತ್ತು. ಹಾಗಂತ, ನಾವು ಹೇಳ್ತಿಲ್ಲ, ಅದನ್ನೇಲ್ಲ ಕಣ್ಣಾರೆ ಕಂಡಿದ್ದ ಸಾರ್ವಜನಿಕರ ಬಹುದೊಡ್ಡ ಆರೋಪವಾಗಿತ್ತು. ಹಾಗಿದ್ರೆ ಅದೀಗ, ಬದಲಾಗತ್ತಾ..? ಬದಲಾಗಬೇಕಾದ್ರೆ ಸದ್ಯ ಮುಂಡಗೋಡ ಠಾಣೆಯಲ್ಲಿ ಏನೇನು ಬದಲಾವಣೆ ಆಗಬೇಕು..? ಇದೇಲ್ಲ ನೂತನ ಪಿಐ ಸಾಹೇಬ್ರು ಗಮನಿಸಲೇಬೇಕಿದೆ. ಇದು FIR..! ಬರಮಪ್ಪ ಲೋಕಾಪುರ, ಈಗಷ್ಟೆ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಯಶಸ್ವಿಯಾಗಿ ಕರ್ತವ್ಯ ನಿಭಾಯಿಸಿಕೊಂಡು ಬಂದಿರೋ ಪಿಐ. ಸದ್ಯ ಮುಂಡಗೋಡಿಗೆ ವರ್ಗವಾಗಿ ಬಂದಿದ್ದಾರೆ. ಹೀಗಾಗಿ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಜವಾಬ್ದಾರಿ ವಹಿಸಿಕೊಂಡ ಸಾಹೇಬ್ರಿಗೆ ಇಲ್ಲಿನ ಕೆಲವೊಂದಿಷ್ಟು ಒಳ ಹೊರಗಿನ ಮಾಹಿತಿಗಳನ್ನು ನೀಡಲೇ ಬೇಕಿದೆ. ತಾಲೂಕಿನ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನೂತನ ಪಿಐ ಸಾಹೇಬ್ರು...
ಮುಂಡಗೋಡ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ್ ಅಧಿಕಾರ ಸ್ವೀಕಾರ..!
ಮುಂಡಗೋಡ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಮಂಗಳವಾರ ರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿ ಸಿಪಿಐ ಆಗಿದ್ದ ಸಿದ್ದಪ್ಪ ಸಿಮಾನಿಯವರಿಗೆ ಸರ್ಕಾರ ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಲೋಕಾಪುರ್ ರವರನ್ನು ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್, ಕ್ರೈಂ ಪಿಎಸ್ಐ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.
ಹಳೂರಿನಲ್ಲಿ ಬೆಂಕಿ ಅವಘಡದಿಂದ 7 ಹಸುಗಳನ್ನು ಕಳೆದುಕೊಂಡಿದ್ದ ಮಾಲೀಕರಿಗೆ ಪರಿಹಾರದ ಚೆಕ್ ವಿತರಣೆ..!
ಮುಂಡಗೋಡ ಪಟ್ಟಣದ ಹಳೂರು ಓಣಿಯಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ನೊಂದವರಿಗೆ ಪರಿಹಾರ ವಿತರಿಸಲಾಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಬರೋಬ್ಬರಿ 7 ಜಾನುವಾರುಗಳು ಸಜೀವ ದಹನಗೊಂಡ ಹಿನ್ನೆಲೆಯಲ್ಲಿ, ಹಸುಗಳ ಮಾಲೀಕರಿಗೆ ಶಾಸಕ ಶಿವರಾಮ್ ಹೆಬ್ಬಾರ್ ಚೆಕ್ ವಿತರಿಸಿದ್ರು. ಅಂದಹಾಗೆ, ಬುಧವಾರ ಬೆಳಿಗ್ಗೆ ಹಳೂರಿನ ಹಸುಗಳ ಮಾಲೀಕ ಮಂಜುನಾಥ್ ಶೇಟ್ ಮನೆಗೆ ತೆರಳಿದ ಶಾಸಕರು, ಕೆ.ಡಿ.ಸಿ.ಸಿ ಬ್ಯಾಂಕ್ ನ ರೈತ ಕಲ್ಯಾಣ ನಿಧಿಯಿಂದ 1 ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್ ಅನ್ನು ಹಸ್ತಾಂತರಿಸಿದರು.
ಮುಂಡಗೋಡ ಸಿಪಿಐ ಸಿದ್ದಪ್ಪ ಸಿಮಾನಿ ಎತ್ತಂಗಡಿ..! ಹೊಸ ಸಿಪಿಐ ಯಾರು ಗೊತ್ತಾ..?
ಮುಂಡಗೋಡ ಪೊಲೀಸ್ ಠಾಣೆಯ ಸಿಪಿಐ ಸಿದ್ದಪ್ಪ ಸಿಮಾನಿ ಎತ್ತಂಗಡಿಯಾಗಿದ್ದಾರೆ. ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಆಗಮಿಸುತ್ತಿದ್ದಾರೆ. ಹಾಗಂತ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ.