ಮುಂಡಗೋಡಿನಲ್ಲಿ ಮಾರ್ಚ 20, ರ ಸೋಮವಾರ ಬಿಜೆಪಿಯ ಬೃಹತ್ ಸಮಾವೇಶ ನಡೆಯುತ್ತಿದೆ. ಈ ಮೂಲಕ ಕ್ಷೇತ್ರದಲ್ಲಿ ಕಮಲಪಡೆಗೆ ಬೂಸ್ಟ್ ನೀಡುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಏನಿಲ್ಲವೆಂದರೂ 10 ರಿಂದ 15 ಸಾವಿರ ಜನ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂತಾ ಈಗಾಗಲೇ ಸಾರಿ ಸಾರಿ ಹೇಳಿದೆ ಇಲ್ಲಿನ ಕಮಲ ಪಡೆ. ಖದರ್ರೇ ಬದಲಾಗತ್ತಾ..? ಅಷ್ಟಕ್ಕೂ, ಸದ್ಯದ ಮಟ್ಟಿಗೆ ಯಲ್ಲಾಪುರ ಕ್ಷೇತ್ರದಲ್ಲಿ, ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ಈ ಚುನಾವಣೆ ದೃಷ್ಟಿ ಇಟ್ಟುಕೊಂಡು ಇದುವರೆಗೂ ಹೇಳಿಕೊಳ್ಳುವಂತ ಯಾವುದೇ ಸಮಾವೇಶಗಳು ಆಗಿಲ್ಲ. ಬರೀ ಪಟ್ಟಾ ವಿತರಣೆ, ಗುದ್ದಲಿ ಪೂಜೆಗಳು ಅದು ಇದೂ ಅಂತಾ ಒಂದಿಷ್ಟು ಕಾರ್ಯಕ್ರಮ ನಡೆದು ಹೋಗಿವೆ. ಆದ್ರೆ, ಸೋಮವಾರ ನಡೆಯೋ ಸಮಾವೇಶ ಬಿಜೆಪಿ ಪಾಲಿಗೆ ಬೂಸ್ಟ್ ನೀಡತ್ತಾ..? ಆಡಳಿತ ವಿರೋಧಿ ಅಲೆಯ ನಡುವೆಯೂ, ಈ ಸಮಾವೇಶ ಬಿಜೆಪಿಯ ಖದರ್ರು ಬದಲಿಸತ್ತಾ..? ಕಾದು ನೋಡಬೇಕಿದೆ. ಕಾರ್ಯಕರ್ತರ ಶಕ್ತಿ..! ಅಂದಹಾಗೆ, ಯಾವಾಗ ಬಿಜೆಪಿ ಸಮಾವೇಶ ನಡೆಸಲು ಉದ್ದೇಶಿಸಲಾಯ್ತೋ ಆ ಕ್ಷಣದಿಂದಲೇ ಮುಂಡಗೋಡಿನ ಬಿಜೆಪಿ ಯುವ ಕಾರ್ಯಕರ್ತರು...
Top Stories
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಬ್ರಷ್ಟಾಚಾರ ಆರೋಪ, ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆ..!
ಶಿಗ್ಗಾವಿ: ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬಿಜೆಪಿ ಸರ್ಕಾರದ ಬ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತ ಪಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಶಿಗ್ಗಾವಿ ಸವಣೂರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಲಾಯಿತು. ಪಟ್ಟಣದ ಚನ್ನಮ್ನಾ ಸರ್ಕಲ್ ನಿಂದ ವಿವಿದ ಬಿದಿಗಳಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ, ಮುಖ್ಯಮಂತ್ರಿಗಳ ಸ್ವಕ್ಷೇತ್ರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ, ಮತ್ತು 40% ಸರ್ಕಾರ ಅಂತಾ ಆರೋಪಿಸಿ ಸಿಎಂ ತವರು ನೆಲದಲ್ಲೇ ಸಿಎಂ ವಿರುದ್ಧ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿತ್ತು. ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಬಹುತೇಕ ಸರ್ಕಾರಿ ಇಲಾಖೆಗಳಲ್ಲಿ, ಮಾತು ಮಾತಲ್ಲೆ ಭ್ರಷ್ಟಾಚಾರ ನಡೆಯುತ್ತಿದೆ ಅಂತಾ ಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷರು ಹಾಗೂ ಯುವ ಕಾಂಗ್ರೆಸ್ ತಾಲೂಕಾ ಅದ್ಯಕ್ಷರು ಸರ್ವ ಸದಸ್ಯರು ಆಕ್ರೋಶ ಹೊರಹಾಕಿದ್ರು. ಬ್ತಷ್ಟಾಚಾರದ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿ ನಾಮಫಲಕ ಪ್ರದರ್ಶನ...
ಮುಂಡಗೋಡಿನಲ್ಲಿ ಮಾ.20 ರ ಸೋಮವಾರ ಬಿಜೆಪಿ ಸುನಾಮಿ ಏಳಲಿದೆ- ಗುಡ್ಡಪ್ಪ ಕಾತೂರ್
ಮುಂಡಗೋಡ: ಮಾರ್ಚ 20 ರ ಸೋಮವಾರ ಮುಂಡಗೋಡಿನಲ್ಲಿ ಬಿಜೆಪಿ ಸುನಾಮಿ ಏಳಲಿದೆ, ಆ ಸುನಾಮಿಯಲ್ಲಿ ಎದುರಾಳಿಗಳು ಕೊಚ್ಚಿ ಹೋಗಲಿದ್ದಾರೆ ಅಂತಾ ಬಿಜೆಪಿ ಮುಖಂಡ ಗುಡ್ಡಪ್ಪ ಕಾತೂರ ವಿಶ್ವಾಸ ವ್ಯಕ್ತ ಪಡಿಸಿದ್ರು. ಅವ್ರು ಕರಗಿನಕೊಪ್ಪದ ಬಳಿ ಬಿಜೆಪಿ ಸಮಾವೇಶದ ಮೈದಾನದಲ್ಲಿ ಸಮಾವೇಶದ ಪೂರ್ವ ತಯಾರಿ ಕುರಿತು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ರು. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ಮಾಡಿರೋ ಅಭಿವೃದ್ಧಿ ಪರ ಕಾರ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇದೇ ಬರುವ ಸೋಮವಾರ ಮಾರ್ಚ 20 ರಂದು ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೂ ಮುನ್ನ ಸುಮಾರು 5 ಸಾವಿರ ಬೈಕ್ ಗಳ ಮೂಲಕ ಪಟ್ಟಣದ ಅಯ್ಯಪ್ಪ ಸೇವಸ್ಥಾನದಿಂದ ಬೃಹತ್ ಬೈಕ್ ರ್ಯಾಲಿ ಮೂಲಕ ಸಚಿವ ಶಿವರಾಮ್ ಹೆಬ್ಬಾರ್ ರವರನ್ನು ಮೆರವಣಿಗೆ ಮಾಡಿ ಸಮಾವೇಶದ ವೇದಿಕೆಗೆ ಕರೆತರಲಾಗುತ್ತದೆ ಅಂತಾ ಗುಡ್ಡಪ್ಪ ಕಾತೂರ್ ಮಾಹಿತಿ ನೀಡಿದ್ರು. 10 ಎಕರೆ ಪ್ರದೇಶದಲ್ಲಿ.. ಅಂದಹಾಗೆ, ಮುಂಡಗೋಡ ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಶಿಜ್ಷಣ ಸಂಸ್ಥೆಯ ಸಮೀಪದ...
ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಗಡಿಭಾಗ ಹಾಗೂ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಚಿಗಳ್ಳಿಯ ಯುವಕನೋರ್ವ ಸ್ಥಳದಲ್ಲೇ ಮೃತಟ್ಟಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಯಲ್ಲಪ್ಪ ಕಡೆಮನಿ(40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಇವತ್ತು ತನ್ನ ಅಳಿಯನೊಂದಿಗೆ ಬೈಕ್ ಏರಿ ಹಾನಗಲ್ ಗೆ ಹೋಗಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ ಯಲ್ಲಪ್ಪ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಬೈಕ್ ಹಿಂಬದಿ ಕುಳಿತಿದ್ದ ಅಳಿಯನಿಗೆ ಗಂಭೀರ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಹಾನಗಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಇನ್ನು, ಅಪಘಾತದಲ್ಲಿ ಡಿಕ್ಕಿ ಹೊಡೆದ ಮತ್ತೊಂದು ಬೈಕ್ ಸವಾರರು ಕೂಸನೂರು ಗ್ರಾಮದವರಾಗಿದ್ದು ಅವ್ರ ಸ್ಥಿತಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಹಾನಗಲ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!
ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಜ್ಯೋತಿ ಹಾಗೂ ಕಾರ್ ಚಾಲಕನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ಪೊಲೀಸ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.. ವಿಜಯಪುರ ನಗರದಲ್ಲಿ ಇಂದು ನಡೆದ ಬಿಜೆಪಿ ಮಹಿಳಾ ಸಮಾವೇಶ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವೆ, ಕಾರ್ಯಕ್ರಮಗಳ ಬಳಿಕ ಬಾಗಲಕೋಟೆಯತ್ತ ಪ್ರಯಾಣ ಬೆಳೆಸುತ್ತಿದ್ದರು. ಇನ್ನು ಅಪಘಾತದ ಪರಿಣಾಮ ಎನ್ಎಚ್ 50 ಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ....
ದಾವಣಗೇರೆಯಲ್ಲಿ ಕೊಲೆಮಾಡಿ ಶಿಗ್ಗಾವಿಯಲ್ಲಿ ಸರೆಂಡರ್ ಆದ ಶಿವಮೊಗ್ಗದ ಆರೋಪಿಗಳು..!
ಶಿಗ್ಗಾವಿ: ದಾವಣಗೇರೆ ಜಿಲ್ಲೆಯಲ್ಲಿ ಮರ್ಡರ್ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳು ಶಿಗ್ಗಾವಿ ಪೊಲೀಸರಿಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆ ಚೀಲೂರು ಸಮೀಪದ ಗೋವಿನ ಕೋವಿ ಬಳಿ ನಿನ್ನೆ ಸಂಜೆ ಆಂಜನೇಯ ಎಂಬಾತನ ಹತ್ಯೆಯಾಗಿತ್ತು. ಅಂದಹಾಗೆ, ಹಂದಿ ಅಣ್ಣಿ ಕೊಲೆ ಆರೋಪಿಗಳಾದ ಆಂಜನೇಯ ಹಾಗೂ ಮಧು ಎಂಬುವರ ಮೇಲೆ ನಿನ್ನೆ ಸಂಜೆ ಹಲ್ಲೆ ನಡೆದಿತ್ತು. ಈ ವೇಳೆ ಆಂಜನೇಯ ಎಂಬುವವರ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮಧು ಎಂಬುವವ ಗಂಭೀರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಂಜನೇಯನನ್ನು ಕೊಲೆ ಮಾಡಿದ ಆರೋಪಿಗಳು ನಿನ್ನೆ ರಾತ್ರಿಯೇ ಶಿಗ್ಗಾವಿಗೆ ತೆರಳಿ ಪೊಲೀಸರ ಎದುರು ಶರಣಾಗಿದ್ದಾರೆ ಎನ್ನಲಾಗಿದೆ. ಸುನೀಲ್ ಅಲಿಯಾಸ್ ತಮಿಳ್ ಸುನೀಲ್, ಅಭಿಲಾಷ್, ವೆಂಕಟೇಶ್ ಮತ್ತು ಪವನ್ ಎಂಬವರು ಸರೆಂಡರ್ ಆದವರು. ಈ ನಾಲ್ವರು ಶಿವಮೊಗ್ಗ ಮೂಲದವರಾಗಿದ್ದು, ಹಂದಿ ಅಣ್ಣ ಸಹಚರರು ಎನ್ನಲಾಗುತ್ತಿದೆ.
ಮುಂಡಗೋಡ ಅರಣ್ಯದಲ್ಲಿ ಗಾಯಗೊಂಡಿದ್ದ ಆನೆ ಕಲಘಟಗಿ ಕಾಡಲ್ಲಿ ಸಾವು..!
ಮುಂಡಗೋಡ: ಕಳೆದ ಹಲವು ದಿನಗಳಿಂದ ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯದಿಂದ ಬಳಲುತ್ತಿದ್ದ 4 ವರ್ಷದ ಗಂಡು ಆನೆ ಮೃತಪಟ್ಟಿದೆ. ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಪಂ ವ್ಯಾಪ್ತಿಯ ಮಸಳಿಕಟ್ಟಿ ಅರಣ್ಯ ಪ್ರದೇಶದಲ್ಲಿ ಗಂಡು ಆನೆ ಸಾವನ್ನಪ್ಪಿದೆ. ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡಲು ಪ್ರಯತ್ನಿಸಲಾಗಿತ್ತು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಕಲಘಟಗಿ ತಾಲೂಕಿನ ಅರಣ್ಯಕ್ಕೆ ಬಂದಿತ್ತು. ಸೊಂಡಿಲು ಬಳಿ ಗಾಯಗೊಂಡಿದ್ದ ಆನೆಗೆ ಆಹಾರ ಸೇವಿಸಲು ಕಷ್ಟಪಡುತ್ತಿತ್ತು. ಇದನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ನೀಡಿ ಆರೈಕೆ ಮಾಡಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆನೆ ಮೃತಪಟ್ಟಿದೆ. ಅಂದಹಾಗೆ, ಮೂರು ತಿಂಗಳ ಹಿಂದೆ ಕಲಘಟಗಿ ಅರಣ್ಯ ಪ್ರದೇಶದಲ್ಲಿ ಇಂತದ್ದೇ ಆನೆಮರಿಯೊಂದು ಮೃತಪಟ್ಟಿತ್ತು. ಹೀಗಾಗಿ ಇದು ಎರಡನೇ ಘಟನೆ ಆಗಿದೆ. ಮೃತ ಆನೆ 4 ವರ್ಷದ ಗಂಡು ಸಲಗ ಅರಣ್ಯದಲ್ಲಿ ಆಹಾರ ಸೇವನೆ ವೇಳೆ ಸೊಂಡಿಲು ಗಾಯ ಮಾಡಿಕೊಂಡಿತ್ತು. ಅರಣ್ಯ ಸಿಬ್ಬಂದಿ ಚಿಕಿತ್ಸೆ-ಆರೈಕೆ ನೀಡಿದ್ದರು. ಇನ್ನೂ ಹೆಚ್ಚಿನ ಚಿಕಿತ್ಸೆಗೆ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿ ಸೇರಿದಂತೆ ಅರ್ಧ ಕೇಜಿಯಷ್ಟು ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಶಿವಮೊಗ್ಗ ಜಿಲ್ಲೆ ಸಾಗರದ ಮಹಮದ್ ಫಾರುಕ್ ತಂದೆ ನಜೀರ್ ಅಹಮ್ಮದ್ ಅರಮನಿಕೆರಿ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ಅರ್ದ ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ಪಿಎಸ್ಐ ಯಲ್ಲಾಲಿಂಗ ಕುನ್ನೂರು, ಕ್ರೈಂ ಪಿಎಸ್ ಐ ಎನ್.ಡಿ.ಜಕ್ಕಣ್ಣವರ್, ಸಿಬ್ಬಂದಿಗಳಾದ ರಾಜೇಶ್ ನಾಯಕ್, ಕೊಟೇಶ್ ನಾಗರಳ್ಳಿ, ಅಣ್ಣಪ್ಪ ಬುಡಗೇರ, ತಿರುಪತಿ ಚೌಡಣ್ಣವರ್, ಮಹಾಂತೇಶ್ ಮುದೋಳ್, ಸಂಜು ರಾಠೋಡ್ ದಾಳಿಯಲ್ಲಿ ಭಾಗಿಯಾಗಿದ್ರು.
ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ..!
ಬೆಂಗಳೂರು : 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಈ ಬಗ್ಗೆ ಹೈಕೋರ್ಟ್ ಇಂದು ತುರ್ತು ವಿಚಾರಣೆ ನಡೆಸಿತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ವಿಚಾರಣೆಯನ್ನು ಮಾ.14 ಕ್ಕೆ ಮುಂದೂಡಿ ಆದೇಶಿಸಿದೆ. ಈ ನಡುವೆ ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುವುದು ಎಂದು ರಾಜ್ಯ ರಾಜ್ಯ ಸರ್ಕಾರ ಹೇಳಿದೆ. ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು, ಆದರೆ ನಿನ್ನೆ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು. ಮುಂದಿನ ವರ್ಷದಿಂದ ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಹೇಳಿದೆ....
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ವಿಧಿವಶ..!
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರುವೆಳೆದಿರೋ ಆರ್. ದ್ರುವನಾರಾಯಣ್ ಕಾಂಗ್ರೆಸ್ ಶಾಸಕರಾಗಿ ಸಂತೇಮರಳ್ಳಿ ಕ್ಷೇತ್ರದಿಂದ ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದರು. ಚಾಮರಾಜನಗರ ಮಾಜಿ ಸಂಸದರಾಗಿದ್ದ ಆರ್.ಧ್ರುವನಾರಾಯಣ್, ಚಾಮರಾಜನಗರ ಜಿಲ್ಲೆ, ಹೆಗ್ಗವಾಡಿಯಲ್ಲಿ 31 ಜುಲೈ 1961ರಲ್ಲಿ ಜನಿಸಿದ್ದರು. ಅವ್ರುಗೆ 61 ವರ್ಷ ವಯಸ್ಸಾಗಿತ್ತು. ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ. (ಕೃಷಿ), ಎಂ.ಎಸ್ಸಿ. (ಕೃಷಿ) ಪದವಿ ಪಡೆದಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದ್ರುವನಾರಾಯಣ ನಿಧನಕ್ಕೆ ರಾಜ್ಯ ಹಾಗೂ ರಾಷ್ಟ್ರದ ಹಲವು ಮುಖಂಡರು ಕಂಬನಿ ಮಿಡಿದಿದ್ದಾರೆ.