ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಹಿನ್ನೆಲೆ, ಹಿಂದು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, ಪೊಲೀಸ್ ಸರ್ಪಗಾವಲು..!

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಹಿನ್ನೆಲೆ, ಹಿಂದು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, ಪೊಲೀಸ್ ಸರ್ಪಗಾವಲು..!

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಕೇಸ್ ಗೆ ಸಂಬಂಧಿಸಿದಂತೆ, ಇಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಹೀಗಾಗಿ, ಹುಬ್ಬಳ್ಳಿಯ ಬಿವಿಬಿ‌ ಕಾಲೇಜ್ ನಲ್ಲಿ‌ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ರಾಜೀವ ಅವರ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿವಿಬಿ ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ. ಇನ್ನು ಬಂದೊಬಸ್ತಗಾಗಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, 3 ಸಿಪಿಐ, 5 ಪಿಎಸ್ಐ ಹಾಗೂ 50 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.  

ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!

ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!

ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್‌ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಸಂಬಂಧಿಗಳು ಆಗಮಿಸಿದ್ದರು. ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳ ಕೊಲೆ ಮಾಡಲಾಗಿದೆ. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಿದ್ದ ಕುಟುಂಬಸ್ಥರು‌. ಪೊಲೀಸರಿಗೆ ಫೋನ್ ಮಾಡ್ತಾಯಿದ್ದಂತೆ ಎಸ್ಕೇಪ್ ಆದ ದುಷ್ಕರ್ಮಿಗಳು. ಬಾಗಿಲು ತೆಗೆದಿದ್ರೆ ನಮ್ಮನ್ನು ಕೊಲೆ ಮಾಡುತ್ತಿದ್ರು ಅಂತಾ ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ. ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ ನಡೆಸಲಾಗಿದೆ....

ಕಾಲೇಜ್‌ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ,  ಯುವಕನ ಬಂಧನ..! ಪ್ರತಿಭಟನೆ

ಕಾಲೇಜ್‌ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ, ಯುವಕನ ಬಂಧನ..! ಪ್ರತಿಭಟನೆ

ಹುಬ್ಬಳ್ಳಿ:ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರುವ ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ ನೇಹಾ ಬೆನ್ನು ಬಿದ್ದಿದ್ದ. ಆದರೆ ನೇಹಾ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ಫಯಾಜ್‌ನ್‌ನ್ನು ಅಲ್ಲಿದ್ದ ವ್ಯಕ್ತಿಗಳು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಈಗ ಫಯಾಜ್‌ನನ್ನು ಬಂಧಿಸಿದ್ದಾರೆ.  ಪ್ರತಿಭಟನೆ..! ಇನ್ನು, ಘಟನೆ ಖಂಡಿಸಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಹು-ಧಾರವಾಡ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ...

ಮುಂಡಗೋಡ ತಾಲೂಕಿನಲ್ಲಿ ಭಾರಿ ಮಳೆ ಗಾಳಿಗೆ ಅವಾಂತರ, ಸಿಡಿಲಿನ ಅರ್ಭಟಕ್ಕೆ ಮರಕ್ಕೆ ಬೆಂಕಿ, ಧರೆಗುರುಳಿದ ಮರಗಳು, ರಸ್ತೆ ಬಂದ್..!

ಮುಂಡಗೋಡ ತಾಲೂಕಿನಲ್ಲಿ ಭಾರಿ ಮಳೆ ಗಾಳಿಗೆ ಅವಾಂತರ, ಸಿಡಿಲಿನ ಅರ್ಭಟಕ್ಕೆ ಮರಕ್ಕೆ ಬೆಂಕಿ, ಧರೆಗುರುಳಿದ ಮರಗಳು, ರಸ್ತೆ ಬಂದ್..!

 ಮುಂಡಗೋಡ ತಾಲೂಕಿನಾಧ್ಯಂತ ಭಾರೀ ಮಳೆಯಾಗಿದೆ. ಬಿರುಗಾಳಿ ಸಮೇತ ಒನಮದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಅಲ್ಲಿ ಅನಾಹುತಗಳಾಗಿವೆ. ಮಳೆ ಗಾಳಿಗೆ ಹಲವು ಕಡೆ ಮರಗಳು ಧರೆಗುರುಳಿವೆ ಪರಿಣಾಮ ಕೆಲವು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ರಸ್ತೆ ಬಂದ್..! ಮುಂಡಗೋಡ ಕಲಘಟಗಿ ರಸ್ತೆಯಲ್ಲಿ ಮಳೆಗಾಳಿಗೆ ಎರಡು ಕಡೆ ಮರಗಳು ನೆಲಕ್ಕುರುಳಿದ್ದು ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಅದ್ರಂತೆ, ಮುಂಡಗೋಡ ಪಟ್ಟಣದ ಹಲವು ಕಡೆ ಮರಗಳು ಧರೆಗುರುಳಿದೆ. ಹೀಗಾಗಿ, ಕೆಲವುವಕಡೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಜ್ಜಿಗೇರಿಯಲ್ಲಿ ಮನೆಗಳಿಗೆ ಹಾನಿ..! ಇನ್ನು, ಭಾರೀ ಮಳೆ ಗಾಳಿಗೆ ಮಜ್ಜಿಗೇರಿಯಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ. ಮನೆಯ ಮೇಲ್ಚಾವಣಿಗಳು ಗಾಳಿಗೆ ಹಾರಿ ಬಿದ್ದಿರೋ ಮಾಹಿತಿ ಲಭ್ಯವಾಗಿದೆ. ತೆಂಗಿನ ಮರಕ್ಕೆ ಸಿಡಿಲು..! ಅದ್ರಂತೆ, ತಾಲೂಕಿನ ಹುನಗುಂದದಲ್ಲಿ ತೆಂಗಿನ ಮರಕ್ಕೆ ಸಿಡಿಲು ಹೊಡೆದು ಹೊತ್ತಿ ಉರಿದ ಘಟನೆಯೂ ನಡೆದಿದೆ. ಒಟ್ನಲ್ಲಿ, ತಾಲೂಕಿನಾಧ್ಯಂತ ಸುರಿದ ಭಾರೀ ಮಳೆಗಾಳಿಗೆ ಹಲವು ಅವಾಂತರಗಳು ಸಂಭವಿಸಿದ್ದು ಇನ್ನೂ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ‌.

ಮುಂಡಗೋಡ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!

ಮುಂಡಗೋಡ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!

ಮುಂಡಗೋಡ ಬಿಜೆಪಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ ಹಾಗೂ ಎಪ್ರೀಲ್ 29 ರಂದು ಅಂಕೋಲದಲ್ಲಿ ನಡೆಯುವ ಯುವಶಕ್ತಿ ಸಮಾವೇಶದಲ್ಲಿ ಭಾಗಿಯಾಗುವ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು.   ಈ ವೇಳೆ ಮುಂಡಗೋಡ ಮಂಡಲದ ಅಧ್ಯಕ್ಷ ಮಂಜುನಾಥ ಪಾಟೀಲ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ ಕುಮಾರ್ ನಾಯ್ಕ್, ನಿಕಟಪೂರ್ವ ರೈತ ಮೋರ್ಚಾ ಅಧ್ಯಕ್ಷ ಮಹೇಶ ಹೊಸಕೊಪ್ಪ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಟಣಕೇದಾರ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ವಿಠ್ಠಲ ಬಾಳಂಬಿಡ ಹಾಗೂ ಭರತ್ ರಾಜ್ ಹದಳಗಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕೆದಾರಿ ಮುಗಳಿ ಹಾಗೂ ಮಂಜುನಾಥ ರೇವಣಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮುಂಡಗೋಡ ಚುನಾವಣಾ ಚೆಕ್ ಪೋಸ್ಟ್ ಗಳಲ್ಲಿ ಸೌಕರ್ಯಗಳೇ ಇಲ್ಲ..! ರಣ ಬಿಸಿಲಲ್ಲೇ ಬಸವಳಿತಿದ್ದಾರೆ ಸಿಬ್ಬಂದಿಗಳು..!!

ಮುಂಡಗೋಡ ಚುನಾವಣಾ ಚೆಕ್ ಪೋಸ್ಟ್ ಗಳಲ್ಲಿ ಸೌಕರ್ಯಗಳೇ ಇಲ್ಲ..! ರಣ ಬಿಸಿಲಲ್ಲೇ ಬಸವಳಿತಿದ್ದಾರೆ ಸಿಬ್ಬಂದಿಗಳು..!!

ಮುಂಡಗೋಡ ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಅದ್ರಂತೆ ಮತದಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನೂ ಅಧಿಕಾರಿಗಳು ಮಾಡಿಕೊಳ್ತಿದಾರೆ. ಚುನಾವಣಾಧಿಕಾರಿಗಳ ನಿರ್ದೇಶನದಂತೆ ಎಲ್ಲಾ ಕಾರ್ಯಗಳೂ ನಡಿತಿವೆ. ಅದರ ಭಾಗವಾಗಿ, ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ತಾಲೂಕಿನ ಎಲ್ಲಾ ಗಡಿಗಳಲ್ಲೂ ಚೆಕ್ ಪೊಸ್ಟ್ ಗಳನ್ನು ತೆರೆಯಲಾಗಿದೆ. ಆದ್ರೆ, ಹಾಗೆ ತೆರೆಯಲಾಗಿರೋ ಚೆಕ್ ಪೊಸ್ಟ್ ಗಳು ಬಹುತೇಕ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿ ತೋರಿಸ್ತಿವೆ. ರಣ ಬಿಸಿಲಲ್ಲೇ ಕರ್ತವ್ಯ..! ಅಂದಹಾಗೆ, ತಾಲೂಕಿನ ಗಡಿಗಳಲ್ಲಿ ತೆರೆಯಲಾಗಿರೊ ಚೆಕ್ ಪೊಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲಸ ನಿರ್ವಹಿಸೋದೇ ಕಷ್ಟಕರವಾಗಿದೆ. ಮೊದಲೆ ಬೇಸಿಗೆಯ ರಣ ಬಿಸಿಲಿದೆ. ಅದ್ರಲ್ಲೇ ಇಲ್ಲಿನ ಸಿಬ್ಬಂದಿಗಳು ಬಸವಳಿದು ಹೋಗ್ತಿದಾರೆ. ಆ್ಯಟಲಿಸ್ಟ್ ತಾತ್ಕಾಲಿಕ ಟೆಂಟ್ ನಿರ್ಮಿಸೋ ಕಾಮೆನ್ ಸೆನ್ಸ್ ಕೂಡ ಇಲ್ಲಿನ ಹಿರಿಯ ಅಧಿಕಾರಿಗಳಿಗೆ ಬಂದೇ ಇಲ್ಲ. ಹೀಗಾಗಿ, ಸಿಬ್ಬಂದಿಗಳು ಹಿಡಿಶಾಪ ಹಾಕುತ್ತಲೇ ಬಿಸಿಲಲ್ಲಿ ಒಣಗಿ ಹೋಗ್ತಿದಾರೆ. ಎಸಿ ರೂಮಲ್ಲಿರೋರಿಗೆ ಅರ್ಥವಾಗಿಲ್ಲ..! ಅಸಲು, ತಾಲೂಕಿನ ಚೆಕ್ ಪೊಸ್ಟ್ ಗಳಲ್ಲಿ ಕಾರ್ಯನಿರ್ವಹಿಸ್ತಿರೋ ಸಿಬ್ಬಂದಿಗಳು ಹೈರಾಣಾಗಿದ್ದಾರೆ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಛತ್ರಿಗಳನ್ನೇ ಬಳಸಿಕೊಳ್ತಿದಾರೆ. ನಿಜ...

ಶ್ರೀರಾಮಸೇನೆ, ಹಿಂದು ಜಾಗರಣ ವೇದಿಕೆಯಿಂದ ಮುಂಡಗೋಡಿನಲ್ಲಿ “ಶ್ರೀರಾಮ ನವಮಿ”

ಶ್ರೀರಾಮಸೇನೆ, ಹಿಂದು ಜಾಗರಣ ವೇದಿಕೆಯಿಂದ ಮುಂಡಗೋಡಿನಲ್ಲಿ “ಶ್ರೀರಾಮ ನವಮಿ”

ಮುಂಡಗೋಡ: ಶ್ರೀರಾಮ ನವಮಿಯ ನಿಮಿತ್ತ ಶ್ರೀರಾಮ ಸೇನೆ ಮತ್ತು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಪ್ರಭು ಶ್ರೀರಾಮಚಂದ್ರರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಕಾರ್ಯಕರ್ತರು, ಶ್ರೀರಾಮಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಘೋಷ ಮೊಳಗಿಸಿದ್ರು.

ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಸಂಸದ ಸ್ಥಾನಕ್ಕೆ ರಾಜೀನಾಮೆ, ಬಿಜೆಪಿಗೂ ಗುಡ್ ಬೈ ಹೇಳಿದ ಪ್ರಭಾವಿ ಮುಖಂಡ..!

ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಸಂಸದ ಸ್ಥಾನಕ್ಕೆ ರಾಜೀನಾಮೆ, ಬಿಜೆಪಿಗೂ ಗುಡ್ ಬೈ ಹೇಳಿದ ಪ್ರಭಾವಿ ಮುಖಂಡ..!

ಕೊಪ್ಪಳ: ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕೊನೆಗೂ ಬಿಜೆಪಿ ಸಂಸದ ಕರಡಿ ಸಂಗಣ್ಣ, ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಲ್ದೆ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಗೆ ಸಂಸದ ಸ್ಥಾನಕ್ಕೆ ಮೇಲ್‌ ಮೂಲಕ ರಾಜೀನಾಮೆ ಸಲ್ಲಿಸಿದ ಕರಡಿ ಸಂಗಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹುತೇಕ ಕರಡಿ ಸಂಗಣ್ಣ ನಾಳೆ‌ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ನಿಚ್ಚಳವಾಗಿದೆ‌. ಈಗಾಗಲೇ ಸಿಎಂ, ಡಿಸಿಎಂ ಜೊತೆಗೆ ಮಾತುಕತೆ ನಡೆಸಿರುವ ಕರಡಿ ಸಂಗಣ್ಣ, ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ. ನಿನ್ನೆ ಕರಡಿ ಸಂಗಣ್ಣ ನಿವಾಸಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿ ಚರ್ಚಿಸಿದ್ದರು. ಅದ್ರಂತೆ ಇಂದು ಕರಡಿ ಸಂಗಣ್ಣ ನಿವಾಸಕ್ಕೆ ಕೊಪ್ಪಳ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಕೂಡ ಭೇಟಿ ನೀಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರ್ಪಡೆ ಸಲುವಾಗಿನೇ ಕರಡಿ ಸಂಗಣ್ಣರವರು ಬೆಂಗಳೂರಿಗೆ ತೆರಳಿದ್ದಾರೆ ಅನ್ನೊಇ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ, ಉ.ಕನ್ನಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ..!

ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ, ಉ.ಕನ್ನಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ..!

ಕಾರವಾರ: ಉತ್ತರ ಕನ್ನಡ ಲೋಕಸಭಾ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ. ಕಾರವಾರ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಗೆ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸೇರಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು, ಕಾರವಾರದ ಸಿದ್ದಿವಿನಾಯಕ ದೇವಸ್ಥಾನಕ್ಕೆ ಬೇಟಿ ನೀಡಿ ದರ್ಶನ ಪಡೆದ ಡಾ. ಅಂಜಲಿ, ನಾಮಪತ್ರವನ್ನು ಸಿದ್ದಿವಿನಾಯಕನ ಮುಂದೆ ಇಟ್ಟು ಸಂಕಲ್ಪ ಮಾಡಿಕೊಂಡು ಪೂಜೆ ಸಲ್ಲಿಸಿದ್ರು‌. ಇನ್ನು ಮತ್ತೊಮ್ಮೆ ಕಾರವಾರದ ಮಾಲಾದೇವಿ ಮೈದಾನದಿಂದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಸಲ್ಲಿಸಲಿದ್ದಾರೆ‌.

ಉತ್ತರ ಕನ್ನಡದಲ್ಲಿ ಇಂದು 3 ನಾಮಪತ್ರ ಸಲ್ಲಿಕೆ, ಮುಂಡಗೋಡಿನ ಚಿದಾನಂದ ಹರಿಜನ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ..!

ಉತ್ತರ ಕನ್ನಡದಲ್ಲಿ ಇಂದು 3 ನಾಮಪತ್ರ ಸಲ್ಲಿಕೆ, ಮುಂಡಗೋಡಿನ ಚಿದಾನಂದ ಹರಿಜನ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ..!

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂದಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಎರಡನೇ ದಿನವಾದ ಇಂದು, ಜಿಲ್ಲೆಯಲ್ಲಿ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿವೆ. ಪಕ್ಷೇತರ ಅಭ್ಯರ್ಥಿಗಳಾದ ಚಿದಾನಂದ ಹೆಚ್ ಹರಿಜನ, ಕೃಷ್ಣಾಜಿ ಪಾಟೀಲ್, ನಿರಂಜನ್ ಉದಯಸಿನ್ಹಾ ಸರ್‌ದೇಸಾಯಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇದ್ರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 7 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದ್ದು, 20 ರಂದು ನಾಮಪತ್ರಗಳ ಪರಿಶೀಲನೆ, 22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 7 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

error: Content is protected !!