ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ. ಗ್ರಾಮಕ್ಕೆ ಬಸ್ ತಂಗುದಾಣ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ತಡೆದಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮಸ್ಥರು, ವಿದ್ಯಾರ್ಥಿಗಳು ಗ್ರಾಮಕ್ಕೆ ಒಂದು ಬಸ್ ತಂಗುದಾಣದ ಕನಸು ಹೊತ್ತಿದ್ದಾರೆ. ಇದುವರೆಗೂ ಗ್ರಾಮಕ್ಕೆ ಒಂದು ಬಸ್ ತಂಗುದಾಣ ನಿರ್ಮಿಸಿಕೊಟ್ಟಿಲ್ಲ ಇಲ್ಲಿನ ಅಧಿಕಾರಿಗಳು. ದುರಂತ ಅಂದ್ರೆ ಜನಪ್ರತಿನಿಧಿಗಳಿಗೂ ಈ ಬಗ್ಗೆ ಕ್ಯಾರೇ ಇಲ್ಲ. ಹೀಗಾಗಿ, ಪ್ರತಿದಿನವೂ ಶಾಲಾಬಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಮಳೆ ಬಿಸಿಲಿನಲ್ಲಿಯೇ ಬಸ್ ಗಾಗಿ ಕಾದು ರಸ್ತೆಯ ಪಕ್ಕದಲ್ಲಿ ನಿಲ್ಲಬೇಕಿದೆ. ಹೀಗಾಗಿ, ವಿದ್ಯಾರ್ಥಿಗಳು ಅದೆಷ್ಟೋ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಈ ಬಗ್ಗೆ ಕಣ್ಣೆತ್ತಿಯೂ ನೋಡಿಲ್ಲ. ಈ ಕಾರಣಕ್ಕಾಗಿ ಗ್ರಾಮಸ್ಥರು ಇಂದು ಪ್ರತಿಭಟನೆ ಕೈಗೊಂಡಿದ್ರು. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರ ಮನವೊಲಿಸಿ ಪ್ರತಿಭಟನೆ ತಣ್ಣಗಾಗಿಸಿದ್ರು.
Top Stories
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
ಮುಂಬರುವ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನಧ್ದರಾಗಿ-ಡಿಸಿ ಲಕ್ಷ್ಮೀ ಪ್ರಿಯ
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?
ಪತ್ರಕರ್ತನಿಗೆ ದಂಡ ತೀರ್ಪಿಗೆ ಜಿಲ್ಲಾ ಕೋರ್ಟ್ ತಡೆಯಾಜ್ಞೆ
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಕೊಪ್ಪದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ, ಬಸ್ ತಂಗುದಾಣಕ್ಕಾಗಿ ರಸ್ತೆ ತಡೆ..!
ಸಿಂಗನಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ್ನಾ SSLC ವಿದ್ಯಾರ್ಥಿ..?
ಮುಂಡಗೋಡ; ತಾಲೂಕಿನ ಸಿಂಗನಳ್ಳಿಯಲ್ಲಿ SSLC ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಮ್ಮದೇ ಗದ್ದೆಯಲ್ಲಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾನೆ ಅಂತಾ ಹೇಳಲಾಗಿದೆ. ಹೀಗಾಗಿ, ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಸಿಂಗನಳ್ಳಿ ಗ್ರಾಮದ ಸುಪ್ರೀತ್ ಫಕ್ಕಿರಪ್ಪ ತಲ್ಲಳ್ಳಿ(16) ಎಂಬುವ ವಿದ್ಯಾರ್ಥಿಯೇ ನೇಣಿಗೆ ಶರಣಾಗಿದ್ದಾನೆ. ಈತ ನಿನ್ನೆ ರಾತ್ರಿಯೋ ಅಥವಾ ಇಂದು ಬೆಳಗಿನ ಜಾವದಲ್ಲೋ, ತಮ್ಮದೇ ಜಮೀನಿನಲ್ಲಿ ಇರುವ ಮಾವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಕುಸಿದು ಬಿದ್ದು ಸಾವು..!
ಹಾವೇರಿ: ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಮೃತಪಟ್ಟ ಘಟನೆ ನಡೆದಿದೆ. ಏಕಾಏಕಿ ಉಸಿರಾಟ ಸಮಸ್ಯೆಯಿಂದ ಕುಸಿದು ಬಿದ್ದು ಸಾವು ಕಂಡಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮತ್ತಿಕೇರಿ ಗ್ರಾಮದ ಶಿಕ್ಷಕ ಸಂಗನಗೌಡರ (56) ಮೃತ ಶಿಕ್ಷಕರಾಗಿದ್ದಾರೆ. ಹಾವೇರಿ ನಗರದ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದ ವೇಳೆ ಘಟನೆ ನಡೆದಿದೆ. ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾದ ಶಿಕ್ಷಕ ಮೃತಪಟ್ಟಿದ್ದಾರೆ. ಹೀಗಾಗಿ, ನಿನ್ನೆ ರಾತ್ರಿಯೇ ಮೃತದೇಹ ಸ್ವಗ್ರಾಮಕ್ಕೆ ರವಾನೆಯಾಗಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟನೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಥೇಟು ಸಿನಿಮಾ ಸ್ಟೈಲು..! ನಿಜ ಅಂದ್ರೆ ಅ”ತಿಥಿ” ಉಪನ್ಯಾಸಕ ಮಹೇಂದ್ರ ಬನವಾಸಿ ಅದೇನು ನಶೆ ಏರಿಸಿಕೊಂಡಿದ್ನೊ ಗೊತ್ತಿಲ್ಲ. ಟ್ರಾಕ್ಟರ್ ರೇಸಿಗೆ ನಿಂತಿದ್ದ. ಇಲ್ಲಿ ಕಾಲೇಜಿನಿಂದಲೇ ಹೊರಟಿದ್ದ ಎರಡೂ ಟ್ರಾಕ್ಟರ್ ಗಳೂ ನಾ ಮುಂದು ತಾಮುಂದು ಅಂತಾ ಜಿದ್ದಿಗೆ ಬಿದ್ದಿದ್ದವು. ಹೀಗಾಗಿ,...
ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯ ಬರಮಪ್ಪ ಬ್ಯಾಡಗಿ(17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾವ್ಯಾ ಮೃತಪಟ್ಟಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿನಿಯ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಅತಿಥಿ ಉಪನ್ಯಾಸಕನೇ ಚಾಲಕನಾ..? ಅಂದಹಾಗೆ, ಕಾಲೇಜು ಹುಡುಗರನ್ನ ಪಿಕ್ ನಿಕ್ ಅಂತಾ ಜಾಲಿಯಾಗಿ ಕರೆದುಕೊಂಡು ಹೋಗಿದ್ದ ಕಾಲೇಜಿನವರು, ಟ್ರಾಕ್ಟರ್ ನಲ್ಲಿ ಹೊಸತನದ ಸವಾರಿ ಮಾಡಿಸಲು ಪ್ಲ್ಯಾನ್ ಮಾಡಿದ್ದರು. ಹೀಗಾಗಿ, ಎರಡೆರಡು ಟ್ರಾಕ್ಟರ್ ಮೂಲಕ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದರಂತೆ. ಹೀಗಾಗಿ, ಸದ್ಯ ಪಲ್ಟಿಯಾಗಿ ಅಪಘಾತವಾಗಿರೋ ಟ್ರಾಕ್ಟರ್ ಗೆ ಚಾಲಕನಾಗಿ ಅದೇ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿದ್ದವ ಸ್ಟೇರಿಂಗ್ ಹಿಡಿದಿದ್ದ....
ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಪಿಕ್ ನಿಕ್ ಗೆ ಹೊರಟಿದ್ದರು..! ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ. ಸದ್ಯ ಗಾಯಾಳುಗಳನ್ನು ಮಳಗಿ ಸರ್ಕಾರಿ ಆಸ್ಪತ್ರೆಗೆ ಹಾಗೂ ಗಂಭೀರ ಗಾಯಗೊಂಡವರನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಉಪನ್ಯಾಸಕರೇ ಚಾಲಕರಾ..? ಅಸಲು, ಈ ಮಳಗಿ ಪದವಿ ಪೂರ್ವ ಕಾಲೇಜಿನ ಅದ್ಯಾರ ತಲೆಯಲ್ಲಿ ಈ ಐಡಿಯಾ ಬಂದಿತ್ತೊ ಗೊತ್ತಿಲ್ಲ. ಪಿಕ್ ನಿಕ್ ಗೆ ಟ್ರಾಕ್ಟರ್ ಮೇಲೆ ತೆರಳಿದ್ದರು. ಅಲ್ಲದೆ, ಇಲ್ಲಿನ ಇಬ್ಬರು ಉಪನ್ಯಾಸಕರೇ ಟ್ರಾಕ್ಟರ್ ಚಲಾಯಿಸಿಕೊಂಡು ಹೊರಟಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಎರಡು ಟ್ರಾಕ್ಟರ್ ಮೂಲಕ ತೆರಳಿದ್ದ...
ಮುಂಡಗೋಡ ಹೊರವಲಯದಲ್ಲಿ ಭೀಕರ ಅಪಘಾತ, ಸ್ಕಾರ್ಪಿಯೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!
ಮುಂಡಗೋಡ: ಹೊರವಲಯದ ಶಿರಸಿ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಓವರ್ ಟೇಕ್ ಮಾಡಲು ಹೋದ ಸ್ಕಾರ್ಪಿಯೊ ಬೈಕ್ ಗೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿರಸಿ ರಸ್ತೆಯ ದೇಶಪಾಂಡೆ ರೂಡಿಸೇಟಿ ಕಚೇರಿ ಬಳಿ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಮುಂಡಗೋಡು ಕಡೆಗೆ ಬರುತ್ತಿದ್ದ ಬೈಕ್ ಗೆ, ಅದೇ ಮಾರ್ಗವಾಗಿ ಹೊರಟಿದ್ದ ಸ್ಕಾರ್ಪಿಯೊ ಕಾರು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಆದ್ರೆ, ಬೈಕ್ ಮಾಲೀಕ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನವರು ಎಂಬುವುದು ತಿಳಿದು ಬಂದಿದೆ. ಇನ್ನು, ಬೈಕ್ ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೊ ದೇಶಪಾಂಡೆ ರೂಡಸೇಟಿ ಕಂಪೌಂಡಿಗೆ ಡಿಕ್ಕಿಹೊಡೆದಿದೆ. ಅಪಘಾತದ ನಂತರ ಕಾರಿನಲ್ಲಿದ್ದವರು, ಕಾರು ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸಿದ್ದೇಶ್ವರ ಶ್ರೀಗಳ ಚೇತರಿಕೆಗೆ ನಾಡಿನೆಲ್ಲೆಡೆ ಪ್ರಾರ್ಥನೆ, ನಡೆದಾಡುವ ದೇವರ ಕಾಣದೇ ಭಕ್ತರಲ್ಲಿ ಹೆಚ್ಚಿದ ಆತಂಕ..!
ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಚೇತರಿಕೆಗಾಗಿ ನಾಡಿನೆಲ್ಲಡೆ ಪ್ರಾರ್ಥನೆ ಶುರುವಾಗಿದೆ. ಜೀವಂತ ದೇವರು, ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿಗಳು ಕೋಟಿ ಕೋಟಿ ಭಕ್ತರನ್ನು ಹೊಂದಿದ್ದಾರೆ. ಹೀಗಾಗಿ ಆಶ್ರಮದ ಸುತ್ತಲೂ ಬೆಳಗಿನಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಸ್ವಾಮೀಜಿಗಳ ದರ್ಶನಕ್ಕಾಗಿ ಕಾದು ಕುಳಿತಿರುವ ಭಕ್ತಗಣ ಒಂದೆಡೆಯಾದ್ರೆ ಮತ್ತೊಂದೆಡೆ ಶ್ರೀಗಳು ಗುಣವಾಗಲಿ ಎಂದು ಎಲ್ಲೆಂದರಲ್ಲಿ ಪ್ರಾರ್ಥನೆಗಳನ್ನು ಭಕ್ತರು ಮಾಡುತ್ತಿದ್ದಾರೆ. ಭಗವಂತನೇ ನಮ್ಮ ದೇವರನ್ನು ಕಾಪಾಡು..! ಸಾಮೂಹಿಕ ಪ್ರಾರ್ಥನೆ, ಆಶ್ರಮದಲ್ಲಿ ವಿಶೇಷ ಪೂಜೆ..! ಹೌದು ಇಂತಹದ್ದೊಂದು ಆತಂಕಕಾರಿ ವಿಚಾರ ಇದೀಗ ಭಕ್ತರಲ್ಲಿ ಮನೆ ಮಾಡಿದೆ. ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಈಡಾಗಿದ್ದಾರೆ. ಈ ಹಿನ್ನೆಲೆ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಆಶ್ರಮದಲ್ಲಿರುವ ಶ್ರೀ ಮಲ್ಲಿಕಾರ್ಜುನ ಗುರುಗಳ ಗದ್ದುಗೆಯ ಮಂಟಪದಲ್ಲಿ ಬೆಳಗಿನ ಜಾವ ಐದು ಗಂಟೆಯಿಂದಲೇ ಪೂಜೆ, ಪ್ರಾರ್ಥನೆ ನಡೆಸಲಾಯಿತು. ಆಶ್ರಮದ ಸ್ವಾಮೀಜಿಗಳು ಹಾಗೂ ಭಕ್ತರು ಸೇರಿ ಪೂಜೆ ಪುನಸ್ಕಾರ ನಡೆಸಿದ್ರು. ಇನ್ನು ಸ್ವಾಮೀಜಿಗಳ ಆರೋಗ್ಯದಲ್ಲಿ ಏರುಪೇರಾಗುತ್ತಿರುವ ವಿಚಾರ ತಿಳಿದು...
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ ಜಲಾಶಯದಲ್ಲಿದ್ದು ಮತ್ತೊಂದು ಶವ ಟಿಬೇಟಿಯನ್ ಆಸ್ಪತ್ರೆಗೆ ರವಾನಿಸಲಾಗಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಮೃತರ ಹೆಸರು ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ವರ್ಗಾವಣೆಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಮುಂಡಗೋಡ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಬಸವರಾಜ್, ರಾಮನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅಂದಹಾಗೆ, ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಎಲ್ಲಾಲಿಂಗ ಸಾಹೆಬ್ರು ಜಾಯಿನ್ ಆಗಿದ್ದಾರೆ. ಅಸಲು ಬಸವರಾಜ್ ಮಬನೂರು, ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ನಿಷ್ಟೆಯ ಕಾರ್ಯ ನಿರ್ವಹಿಸಿದ್ದರು. ಕೊರೋನಾ ಲಾಕಡೌನ್ ಸಂದರ್ಭದಲ್ಲಿ ತಾಲೂಕಿನಲ್ಲಿ ಯುವ ಪಡೆಯೊಂದಿಗೆ ಕೈ ಜೋಡಿಸಿ, ಹಲವು ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿದ್ದರು.