ಕಾರವಾರ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಅಲ್ಲಲ್ಲಿ ಹೆಸ್ಕಾಂ ವಿದ್ಯುತ್ ಮಾರ್ಗಗಳಲ್ಲಿ ಏನಾದರೂ ಸಮಸ್ಯೆ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಹೆಸ್ಕಾಂ ಶಿರಸಿ ವೃತ್ತದ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ. ಮಳೆಗಾಳಿಗಳಿಂದ ವಿದ್ಯುತ್ ಅಡೆತಡೆ ಉಂಟಾದಲ್ಲಿ, ವಿದ್ಯುತ್ ವಾಹಕ ತುಂಡಾಗಿ ಬಿದ್ದಿದ್ದಲ್ಲಿ, ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಹೆಸ್ಕಾಂ ಹೆಲ್ಪ್ಲೈನ್: 1912 ಅಥವಾ ಈ ಕೆಳಕಂಡ 24*7 ಗ್ರಾಹಕರ ಸಹಾಯವಾಣಿಗಳಿಗೆ ಸಂಪರ್ಕಿಸಿ ದೂರುಗಳನ್ನ ನೀಡಬಹುದಾಗಿದೆ. ಕಾರವಾರ ವಿಭಾಗ- ಕಾರವಾರ ಶಾಖೆ: 08382- 221336, ಸದಾಶಿವಗಡ ಶಾಖೆ: 08382- 265753, ಅಂಕೋಲಾ ಶಾಖೆ: 08382- 230730, ಹೊನ್ನಾವರ ವಿಭಾಗ- ಕುಮಟಾ ಶಾಖೆ: 08386- 222034, ಗೋಕರ್ಣ ಶಾಖೆ: 94808 81935, ಮರಾಕಲ್ ಶಾಖೆ: 94808 83732, ಹೊನ್ನಾವರ ಶಾಖೆ: 08387- 220 294, ಕಾಸರಕೋಡ್ ಶಾಖೆ: 94808 81943, ಗೇರುಸೊಪ್ಪ ಶಾಖೆ: 08387- 268 063, ಭಟ್ಕಳ ಶಾಖೆ: 08385- 226 426/ 94808 81958, ಮುರುಡೇಶ್ವರ ಶಾಖೆ: 08385- 268 555/ 94815...
Top Stories
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಜಿಲ್ಲೆಯಲ್ಲಿ ಆರ್ಭಟಿಸುತ್ತಿರುವ ಮಳೆ, 26 ಕಾಳಜಿ ಕೇಂದ್ರಗಳಲ್ಲಿ 2368 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ.
ಕಾರವಾರ: ಜಿಲ್ಲೆಯಲ್ಲಿ ವರುಣ ಎಡಬಿಡದೇ ಆರ್ಭಟಿಸುತ್ತಿದ್ದು, ಮಂಗಳವಾರ ಸಂಜೆಯ ವೇಳೆಗೆ ಕಾರವಾರ ತಾಲೂಕಿನಲ್ಲಿ 6, ಕುಮಟಾ ತಾಲೂಕಿನಲ್ಲಿ 6 ಮತ್ತು ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ ಒಟ್ಟು 26 ಕಾಳಜಿ ಕೇಂದ್ರಗಳನ್ನು ತೆರೆದಿದ್ದು, ಇವುಗಳಲ್ಲಿ 2368 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿ0ದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 3 ಮನೆಗಳು ಪೂರ್ಣ ಹಾನಿ, 1 ಮನೆಗೆ ತೀವ್ರ ಹಾನಿ ಹಾಗೂ 18 ಮನೆಗಳಿಗೆ ಭಾಗಶ: ಹಾನಿಯಾಗಿದೆ. ಕಾರವಾರ ತಾಲೂಕಿನಲ್ಲಿ ಮನೆ ಕುಸಿದು ಒಂದು ಮಾನವ ಜೀವ ಹಾನಿಯಾಗಿದೆ....
ಅಂಕೋಲಾ ಬಳಿ ಗುಡ್ಡ ಕುಸಿತ, 9 ಜನ ಸಾವು ಶಂಕೆ, ಮಣ್ಣಿನಡಿ ಕೆಲವರು ಸಿಲುಕಿರೊ ಅನುಮಾನ..!
ಅಂಕೋಲಾ: ತಾಲೂಕಿನ ಶಿರೂರು ಬಳಿ ಹೆದ್ದಾರಿ ಪಕ್ಕದಲ್ಲಿ ಗುಡ್ಡಕುಸಿತ ಉಂಟಾಗಿ ಹಲವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇನ್ನು ಇಬ್ಬರು ಮಣ್ಣಿನ ಅಡಿಯಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಕಿ ಲಕ್ಷ್ಮಣ ನಾಯ್ಕ (47) ಶಾಂತಿ ನಾಯ್ಕ(36) ರೋಶನ (11) ಅವಾಂತಿಕಾ (6) ಜಗನ್ನಾಥ (55) ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ಬಿ ಕಂಪನಿ ಹೆದ್ದಾರಿ ಅಗಲೀಕರಣಕ್ಕಾಗಿ ಭಾರೀ ಪ್ರಮಾಣದಲ್ಲಿ ಗುಡ್ಡ ಅಗೆದಿರುವ ಕಾರಣ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದೆ. ಇನ್ನೂ ಇದೇ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಿಟ್ಟ ಟ್ಯಾಂಕರ್ ಸಹ ಮಣ್ಣಿನ ರಭಸಕ್ಕೆ ಗಂಗಾವಳಿ ನದಿಯಲ್ಲಿ ಕೊಚ್ಚಿಹೋಗಿದ್ದು, ಅದರಲ್ಲಿದ್ದ ಚಾಲಕ ಹಾಗೂ ಕ್ಲಿನರ್ ಸಹ ಸಾವನ್ನಪ್ಪಿರುವ ಶಂಕೆ ಇದೆ.
ಸಾರ್ವಜನಿಕರ ನೆರವಿಗೆ ತುರ್ತು ಕಾರ್ಯಚರಣೆ ಕೇಂದ್ರ ಸ್ಥಾಪನೆ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಕಾರವಾರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18 ರ ವರಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಅರಣ್ಯ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1077 ಗೆ ಅಥವಾ ಮೊ.ಸಂ. ಸಂಖ್ಯೆ. 9483511015 ಕರೆ, ವಾಟ್ಸಾಪ್ ಮೂಲಕ ಮಾಹಿತಿ ನೀಡಿದಲ್ಲಿ ತಕ್ಷಣ ನೆರವಿಗೆ ಧಾವಿಸಲಾಗುವುದು ಎಂದರು. ಕಾರವಾರದ ನೌಕಾ ನೆಲೆ ಮತ್ತು ರಾಷ್ಟೀಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ಸಂಭವಿಸಿಸುವ ಕೃತಕ ನೆರೆ ಸೇರಿದಂತೆ ಎಲ್ಲಾ ರೀತಿಯ ಅನಾಹುತಗಳಿಗೆ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಕಾರವಾರ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು...
ನಿರಂತರ ಮಳೆ ಹಿನ್ನೆಲೆ ದೇವಿಮನೆ ಬಳಿ ಗುಡ್ಡ ಕುಸಿತ, ಶಿರಸಿ- ಕುಮಟಾ ರಸ್ತೆ ಬಂದ್..!
ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಶಿರಸಿ- ಕುಮಟಾ ರಸ್ತೆಯ ದೇವಿಮನೆ ಮತ್ತು ರಾಗಿ ಹೊಸಳ್ಳಿ ಮದ್ಯೆ ರಸ್ತೆ ಮೇಲೆ ಗುಡ್ಡು ಕುಸಿದಿದೆ. ಪರಿಣಾಮ ಶಿರಸಿ- ಕುಮಟಾ ರಸ್ತೆ ಬಂದ್ ಆಗಿದೆ. ರಾತ್ರಿ ಎರಡು ಗಂಟೆ ಸುಮಾರಿಗೆ ನಿರಂತರ ಮಳೆಯಿಂದ ರಸ್ತೆ ಮೇಲೆಯೇ ಗುಡ್ಡ ಕುಸಿದಿದ್ದು, ತೆರವು ಕಾರ್ಯಾಚರಣೆ ನಡೆಸಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯಕ್ಕಂಬಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದ KSRTC ಬಸ್..!
ನಿಯಂತ್ರಣ ತಪ್ಪಿ KSRTC ಬಸ್ ರಸ್ತೆ ಬದಿಗೆ ಇಳಿದ ಘಟನೆ ಎಕ್ಕಂಬಿ ಸಮೀಪ ನಡೆದಿದೆ. ಶ ಹಾವೇರಿಯಿಂದ ಶಿರಸಿಗೆ ಬರುತ್ತಿದ್ದ ಬಸ್, ಎಕ್ಕಂಬಿ ಮತ್ತು ಮಾವಿನಕೊಪ್ಪ ರಸ್ತೆ ಮದ್ಯೆ ರಸ್ತೆ ಬದಿಯ ಗಟಾರಕ್ಕೆ ಇಳಿದಿದೆ. ಪರಿಣಾಮ ಬಸ್ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್ಸಿನ ಸೆಂಟ್ರಿಂಗ್ ಬೊಲ್ಟ್ ಕಟ್ಟಾಗಿ ಘಟನೆ ನಡೆದಿದೆ ಅಂತಾ ಹೇಳಲಾಗ್ತಿದೆ. ಪ್ರಯಾಣಿಕರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಲಾಗಿದೆ.
ಮಳೆ ಅವಾಂತರ ಹಿನ್ನೆಲೆ, ಮತ್ತೆ ಎರಡು ತಾಲೂಕುಗಳಿಗೂ ರಜೆ ಘೋಷಿಸಿದ ಜಿಲ್ಲಾಧಿಕಾರಿ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ ಈಗಾಗಲೇ ಎಂಟು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಿ ಆದೇಶಿಸಿದ್ದ ಡಿಸಿ ಮೇಡಮ್ಮು, ಈಗ ದಾಂಡೇಲಿ, ಯಲ್ಲಾಪುರ ಸೇರಿ ಮತ್ತೆರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಈಗ ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೂ ರಜೆ ಘೊಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಅದ್ರಲ್ಲೂ, ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..
ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
ಅಮೇರಿಕಾದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಿನ್ನೆ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ರ್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಟ್ರಂಪ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದೆ. ಘಟನೆ ನಡೆಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರೆದು ರಕ್ಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಕೈಗೊಂಡಿರುವ ಅಮೇರಿಕಾದ ಸೀಕ್ರೆಟ್ ಸರ್ವಿಸ್, ಟ್ರಂಪ ಸುರಕ್ಷಿತವಾಗಿದ್ದಾರೆ ಎಂದು ಹೇಳಿದೆ. ಅಲ್ಲದೆ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆದಿದ್ದು, ಗುಂಡಿನ ದಾಳಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಅದು ಹೇಳಿದೆ.
ಕಾತೂರು ಬಳಿ ಬೈಕ್ ಗೆ ಗುದ್ದಿದ ಬೊಲೆರೋ, ಬೈಕ್ ಸವಾರ ಗಂಭೀರ..!
ಮುಂಡಗೋಡ ತಾಲೂಕಿನ ಕಾತೂರು ಬಳಿ ಹಿಟ್ ಆಂಡ್ ರನ್ ಕೇಸ್ ಆಗಿದೆ. ಬೊಲೆರೋ ವಾಹನ ಬೈಕ್ ಗೆ ಗುದ್ದಿ ಪರಾರಿಯಾಗುತ್ತಿದ್ದ ವೇಳೆ ಸಾರ್ವಜನಿಕರೇ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಬೈಕ್ ಸವಾರರಿಗೆ ಗಾಯವಾಗಿದೆ. ಅದ್ರಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಅಂದಹಾಗೆ, ಕಾತೂರು ಬಳಿಯ ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು. ಗಾಯಗೊಂಡಿರೋ ಬೈಕ್ ಸವಾರರನ್ನು ಚಳಗೇರಿಯ ರವಿ ರಾಮಲಿಂಗ್ ಸಾಳುಂಕೆ(26) ಖಾನು ಗೌಳಿ ಅಂತಾ ಗುರುತಿಸಲಾಗಿದೆ. ಇದ್ರಲ್ಲಿ ರವಿ ಸಾಳುಂಕೆ ಗಂಭೀರ ಗಾಯಗೊಂಡಿದ್ದಾನೆ ಅನ್ನೊ ಮಾಹಿತಿ ಬಂದಿದೆ. ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.