ಶಿರಸಿ: ನಗರದಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ, ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ನಡೆಯಿತು. ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು. ಕಾಂಗ್ರೆಸ್ ಹಿರಿಯ ಮುಖಂಡ ಆರ್. ವಿ.ದೇಶಪಾಂಡೆ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು.
Top Stories
ಶಿರಸಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ತಾಯಿ ಹೆಸ್ರಲ್ಲಿ ಗಿಡ ನೆಟ್ಟರು..!
ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?
ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ಪ್ರಶಸ್ತಿ
ಉತ್ತರ ಕನ್ನಡದಲ್ಲಿ ಮೇ.5 ರಿಂದ ಪ.ಜಾತಿ ಸಮುದಾಯದ ಸಮೀಕ್ಷೆ : ಜಿಲ್ಲಾಧಿಕಾರಿ
ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು..!
ಮುಂಡಗೋಡ ತಾಲೂಕಿಗೆ 65.3% ರಷ್ಟು SSLC ಫಲಿತಾಂಶ, ಮಳಗಿ ಪ್ರೌಢಶಾಲೆಯ ಭಾಗ್ಯಶ್ರೀ ಗೆ ಅತಿ ಹೆಚ್ಚು ಅಂಕ..!
ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಲ್ಲಿ ಕೆಲಸದ ಸಮಯದಲ್ಲಿ ಬೃಹತ್ ಗಾತ್ರದ ಪ್ಯಾನಲ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು
ಮುಂಡಗೋಡ ತಾಲೂಕಿನ 79 ಶಾಲೆಗಳ ಸ್ಥಿತಿ ಚಿಂತಾಜನಕ, ಮಕ್ಕಳನ್ನು ಶಾಲೆಗೆ ಕಳಿಸೋಕೆ ಪಾಲಕರಿಗೆ ಭಾರೀ ಆತಂಕ..!
ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!
ನಂದಿಪುರದಲ್ಲಿ ಸಿಡಿಲಿನಾರ್ಭಟ, ಮನೆಯ ವಿದ್ಯುತ್ ವೈಯರ್ ಗಳೇ ಭಸ್ಮ, ಟಿವಿ, ಪ್ರಿಡ್ಜು ಹರೋಹರ..! ಮನೆ ಮಂದಿಗೂ ಗಾಯ..!
ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ಸಮುದ್ರ ಪಾಲು, ಮತ್ತಿಬ್ಬರು ಬಚಾವ್..!
ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!
ಮುಂಡಗೋಡ ಕರಗಿನಕೊಪ್ಪ ಬಳಿ ಬೈಕ್ ಅಪಘಾತ, ಮೂಡಸಾಲಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?
ಭಾರೀ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ, ಮನೆಯ ಮೇಲ್ಚಾವಣಿ ಹಾನಿ, ಗೋವಿನಜೋಳ ರಾಶಿ ನೀರಲ್ಲಿ
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ತೈಲ ಬೆಲೆ ಏರಿಕೆಗೆ ಖಂಡನೆ: ಶಿರಸಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಸೈಕಲ್ ಏರಿ ಡಿಕೆಶಿ ಆಕ್ರೋಶ..!
ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಇನ್ನೂ ಉಸಿರಾಡ್ತಿದೆಯಾ..? ಇಂತಹದ್ದೊಂದು ಪ್ರಶ್ನೆ ಬಹುತೇಕ ಕ್ಷೇತ್ರದ ಜನರಲ್ಲಿದೆ. ಯಾಕಂದ್ರೆ, ಯಾವಾಗ, ಶಿವರಾಮ್ ಹೆಬ್ಬಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಬಾವುಟ ಹಿಡಿದ್ರೊ, ಆ ಕ್ಷಣದಿಂದಲೇ ಇಡೀ ಮುಂಡಗೋಡ ತಾಲೂಕಿನ “ಕೈ” ಪಡೆಯ ಜಂಘಾಬಲವೇ ಕುಗ್ಗಿಹೋಯ್ತು, ಇನ್ನೇನು ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಯ್ತು ಅನ್ನೋ ವಾತಾವರಣ ಇತ್ತು. ಇದು ಇತಿಹಾಸ..! ಹಾಗೆ ನೋಡಿದ್ರೆ, ಇದುವರೆಗೂ ತಾಲೂಕಿನ ಮೂರೂ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಭಲವಾಗಿಯೇ ಇತ್ತು. ಬಿಜೆಪಿ ಯಾವುದೇ ಒಂದು ಕ್ಷೇತ್ರದಲ್ಲೂ ಇದುವರೆಗೂ ಗೆದ್ದ ಇತಿಹಾಸವೇ ಇಲ್ಲ. ತಾಲೂಕಿನಲ್ಲಿ ಬಿಜೆಪಿ ಆಡಳಿತವಿದ್ದು, ವಿ.ಎಸ್.ಪಾಟೀಲ್ ಶಾಸಕಾರಾಗಿದ್ದಾಗಲೂ ಇಲ್ಲಿ ಬಿಜೆಪಿ ವರ್ಕೌಟ್ ಮಾಡಿಕೊಳ್ಳಲು ಸಾಧ್ಯವಾಗಿರಲೇ ಇಲ್ಲ. ಇದಕ್ಕೆ ಕಾರಣ, ಕಾಂಗ್ರೆಸ್ ನಲ್ಲಿದ್ದ ಸ್ಥಳೀಯ ಗಟ್ಟಿನಾಯಕರು. ದೇಶಪಾಂಡೆ, ಹೆಬ್ಬಾರ್ ರಂತವರ ಗಟ್ಟಿ ಮುಂದಾಳತ್ವ ಕಾಂಗ್ರೆಸ್ ತಳಮಟ್ಟದಲ್ಲಿ ಬದ್ರವಾಗುವಂತೆ ಮಾಡಿತ್ತು. ಆದ್ರೆ ಯಲ್ಲಾಪುರ ಕ್ಷೇತ್ರದಲ್ಲಿ ಯಾವಾಗ ರಾಜಕೀಯ ಬದಲಾವಣೆ ಗಾಳಿ ಬೀಸಿ ಹೆಬ್ಬಾರ್ ಕಾಂಗ್ರೆಸ್ ತೊರೆದರೋ ಆ ಕ್ಷಣದಿಂದಲೇ ಇಲ್ಲಿನ...
ಶಿರಸಿಯಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೈಕಲ್ ಸವಾರಿಗೆ ಆರಂಭಿಕ ವಿಘ್ನ..? ನಡಿಯತ್ತಾ ಪ್ರತಿಭಟನೆ..?
ಶಿರಸಿ: ನಗರದಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ನಡೆಸಲಿರೋ ಸೈಕಲ್ ಜಾಥಾ ಗೆ ಆರಂಭಿಕ ವಿಘ್ನ ಎದುರಾಗಿದೆ. ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಅನುಮತಿ ನಿರಾಕರಿಸಲಾಗಿದ್ದು, ಈ ನಡುವೆಯೇ ಕಾಂಗ್ರೆಸ್ ಸೈಕಲ್ ಜಾಥಾ ನಡೆಸಲು ತಯಾರಿ ನಡೆಸಿದೆ. ಈಗಷ್ಟೇ ಶಿರಸಿ ನಗರಕ್ಕೆ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ಮೊದಲು ಮಾರಿಕಾಂಬೆಯ ದರ್ಶನ ಪಡೆದ ಡಿಕೆಶಿ, ಆನಂತರದಲ್ಲಿ ಸೈಕಲ್ ಜಾಥಾ ನಡೆಸಲಿದ್ದಾರೆ. ಹೀಗಾಗಿ, ಶಿರಸಿ ಮಾರಿಕಾಂಬೆ ದೇವಸ್ಥಾನದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಕೋವಿಡ್ ನಿಯಮಕ್ಕೆ ಕ್ಯಾರೇ ಎನ್ನದೇ ಜಮಾವಣೆ ಆಗಿರೋ ಕಾರ್ಯಕರ್ತರಿಗೆ ಸೈಕಲ್ ಜಾಥಾ ನಡೆಸಲು ಜಿಲ್ಲಾಡಳಿತ ಮತ್ತೆ ತಡೆ ನೀಡುವ ಸಾಧ್ಯತೆ ಇದೆ. ಈಗಾಗಲೇ ಪೊಲೀಸರು ಬಿಗಿ ಬಂದೋಬಸ್ತ ವ್ಯವಸ್ಥೆ ಮಾಡಲಾಗಿದ್ದು, ಸೈಕಲ್ ಜಾಥಾ ಆರಂಭವಾಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಹನುಮಾಪುರ ಶ್ರೀಗಳ ಸಾವಿಗೆ ಕಾರಣವೇನು..? ಅಷ್ಟಕ್ಕೂ ವಿ.ಎಸ್.ಪಾಟೀಲರು ಹೇಳಿದ್ದೇನು..?
ಮುಂಡಗೋಡ: ತಾಲೂಕಿನ ಹನುಮಾಪುರ ಕಾಳಿಕಾಮಠದ ಸದಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ನಸುಕಿನ ಜಾವ ವಿಧಿವಶರಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀಗಳು ಕೊರೋನಾ ಪಾಸಿಟಿವ್ ಆಗಿ ತೀವ್ರ ಸಂಕಷ್ಟ ಅನುಭವಿಸಿದ್ರು. ತುಮಕೂರು, ರಾಣೇಬೆನ್ನೂರು ಸೇರಿದಂತೆ ಹಲವು ಕಡೆ ಚಿಕಿತ್ಸೆ ಪಡೆದಿದ್ರು. ಆನಂತರದಲ್ಲಿ ಶ್ರೀಗಳಿಗೆ, ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡು ಮತ್ತಷ್ಟು ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.. ಆದ್ರೆ ಚಿಕಿತ್ಸೆ ಪಲಕಾರಿಯಾಗದೇ ಶ್ರೀಗಳು ವಿಧಿವಶರಾದ್ರು ಅಂತಾ ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ್ ಪಬ್ಲಿಕ್ ಫಸ್ಟ್ ಗೆ ಮಾಹಿತಿ ನೀಡಿದ್ದಾರೆ. ಹಾಗಾದ್ರೆ ಮಾಜಿ ಶಾಸಕರು ಶ್ರೀಗಳ ಬಗ್ಗೆ ಹೇಳಿದ್ದಾದ್ರೂ ಏನು..? ಇಲ್ಲಿದೆ ನೋಡಿ..
ಹನುಮಾಪುರ ಕಾಳಿಕಾಮಠದ “ಶ್ರೀಗಳು” ಅಸ್ತಂಗತ..! ಗಣ್ಯರ ಸಂತಾಪ..!!
ಮುಂಡಗೋಡ ತಾಲೂಕಿನ ಹನುಮಾಪುರ ಕಾಳಿಕಾಮಠದ (ಹೀರೇಮಠ) ಸದಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ನಸುಕಿನ ಜಾವ ವಿಧಿವಶರಾಗಿದ್ದಾರೆ. ಒಂದು ತಿಂಗಳಿಂದ ಅನಾರೋಗ್ಯ..! ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀಗಳು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಇಂದು ಬೆಳಗಿನ ಜಾವ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಪ್ರತಿಷ್ಠಿತ ಮಠ..! ಮುಂಡಗೋಡ ತಾಲೂಕಿನ ಪ್ರತಿಷ್ಠಿತ ಕಾಳಿಕಾಮಠದಲ್ಲಿ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯಗಳನ್ನು ಶ್ರೀಗಳು ಕೈಗೊಂಡಿದ್ರು. ಹೀಗಾಗಿ, ಶ್ರೀ ಮಠ ತಾಲೂಕು ಸೇರಿದಂತೆ ಹೊರ ಜಿಲ್ಲೆಗಳಲ್ಲೂ ಅಪಾರ ಪ್ರಮಾಣದ ಭಕ್ತರನ್ನು ಹೊಂದಿತ್ತು. ಚೇತರಿಕೆ ಕಾಣಲೇ ಇಲ್ಲ..! ಮಠದ ಪರಮ ಭಕ್ತರಾಗಿದ್ದ ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ್ ಸ್ವಾಮೀಜಿಗಳ ಚಿಕಿತ್ಸೆಗಾಗಿ ಸಾಕಷ್ಟು ಪರಿಶ್ರಮ ಪಟ್ಟಿದ್ದರು. ಆದ್ರೆ ಶ್ರೀಗಳ ಆರೋಗ್ಯ ಚೇತರಿಕೆ ಕಾಣದೇ ಕೊನೆ ಉಸಿರೆಳೆದಿದ್ದಾರೆ. ಸಂತಾಪ.. ಶ್ರೀಗಳ ನಿಧನಕ್ಕೆ ತಾಲೂಕಿನ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಶಾಸಕ ವಿ.ಎಸ್. ಪಾಟೀಲ್...
ತವರಿಗೆ ಹೋದ ಪತ್ನಿ ವಾಪಸ್ ಬರಲೇ ಇಲ್ಲ: ಮನನೊಂದ ಪತಿ ಮಾಡಿಕೊಂಡಿದ್ದು ಮಾತ್ರ ದುರಂತ..!
ಮುಂಡಗೋಡ : ಅವನು ಹೆಂಡತಿಯನ್ನು ಅತಿಯಾಗಿ ಹಚ್ಚಿಕೊಂಡಿದ್ದ, ನೀನಿಲ್ಲದೇ ನಾನಿಲ್ಲ, ನನಗೆ ನೀನು; ನಿನಗೆ ನಾನು ಅಂತಿದ್ದ, ಆದ್ರೆ ಆತನ ಬಾಳಲ್ಲಿ ಅದು ಹಾಗಾಗಲೇ ಇಲ್ಲ. ಆದ್ರೆ, ತವರಿಗೆ ಹೋದ ತನ್ನ ಹೆಂಡ್ತಿ ವಾಪಸ್ ಬರಲೇ ಇಲ್ಲ ಅಂತಾ ಪತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವರಾಜ್ ಬರಮಣ್ಣ ಕುರಿಯವರ್ ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈಗಷ್ಟೇ 36 ವರ್ಷಕ್ಕೆ ಕಾಲಿಟ್ಟಿದ್ದ, ಹೀಗಾಗಿ, ವಯಸ್ಸಲ್ಲದ ವಯಸ್ಸಲ್ಲೇ ದುರಂತ ಅಂತ್ಯ ಕಂಡಿದ್ದಾನೆ. ಅಂದಹಾಗೆ, ಈ ಘಟನೆ ನಡೆದಿರೋದು ಮುಂಡಗೋಡ ತಾಲೂಕಿನ ಚೌಡಳ್ಳಿಯಲ್ಲಿ. ದೀಪಾವಳಿಗೇ ಹೋದವಳು..! ಕುಟುಂಬಸ್ಥರು ದೂರಿನಲ್ಲಿ ದಾಖಲಿಸಿರೋ ಪ್ರಕಾರ, ಈತನ ಪತ್ನಿ ಕಳೆದ ವರ್ಷ ದೀಪಾವಳಿ ಹಬ್ಬಕ್ಕೆ ಅಂತಾ ತವರಿಗೆ ಹೋಗಿದ್ಲು. ಆ ನಂತರ, ವಾರ ಆಯ್ತು, ತಿಂಗಳಾಯ್ತು, ವರ್ಷವೇ ಆಗುತ್ತ ಬಂದ್ರೂ ಪತ್ನಿ ಮಾತ್ರ ಗಂಡನ ಮನೆ ಕಡೆ ಮುಖ ಮಾಡಲಿಲ್ಲವಂತೆ. ಹೀಗಾಗಿ ಪತ್ನಿ ಮರಳಿ ಬಾರದಿರೋ ಕಾರಣಕ್ಕೆ ಪತಿ ಅದನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದಾನೆ. ಅವತ್ತು ಜುಲೈ 1 ಹಾಗೇ ಪತ್ನಿ...
ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..? ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆ ಇನ್ನೂ ಘೋಷಣೆಯೇ ಆಗಿಲ್ಲ. ಕೇವಲ ಮೀಸಲಾತಿ ಮಾತ್ರ ಪ್ರಕಟವಾಗಿದೆ. ಆದ್ರೆ ಇಷ್ಟರೊಳಗೆ ಮುಂಡಗೋಡ ತಾಲೂಕಿನಾಧ್ಯಂತ ಇನ್ನಿಲ್ಲದ ರಾಜಕೀಯ ಚರ್ಚೆಗಳು ಶುರುವಾಗಿವೆ. ತಾಲೂಕಿನಲ್ಲಿರೋ ಮೂರು ಜಿಪಂ ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಪಡೆಯಲು “ಬಹುಪರಾಕ್” ಸಂಪ್ರದಾಯಗಳು ಚಾಲ್ತಿ ಪಡೆದುಕೊಂಡಿವೆ. ಎಲ್ಲವೂ ಟಿಕೆಟ್ ಗಾಗಿ..! ಅದ್ರಲ್ಲೂ, ಬಿಜೆಪಿ ಪಾಳಯದಲ್ಲಂತೂ ಈಗಾಗಲೇ ನಂಗೇ ಟಿಕೆಟ್ ಕೊಡಿ ಅಂತಾ ಸಚಿವರ ಎದುರು ಇನ್ನಿಲ್ಲದ ಒತ್ತಡಗಳನ್ನ ಹಾಕಲಾಗ್ತಿದೆ. ಕೆಲವೊಬ್ರು ಪ್ರತ್ಯಕ್ಷವಾಗಿ ಒತ್ತಡ ಹೇರುತ್ತಿದ್ರೆ, ಇನ್ನೂ ಕೆಲವರು ತಮ್ಮ ಪ್ರಾಭಲ್ಯದ ಕತೆ ಹೇಳಿ ಪರೋಕ್ಷವಾಗಿ ಸಚಿವರಿಗೆ ಸುದ್ದಿ ಮುಟ್ಟಿಸುವ ಪ್ರಯತ್ನದಲ್ಲಿದ್ದಾರೆ. ಇದು ಸ್ಪೋಟಕ ಚರ್ಚೆ..! ಈ ನಡುವೆಯೇ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಂದು ಚರ್ಚೆ ಶುರುವಾಗಿದೆ. ಬಿಜೆಪಿಯ ಯುವ ನಾಯಕರೋರ್ವರು ಇದೇ ಜಿಲ್ಲಾ ಪಂಚಾಯತಿ ಚುನಾವಣೆ ಮೂಲಕವೇ ರಾಜಕೀಯಕ್ಕೆ ಅಧಿಕೃತ ಎಂಟ್ರಿ ಕೊಡಲಿದ್ದಾರೆ....
ಚಲಿಸುತ್ತಿದ್ದ ಕಾರು ನೋಡ ನೋಡುತ್ತಿದ್ದಂತೆ ಬೆಂಕಿಗೆ ಆಹುತಿ..! ಕಾರಲ್ಲಿ ಇದ್ದವರ ಗತಿ ಏನಾಯ್ತು..?
ಹುಬ್ಬಳ್ಳಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಬ್ರಿಜಾ ಕಾರು ನಡುರಸ್ತೆಯಲ್ಲೇ ಹೊತ್ತಿ ಉರಿದು ಬೆಂಕಿಗೆ ಆಹುತಿಯಾದ ಘಟನೆ ಹುಬ್ಬಳ್ಳಿ-ಧಾರವಾಡ ರಸ್ತೆಯ ನವನಗರದ ಬಳಿ ನಡೆದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಕೆಳಗಿಳಿದು ಇಬ್ಬರೂ ಪಾರಾಗಿದ್ದಾರೆ. ಸ್ಥಳಕ್ಕೆಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದೇವಾಲಯಗಳಲ್ಲಿ ಇಂದಿನಿಂದ ಭಕ್ತರಿಗೆ ದರ್ಶನ ಭಾಗ್ಯ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ದೇವಸ್ಥಾನಗಳ ಬಾಗಿಲು ಓಪನ್ ಆಗ್ತಿವೆ. ಕಳೆದ ಎರಡು ತಿಂಗಳಿಂದ ಕೊರೋನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲಾ ದೇವಾಲಯಗಳು ಓಪನ್ ಆಗಲಿವೆ. ಶಿರಸಿ ಮಾರಿಕಾಂಬಾ, ಗೋಕರ್ಣ ಮಹಾಬಲೇಶ್ವರ, ಮುರ್ಡೆಶ್ವರ ದೇವಸ್ಥಾನ, ಇಡಗುಂಜಿ ಮಹಾಗಣಪತಿ ಸೇರಿದಂತೆ ಹಲವು ದೇವಾಲಯಗಳಲ್ಲಿ ಭಕ್ತರಿಗೆ ಇಂದಿನಿಂದ ದರ್ಶನ ಭಾಗ್ಯ ಸಿಗಲಿದೆ. ಜಿಲ್ಲೆಯಲ್ಲಿ ಇಂದು ಓಪನ್ ಆದ ದೇಗುಲಗಳನ್ನು ದರ್ಶನ ಮಡ್ಕೊಬೇಕಾ..? ಹಾಗಾದ್ರೆ ಈ ಕೆಂಪು ಅಕ್ಷರಗಳ ಮೇಲೆ ಜಸ್ಟ್ ಕ್ಲಿಕ್ ಮಾಡಿ..! ಶಿರಸಿ ಮಾರಿಕಾಂಬೆ ದರ್ಶನ ಭಾಗ್ಯ..! ಹಾಗೇನೆ, ಇಂದಿನಿಂದ ದಕ್ಷಿಣ ಭಾರತದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಾಲಯ ಭಕ್ತರಿಗೆ ಮುಕ್ತವಾಗಿದೆ. ಹಾಗೆಯೇ, ಶಿರಸಿಯ ಪ್ರಸಿದ್ಧ ದೊಡ್ಡ ಗಣಪತಿ ದೇವಾಲಯದಲ್ಲೂ ಕೂಡ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಅದೇ ರೀತಿ ಕರ್ನಾಟಕದ ಏಕೈಕ ಕನ್ನಡ ತಾಯಿಯ ದೇಗುಲ, ಜಿಲ್ಲೆಯ ಸಿದ್ದಾಪುರದ ಭುವನಗಿರಿಯ ಭುವನೇಶ್ವರಿ ದೇಗುಲದಲ್ಲಿಯೂ...
ಮುಂಡಗೋಡಿನ “ಅನಾಸಾಗರ್” ಇಸ್ಮಾಯಿಲ್ ಇನ್ನು ನೆನಪು ಮಾತ್ರ..!
ಮುಂಡಗೋಡ: ಪಟ್ಟಣದಲ್ಲಿ ಪ್ಲೈವುಡ್ ಹಾಗೂ ಹಾರ್ಡವೇರ್ ಟ್ರೇಡರ್ಸ್ ನಡೆಸುತ್ತಿದ್ದ ಇಸ್ಮಾಯಿಲ್ ದೊಡ್ಮನಿ (40) ರವಿವಾರ ರಾತ್ರಿ ನಿಧನರಾಗಿದ್ದಾರೆ. ಅನಾಸಾಗರ್ ಅಂತಲೇ ತಾಲೂಕಿನಲ್ಲಿ ಖ್ಯಾತಿ ಪಡೆದಿದ್ದ ಇಸ್ಮಾಯಿಲ್, ಮುಂಡಗೋಡಿನಲ್ಲಿ ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅನಾಸಾಗರ್, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತಿಚೆಗಷ್ಟೇ ಇಸ್ಮಾಯಿಲ್ ರವರ ತಾಯಿ ಅನಾರೋಗ್ಯದಿಂದ ನಿಧನರಾಗಿದ್ದರು. ಇಸ್ಮಾಯಿಲ್ ನಿಧನಕ್ಕೆ ಮುಂಡಗೋಡಿನ ಅಪಾರ ಸ್ನೇಹ ಬಳಗ ಸಂತಾಪ ಸೂಚಿಸಿದೆ.