ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಷ್ಟರು ನೀಚ ಕೃತ್ಯ ಮಾಡಿದ್ದಾರೆ. ಮೀನು ಸಾಕಾಣಿಕೆ ಮಾಡಿದ್ದ ಕೆರೆಗೆ ವಿಷ ಬೆರೆಸಿ ಮೀನುಗಳ ಸಾವಿಗೆ ಕಾರಣರಾಗಿದ್ದಾರೆ. ನೂರಾರು ಮೀನುಗಳು ಹಂತಹಂತವಾಗಿ ಸಾವನ್ನಪ್ಪುತ್ತಿವೆ ಅನ್ನೊ ಮಾಹಿತಿ ಲಭ್ಯವಾಗಿದೆ. ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ ಸರ್ವೇ ನಂಬರ್ 49 ರಲ್ಲಿ ಘಟನೆ ನಡೆದಿದ್ದು, ಮೌಲಾಲಿ ಮಕಾಂದಾರ ಎನ್ನುವವರು ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪಡೆದಿದ್ದರು. ಆದ್ರೆ, ಈಗಾಗಲೇ ಮೀನುಗಳು ಒಂದು ಹಂತಕ್ಕೆ ಬೆಳೆದಿದ್ದಾಗಲೇ ದುರುಳರು ಕೆರೆಗೆ ವಿಷ ಹಾಕಿರೋ ಅನುಮಾನ ವ್ಯಕ್ತವಾಗಿದೆ. ಹೀಗಾಗಿ, ಮೀನುಗಳು ಸಾವನ್ನಪ್ಪಿವೆ. ಎನ್ನಲಾಗಿದ್ದು ಆತಂಕಕ್ಕೆ ಕಾರಣವಾಗಿದೆ.
Top Stories
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಮುಂಡಗೋಡ ತಾಲೂಕಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಾಳೆ ಮಂಗಳವಾರ ದಿ. 22 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಅಂತಾ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ ಮಾಹಿತಿ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ ಮುಂಡಗೋಡಿನ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಅಂತಾ ಅವ್ರು ಮಾಹಿತಿ ನೀಡಿದ್ದಾರೆ.
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು, ಸೂಕ್ತ ಸಮಯದಲ್ಲಿ ಚಿಕಿತ್ಸೆಗೆ ಸಾಗಿಸಿದ್ದಲ್ಲದೇ, ಅಕ್ಣರಶಃ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಆ ವ್ಯಕ್ತಿಯ ಬೆಲೆಬಾಳುವ ವಸ್ತುಗಳನ್ನು ಆರು ತಿಂಗಳವರೆಗೂ ಜೋಪಾನವಾಗಿ ಕಾಯ್ದಿಟ್ಟು, ನಂತರ ಮರುಳಿಸಲಾಗಿದೆ. ಇಂತಹದ್ದೊಂದು ಕಾರ್ಯವನ್ನು ಅಥಣಿಯ ಅಂಬ್ಯುಲೆನ್ಸ್ ಸಿಬ್ಬಂದಿಗಳಾದ EMT ಶ್ರೀಮತಿ ನಿರ್ಮಲಾ ಬನಸೋಡೆ ಹಾಗೂ ಪೈಲೆಟ್ ಯಲ್ಲಾಲಿಂಗ ಅವರು ಮರಳಿಸಿ ಮಾನವೀಯ ಹಾಗೂ ಪ್ರಮಾಣಿಕ ಕಾರ್ಯ ಮಾಡಿದ್ದಾರೆ. ಅಂದಹಾಗೆ 2024 ರ ಅಕ್ಟೋಬರ್ 19 ರಂದು, ಕಲಘಟಗ ಮೂಲದ ಅಕ್ಷಯ ಸುನೀಲ ಲಗಳಿ (32) ಈತನು ವೈಯಕ್ತಿಕ ಕೆಲಸದ ನಿಮಿತ್ತ ಬೈಕ್ ಮೇಲೆ ಅಥಣಣಿಯಿಂದ ಐಗಳಿಯ ಕಡೆಗೆ ಹೋಗುತ್ತಿರುವಾಗ, ಬಡಚಿಯ ಗ್ರಾಮದಲ್ಲಿ ಬಸ್ಸಿಗೆ ಈತನ ಬೈಕ್ ಗೆ ಅಪಘಾತ ಸಂಭವಿಸಿತ್ತು. ಹೀಗಾಗಿ, ಆ ವೇಳೆ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು, ಸ್ಥಳೀಯರು 108 ಅಂಬ್ಯುಲೆನ್ಸ್ ಗೆ ಕರೆಮಾಡಿದ್ದರು. ಆ ವೇಳೆ ಅಂಬ್ಯುಲೆನ್ಸ್ ಸಿಬ್ಬಂದಿಗಳಾದ EMT ಶ್ರೀಮತಿ ನೀರ್ಮಲಾ ಬನಸೋಡೆ ಹಾಗೂ ಪೈಲೆಟ್ ಯಲ್ಲಾಲಿಂಗ ಸ್ಥಳಕ್ಕೆ ಬಂದು...
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರದ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ನಡೆದಿದೆ. ಈ ಹತ್ಯೆಯನ್ನು ಅವರ ಪತ್ನಿಯೇ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವವನ್ನು ಮನೆಯಲ್ಲಿ ಪತ್ತೆ ಹಚ್ಚಲಾಗಿದೆ ಮತ್ತು ಮನೆ ತುಂಬಾ ರಕ್ತಸಿಕ್ತವಾದ ಸ್ಥಿತಿಯಲ್ಲಿ ಕಂಡುಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈಗಾಗಲೆ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 1981ರ ಬ್ಯಾಚ್ನ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ (68) ಬೆಂಗಳೂರು ನಗರದ ಎಚ್ಎಸ್ಆರ್ ಲೇಔಟ್ನಲ್ಲಿ ವಾಸಿಸುತ್ತಿದ್ದರು. 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ಓಂ ಪ್ರಕಾಶ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಸೆಂಟ್ ಜಾನ್ ಆಸ್ಪತ್ರೆಗೆ ಕಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಭೀಕರ ಹತ್ಯೆ ಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಇಡೀ ಕಾರವಾರ ನಗರ ಬೆಚ್ಚಿ ಬಿದ್ದಿದೆ. ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಈ ಕೊಲೆಯಿಂದ ಕಾರವಾರಿಗರು ಬೆಚ್ಚಿ ಬಿದ್ದಿದ್ದಾರೆ. ಸ್ಕೂಟಿಯಲ್ಲಿ ಬಂದ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆಂದು ಜನ ಮಾತಾಡಿ ಕೊಳ್ಳುತ್ತಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸತೀಶ್ ಕೊಳಂಕರ್ ನನ್ನು ಪೊಲೀಸರು, ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದಾರೆ.
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
ಹಾವೇರಿ ತಾಲೂಕಾ ಶಿಕ್ಷಣಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಿಇಓ ಮೌನೇಶ ಬಡಿಗೇರ ಮನೆ ಮೇಲೆ ದಾಳಿ ನಡೆದಿದ್ದು, ವೇತನ ಬಿಡುಗಡೆ ಮಾಡಲು 50 ಸಾವಿರಕ್ಕೆ ಡಿಮ್ಯಾಂಡ್ ಮಾಡಿ, ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ಶಿಕ್ಷಕ ಪ್ರಕಾಶ್ ಬಾರ್ಕಿ ಎಂಬುವವರಿಗೆ ವೇತನ ಬಿಡುಗಡೆ ಮಾಡಲು, 50 ಸಾವಿರ ರೂ. ಗೆ ಬೇಡಿಕೆ ಇಟ್ಟಿದ್ದರು, ಅದ್ರಲ್ಲಿ ಇವತ್ತು 15 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಟ್ರ್ಯಾಪ್ ಮಾಡಲಾಗಿದೆ. ದಾಳಿ ವೇಳೆ ಬಿಇಓ ಮೌನೇಶ್ ಬಡಿಗೇರ ಹಾಗೂ ಅತನ ಜೀಪ್ ಡ್ರೈವರ್ ವಶಕ್ಕೆ ಪಡೆಯಲಾಗಿದ್ದು ಮತ್ತೋರ್ವ ಲಂಚಬಾಕ ಶಿಕ್ಷಕ ಪರಾರಿಯಾಗಿದ್ದಾನೆ.
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಮುಂಡಗೋಡ: ಸಿ.ಇ.ಟಿ ಪರೀಕ್ಷೆಯ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಬ್ರಾಹ್ಮಣ ಸಮುದಾಯದ ಒಬ್ಬ ವಿದ್ಯಾರ್ಥಿಯನ್ನು ಆತ ಧರಿಸಿದ ಜನಿವಾರವನ್ನು ಕತ್ತರಿಸಿ ಪರೀಕ್ಷೆಗೆ ಪ್ರವೇಶ ನೀಡಿರುವುದನ್ನು ಹಾಗೂ ಬೀದರನಲ್ಲಿ ವಿದ್ಯಾರ್ಥಿ ಜನಿವಾರ ಧರಿಸಿದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡದ ಘಟನೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಖಂಡಿಸಿರೊ ಅವ್ರು, ಈ ದೇಶವು ವಿವಿಧ ಧರ್ಮ, ಸಂಪ್ರದಾಯ, ಧಾರ್ಮಿಕ ಚಿಹ್ನೆ, ಆಚರಣೆಗಳ ಗೌರವವನ್ನು ಮೂಲಭೂತ ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡದ್ದು ಸಂವಿಧಾನಾತ್ಮಕ ಮೌಲ್ಯಗಳ ವಿರೋಧವಾಗಿದೆ. ನಾನು ಈ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ವೈಯಕ್ತಿಕ ಮತ್ತು ಧಾರ್ಮಿಕ ಗೌರವವನ್ನು ಕಾಪಾಡಬೇಕು, ಅವರು ಬೆಳೆದ ಸಂಸ್ಕೃತಿಯನ್ನು ಗೌರವಿಸಬೇಕು. ಯಾವುದೇ ರೂಪದ ಜಾತಿ ಅಥವಾ ಧಾರ್ಮಿಕ ಭೇದಭಾವ ಶಿಕ್ಷಣ ಕ್ಷೇತ್ರಕ್ಕೆ ಗೌರವ ನೀಡುವುದಿಲ್ಲ. ಸರಕಾರ ತಕ್ಷಣ ಈ ಘಟನೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ಪರೀಕ್ಷಾಧಿಕಾರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಹಾಗೂ...
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿಯನ್ನು ಎನಕೌಂಟರ ಮಾಡಲಾಗಿದೆ. ಮನೆಯ ಮುಂದೆ ಆಟ ಆಡುತ್ತಿದ್ದ 5 ವರ್ಷದ ಬಾಲಕಿಯನ್ನು ಸಂತೋಷ ನಗರದ ಅಜ್ಞಾತ ಸ್ಥಳಕ್ಕೆ ಕರೆದೋಯ್ದಿದ್ದ ಬಿಹಾರ ಮೂಲದ ಯುವಕ ಆಕೆಯ ಸಾವಿಗೆ ಕಾರಣವಾಗಿದ್ದ. ಘಟನೆ ನಡೆಯುತ್ತಿದ್ದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗಳು ಜೋರಾಗಿದ್ದವು. ಆರೋಪಿಯನ್ನು ನಮ್ಮ ಕೈಗೆ ಕೊಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಲು ಹೋದಾಗ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿದ್ದ. ತಕ್ಷಣ ಕಾಲಿಗೆ ಫೈರ್ ಮಾಡಿದ ಪೊಲೀಸರು ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ತಂದಿದ್ದರು. ಆರೋಪಿ ಕಾಲಿಗೆ ಗುಂಡೇಟು ಬಿದ್ದಿದ್ದರಿಂದ ರಕ್ತಸ್ರಾವವಾಗಿ ಆತ ಮೃತಪಟ್ಟಿದ್ದಾನೆ.
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. 5 ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, ಕಾಮದ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಆಕ್ರೋಶಗೊಂಡ ಹಲವರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಕಮೀಷನರ್ ಕಿಮ್ಸ್ಗೆ ಭೇಟಿ ನೀಡಿದ್ದಾರೆ.
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ.ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ಜಾತಿ ತಾನೊಂದೆ ವಲಂ ಎಂದ ಕನ್ನಡದ ಆದಿ ಕವಿ ಪಂಪ ನ ನೆನಪಿನಲ್ಲಿ ಬನವಾಸಿಯಲ್ಲಿ ಪಂಪ ಭವನ ನಿರ್ಮಾಣ ಮಾಡುವ ಕುರಿತಂತೆ ಜಿಲ್ಲಾಡಳಿತದ ಮೂಲಕ ಪ್ರಸ್ತಾವನೆ ಸಲ್ಲಿಕೆಯಾದಲ್ಲಿ ಈ ಬಗ್ಗೆ ಖಂಡಿತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು. ಬನವಾಸಿಯಲ್ಲಿ ಪಂಪ ವನ ಅಭಿವೃದ್ಧಿಗಾಗಿ 50 ಲಕ್ಷ ಅನುದಾನ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಕದಂಬ ಉತ್ಸವಕ್ಕೆ ಪ್ರತಿ ವರ್ಷ 2...









