ಶಿರಸಿ: ಆಧ್ಯಾತ್ಮ ಸಾಧನೆಯ ಜೊತೆಗೆ ಸಮಾಜಮುಖಿ ಮಠವಾಗಿಯೂ ಗುರುತಿಸಿಕೊಂಡಿರೋ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನವು ಮಠದ ಸುತ್ತಲಿನ ಅಗತ್ಯವುಳ್ಳ ಜನರಿಗೆ ಉಚಿತವಾಗಿ ದಿನಸಿ ಸಾಮಗ್ರಿ ವಿತರಿಸಿತು. ಲಾಕ್ ಡೌನ್, ಕೋವಿಡ್ ಕಾರಣದಿಂದ ಬಡತನದಲ್ಲಿ ಇರೋ ಕುಟುಂಬಗಳಿಗೆ ಅಕ್ಕಿ, ಕಾಯಿ, ಬೆಲ್ಲ, ಬೇಳೆ, ಶ್ರೀದೇವರ ಪ್ರಸಾದವನ್ನ ಕೂಡ ಸ್ವರ್ಣವಲ್ಲೀ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ವಿತರಿಸಿದರು. ಇದೇ ವೇಳೆ ಈ ಸಂದಿಗ್ದ ಕಾಲವನ್ನು ಒಟ್ಟಾಗಿ ಎದುರಿಸಬೇಕಾಗಿದೆ. ಸಾಮಾಜಿಕ ಅಂತರ, ಮಾಸ್ಕ ಧಾರಣೆ ಮಾಡಬೇಕು. ಆಂತರಿಕ ಧೈರ್ಯಕ್ಕಾಗಿ ದೇವರ ಜಪ ಧ್ಯಾನ ಮಾಡಬೇಕು ಅಂತ ಸ್ವಾಮೀಜಿ ಆಶಿಸಿದರು. ಈ ವೇಳೆ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ, ಸೋಂದಾ ಗ್ರಾ.ಪಂ.ಅಧ್ಯಕ್ಷೆ ಮಮತಾ ಜೈನ್, ಮಠದ ವ್ಯವಸ್ಥಾಪಕ ಎಸ್.ಎನ್. ಗಾಂವಕರ ಇತರರು ಇದ್ದರು.
Top Stories
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!
ಸೆನ್ಸೆಕ್ಸ್ 873 ಪಾಯಿಂಟ್ಸ್ ಕುಸಿತ: ಮಂಗಳವಾರ ಷೇರು ಮಾರುಕಟ್ಟೆ ಕರೆಕ್ಷನ್ಗೆ 5 ಕಾರಣಗಳು!
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!
ಚಿನ್ನದ ರೇಟು ದಿಢೀರ್ ₹490 ಇಳಿಕೆ, ಬೆಳ್ಳಿ ಬೆಲೆಯೂ ₹1000 ಕುಸಿತ; ಇವತ್ತು 10 ಗ್ರಾಂ ಬಂಗಾರದ ಬೆಲೆ ಎಷ್ಟು..?
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!
ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ
ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!
ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ..! ಗದ್ದಾರ್ ಗಳು ಅಂದ್ರೆ ಇವ್ರೇ ಅಲ್ವಾ..?
ಪ್ಲೇಆಪ್ ತಲುಪಿರೋ RCB ತಂಡಕ್ಕೆ ಮತ್ತೊಂದು ಶುಭಸುದ್ದಿ..! ಇದನ್ನ ಲಾಟರಿ ಅಂದ್ರೂ ಓಕೆ.!!
ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
ಮುಂಡಗೋಡ ಪಟ್ಟಣದಲ್ಲಿ ಅಗತ್ಯ ವಸ್ತುಗಳ ಖರೀಧಿ ಭರಾಟೆ ಜೋರು..!
ಮುಂಡಗೋಡ- ಪಟ್ಟಣದಲ್ಲಿ ಇಂದಿನಿಂದ ವಾರದ 4 ದಿನಗಳ ಕಾಲ ಬೆಳಿಗ್ಗೆ 8 ಗಂಟೆಯಿಂದ ಮದ್ಯಾನ 12 ಗಂಟೆವರೆಗೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ಕಲ್ಪಿಸಿರೋ ಹಿನ್ನೆಲೆಯಲ್ಲಿ ತಾಲೂಕಿನೆಲ್ಲೆಡೆಯಿಂದ ಪಟ್ಟಣಕ್ಕೆ ಬೆಳಗಿನಿಂದಲೇ ಜನ ಬಂದಿದ್ರು. ಅಗತ್ಯ ವಸ್ತುಗಳ ಖರೀಧಿಗೆ ಬಂದ ಜನ ಅಗತ್ಯ ವಸ್ತಗಳಿಗಾಗಿ ಮುಗಿಬೀಳುತ್ತಿರೊ ದೃಷ್ಯಗಳು ಸಾಮಾನ್ಯವಾಗಿತ್ತು. ಹೀಗಾಗಿ ಪೊಲೀಸ್ರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಸಿದ್ರು. ಇನ್ನು ದಿನಸಿ ಅಂಗಡಿಗಳ ಮಾಲೀಕರಿಗೂ ಅಂಗಡಿಗಳ ಮುಂದೆ ಗ್ರಾಹಕರಿಗೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಬಳಸುವಂತೆ ಸೂಚಿಸಲು ಎಚ್ಚರಿಸಿದ್ರು.
ಮುಂಡಗೋಡ ಪಟ್ಟಣದಲ್ಲಿ ಅನಗತ್ಯ ತಿರುಗಾಡುವವರ ವಿರುದ್ಧ ಪೊಲೀಸರ ಕಠಿಣ ಕ್ರಮ..!
ಮುಂಡಗೋಡ- ಪಟ್ಟಣದಲ್ಲಿ ಅನಗತ್ಯ ತಿರುಗಾಡುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪರಿಶೀಲನೆಗೆ ಇಳಿದಿರೋ ಪೊಲೀಸ್ರು ಅನಗತ್ಯವಾಗಿ ತಿರುಗಾಡುವ ವಾಹನಗಳ ಬಗ್ಗೆ ಕಣ್ಣಿಟ್ಟಿದ್ರು. ಬೈಕ್ ಸವಾರರು, ಕಾರ್ ಸವಾರರು ಪಟ್ಟಣದ ಒಳಗೆ ಅಥವಾ ಪಟ್ಟಣದಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಅಂತವರನ್ನು ಪೊಲೀಸರು ಪರಿಶೀಲಿಸುತ್ತಿದ್ದರು. ಇನ್ನು ಮಾಸ್ಕ್ ಧರರಿಸದೇ ತಿರುಗಾಡುವ ಸವಾರರ ವಿರುದ್ಧ ಸಮರ ಸಾರಿರೋ ಪೊಲೀಸ್ರು, ಮಾಸ್ಕ್ ಧರಿಸದವರನ್ನು ತಡೆದು ಕ್ಲಾಸ್ ತೆಗೆದುಕೊಂಡರು, ಅಲ್ದೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ರು.
ಮುಂಡಗೋಡದ ಶಿವಾಜಿ ಸರ್ಕಲ್ ನಲ್ಲಿ ಜನವೋ ಜನ..! ಸಾಮಾಜಿಕ ಅಂತರ ಮಾಯ..!!
ಮುಂಡಗೋಡ- ಪಟ್ಟಣದಲ್ಲಿ ಇಂದು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿರೋ ಹಿನ್ನೆಲೆಯಲ್ಲಿ, ಮುಂಡಗೋಡ ಪಟ್ಟಣದ ಹೃದಯಭಾಗ ಶಿವಾಜಿ ಸರ್ಕಲ್ ನಲ್ಲಿ ಜನಸಂದಣಿ ಸೇರಿತ್ತು. ಅಗತ್ಯ ವಸ್ತುಗಳ ಖರೀಧಿಗೆ ತಾಲೂಕಿನ ಗ್ರಾಮೀಣ ಭಾಗಗಳಿಂದ ಬಂದಿದ್ದ ಜನ ಅಗತ್ಯ ವಸ್ತುಗಳ ಖರೀಧಿಯಲ್ಲಿ ಮುಳುಗಿದ್ರು. ಪಟ್ಟಣದ ಬಹುತೇಕ ದಿನಸಿ ಅಂಗಡಿಗಳು ಫುಲ್ ಆಗಿದ್ದವು. ಹೀಗಾಗಿ ಕೆಲವು ಕಡೆ ಸಾಮಾಜಿಕ ಅಂತರ ಅನ್ನೋದು ಮಂಗಮಾಯವಾಗಿತ್ತು. ಪೊಲೀಸರು ಎಷ್ಟೇ ಎಚ್ಚರಿಸಿದ್ರೂ ಜನ ಕ್ಯಾರೇ ಅನ್ನದೇ ಸಾಮಾಜಿಕ ಅಂತರ ಮರೆತು ಖರೀಧಿಯಲ್ಲಿ ಬ್ಯುಸಿಯಾಗಿದ್ರು.
LVK ಯಿಂದ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ರಕ್ಷಕ ಕಿಟ್, ದಿನಸಿ ಕಿಟ್ ವಿತರಣೆ..!
ಮುಂಡಗೋಡ- ತಾಲೂಕಿನ ಹುನಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ LVK ಮುಂಡಗೋಡ ವತಿಯಿಂದ ಆಶಾ ಕರ್ಯಕರ್ತೆಯರಿಗೆ ಸ್ಯಾನಿಟೈಸ್, ಮಾಸ್ಕ್ ಸೇರಿ ಆರೋಗ್ಯ ರಕ್ಷಕ ಕಿಟ್ ವಿತರಣೆ ಮಾಡಲಾಯಿತು. ಹಾಗೇ ಆಶಾ ಕರ್ಯಕರ್ತರಿಗೆ ದಿನಸಿ ಸಾಮಗ್ರಿಗಳ ಕಿಟ್ ನೀಡಲಾಯಿತು. ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ ಜವಾಬ್ದಾರಿಯ ಕಾರ್ಯಗಳನ್ನು ಮಾಡುತ್ತಿರೋ LVK ತಾಲೂಕಿನ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಇಂತಹದ್ದೊಂದು ಸೇವೆ ಮಾಡುತ್ತಿದೆ. ಇನ್ನು ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎಸ್.ವಿ. ಸುಳ್ಳದ, LVK ಸಂಚಾಲಕರು, ಆರೋಗ್ಯ ಸಿಬ್ಬಂದಿಗಳು ಹಾಜರಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆ, ನಡೆಯತ್ತಾ..? ರದ್ದಾಗತ್ತಾ..? ಸುಪ್ರೀಂ ನಲ್ಲಿ ಇಂದು ಭವಿಷ್ಯ..!!
ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿನ ಅಬ್ಬರ ಜೋರಾಗಿದೆ. ಈ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಾ, ಇಲ್ಲಾ ರದ್ದಾಗುತ್ತಾ ಅನ್ನೋ ಗೊಂದಲ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿಂದು ಸುಪ್ರೀಂ ಕೋರ್ಟ್ ಪರೀಕ್ಷೆಯ ಭವಿಷ್ಯ ನಿರ್ಧಾರ ಮಾಡಲಿದೆ. ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೇ ಬೇಡವೇ ಅನ್ನೋ ಕುರಿತು ಕೇಂದ್ರ ಸರಕಾರ ಕಳೆದ ವಾರ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕೇಂದ್ರ ಶಿಕ್ಷಣ ಇಲಾಖೆ ಜೂನ್ ತಿಂಗಳಿನಲ್ಲಿಯೇ ಸಿಬಿಎಸ್ಇ ಹಾಗೂ ಐಸಿಎಸ್ಇ ಸಿಲೆಬಸ್ ನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಾಗಿ ಘೋಷಣೆಯನ್ನು ಮಾಡಿದೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕು ಮಿತಿಮೀರಿರುವ ಹೊತ್ತಲ್ಲೇ ಪರೀಕ್ಷೆ ನಡೆಸುವುದಕ್ಕೆ ಕೇಂದ್ರ ಸರಕಾರ ಮುಂದಾಗುತ್ತಿದ್ದಂತೆಯೇ ವಕೀಲರಾದ ಮಮತಾ ಶರ್ಮಾ ಎಂಬವರು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
ಮುಂಡಗೋಡ ತಾಲೂಕಿನಲ್ಲಿಂದು 53 ಕೊರೋನಾ ಪಾಸಿಟಿವ್, 18 ಗುಣಮುಖ, ಓರ್ವ ಸಾವು..!
ಮುಂಡಗೋಡ ತಾಲೂಕಿನಲ್ಲಿ ಇಂದು 53 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟೂ 18 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ, ಹಾಗೇ 68 ವರ್ಷದ ಇಂದೂರಿನ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಅಂತಾ ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ. ಇನ್ನು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಶ್ಚಾರ್ಜ್ ಆದವರಿಗೆ ಕೋವಿಡ್ ಕೇರ್ ಸೆಂಟರ್ ನ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಶುಭ ಹಾರೈಸಿ ಬಿಳ್ಕೊಟ್ಟರು..
ಅಕ್ರಮ ಮದ್ಯ ಕುಡಿಯಲು ಅವಕಾಶ, ಚಹಾ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ..!
ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ನ್ಯಾಸರ್ಗಿ ಕ್ರಾಸ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿ, ತನ್ನ ಅಂಗಡಿಯಲ್ಲೆ ಮದ್ಯ ಕುಡಿಯಲು ಅನುವು ಮಾಡಿಕೊಟ್ಟು ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಚಣಕಿ ಗ್ರಾಮದ ನಾಗರಾಜ್ ದೊಡ್ಡ ಹನ್ಮಂತಪ್ಪ ವಡ್ಡರ ಎಂಬುವವನೇ ಆರೋಪಿಯಾಗಿದ್ದಾನೆ.. ಈತ ತನ್ನ ಚಹಾ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ, ಅಲ್ಲದೇ ಅಲ್ಲಿಯೇ ಮಧ್ಯ ಕುಡಿಯಲು ಜನರಿಗೆ ಅವಕಾಶ ನೀಡುತ್ತಿದ್ದ. ಹೀಗಾಗಿ ಮುಂಡಗೋಡ ಕ್ರೈಂ ಪಿಎಸ್ ಐ ಎನ್.ಡಿ.ಜಕ್ಕಣ್ಣವರ್ ದಾಳಿ ನಡೆಸಿ ಚಹಾ ಅಂಗಡಿಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ವಿವಿಧ ಕಂಪನಿಯ ಮದ್ಯ ಹಾಗೂ 215 ರೂ ನಗದು ಜಪ್ತಿ ಮಾಡಿ, ಪ್ರಕರಣ ದಾಖಲಿಸಿದ್ದಾರೆ.
ಮೃತಪಟ್ಟ ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಫರ್ಧಾ ಹೋರಿ..!
ಮುಂಡಗೋಡ-ತಾಲೂಕಿನ ಹೆಮ್ಮೆಯ ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಪರ್ಧಾ ಹೋರಿ ಅನಾರೋಗ್ಯದ ಹಿನ್ನೆಲೆ ನಿನ್ನೆ ತಡರಾತ್ರಿ ಮೃತಪಟ್ಟಿದೆ. ಮುಂಡಗೋಡ ಕಾ ಮಹಾರಾಜ್ 181 ಪೀ ಪೀ ಸ್ಪರ್ಧಾ ಹೋರಿ ಎಂದೇ ಖ್ಯಾತಿಯಾಗಿರುವ ಹೋರಿ, ತೀವ್ರ ಅನಾರೋಗ್ಯದಿಂದ ಬಳಲಿ ಮೃತಪಟ್ಟಿದೆ. ರಾಜ್ಯದ ನಾನಾ ಭಾಗಗಳಲ್ಲಿ ನಡೆದಿದ್ದ ಅನೇಕ ಸ್ಪರ್ಧೆಗಳಲ್ಲಿ ಪಾಲ್ಗೊಂಡಿತ್ತು. ಅದ್ರಲ್ಲೂ ಹಾನಗಲ್, ಬೆಟ್ಟದಕುರ್ಲಿ ಹಾಗೂ ಖಚವಿ ಹೀಗೆ ಅನೇಕ ಗ್ರಾಮಗಳಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ಯಲ್ಲಿ ಪಾಲ್ಗೊಂಡು ಭಾರೀ ಬಹುಮಾನಗಳನ್ನು ಬಾಚಿ ಕೊಂಡಿತ್ತು.. ಹೀಗೆ ಅನೇಕ ಜನರ ಮನಸ್ಸನ್ನು ಗೆದ್ದು ತನ್ನದೇ ಆದ ಅಭಿಮಾನಿ ಬಳಗ ಹೊಂದಿದ್ದ ತಾಲೂಕಿನ ಮೊಟ್ಟ ಮೊದಲ ಪೀ ಪೀ ಹೋರಿ ಎಂದು ಖ್ಯಾತಿ ಪಡೆದಿತ್ತು. ಹೀಗಾಗಿ ಅಪಾರ ಅಭಿಮಾನಗಳು ಹೋರಿಯ ನಿಧನದಕ್ಕೆ ಕಂಬನಿ ಮಿಡಿದಿದ್ದಾರೆ.
10 ವರ್ಷದಿಂದ ನಾಪತ್ತೆ, ಇದ್ದಕ್ಕಿದ್ದಂತೆ ಪತ್ತೆ..! ಕೊರೋನಾ ಮಾಡಿದ ಪವಾಡ..!!
ಕೊಪ್ಪಳ- ಹತ್ತು ವರ್ಷಗಳ ಹಿಂದೆ ಕಾಣೆಯಾಗಿದ್ದ ಮಗ ಇನ್ನಿಲ್ಲ ಎನ್ನುವ ಕೊರಗಿನಲ್ಲೇ ಹತ್ತು ವರ್ಷಗಳಿಂದ ದಿನದೂಡುತ್ತಿದ್ದ ಪೋಷಕರಿಗೆ ಅಚ್ಚರಿ ಎಂಬಂತೆ ಮಗ ಪ್ರತ್ಯಕ್ಷವಾಗಿದ್ದು ಕಂಡು ಇಡೀ ಗ್ರಾಮದ ಜನರಿಗೆ ಅಚ್ಚರಿಯಾಗಿದೆ. ಹೌದು! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ದೇವಮ್ಮ ಗಂಡ ಗುರಬಸಪ್ಪ ಮಾಸ್ತರ ದಂಪತಿಯ ಮೂರು ಮಕ್ಕಳಲ್ಲಿ ಒರ್ವ ಮಗ ದೇವರಾಜ ಮಾಸ್ತರ ಹತ್ತು ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿ ಸಂಪರ್ಕದಲ್ಲೇ ಇರಲಿಲ್ಲ. ಕೊರೊನಾ ಭೀತಿಯಿಂದ ಕಂಪನಿ ಒಂದರಲ್ಲಿ ಕಾರ್ಮಿಕನಾಗಿರುವ ದೇವರಾಜ ಪಕ್ಕದ ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟದ ಸ್ನೇಹಿತರ ಸಹಾಯದಿಂದ ಸ್ವಗ್ರಾಮಕ್ಕೆ ಹಿಂತಿರುಗಿ ಬಂದಿದ್ದಾನೆ. ದೇವರಾಜು 2008-09ರಲ್ಲಿ ಬೆಂಗಳೂರಿಗೆ ದುಡಿಯಲೆಂದು ಹೋದವನು ನಾಪತ್ತೆಯಾಗಿದ್ದ, ಮಗ ಕಾಣೆಯಾದ ಹಿನ್ನೆಲೆಯಲ್ಲಿ ಹೆತ್ತವರು ಕಣ್ಣೀರಿನಲ್ಲಿಯೇ ದಿನಗಳನ್ನು ನೂಕುತ್ತಿದ್ದರು. ಕಳದೆರಡು ದಿನದ ಹಿಂದೆ ಜುಮಲಾಪೂರ ಗ್ರಾಮಕ್ಕೆ ಬಂದಿದ್ದಾನೆ. ಪಾಂಡುರಂಗ ದೇವಾಲಯಕ್ಕೆ ಬಂದು ನಮಸ್ಕರಿಸುವ ಮುನ್ನ ತನ್ನ ಪರಿಚಯವನ್ನು ಹೇಳಿಕೊಂಡಾಗ ಸ್ಥಳದಲ್ಲಿದ್ದವರಿಗೆ ಆಶ್ಚರ್ಯವಾಗಿದೆ. ಈ ವಿಷಯವನ್ನು ತಾಯಿ ದೇವಮ್ಮ, ಗುರಬಸಪ್ಪ ಮಾಸ್ತರ ದಂಪತಿಗೆ ಗ್ರಾಮಸ್ಥರು...