ಪಬ್ಲಿಕ್ ಫಸ್ಟ್ ನ್ಯೂಸ್ ನ ಇವತ್ತಿನ ಟಾಪ್ 5 ನ್ಯೂಸ್ ನೋಡಲು ಈ ಕೆಳಗಿನ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. Subscribe ಮಾಡಿ.. https://youtu.be/CJbeBeJyGuk
Top Stories
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!
ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ಕೊಡಲು ಸಿದ್ದ ಅಂತಾ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸಚಿವರು ಸಿಎಂ ರಾಜೀನಾಮೆ ಮಾತಿಗೆ ಹೇಳಿದ್ದಾದ್ರೂ ಏನು..? ತಿಳಿಬೇಕಾ ಈ ಕೆಳಗಿನ ಯೂಟ್ಯೂಬ್ ಲಿಂಕ್ ಗೆ ಕ್ಲಿಕ್ ಮಾಡಿ.. ಇತ್ತೀಚೆಗೆ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೇ ಪದೇ ಚರ್ಚೆ ಆಗ್ತಿದೆ, ಪದೇ ಪದೇ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಸಿಎಂ ಈ ರೀತಿ ಹೇಳಿರಬಹುದು. ಕೋವಿಡ್ ಸಮಯದಲ್ಲಿ ಸಿಎಂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ. ಹೈಕಮಾಂಡ್ ನಿಂದಲೂ ಯಾವುದೇ ರೀತಿಯ ಸೂಚನೆ ಅವರಿಗಿಲ್ಲ ಅಂತಾ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.
ನಂದಿಕಟ್ಟಾ ಗ್ರಾಮದ ಕೊರೋನಾ ಸೋಂಕು ಪೀಡಿತರ ಕುಟುಂಬಗಳಿಗೆ ದಿನಸಿ ಕಿಟ್..!
ಮುಂಡಗೋಡ:ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಕೊರೋನಾ ಪಾಸಿಟಿವ್ ಪೀಡಿತರ ಕುಟುಂಬಗಳಿಗೆ, ಗ್ರಾಮ ಪಂಚಾಯತಿ ಸದಸ್ಯರು ಆಹಾರದ ಕಿಟ್ ವಿತರಿಸಿದ್ರು. ಕೊರೋನಾ ಎರಡನೇ ಅಲೆಯ ಪರಿಣಾಮ ಲಾಕ್ ಡೌನ್ ಜಾರಿಯಾದ ಹಿನ್ನಲೆಯಲ್ಲಿ ನಂದಿಕಟ್ಟಾ ಗ್ರಾಮದ ಬಡ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ. ಅದ್ರಲ್ಲೂ ಕೊರೋನಾ ಪಾಸಿಟಿವ್ ದೃಢಪಟ್ಟ ಕೆಲವು ಕುಟುಂಬಗಳ ಪಾಡು ಹೇಳತೀರದ್ದಾಗಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯ ಸಂತೋಷ ಭೋಸ್ಲೆ ಸೇರಿದಂತೆ ಹಲವು ಸದಸ್ಯರು ಅಂತಹ ಬಡ ಕುಟುಂಬಗಳಿಗೆ ಆಹಾರದ ದಿನಸಿ ಕಿಟ್ ವಿತರಿಸಿದ್ದಾರೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ, ಸಂತೋಷಿ ಮಾತಾ ಕಾಳಿಕಾ ಮಠದಿಂದ ಆಹಾರ ಪೊಟ್ಟಣ ವಿತರಣೆ..!
ಹಳಿಯಾಳ : ಜೊಯಿಡಾ ತಾಲೂಕಿನ ಕ್ಯಾಸರಲಾಕ್ ಸಮೀಪದ ಕುಣಗಿನಿಯಲ್ಲಿರುವ ಶ್ರೀ ಸಂತೋಷಿ ಮಾತಾ ಕಾಳಿಕಾ ಮಠದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ರೋಗಿಗಳಿಗೆ ಆಶ್ರಮದ ಶ್ರೀ ರಘುವೀರ ಗುರೂಜಿಯವರು ಒಂದು ದಿನದ ಊಟದ ಪೊಟ್ಟಣವನ್ನು ವಿತರಿಸಿದರು. 150 ಕ್ಕೂ ಹೆಚ್ಚು ಊಟದ ಪೊಟ್ಟಣವನ್ನು ವಿತರಿಸಲಾಯ್ತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಚವ್ವಾಣ, ಪ್ರಮುಖರಾದ ಮಾರುತಿ ನರಗುಂದಕರ, ಯಲ್ಲಪ್ಪಾ ಮಾಲವಣಕರ, ಯಶವಂತ ಪಟ್ಟೇಕರ, ಬಸವರಾಜ ಹಿರೆಮೊರಬ, ಆಶ್ರಮದ ರೂಪೇಶ ನಾಯ್ಕ, ಪಾಂಡುರಂಗ ಶೇಠ, ರಿಶ್ವಿತ್ ನಾಯ್ಕ, ಸಿದ್ದಾಂತ ಪರಬ ಮೊದಲಾದವರು ಇದ್ದರು.
ಮಳಗಿ: ಮೀನು ಹಿಡಿಯಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವು..!
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ, ಮೀನು ಹಿಡಿಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಉಮೇಶ್ ಶಿವಪ್ಪ ಬೋವಿ(25) ಮೃತಪಟ್ಟ ಯುವಕನಾಗಿದ್ದಾನೆ. ಮಳಗಿ ಗ್ರಾಮದ ಸಿದ್ದಾಪುರ ಓಣಿಯ ನಿವಾಸಿಯಾಗಿರೊ ಯುವಕ ಶನಿವಾರ ಮದ್ಯಾನ ಮೀನು ಹಿಡಿಯಲೆಂದು ಕೆರೆಗೆ ಹೋಗಿದ್ದ. ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಅಂತಾ ಸಂಬಂಧಿ ಜಯಮ್ಮ ಹನ್ಮಂತ ಬೋವಿ ಎಂಬುವವರು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬನವಾಸಿ ಭಾಗದ ಗ್ರಾಮಗಳಿಗೆ ಸಚಿವ ಹೆಬ್ಬಾರ್ ಭೇಟಿ: ಕೋವಿಡ್ ನಿರ್ವಹಣೆ ಕುರಿತು ಚರ್ಚೆ..!
ಶಿರಸಿ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಇಂದು ಶಿರಸಿ ತಾಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಯ ಬದನಗೋಡ, ಬಿಸಲಕೊಪ್ಪ, ಅಂಡಗಿ ಹಾಗೂ ಸುಗಾವಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ, ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು ಹಾಗೂ ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಬ್ಬಾರ್ ಕೋವಿಡ್ ಕೇರ್ ಕಿಟ್ ಅನ್ನು ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಆಶಾ ಕಾರ್ಯಕರ್ತೆರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಸಂಕಷ್ಟದಲ್ಲಿರೊ 21 ಬಡ ಕುಟುಂಬಗಳಿಗೆ ಧನಸಹಾಯ ಮಾಡಿದ ಟಿಬೇಟಿಯನ್ ಲಾಮಾ..!
ಮುಂಡಗೋಡ-ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿದ್ದ ಕುಟುಂಬಗಳಿಗೆ ಟಿಬೇಟಿಯನ್ ಸಕ್ಯಾ ಪಾರ್ಟಿಯ ಬೌದ್ದ ಸನ್ಯಾಸಿ ಒಬ್ಬರು ಸಹಾಯ ಮಾಡಿದ್ದಾರೆ. ಸಂಕಷ್ಟದಲ್ಲಿದ್ದ 21 ಬಡ ಕುಟುಂಬಗಳಿಗೆ ತಲಾ 500 ರೂಪಾಯಿ ಹಣ ಸಹಾಯ ಮಾಡಿದ್ದು , ಹಣವನ್ನು ಇಂದು ಗ್ರಾಮ ಪಂಚಾಯತಿ ಸದಸ್ಯರು ವಿತರಿಸಿದ್ರು. ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು..
ಯಲ್ಲಾಪುರ: ಬಾವಿಗೆ ಹಾರಿದ ಮಾನಸಿಕ ಅಸ್ವಸ್ಥೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ..!
ಯಲ್ಲಾಪುರ: ಬಾವಿಗೆ ಬಿದ್ದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳನ್ನು ರಕ್ಷಣೆ ಮಾಡಿದ ಘಟನೆ ಯಲ್ಲಾಪುರ ಪಟ್ಟಣದ ಉದ್ಯಮನಗರದಲ್ಲಿ ನಡೆದಿದೆ. ಸುನಂದ ಪಟಗಾರ್(34) ಅನ್ನೋ ಮಹಿಳೆಯೇ ರಕ್ಷಣೆಗೊಳಗಾದವಳಾಗಿದ್ದಾಳೆ. ಇಂದು ಬೆಳಗ್ಗೆ ಮನೆಯಿಂದ ಹೊರಬಂದ ಮಹಿಳೆ ಏಕಾ ಏಕಿ ಸಾರ್ವಜನಿಕ ಬಾವಿಗೆ ಹಾರಿದ್ದಾಳೆ. ಈ ಸಂದರ್ಭದಲ್ಲಿ ಅದೃಷ್ಟವಶಾತ್ ಬಾವಿಯಲ್ಲಿ ಆಳವಿಲ್ಲದೇ ಇದ್ದಿದ್ದರಿಂದ ಆಕೆ ಬದುಕುಳಿದಿದ್ದು ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಬಾವಿಯಲ್ಲೇ ಚೀರಾಡಿದ್ದಾಳೆ. ಈ ವೇಳೆ ಮನೆಯಲ್ಲಿ ಈಕೆ ಇರದುದ್ದನ್ನು ಗಮನಿಸಿ ಹೊರಬಂದು ನೋಡಿದಾಗ, ಈಕೆ ಚೀರಾಡುವ ಧ್ವನಿ ಮನೆಯ ಜನರಿಗೆ ಕೇಳಿಸಿದೆ. ತಕ್ಷಣ ಬಾವಿ ಇಣುಕಿ ನೋಡಿದಾಗ ಈಕೆ ಬಾವಿಯಲ್ಲಿ ಬಿದ್ದಿರೋದು ಗಮನಕ್ಕೆ ಬಂದಿದೆ. ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ತಕ್ಷಣದಲ್ಲಿ ಕಾರ್ಯಾಚರಣೆ ನಡೆಸಿ ಬಾವಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ನೀರಿನಿಂದ ಹೊರಕ್ಕೆ ಕರೆತಂದಿದ್ದಾರೆ. ಕಾರ್ಯಾಚರಣೆಯಲ್ಲಿ ಯಲ್ಲಾಪುರ ಅಗ್ನಿಶಾಮಕ ಠಾಣೆಯ ಪ್ರಭಾರ ಠಾಣಾಧಿಕಾರಿ .ಭೀಮರಾವ್ ವಾಯು ಉಪ್ಪಾರ್, ಸಿಬ್ಬಂದಿಗಳಾದ ಹನುಮಂತನಾಯ್ಕ , ಉಲ್ಲಾಸ್ ವೈ ನಾಗೇಕರ್,...
ಮುಂಡಗೋಡ: ತಾಲೂಕಿನಲ್ಲಿಂದು19 ಪಾಸಿಟಿವ್ ದೃಢ, 57 ಗುಣಮುಖ, ಒಂದು ಸಾವು..!
ಮುಂಡಗೋಡ-ತಾಲೂಕಿನಲ್ಲಿ ಇಂದು 19 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಓರ್ವ ಸಾವನ್ನಿಪ್ಪಿದ್ದಾನೆ. ಇನ್ನು 57 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ತಾಲೂಕಿನಲ್ಲಿ ಒಟ್ಟೂ 291 ಸಕ್ರೀಯ ಪ್ರಕರಣಗಳಿದ್ದು, 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 204 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 25 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ. ಇನ್ನು ಪಟ್ಟಣದ ಗಾಂಧಿನಗರದ 76 ವರ್ಷದ ವೃದ್ದ ಕೊರೋನಾಗೆ ಇಂದು ಬಲಿಯಾಗಿದ್ದು, ಇದುವರೆಗೂ ತಾಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 65 ಕ್ಕೆ ಏರಿಕೆಯಾಗಿದೆ. ಅಂದಹಾಗೆ, ಇದುವರೆಗೂ ತಾಲೂಕಿನಲ್ಲಿ 3730 ಪ್ರಕರಣಗಳು ಪತ್ತೆಯಾಗಿದ್ದು ಅದ್ರಲ್ಲಿ,3374 ಸೋಂಕಿತರು ಗುಣಮುಖರಾಗಿದ್ದಾರೆ.
ಕಾರವಾರ ಜಿಪಂ ಅಭಿಲೇಖಾಲಯ ಕಛೇರಿಯಲ್ಲಿ ಬೆಂಕಿ ಅವಘಡ: 3 ಅಂತಸ್ತಿನ ಕಟ್ಟಡಕ್ಕೆ ವ್ಯಾಪಿಸಿದ ಬೆಂಕಿ..!
ಕಾರವಾರ: ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಜಿಪಂ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಮೂರು ಅಂತಸ್ಥಿನ ಕಟ್ಟಡಕ್ಕೆ ಬೆಂಕಿ ವ್ಯಾಪಸಿದೆ. ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿ ಶಾಮಕದಳದ ಸಿಬ್ಬಂದಿಗಳು ನಿರತರಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಹೊತ್ತಿಕೊಂಡಿರೋ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಕಚೇರಿಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಡಿಸಿ ಮುಲೈ ಮುಹಿಲನ್, ಸಿಇಒ ಪ್ರಿಯಾಂಗ ಭೇಟಿ ನೀಡಿದ್ದಾರೆ. ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.