ಹಳಿಯಾಳ; ಇಲ್ಲಿನ ತಹಶೀಲ್ದಾರ್ ರವರ ಕಚೇರಿಯ ಸಭಾ ಭವನದಲ್ಲಿ ನ.9 ರಂದು ನಡೆದ ಈ ವರ್ಷದ ಕಬ್ಬು ಅರೆಯುವ ಹಂಗಾಮು ಪ್ರಾರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಲೆ ನಿರ್ಧರಣೆ ಮಾಡುವ ಬಗ್ಗೆ EID Parry ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರ ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯಲ್ಲಿ ಈ ಮುಂದಿನಂತೆ ತೀರ್ಮಾನಿಸಲಾಯಿತು. 2023-24ನೇ ಸಾಲಿನಲ್ಲಿ ಸರ್ಕಾರವು ನಿಗಧಿ ಪಡಿಸಿದ ಎಫ್.ಆರ್.ಪಿ ದರವು ಪ್ರತಿ ಟನ್ ಕಬ್ಬಿಗೆ 3678/- ರೂ.ಗಳಿದ್ದು ಪ್ಯಾರಿ ಸಕ್ಕರೆ ಕಾರ್ಖಾನೆಯವರು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಕಳೆದು 2826/- ರೂ.ಗಳನ್ನು ರೈತರಿಗೆ ಪಾವತಿಸುತ್ತಿದ್ದರು. ಈ ವರ್ಷಕ್ಕೆ ದರ ನಿಗಧಿ ಮಾಡುವ ಬಗ್ಗೆ ರೈತರು ಮನವಿ ಮಾಡಿರುವಂತೆ ,ಅಕ್ಟೊಬರ್ 30 ನಡೆದ ಪ್ರಾಥಮಿಕ ಹಂತದ ಸಭೆ ನಡೆಸಿದ್ದು,ನಂತರ , ನ. 9 ರಂದು : ಹಳಿಯಾಳದಲ್ಲಿ ರೈತರು ಮತ್ತು ಪ್ಯಾರಿ ಕಾರ್ಖಾನೆಯವರೊಂದಿಗೆ ಅಂತಿಮ ಸಭೆ ನಡೆಸಿ ಸತತವಾಗಿ ಚರ್ಚೆ ನಡೆಸಿದ ಫಲವಾಗಿ ಈ ವರ್ಷಕ್ಕೆ...
Top Stories
ಚೌಡಳ್ಳಿಯ ಹಿರಿಯ ಸಹಕಾರಿ ಧುರೀಣ ವೈ.ಪಿ.ಪಾಟೀಲ್(72) ವಿಧಿವಶ..!
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ ಹಾವೇರಿಗೆ ಬಂದಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದ ಮೇಲೆ ವಶಕ್ಕೆ ಪಡೆದು ಅವರಿಗೆ ಒಪ್ಪಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ,ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ 15 ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ. ನವೆಂಬರ್ 6 ರಂದು ಅಂದ್ರೆ ಬುಧವಾರ, ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನ. 12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ, ನ.13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ. ಮತದಾನದ ಅವಶ್ಯವಿದ್ದಲ್ಲಿ,ನ.23 ರಂದು ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದಲ್ಲಿ ನ. 25 ರಂದು ನಡೆಸಲಾಗುವುದು. ನ.26 ರಂದು ಬೆ.8 ಗಂಟೆಗೆ ಮತಗಳ ಎಣಿಕೆ ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ಸಲುವಾಗಿ ಬೆಂಗಳೂರಿನಿಂದ ಊರಿಗೆ ಬಂದಿದ್ದ ಹುಡುಗ, ಶನಿವಾರ ರಾತ್ರಿಯೇ ಪತ್ನಿಯ ಮನೆಗೆ ಆಗಮಿಸಿದ್ದ, ಅದ್ಯಾವ ಕಾರಣಕ್ಕೋ ಏನೋ, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ. ಆ ವೇಳೆ ದೀಪಾವಳಿ ನಿಮಿತ್ತ ಹಚ್ಚಿ ಇಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಏಕಾಏಕಿ ಹೊತ್ತಿ ಉರಿದಿದ್ದ. ತಕ್ಷಣವೇ ಮನೆಯವರು ಹಾಗೂ ಸ್ಥಳೀಯರು ಬೆಂಕಿನಂದಿಸಿ, ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಈಗಷ್ಟೇ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಕೌಂಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಅನ್ನೋ...
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದುಕೊಂಡು ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ. ಶನಿವಾರ ತಡರಾತ್ರಿ ನಡೆದಿರೋ ಘಟನೆಯಲ್ಲಿ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ದಿನ ರಾತ್ರಿ ಪತ್ನಿಯ ಮನೆಗೆ ಆಗಮಿಸಿದ್ದ ಅರವಿಂದ್, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ ಅಂತ ಹೇಳಲಾಗಿದೆ. ಆ ವೇಳೆ ದೀಪಾವಳಿ ನಿಮಿತ್ತ ಹಚ್ಚಿ ಇಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಏಕಾಏಕಿ ಹೊತ್ತಿ ಉರಿದಿದೆ. ತಕ್ಷಣವೇ ಮನೆಯವರು ಹಾಗೂ ಸ್ಥಳೀಯರು ಬೆಂಕಿನಂದಿಸಿ, ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ ಅಂತಾ ತಿಳಿದು ಬಂದಿದೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಹೋರಿಹಬ್ಬದಲ್ಲಿ ಯುವಕನಿಗೆ ಹೋರಿ ತಿವಿದು ದಾರುಣ ಸಾವು ಕಂಡ ಹಿನ್ನೆಲೆಯಲ್ಲಿ, ಮುಂಡಗೋಡಿನ ಹಳೂರಿನಲ್ಲಿ ನಡೆಯುತ್ತಿದ್ದ ಹೋರಿ ಹಬ್ಬವನ್ನು ಆಯೋಜಕರು ಅರ್ಧಕ್ಕೆ ಬಂದ್ ಮಾಡಿಸಿದ್ದಾರೆ. ಬೆಳಗಿನಿಂದಲೂ ಮುಂಡಗೋಡಿನ ಹಳೂರಿನಲ್ಲಿ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಹೋರಿ ಅಭಿಮಾನಿಗಳು, ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ಬಂದಿದ್ರು. ಆದ್ರೆ ,ಯಾವಾಗ ಚಿಗಳ್ಳಿಯಲ್ಲಿ ದುರಂತ ಸಂಭವಿಸಿದ ಕಾರಣಕ್ಕಾಗಿ ಹೋರಿ ಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ.
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ತಾಲೂಕಿನ ಚಿಗಳ್ಳಿಯ ಹೋರಿಹಬ್ಬದಲ್ಲಿ ಭಯಾನಕ ದುರ್ಘಟನೆ ಸಂಭವಿಸಿದೆ. ಹೋರಿ ಹಬ್ಬ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಭಯಾನಕ ಸಾವು ಕಂಡಿದ್ದಾನೆ. ಪರಮೇಶ್ ಸಿದ್ದಪ್ಪ ಹರಿಜನ್ (21) ಎಂಬುವ ಯುವಕನೇ ಹೋರಿ ಹಬ್ಬದಲ್ಲಿ ಹೋರಿ ತಿವಿದು ಮೃತಪಟ್ಟ ಯುವಕನಾಗಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ನಿಮಿತ್ತ ಚಿಗಳ್ಳಿಯ ಕಲ್ಮೇಶ್ವರ ಮಠದ ಹತ್ತಿರ ಹೋರಿಹಬ್ಬದಲ್ಲಿ ಏರ್ಪಡಿಸಲಾಗಿತ್ತು. ಈ ಹಬ್ಬದಲ್ಲಿ ವಿವಿದೆಡೆಯಿಂದ ಬಲಿತ ಸ್ಪರ್ಧಾ ಹೋರಿಗಳು ಬಂದಿದ್ದವು. ಹೀಗಾಗಿ, ಹೋರಿಗಳ ಹಬ್ಬ ನೋಡಲು ಹೋಗಿದ್ದ ಹುಡುಗನ ಮೇಲೆ ಹೋರಿ ಏಕಾಏಕಿ ದಾಳಿ ಮಾಡಿ ಯುವಕನ ಬಲಗಡೆಯ ಎದೆಯ ಬಾಗಕ್ಕೆ ತಿವಿದಿದೆ. ಹೀಗಾಗಿ ಗಂಭೀರ ಗಾಯಗೊಂಡಿದ್ದ ಯುವಕನನ್ನು ತಕ್ಷಣವೇ ಮುಂಡಗೋಡ ತಾಕೂಕಾಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಾಂಡುರಂಗ ಹೊಟೇಲ್ ಬಳಿ, ಬೈಕ್ ಹಾಗೂ ಟಾಟಾ ಎಸ್ ವಾಹನಕ್ಕೆ ಅಪಘಾತವಾಗಿದೆ. ಪರಿಣಾಮ ಹಳೂರಿನ ಯುವಕ ಗಂಭೀರ ಗಾಯಗೊಂಡಿದ್ದಾನೆ. ಇವತ್ತಷ್ಟೇ ಹಬ್ಬಕ್ಕಾಗಿ ಬೆಂಗಳೂರಿನಿಂದ ಬಂದಿದ್ದ, ಮುಂಡಗೋಡ ಹಳೂರಿನ ಮಣಿಕಂಠ(20) ಎಂಬುವ ಯುವಕನೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಕಾಲಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ ವಿಧಾನಸಭಾ ಉಪ ಕದನ ರಂಗೇರುತ್ತಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಇಂದು ಕೈ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಮಹತ್ವದ ದಿನವಾಗಿದೆ. ಯಾಕಂದ್ರೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರೋ ಅಜ್ಜಂಫೀರ್ ಖಾದ್ರಿ ಇಂದು ನಾಮಪತ್ರ ವಾಪಸ್ ಪಡೀತಾರಾ..? ಯಕ್ಷ ಪ್ರಶ್ನೆಯಾಗಿದೆ. ಈ ನಡುವೆ ಮಂಗಳವಾರ ಹುಬ್ಬಳ್ಳಿಗೆ ಬಂದು ಇಳಿದಿರೊ ಖಾದ್ರಿ, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಯವರನ್ನು ಸಂಧಾನ ಮಾಡಿಸಲಾಗಿದೆ. ಜಮೀರ್ ಅಹ್ಮದ್ ಮುಂದಾಳತ್ವದಲ್ಲಿ ಸಂಧಾನ ಸಭೆ ನಡೆದಿದೆ. ವಾಪಸ್ ಪಡೀತಾರಾ..? ಅಂದಹಾಗೆ, ಶಿಗ್ಗಾವಿ ಚುನಾವಣಾ ಕಣದಲ್ಲಿ 19 ಅಭ್ಯರ್ಥಿಗಳಿದ್ದಾರೆ. ಹೀಗಾಗಿ ಇಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದೆ. ನಾಮಪತ್ರ ವಾಪಸ್ ಪಡೆಯಲು ಖಾದ್ರಿ ಸಾಕಷ್ಟು ಗೊಂದಲ್ಲಿದ್ದಾರೆ. ಖಾದ್ರಿ ನಾಮಪತ್ರ ವಾಪಸ್ ಪಡೆಯಬೇಕೆಂದು ಕಾಂಗ್ರೆಸ್ ಹೈಕಮಾಂಡದಿಂದ ಇನ್ನಿಲ್ಲದ ಒತ್ತಡ ಬಂದಿದೆ. ಇತ್ತ, ಕಣದಿಂದ ಹಿಂದೆ ಸರಿಯಬೇಡಿ ಅಂತಾ ಅಭಿಮಾನಿಗಳು ಖಾದ್ರಿ ಮೇಲೆ ಒತ್ತಡ ಹಾಕ್ತಿದಾರೆ. ಹೈಕಮಾಂಡ ಕಣ್ಗಾವಲಿನಲ್ಲಿ ಸದ್ಯ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಖಾದ್ರಿ ತಂಗಿದ್ದಾರೆ....
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಶಿಗ್ಗಾವಿ ಕೇತ್ರದ ಉಪ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದ 26 ಅಭ್ಯರ್ಥಿಗಳ ಪೈಕಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದ್ದು, 7 ನಾಮಪತ್ರಗಳು ತಿರಸ್ಕೃತವಾಗಿದೆ. ಚುನಾವಣಾಧಿಕಾರಿ ಮಹ್ಮದ್ ಖಿಜರ್ ನೇತೃತ್ವದ ತಂಡ ಸೋಮವಾರ ನಾಮಪತ್ರ ಪರಿಶೀಲನೆ ನಡೆಸಿತು. 26 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 46 ನಾಮಪತ್ರಗಳ ಪೈಕಿ 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿದೆ. 19 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿವೆ. ಅ.30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಬಿಜೆಪಿಯ ಭರತ್ ಬೊಮ್ಮಾಯಿ, ಕಾಂಗ್ರೆಸ್ನ ಯಾಸಿರ್ ಅಹ್ಮದಖಾನ್ ಪಠಾಣ, ಸೋಸಿಯಾಲಿಸ್ಟ್ ಪಾರ್ಟಿ(ಇಂಡಿಯಾ) ಅಭ್ಯರ್ಥಿ ಖಾಜಾಮೊದ್ದೀನ ಗುಡಗೇರಿ, ಹಿಂದೂಸ್ತಾನ ಜನತಾ ಪಕ್ಷದ ಅಭ್ಯರ್ಥಿ ತಳವಾರ ಶಿವಕುಮಾರ, ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಅಭ್ಯರ್ಥಿ ರವಿ ಕೃಷ್ಣಾರೆಡ್ಡಿ, ಟಿಪ್ಪು ಸುಲ್ತಾನ್ ಪಾರ್ಟಿ ಅಭ್ಯರ್ಥಿ ಶೌಖತ್ ಅಲಿ ಬಂಕಾಪೂರ, ಪಕ್ಷೇತರ ಅಭ್ಯರ್ಥಿಗಳಾದ ಡಾ.ಜಿ.ಎಚ್. ಇಮ್ರಾಪುರ, ಗುರುಸಿದ್ದಗೌಡ್ರ, ಜಿತೇಂದ್ರ ಕನವಳ್ಳಿ, ನಬಿಸಾಬ್ ಅಲ್ಲಿಸಾಬ್ ಮೆಳ್ಳೆಗಟ್ಟಿ, ಮಕ್ತುಮಸಾಬ ಜಾಪರಸಾಬ ಮುಲ್ಲಾ, ರಾಜು ನಾಯಕವಾಡಿ, ವೀರಯ್ಯ ಓದಿಸುವಮಠ, ಶಿದ್ದಪ್ಪ ಹೊಸಳ್ಳಿ, ಶಿವಪುಸತ್ರ ಶಾಮರಾವ್ ಪಾಟೀಲ,...