ಮುಂಡಗೋಡ: ಚುನಾವಣೆಯೆಂಬ ಪರೀಕ್ಷೆ ಬಂದಿದೆ. ಎದುರಾಳಿ ಬಿಜೆಪಿ ಮನೆಯನ್ನ ಬಿಟ್ಟು ನಮ್ಮ ಮನೆಗೆ ಬರಲು ಹೊರಟಿರುವವರಿಗೆ ಸ್ವಾಗತ ಮಾಡಬೇಕಿದೆ. ಕಾಂಗ್ರೆಸ್ ಎಂಬುದು ದೊಡ್ಡ ಸಮುದ್ರ. ನಮಗೆ ಎಲ್ಲವನ್ನೂ ಅರಗಿಸಿಕೊಳ್ಳುವ ಶಕ್ತಿ ಇದೆ. ಯಾವ ಟೈಮ್ ನಲ್ಲಿ ಯಾವ ಆಪರೇಷನ್ ಮಾಡಬೇಕೆಂಬುದೂ ನನಗೆ ಗೊತ್ತಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು. ಮುಂಡಗೋಡಿನಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಎಷ್ಟೇ ಗುಂಪಿದ್ದರೂ, ವೈಮಸ್ಸಿದ್ದರೂ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ದುಡಿಯುತ್ತೀರೆಂಬ ವಿಶ್ವಾಸವಿದೆ. ವಿವಿಧ ಧರ್ಮ- ಸಂಸ್ಕೃತಿಗಳಿದ್ದರೂ ಮುಂಡಗೋಡದಲ್ಲಿ ಎಲ್ಲರೂ ಒಂದಾಗಿ ಬಾಳುತ್ತಿದ್ದಾರೆ. ಕಾಂಗ್ರೆಸ್ ಎಂದರೆ ನನ್ನ ಕುಟುಂಬವಿದ್ದಂತೆ. ಇಲ್ಲಿ ಎಲ್ಲರ ಮಾತಿಗೂ ಬೆಲೆ ಇದೆ. ಪಕ್ಷ ನಿಮ್ಮ ಹಿಂದಿದೆ, ಕಾರ್ಯಕರ್ತರೂ ಪಕ್ಷದೊಂದಿಗೆ ಇರಬೇಕು. ಹಿಂದುಳಿದ ತಾಲೂಕು, ಜಿಲ್ಲೆಯ ಅಭಿವೃದ್ಧಿಗೆ ಸಂಸತ್ ನಲ್ಲಿ ಮಾತನಾಡಲು ಪಕ್ಷದ ಸಂಸದರು ಬೇಕೇ ಬೇಕು. ಇದಕ್ಕಾಗಿ ನನ್ನನ್ನ ನಿಮ್ಮ ಮನೆ ಮಗಳೆಂದು ಆಶೀರ್ವದಿಸಿ ಎಂದು ಮನವಿ ಮಾಡಿದರು. ಮಾಜಿ...
Top Stories
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!
ಹಿರಿಯೂರು ಬಳಿ ಅಪಘಾತ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ..!
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಕಾರ್ಯಕರ್ತರಿಂದ ವಿರೋಧ..! ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ ಕಾರ್ಯಕರ್ತರು..!!
ಶಿರಸಿ: ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದ್ದಾರೆ “ಕೈ” ಕಾರ್ಯಕರ್ತರು. ಶಿರಸಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಿವರಾಮ್ ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿರುವ ಕೈ ಕಾರ್ಯಕರ್ತರು, “ನಮ್ಮ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ” ಎಂದು ಪೋಸ್ಟರ್ ಅಂಟಿಸಿದ್ದಾರೆ. ಕಾಂಗ್ರೆಸ್ ನಿಂದ ಬಾಂಬೆ ಟೀಂ ಜತೆ ಬಿಜೆಪಿಗೆ ಹೋಗಿ ಸಚಿವರಾಗಿದ್ದ ಹೆಬ್ಬಾರ್ ಸಾಹೇಬ್ರು, ಈಗ ಮತ್ತೆ ಕೆಲವು ಅಸಮಾಧಾನದ ಕಾರಣ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ. ಹೀಗಾಗಿ, ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಸದ್ದಿಲ್ಲದೇ ವಿರೋಧ ವ್ಯಕ್ತವಾಗಿದೆ. ಸಚಿವರು, ಶಾಸಕರು ಮಾತ್ರವಲ್ಲದೇ ಕಾರ್ಯಕರ್ತರಿಂದಲೂ ವಿರೋಧ ವ್ಯಕ್ತವಾಗಿದ್ದು, ಇಂದು ಶಿರಸಿಯಲ್ಲಿ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದ್ದು, ಸಭೆಗೆ ಮುಂಚಿತವಾಗಿ ಹೆಬ್ಬಾರ್ ವಿರುದ್ಧ ಪೊಸ್ಟರ್ ಅಂಟಿಸಿ ಆಕ್ರೋಶ ಹೊರಹಾಕಿದ್ದಾರೆ ಕೈ ಕಾರ್ಯಕರ್ತರು.
ಬಿಜೆಪಿ ಟಿಕೆಟ್ ಮಿಸ್ ಆದ ಹಿನ್ನೆಲೆ, ಕುತೂಹಲ ಮೂಡಿಸಿದ ಅನಂತಣ್ಣನ ನಡೆ..! ಪತ್ರದ ಮೂಲಕ ನೀಡಿದ ಸಂದೇಶವಾದ್ರೂ ಏನು..?
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆಗುತ್ತಿದ್ದಂತೆ ಸಂಸದ, ಹಿಂದು ಪೈಯರ್ ಬ್ರ್ಯಾಂಡ್ ಅನಂತಕುಮಾರ್ ಹೆಗಡೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ತನ್ನ ಕ್ಷೇತ್ರದ ಬೆಂಬಲಿಗರಿಗೆ, ಮತದಾರರಿಗೆ ಪತ್ರದ ಮೂಲಕ ಮನದಾಳದ ಕೃತಜ್ಞತೆ ಸಲ್ಲಿಸಿದ್ದಾರೆ. ಅನಂತಣ್ಣನ ಪತ್ರದ ಸಾರಾಂಶ..! ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು. ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ. ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು...
ಅನಂತಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೊನೆಗೂ ಮಿಸ್, ಕಾಗೇರಿಗೆ ಒಲಿದ ಬಿಜೆಪಿ ಟಿಕೆಟ್..!
ಕೊನೆಗೂ ಅನಂತಕುಮಾರ್ ಹೆಗಡೆಯವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಬಿಜೆಪಿಯ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಏಳು ಬಾರಿ ಗೆದ್ದು ಬೀಗಿದ್ದ ಅನಂತಣ್ಣನಿಗೆ ಬಿಜೆಪಿ ಠಕ್ಕರ್ ಕೊಟ್ಟಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರಸಿ ಕ್ಷೇತ್ರದಿಂದ ಮೂರು ಬಾರಿ ಹಾಗೂ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದರು, ಇನ್ನು ಕಳೆದ ವರ್ಷದ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ವಿರುದ್ಧ ಕಾಗೇರಿ ಅವರು ಸೋಲುವಂತಾಗಿತ್ತು. ಆದರೆ ಇದೀಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಾಗೇರಿ ಅವರಿಗೆ ಟಿಕೆಟ್ ನೀಡಿದೆ. ವಿವಾದಾತ್ಮಕ ಹೇಳಿಕೆಗಳೇ ಮುಳುವಾಯ್ತಾ..? ಅಂದಹಾಗೆ, ಅನಂತಣ್ಣನಿಗೆ ಕ್ಷೇತ್ತದಲ್ಲಿ ಹಿಂದು ಫೈಯರ್ ಬ್ರ್ಯಾಂಡ್ ಹೆಸರಿದ್ದರೂ, ಬರೀ ವಿವಾದಾತ್ಮಕ ಹೇಳಿಕೆ ಮೂಲಕವೇ ಸುದ್ದಿಯಾಗುತ್ತಿದ್ದರು. ಹೀಗಾಗಿ, ಕಳದ ಮೂವತ್ತು ವರ್ಷಗಳ ಕಾಲ ಉತ್ತರ ಕನ್ನಡದ ಲೋಕಸಭಾ ಕ್ಷೇತ್ರದ ಅಧಿಪತಿಯಾಗಿ ಗೆದ್ದು ಬರುತ್ತಿದ್ದರು. ಬರೋಬ್ಬರಿ ಏಳು ಬಾರಿ ಈ ಕ್ಷೇತ್ರವನ್ನ ಪ್ರತಿನಿಧಿಸಿ...
ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 24 ರಿಂದ 25 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ಏನಿಲ್ಲವೆಂದರೂ ವಾರದ ಹಿಂದೆಯೇ ಜಲಾಶಯದಲ್ಲಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಅಂದಾಜಿಸಲಾಗಿದೆ. ಇಂದು ಬೆಳಿಗ್ಗೆ ಸನವಳ್ಳಿ ಗ್ರಾಮದ ಜನ ಜಲಾಶಯಕ್ಕೆ ಬಂದಾಗ, ಶವ ತೇಲುತ್ತಿರುವ ದೃಷ್ಯ ಕಂಡಿದೆ. ಇಡೀ ಮುಂಡಗೋಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಜಲಾಶಯದಲ್ಲಿ, ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಆತ್ಮಹತ್ಯೆಯಾ..? ಅಷ್ಟಕ್ಕೂ, ಜಲಾಶಯದಲ್ಲಿ ತೇಲುತ್ತಿರೊ ಶವದ ಗುರುತು ಪತ್ತೆಯಾಗಿಲ್ಲ. ಇದು ಆತ್ಮಹತ್ಯೆಯೊ ಅಥವಾ ಸಾವಿನ ಹಿಂದೆ ಏನಾದರೂ ಬೇರೆ ಕಾರಣವಿದೆಯೋ ಪೊಲೀಸರ ತನಿಖೆ ನಂತರವಷ್ಟೆ ತಿಳಿದು ಬರಬೇಕಿದೆ.
ಬೆಕ್ಕು ಹಿಡಿಯಲು ಬಂದು ಬಾವಿಗೆ ಬಿದ್ದ ಚಿರತೆ, ಯಲ್ಲಾಪುರದ ಅರಬೈಲಿನಲ್ಲಿ ಆತಂಕ, ಯಾರಿಗೂ ಹೇಳಬೇಡಿ ಅಂದ್ರಂತೆ ಅರಣ್ಯಾಧಿಕಾರಿಗಳು..!
ಯಲ್ಲಾಪುರ ತಾಲೂಕಿನ ಅರಬೈಲಿನಲ್ಲಿ ಬೆಳ್ಳಂ ಬೆಳಿಗ್ಗೆ ಚಿರತೆ ಪ್ರತ್ಯಕ್ಷವಾಗಿದೆ. ಮನೆಯ ಹಿತ್ತಲಿನ ಬಾವಿಯಲ್ಲಿ ಬಿದ್ದಿರೋ ಚಿರತೆ ಬಾವಿಯಿಂದ ಮೇಲೆ ಬರಲು ಪರದಾಡುತ್ತಿದೆ. ಆದ್ರೆ, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ತಕ್ಷಣವೇ ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆದ್ರೆ, ಈ ವಿಷಯ ಯಾರಿಗೂ ಹೆಳಬೇಡಿ ಅಂತಾ ಮನೆಯವರಿಗೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರಂತೆ. ಅಂದಹಾಗೆ, ಯಲ್ಲಾಪುರ ತಾಲೂಕಿನ ಅರೆಬೈಲು ಗ್ರಾಮದ ಕೋವಿಂದ ನಾಯರ್ ಎಂಬುವವರ ಮನೆಯ ಬಾವಿಯಲ್ಲಿ ಘಟನೆ ನಡೆದಿದೆ. ಬಹುಶಃ ನಿನ್ನೆ ರಾತ್ರಿಯೇ ಮನೆಗೆ ದಾಳಿ ಇಟ್ಟಿರೋ ಚಿರತೆ, ಮನೆಯಲ್ಲಿನ ಬೆಕ್ಕಿನ ಮೇಲೆ ದಾಳಿ ಮಾಡಿ ಹಿಡಿದು ತಿಂದಿದೆ. ಬೆಕ್ಕಿನ ಮೇಲೆ ದಾಳಿ ಮಾಡುವ ವೇಳೆ ಆಯತಪ್ಪಿ ಬಾವಿಗೆ ಬಿದ್ದಿರಬಹುದು ಅಂತಾ ಅಂದಾಜಿಸಲಾಗಿದೆ. ಇನ್ನು, ಈ ಮನೆಯಲ್ಲಿ ಪತಿ,ಪತ್ನಿ ಇಬ್ಬರೇ ವಾಸವಾಗಿದ್ದು, ಚಿರತೆ ಪ್ರತ್ಯಕ್ಷವಾದ ಹಿನ್ನೆಲೆ ಭಯಭೀತಗೊಂಡಿದ್ದಾರೆ. ತಕ್ಷಣವೇ ಚಿರತೆಯನ್ನು ರಕ್ಷಿಸಿ ಮುಂದಿನ ಕ್ರಮ ಕೈಗೊಳ್ಳಲು ಹಂಬಲಿಸಿದ್ದಾರೆ. ಅರಣ್ಯ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ....
ಮುಂಡಗೋಡ ಅಮ್ಮಾಜಿ ಕೆರೆ ಸಮೀಪ ವಿಷ ಕುಡಿದು ನಿತ್ರಾಣಗೊಂಡಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!
ಮುಂಡಗೋಡ ಪಟ್ಟಣದ ಅಮ್ಮಾಜಿ ಕೆರೆ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ, ನಿತ್ರಾಣಗೊಂಡ ಯುವಕನೋರ್ವನ ರಕ್ಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ಮೂಲದವನು ಅಂತಾ ಅಂದಾಜಿಸಲಾಗಿರೋ ಯುವಕನಿಗೆ ಸದ್ಯ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ನೋಂದಣಿ ಸಂಖ್ಯೆ ಹೊಂದಿರುವ ಸ್ಕೂಟಿ ಮೇಲೆ ಬಂದಿರೋ ಯುವಕ, ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಪಕ್ಕ ಬಿದ್ದು ನರಳಾಡುತ್ತಿದ್ದ. ಬಾಯಲ್ಲಿ ನೊರೆ ಬಂದು ಕೋಮಾ ಸ್ಥಿತಿಗೆ ತಲುಪಿದ್ದ ಯುವಕ ವಿಷ ಸೇವಿಸಿರಬಹುದು ಅಂತಾ ಅಂದಾಜಿಸಲಾಗಿದೆ. ಸಾರ್ವಜನಿಕರು ತಕ್ಷಣವೇ ವಾಹನದ ಮೂಲಕ ಯುವಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ, ಕೈ ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಅಧಿಕೃತ ಘೋಷಣೆ..!
ಉತ್ತರಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅಂತೂ ಇಂತೂ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಇದ್ರೊಂದಿಗೆ ಸಾಕಷ್ಟು ಕುತೂಹಲ ಕೆರಳಿಸಿದ್ದ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ. ಇನ್ನು ಉತ್ತರಕನ್ನಡ ಕ್ಷೇತ್ರದ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿಯಾಗಿ ಖಾನಾಪುರ ಮಾಜಿ ಶಾಸಕಿ ಅಂಜಲಿ ನಿಂಬಾಳ್ಳರ್ ಅವರ ಹೆಸರನ್ನ ಪಕ್ಷದ ಹೈಕಮಾಂಡ ಘೋಷಣೆ ಮಾಡಿದೆ. ಉತ್ತರಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿಯ ಎರಡು ಕ್ಷೇತ್ರಗಳು ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದೆ. ಈ ಭಾರಿ ಕಾಂಗ್ರೆಸ್ ನಿಂದ ನ್ಯಾಯವಾದಿ ರವೀಂದ್ರನಾಥ ನಾಯ್ಕ ಹಾಗೂ ಸಿದ್ದಾಪುರ ಮೂಲದ ಕಾರವಾರದಲ್ಲಿ ನ್ಯಾಯವಾದಿಗಳಾಗಿರೋ ಜಿ ಟಿ ನಾಯ್ಕ ಸೇರಿದಂತೆ ಪ್ರಮುಖರು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದರು.ಆದರೆ ಪಕ್ಷದ ಹೈಕಮಾಂಡ ಅಂಜಲಿ ನಿಂಬಾಳ್ಳರ್ ಅವರನ್ನ ಕಣಕ್ಕಿಳಿಸಿದೆ. ಸದ್ಯ ಕೆನರಾ ಲೋಕಸಭಾಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರೆ ಇರುವುದು ಅಭ್ಯರ್ಥಿಗೆ ಗೆಲುವಿನ ದಡ ಸೇರಿಸತ್ತಾ..? ಜೂನ್ 4 ರಂದೇ ತಿಳಿಯಲಿದೆ.
ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ..! ಮೊದಲ ದಿನವೇ ಕಳ್ಳರ ಕೈಚಳಕಕ್ಕೆ ಭಕ್ತರು ಶಾಕ್..!!
ಶಿರಸಿಯ ಮಾರಿಕಾಂಬೆಯ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಸಹಸ್ರ ಸಂಖ್ಯೆಯ ಭಕ್ತರ ಹರ್ಷೋದ್ಘಾರದ ನಡುವೆ ಶಿರಸಿಯ ಸಿರಿದೇವಿ ಜಾತ್ರಾ ಗದ್ದುಗೆಯ ಮೇಲೆ ವಿರಾಜಮಾನಳಾಗಿದ್ದಾಳೆ. ಆದ್ರೆ, ಪ್ರಸಕ್ತ ವರ್ಷದ ಜಾತ್ರೆಯಲ್ಲಿ ಅದ್ಯಾಕೋ ಏನೋ ಪೊಲೀಸ್ ಇಲಾಖೆ ಕೊಂಚ ನಿರ್ಲಿಪ್ತವಾಗಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ, ಮೊದಲ ದಿನದ ಜಾತ್ರೆಯಲ್ಲೇ ಕಳ್ಳರ ಕೈಚಳಕ ವಿಪರೀತ ಹೆಚ್ಚಾಗಿದೆ ಅಂತಾ ಸಾಕಷ್ಟು ಭಕ್ತರು ಗಾಬರಿಗೊಂಡಿದ್ದಾರೆ. ಮೊದಲ ದಿನವೇ ಇಷ್ಟಾ..? ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಭಕ್ತರ ಮೂಲಕ ಬಂದ ಮಾಹಿತಿ ಪ್ರಕಾರ ಇವತ್ತಿನ ಮೊದಲ ದಿನದ ಮಾರಿಕಾಂಬಾ ಜಾತ್ರೆಯಲ್ಲಿ ಏನಿಲ್ಲವೆಂದರೂ 10ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಾಗಿವೆ. ಆದ್ರೆ, ಅವೇಲ್ಲ ಪೊಲೀಸ್ ಠಾಣೆಯ ಮೆಟ್ಟಿಲೇರಿಲ್ಲ. ಕೆಲವು ಮಾತ್ರ ಪೊಲೀಸರ ಗಮನಕ್ಕೆ ಬಂದಿದೆ. ಅದ್ರಲ್ಲಿ, ನಾಲ್ಕೈದು ಚಿನ್ನದ ಸರಗಳ್ಳತನ, ಮೊಬೈಲ್ ಕಳ್ಳತನ ನಡೆದು ಹೋಗಿದೆ ಎನ್ನಲಾಗ್ತಿದೆ. ಆದ್ರೆ, ರಾಜ್ಯದ ಪ್ರಸಿದ್ಧ ಜಾತ್ರೆಯೊಂದರಲ್ಲಿ ಮೊದಲ ದಿನವೇ ಇಂತಹ ಘಟನೆಗಳು ಈ ಪರಿಯಲ್ಲಿ ನಡೆದಿದೆ ಅಂದ್ರೆ ಏನಯ್ಯಾ ಗತಿ ಅಂತಾ ಭಕ್ತರು ಪ್ರಶ್ನಿಸ್ತಿದಾರೆ....
ಮುಂಡಗೋಡಿಗೆ ನೂತನ ಸಿಪಿಐ ಯಾರು ಗೊತ್ತಾ..? ಇವತ್ತೇ ಅಧಿಕಾರ ಸ್ವೀಕಾರ ಫಿಕ್ಸ್..!
ಮುಂಡಗೋಡ ನೂತನ ಸಿಪಿಐ ಆಗಿ ರಂಗನಾಥ್ ನೀಲಮ್ಮನವರ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇತ್ತಿಚೆಗಷ್ಟೇ ಪದೋನ್ನತಿ ಹೊಂದಿ ಇಲ್ಲಿಂದ ವರ್ಗಾವಣೆಗೊಂಡ ಬಿ.ಎಸ್.ಲೋಕಾಪುರ ಸ್ಥಾನಕ್ಕೆ ರಂಗನಾಥ್ ನೀಲಮ್ಮನವರ್ ನೇಮಕಗೊಂಡಿದ್ದಾರೆ. ಅಂದಹಾಗೆ, ಈ ಮೊದಲು ಯಲ್ಲಾಪುರ ಠಾಣೆಯಲ್ಲಿಯೂ ಕಾರ್ಯನಿರ್ವಹಿಸಿದ್ದ ನೀಲಮ್ಮನವರ್, ಕಾರವಾರದ ಸೈಬರ್ ಕ್ರೈಂ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಈಗ ಮುಂಡಗೋಡ ಠಾಣೆಗೆ ನಿಯುಕ್ತಿಗೊಂಡು ಆಗಮಿಸಲಿದ್ದಾರೆ. ಇವತ್ತು ಬಹುತೇಕ ಮುಂಡಗೋಡ ಠಾಣೆಗೆ ಬಂದು ಅಧಿಕಾರ ಸ್ವೀಕರಿಸಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.