ಧಾರವಾಡ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಇಬ್ಬರ ಮೇಲೆ ಹಲ್ಲೆ ನಡೆದಿದೆ. ನಮ್ಮ ಹುಡುಗಿಗೆ ಕಾಡಿಸುತ್ತೀರಾ, ಲೈಂಗಿಕ ದೌರ್ಜನ್ಯ ಎಸಗಿದ್ದಿರಾ ಅಂತಾ ಧಿಡೀರ್ ಜಗಳ ತೆಗೆದ ಮೂವರು ಆರೋಪಿಗಳು ಮನೋಜ್ ಕರ್ಜಗಿ ಹಾಗೂ ಅಯಾನ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಮನೋಜ್ ಗುಡದೂರ್, ಆನಂದ ತಳವಾರ್, ಹಾಗೂ ಉದಯ್ ಕೆಲಗೇರಿ ಎನ್ನುವ ಯುವಕರು ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಚಾಕುವಿನಿಂದ ಅಯಾನ್ ಮೇಲೆ ಹಲ್ಲೆ ಮಾಡಿದ್ದಾರೆ. ಎನ್ನಲಾಗಿದ್ದು, ಸದ್ಯ ಹಲ್ಲೆಗೊಳಗಾದ ಅಯಾನ್ ಮತ್ತು ಮನೋಜ್ ಕರ್ಜಗಿ ಕಿಮ್ಸ್ ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೋಜ್ ಕರ್ಜಗಿ ಸ್ಪಾ ದಲ್ಲಿದ್ದ ಅಯಾನ್ ಎನ್ನುವ ಯುವಕನಿಂದ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Top Stories
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ರಾಜ್ಯದಲ್ಲಿ ಮಹಿಳೆಯರ ಮಾರಾಟ ಜಾಲ ಸಕ್ರೀಯವಾಗಿದೆ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಕಳವಳ..!
ಮುಂಡಗೋಡ: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮಾರಾಟ ಜಾಲ ಸಕ್ರೀಯವಾಗಿದೆ. ನಾವು ಈ ಜಾಲವನ್ನು ಬೇಧಿಸಲು ಸಂಪೂರ್ಣ ಸನ್ನದ್ಧಗೊಳ್ಳುತ್ತೇವೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತೇವೆ ಅಂತಾ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ರು. ಮುಂಡಗೋಡಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪ್ರಮೀಳಾ ನಾಯ್ಡು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಹಿಳೆಯರನ್ನು ಮದುವೆ ನೆಪದಲ್ಲಿ ದೂರದ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಗೆ ಮಾರಾಟ ಮಾಡುವ ಗ್ಯಾಂಗ್ ಆ್ಯಕ್ಟಿವ್ ಆಗಿದೆ. ಹೀಗಾಗಿ, ರಾಜ್ಯ ಮಹಿಳಾ ಆಯೋಗ ಈ ಕುರಿತು ಸಾಕಷ್ಟು ಜಾಗ್ರತಾ ಕ್ರಮಗಳನ್ನು ಈಗಾಗಲೇ ಪಡೆದುಕೊಂಡಿದೆ. ಪ್ರತೀ ಜಿಲ್ಲೆಗಳಲ್ಲೂ ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಮಕ್ಕಳು ಮತ್ತು ಮಹಿಳೆಯರ ಮಾರಾಟ ಮತ್ತು ನಾಪತ್ತೆ ಪ್ರಕರಣಗಳಲ್ಲಿ ಎಷ್ಟು ಬೇಗ ದೂರು ದಾಖಲಾಗತ್ತೋ ಅಷ್ಟು ಬೇಗ ಪತ್ತೆ ಕಾರ್ಯಕ್ಕೆ ಅನಕೂಲವಾಗತ್ತೆ. ಹೀಗಾಗಿ, ಅಂತಹ ಪ್ರಕರಣಗಳಲ್ಲಿ ಕೂಡಲೇ ಪೊಲೀಸ್ ಠಾಣೆಗಳಿಗೆ ದೂರು ನೀಡುವುದು ಮುಖ್ಯ ಅಂದ್ರು. ಪ್ರತೀ ಜಿಲ್ಲೆಗಳಲ್ಲೂ ಈ...
ಮುಂಡಗೋಡಿನಲ್ಲಿ ವಿಶ್ವಕರ್ಮ ಜಯಂತಿ ಸರಳ ಉತ್ಸವ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾಡಳಿತ ಹಾಗೂ ಮುಂಡಗೋಡ ತಾಲೂಕ ವಿಶ್ವಕರ್ಮ ಸಮಾಜ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮ ಭಗವಾನರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಗೌರವ ಸಮರ್ಪಣೆ ಮಾಡಲಾಯಿತು. ನಂತರ ಇಲಾಖೆಯ ವತಿಯಿಂದ, ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ, ವಿಶ್ವಕರ್ಮ ಸಮಾಜದ ಶ್ರೀಮತಿ ರೇಣುಕಾ ಬಡಿಗೇರ, ಈಶ್ವರಪ್ಪ ಬಡಿಗೇರ ಇಂದೂರು, ಮೌನೇಶ ಬಡಿಗೇರ ಉಗ್ಗಿನಕೇರಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಇಓ ವೆಂಕಟೇಶ ಪಟಗಾರ “ಏಕಾಗ್ರತೆ ಹಾಗೂ ಒಗ್ಗಟ್ಟಿನಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ”ಎಂದು ಸಮಾಜ ಬಾಂಧವರಿಗೆ ಕಿವಿಮಾತು ಹೇಳಿದರು. ರಾಮಣ್ಣ ಬೆಳ್ಳಾನವರ ಅವರು ಮಾತನಾಡಿ ಧರ್ಮ ಮತ್ತು ಸಂಸ್ಕೃತಿ ಉಳಿವಿನಿಂದ ಮಾತ್ರ ಸಮಾಜದ ಏಳಿಗೆ ಸಾಧ್ಯ ರಾಜಕೀಯವಾಗಿ ವಿಶ್ವಕರ್ಮರು ಸಬಲರಾಗಬೇಕು ಎಂದು ಕರೆ ನೀಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರಾದ ಆರ್ ವಿ ಬಡಿಗೇರ್ ರಾಜಕೀಯ ಶಿಕ್ಷಣದಲ್ಲಿ ಮುಂದಿದ್ದರೆ ಮಾತ್ರ ವಿಶ್ವಕರ್ಮರು ಸಬಲರಾಗಬಲ್ಲರು ಎಂದು...
ಇಂದು “ನಮೋ ಜನ್ಮದಿನ” ಹಡಪದ ಸಮಾಜದಿಂದ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ..!
ಮುಂಡಗೋಡ: ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಸಂಭ್ರಮ ಜೋರಾಗಿತ್ತು. ಇಲ್ಲಿನ ಹಡಪದ ಅಪ್ಪಣ್ಣ ಸಮಾಜದಿಂದ ವಿಶೇಷವಾಗಿ ಮೋದಿಯವರ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಜ್ಞಾನಪ್ರಜ್ಞಾ ಅಂಧಮಕ್ಕಳ ವಿಶೇಷ ವಸತಿ ಶಾಲೆಯಲ್ಲಿ ಅಂಧ ಮಕ್ಕಳಿಗೆ ಕ್ಷೌರ ಸೇವೆ ಸಲ್ಲಿಸಲಾಯಿತು. ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ನೇತೃತ್ವದಲ್ಲಿ ಸುಮಾರು 35 ಅಂಧ ಮಕ್ಕಳಿಗೆ ಉಚಿತವಾಗಿ ಕ್ಷೌರ ಮಾಡಲಾಯಿತು. ಕದಂಬ ಹೇರ್ ಡ್ರೆಸಸ್ ನ ಕ್ಷೌರಿಕ ಬಾಂಧವರು ಅಂಧ ಮಕ್ಕಳಿಗೆ ಬೆಳಿಗಿನಿಂದಲೇ ಕ್ಷೌರ ಮಾಡಿದ್ರು. ನಂತರ ಎಲ್ಲ ಮಕ್ಕಳಿಗೂ ಸ್ನಾನ ಮಾಡಿಸಲಾಯಿತು. ಹತ್ತಾರು ಹಡಪದ ಅಪ್ಪಣ್ಣ ಸಮಾಜದ ಯುವಕರು ಈ ಸೇವೆಯಲ್ಲಿ ಭಾಗಿಯಾಗಿದ್ರು. ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಇಡೀ ವಿಶ್ವದ ಬೂಪಟದಲ್ಲಿ ಬೆಳಗುವಂತೆ ಮಾಡಿದ್ದಾರೆ. ಹೀಗಾಗಿ, ಮೋದಿಯವರ ಜನ್ಮ ದಿನ ನಮಗೇಲ್ಲ ಹಬ್ಬದ ಸಂಭ್ರಮವಾಗಿದೆ ಅಂತಾ ಹಡಪದ ಅಪ್ಪಣ್ಣ ಸಮಾಜದ ಮುಖಂಡ ಮಹೇಶ್ ಹಡಪದ ಖುಶಿ ಹಂಚಿಕೊಂಡರು. ಈ ವೇಳೆ ಹಡಪದ ಅಪ್ಪಣ್ಣ ಸಮಾಜದ ಚಂದ್ರು,...
ಅತ್ತಿವೇರಿಯ ವ್ಯಕ್ತಿ ಲಕ್ಣ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಅತ್ತಿವೇರಿಯ ವ್ಯಕ್ತಿಯೊಬ್ಬ ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಅತ್ತಿವೇರಿ ಗ್ರಾಮದ ನಬೀಸಾಬ್ ಮತ್ತಿಗಟ್ಟಿ(32) ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ತನ್ನ ಪತ್ನಿಯ ತವರು ಮನೆಯಲ್ಲೇ ವಾಸವಾಗಿದ್ದ ನಬೀಸಾಬ್ ಹೀಗೆ ದಿಢಿರನೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?
ಮುಂಡಗೋಡ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಾನಸಿಕ ಅಸ್ವಸ್ಥಳೊಬ್ಬಳನ್ನು ಮಹಿಳೆಯೋರ್ವಳು ಮನಬಂದಂತೆ ಥಳಿಸಿದ್ದಾಳೆ. ಮನಸೋ ಇಚ್ಚೆ ಚಪ್ಪಲಿಯಿಂದ ನಡುರಸ್ತೆಯಲ್ಲೇ ಥಳಿಸಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಸ್ವಸ್ಥೆಯ ನರಳಾಟ..! ನಿಜ ಅಂದ್ರೆ, ಇದು ನಡೆದದ್ದು ಮುಂಡಗೋಡ ಪಟ್ಟಣದ ಪಟ್ಟಣ ಪಂಚಾಯತಿ ಎದುರಗಡೆ. ಮಾನಸಿಕ ಅಸ್ವಸ್ಥೆಯನ್ನು ಅಟ್ಟಾಡಿಸಿ ಹೊಡೆದಿರೋ ಮಹಿಳೆ ಥೇಟು ರೌಡಿಯಂತೆ ನಡೆದುಕೊಂಡಿದ್ದಾಳೆ. ರಸ್ತೆಯಲ್ಲಿ ಹೊಡೆತ ತಾಳಲಾರದೇ ಮಾನಸಿಕ ಅಸ್ವಸ್ಥೆ ಚೀರಾಟ ಮಾಡುತ್ತಿದ್ದರೂ ಕರುಣೆ ಬಾರದೇ ಆ ಮಹಿಳೆ ಚಪ್ಪಲಿಯಿಂದ ಥಳಿಸಿದ್ದಾಳೆ. ಇನ್ನು ಘಟನೆ ಕಂಡ ದಾರಿಹೋಕನೊಬ್ಬ ಬಿಡಿಸಲು ಹೋದರೆ ಆತನಿಗೂ ಆ ಮಹಿಳೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. ನಿಂತು ನೋಡಿದ ಜನ..! ದುರಂತ, ಅಂದ್ರೆ ಹೀಗೆ ಮಾನಸಿಕ ಅಸ್ವಸ್ಥೆಯ ಮೇಲೆ ಮನಬಂದಂತೆ ಅಟ್ಟಾಡಿಸಿ ಹೊಡೆಯುತ್ತಿದ್ದರೂ ಸಾರ್ವಜನಿಕರು ಮಾತ್ರ ಸಿನಿಮಾ ನೋಡುವಂತೆ ನೋಡಿದ್ದಾರೆ. ಬಿಟ್ಟರೆ ರಕ್ಷಿಸುವ ಗೋಜಿಗೆ ಹೋಗಿಲ್ಲ. ಹೀಗಾಗಿ, ಆ ಮಾನಸಿಕ ಅಸ್ವಸ್ಥೆಯ ತಪ್ಪು ಅದೇನೇ ಇದ್ದರೂ ಹೀಗೇಲ್ಲ ಸಾರ್ವಜನಿಕ ಸ್ಥಳದಲ್ಲೇ ಅಮಾನುಷವಾಗಿ ಹಲ್ಲೆಮಾಡಿರೋದು ಎಷ್ಟು ಸರಿ..? ಈ ಪ್ರಶ್ನೆ...
ಕೊಪ್ಪದ “ಉತ್ತಮ ಶಿಕ್ಷಕಿ” ಗೆ ಹಳೆಯ ವಿದ್ಯಾರ್ಥಿಗಳು ಹಾಗೂ SDMC ಸದಸ್ಯರಿಂದ ಗೌರವ ಸನ್ಮಾನ..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಗೀತಾ ಪಟಗಾರ ಅವರಿಗೆ ಶಿರಸಿ ಶೈಕ್ಷಣಿಕ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ಹೀಗಾಗಿ, ಇಂದು ಕೊಪ್ಪದ ಹಳೆಯ ವಿದ್ಯಾರ್ಥಿಗಳಿಂದ ಹಾಗೂ SDMC ಸದಸ್ಯರುಗಳಿಂದ ಗೌರವ ಸನ್ಮಾನ ಮಾಡಲಾಯಿತು. ಅಂದಹಾಗೆ, 26 ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಂದಲಗೇರಿ ಶಾಲೆಯಲ್ಲಿ 9 ವರ್ಷ ಹಾಗೂ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 17 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಿರಸಿ ಶೈಕ್ಷಣಿಕ ಜಿಲ್ಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ಗೀತಾ ಪಟಗಾರ ಅವರಿಗೆ ಲಭಿಸಿರುವುದರಿಂದ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಗೀತಾ ಪಟಗಾರ ಅವರ ಸೇವೆಯಲ್ಲಿ ಕಲಿತ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಹಾಗೂ ಶಾಲೆಯ SDMC ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಶಾಲಾ ಶಿಕ್ಷಕರಿಂದ ಶಾಲು ಹೊದಿಸಿ ಸನ್ಮಾನಿಸಲಾಗಿದೆ. ಹಾಗೂ ಶಾಲಾ ಮಕ್ಕಳಿಗೆ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದ್ದಾರೆ....
ಕರ್ನಾಟಕದಲ್ಲಿ “ಹಿಂದಿ ದಿವಸ್” ಆಚರಣೆ ಬೇಡವೇ ಬೇಡ, ಸರ್ಕಾರಕ್ಕೆ ಮುಂಡಗೋಡ ರಾಯಣ್ಣ ಬಳಗದಿಂದ ಹಕ್ಕೊತ್ತಾಯ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಹಿಂದಿ ದಿವಸ್ ಆಚರಣೆಗೆ ವಿರೋಧಿಸಿ ಮನವಿ ಅರ್ಪಿಸಲಾಯಿತು. ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿರೋ ಅಭಿಮಾನಿ ಬಳಗ ಹಿಂದಿ ದಿವಸ್ ಆಚರಣೆ ಬೇಡ ಅಂತಾ ಆಗ್ರಹಿಸಿದ್ದಾರೆ. ಕನ್ನಡ ಒಕ್ಕೂಟ ವ್ಯವಸ್ಥೆ ಮಾರಕವಾಗಿರುವ ಭಾರತದ ಐಕ್ಯತೆಯನ್ನು ಒಡೆಯುತ್ತಿರುವ ಹಿಂದಿ ದಿವಸ ಆಚರಣೆಯನ್ನು ಸ್ಥಗಿತಗೊಳಿಸಬೇಕು, ಒಕ್ಕೂಟ ಭಾರತ ಸಂವಿಧಾನದಲ್ಲಿ 22 ಭಾಷೆಗಳಿಗೂ ಸರಿ ಸಮಾನತೆಯಿದೆ. ಹೀಗಾಗಿ, ಹಿಂದಿ ಭಾಷೆಗೆ ಅಷ್ಟೆ ಪ್ರಾಮುಖ್ಯತೆ ಕೊಡುವುದು ಸರಿಯಲ್ಲ. ನಮ್ಮ ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ಹಿಂದಿ ದಿವಸ್ ಆಚರಣೆ ಮಾಡುವುದನ್ನು ಕನ್ನಡಿಗರು ಸಹಿಸುವುದಿಲ್ಲ ಹೀಗಾಗಿ, ಹಿಂದಿ ದಿವಸ್ ಆಚರಣೆ ಬೇಡವೇ ಬೇಡ ಅಂತಾ ಹಕ್ಕೊತ್ತಾಯ ಮಾಡಿದ್ದಾರೆ. ಈ ವೇಳೆ ಬಳಗದ ಪ್ರಮುಖರಾದ ಅಯ್ಯಪ್ಪ ಭಜಂತ್ರಿ, ಮಂಜುನಾಥ್ ಕುರುಬರ, ಕೃಷ್ಣ ಕುಂದರಗಿ, ಮೈಲಾರಿ ಕುರುಬರ,ಬಸವರಾಜ್ ಬೋವಿ, ಮಂಜುನಾಥ್ ಕೋಣನಕೇರಿ, ಗಣಪತಿ ಗುಡ್ಡಿಕೇರಿ, ಶಿವು ಲಮಾಣಿ, ಕೈಲಾಶ್ ಗಜಕೋಶ, ಬಸವರಾಜ್ ಮೂಲಿಮನಿ, ಶೆಟ್ಟಪ್ಪ ಬೋವಿ, ಗಣಪತಿ ಬಾಳಂಬೀಡ, ಮಾಂತೇಶ್ ವಾಲ್ಮೀಕಿ...
ಹುಬ್ಬಳ್ಳಿಯ ವರೂರು ಬಳಿ ಭೀಕರ ಕಾರು ಅಪಘಾತ ಮೂವರು ಸಾವು, ಓರ್ವ ಗಂಭೀರ..!
ಹುಬ್ಬಳ್ಳಿ: ವರೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದ ಗಣೇಶ ಹೋಟೆಲ್ ಬಳಿ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ಪರಿಣಾಮ ಚಾಲಕ, ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟವರು. ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರ ಗಾಯಾಗಿದೆ. ಅವಲಕ್ಕಿ ವ್ಯಾಪಾರ ಮಾಡಿಕೊಂಡಿದ್ದ ಇವರು ದಾವಣಗೆರೆಯಿಂದ ರಾತ್ರಿ ಹುಬ್ಬಳ್ಳಿ ಕಡೆಗೆ ಬರುತ್ತಿದ್ದಾಗ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಸೊಹೇಲ್ ಸ್ಥಳದಲ್ಲೆ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ಚಾಲಕ ಮತ್ತು ಮಹಿಳೆ ಕಿಮ್ಸ್ ಗೆ ದಾಖಿಲಿಸಿದ ಸ್ವಲ್ಪ ಸಮಯದಲ್ಲೇ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮುಂಡಗೋಡ-ಯಲ್ಲಾಪುರ ರಸ್ತೆಯಲ್ಲಿ ಕ್ರೂಸರ್ ವಾಹನ ಪಲ್ಟಿ, ಜಾನಪದ ಕಲಾವಿದರಿಗೆ ಗಾಯ..!
ಮುಂಡಗೋಡ ಯಲ್ಲಾಪುರ ಗಡಿಭಾಗದ ಹುಣಶೆಟ್ಟಿಕೊಪ್ಪದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿದೆ. ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಇನ್ನು, ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತಿದ್ದ ಕ್ರೂಸರ್ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಚಿಗಳ್ಳಿಯಲ್ಲಿ ನಡೆಯುತ್ತಿರೋ ಕಾರ್ಯಕ್ರಮಕ್ಕೆ ಯಲ್ಲಾಪುರದಿಂದ ಜಾನಪದ ಕಲಾವಿದರನ್ನು ಕರೆತರುತ್ತಿದ್ದ ವಾಹನ ಅಪಘಾತಕ್ಕೆ ಈಡಾಗಿದೆ. 7-8 ಜನ ಜಾನಪದ ಕಲಾವಿದರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಹುಣಶೆಟ್ಟಿಕೊಪ್ಪದ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ರಸ್ತೆ ಮೇಲೆ ಅಡ್ಡಲಾಗಿ ಬಿದ್ದಿದ್ದ ಕ್ರೂಸರ್ ಅನ್ನು ಅಲ್ಲಿನ ಸ್ಥಳೀಯರ ಸಹಾಯದಿಂದ ರಸ್ತೆಯಿಂದ ತೆರವುಗೊಳಿಸಲಾಗಿದೆ.