ಮುಂಡಗೋಡ ಯಲ್ಲಾಪುರ ಗಡಿಭಾಗದ ಹುಣಶೆಟ್ಟಿಕೊಪ್ಪದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿದೆ. ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಇನ್ನು, ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತಿದ್ದ ಕ್ರೂಸರ್ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಚಿಗಳ್ಳಿಯಲ್ಲಿ ನಡೆಯುತ್ತಿರೋ ಕಾರ್ಯಕ್ರಮಕ್ಕೆ ಯಲ್ಲಾಪುರದಿಂದ ಜಾನಪದ ಕಲಾವಿದರನ್ನು ಕರೆತರುತ್ತಿದ್ದ ವಾಹನ ಅಪಘಾತಕ್ಕೆ ಈಡಾಗಿದೆ. 7-8 ಜನ ಜಾನಪದ ಕಲಾವಿದರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಹುಣಶೆಟ್ಟಿಕೊಪ್ಪದ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ರಸ್ತೆ ಮೇಲೆ ಅಡ್ಡಲಾಗಿ ಬಿದ್ದಿದ್ದ ಕ್ರೂಸರ್ ಅನ್ನು ಅಲ್ಲಿನ ಸ್ಥಳೀಯರ ಸಹಾಯದಿಂದ ರಸ್ತೆಯಿಂದ ತೆರವುಗೊಳಿಸಲಾಗಿದೆ.
Top Stories
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮುಂಡಗೋಡ-ಯಲ್ಲಾಪುರ ರಸ್ತೆಯಲ್ಲಿ ಕ್ರೂಸರ್ ವಾಹನ ಪಲ್ಟಿ, ಜಾನಪದ ಕಲಾವಿದರಿಗೆ ಗಾಯ..!
ಪಾಳಾ ಕಲಕೊಪ್ಪದಲ್ಲಿ ನಾಯಿ ದಾಳಿಗೆ ಬಲಿಯಾಗುತ್ತಿದ್ದ ಜಿಂಕೆ ರಕ್ಷಣೆ, ಮಾನವೀಯತೆ ತೋರಿದ ಗ್ರಾಮಸ್ಥರು..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದ ಕಲಕೊಪ್ಪದ ಪೆಟ್ರೋಲ್ ಬಂಕ್ ಸಮೀಪ ನಾಯಿಗಳ ದಾಳಿಯಿಂದ ಜಿಂಕೆಯನ್ನ ರಕ್ಷಣೆ ಮಾಡಲಾಗಿದೆ. ಈ ಮೂಲಕ ಗ್ರಾಮಸ್ಥರು ಮಾನವೀಯತೆ ತೋರಿದ್ದಾರೆ. ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಜಿಂಕೆಯನ್ನು, ಗ್ರಾಮದ ನಾಯಿಗಳು ಅಟ್ಟಿಸಿಕೊಂಡು ಹೋಗುತಿದ್ದವು, ಅದನ್ನು ಕಂಡ ಗ್ರಾಮಸ್ಥರು ನಾಯಿಗಳಿಂದ ಜಿಂಕೆಯನ್ನು ಬಚಾವ್ ಮಾಡಿದ್ದಾರೆ. ನಂತರ ಅರಣ್ಯ ರಕ್ಷಕ ನಾರಾಯಣ ಒಣಿಕೇರಿ, ಯಲ್ಲಪ್ಪ ಬಳ್ಳಾರಿ ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮದ ಕುಮಾರ್, ಜಗದೀಶ್, ಅಶೋಕ್ ಮುಂತಾದವರು ಸೇರಿ ಜಿಂಕೆಯನ್ನು ರಕ್ಷಿಸಿ ನಾಯಿಗಳ ದಾಳಿಯಿಂದ ಗಾಯಗೊಂಡ ಜಿಂಕೆಗೆ ಸೂಕ್ತ ಚಿಕಿತ್ಸೆ ನೀಡಿ ಕಾಡಿಗೆ ಬಿಟ್ಟು ಬಂದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಗೆ ರಾತ್ರೋ ರಾತ್ರಿ ಎಂಟ್ರಿ ಕೊಟ್ರಾ ಪ್ರಧಾನಿ ಮೋದಿ..?
ಕುಮಟಾ: ಅಲ್ಲಿ ಎಲ್ಲಿ ನೋಡಿದರಲ್ಲಿ ಕೇಕೆ, ಚಪ್ಪಾಳೆ, ಜಯಘೋಷಗಳು..! ಮೋದಿ, ಮೋದಿ, ಮೋದಿ ಅನ್ನೋ ಅಭಿಮಾನದ ಹರ್ಷೋದ್ಘಾರ. ಅಭಿಮಾನಿಗಳತ್ತ ಕೈ ಬೀಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಯಘೋಷಗಳ ಹೂಮಳೆ. ಇದು ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ.. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ರಾತ್ರೊ ರಾತ್ರಿ ಎಂಟ್ರಿ ಕೊಟ್ಟಿದ್ದಾರೆ. ಸಾವಿರಾರು ಅಭಿಮಾನಿಗಳ ಮನಗೆದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಸಾರ್ವಜನಿಕ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ ಪ್ರಧಾನಿ ಮೋದಿ..! ಅಷ್ಟಕ್ಕೂ ಇವ್ರು ಅಸಲೀ ಮೋದಿ ಅಂತಾ ಅನಕೊಂಡ್ರಾ..? ಖಂಡಿತ ಅಲ್ಲ. ಥೇಟು ಪ್ರಧಾನಿ ನರೇಂದ್ರ ಮೋದಿಯವರನ್ನೇ ಹೋಲುವ ವ್ಯಕ್ತಿ ಇವ್ರು. ಅಂದಹಾಗೆ, ಇವ್ರ ಹೆಸ್ರು ಸದಾನಂದ್ ನಾಯಕ್, ಮೂಲತಃ ಉಡುಪಿ ಜಿಲ್ಲೆಯವರು. ಥೇಟು ನರೇಂದ್ರ ಮೋದಯವರಂತೆ ಕಾಣುವ ಈ ಸದಾನಂದ ನಾಯಕರು ಕೈ ಬೀಸುತ್ತಿದ್ದಂತೆ ಜನಸ್ತೋಮ ನಿಬ್ಬೆರಗಾಗಿತ್ತು. ಮೋದಿಯವರೇ ಎದುರಿಗೆ ನಿಂತ ಭಾಸವಾಗಿತ್ತು. ಹೀಗಾಗಿ, ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು...
ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ, ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವ ಗಂಭೀರ ಗಾಯಗೊಂಡಿದ್ದ. ಗಾಯಾಳುವನ್ನು 108 ಅಂಬ್ಯಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉತ್ತರ ಕನ್ನಡ ಡಿಸಿ ಹಾಗೂ ಎಸ್ಪಿಯವರಿಗೆ ಮಾನವ ಹಕ್ಕುಗಳ ಆಯೋಗದಿಂದ ಸಮನ್ಸ್ ಜಾರಿ..!
ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ದಿಂದ ಸಮನ್ಸ್ ಜಾರಿಯಾಗಿದೆ. ಹೊನ್ನಾವರದ ಕಾಸರಕೋಡು ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿಯಾಗಿದೆ. ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ದಿನಾಂಕ 24/1/22 ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಹೀಗಾಗಿ, 6/05/22 ರಂದು ರಾಷ್ಟ್ರೀಯ ಮಾನವಹಕ್ಕು ಆಯೋಗದಲ್ಲಿ ಮೀನುಗಾರರು ದೂರು ದಾಖಲಿಸಿದ್ದರು. ಈ ಕಾರಣಕ್ಕಾಗಿ ಎಸ್ಪಿ ಹಾಗೂ ಡೀಸಿಯವರಿಗೆ ಸಮನ್ಸ್ ಜಾರಿಮಾಡಲಾಗಿದೆ
ಬಾಚಣಕಿಯ ಮಜ್ಜಿಗೇರಿ ಕ್ರಾಸ್ ಬಳಿ ಕಾರು ಬೈಕ್ ನಡುವೆ ಅಪಘಾತ, ಬೈಕ್ ಸವಾರ ಗಂಭೀರ..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತವಾಗಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವನಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುವನ್ನು 108 ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಗಾಯಾಳುವಿನ ಬಳಿಯಿದ್ದ 1450 ರೂ. ಹಾಗೂ ಮೊಬೈಲ್ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 108 ಅಂಬ್ಯಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಹಾಗೂ ಚಾಲಕರು ಸಮಯಪ್ರಜ್ಞೆ ತೋರಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?
ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ. ಕೊಂದು ಬೀಸಾಕಿದ್ರಾ..? ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!
ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ ಕಾರಣ ಇಟ್ಕೊಂಡು ಸಣ್ಣಗೆ ತಗಾದೆ ತೆಗೆದಿದ್ದಾರೆ ವಿದ್ಯಾರ್ಥಿಗಳು. ಹೀಗೆ ಶುರುವಾದ ಗಲಾಟೆ ವಿದ್ಯಾರ್ಥಿಗಳು ಹಾಗೂ ಅಲ್ಲಿ ನೆರೆದಿದ್ದ ಯುವಕರ ಮದ್ಯೆ ಭಾರೀ ಮಾರಾಮಾರಿಗೆ ಕಾರಣವಾಗಿದೆ. ಈ ಗಲಾಟೆಯಲ್ಲೇ ಓರ್ವ ವಿದ್ಯಾರ್ಥಿಗೆ ತಲೆಗೆ ಪೆಟ್ಟಾಗಿದೆ. ಲಘು ಲಾಠಿ ಪ್ರಹಾರ..! ಇನ್ನು ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ನಡೆದ ಮಾರಾಮಾರಿ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮುಂಡಗೋಡ ಪೊಲೀಸರು ಗಲಾಟೆ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಅನಿವಾರ್ಯವಾಗಿ...
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!
ಬೈಲಹೊಂಗಲ: ಇದು ನಿಜಕ್ಕೂ ದುರಂತದ ಸಂಗತಿ. ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮುರುಘಾ ಶ್ರೀಗಳ ಕೇಸ್ ಹಿನ್ನಲೆಯಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋದಲ್ಲಿ ಇವರ ಹೆಸರನ್ನು ಬಳಸಿಕೊಂಡು ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದು ವೈರಲ್ ಅಗಿದ್ದರಿಂದ ಮನ ನೊಂದು ನೇಣಿಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ನಿನ್ನೆ ತಡರಾತ್ರಿವರೆಗೆ ಭಕ್ತರೊಂದಿಗೆ ಸಮಾಲೋಚನೆ ನಡೆಸಿ, ನೀವೆಲ್ಲರೂ ನಮ್ಮನ್ನು ಸಂಶಯದಿಂದ ನೋಡುವಂತಾಗಿದೆ. ಈ ಘಟನೆಯಿಂದ ಜೀವಂತ ಇರಬಾರದು ಎಂದೆನಿಸಿದೆ ಎಂದು ಹೇಳಿದ್ದರಂತೆ. ಆತ್ಮಹತ್ಯೆಯ ವಿಷಯ ತಿಳಿಯುತ್ತಿದ್ದಂತೆ ಮಠದ ಆವರಣದಲ್ಲಿ ಭಕ್ತರು ಜಮಾವಣೆಗೊಂಡಿದ್ದಾರೆ. ಪಿಐ ಉಳವಪ್ಪ ಸಾತೆನಹಳ್ಳಿ, ಡಿಎಸ್ಪಿ ಕಟಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!
ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.