ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!

ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!

 ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ‌. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಪಿಕ್ ನಿಕ್ ಗೆ ಹೊರಟಿದ್ದರು..! ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ. ಸದ್ಯ ಗಾಯಾಳುಗಳನ್ನು ಮಳಗಿ ಸರ್ಕಾರಿ ಆಸ್ಪತ್ರೆಗೆ ಹಾಗೂ ಗಂಭೀರ ಗಾಯಗೊಂಡವರನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಉಪನ್ಯಾಸಕರೇ ಚಾಲಕರಾ..? ಅಸಲು, ಈ ಮಳಗಿ ಪದವಿ ಪೂರ್ವ ಕಾಲೇಜಿನ ಅದ್ಯಾರ ತಲೆಯಲ್ಲಿ ಈ ಐಡಿಯಾ ಬಂದಿತ್ತೊ ಗೊತ್ತಿಲ್ಲ. ಪಿಕ್ ನಿಕ್ ಗೆ ಟ್ರಾಕ್ಟರ್ ಮೇಲೆ ತೆರಳಿದ್ದರು. ಅಲ್ಲದೆ, ಇಲ್ಲಿನ ಇಬ್ಬರು ಉಪನ್ಯಾಸಕರೇ ಟ್ರಾಕ್ಟರ್ ಚಲಾಯಿಸಿಕೊಂಡು ಹೊರಟಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಎರಡು ಟ್ರಾಕ್ಟರ್ ಮೂಲಕ ತೆರಳಿದ್ದ...

ಮುಂಡಗೋಡ ಹೊರವಲಯದಲ್ಲಿ ಭೀಕರ ಅಪಘಾತ, ಸ್ಕಾರ್ಪಿಯೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮುಂಡಗೋಡ ಹೊರವಲಯದಲ್ಲಿ ಭೀಕರ ಅಪಘಾತ, ಸ್ಕಾರ್ಪಿಯೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮುಂಡಗೋಡ: ಹೊರವಲಯದ ಶಿರಸಿ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಓವರ್ ಟೇಕ್ ಮಾಡಲು ಹೋದ ಸ್ಕಾರ್ಪಿಯೊ ಬೈಕ್ ಗೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿರಸಿ ರಸ್ತೆಯ ದೇಶಪಾಂಡೆ ರೂಡಿಸೇಟಿ ಕಚೇರಿ ಬಳಿ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಮುಂಡಗೋಡು ಕಡೆಗೆ ಬರುತ್ತಿದ್ದ ಬೈಕ್ ಗೆ, ಅದೇ ಮಾರ್ಗವಾಗಿ ಹೊರಟಿದ್ದ ಸ್ಕಾರ್ಪಿಯೊ ಕಾರು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ‌. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಆದ್ರೆ, ಬೈಕ್ ಮಾಲೀಕ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನವರು ಎಂಬುವುದು ತಿಳಿದು ಬಂದಿದೆ. ಇ‌ನ್ನು, ಬೈಕ್ ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೊ ದೇಶಪಾಂಡೆ ರೂಡಸೇಟಿ ಕಂಪೌಂಡಿಗೆ ಡಿಕ್ಕಿಹೊಡೆದಿದೆ. ಅಪಘಾತದ ನಂತರ ಕಾರಿನಲ್ಲಿದ್ದವರು, ಕಾರು ಬಿಟ್ಟು ಪರಾರಿಯಾಗಿದ್ದಾರೆ‌. ಸದ್ಯ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸಿದ್ದೇಶ್ವರ ಶ್ರೀಗಳ ಚೇತರಿಕೆಗೆ ನಾಡಿನೆಲ್ಲೆಡೆ ಪ್ರಾರ್ಥನೆ, ನಡೆದಾಡುವ ದೇವರ ಕಾಣದೇ ಭಕ್ತರಲ್ಲಿ ಹೆಚ್ಚಿದ ಆತಂಕ..!

ಸಿದ್ದೇಶ್ವರ ಶ್ರೀಗಳ ಚೇತರಿಕೆಗೆ ನಾಡಿನೆಲ್ಲೆಡೆ ಪ್ರಾರ್ಥನೆ, ನಡೆದಾಡುವ ದೇವರ ಕಾಣದೇ ಭಕ್ತರಲ್ಲಿ ಹೆಚ್ಚಿದ ಆತಂಕ..!

ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಚೇತರಿಕೆಗಾಗಿ ನಾಡಿನೆಲ್ಲಡೆ ಪ್ರಾರ್ಥನೆ ಶುರುವಾಗಿದೆ. ಜೀವಂತ ದೇವರು, ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿಗಳು ಕೋಟಿ ಕೋಟಿ ಭಕ್ತರನ್ನು ಹೊಂದಿದ್ದಾರೆ. ಹೀಗಾಗಿ ಆಶ್ರಮದ ಸುತ್ತಲೂ ಬೆಳಗಿನಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಸ್ವಾಮೀಜಿಗಳ ದರ್ಶನಕ್ಕಾಗಿ ಕಾದು ಕುಳಿತಿರುವ ಭಕ್ತಗಣ ಒಂದೆಡೆಯಾದ್ರೆ ಮತ್ತೊಂದೆಡೆ ಶ್ರೀಗಳು ಗುಣವಾಗಲಿ ಎಂದು ಎಲ್ಲೆಂದರಲ್ಲಿ ಪ್ರಾರ್ಥನೆಗಳನ್ನು ಭಕ್ತರು ಮಾಡುತ್ತಿದ್ದಾರೆ. ಭಗವಂತನೇ ನಮ್ಮ ದೇವರನ್ನು ಕಾಪಾಡು..! ಸಾಮೂಹಿಕ ಪ್ರಾರ್ಥನೆ, ಆಶ್ರಮದಲ್ಲಿ ವಿಶೇಷ ಪೂಜೆ..! ಹೌದು ಇಂತಹದ್ದೊಂದು ಆತಂಕಕಾರಿ ವಿಚಾರ ಇದೀಗ ಭಕ್ತರಲ್ಲಿ ಮನೆ ಮಾಡಿದೆ. ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಈಡಾಗಿದ್ದಾರೆ. ಈ ಹಿನ್ನೆಲೆ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಆಶ್ರಮದಲ್ಲಿರುವ ಶ್ರೀ ಮಲ್ಲಿಕಾರ್ಜುನ ಗುರುಗಳ ಗದ್ದುಗೆಯ ಮಂಟಪದಲ್ಲಿ ಬೆಳಗಿನ ಜಾವ ಐದು ಗಂಟೆಯಿಂದಲೇ ಪೂಜೆ, ಪ್ರಾರ್ಥನೆ ನಡೆಸಲಾಯಿತು. ಆಶ್ರಮದ ಸ್ವಾಮೀಜಿಗಳು ಹಾಗೂ ಭಕ್ತರು ಸೇರಿ ಪೂಜೆ ಪುನಸ್ಕಾರ ನಡೆಸಿದ್ರು. ಇನ್ನು ಸ್ವಾಮೀಜಿಗಳ ಆರೋಗ್ಯದಲ್ಲಿ ಏರುಪೇರಾಗುತ್ತಿರುವ ವಿಚಾರ ತಿಳಿದು...

ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!

ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!

ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ‌. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ ಜಲಾಶಯದಲ್ಲಿದ್ದು ಮತ್ತೊಂದು ಶವ ಟಿಬೇಟಿಯನ್ ಆಸ್ಪತ್ರೆಗೆ ರವಾನಿಸಲಾಗಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಮೃತರ ಹೆಸರು ತಿಳಿದು ಬಂದಿಲ್ಲ‌. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌‌.

ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ

ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ

ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ವರ್ಗಾವಣೆಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಮುಂಡಗೋಡ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಬಸವರಾಜ್, ರಾಮನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅಂದಹಾಗೆ, ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಎಲ್ಲಾಲಿಂಗ ಸಾಹೆಬ್ರು ಜಾಯಿನ್ ಆಗಿದ್ದಾರೆ. ಅಸಲು ಬಸವರಾಜ್ ಮಬನೂರು, ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ನಿಷ್ಟೆಯ ಕಾರ್ಯ ನಿರ್ವಹಿಸಿದ್ದರು. ಕೊರೋನಾ ಲಾಕಡೌನ್ ಸಂದರ್ಭದಲ್ಲಿ ತಾಲೂಕಿನಲ್ಲಿ ಯುವ ಪಡೆಯೊಂದಿಗೆ ಕೈ ಜೋಡಿಸಿ, ಹಲವು ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿದ್ದರು.  

ಅತಿಥಿ ಶಿಕ್ಷಕನಿಂದ ಶಾಲೆಯಲ್ಲೇ ರಾಕ್ಷಸೀತನ, ಶಿಕ್ಷಕನ ಹುಚ್ಚಾಟಕ್ಕೆ ಓರ್ವ ವಿದ್ಯಾರ್ಥಿ ಬಲಿ, ಶಿಕ್ಷಕಿಗೆ ಗಂಭೀರ ಗಾಯ..!

ಅತಿಥಿ ಶಿಕ್ಷಕನಿಂದ ಶಾಲೆಯಲ್ಲೇ ರಾಕ್ಷಸೀತನ, ಶಿಕ್ಷಕನ ಹುಚ್ಚಾಟಕ್ಕೆ ಓರ್ವ ವಿದ್ಯಾರ್ಥಿ ಬಲಿ, ಶಿಕ್ಷಕಿಗೆ ಗಂಭೀರ ಗಾಯ..!

ಗದಗ: ಅವನೇನು ಶಿಕ್ಷಕನೋ ಅಥವಾ ರಾಕ್ಷಸನೋ ಅರ್ಥವೇ ಆಗುತ್ತಿಲ್ಲ. ಯಾಕಂದ್ರೆ ಏಕಾಏಕಿ ಶಾಲೆಯಲ್ಲೇ ನಾಲ್ಕನೇ ತರಗತಿ ವಿದ್ಯಾರ್ಥಿ ಹಾಗೂ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹುಚ್ಚಾಟ ತೋರಿದ್ದಾನೆ‌. ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಇದೇ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಹಡಗಲಿ ಎಂಬಾತನಿಂದ ಕೃತ್ಯ ನಡೆದಿದೆ. ಇಂದು ಬೆಳಿಗ್ಗೆ ಏಕಾಏಕಿ ಸಹಶಿಕ್ಷಕರ ಮೇಲೆ ಅತಿಥಿ ಶಿಕ್ಷಕನಿಂದ ಸಲಿಕೆಯಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಸಲಿಕೆಯಿಂದ ಕಂಡ ಕಂಡವರ ಮೇಲೆ ಅಟ್ಯಾಕ್ ಮಾಡಿದ ಅತಿಥಿ ಶಿಕ್ಷಕ ಇಡೀ ಶಾಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದ. ಇದೇ ವೇಳೆ ಅತಿಥಿ ಶಿಕ್ಷಕಿ ಗೀತಾ ಬಾರಕೇರ ಹಾಗೂ 4ನೇ ತರಗತಿಯ ಭರತ್ ಎನ್ನುವ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದಿದೆ, ಅಲ್ಲದೇ ಮತ್ತೋರ್ವ ಶಿಕ್ಷಕನ ಮೇಲೂ ಹಲ್ಲೆ ಮಾಡಿದ್ದಾನೆ. ಪರಿಣಾಮ ನಾಲ್ಕನೇಯ ತರಗತಿ ವಿದ್ಯಾರ್ಥಿ ಹಾಗೂ ಅತಿಥಿ ಶಿಕ್ಷಕಿ ಗಂಭೀರ...

ಸಿಎಂ ಬೊಮ್ಮಾಯಿ ವಿರುದ್ಧ ಸಿಟ್ಟಾದ ಈಶ್ವರಪ್ಪ: ಬೆಳಗಾವಿಗೆ ಹೋಗ್ತಿನಿ, ಆದ್ರೆ ಅಧಿವೇಶನದಲ್ಲಿ ಭಾಗಿಯಾಗದೇ ಬಹಿಷ್ಕಾರ..!

ಸಿಎಂ ಬೊಮ್ಮಾಯಿ ವಿರುದ್ಧ ಸಿಟ್ಟಾದ ಈಶ್ವರಪ್ಪ: ಬೆಳಗಾವಿಗೆ ಹೋಗ್ತಿನಿ, ಆದ್ರೆ ಅಧಿವೇಶನದಲ್ಲಿ ಭಾಗಿಯಾಗದೇ ಬಹಿಷ್ಕಾರ..!

 ಬಾಗಲಕೋಟೆ: ಸಚಿವ ಸ್ಥಾನ ಸಿಗದ ಹಿನ್ನೆಲೆ ಬಹಿರಂಗವಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ. ಬಾಗಲಕೋಟೆಯಲ್ಲಿ‌ ಮಾತನಾಡಿರೋ ಈಶ್ವರಪ್ಪ, ಹೈಕಮಾಂಡ್ ಹಾಗೂ ಸಿಎಂ ನಡೆಗೆ ಬೇಸರವಾಗಿದೆ, ಅವರ ನಡೆ ನನಗೆ ನೋವು ತಂದಿದೆ, ಅಪಮಾನ ಆಗ್ತಿದೆ.. ಅದಕ್ಕೆ ಈಗ ನಾನು ಅಧಿವೇಶನದಲ್ಲಿ ಭಾಗಿಯಾಗದೇ ಸೌಜನ್ಯದ ಪ್ರತಿಭಟನೆ ನಡೆಸುತ್ತಿದ್ದೆನೆ ಅಂದ್ರು. ನಾನು ಬೆಳಗಾವಿಗೆ ಹೋಗ್ತೇನೆ ಆದ್ರೆ ಅಧಿವೇಶನಕ್ಕೆ ಹೋಗಲ್ಲ. ಅಧಿವೇಶನದಲ್ಲಿ ನಾನು ಇರಲ್ಲ ಅಂತ ಅಧ್ಯಕ್ಷರಿಗೆ ಪತ್ರ ಕೊಟ್ಟು, ಪರಮಿಷನ್ ತೆಗೆದುಕೊಳ್ಳೋಕೆ ಹೋಗ್ತೀನಿ ಯಾಕೆ ಅಂದ್ರೆ ನನ್ನ ಸ್ನೇಹಿತರು ಒಬ್ಬರು ಹೇಳಿದ್ರು, ಅಪರಾಧದಿಂದ ಮುಕ್ತವಾದ ವ್ಯಕ್ತಿಗಳಿಗೆ ಯಾವ ಕಾರಣಕ್ಕೂ ಶಿಕ್ಷೆ ಆಗಲ್ಲ ಅಂತ, ಆದ್ರೆ ನನ್ನ ವಿಚಾರದಲ್ಲಿ ತೀರ್ಪು ಬಂದಾಗಿದೆ, ಕ್ಲಿನ್ ಚಿಟ್ ಸಿಕ್ಕಾಗಿದೆ.. ನಿಮ್ಮನ್ನ ಮಂತ್ರಿ ಮಾಡ್ತಿವಿ ಮಂತ್ರಿ ಮಾಡ್ತೀವಿ ಅಂತ, ಇವತ್ತು ನಾಳೆ ಅಂತ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸ್ತಿದ್ದಾರೆ. “ನಿಮ್ಮಂತವರು ಮಂತ್ರಿ ಮಂಡಲದಲ್ಲಿ ಇರಬೇಕು ಅಂತ ಹೇಳ್ತಾರೆ, ಆದ್ರೆ ಯಾತಕ್ಕೆ ತಗೊಳ್ತಿಲ್ಲ ಅಂತ ಗೊತ್ತಿಲ್ಲ.. ಇಡೀ ರಾಜ್ಯದಲ್ಲಿ ನಮ್ಮ...

ಸಿಎಂ ತವರು ನೆಲದಲ್ಲಿ ಕಂದಾಯ ಮಂತ್ರಿ, ಆರ್.ಅಶೋಕ್ ಗ್ರಾಮ ವಾಸ್ತವ್ಯ..!

ಸಿಎಂ ತವರು ನೆಲದಲ್ಲಿ ಕಂದಾಯ ಮಂತ್ರಿ, ಆರ್.ಅಶೋಕ್ ಗ್ರಾಮ ವಾಸ್ತವ್ಯ..!

ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರುಗಳ ಬಗೆ ಬಗೆಯ ಕಾರ್ಯಕ್ರಮಗಳು ಜಾರಿಯಲ್ಲಿವೆ. ಸಿಎಂ ಬಸವರಾಜ್ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಂದಾಯ ಸಚಿವ ಆರ್‌.ಅಶೋಕ್ ಇಂದು ಗ್ರಾಮ ವಾಸ್ತವ್ಯಕ್ಕಾಗಿ ಬಂದಿಳಿದಿದ್ದಾರೆ. ಹೌದು, ಹಾವೇರಿ ಜಿಲ್ಲಿಯ ಶಿಗ್ಗಾವಿ ತಾಲುಕಿನ ಬಾಡ ಗ್ರಾಮದಲ್ಲಿ ಇಂದು ಕಂದಾಯ ಸಚಿವ ಆರ್.ಅಶೋಕ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕನಕದಾಸರ ಕರ್ಮಭೂಮಿ ಬಾಡದಲ್ಲಿ ನಡೆಯುಲಿರೋ ಕಾರ್ಯಕ್ರಮಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ‌. ಅಲ್ಲದೇ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಕಾರ್ಯಕ್ರಮ ರಂಗು ಪಡೆದುಕೊಂಡಿದೆ. ಈ ಕಾರಣಕ್ಕಾಗಿಯೇ ಶಿಗ್ಗಾವಿಯ ಬಾಡ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಬಂದಿಳಿದಿದ್ರು. ಬಾಡ ಗ್ರಾಮಸ್ಥರು ಸಚಿವರನ್ನು ಪೂರ್ಣ ಕುಂಬದೊಂದಿಗೆ ಸ್ವಾಗತ ಕೋರಿದ್ರು. ನಂತರ ಕನಕದಾಸರ ಮೂರ್ತಿಗೆ ಹಾರ ಹಾಕಿ ಮಾಲಾರ್ಪಣೆ ಮಾಡಿದ ಆರ್ ಅಶೋಕ, ಗ್ರಾಮಸ್ಥರ ಕುಶಲೋಪರಿ ವಿಚಾರಿಸಿದ್ರು. ಇನ್ನು ಬಾಡ ಗ್ರಾಮದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ, ಇದು 12 ನೇ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ....

ಯಲ್ಲಾಪುರ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಇಲ್ಲಿ ತಾಡಪತ್ರಿ ಹಂಚಲೂ ಸಚಿವರೇ ಬೇಕು: ವಿ.ಎಸ್.ಪಾಟೀಲ್ ವ್ಯಂಗ್ಯ

ಯಲ್ಲಾಪುರ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಇಲ್ಲಿ ತಾಡಪತ್ರಿ ಹಂಚಲೂ ಸಚಿವರೇ ಬೇಕು: ವಿ.ಎಸ್.ಪಾಟೀಲ್ ವ್ಯಂಗ್ಯ

 ಮುಂಡಗೋಡ: ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಮುಂಡಗೋಡಿನಲ್ಲಿ ‌ಮೊದಲ ಮಾತು ಆಡಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವರು ಬಂದ ನಂತ್ರ ಪ್ರಜಾಪ್ರಭುತ್ವವನ್ನು ಕಳೆದುಕೊಂಡಿದ್ದೇವೆ ಅಂತಾ ಆರೋಪಿಸಿದ್ದಾರೆ. ತಮ್ಮ‌ಮಾತಿನುದ್ದಕ್ಕೂ ಸಚಿವರ ವಿರುದ್ಧ ಪರೋಕ್ಷವಾಗೇ ವಾಗ್ದಾಳಿ ನಡೆಸಿದ್ದಾರೆ. ಮನೆ ಹಂಚಲೂ ಸಚಿವರೇ ಬೇಕು..! ಕ್ಷೇತ್ರದಲ್ಲಿ ಈ ಮೊದಲು ಕಾರ್ಯಕರ್ತರೇ ನಾಯಕರಾಗಿರುತ್ತಿದ್ದರು. ಆದ್ರೆ ಈಗ ಗ್ರಾಮ ಪಂಚಾಯತಿ ಸದಸ್ಯರ ಹಕ್ಕನ್ನೇ ಕಸಿದುಕೊಳ್ಳಲಾಗಿದೆ. ತಮ್ಮ ವಾರ್ಡಿನಲ್ಲಿನ ಅರ್ಹ ಫಲಾನುಭವಿಗಳನ್ನು ಹುಡುಕಿ ಮನೆ ಹಂಚುವ ಹಕ್ಕೂ ಗ್ರಾಪಂ ಸದಸ್ಯರಿಗೆ ಉಳಿದಿಲ್ಲ. ಸಚಿವರೇ ಖುದ್ದಾಗಿ ಬಂದು ತಮಗೆ ಇಷ್ಟವಾದವರಿಗೆ ಮನೆ ಹಂಚುವ ಕಾರ್ಯ ಮಾಡುತ್ತಾರೆ. ಮನೆ ಇರಲಿ ಕೃಷಿ ಇಲಾಖೆಯಿಂದ ರೈತರಿಗೆ ನೀಡುವ ತಾಡಪತ್ರಿಗಳನ್ನೂ ಕೂಡ ಸಚಿವರೇ ತಮಗಿಷ್ಟ ಬಂದವರಿಗೆ ಹಂಚುತ್ತಾರೆ ಅಂತಾ ಆರೋಪಿಸಿದ್ರು. ಹೀಗಾಗಿ, ಕ್ಷೇತ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಅಂತಾ ಪಾಟೀಲ್ ಆರೋಪಿಸಿದ್ರು. ತಾವು ಉದ್ದಾರ ಆದ್ರೆ ಸಾಕು..! ಊರ ಉದ್ದಾರ ಮಾಡಲಿ ಅಂತಾ ಆರಿಸಿ ಕಳಿಸಿ ಕೊಟ್ಟಿರ್ತಿರಾ. ಆದ್ರೆ ಅವಾಗೇಲ್ಲ ಊರ ಉದ್ಧಾರಕ್ಕಾಗಿ...

ಕಾಂಗ್ರೆಸ್ ಸೇರಿ ನಂತರ ಮೊದಲ ಬಾರಿಗೆ ಮುಂಡಗೋಡಿಗೆ ಬಂದ ವಿ.ಎಸ್.ಪಾಟೀಲ್, ಕಾಂಗ್ರೆಸ್ಸಿಗರು, ಅಭಿಮಾನಿಗಳ ಸಂಭ್ರಮ..!

ಕಾಂಗ್ರೆಸ್ ಸೇರಿ ನಂತರ ಮೊದಲ ಬಾರಿಗೆ ಮುಂಡಗೋಡಿಗೆ ಬಂದ ವಿ.ಎಸ್.ಪಾಟೀಲ್, ಕಾಂಗ್ರೆಸ್ಸಿಗರು, ಅಭಿಮಾನಿಗಳ ಸಂಭ್ರಮ..!

 ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ ಮತ್ತೆ ಜೀವ ಬಂದಂತಾಗಿದೆ. ಬಿಜೆಪಿಯ ಎರಡೇರಡು ಪ್ರಭಾವಿಗಳು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಬಿಜೆಪಿ ತೊರೆದು ಕೈ ಹಿಡಿದಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮುಖಂಡರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರ್ಪಡೆಗೊಂಡು ಇವತ್ತು ಮೊದಲ ಬಾರಿಗೆ ಮುಂಡಗೋಡಿಗೆ ಬಂದಿಳಿದಿದ್ದಾರೆ. ಹೀಗಾಗಿ, ಮುಂಡಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಜೋರಾಗಿದೆ. ಕೇಸರಿ ಧ್ವಜ, ಕೇಸರಿ ಶಾಲು..! ಅಂದಹಾಗೆ, ಪಟ್ಟಣದ ಶಿವಾಜಿ ಸರ್ಕಲ್ ಗೆ ವಿ.ಎಸ್.ಪಾಟೀಲ್ ಬಂದಿಳಿದರು. ಈ ವೇಳೆ ಅವ್ರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು. ಜಯಘೋಷ ಕೂಗಿ ಕೇಕೆ ಹಾಕಿದ್ರು. ಹೂವಿನ ಹಾರಗಳೊಂದಿಗೆ ವಿ.ಎಸ್.ಪಾಟೀಲರಿಗೆ ಭರ್ಜರಿ ಸ್ವಾಗತ ಕೋರಿದ್ರು. ಇನ್ನು ವಿಶೇಷ ಅಂದ್ರೆ ಕೇಸರಿ ಶಾಲು, ಕೇಸರಿ ಪೇಟ ತೊಡಿಸಿ ಜಯಘೋಷ ಮೊಳಗಿಸಿದ್ರು. ಮೆರವಣಿಗೆ ಮೂಲಕ ಪಾಟೀಲರಿಗೆ ಸ್ವಾಗತ ಕೋರಿದ್ರು.  

error: Content is protected !!