ಶಿಗ್ಗಾವಿ: ತಾಲೂಕಿನ ಹೊನ್ನಾಪುರ ಬಳಿ ಭೀಕರ ಅಪಘಾತವಾಗಿದೆ. ಶ್ರೀ ಕ್ಷೇತ್ರ ಮೈಲಾರ ದೇವರ ದರ್ಶನಕ್ಕೆಂದು ಹೊರಟ್ಟಿದ್ದವರು ಮಸಣಕ್ಕೆ ಸೇರಿದ್ದಾರೆ. ವೇಗವಾಗಿ ಬಂದ್ ಸ್ವಿಪ್ಟ್ ಕಾರು ಟ್ಯಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಸ್ಥಳದಲ್ಲೆ ಇಬ್ಬರ ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹೊನ್ನಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಹನುಮಂತಪ್ಪ ಮುಲಗಿ (55), ಚಂದ್ರು ಸಿರಕೋಳ (40) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಹುಬ್ಬಳ್ಳಿ ಸಮೀಪದ ಸೆರೆವಾಡ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ನೂಲ್ವಿ ಗ್ರಾಮದಿಂದ ಮೈಲಾರಕ್ಕೆ ಮೈಲಾರದೇವರ ಜಾತ್ರೆಗೆ ಟ್ರಾಕ್ಟರ್ ಮೂಲಕ ಹೊರಟಿದ್ದರು. ಈ ವೇಳೆ ಟ್ರಾಕ್ಟರ್ ಹಿಂಭಾಗ ಕಾಲುಜೋತು ಬಿಟ್ಟುಕೊಂಡು ಕುಳಿತಿದ್ದ ಭಕ್ತರಿಗೆ, ಹುಬ್ಬಳ್ಳಿಯಿಂದ ಹಾವೇರಿ ಕಡೆ ಬರುತ್ತಿದ್ದ ಕಾರು ಹಿಂಬದಿಯಿಂದ ಏಕಾಏಕಿ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಶಿಗ್ಗಾವಿ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಕಂಡು ಸ್ಥಳದಲ್ಲಿ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿದ್ದಾರೆ. ತಡಸ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ...
Top Stories
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ತಡಸ ಬಳಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು..! ಮೈಲಾರಕ್ಕೆ ಟ್ರಾಕ್ಟರ್ ನಲ್ಲಿ ಹೊರಟಿದ್ದವರು ಮಸಣ ಸೇರಿದ್ರು,
ಬಸವೇಶ್ವರಿ ಮಾತೆಯವರ ಬಗ್ಗೆ ಸಚಿವ್ರು ಹಗುರವಾಗಿ ಮಾತಾಡಿಲ್ಲ- ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿದ ಮುಖಂಡರು..!
ಬಸವೇಶ್ವರಿ ಮಾತೆಯವರಿಗೆ, ಸಚಿವ ಶಿವರಾಮ್ ಹೆಬ್ಬಾರ್ ನಿಂದನೆ ಮಾಡಿದ್ದಾರೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ, ಇವತ್ತು ಮುಂಡಗೋಡಿನಲ್ಲಿ ಮತ್ತೊಂದು ಪತ್ರಿಕಾಗೋಷ್ಟಿ ನಡೆದಿದೆ. ಬಿಜೆಪಿ ಮುಖಂಡರು ಹಾಗೂ ಉಗ್ನಿಕೇರಿ ಗ್ರಾಮದ ಹಲವರು ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಮಾತೆ ಬಸವೇಶ್ವರಿಯವರಿಗೆ ಸಚಿವ್ರು ಏನಂದ್ರೆ ಏನೂ ಅಂದಿಲ್ಲ, ಯಾವುದೇ ರೀತಿ ಹಗುರವಾಗಿ ಮಾತನಾಡಿಲ್ಲ ಅಂತಾ ಈ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇನ್ನು, ಪತ್ರಿಕಾಗೋಷ್ಟಿಯಲ್ಲಿ ಭಾಗವಸಿದ್ದ ಬಿಜೆಪಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ್, ಉಮೇಶ್ ಬಿಜಾಪುರ, ಮಹೇಶ ಹೊಸಕೊಪ್ಪ ಸೇರಿದಂತೆ ಹಲವ್ರು ಸ್ಪಷ್ಟನೆ ನೀಡಿದ್ದಾರೆ. ಖಡಕ್ ವಾರ್ನಿಂಗ್ ಕೊಟ್ಟ ನಾಗಭೂಷಣ ಹಾವಣಗಿ ..! ಇನ್ನು, ಪತ್ರಿಕಾಗೋಷ್ಟಿಯಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ ಮಾತನಾಡಿ, ಕೆಲ ದುಷ್ಟ ಹಿತಾಸಕ್ತಿಗಳು ನಮ್ಮ ನಾಯಕರ ಬಗ್ಗೆ ತಪ್ಪು ಮಾಹಿತಿ ಬಿಂಬಿಸಲು ಹೊರಟಿದ್ದಾರೆ. ರಾಜಕೀಯ ದುರುದ್ದೇಶಕ್ಕಾಗಿ ತಿರುಚಲು ಹೊತಟಿದ್ದಾರೆ. ನಾವೇಲ್ಲ ಮಾತಾಜಿಯವರ ಭಕ್ತರೇ ಆಗಿದ್ದಿವಿ. ಅಲ್ದೇ, ನಮ್ಮ ನಾಯಕ ಶಿವರಾಮ್ ಹೆಬ್ಬಾರ್ ಸಾಹೇಬ್ರೂ ಕೂಡ ಮಾತಾಜಿಯವರ...
ಕಾಡು ಔಡಲ ಬೀಜ ಸೇವಿಸಿ 9 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ: ಶಾಲೆಯ ಆವರಣದಲ್ಲೇ ಕಾಡು ಔಡಲ ಬೀಜ ತಿಂದ ಪರಿಣಾಮ, 9 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಶಿಗ್ಗಾವಿ ತಾಲೂಕಿನ ನೀರಲಕಟ್ಟಿ ತಾಂಡಾದಲ್ಲಿ ನಡೆದಿದೆ. ಇಂದು ಮದ್ಯಾಹ್ನ ಶಾಲೆಯ ಆವರಣದಲ್ಲಿ ಕಾಡ ಔಡಲ ಬೀಜವನ್ನು ಸೇವಿಸಿ ವಾಂತಿ ಹಾಗೂ ಜ್ವರದಿಂದ ಸುಮಾರು 9 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ, ತಕ್ಷಣವೇ ಅಸ್ವಸ್ಥ ವಿದ್ಯಾರ್ಥಿಗಳನ್ನು, ಶಿಗ್ಗಾವಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯಾವುದೇ ವಿದ್ಯಾರ್ಥಿಗಳಿಗೂ ಪ್ರಾಣಾಪಾಯವಿಲ್ಲ ಅಂತಾ ತಿಳಿದು ಬಂದಿದೆ. ವೈದ್ಯರು ಮಕ್ಕಳ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ ಅಂತಾ ತಿಳಿದು ಬಂದಿದೆ. ಸಮರ್ಥ್ ರವಿ ಲಮಾಣಿ, ಶರತ್ ಉಮೇಶ್ ಲಮಾಣಿ, ಪೂಜಾ ಗಣಪತಿ ಲಮಾಣಿ, ರೇಣುಕಾ ಸುಭಾಷ್ ಲಮಾಣಿ, ಶಂಕ್ರಪ್ಪ ಹೇಮಂತ್ ಅಕ್ಕಸಾಲಿ, ಪವನ್ ಗಂಗಪ್ಪ ಲಮಾಣಿ, ದೇವಕ್ಕ ಕುಮಾರ್ ಲಮಾಣಿ, ಪ್ರಿಯಾಂಕ ಸಕಾರಾಮ್ ಅಕ್ಕಸಾಲಿ, ನವೀನ್ ದೇವಪ್ಪ ಲಮಾಣಿ ಎಂಬುವ ವಿದ್ಯಾರ್ಥಿಗಳು ಅಸ್ವಸ್ಥಗೊಂಡವರಾಗಿದ್ದಾರೆ. ********************
ಅಯ್ಯೋ ದೇವ್ರೆ, ಅತ್ತಿವೇರಿ ಬಸವೇಶ್ವರಿ ಮಾತೆಗೆ ಏಕವಚನದಲ್ಲೇ ನಿಂದಿಸಿದ್ರಾ ಸಚಿವ್ರು..? ಅಷ್ಟಕ್ಕೂ, ಪತ್ರಿಕಾಗೋಷ್ಟಿಯಲ್ಲಿ ಮಾತೆಯ ಭಕ್ತರ ಆಕ್ರೋಶ ಎಂತಾದ್ದು..?
ಮುಂಡಗೋಡ ತಾಲೂಕಿನ ರಾಜಕೀಯ ಈ ಮಟ್ಟಿಗೆ ಹೀನ ಸ್ಥಿತಿಗೆ ತಲುಪಿತಾ..? ಅದ್ರಲ್ಲೂ ಈಗ ಬಂದಿರೋ ಆರೋಪ ನಿಜವೇ ಆಗಿದ್ದರೆ, ಮಾನ್ಯ ಸಚಿವ ಶಿವರಾಮ್ ಹೆಬ್ಬಾರ್ ಸಾಹೇಬ್ರು ಈ ಮಟ್ಟಕ್ಕೆ ರಾಜಕೀಯ ಮಗ್ಗುಲಿಗೆ ಅನಿವಾರ್ಯವಾಗಿ ಹೊರಳಿಕೊಂಡ್ರಾ..? ಹಾಗಾಗಿದ್ದರೆ ನಿಜಕ್ಕೂ ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಹುದೊಡ್ಡ ದುರಂತ. ಅವ್ರು ಮಾತೆ ಬಸವೇಶ್ವರಿ..! ಮುಂಡಗೋಡ ತಾಲೂಕಿನಲ್ಲಿ ಮನೆ ಮನೆಗೂ ಪರಿಚಿತರಾಗಿ, ಗುರು ಸ್ಥಾನ ಪಡೆದುಕೊಂಡಿರೋ ಅತ್ತಿವೇರಿ ಬಸವಧಾಮದ ಶ್ರೀಮಾತೆ ಬಸವೇಶ್ವರಿಗೆ ಸಚಿವ ಶಿವರಾಮ್ ಹೆಬ್ಬಾರ್, ಏಕ ವಚನದಲ್ಲಿ ನಿಂದಿಸಿದ್ದಾರೆ ಅಂತಾ ಮುಂಡಗೋಡಿನಲ್ಲಿ ಇವತ್ತು ಹಲವು ಮುಖಂಡರು, ಭಕ್ತರು ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಪತ್ರಿಕಾಗೋಷ್ಟಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಅತ್ತಿವೇರಿ ಬಸವಧಾಮದ ಪೂಜ್ಯ ಬಸವೇಶ್ವರಿ ಮಾತೆಯವರಿಗೆ ನಿಂದಿಸಿದ್ದನ್ನು ಖಂಡಿಸಿದ್ದಾರೆ. ಹೀಗಾಗಿ, ಸಚಿವ್ರು ಬಹಿರಂಗವಾಗಿ ಮಾತೆಯವರಲ್ಲಿ ಕ್ಷಮೆ ಕೇಳಬೇಕು ಅಂತಾ ಆಗ್ರಹಿಸಿದ್ದಾರೆ. ಅಷ್ಟಕ್ಕೂ ಏನಿದು ಕೇಸ್..? ಪತ್ರಿಕಾಗೋಷ್ಟಿಯಲ್ಲಿ ಮುಖಂಡರು ಮಾಹಿತಿ ನೀಡಿದ ಪ್ರಕಾರ, ಮುಂಡಗೋಡ ತಾಲೂಕಿನ ಉಗ್ನಿಕೇರಿಯಲ್ಲಿ ಇದೇ ಬರುವ ಫೆಬ್ರುವರಿ ಮೊದಲ ವಾರದಲ್ಲಿ ಗ್ರಾಮದೇವಿಯ ಜಾತ್ರೆ...
ಕತ್ತಲಲ್ಲಿ ಸುಸ್ಸು ಮಾಡೋಕೆ ಹೋಗಿದ್ದ ಪ್ರವಾಸಿಗ ಬಾವಿಯಲ್ಲಿ ಬಿದ್ದ..! ಮುಂದೇನಾಯ್ತು..?
ಗೋಕರ್ಣ: ಮೂತ್ರ ವಿಸರ್ಜನೆಗೆ ಹೋಗಿ ಪ್ರವಾಸಿಗನೊಬ್ಬ ಬಾವಿಗೆ ಬಿದ್ದು ಕೆಲಹೊತ್ತು ಅಲ್ಲೇ ಪರದಾಡಿದ ವಿಚಿತ್ರ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಮೇಲಿನಕೇರಿಯಲ್ಲಿ ನಡೆದಿದೆ. ದೆಹಲಿ ಮೂಲದ ರಾಮೇಶ್ವರ್ ಬಾವಿಗೆ ಬಿದ್ದ ಪ್ರವಾಸಿಗನಾಗಿದ್ದಾನೆ. ಯುವತಿಯೊಂದಿಗೆ ಗೋಕರ್ಣದ ಪ್ರವಾಸಕ್ಕೆ ಬಂದಿದ್ದ ಯುವಕ, ಮೂತ್ರವಿಸರ್ಜನೆಗೆ ಎಂದು ಕತ್ತಲಲ್ಲಿ ತೆರಳಿದ್ದಾಗ ತೆರದ ಬಾವಿಗೆ ಬಿದ್ದಿದ್ದ, ಹೀಗಾಗಿ, ಬಾವಿಯಲ್ಲಿ ಬಿದ್ದು ಹೊರಬರಲಾರದೇ ಕೆಲಹೊತ್ತು ಅಲ್ಲೇ ಪರದಾಡಿದ್ದ. ನಂತರ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರಿಂದ ರಕ್ಷಣೆ ಮಾಡಲಾಗಿದೆ. ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!
ಮುಂಡಗೋಡ: ಮಾಜಿ ಶಾಸಕ, ಯಲ್ಲಾಪುರ ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಕಾರಿಗೆ ಪುಟ್ಟ ಅಪಘಾತವಾಗಿದೆ. ಮುಂಡಗೋಡ ಪಟ್ಟಣದ ಬನ್ನಿಕಟ್ಟಿ ಹತ್ತಿರ ಕಬ್ಬು ತುಂಬುವ ಟ್ರಾಕ್ಟರ್ ಹಿಂಬದಿಗೆ ಎರಡು ಬಾರಿ ಗುದ್ದಿದ ಪರಿಣಾಮ ಕಾರಿನ ಹಿಂಬದಿಯ ಭಾಗ ಕೊಂಚ ಜಖಂ ಆಗಿದೆ. ಅದೃಷ್ಟವಶಾತ್ ವಿ.ಎಸ್.ಪಾಟೀಲರಿಗೆ ಯಾವುದೇ ಅಪಾಯವಾಗಿಲ್ಲ. ಮುಂಡಗೋಡಿನಿಂದ ಯಲ್ಲಾಪುರ ಕಡೆಗೆ ಹೊರಟಿದ್ದ ಮಾಜಿ ಶಾಸಕ ವಿ.ಎಸ್.ಪಾಟೀಲರ ಕಾರಿಗೆ, ಹಿಂದಿನಿಂದ ಅದೇ ಮಾರ್ಗದಲ್ಲಿ ಹೊರಟಿದ್ದ ಕಬ್ಬು ಸಾಗಿಸುವ ಟ್ರಾಕ್ಟರ್ ಗುದ್ದಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ, ತಕ್ಷಣವೇ ಸ್ಥಳೀಯರು ಟ್ರಾಕ್ಟರ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ, ಮೀನುಗಾರ ಸಾವು..!
ಕುಮಟಾ: ತಾಲೂಕಿನ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ದೋಳಿ ಮುಳುಗಡೆಯಾಗಿ ಮೀನುಗಾರ ಸಾವು ಕಂಡಿದ್ದಾನೆ. ಕುಮಟಾದ ಲುಕ್ಕೇರಿ ನಿವಾಸಿಯಾಗಿದ್ದ ವಿಘ್ನೇಶ್ವರ ಅಂಬಿಗ (24) ಮೃತ ದುರ್ದೈವಿಯಾಗಿದ್ದಾನೆ. ಮೀನುಗಾರಿಕೆಗೆ ತೆರಳಿದ್ದ ವೇಳೆ ಒಳನೀರಿನ ಹರಿವಿನಿಂದ ದೋಣಿ ಮುಳುಗಿದೆ. ಹೀಗಾಗಿ, ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥನಾಗಿದ್ದ ವಿಘ್ನೇಶ್ವರ ಆಸ್ಪತ್ರೆಗೆ ಸಾಗಿಸುವ ಸಾವು ಕಂಡಿದ್ದಾನೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವರ್ಷ ಉಳವಿ ಜಾತ್ರೆಗೆ ಚಕ್ಕಡಿ, ಎತ್ತಿನ ಗಾಡಿ ಒಯ್ಯಂಗಿಲ್ಲ, ಜಿಲ್ಲಾಡಳಿತದಿಂದ ಎತ್ತಿನ ಬಂಡಿ ನಿಷೇಧ..!
ಉಳವಿ: ಇತಿಹಾಸ ಪ್ರಸಿದ್ಧ ಉಳವಿ ಚನ್ನಬಸವೇಶ್ವರ ಜಾತ್ರೆ ಇನ್ನೇನು ಶುರುವಾಗಲಿದೆ. ಆದ್ರೆ, ಉಳವಿ ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದ ಎತ್ತಿನಬಂಡಿಗೆ ಉತ್ತರ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿರುವುದು ಭಕ್ತರ ಪಾಲಿಗೆ ನುಂಗಲಾರದ ತುತ್ತಾಗಿದೆ. ಯಾಕಂದ್ರೆ, ಪ್ರತಿ ವರ್ಷ ಉಳವಿ ಜಾತ್ರೆಗೆ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಸೇರುತ್ತಿದ್ದರು. ಜಾತ್ರೆಗೆಂದು ಎತ್ತಿನಬಂಡಿಗಳನ್ನು ವಿಶೇಷ ರೀತಿಯಲ್ಲಿ ಸಿಂಗರಿಸುವುದು ಒಂದು ಪರಂಪರೆಯಾಗಿಯೇ ಬೆಳೆದುಬಂದಿದೆ. ಆದರೆ ಈ ಬಾರಿ ರಾಜ್ಯದಲ್ಲಿ ಜಾನುವಾರುಗಳಿಗೆ ಸಾಂಕ್ರಾಮಿಕ ಚರ್ಮಗಂಟು ರೋಗ (Lumpy Skin Disease – LSD) ಕಾಣಿಸಿಕೊಂಡಿದ್ದರಿಂದ ಎತ್ತಿನಬಂಡಿಗಳಿಗೆ ನಿಷೇಧ ಹಾಕಲು ಜಿಲ್ಲಾಡಳಿತ ನಿರ್ಧರಿಸಿದೆ. ಉಳವಿ ಜಾತ್ರೆಯು ಜನವರಿ 28ರಿಂದ ಫೆ 8ರವರೆಗೆ ನಡೆಯಲಿದೆ. ಭಕ್ತರು ಈಗಾಗಲೇ ಉಳವಿಯತ್ತ ಬರುತ್ತಿದ್ದಾರೆ. ವಾಹನಗಳಲ್ಲಿ ಬರಲು ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಟ್ರ್ಯಾಕ್ಟರ್, ಕಾರು, ಬಸ್ ಮತ್ತು ಕಾಲ್ನಡಿಗೆಯಲ್ಲಿ ಭಕ್ತರು ಉಳವಿಗೆ ಬರುತ್ತಿದ್ದಾರೆ. ನೂರಾರು ವರ್ಷಗಳ ಉಳವಿ ಜಾತ್ರೆಯ ಪರಂಪರೆಯಲ್ಲಿ ಎತ್ತಿನಬಂಡಿಗಳಿಲ್ಲದ ಜಾತ್ರೆ ನಡೆಯುತ್ತಿರುವುದು...
ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೆಂಕಿ ಅವಘಡವಾಗಿದೆ. ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪ ಗ್ರಾಮದ ರೈತ ಶಿವಾಜಿ ತುಳಜಾನವರ ಹಾಗೂ ಪಕ್ಕೀರಪ್ಪಾ ತುಳಜಾನವರ ಎಂಬುವವರ ಸುಮಾರು 2-3 ಎಕರೆ ಕಬ್ಬು ಬೆಳೆ ಬೆಂಕಿಗೆ ಅಹುತಿ ಆಗಿದೆ. ಅಂದಹಾಗೆ ಇಂದು ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಹೀಗಾಗಿ, ಕಟಾವು ಮಾಡಿ ಇಟ್ಟಿದ್ದ ಕಬ್ಬೂ ಸೇರಿದಂತೆ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಇನ್ನು ಅಗ್ನಿಶಾಮಕ ಸಿಬ್ಬಂದಿಗಳು ಬರುವಷ್ಟರಲ್ಲಿ ಬೆಂಕಿ ನಂದಿಸುವ ಕಾರ್ಯವಾಗಿತ್ತು. ಹೀಗಾಗಿ, ಆಗಬಹುದಾಗಿದ್ದ ಮತ್ತಷ್ಟು ಹಾನಿ ತಪ್ಪಿದಂತಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ವರದಿ-ವಿನಾಯಕ ಎಂ.ಪಿ.
ಇಂದೂರಿನ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ..!
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಇಲ್ಲಿನ ಅಶೋಕ ನಡಿಗೇರ ಎಂಬುವವರಿಗೆ ಸೇರಿದ ಗ್ರಾಮ ಒನ್ ಕೇಂದ್ರದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಕಂಪ್ಯೂಟರ್ ಸೇರಿದಂತೆ ಗಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್..? ಅಸಲು, ಇಂದು ಮದ್ಯಾನ ನಡದಿರೋ ಈ ಬೆಂಕಿ ಅನಾಹುತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಅಂತಾ ಹೇಳಲಾಗಿದೆ. ಆದ್ರೆ, ತಾಲೂಕಿನ ಇಂದೂರು, ಹುನಗುಂದ, ನಂದಿಕಟ್ಟಾ ಸೇರಿ ಹಲವು ಭಾಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ಸಂಪರ್ಕ ಇರಲಿಲ್ಲ. ಹೆಸ್ಕಾಂ ಮುಂಡಗೋಡ ವಿಭಾಗದಲ್ಲಿ ದುರಸ್ತಿ ಕಾರ್ಯದ ಸಲುವಾಗಿ ವಿದ್ಯುತ್ ಸಂಪರ್ಕ ನೀಡಿರಲಿಲ್ಲ. ಹೀಗಾಗಿ, ಬೆಂಕಿ ಹೇಗೆ ತಗುಲಿದೆ ಅಂತಾ ಇನ್ನಷ್ಟೇ ತಿಳಿದು ಬರಬೇಕಿದೆ. ಸದ್ಯ ಬೆಂಕಿಯ ಅನಾಹುತದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, ಗ್ರಾಮ ಒನ್ ಕೇಂದ್ರದ ಪಿಠೋಪಕರಣಗಳು ಸೇರಿದಂತೆ, ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿ ಆಗಿವೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.