ಅಗಡಿ ಚೆಕ್ ಪೊಸ್ಟ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಒದ್ದಾಡಿದ ಸವಾರ, ಆಸ್ಪತ್ರೆಗೆ ರವಾನೆ..!

ಅಗಡಿ ಚೆಕ್ ಪೊಸ್ಟ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಒದ್ದಾಡಿದ ಸವಾರ, ಆಸ್ಪತ್ರೆಗೆ ರವಾನೆ..!

ಮುಂಡಗೋಡ; ತಾಲೂಕಿನ ಕಲಘಟಗಿ ರಸ್ತೆಯ ಅಗಡಿ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟ‌ನೆ ನಡೆದಿದೆ. ಕಲಘಟಗಿ ತಾಲೂಕಿನ ಬೆಂಡ್ಲಗಟ್ಟಿ ಗ್ರಾಮದವನು ಅಂತಾ ಹೇಳಲಾಗಿರೋ ವ್ಯಕ್ತಿ ಬೈಕ್ ನಿಂದ ಬಿದ್ದು ಒದ್ದಾಡುತ್ತಿದ್ದಾನೆ. ಈ ವೇಳೆ ಸ್ಥಳೀಯರು ಅಂಬ್ಯುಲೆನ್ಸ್ ಗೆ ಕಾಲ್ ಮಾಡಿ ಗಾಯಾಳು ವ್ಯಕ್ತಿಯ ಚಿಕಿತ್ಸೆಗೆ ರವಾನಿಸಲು ರೆಡಿಯಾಗಿದ್ದಾರೆ. ಆದ್ರೆ ಇದೇ ವೇಳೆ ಪೊಲೀಸರ ವಾಹನ ಬಂದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದೆ.

ಮುಂಡಗೋಡ ಯುವಕರ ಮಾನವೀಯ ಕಾರ್ಯ..!

ಮುಂಡಗೋಡ ಯುವಕರ ಮಾನವೀಯ ಕಾರ್ಯ..!

ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಚರ್ಮ ರೋಗದಿಂದ ಬಳಲುತ್ತಿದ್ದ ಆಕಳಿಗೆ ಇಲ್ಲಿನ ಯುವಕರ ಬಳಗ ಚಿಕಿತ್ಸೆ ನೀಡಿ ಮಾನವೀಯತೆ ತೋರಿದೆ. ತೀವ್ರವಾದ ಚರ್ಮರೋಗದಿಂದ ಬಳಲುತ್ತಿದ್ದ ಆಕಳು ಪರದಾಡುತ್ತಿತ್ತು. ಇದನ್ನು ಕಂಡ ಯುವಕರ ಪಡೆ ತಕ್ಷಣವೇ ಆಕಳನ್ನು ಹಿಡಿದು ಕಟ್ಟಿ, ಪಶುವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕರ ಕರೆಗೆ ಓಗೋಟ್ಟು ತಕ್ಷಣವೇ ಹಾಜರಾದ ಪಶು ವೈದ್ಯ ಅವಿನಾಶ್ ಪೂಜಾರ್ ಕರ್ತವ್ಯ ಪ್ರಜ್ಞೆ ತೋರಿದ್ದಾರೆ. ಕಳೆದ ವಾರವಷ್ಟೇ ಅನಾರೋಗ್ಯದಿಂದ ಬಳಲಿ ನಿತ್ರಾಣಗೊಂಡಿದ್ದ ಆಕಳ ಕರುವಿಗೆ ಚಿಕಿತ್ಸೆ ನೀಡಿದ್ದ ಇದೇ ಯುವಕರ ತಂಡ ಕರುವನ್ನು ಬದುಕಿಸಲು ಹರಸಾಹಸ ಪಟ್ಟಿತ್ತು. ಹೀಗಾಗಿ, ಮುಂಡಗೋಡಿನ ಯುವಕರ ಮಾನವೀಯ ಕಾರ್ಯ ಪ್ರಶಂಸೆಗೆ ಪಾತ್ರವಾಗಿದೆ‌.

ಮುಂಡಗೋಡಿನಲ್ಲಿ ಮೊಬೈಲ್ ಎಗರಿಸಿದ್ದವನಿಗೆ ಬಿತ್ತು ಬಿಸಿ ಬಿಸಿ ಗೂಸಾ..!

ಮುಂಡಗೋಡಿನಲ್ಲಿ ಮೊಬೈಲ್ ಎಗರಿಸಿದ್ದವನಿಗೆ ಬಿತ್ತು ಬಿಸಿ ಬಿಸಿ ಗೂಸಾ..!

ಮುಂಡಗೋಡ; ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ್ದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ. ಪಟ್ಟಣದ ಮೊಬೈಲ್ ಶಾಪ್ ಒಂದರಲ್ಲಿ ಮೊಬೈಲ್ ಖರೀಧಿಸುತ್ತಿದ್ದಾಗ, ಹಿಂದಿನಿಂದ ಬಂದ ವ್ಯಕ್ತಿ ಮೊಬೈಲ್ ಎಗರಿಸಿಕೊಂಡು ಹೋಗಿದ್ದಾನೆ. ನಂತರ ಮೊಬೈಲ್ ಕಳೆದುಕೊಂಡ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗಾಗಿ ತಡಕಾಡಿದ್ದಾರೆ. ನಂತ್ರ ಶಿವಾಜಿ ಸರ್ಕಲ್ ನಲ್ಲಿ ಅಚಾನಕ್ಕಾಗಿ ಮೊಬೈಲ್ ಕಳ್ಳ ತಗಲಾಕ್ಕೊಂಡಿದ್ದಾನೆ. ಹೀಗಾಗಿ, ಮೊಬೈಲ್ ಕಳೆದುಕೊಂಡಿದ್ದ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗೆ ಗೂಸಾ ನೀಡಿದ್ದಾರೆ. ನಂತರ ಪೊಲೀಸ್ ಠಾಣೆಗೆ ಮೊಬೈಲ್ ಕಳ್ಳನನ್ನು ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಆದ್ರೆ, ಮೊಬೈಲ್ ಕಳ್ಳ ಎಲ್ಲಿಯವನು ಏನು ಕತೆ ಅಂತಾ ಮಾಹಿತಿ ಲಭ್ಯವಾಗಿಲ್ಲ‌.

ಇಂದೂರಿನಲ್ಲಿ ನೇಣಿಗೆ ಶರಣಾದ 17 ವರ್ಷದ ಯುವತಿ..!

ಇಂದೂರಿನಲ್ಲಿ ನೇಣಿಗೆ ಶರಣಾದ 17 ವರ್ಷದ ಯುವತಿ..!

ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ 17 ವರ್ಷದ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ನಡೆದಿದೆ.ಇಂದು ಮದ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ‌ ಎನ್ನಲಾಗಿದೆ. ರೂಪಾ ಬಸವರಾಜ್ ಹಳಿಯಾಳ (17) ಎಂಬ ಯುವತಿಯೇ ನೇಣಿಗೆ ಶರಣಾಗಿದ್ದು ಪೋಷಕರ ಆಕ್ರಂದನಕ್ಕೆ ಕಾರಣವಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ.

ಹನುಮಾಪುರ ಮಠದ ಉತ್ತರಾಧಿಕಾರಿ ನೇಮಕ ಗೊಂದಲ, ಜಂಗಮ, ಅರ್ಚಕ ಸಂಘದವರ ಆಕ್ರೋಶ..!

ಹನುಮಾಪುರ ಮಠದ ಉತ್ತರಾಧಿಕಾರಿ ನೇಮಕ ಗೊಂದಲ, ಜಂಗಮ, ಅರ್ಚಕ ಸಂಘದವರ ಆಕ್ರೋಶ..!

ಮುಂಡಗೋಡ : ತಾಲೂಕಿನ ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ಸದ್ಯ ನಡೆಯುತ್ತಿರೋ ವಿದ್ಯಮಾನಗಳು ಬಹುಶಃ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸಿದೆ. ಮಠದ ಅಂಗಳದಲ್ಲಿ ಎರಡು ಗುಂಪುಗಳ‌ ನಡುವೆ ಉತ್ತರಾಧಿಕಾರಿಯ ಕಿಚ್ಚು ನಿಗಿ ನಿಗಿಸುತ್ತಿದೆ‌. ತಾಲೂಕಾ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದವರು ಸದಸ್ಯರು ಕೂಡ ಈಗ ತಗಾದೆ ತೆಗೆದಿದ್ದಾರೆ. ಏನಿದು ತಗಾದೆ..? ಅಂದಹಾಗೆ, ಈಗಾಗಲೇ, ಕಳೆದ ರಾತ್ರಿ ಒಂದು ಗುಂಪು ಗಂಗಾಧರಯ್ಯ ಹಿರೇಮಠ ಎಂಬುವವರನ್ನು ಹನುಮಾಪುರ ಶ್ರೀಕಾಳಿಕಾಮಠದ ಉತ್ತರಾಧಿಕಾರಿ ಅಂತಾ ಘೋಷಣೆ ಮಾಡಿ, ಪಟ್ಟಾಧಿಕಾರದ ವಿಧಿವಿಧಾನಗಳನ್ನೂ ಮಾಡಿ ಆಗಿದೆ. ಆದ್ರೆ, ಇದಕ್ಕೊಪ್ಪದ ಮತ್ತೊಂದು ಬಣ, ಕಳೆದ ಹಲವು ದಿನಗಳಿಂದ ಉತ್ತರಾಧಿಕಾರಕ್ಕಾಗಿ ಅಲೆದಾಡುತ್ತಿರು ಸೋಮಶೇಖರ ಸ್ವಾಮೀಜಿಯವರನ್ನು ತಂದು ಪಟ್ಟಕ್ಕೇರಿಸಲು ಮುಹೂರ್ತ ಫಿಕ್ಸ್ ಮಾಡಿದೆ. ಇವತ್ತು ಮತ್ತು ನಾಳೆ ಅಂದ್ರೆ ಫೆ.9 ಮತ್ತು 10 ರಂದು ಪಟ್ಟಾಧಿಕಾರದ ಕಾರ್ಯಕ್ರಮ ನಡೆಸುತ್ತಿದ್ದಾರೆ. ಮಲ್ಲಿಕಾರ್ಜುನ ಶಾಸ್ತ್ರಿ ವಿರುದ್ದ ಕಿಡಿ..! ಈ ಕಾರ್ಯಕ್ರಮ ಬಹುತೇಕ ರಂಬಾಪುರಿ ಪೀಠದ ಜಗದ್ಗುರುಗಳ ಸಾನಿಧ್ಯದಲ್ಲೇ ನಡೆಯತ್ತೆ ಅನ್ನೋ ಮಾತುಗಳಿವೆ. ಹೀಗಾಗಿ, ಈ...

ಮುಂಡಗೋಡಿನ ಕೊಪ್ಪ ಬಳಿ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!

ಮುಂಡಗೋಡಿನ ಕೊಪ್ಪ ಬಳಿ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!

ಮುಂಡಗೋಡ: ತಾಲೂಕಿನ ಕೊಪ್ಪ ಬಳಿ ಬೀಕರ ಅಪಘಾತ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸ್ಕಿಡ್ ಆಗಿ ಲಾರಿಯಡಿ ಬಿದ್ದು ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ನಂದಿಕಟ್ಟಾ ಗ್ರಾಮದ ಷರೀಫ್ ಎಂಬುವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಇನ್ನು ಮತ್ತೋರ್ವ ಸವಾರ ವಿಶ್ವನಾಥ್ ಸವಣೂರ್ ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾನೆ. ಇಬ್ಬರೂ ಯುವಕರು ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಹೋಗುವ ವೇಳೆ, ಮುಂಡಗೋಡ ಕಡೆಗೆ ಹೋಗುತ್ತಿದ್ದ ಲಾರಿ ಓವರ್ ಟೇಕ್ ಮಾಡಲು ಹೋಗಿ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

ಇಂದಿರಾನಗರ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರರು, ಇಬ್ಬರು ಗಂಭೀರ..!

ಇಂದಿರಾನಗರ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರರು, ಇಬ್ಬರು ಗಂಭೀರ..!

ಮುಂಡಗೋಡ: ತಾಲೂಕಿನ ಇಂದಿರಾನಗರ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ‌. ಮುಂಡಗೋಡ ಗಾಂಧಿ ನಗರದ ದುರ್ಗಪ್ಪ ಕೊರವರ್(25) ಎಂದು ಗುರುತಿಸಲಾಗಿದೆ‌. ಮತ್ತೋರ್ವ ಓಣಿಕೇರಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. 

108 ಅಂಬ್ಯುಲೆನ್ಸ್ ನಲ್ಲೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಡ್ಡಿಗೇರಿ ಮಹಿಳೆ..!

108 ಅಂಬ್ಯುಲೆನ್ಸ್ ನಲ್ಲೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಡ್ಡಿಗೇರಿ ಮಹಿಳೆ..!

ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಡ್ಡಿಗೇರಿಯ ಸೋನುಬಾಯಿ ಜುಮ್ಮು ತೋರವತ್ ಎಂಬ ಮಹಿಳೆಯೇ ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಸೋಮವಾರ ರಾತ್ರಿ ಮುಂಡಗೋಡ ತಾಲೂಕಾಸ್ಪತ್ರೆಗೆ 108 ಅಂಬ್ಯಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿಮದ್ಯೆ ಹೆರಿಗೆ ನೋವು ತೀವ್ರವಾಗಿದೆ. ಹೀಗಾಗಿ ಅಂಬ್ಯುಲೆನ್ಸ್ ನಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಳ್ಳಲಾಗಿದೆ. 108 ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ, ಚಾಲಕ ಪ್ರಕಾಶ್ ಬಾಗೇವಾಡಿ, ಆಶಾ ಕಾರ್ಯಕರ್ತೆ ಸವಿತಾ ಎಸ್ ಜನ್ನು ತಾಯಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಭಾಗಿಯಾಗಿದ್ರು. ಸದ್ಯ ಮಹಿಳೆಗೆ ತಾಲೂಕಾಸ್ಪತ್ರೆಯಲ್ಲಿ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ‌.

ಇಂದೂರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಸುಟ್ಟು ಕರಕಲಾದ ಭತ್ತದ ಬಣವಿ..!

ಇಂದೂರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಸುಟ್ಟು ಕರಕಲಾದ ಭತ್ತದ ಬಣವಿ..!

ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಆಕಸ್ಮಿಕವಾಗಿ ಭತ್ತದ ಬಣ್ಣವಿಗೆ ಬೆಂಕಿ ತಗುಲಿ ಸಾವಿರಾರು ರೂಪಾಯಿ ಮೌಲ್ಯದ ಭತ್ತ ಸುಟ್ಟು ಕರಕಲಾದ ಘಟನೆ ನಡೆದಿದೆ. ಚಂದ್ರಶೇಖರ್ ಅರ್ಕಸಾಲಿ ಎಂಬುವ ರೈತರಿಗೆ ಸೇರಿದ ಒಂದೂವರೇ ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಭತ್ತದ ಬಣವಿಗೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಆಗ ವಿಷಯ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದು, ಆಗಬಹುದಾದ ಮತ್ತಷ್ಟು ಹಾನಿಯನ್ನು ತಪ್ಪಿಸಿದ್ದಾರೆ. ಈ ಘಟನೆಯಲ್ಲಿ ಸುಮಾರು 50 ಸಾವಿರ ರೂ. ಮೌಲ್ಯದ ಭತ್ತ ಸುಟ್ಟು ಕರಕಲಾಗಿದೆ ಅಂತಾ ಅಂದಾಜಿಸಲಾಗಿದೆ.

ಅಂಬೇಡ್ಕರರಿಗೆ ಅವಮಾನ ಹಿನ್ನೆಲೆ: ಮುಂಡಗೋಡಿನಲ್ಲಿ ನ್ಯಾಯಾಧೀಶರ ಪ್ರತಿಕೃತಿ ದಹಿಸಿ ಆಕ್ರೋಶ..!

ಅಂಬೇಡ್ಕರರಿಗೆ ಅವಮಾನ ಹಿನ್ನೆಲೆ: ಮುಂಡಗೋಡಿನಲ್ಲಿ ನ್ಯಾಯಾಧೀಶರ ಪ್ರತಿಕೃತಿ ದಹಿಸಿ ಆಕ್ರೋಶ..!

ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟ ಇಂದು ಸಿಡಿದೆದ್ದಿದ್ದವು. ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಡಾ.ಅಂಬೇಡ್ಕರರಿಗೆ ಅವಮಾನ ಮಾಡಿರೋ ಹಿನ್ನೆಲೆಯಲ್ಲಿ ಆ ನ್ಯಾಯಾಧೀಶರನ್ನು ವಜಾ ಮಾಡುವಂತೆ ಆಗ್ರಹಿಸಿ ಪ್ರತಿಭಟಿಸಿದ್ರು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡಾ ರವರ ಪ್ರತಿಕೃತಿ ದಹಿಸಿ ಆಕ್ರೊಶ ಹೊರಹಾಕಿದ್ರು. ಈ ವೇಳೆ ದಲಿತ ಸಂಘಟನೆಗಳು ತಾಲೂಕಿನ ಬಹುತೇಕ ಎಲ್ಲಾ ಮುಖಂಡರು ಹಾಜರಿದ್ದರು.

error: Content is protected !!