ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ದಾಳಿ ಮಾಡಿದೆ. ಮಟ್ಕಾ ದಂಧೆ ನಡೆಸುತ್ತಿದ್ದ ಓರ್ವನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ ಪೊಲೀಸ್ರು. ನ್ಯಾಸರ್ಗಿಯ ಪ್ರಕಾಶ ಉದಯ ಹರಿಜನ(32) ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಈತ ನ್ಯಾಸರ್ಗಿ ಗ್ರಾಮದ ಕಲಿಯಮ್ಮಾ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಓಸಿ ಬರೆಯುತ್ತಿದ್ದ, ಅದೇ ವೇಳೆ ದಾಳಿ ಮಾಡಿರೋ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ, ಮಟ್ಕಾ ನಡೆಸುತ್ತಿದ್ದವರ ಛಳಿ ಬಿಡಿಸಿದೆ. ದಾಳಿ ವೇಳೆ ನಗದು 410 ರೂ. ಜಪ್ತಿ ಮಾಡಲಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Top Stories
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಪತಿಯ ಕಿರುಕುಳ ಆರೋಪ, ಬಾಚಣಕಿಯಲ್ಲಿ 6 ತಿಂಗಳ ಗರ್ಭಿಣಿ ನೇಣಿಗೆ ಶರಣು..!
ಮುಂಡಗೋಡ: ತಾಲೂಕಿನ ಬಾಚಣಕಿಯಲ್ಲಿ ಆರು ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರೋ ಘಟನೆ ನಡೆದಿದೆ. ಚೇತನಾ ಗುತ್ತೆಪ್ಪ ಸಣ್ಣಮನಿ(32) ನೇಣಿಗೆ ಶರಣಾದ ಗರ್ಭಿಣಿಯಾಗಿದ್ದು ಪತಿಯ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರೋ ಆರೋಪ ಕೇಳಿ ಬಂದಿದೆ. ಪತಿ ಗುತ್ತೆಪ್ಪ ಸಣ್ಣಮನಿ ಎಂಬುವವನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2 ಮಕ್ಕಳ ತಾಯಿಯಾಗಿದ್ದ ಚೇತನಾ, ಈಗ ಮತ್ತೆ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಆದ್ರೆ ಪತಿ ಗುತ್ತೆಪ್ಪ ಮಾನಸಿಕ ಹಾಗೂ ದೈಹಿಕ ಕಿರುಕುಳನೀಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಆರೋಪಿಸಲಾಗಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡಿರೋ ಮುಂಡಗೋಡ ಪೊಲೀಸರು ಪತಿ ಗುತ್ತೆಪ್ಪನನ್ನು ವಶಕ್ಕೆ ಪಡೆದಿದ್ದಾರೆ. ************************* ಪಬ್ಲಿಕ್ ಫಸ್ಟ್ ನ್ಯೂಸ್ ವಾಟ್ಸಾಪ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿ, ತಾಜಾ ಸುದ್ದಿಗಳನ್ನು ಕ್ಷಣಮಾತ್ರದಲ್ಲೇ ಪಡೆಯಿರಿ.. https://chat.whatsapp.com/KgL6z5JiAvsBtN9kzBSXRD
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಗೋಮಾಂಸ ಸಾಗಿಸುತ್ತಿದ್ದ ವಾಹನ ಸಮೇತ, ಓರ್ವ ವಶಕ್ಕೆ..!
ಮುಂಡಗೋಡ:ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ಬೆಳ್ಳಂ ಬೆಳಿಗ್ಗೆ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅಕ್ರಮವಾಗಿ ಬಂಕಾಪುರದಿಂದ ಗೋಮಾಂಸ ಸಾಗಾಟ ಮಾಡುತ್ತಿದ್ದ ಓಮಿನಿ ವಾಹನ ಸಮೇತ ಓರ್ವ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಟಿಬೇಟಿಯನ್ ಕಾಲೋನಿಗೆ..? ಇಂದು ಬೆಳಿಗ್ಗೆ, ಹಾವೇರಿ ಜಿಲ್ಲೆಯ ಬಂಕಾಪುರದಿಂದ ಓಮಿನಿ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದಲ್ಲಿ ಬಂಕಾಪುರ ರಸ್ತೆಯಲ್ಲಿ ದಾಳಿ ಮಾಡಿರೋ ಪೊಲೀಸರು, ಬರೋಬ್ಬರಿ 2 ಕ್ವಿಂಟಾಲ್ ಗೋಮಾಂಸ ವಶಕ್ಕೆ ಪಡೆಸಿಕೊಂಡಿದ್ದಾರೆ. ಜೊತೆಗೆ ಅಕ್ರಮ ದಂಧೆ ನಡೆಸುತ್ತಿದ್ದ ಆರೋಪಿ ಸಮೇತ ವಾಹನ ಜಪ್ತಿ ಪಡಿಸಿಕೊಂಡಿದ್ದಾರೆ. ಕೇಸು ಜಡೆದಿದ್ದಾರೆ. ನಿತ್ಯದ ಆಟ..! ಅಸಲು, ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿಗೆ ನಿತ್ಯವೂ ಟನ್ನುಗಟ್ಟಲೇ ಗೋಮಾಂಸ ಬಂದು ಬೀಳುತ್ತಿದೆ. ಹುಬ್ಬಳ್ಳಿ, ಬಂಕಾಪುರ, ಸವಣೂರು ಸೇರಿದಂತೆ ಹಲವು ಕಡೆಗಳಿಂದ ಟಾಟಾ ಎಸ್, ಓಮಿನಿಗಳಲ್ಲಿ, ಹಳೆಯ ಕಾರುಗಳಲ್ಲಿ ಸ್ಕೂಟಿಗಳಲ್ಲಿ ಕ್ವಿಂಟಾಲುಗಟ್ಟಲೇ ಗೋಮಾಂಸ ತಂದು ಬಿಕರಿ ಮಾಡಿಕೊಂಡು ಹೋಗ್ತಿದಾರೆ ಅಕ್ರಮಿಗಳು. ನಿಜ ಅಂದ್ರೆ ಇದೇಲ್ಲ ಗಪ್ ಚುಪ್ ಆಗೇ, ಬೆಳಕು ಹರಿಯುವುದೊರಳಗಾಗಿ ಕೈ...
ನಾಪತ್ತೆಯಾಗಿದ್ದ ಮುಂಡಗೋಡಿನ ಆನಂದ್ ಕಡಗಿ ಶವ ಕುಂದರ್ಗಿ ಕ್ರಾಸ್ ಬಳಿ ಪತ್ತೆ, ಅಷ್ಟಕ್ಕೂ ಸಾವು ಹೇಗಾಯ್ತು..?
ಮುಂಡಗೋಡ: ನಾಪತ್ತೆಯಾಗಿದ್ದ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಆನಂದ ಕಡಗಿ ಶವ, ಬರೋಬ್ಬರಿ 21 ದಿನಗಳ ಬಳಿಕ ಪತ್ತೆಯಾಗಿದೆ. ಮುಂಡಗೋಡ ತಾಲೂಕಿನ ಕುಂದರ್ಗಿ ಕ್ರಾಸ್ ಬಳಿ ಶವ ಪತ್ತೆಯಾಗಿದೆ. ಈ ಮೂಲಕ ಉಟ್ಟುಡುಗೆಯಲ್ಲೇ ಮನೆಬಿಟ್ಟು ನಡೆದಿದ್ದ ಆನಂದ್ ಕಡಗಿಯ ಶವ ಕಂಡು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ನೇಹಿತರಲ್ಲಿ ದುಃಖ ಮಡುಗಟ್ಟಿದೆ. ಬರಿಗಾಲಲ್ಲೇ ನಡೆದಿದ್ದ ಶಿಕ್ಷಕ..! ಅವತ್ತು, ಮೇ 29 ರ ರವಿವಾರ, ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿದ್ದ ಆನಂದ್, ಹಸಿರು ಬಣ್ಣದ ಸಿಮೆಂಟ್ ಕಂಪನಿ ಹೆಸರಿರೋ ಟೀಶರ್ಟ್, ಹಾಗೇ ಖಾಕಿ ಬಣ್ಣದ ತ್ರಿಪೋರ್ಥ್ ತೊಟ್ಟು ಉಟ್ಟುಡುಗೆಯಲ್ಲೇ ನಾಪತ್ತೆಯಾಗಿದ್ದರು. ವಿಷ ಸೇವಿಸಿದ್ರಾ..? ಇನ್ನು, ಇವತ್ತಿಗೆ ಬರೋಬ್ಬರಿ 21 ದಿನಗಳಾಯ್ತು ಆನಂದ್ ಕಡಗಿ ನಾಪತ್ತೆಯಾಗಿ. ಇಷ್ಟು ದಿನದ ನಂತ್ರ, ಆನಂದ್ ಮೃತದೇಹ ಪತ್ತೆಯಾಗಿದೆ. ವಿಚಿತ್ರ ಅಂದ್ರೆ ಮೃತದೇಹ ಇಷ್ಟು ದಿನವಾದ್ರೂ ಸಂಪೂರ್ಣ ಕೊಳೆತು ಹೋಗಿಲ್ಲ. ಸುಮಾರು 80% ಕೊಳೆತಿದೆ. ಇದಕ್ಕೂ ಹೆಚ್ಚಿನ ಅಚ್ಚರಿಯೆಂದ್ರೆ, ಕಾಡು ಪ್ರಾಣಿಗಳು ಮೃತದೇಹವನ್ನು ತಿಂದಿಲ್ಲ....
40 ದಿನದ ಕಂದಮ್ಮನನ್ನೇ ಕೊಲೆ ಮಾಡಲು ಯತ್ನಿಸಿದ್ಲಾ ತಾಯಿ, ಆಸ್ಪತ್ರೆ ಕಿಟಕಿಯಿಂದ ಎಸೆದ ಮಗು ಏನಾಯ್ತು..?
ಹುಬ್ಬಳ್ಳಿಯ ಕಿಮ್ಸ್ನಲ್ಲಿ ಮಗು ಕಳ್ಳತನ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಅಪಹರಣವಾಗಿದೆ ಅಂತಾ ಸುಳ್ಳು ಕತೆ ಕಟ್ಟಿದ್ದ ಚಾಲಾಕಿ ಹೃದಯಹೀನ ತಾಯಿಯನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಳ್ಳತನದ ಡ್ರಾಮಾ..? ಕಳೆದ ಸೋಮವಾರ ಕಿಮ್ಸ್ ನಲ್ಲಿ ಮಗುವಿನ ಕಳ್ಳತನವಾಗಿದೆ, ಯಾರೋ ಮಗುವನ್ನು ನನ್ನ ಕೈಯಿಂದ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ ಅಂತಾ ದೂರು ನೀಡಿದ್ದಳು ಮಗುವಿನ ತಾಯಿ. ಹೀಗಾಗಿ, ಪ್ರಕರಣ ಭಾರೀ ಸದ್ದು ಮಾಡಿತ್ತು. ದೂರು ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ವಿದ್ಯಾನಗರ ಠಾಣೆಯ ಪೊಲೀಸರಿಗೆ, ಮಗು ಕಾಣೆಯಾದ ಮರುದಿನವೇ ಅಂದ್ರೆ ಮಂಗಳವಾರ ಮುಂಜಾನೆ ಕಿಮ್ಸ್ ಹಿಂಬಾಗದಲ್ಲಿ ಕಂದಮ್ಮ ಪತ್ತೆಯಾಗಿತ್ತು. ಹೀಗಾಗಿ, ತನಿಖೆ ಚುರುಕುಗೊಳಿಸಿದ್ದ ಪೊಲೀಸರಿಗೆ ಅಚ್ಚರಿಯ ಸಂಗತಿ ಎದುರಾಗಿತ್ತು. ಹೆತ್ತಮ್ಮನದ್ದೇ ಹೇಯ ಕೃತ್ಯ..! ಇನ್ನು, ಹಾಗೆ ಕಿಮ್ಸ್ ಹಿಂಬಾಗ ಸಿಕ್ಕ ಮಗುವಿನ ಬಗ್ಗೆ ಅದು ಹೇಗೆ ಬಂತು, ಹಿಂದಿನ ಅಸಲೀಯತ್ತು ಏನು ಅಂತಾ ತನಿಖೆಗೆ ಇಳಿದ ಪೊಲೀಸರಿಗೆ, ಸಿಸಿಟಿವಿ ದೃಷ್ಯಗಳು ಕಿರಾತಕಿಯ ಅಸಲೀಯತ್ತು ಬಯಲು ಮಾಡಿತ್ತು. ಶೌಚಕ್ಕೆ ಹೋಗುವ ನೆಪದಲ್ಲಿ ತಾನೇ ಹೆತ್ತ...
25 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ, ಇಂದೂರ ಸೊಸೈಟಿಯ ಸಿಬ್ಬಂದಿ ವಸಂತ್ ವರೂರ್ ಗೆ ಬೀಳ್ಕೊಡುಗೆ..!
ಮುಂಡಗೋಡ: ತಾಲೂಕಿನ ಇಂದೂರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸಿ, ನಿವೃತ್ತಿಯಾಗಿರೋ ಸಿಬ್ಬಂದಿ ವಸಂತ ವರೂರವರಿಗೆ ಇಂದು ಬ್ಯಾಂಕಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಬೀಳ್ಕೊಡುವ ಕಾರ್ಯಕ್ರಮ ಹಮ್ಮಿಕೊಂಡಿದ್ರು. ವಸಂತ ವರೂರ ದಂಪತಿಗೆ ಶಾಲು ಹೊದಿಸಿ, ಹಾರ ಹಾಕಿ ಫಲ ಪುಷ್ಪ ನೀಡಿ ಸನ್ಮಾನಿಸಿದ ಆಡಳಿತ ಮಂಡಳಿ ಸದಸ್ಯರು, ನೆನಪಿನ ಕಾಣಿಕೆ ನೀಡಿ ವಸಂತ್ ವರೂರರವರ ಸೇವೆಯನ್ನು ಶ್ಲಾಘಿಸಿದ್ರು. ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ರು.
ಪಂಪಸೆಟ್ ಕೇಬಲ್ ಕಳ್ಳತನ: ಇಬ್ಬರು ಆರೋಪಿಗಳ ಬಂಧನ..!
ಬನವಾಸಿ: ಪಂಪಸೆಟ್ ಗೆ ಅಳವಡಿಸಿದ್ದ ವಿದ್ಯುತ್ ಕೇಬಲ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬನವಾಸಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಮತ್ತಿಹಳ್ಳಿಯ ಸೋಮಪ್ಪ ನೀಲಪ್ಪ ಒಡೆಯನಪುರ(28), ಬೆಟಕೆರೂರು ಗ್ರಾಮದ ಶಿವರಾಜ್ ಗುತ್ಯಪ್ಪ ಮಂತಿಕೊಪ್ಪ(22) ಎಂಬುವ ಆರೋಪಿಗಳನ್ನು ಬಂಧಿಸಲಾಗಿದೆ. ದಿನಾಂಕ: 16-06-2022 ರಂದು ಶಿರಸಿ ತಾಲೂಕ ಮೊಗವಳ್ಳಿ ಗ್ರಾಮದ ಸದಾನಂದ ಮಾದೇವ ಹಳ್ಳಕೊಪ್ಪ ಎಂಬುವವರ ಜಮೀನಿನ ಪಕ್ಕದಲ್ಲಿರುವ ವರದಾ ನದಿಯಿಂದ ಮೋಟಾರ ಮಶೀನ್ ಮೂಲಕ ನೀರನ್ನು ಉಪಯೋಗಿಸಿಕೊಳ್ಳಲು ಸುಮಾರು 250 ಅಡಿ ಉದ್ದದ ಮೋಟಾರ ಕೇಬಲ್ ಜೋಡಿಸಿದ್ದನ್ನು ಕಳ್ಳರು ಎಗರಿಸಿಕಿಂಡು ಹೋಗಿದ್ದರು. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಲಕೇರಿ ಬಳಿ ಬೈಕ್-ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಕಲಕೇರಿ ಬ್ರಿಡ್ಜ್ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕರಗಿನಕೊಪ್ಪ ತಾಂಡಾದ ಶಿವಾಜಿ ನಾಗಪ್ಪ ಲಮಾಣಿ(32) ಎಂಬುವ ಯುವಕನೇ ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಕಟ್ಟಿಗೆ ತುಂಬಿಕೊಂಡು ಹೊರಟಿದ್ದ ಟಿಪ್ಪರ್, ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಶಿವಾಜಿಗೆ ಗಂಭೀರ ಗಾಯವಾಗಿದ್ದು ಕಾಲು ಕಟ್ ಆಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಳಗಿಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ..!
ಮುಂಡಗೋಡ: ತಾಲೂಕಿನ ಮಳಗಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳಿಂದ ಗಿಡ ನೆಡುವ ಕಾರ್ಯಕ್ರಮದ ಮೂಲಕ ಕಾರ್ಯಕ್ರಮ ಪ್ರಾರಂಭವಾಗಿದೆ. ತಹಶೀಲ್ದಾರರಿಂದ ಕಂದಾಯ ಅದಾಲತ, ಪಿಂಚಣಿ ಅದಾಲತ ಹಾಗೂ ಹಲವು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಇದೆ. ಮಳಗಿ ಭಾಗದ ನೂರಾರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಅಹವಾಲುಗಳೊಂದಿಗೆ ವೃದ್ಧರು, ರೈತರು, ಯುವಕರು ಪಾಲ್ಗೊಂಡಿದ್ದಾರೆ.
ಟಿಬೇಟಿಯನ್ ಕಾಲೋನಿಯಲ್ಲಿ 2ನೇ ದಿನದ ಇಂಡೋ-ಟಿಬೇಟಿಯನ್ ವಿದ್ವಾಂಸರ ಸಮ್ಮೇಳನ ಜಾರಿ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ನಿನ್ನೆಯಿಂದ ಶುರುವಾಗಿರೋ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಇಂದು ಎರಡನೇ ದಿನದ ಪ್ರಾರಂಭ ಕಂಡಿದೆ. ಹೀಗಾಗಿ ಇಂದು ಬೆಳಿಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಟಿಬೇಟಿಯನ್ ಸಂಪ್ರದಾಯದಂತೆ ಜರುಗಿದೆ. ಸೈಕಾಲಜಿ ಮತ್ತು ಚಿಂತನಶೀಲ ಅಭ್ಯಾಸಗಳ ಕುರಿತು ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಅನೇಕ ಗಣ್ಯ ಭಾಷಣಕಾರರು ಮತ್ತು ವಿದ್ವಾಂಸರು ಭಾಗಿಯಾಗಲಿದ್ದಾರೆ. ಭಾರತದ 15 ರಾಜ್ಯಗಳಿಂದ ಬಂದಿರೋ ಬೌದ್ಧ ಬಿಕ್ಕುಗಳು, ಮಠಾಧೀಶರು, ಧಾರ್ಮಿಕ ಮುಖಂಡರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ವಿಶೇಷ ಭಾಷಣ, ಪ್ರವಚನ ಕೈಗೊಂಡಿದ್ದಾರೆ. ಅಂದಹಾಗೆ ಜೂನ್ 21 ರವರೆಗೆ ಈ ಸಮ್ಮೇಳನ ನಡೆಯಲಿದೆ.