ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಗರ್ಭಿಣಿಯೋರ್ವಳು ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ, 108 ಅಂಬ್ಯಲೆನ್ಸ್ ಗೆ ಕರೆ ಮಾಡಲಾಗಿತ್ತು. ತಕ್ಷಣವೇ ಸ್ಥಳಕ್ಕೆ ಬಂದ 108 ಸಿಬ್ಬಂದಿಗಳು, ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಮನೆಯ ಹತ್ತಿರ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಂಡಿದ್ದಾರೆ. ಹೆಣ್ಣು ಮಗುವಿಗೆ ಜನ್ಮನೀಡಿರೋ ಗೀತಾ ಪ್ರಭು ನಾಯಕ ಎಂಬ ಮಹಿಳೆ ಆರೋಗ್ಯವಾಗಿದ್ದಾರೆ. ಹೆರಿಗೆಯ ನಂತರ ಸೂಕ್ತ ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ಕರೆ ತಂದು ದಾಖಲಿಸಲಾಗಿದೆ. ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಬಳೂರು ಹಾಗೂ ಚಾಲಕ ಕೆಂಚೇಶ್ ಈ ವೇಳೆ ಇದ್ದರು.
Top Stories
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಹಾನಗಲ್ ಕ್ಷೇತ್ರದಲ್ಲಿ ಗೆಲುವು ನಮ್ಮದೇ; ಸಚಿವ ಹೆಬ್ಬಾರ್ ವಿಶ್ವಾಸದ ನುಡಿ..!
ಶಿರಸಿ: ಹಾನಗಲ್ ನಲ್ಲಿ ನೂರಕ್ಕೆ ನೂರರಷ್ಟು ವಿಜಯ ನಮ್ಮದೇ ಅಂತಾ ಸಚಿವ ಹಾಗೂ ಹಾನಗಲ್ ಕ್ಷೇತ್ರದ ಬಿಜೆಪಿ ಚುನಾವಣಾ ಉಸ್ತುವಾರಿ ಶಿವರಾಮ್ ಹೆಬ್ಬಾರ್ ವಿಶ್ವಾಸ ವ್ಯಕ್ತ ಪಡಿಸಿದ್ರು. ಶಿರಸಿಯಲ್ಲಿ ಮಾತನಾಡಿದ ಸಚಿವ ಹೆಬ್ಬಾರ್, ಹಲವಾರು ಜನ ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ, ತಾವೇ ಗೆದ್ದು ಬಿಡ್ತೀವಿ ಅಂತ ಮಾತನಾಡುತ್ತಿದ್ದಾರೆ, ಆದ್ರೆ, 25 ಸಾವಿರದಷ್ಟು ದೊಡ್ಡ ಅಂತರದಲ್ಲಿ ಹಾನಗಲ್ ನಲ್ಲಿ ಬಿಜೆಪಿ ಜಯ ಸಾಧಿಸಲಿದೆ ಅಂತಾ ವಿಶ್ವಾಸದ ನುಡಿ ಹೇಳಿದ್ರು. ಹಾನಗಲ್ ಹಾಗೂ ಸಿಂದಗಿ ಸೇರಿ ಎರಡೂ ಕ್ಷೇತ್ರಗಳಲ್ಲಿ ನಾವು ಜಯ ಸಾಧಿಸ್ತೀವಿ, ಅದ್ರಲ್ಲೂ ಹಾನಗಲ್ ನಲ್ಲಿ ಹೆಚ್ಚು ಅಂತರದಿಂದ ಜಯ ಸಾಧಿಸುತ್ತೇವೆ ಅಂತಾ ಹೆಬ್ಬಾರ್ ತಿಳಿಸಿದ್ರು.
ಹಾನಗಲ್ ಉಪ ಕದನದಲ್ಲಿ ಮುಂಡಗೋಡ ಬಿಜೆಪಿಗರ ಪ್ರಚಾರ ಭರಾಟೆ..!
ಹಾನಗಲ್ ನಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಅನ್ನೋ ಪ್ರತಿಷ್ಟೆಯ ಜಿದ್ದಿಗೆ ಬಿದ್ದಿದ್ದಾರೆ. ಹೀಗಾಗಿ, ಇಡೀ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರಕ್ಕೆ ಕಾರ್ಯಪಡೆ ರಚಿಸಿದ್ದಾರೆ. ಅದ್ರಂತೆ, ಪಕ್ಕದ ಮುಂಡಗೋಡ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹಾನಗಲ್ ಉಪಚುನಾವಣೆಯ ಅಖಾಡಕ್ಕೆ ಇಳಿದು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ತಾಲೂಕಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು, ಮುಖಂಡರು ಹಾನಗಲ್ ಕ್ಷೇತ್ರದ ಹಳ್ಳಿ, ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಮುಂಡಗೋಡ ಬಿಜೆಪಿಯ ಯುವ ಮೋರ್ಚಾ ತಾಲೂಕಾ ಘಟಕದ ಅಧ್ಯಕ್ಷ ಗಣೇಶ್ ಶಿರಾಲಿ, ಸಂಜೀವ ಪೀಸೆ, ಮಂಜುನಾಥ್ ಹಿರೇಮಠ, ಶಿವಯೋಗಿ ಕೂಡಲಮಠ ಸೇರಿದಂತೆ ಹಲವು ಯುವ ಮುಖಂಡರು ಪ್ರಚಾರ ಕಾರ್ಯದಲ್ಲಿ ತೊಡಗಿದ್ರು.
ಸಿಎಟ್ ಟೈಯರ್ ಜಾಹೀರಾತಿಗೆ ಸಂಸದ ಅನಂತಣ್ಣನ ಆಕ್ರೋಶ..! ಕಂಪನಿ ಮಾಲೀಕಗೆ ಪತ್ರ ಬರೆದ ಹಿಂದು ಹುಲಿ..!!
ಶಿರಸಿ: ಸಿಎಟ್ ಟೈಯರ್ ಜಾಹೀರಾತಿಗೆ ಸಂಸದ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಾಹೀರಾತು ಪ್ರಶ್ನಿಸಿ ಸಿಎಟ್ ಟೈಯರ್ ಕಂಪನಿ ಮಾಲೀಕ ಅನಂತ ವರಧನ್ ಗೆ ಪತ್ರ ಬರೆದಿದ್ದಾರೆ. ಸಿಎಟ್ ಜಾಹೀರಾತಿನಲ್ಲಿ ಹಿಂದುಗಳ ಆಚರಣೆಗಳನ್ನು ನಟ ಅಮೀರ್ ಖಾನ್ ಹೀಯಾಳಿಸಿರುವ ಕುರಿತು ವಿರೋಧ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಈ ಜಾಹಿರಾತಿನಲ್ಲಿ ಹಿಂದುಗಳ ಭಾವನೆಯನ್ನು ತುಳಿಯುವ ಕ್ಷುಲ್ಲಕ ಕುತಂತ್ರ ಎಂದು ಆರೋಪಿಸಿರುವ ಅನಂತಕುಮಾರ್ ಹೆಗಡೆ, ಆಮೀರ್ ಖಾನ್ ನಟಿಸಿರುವ ಜಾಹಿರಾತಿನಲ್ಲಿ ಹಿಂದುಗಳು ಪಟಾಕಿ ಸಿಡಿಸದಂತೆ ಮನವಿ ಮಾಡಿದ್ದಾರೆ ಆದರೆ, ಅಮೀರ್ ಖಾನ್ ಪ್ರತಿಪಾದಿಸುವ ಮುಸ್ಲಿಂ ಧರ್ಮದಲ್ಲಿ ರಸ್ತೆಗಳಲ್ಲಿ ನಮಾಜ್ ಮಾಡುವುದು, ಬೆಳಿಗ್ಗೆ ಧ್ವನಿವರ್ಧಕ ಬಳಸುವುದರ ಬಗ್ಗೆ ಏಕೆ ಮೌನ..? ಎಂದು ಪ್ರಶ್ನಿಸಿದ ಅನಂತಕುಮಾರ್ ಹೆಗಡೆ ತಾವು ಬರೆದಿರುವ ಪತ್ರವನ್ನು ಟ್ವೀಟ್ ಮಾಡಿದ್ದಾರೆ.
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, ಕಿಮ್ಸ್ ಗೆ ದಾಖಲು..!
ಮುಂಡಗೋಡ: ವಿಷ ಸೇವಿಸಿದ ಮಹಿಳೆಯೋರ್ವಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ಕೋಡಂಬಿಯಲ್ಲಿ ನಡೆದಿದೆ. ಪ್ರೇಮಾ ಕೃಷ್ಣಪ್ಪ ಕೊರಗರ್ ಎಂಬುವ ಗೃಹಿಣಿಯೇ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವಳಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಮುಂಡಗೋಡಿನ 108 ಅಂಬ್ಯುಲೆನ್ಸ್ ಸಿಬ್ಬಂದಿ, ತಾಲ್ಲೂಕು ಆಸ್ಪತ್ರೆ ಮುಂಡಗೋಡಿಂದ ಹುಬ್ಬಳ್ಳಿ ಕಿಮ್ಸ್ ಗೆ,108 ಅಂಬ್ಯುಲೆನ್ಸ್ ಮುಖಾಂತರ ದಾಖಲಿಸಿದ್ದಾರೆ. 108 ಅಂಬ್ಯುಲೆನ್ಸ್ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಸಿ. ಬಳೂರು, ಚಾಲಕ ಕೆಂಚೇಶ್ ಇ. ಎನ್ ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಸೂಕ್ತ ಪ್ರಾಥಮಿಕ ಚಿಕಿತ್ಸೆ ನೀಡಿದರು.. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಾಜಿ ಗ್ರಾಪಂ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ವಿಧಿವಶ, ಗ್ರಾಮಸ್ಥರ ಕಂಬನಿ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಮಾಜಿ ಗ್ರಾಮ ಪಂಚಾಯತ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದಾರೆ. ಮಂಗಳವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವ್ರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ರೈತರ ಬೋರವೆಲ್ ರಿಪೇರಿ ಮಾಡುತ್ತಿದ್ದ ಮರಿಯಪ್ಪ ಮೇತ್ರಿ ನಿಧನಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
72 ರ ಹರೆಯದಲ್ಲೂ ಬತ್ತದ ಕ್ರೀಡೋತ್ಸಾಹ, Y.R.ಗೇಟಿಯವರ್ ಸಾಧನೆಗೆ ಬೇಕಿದೆ ಇನ್ನಷ್ಟು ಪ್ರೋತ್ಸಾಹ..!
ಅವ್ರು 72 ವರ್ಷದ ಹಿರಿಯ ಕ್ರೀಡಾಪಟು.. ಇವತ್ತಿಗೂ ಆ ಹಿರಿಯ ಜೀವ ಓಟಕ್ಕೆ ನಿಂತರೆ ಸಾಕು ಯಾರಿಗೂ ಕಡಿಮೆಯಿಲ್ಲ ಅನ್ನೋ ಛಾಪು ಮೂಡಿಸ್ತಾರೆ. ಪ್ರಶಸ್ತಿಗಳನ್ನು ಬಾಚಿಕೊಳ್ತಾರೆ. ದಶಕಗಳಿಂದಲೂ ಕ್ರೀಡಾಕ್ಷೇತ್ರದಲ್ಲಿ ತಮ್ಮದೇ ಆದ ನಿರಂತರ ಸೇವೆ ಸಲ್ಲಿಸ್ತಿದಾರೆ. ಆದ್ರೆ, ಇವ್ರ ಸಾಧನೆಯ ಹೆಜ್ಜೆಗಳನ್ನು ಅದ್ಯಾಕೋ ಏನೋ ರಾಜ್ಯ ಸರ್ಕಾರ ಮಾತ್ರ ಇನ್ನೂ ಗುರುತಿಸಿಯೇ ಇಲ್ಲ. ಹೀಗಾಗಿ, ಈ ಹಿರಿಯ ಕ್ರೀಡಾಪಟುವಿಗೆ ಸದ್ಯ ರಾಜ್ಯೋತ್ಸವ ಪ್ರಶಸ್ತಿ ನೀಡಲೇ ಬೇಕು ಅಂತಾ ಉತ್ತರ ಕರ್ನಾಟಕದ ಅಸಂಖ್ಯ ಕ್ರೀಡಾಭಿಮಾನಿಗಳು ಅಭಿಯಾನ ಶುರು ಮಾಡಿದ್ದಾರೆ. ಹೌದು, ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿಯ, ಸದ್ಯ ಹುಬ್ಬಳ್ಳಿಯಲ್ಲಿ ವಾಸವಾಗಿರೋ, ವಾಯ್ ಆರ್ ಗೇಟಿಯವರ್, ಈ ಹೆಸ್ರು ಉತ್ತರ ಕರ್ನಾಟಕ ಭಾಗದ ಕ್ರೀಡಾಭಿಮಾನಿಗಳಿಗೆ ಅಚ್ಚು ಮೆಚ್ಚು. 72 ವರ್ಷ ವಯಸ್ಸಿನ ಈ ಇಳಿ ವಯಸ್ಸಿನಲ್ಲೂ ಗೇಟಿಯವರ್ ಅದ್ಭುತ ಕ್ರೀಡಾಪಟುವಾಗೇ ನಿರಂತರತೆ ಕಾಯ್ದುಕೊಂಡು, ಥೇಟು 18 ರ ನವಯುವಕನಂತೆ ಮೈದಾನಕ್ಕೀಳಿತಾರೆ. ತಮ್ಮ ಬದುಕಿನ ಅಷ್ಟೂ ಸಮಯವನ್ನು ರಾಜ್ಯ, ದೇಶವನ್ನು ಪ್ರತಿನಿಧಿಸಿ ನೂರಾರು...
ಅಯ್ಯೋ ಕರ್ಮವೇ, ಎಂಥಾ ಕಾಲ ಬಂತಪ್ಪಾ..? ಪೊಲೀಸರೇ ಇಲ್ಲಿ ಗಾಂಜಾ ವ್ಯಾಪಾರಿಗಳಂತೆ..!
ಹುಬ್ಬಳ್ಳಿ: ಇದು ಅಕ್ಷರಶಃ ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಾನೂನನ್ನು ರಕ್ಷಣೆ ಮಾಡಬೇಕಿದ್ದವರೆ ಇಲ್ಲಿ ಕಾನೂನನ್ನೇ ಮರೆತಂತೆ ಕಾಣುತ್ತೆ.. ಗಾಂಜಾ ಗಮ್ಮತ್ತು ಇದೀಗ ಎಲ್ಲೆಡೆ ಜೋರಾಗಿದ್ದು ಅದನ್ನ ತಡೆಹಿಡಿಯಬೇಕಾದವರೆ ಇದೀಗ ಅವರೇ ಮಾರಾಟ ಮಾಡಿ ತಗಲಾಕ್ಕೊಂಡಿದಾರೆ. ಸಸ್ಪೆಂಡ್ ಆಗಿ ಆಗಿದ್ದಾರೆ. ವಾಣಿಜ್ಯ ನಗರಿ, ಛೋಟಾ ಮುಂಬೈ ಅಂತೆಲ್ಲ ಕರೆಸಿಕೊಳ್ಳುವ ಹುಬ್ಬಳ್ಳಿ, ಇದೀಗ ಗಾಂಜಾ ನಗರಿಯಾಗುವತ್ತ ಸಾಗುತ್ತಿದೆ.. ವಿದ್ಯಾರ್ಥಿಗಳು, ಯುವಕರ ಗುಂಪು ಸದ್ದಿಲ್ಲದೆ ಗಾಂಜಾ ಗಮ್ಮತ್ತಿಗೆ ಒಳಗಾಗುತ್ತಿದ್ದಾರೆ.. ಇದಕ್ಕೆ ಕಡಿವಾಣ ಹಾಕಬೇಕು. ಯುವಕರನ್ನು ಸರಿದಾರಿಗೆ ತರಬೇಕಾದ ಖಾಕಿಯೇ ಇದೀಗ ಗಾಂಜಾ ಮಾರಾಟಕ್ಕೆ ಹೊರಟಿದೆ.. ಹೌದು ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ಸಿಬ್ಬಂದಿ ಸೇರಿದಂತೆ ಗೋಕುಲ ರಸ್ತೆಯ ಠಾಣೆಯ ಸಿಬ್ಬಂದಿ ಗಾಂಜಾ ಮಾರಾಟಕ್ಕೆ ಇಳಿದಿದ್ದು ಅವರೆಲ್ಲರನ್ನ ಸಸ್ಪೆಂಡ್ ಮಾಡುವ ಮೂಲಕ ಖಡಕ್ ಎಚ್ಚರಿಕೆಯನ್ನ ನಗರ ಪೊಲೀಸ್ ಕಮಿಷನರ್ ಕೊಟ್ಟಿದ್ದಾರೆ. ಗಾಂಜಾ ಮಾರಾಟ ಗಾರರನ್ನ ಬಂಧಿಸಿ ಅವರಿಂದಲೇ ಹಣ ಪಡೆದು ಬಿಟ್ಟ ಆರೋಪ ಕೇಳಿ ಬಂದ ಬೆನ್ನಲ್ಲೇ ಕಮಿಷನರ್ ರಿಂದ ಅಮಾನತ್ತು ಆದೇಶ ಹೊರಡಿಸಿದ್ದಾರೆ....
ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನವರಾತ್ರಿ ಸಂಭ್ರಮ, ಆಂಜನೇಯ ಸ್ವಾಮಿಗೆ ಹೋಮ, ಹವನ..!
ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತು ನವರಾತ್ರಿಯ ಸಂಭ್ರಮದಲ್ಲಿ, ಮಂತ್ರ ಘೋಷಗಳ ಸದ್ದು ರಿಂಗಣಿಸಿದೆ. ನವರಾತ್ರಿಯ ವಿಶೇಷ ಸಂದರ್ಭದಲ್ಲಿ, ಅದ್ರಲ್ಲೂ ಶನಿವಾರದ ದಿನ ಇಲ್ಲಿನ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ, ಹೋಮ, ಹವನ ನಡೆಸಲಾಗಿದೆ. ನೂತನವಾಗಿ ಅಧಿಕಾರ ವಹಿಸಿಕೊಂಡಿರೋ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು ಸೇರಿದಂತೆ ಠಾಣೆಯ ಎಲ್ಲಾ ಸಿಬ್ಬಂದಿಗಳು ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ರು.
ಮುಂಡಗೋಡ ತಾಲೂಕಿನಲ್ಲಿ ಎಲ್ಲೆಂದರಲ್ಲಿ ಮಟ್ಕಾ ದಂಧೆ..! “ಕ್ರಮ ಕೈಗೊಳ್ಳಿ ಸಾಹೇಬ್ರೇ” ಅಂತಾ ಎಸ್ಪಿಗೆ ದೂರು..!!
ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಮನೆ ಮಾತಾಗಿದೆ. ಹಳ್ಳಿ, ಹಳ್ಳಿಗಳಲ್ಲಿ ಹೆಜ್ಜೆಗೊಬ್ರು ಮಟ್ಕಾ ಬುಕ್ಕಿಗಳು ತಲೆ ಎತ್ತಿದ್ದಾರೆ, ಆದ್ರೆ ಇದನ್ನೇಲ್ಲ ಕಂಟ್ರೋಲ್ ಮಾಡಬೇಕಿದ್ದ ಪೊಲೀಸರು ಮಾತ್ರ ಏನೂ ಮಾಡದ ಸ್ಥಿತಿಯಲ್ಲಿದ್ದಾರೆ.. ಹಾಗಂತ, ನಾವು ಹೇಳ್ತಿಲ್ಲ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಂಡಗೋಡಿನ ಯುವ ಪಡೆ ಲಿಖಿತವಾಗಿ ದೂರು ನೀಡಿ, ಕ್ರಮಕ್ಕೆ ಆಗ್ರಹಿಸಿದೆ. ಯಸ್, ಮುಂಡಗೋಡ ಭಜರಂಗದಳದ ಕಾರ್ಯಕರ್ತ ಮಂಜುನಾಥ್ ಪವಾರ್ ಇಂತಹದ್ದೊಂದು ದೂರನ್ನು ಎಸ್ಪಿ ಸಾಹೇಬ್ರಿಗೆ ಸಲ್ಲಿಸಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಅನ್ನೋದು ಬಡ ಜನರ ಜೀವ ಹಿಂಡ್ತಿದೆ, ಯುವ ಜನರ ದಾರಿ ತಪ್ಪಿಸ್ತಿದೆ. ಅದೇಷ್ಟೋ ಬಡ ಹೆಣ್ಣುಮಕ್ಕಳು ತಮ್ಮ ಒಂದ್ಹೊತ್ತಿನ ತುತ್ತಿಗಾಗಿ ಪರದಾಡುತ್ತಿರುವಾಗ ಈ ಮಟ್ಕಾ, ಓಸಿ ದಂಧೆ ಮುಂಡಗೋಡ ತಾಲೂಕಿನ ಬಡವರ ರಕ್ತ ಹೀರುತ್ತಿದೆ ಅಂತಾ ಆರೋಪಿಸಿದ್ದಾರೆ. ಪೊಲೀಸರಿಗೆ ಕೈ ಕಟ್ಟಿದ್ಯಾರು..? ಇಲ್ಲಿ, ಗಮನಿಸಬೇಕಾದ ಅಂಶವೆಂದರೆ, ತಾಲೂಕಿನಾಧ್ಯಂತ ಮಟ್ಕಾ ದಂಧೆ ಅವ್ಯಾಹತವಾಗಿ ಚಾಲ್ತಿಯಲ್ಲಿದ್ದರೂ ಮುಂಡಗೋಡ ಪೊಲೀಸರು ಏನೂ ಮಾಡಲಾಗದ ಸ್ಥಿತಿಯಲ್ಲಿದ್ದಾರಂತೆ. ಹಾಗಂತ, ಮಂಜುನಾಥ್ ಪವಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ....