ಮುಂಡಗೋಡ: ತಾಲೂಕಿನ ಚೌಡಳ್ಳಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೈಲಾರಲಿಂಗೇಶ್ವರ ಕಾರಣೀಕ ನುಡಿ ಹೊರಬಿದ್ದಿದೆ. ವೃತಾಧಾರಿ ಜಗಧೀಶ್ ಮಡ್ಲಿ ಬಿಲ್ಲನ್ನೇರಿ, ಆಕಾಶದತ್ತ ಶೂನ್ಯ ದೃಷ್ಟಿಸುತ್ತ ಮತ್ತೆ ಕಾರಣೀಕ ನುಡಿದಿದ್ದಾರೆ. ತಾತ್ಪರ್ಯವೇನು..? “ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಪ್ರಸಕ್ತ ವರ್ಷದ ಚೌಡಳ್ಳಿ ಮೈಲಾರಲಿಂಗನ ಕಾರಣೀಕವಿದು. ಅಂದಹಾಗೆ, ಪ್ರಸಕ್ತ ವರ್ಷದ ಕಾರಣೀಕದ ತಾತ್ಪರ್ಯ ಬಹುತೇಕ ರೈತರ ಕೃಷಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ. ಮಳೆ, ಬೆಳೆಯ ಭವಿಷ್ಯ ನುಡಿಯಲಾಗಿದೆ. ಕಾರಣೀಕ ನುಡಿಯ ಪ್ರಕಾರ, ಈ ವರ್ಷ ಬರಪೂರ ಮಳೆ ಬಂದು, ಬೂಮಿ ತಾಯಿಯ ಉಡಿ ತುಂಬುವುದು ಅಂತಾ ಕಾರಣೀಕ ಹೊರಬಿದ್ದಿದ್ದು ಸಂತೃಪ್ತಿದಾಯಕ ಮಳೆ ಹಾಗೂ ಸಮೃದ್ಧ ಬೆಳೆಯ ಭವಿಷ್ಯ ನುಡಿಯಲಾಗಿದೆ.
Top Stories
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಗೆ ಗುದ್ದಿದ ಲಾರಿ, ಎರಡು ಟ್ರಾಕ್ಟರ್ ನುಜ್ಜು,ಗುಜ್ಜು..!
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಎರಡು ಟ್ರಾಕ್ಟರ್ಗಳಿಗೆ ಲಾರಿ ಡಿಕ್ಕಿಯಾಗಿ ಭಾರೀ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎರಡೂ ಟ್ರಾಕ್ಟರ್ಗಳು ಸಂಪೂರ್ಣ ಜಖಂ ಆಗಿವೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಹುಂಡೇಕಾರ್ ಭಟ್ಟಿ ಬಳಿಯ ರಾಜ್ಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಲಾರಿ ಹಾಗೂ ಟ್ರಾಕ್ಟರ್ ಡ್ರೈವರ್ಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಅಪಘಾತ, ಸ್ಕೂಟಿ ಸವಾರನಿಗೆ ಗಂಭೀರ ಗಾಯ.!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಮತ್ತು ಸ್ಕೂಟಿ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಗೊಂಡವನು ಮುಂಡಗೋಡ ತಾಲೂಕಿನ ಕಾತೂರು ಗ್ರಾಮದವನು ಅಂತಾ ತಿಳಿದು ಬಂದಿದೆ. ಕಲಘಟಗಿ ಕಡೆಯಿಂದ ಮುಂಡಗೋಡ ಕಡೆಗೆ ಹೊರಟಿದ್ದ ಟಾಟಾ ಎಸ್ ವಾಹನಕ್ಕೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೊರಟಿದ್ದ ಸ್ಕೂಟಿ ಡಿಕ್ಕಿಯಾಗಿದೆ. ಸದ್ಯ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿದ್ಯಾರ್ಥಿಗಳ ಮೇಲೆ ಬಿದ್ದ ಶಾಲಾ ಕೊಠಡಿ ಸ್ಲಾಬ್, ಐವರು ವಿದ್ಯಾರ್ಥಿಗಳಿಗೆ ಗಾಯ
ಅಂಕೋಲಾ: ನಿರ್ಮಲಾ ಕಾನ್ವೆಂಟ್ ಶಾಲೆಯ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ವೇಳೆ ಸ್ಲಾಬ್ ನ ಸಿಮೆಂಟ್ ಕುಸಿದು ಮಕ್ಕಳು ಗಾಯಗೊಂಡ ಘಟನೆ ಅಂಕೋಲಾದಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳನ್ನು ತಾಲೂಕಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ನಾಲ್ಕನೇ ತರಗತಿಯ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮಕ್ಕಳ ಊಟದ ಸಮಯದಲ್ಲಿ ಸ್ಲಾಬ್ ನಿಂದ ಸಿಮೆಂಟ್ ತುಂಡುಗಳು ಒಂದೇ ಸಮನೆ ಕುಸಿದು, ಅಡಿಯಲ್ಲಿ ಕುಳಿತಿದ್ದ ಮಕ್ಕಳ ಮೈಮೇಲೆ ಬಿದ್ದಿವೆ. ಹೀಗಾಗಿ, ನಾಲ್ಕನೇ ತರಗತಿಯ ಮಕ್ಕಳಿಗೆ ಗಾಯವಾಗಿದೆ. ಅಲ್ಲದೇ ಮಕ್ಕಳು ಗಾಬರಿಗೊಂಡಿವೆ. ಘಟನಾ ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!
ಹಾವೇರಿ: ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ(ರಿ) ಬೆಂಗಳೂರು, ಇದರ ಮೂರು ವರ್ಷದ ಅವಧಿಗಾಗಿ ಸಿದ್ದಪ್ಪ ಹಡಪದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದ ಯುವ ನಾಯಕರಾಗಿದ್ದಾರೆ. ಹೀಗಾಗಿ, ಹಾವೇರಿಯ ಗುರುಭವನದಲ್ಲಿ ಇಂದು ನಡೆದ ಚಿನಾವಣೆಯಲ್ಲಿ ಈ ನೂತನ ಅಧ್ಯಕ್ಷರು ಹಾಗೂ ಇನ್ನುಳಿದ ಪದಾಧಿಕಾರಿಗಳ ಆಯ್ಕೆಯಾಗಿದೆ. ಇನ್ನುಳಿದಂತೆ, ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ, ಸಂತೋಷ ಹಡಪದ. ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ಬಸರಕೋಡದ, ಚಿದಾನಂದ ಹಡಪದ. ಖಜಾಂಚಿಯಾಗಿ ಕೊಪ್ಪಳದ ಮಂಹಪ್ಪ ಹಡಪದ, ಕಾನೂನು ಸಲಹೆಗಾರರಾಗಿ ಹಾವೇರಿಯ ನಾಗರಾಜ ಕಾಯಕದ್ ಆಯ್ಕೆಯಾಗಿದ್ದಾರೆ. ಇವತ್ತು ಹಾವೇರಿಯ ಗುರುಭವನದಲ್ಲಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ತಂಗಡಗಿಯ ಅನ್ನದಾನಿ ಅಪ್ಪಣ್ಣ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ವೇಳೆ ರಾಜ್ಯದ ಎಲ್ಲಾ ಜಿಲ್ಲೆಗಳ ಸಮಾಜದ ಅಧ್ಯಕ್ಷರು ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ ಎತ್ತುವಳಿ ದಂಧೆಯಂತೆ. ಪ್ರಿಯ ಓದುಗರೇ, ನೀವಂದುಕೊಂಡಂತೆ ಅರಣ್ಯ ಉತ್ಪನ್ನಗಳ ತಪಾಸಣೆಗಾಗೇ ಇರೋ ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಯಾವ ಉತ್ಪನ್ನಗಳ ತಪಾಸಣೆಯೂ ನಡಿಯಲ್ಲ. ಇಲ್ಲಿನ ಸಿಬ್ಬಂದಿಗಳು ನಿತ್ಯವೂ ಚಾಚೂ ತಪ್ಪದೇ ಕೆಲಸ ನಿರ್ವಹಿಸ್ತಾರೆ ನಿಜ, ಆದ್ರೆ, ಇವ್ರ ಕೆಲಸವೇ ಬೇರೆ, ಇವರ ಕೆಲಸದ ಸ್ಟೈಲೇ ಬೇರೆ. ಯಾಕಂದ್ರೆ ಇಲ್ಲಿ ನಿತ್ಯವೂ ಗರಿ ಗರಿ ನೋಟುಗಳು ಕುಣಿದಾಡುತ್ತವೆ.. ಅದೇಂತದ್ದೇ ವಾಹನ ಬರಲಿ, ಆ ವಾಹನದಲ್ಲಿ...
ವಾಯುಭಾರ ಕುಸಿತ, ರಾಜ್ಯದಲ್ಲಿ ಮತ್ತೆ ಮಳೆಯ ಸಂಭವ..!
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರೋ ಭಾರೀ ವಾಯುಭಾರ ಕುಸಿತದ ಕಾರಣ, ಮತ್ತೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ವಾಯುಭಾರ ಕುಸಿತದ ಕಾರಣ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಾ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ 7ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಂಭವ ಇದೆ. ಮಾರ್ಚ್ 7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಮಾರ್ಚ್ 9ರವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ 8 ಮತ್ತು 9ರಂದು ರಾಜ್ಯ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..!
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..! ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಲೋಸಾರ್ ಸಂಭ್ರಮ ಜೋರಾಗಿದೆ. ಇಡೀ ಟಿಬೇಟಿಯನ್ ಕಾಲೋನಿಗಳಲ್ಲಿ ಈಗ ಲೋಸಾರ್ ಹಿನ್ನೆಲೆ ಬಗೆ ಬಗೆಯ ತಿಂಡಿ ತಿನಿಸುಗಳದ್ದೇ ಹಬ್ಬ. ಅದ್ರಲ್ಲೂ ಟಿಬೇಟಿಯನ್ ಬೌದ್ದ ಸನ್ಯಾಸಿಗಳು ಸಾಮೂಹಿಕವಾಗಿ ಮಾಡುವ ವಿವಿಧ ಖಾದ್ಯಗಳ ಘಮ ಘಮ ಇಡೀ ಕಾಲೋನಿಗಳಲ್ಲಿ ಪಸರಿಸಿದೆ. ಸಾಮೂಹಿಕವಾಗಿ ಬಗೆ ಬಗೆಯ ತಿನಿಸುಗಳನ್ನು ತಯಾರಿಸೋ ಸನ್ಯಾಸಿಗಳು ಸಂಭ್ರಮಿಸುತ್ತಾರೆ. ಬಗೆ ಬಗೆ ಖಾದ್ಯಗಳನ್ನು ತಯಾರಿಸಲು ಜೊತೆ ಜೊತೆಯಾಗೇ ಸಾಂಘಿಕವಾಗಿ ಸೇರುವ ಸನ್ಯಾಸಿಗಳು ಖುಶಿಯಿಂದಲೇ ಬಂದು ಭಾಗವಹಿಸೋದು ಅವರ ಸಹಬಾಳ್ವೆಗೆ ಸಾಕ್ಷಿಯಾಗಿದೆ.
ಟಿಬೇಟಿಯನ್ನರ ಲೋಸಾರ್ ಸಂಭ್ರಮದಲ್ಲಿ ಆಟಗಳ ಮೆರಗು.!
ಟಿಬೇಟಿಯನ್ನರ ಲೋಸಾರ್ ಸಂಭ್ರಮದಲ್ಲಿ ಆಟಗಳ ಮೆರಗು.! ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಈಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ಲೋಸಾರ್ ಹಬ್ಬದ ಸಂಭ್ರಮದಲ್ಲಿ ಕ್ಯಾಂಪ್ ನಂಬರ್ 3 ರ ಮೈದಾನದಲ್ಲಿ ವಿಶೇಷ ಸ್ಪರ್ಧೆಗಳನ್ನ ಆಯೋಜನೆ ಮಾಡಲಾಗಿತ್ತು. ಟಿಬೇಟಿಯನ್ನರ ತಂಡಗಳ ನಡುವೆ ವಿವಿಧ ಸ್ಪರ್ಧೆಗಳು ಏರ್ಪಟ್ಟವು.. ಇಂದು ಟಿಬೇಟಿಯನ್ ಮಹಿಳೆಯರಿಗೆಂದೇ ವಿಶೇಷ ಹಗ್ಗ ಜಗ್ಗಾಟದ ಸ್ಪರ್ದೆ ನಿಜಕ್ಕೂ ರೋಮಾಂಚಕ ಅನುಭವ ನೀಡಿತು.. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರೇಕ್ಷಕರು ಹಗ್ಗಜಗ್ಗಾಟದ ರಣರೋಚಕ ಸ್ಪರ್ಧೆಯನ್ನ ನೋಡಿ ಸಂಭ್ರಮಿಸಿದ್ರು. ಗೆದ್ದ ತಂಡಗಳಿಗೆ ಆಕರ್ಶಕ ಬಹುಮಾನ ವಿತರಿಸಲಾಯಿತು..
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..!
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..! ಮುಂಡಗೋಡ: ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾದ ಘಟನೆ ನಡೆದಿದೆ. ಆಕಸ್ಮಿವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಗದ್ದೆಗೂ ಹರಡುವ ಸಾಧ್ಯತೆ ಇದ್ದ ಕಾರಣಕ್ಕೆ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ರು. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದ್ದು ರೈತನ ಬದುಕು ಮೂರಾಬಟ್ಟೆಯಾಗಿದೆ ಹೀಗಾಗಿ ರೈತನಿಗೆ ಪರಿಹಾರ ನೀಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ.