ಹುನಗುಂದ ವಿಠ್ಠಲ ರುಕ್ಮಾಯಿ ಮಂದಿರದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ..!

ಹುನಗುಂದ ವಿಠ್ಠಲ ರುಕ್ಮಾಯಿ ಮಂದಿರದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ..!

ಮುಂಡಗೋಡ:ತಾಲೂಕಿನ ಹುನಗುಂದ ಗ್ರಾಮದ ವಿಠಲ ರುಕ್ಮಿಣಿ ಹರಿಮಂದಿರದಲ್ಲಿ ರವಿವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 29-8-2021 ರಂದು ರವಿವಾರ ದಿವಸ ಬೆಳಿಗ್ಗೆ 10-00 ಘಂಟೆಗೆ ವಿಠ್ಹಲ ರುಕ್ಮಿಣಿ ಹರಿ ಮಂದಿರದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀ ಕೃಷ್ಣನನ್ನು ತೊಟ್ಟಿಲು ಹಾಕುವ ಕಾರ್ಯಕ್ರಮ ಇರುತ್ತದೆ. ಮಧ್ಯಾನ ಪ್ರಸಾಧ ವ್ಯವಸ್ಥೆ ಇರುವದರಿಂದ ಎಲ್ಲಾ ಭಕ್ತಾದಿಗಳು ಭಾಗವಹಿಸಬೇಕೆಂದು ಪಾಂಡುರಂಗ ಸೇವಾ ಸಮಿತಿಯವರು ಮನವಿ ಮಾಡಿದ್ದಾರೆ.

ಆಲಳ್ಳಿಯಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಗಾಯ..!

ಆಲಳ್ಳಿಯಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಗಾಯ..!

ಮುಂಡಗೋಡ : ತಾಲೂಕಿನ ಆಲಳ್ಳಿ ಗ್ರಾಮದ ಕಾಡಿನಲ್ಲಿ ಅಣಬೆ ಕೀಳಲು ಹೋದ ವ್ಯಕ್ತಿಯ ಮೇಲೆ ಕರಡಿಯೊಂದು ದಾಳಿ ಮಾಡಿದ ಘಟನೆ ನಡೆದಿದೆ. ಇಂದು ನಸುಕಿನ ಜಾವ ಆಲಳ್ಳಿ ಗ್ರಾಮದ ಧರ್ಮಣ್ಣ ಖಂಡೋಜಿ ಹಾಗೂ ಸಂಗಡಿಗರು ಸೇರಿ ಆಲಳ್ಳಿ ಅರಣ್ಯದಲ್ಲಿ ಅಣಬೆ ಕೀಳಲು ಹೋದಾಗ ಧರ್ಮಣ್ಣನ ಮೇಲೆ ಕರಡಿ ದಾಳಿ ಮಾಡಿದೆ ಅಂತಾ ತಿಳಿದು ಬಂದಿದೆ. ಅರಣ್ಯದಂಚಿನಲ್ಲಿರುವ ಗೋವಿನಜೋಳ ಹೊಲಕ್ಕೆ ಹೋದ ಸಂದರ್ಭದಲ್ಲಿ ಮಂಗಗಳನ್ನು ಓಡಿಸಲು ಹೋದಾಗ ಕರಡಿ ದಾಳಿ ಮಾಡಿದೆ. ಕರಡಿಯ ಜೊತೆ ಎರಡು ಮರಿಗಳಿದ್ದವು. ಜೋರಾಗಿ ಕೂಗಿದ್ದರಿಂದ ಕರಡಿ ಕಾಡಿನಲ್ಲಿ ಓಡಿ ಹೋಗಿದೆ ಅಂತಾ ತಿಳಿದು ಬಂದಿದೆ.

ಎಲ್ಟಿ MLC ಆಗೋ ಕನಸಿನ ಹಿಂದೆ, ಇಂದೂರು ಕ್ಷೇತ್ರದ ನಂಟು..? ಒಳ ಮಸಲತ್ತುಗಳ ಏಟಿಗೆ, ಎಲ್ಲವೂ ಕಗ್ಗಂಟು..!!

ಎಲ್ಟಿ MLC ಆಗೋ ಕನಸಿನ ಹಿಂದೆ, ಇಂದೂರು ಕ್ಷೇತ್ರದ ನಂಟು..? ಒಳ ಮಸಲತ್ತುಗಳ ಏಟಿಗೆ, ಎಲ್ಲವೂ ಕಗ್ಗಂಟು..!!

ಮುಂಡಗೋಡ: ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಸದ್ಯ ಟಿಕೆಟ್ ಪೈಪೋಟಿ ತಾರ್ಕಿಕ ಅಂತ್ಯಕ್ಕೆ ಬಂದಾಯ್ತಾ..? ಇಂತಹದ್ದೊಂದು ಪ್ರಶ್ನೆ ಮತ್ತು ಅನುಮಾನ ಸದ್ಯದ ಕೆಲ ಬೆಳವಣಿಗೆಗಳನ್ನು ನೋಡಿದ್ರೆ ಎಂತವರಿಗೂ ಅನಿಸದೇ ಇರಲ್ಲ. ಯಾಕಂದ್ರೆ, ಮೊದ ಮೊದಲು ಮೂವರ ನಡುವೆ ಟಿಕೆಟ್ ಗುದ್ದಾಟ ಇತ್ತು. ಅದ್ರಲ್ಲಿ, ಕೆಂಜೋಡಿ ಗಲಬಿ, ಸಿದ್ದು ಹಡಪದ ಹಾಗೂ ರವಿಗೌಡ ಪಾಟೀಲರ ನಡುವೆ ಟಿಕೆಟ್ ಫೈಟ್ ನಡೆದಿತ್ತು, ಆ ನಂತರದಲ್ಲಿ ಬಸನೂ ನಡುವಿನಮನಿ ಅನ್ನೊ ಯುವಕ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ ಬಿಜೆಪಿಯ ಟಿಕೆಟ್ ಕಣದಲ್ಲಿ ಸೆಡ್ಡು ಹೊಡೆದು ಬಿಟ್ಟರು. ಅವಾಗಲೇ ಇಂದೂರು ಕ್ಷೇತ್ರದ ಕಣ ರೋಚಕತೆಯ ಘಟ್ಟಕ್ಕೆ ಬಂದು ನಿಂತಿತ್ತು. ಆದ್ರೆ, ಇವತ್ತಿನ ಮತ್ತೊಂದು ಆಕಾಂಕ್ಷಿಯ ಸೇರ್ಪಡೆ ನಿಜಕ್ಕೂ ಕ್ಷೇತ್ರದಲ್ಲಿ ಸಂಚಲನ ತರುವಂತಿದೆ. ನಿಜ, ಚಿಗಳ್ಳಿ ಜಿಪಂ ಕ್ಷೇತ್ರದಿಂದ ಖಾಯಂ ಅಭ್ಯರ್ಥಿಯಂತಿದ್ದ ಎಲ್ಟಿ ಪಾಟೀಲರಿಗೆ ಈ ಸಾರಿ ಆ ಕ್ಷೇತ್ರ ಕೈ ಬಿಡುವ ಅನಿವಾರ್ಯತೆ ಎದುರಾಗಿದೆ. ಅನಿವಾರ್ಯತೆ ಅನ್ನೋದಕ್ಕಿಂತ ಒಳ ಮಸಲತ್ತುಗಳ ಸುಳಿಯಲ್ಲಿ ಆ...

ಬಿಜೆಪಿ ಮಹಿಳಾ ಮೋರ್ಚಾದಿಂದ ಹಿರಿಯ ನಾಗರಿಕರಿಗೆ ರಕ್ಷಾಬಂಧನ..!

ಬಿಜೆಪಿ ಮಹಿಳಾ ಮೋರ್ಚಾದಿಂದ ಹಿರಿಯ ನಾಗರಿಕರಿಗೆ ರಕ್ಷಾಬಂಧನ..!

ಮುಂಡಗೋಡ: ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ನಿಮಿತ್ತ ಹಿರಿಯ ನಾಗರಿಕರಿಗೆ ರಾಖಿ ಕಟ್ಟುವ ಮೂಲಕ ಆಚರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷೆ ವೀಣಾ ಓಸಿಮಠ, ತಾಲೂಕಾಧ್ಯಕ್ಷೆ ಲೈಸಾ ಥಾಮಸ್, ಪ್ರದಾನ ಕಾರ್ಯದರ್ಶಿ ಅಂಜು ಪಾಯಣ್ಣವರ, ಉಪಾಧ್ಯಕ್ಷೆ ಸರಸ್ವತಿ ಕೊಂಡ್ಲಿ, ಮತ್ತು ಸವಿತಾ ಸಾನು ಸೇರಿ ಹಲವರು ಹಾಜರಿದ್ದರು.

ಮುಂಡಗೋಡಿನಲ್ಲಿ ನೂಲಿ ಚಂದಯ್ಯನವರ ಜಯಂತ್ಯೋತ್ಸವ..!

ಮುಂಡಗೋಡಿನಲ್ಲಿ ನೂಲಿ ಚಂದಯ್ಯನವರ ಜಯಂತ್ಯೋತ್ಸವ..!

ಮುಂಡಗೋಡ: ಪಟ್ಟಣದಲ್ಲಿ ಕೊರವ ಸಮಾಜದ ಶಿವಶರಣ ಶ್ರೀ ನೂಲಿ ಚಂದಯ್ಯ ನವರ ಜಯಂತೋತ್ಸವ ಕಾರ್ಯಕ್ರಮವನ್ನು ಬಂಕಾಪುರ ರಸ್ತೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಮಾಜದ ಗುರುಹಿರಿಯರ ಹಾಗೂ ಸಮಾಜದ ಬಂಧು ಮಿತ್ರ ಸಹೋದರರ ಆಶ್ರಯದಲ್ಲಿ ಶಿವ ಶರಣರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಮಾಡಲಾಯಿತು. ಕಾಯಕಯೋಗಿ ನೂಲಿಯ ಚಂದಯ್ಯನವರು ಜನಿಸಿದ ದಿನವಾದ ಇಂದು ರಕ್ಷಾ ಬಂಧನದ ಪ್ರಯುಕ್ತವಾಗಿ ಬಂಧುಗಳಲ್ಲಿ ಶ್ರೀರಕ್ಷೆ ನಮ್ಮೆಲ್ಲರಿಗೂ ರಕ್ಷಣೆ ಆಗಲೆಂದು ರಕ್ಷಾಬಂಧನವನ್ನು ಮಾಡಿಸಿ ಪ್ರಸಾದ ವಿತರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ವೇಳೆ ತಾಲೂಕಿನ ಸಮಾಜದ ಎಲ್ಲ ಗಣ್ಯ ವ್ಯಕ್ತಿಗಳು ಹಾಗೂ ಸಹೋದರ ಬಂಧುಮಿತ್ರರು ಉಪಸ್ಥಿತರಿದ್ದರು.

ನಾಗರಹಾವು ಸೆರೆಹಿಡಿದು ರಕ್ಷಿಸಿದ ಅರಣ್ಯ ಸಿಬ್ಬಂದಿ..!

ನಾಗರಹಾವು ಸೆರೆಹಿಡಿದು ರಕ್ಷಿಸಿದ ಅರಣ್ಯ ಸಿಬ್ಬಂದಿ..!

ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ಹತ್ತಿರ ವಿರುವ ರಾಮಣ್ಣ ಕುನ್ನೂರ ಅವರ ಹಿತ್ತಲಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಆತಂಕ ಹುಟ್ಟಿಸಿತ್ತು. ಹೀಗಾಗಿ, ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಸ್ಥಳೀಯರು ಕರೆ ಮಾಡಿದ್ರು. ನಂತರ ಬಂದ ಅರಣ್ಯ ಸಿಬ್ಬಂದಿ ನಾಗರಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿದ್ರು. ನಂತರ ಸೆರೆಹಿಡಿದ ಹಾವನ್ನು ಸುರಕ್ಷಿತವಾಗಿ ಕಾಡಿನಲ್ಲಿ ಬಿಡಲಾಯಿತು.. ಹೀಗಾಗಿ, ಅಲ್ಲಿನ ನಿವಾಸಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ನ್ಯಾಸರ್ಗಿ ಗ್ರಾಮದೇವಿಗೆ 108 ದಿನದ ಉಡಿತುಂಬುವ ಕಾರ್ಯಕ್ರಮ..!

ನ್ಯಾಸರ್ಗಿ ಗ್ರಾಮದೇವಿಗೆ 108 ದಿನದ ಉಡಿತುಂಬುವ ಕಾರ್ಯಕ್ರಮ..!

ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಗ್ರಾಮದ ಗ್ರಾಮದೇವಿ ದ್ಯಾಮವ್ವ ತಾಯಿಗೆ ಉಡಿತುಂಬುವ ಕಾರ್ಯಕ್ರಮ ನೆರವೇರಿಸಲಾಯಿತು. 108 ದಿನದ ಉಡಿತುಂಬುವ ಕಾರ್ಯಕ್ರಮವನ್ನು ಗ್ರಾಮಸ್ಥರು ಶೃದ್ದಾಪೂರ್ವಕವಾಗಿ ನೆರವೇರಿಸಿದ್ರು. ಈ ವೇಳೆ ದ್ಯಾಮವ್ವ ತಾಯಿಗೆ ಸಾಂಪ್ರದಾಯಿಕವಾಗಿ ಉಡಿ ತುಂಬಲಾಯಿತು. ವಿಶೇಷವಾಗಿ ಪೂಜೆ ನೆರವೇರಿಸಿ ಪ್ರಸಾದ ಹಂಚಲಾಯಿತು. ಈ ವೇಳೆ ಗ್ರಾಮದ ಮುಖಂಡರು, ಮುತ್ತೈದೆಯರು ಸೇರಿದಂತೆ ಹಲವರು ಭಾಗಿಯಾಗಿದ್ರು.

ಸಿದ್ದಪ್ಪ ಹಡಪದ್ ಗೆ ಟಿಕೆಟ್ ನೀಡುವಂತೆ ಒತ್ತಾಯ: ಸಚಿವ ಹೆಬ್ಬಾರ್ ರನ್ನು ಭೇಟಿ ಮಾಡಿದ ಹುನಗುಂದ ಮುಖಂಡರು..!

ಸಿದ್ದಪ್ಪ ಹಡಪದ್ ಗೆ ಟಿಕೆಟ್ ನೀಡುವಂತೆ ಒತ್ತಾಯ: ಸಚಿವ ಹೆಬ್ಬಾರ್ ರನ್ನು ಭೇಟಿ ಮಾಡಿದ ಹುನಗುಂದ ಮುಖಂಡರು..!

ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಮುಖಂಡರು ಹಾಗೂ ಗ್ರಾಮದ ನೂರಾರು ಜನ ಬಿಜೆಪಿ ಕಾರ್ಯಕರ್ತರು ಇಂದು ಯಲ್ಲಾಪುರಕ್ಕೆ ತೆರಳಿ, ಸಚಿವ ಶಿವರಾಮ್ ಹೆಬ್ಬಾರ್ ರವರನ್ನು ಭೇಟಿಯಾಗಿದ್ರು. ಮುಂಬರುವ ಜಿಲ್ಲಾಪಂಚಾಯತಿ ಚುನಾವಣೆಗೆ ಇಂದೂರು ಜಿ ಪಂ ಕ್ಷೇತ್ರದಿಂದ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ್ ರವರಿಗೇ ಅಭ್ಯರ್ಥಿಯನ್ನಾಗಿಸಿ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಸಿದ್ದಪ್ಪ ಹಡಪದ್ ರವರು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೇ ಕಳೆದ ಎರಡು ಬಾರಿ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋತಿದ್ದಾರೆ. ಇಂದೂರು ಕ್ಷೇತ್ರದಲ್ಲಿ ಸಿದ್ದಪ್ಪ ಹಡಪದ್ ಪರವಾಗಿ ಅನುಕಂಪ ಇದೆ. ಅದಕ್ಕಾಗಿ ಅವರಿಗೆ ಟಿಕೆಟ್ ನೀಡಬೇಕು ಅಂತಾ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಮುಂಡಗೋಡ ಬಿಜೆಪಿಯಲ್ಲೀಗ “ಜಂಪಿಂಗ್” ಪರ್ವ ಶುರು..! ಒಳಗೊಳಗೇ ನಡೀತಿದೆ ಭಾರೀ ಮಸಲತ್ತು..!!

ಮುಂಡಗೋಡ ಬಿಜೆಪಿಯಲ್ಲೀಗ “ಜಂಪಿಂಗ್” ಪರ್ವ ಶುರು..! ಒಳಗೊಳಗೇ ನಡೀತಿದೆ ಭಾರೀ ಮಸಲತ್ತು..!!

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಸ್ಪೋಟಕ ಬದಲಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆಗೋದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಕಳಾಹೀನವಾಗಿರೋ “ಕೈ” ಪಾಳಯಕ್ಕೆ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಘಟಾನುಘಟಿಗಳೇ ಹಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂತಹದ್ದೊಂದು ಬಾತ್ಮಿ ಕ್ಷೇತ್ರದ ಬಿಜೆಪಿ ಪಾಲಿಗೆ ಖಂಡಿತ ಪೂರಕವಾಗಿಲ್ಲ. ಬದಲಾಗಿ ಇಲ್ಲಿನ ಬಿಜೆಪಿಗೆ “ಅದೇನೋ ಕಾದಿದೆ” ಅನ್ನೋ ಸ್ಪಷ್ಟ ಸೂಚನೆಗಳು ಕಾಣಸಿಗ್ತಿವೆ. ಆಂತರಿಕ ಕುದಿ… ನಿಜ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ. ಇಡೀ ಕ್ಷೇತ್ರದಲ್ಲಿ ಆಂತರಿಕ ಬೆಗುದಿ ಅನ್ನೋದು ಬಹುಶಃ ಯಾರೂ ನಿರೀಕ್ಷಿಸದ ಮಟ್ಟಿಗೆ ಕುದಿಯುತ್ತಿದೆ. ಮತ್ತದೇ ಹಳಬರು, ಹೊಸಬರ ನಡುವೆ ಇನ್ನಿಲ್ಲದ ಪೀಕಲಾಟಗಳು ಚಾಲ್ತಿಯಲ್ಲಿವೆ. “ಸದ್ಯ ಬಿಜೆಪಿಯಲ್ಲಿ ಹಳಬರಿಗೆ ಅಷ್ಟಕ್ಕಷ್ಟೇ ರೀ, ನಮಗೇಲ್ಲ ಯಾರೂ ಮಾತಾಡಿಸಲ್ಲ” ಅನ್ನೋ ಕಾಮನ್ ಆಕ್ರೋಶಗಳು ಒಳಗೊಳಗೇ ಬೇಯುತ್ತಿವೆ. ಅದೇಲ್ಲ ಯಾವಾಗ ಸ್ಪೋಟಗೊಳ್ಳತ್ತೋ ಗೊತ್ತಿಲ್ಲ. ಆದ್ರೆ, ಸ್ಪೋಟಗೊಳಿಸಲು ಬೇಕಾದ ಎಲ್ಲಾ ತಯಾರಿ, ಆ ಅತೃಪ್ತರಿಂದ ವ್ಯವಸ್ಥಿತವಾಗೇ ಚಾಲ್ತಿ ಪಡೆದುಕೊಂಡಿದೆ. ಮುಂಡಗೋಡ ಬಿಜೆಪಿ ತಳಮಳ.. ಹಾಗೆ ನೋಡಿದ್ರೆ, ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ...

ಈ ಊರಲ್ಲಿ ಮೊಹರಂ ದೇವರಿಗೆ ಹನುಮಪ್ಪನ ಹೂವಿನ ಪ್ರಸಾಧ ಬೇಕೇ ಬೇಕು..!

ಈ ಊರಲ್ಲಿ ಮೊಹರಂ ದೇವರಿಗೆ ಹನುಮಪ್ಪನ ಹೂವಿನ ಪ್ರಸಾಧ ಬೇಕೇ ಬೇಕು..!

ಕೊಪ್ಪಳ: ಆ ಒಂದು ಗ್ರಾಮದ ಮೊಹರಂ ಹಬ್ಬಕ್ಕೆ ಇಡೀ ರಾಜ್ಯದ ಕೆಲ ಜಿಲ್ಲೆಗಳು ಸಾಕ್ಷಿಯಾಗುತ್ತವೆ. ಆ ಒಂದು ದೃಶ್ಯವನ್ನು ಕಣ್ಣತುಂಬಿಕೊಳ್ಳಲು ಗ್ರಾಮದ ಜನರು ಕಾತುರದಿಂದ ಕಾಯುತ್ತಾರೆ. ಆ ಗ್ರಾಮದ ಹನುಮಪ್ಪ ಹೂವು ಕೊಟ್ಟರೆ ಪೀರ್ ದೇವರು ಹೊತ್ತ ದೈವಭಕ್ತ ದರ್ಶನ ಪಡೆದು ಮುಂದೆ ಸಾಗುತ್ತಾರೆ. ನಂತರವೇ ಮೊಹರಂ ಹಬ್ಬ ಆಚರಿಸಲಾಗುತ್ತದೆ. ಹೌದು, ಹೀಗೆ ಪೀರ್ ದೇವರು ಹೊತ್ತ ಮುಸ್ಲಿಂ ದೈವ ಭಕ್ತನಿಗೆ, ಹೂವು ಕೊಟ್ಟು ಆಶೀರ್ವಾದ ಮಾಡುತ್ತಿರುವ ಹನುಮಪ್ಪ ದೇವರು. ದೇವಸ್ಥಾನದೊಳಗೆ ಬಂದು ಭಕ್ತಿಪೂರಕವಾಗಿ ಹನುಮನ ದರ್ಶನ ಪಡೆಯುತ್ತಿರುವ ಪೀರ್ ದೇವರು ಹೊತ್ತ ದೈಭಕ್ತ. ಭಕ್ತಿಗೆ ಮೆಚ್ಚಿ ಹೂವುಕೊಡುತ್ತಿರುವ ಹನುಮಪ್ಪ ದೇವರು. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕವಲೂರು ಗ್ರಾಮದಲ್ಲಿ. ಈ ಗ್ರಾಮದಲ್ಲಿ ಮುಸ್ಲಿಮರಿಗಿಂತ ಹಿಂದುಗಳು ಹೆಚ್ಚಾಗಿದ್ದಾರೆ. ಆದರೆ ಮೊಹರಂ ಹಬ್ಬಕ್ಕೆ ಈ ಕವಲೂರು ಗ್ರಾಮ ಭಾವೈಕ್ಯತೆಯನ್ನು ಇಡೀ ದೇಶ ತಿರುಗಿ ನೋಡುವಂತೆ ಮಾಡಿದೆ. ಯಾವುದೇ ಧರ್ಮ, ಜಾತಿ ಭೇದಭಾವ ಇಲ್ಲದೆ...

error: Content is protected !!