ಮಂಗಳೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ ಕೊಟ್ಟಾರು ಹತ್ಯೆ ಕೇಸ್ ನಲ್ಲಿ ಇಬ್ಬರು ಆತೋಪಿಗಳು ಅರೆಸ್ಟ್ ಆಗಿದ್ದಾರೆ. ಝಾಕೀರ್ ಮತ್ತು ಮಹ್ಮದ್ ಶಫೀಕ್ ಎಂಬುವ ಇಬ್ಬರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಅಂತಾ ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಹೇಳಿಕೆ ನೀಡಿದ್ದಾರೆ. ಬೆಳ್ಳಾರೆ ನಿವಾಸಿ ಶಫೀಕ್ ಹಾಗೂ ಸವಣೂರು ನಿವಾಸಿ ಝಾಕೀರ್ ನನ್ನು ಬಂಧಿಸಿರೋ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಬಂಧಿತ ಇಬ್ಬರೂ ಆರೋಪಿಗಳಿಗೆ PPI ಸಂಘಟನೆ ನಂಟು ಇದೆಯಾ ಅಂತಾ ವಿಚಾರಣೆ ನಡೆಸಲಾಗ್ತಿದೆ.
Top Stories
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಪ್ರವೀಣ್ ಹತ್ಯೆಗೆ ಖಂಡನೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಗರ “ರಾಜೀನಾಮೆ” ಬಾಣ..!
ವಿಜಯಪುರ: ಬಿಜೆಪಿ ಮುಖಂಡ ಪ್ರವೀಣ್ ಕೊಟ್ಟಾರು ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಖುದ್ದು ಬಿಜೆಪಿ ಪಕ್ಷದಲ್ಲಿ ತಮ್ಮದೇ ಪಕ್ಷದ ಆಡಳಿತದ ವಿರುದ್ಧ ಕಾರ್ಯಕರ್ತರು ಸಿಡಿದೇಳುತ್ತಿದ್ದಾರೆ. ಜೊತೆಗೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಬಿಜೆಪಿ ಪದಾಧಿಕಾರಿಗಳು ತಮ್ಮ ಒಡಲಾಳದ ಆಕ್ರೋಶ ಹೊರಹಾಕುತ್ತಿದ್ದಾರೆ. ಹಿಂಡು ಹಿಂಡು ರಾಜೀನಾಮೆ..! ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಜಿಲ್ಲಾ ಸಮಿತಿ ಹಾಗೂ ಒಂಭತ್ತು ಮಂಡಳಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಜಿಲ್ಲಾ ಸಾಮಾಜಿಕ ಜಾಲ ತಾಣ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠ ಜಿಲ್ಲಾ ಸಂಚಾಲಕ ಸಂದೀಪ ಪಾಟೀಲ್ ನೇತೃತ್ವದಲ್ಲಿ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ್ ಕೂಚಬಾಳಗೆ ರಾಜಿನಾಮೆ ಸಲ್ಲಿಸಿರೋ ಪದಾಧಿಕಾರಿಗಳು ಈ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ರಾಜೀನಾಮೆ ಪತ್ರದಲ್ಲೇನಿದೆ..? ಇನ್ನು ಬಿಜೆಪಿ ಪದಾಧಿಕಾರಿಗಳು ನೀಡಿರೋ ರಾಜೀನಾಮೆ ಪತ್ರದಲ್ಲಿ “ಬಿಜೆಪಿ ಇದೊಂದು ಕೇವಲ ರಾಜಕೀಯ ಪಕ್ಷವಲ್ಲ, ಈ ಪಕ್ಷಕ್ಕೆ ತನ್ನದೇ ಆದಂತಹ ಇತಿಹಾಸವಿದೆ, ಬಲಿಷ್ಟ ಸಿದ್ದಾಂತಕ್ಕಾಗಿ ಅನೇಕ ಕಾರ್ಯಕರ್ತರ ಬಲಿದಾನ ನಡೆದಿರುವಂತಹದ್ದು...
ನಂದಿಕಟ್ಟಾದಲ್ಲಿ ಪ್ರವೀಣ್ ಹತ್ಯೆಗೆ ಖಂಡನೆ, ಬಿಜೆಪಿ ಯುವ ಮೋರ್ಚಾದಿಂದ ಶೃದ್ಧಾಂಜಲಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕೊಟ್ಟಾರು ಸಾವಿಗೆ, ಬಿಜೆಪಿ ಯುವ ಮೋರ್ಚಾ ಘಟಕ ಕಂಬನಿ ಮಿಡಿದಿದೆ. ಹತ್ಯೆಯಾಗಿರೋ ಪ್ರವೀಣ್ ಕೊಟ್ಟಾರು ಭಾವಚಿತ್ರಕ್ಕೆ ಹೂ ಹಾರ ಹಾಕಿ ಶೃದ್ಧಾಂಜಲಿ ಸಲ್ಲಿಸಿದ ಯುವ ಕಾರ್ಯಕರ್ತರು, ಹಂತಕರಿಗೆ ಹೆಡೆಮುರಿ ಕಟ್ಟುವಂತೆ ಆಗ್ರಹಿಸಿದ್ದಾರೆ. ಈ ವೇಳೆ ನಂದಿಕಟ್ಟಾ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮುಂಡಗೋಡ ಬಿಜೆಪಿ ಯುವ ಮೋರ್ಚಾದಿಂದ ಪ್ರವೀಣ್ ನೆಟ್ಟಾರು ಗೆ ಶೃದ್ಧಾಂಜಲಿ..!
ಮುಂಡಗೋಡ: ಬಿಜೆಪಿ ಯುವ ಮುಖಂಡ, ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ಖಂಡನೆ ವ್ಯಕ್ತ ಪಡಿಸಿದೆ. ಪಟ್ಟಣದಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಹತ್ಯೆಯಾದ ಪ್ರವೀಣ್ ಕೊಟ್ಟಾರುಯವರಿಗೆ ಶೃದ್ಧಾಂಜಲಿ ಅರ್ಪಿಸಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆಗೆ ತೀವ್ರ ಖಂಡನೆ ವ್ಯಕ್ತ ಪಡಿಸಿರೋ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಯುವ ಮೋರ್ಚಾದ ಪದಾಧಿಕಾರಿಗಳು ಹಾಜರಿದ್ದರು.
ಬಿಜೆಪಿ ಸರ್ಕಾರದ ವಿರುದ್ಧ ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು, ಪ್ರವೀಣ್ ಹತ್ಯೆಗೆ ವ್ಯಾಪಕ ಆಕ್ರೋಶ.!
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಇಡೀ ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಖುದ್ದು ಬಿಜೆಪಿ ಕಾರ್ಯಕರ್ತರು, ಹಿಂದೂಪರ ಸಂಘಟನೆ ಕಾರ್ಯಕರ್ತರೇ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಾಧ್ಯಂತ ಹಲವು ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ, ಜವಾಬ್ದಾರಿಗಳಿಗೆ ಹಿಂಡು ಹಿಂಡಾಗಿ ರಾಜೀನಾಮೆ ನೀಡುತ್ತಿದ್ದಾರೆ. ಈ ನಡುವೆ ನಾಳೆಯೇ ಮಾನ್ಯ “ಬೊಮ್ಮಾಯಿ ಸರ್ಕಾರ” ಒಂದು ವರ್ಷ ಪೂರೈಸಿದ ಸಂಭ್ರಮೋತ್ಸವ ಆಚರಣೆಯಲ್ಲಿ ಬ್ಯುಸಿಯಾಗಿದೆ. ಇನ್ನು, ಸಾಮಾಜಿಕ ಜಾಲತಾಣದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಣಾನೇಂದ್ರ ವಿರುದ್ಧ ಇನ್ನಿಲ್ಲದಂತೆ ಆಕ್ರೋಶ ಹೊರ ಹಾಕ್ತಿದಾರೆ. ಬಹುಶಃ ಇತಿಹಾಸದಲ್ಲಿ ಆಡಳಿತಾರೂಢ ಪಕ್ಷವೊಂದರ ಕಾರ್ಯಕರ್ತರು ತಮ್ಮ ಪಕ್ಷದ ಆಡಳಿತದ ವಿರುದ್ಧವೇ ಇಷ್ಟೊಂದು ಆಕ್ರೋಶ ಹೊರಹಾಕಿದ್ದು ಇದೇ ಮೊದಲು ಇರಬೇಕು. ಹಾಗಿದ್ರೆ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹೇಗೆಲ್ಲ ಆಕ್ರೋಶ ವ್ಯಕ್ತವಾಗ್ತಿದೆ ಗೊತ್ತಾ..? ಹೇಗೆಲ್ಲ ಸರ್ಕಾರದ ಬಿಜೆಪಿ ಕಾರ್ಯಕರ್ತರು ಕಿಡಿ ಕಾರ್ತಿದಾರೆ ಗೊತ್ತಾ..? ಇಲ್ಲಿದೆ ಕೆಲವು ತುಣುಕುಗಳು..
ಉಗ್ನಿಕೇರಿಯಲ್ಲಿ ವಿಶಿಷ್ಟವಾಗಿ ಆಚರಣೆಗೊಂಡ ಕಾರ್ಗಿಲ್ ವಿಜಯ್ ದಿವಸ್..!
ಮುಂಡಗೋಡ: ತಾಲೂಕಿನ ಉಗ್ನಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಶ್ರೀರಾಮ ಸೇನೆ ಗ್ರಾಮ ಘಟಕದ ವತಿಯಿಂದ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ಇರುವ ನೀರಿನ ಟ್ಯಾಂಕ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇರುವ ನೀರಿನ ಟ್ಯಾಂಕನ್ನು ಸ್ವಚ್ಛಗೊಳಿಸಲಾಯಿತು. ಹಲವು ದಿನಗಳಿಂದ ಸ್ವಚ್ಚತೆ ಮಾಡದೇ ಇದ್ದಿದ್ದ ನೀರಿನ ಟ್ಯಾಂಕ್ ಗಳನ್ನು ಸ್ವಚ್ಚಗೊಳಿಸಿದ ಕಾರ್ಯಕರ್ತರು, ಟ್ಯಾಂಕ್ ಸುತ್ತಮುತ್ತಲಿನ ಗಿಡಗಂಟಿಗಳನ್ನು ಹಾಗೂ ಕೊಳಚೆಯನ್ನು ಸ್ವಚ್ಚಗೊಳಿಸಿದ್ರು. ಈ ಮೂಲಕ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಿದ್ರು.
ಮುಂಡಗೋಡಿನಲ್ಲಿ ಹಿರಿಯ ಸಾಧಕರಿಗೆ ಸಚಿವರಿಂದ ಸನ್ಮಾನ..!
ಮುಂಡಗೋಡ: ಪಟ್ಟಣದ ಎಲ್.ವಿ.ಕೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ” ವಿಶ್ವ ಜನಸಂಖ್ಯಾ ದಿನಾಚರಣೆ ಅಭಿಯಾನ ” ಕಾರ್ಯಕ್ರಮದಲ್ಲಿ ಹುನಗುಂದದ ಹಿರಿಯ ಶುಶ್ರೂಕಿ ಶಾಲಿನಿ ನಾಯ್ಕ್ ಸೇರಿದಂತೆ ಹಲವು ಸಾಧಕರಿಗೆ ಸನ್ಮಾನಿಸಲಾಯಿತು. ಸಚಿವ ಶಿವರಾಮ್ ಹೆಬ್ಬಾರ್, ಹಲವು ಹಿರಿಯ ಶುಶ್ರೂಕಿಯರು ಹಾಗೂ ಹಿರಿಯ ಆಶಾ ಕಾರ್ಯಕರ್ತೆಯರಿಗೆ ಶಾಲು ಹೊದಿಸಿ ಸನ್ಮಾನಿಸಿದ್ರು. ಇದ್ರ ಜೊತೆ ತಾಲೂಕಿನ ಹಿರಿಯ ಆಶಾ ಕಾರ್ಯಕರ್ತೆಯರನ್ನು ಸಚಿವರು ಸನ್ಮಾನಿಸಿದ್ರು. ಈ ವೇಳೆ ಹಲವು ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
ಸಂಘದ ಪ್ರಚಾರಕ ಸತೀಶ್ ಕಟ್ಟಿಯವರಿಗೆ ಶೃದ್ಧಾಂಜಲಿ ಕಾರ್ಯಕ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ನಲ್ಲಿ ಭಜರಂಗದಳ ಹಾಗೂ ಹಿಂದೂಪರ ಸಂಘಟನೆಗಳಿಂದ ದಿ. ಸತೀಶ್ ಕಟ್ಟಿವರಿಗೆ ಶೃದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಸೋಮವಾರ ನಿಧನರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕ ಸತೀಶ್ ಕಟ್ಟಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ತಾಲೂಕಾ ಭಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೇಣದ ಬತ್ತಿ ಹಚ್ಚಿ ಶೃದ್ದಾಂಜಲಿ ಅರ್ಪಿಸಲಾಯಿತು. ಈ ವೇಳೆ ಭಜರಂಗದಳದ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಸಂಘಪರಿವಾರದ ಕಾರ್ಯಕರ್ತರೊಂದಿಗೆ ಭಕ್ತಿಪೂರ್ವಕವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು
ಮುಂಡಗೋಡಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ಛತ್ರಪತಿ ಶಿವಾಜಿ ಮಂಡಳದ ವತಿಯಿಂದ ಗೌರವ ಸಮರ್ಪಣೆ ಹಾಗೂ ಶೃದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಭಕ್ತಿಯ ಘೋಷಣೆಗಳೊಂದಿಗೆ ನಿವೃತ್ತ ಯೋಧರಿಗೆ ಸನ್ಮಾನಿಸಲಾಯಿತು. ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಯೋಧರಾದ ಗಣಪತಿ ರವಳಪ್ಪನವರ್, ಯಲ್ಲಪ್ಪ ನಾಯ್ಕರ್, ಅಣ್ಣಪ್ಪ ಶಿಗ್ಗಾವಿ ಹಾಗೂ ಗಣಪತಿ ಮಟ್ಟಿಮನಿ ಎಂಬುವರಿಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಲಾಯಿತು. ಈ ವೇಳೆ ಹಲವು ಮುಖಂಡರು ಭಾಗಿಯಾಗಿದ್ರು.
ಹುನಗುಂದದ ಸಹಕಾರಿ ಧುರೀಣ ಸಿದ್ದಪ್ಪ ಬೀರವಳ್ಳಿ ವಿಧಿವಶ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಸಹಕಾರಿ ಧುರೀಣ, ವೀರೇಶ್ವರ ಸೇವಾ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿದ್ದಪ್ಪ ಸಣ್ಣಕಲ್ಲಪ್ಪ ಬೀರವಳ್ಳಿ(65) ಹೃದಯಾಘತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿರೋ ಸಿದ್ದಪ್ಪ ಬೀರವಳ್ಳಿ, ಮೃದುಸ್ವಭಾವದ, ಜನಾನುರಾಗಿ ವ್ಯಕ್ತಿತ್ವದವರಾಗಿದ್ದರು. ಈ ಹಿಂದೆ ವೀರೇಶ್ವರ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸಿದ್ದಪ್ಪ ಬೀರವಳ್ಳಿ, ಹಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿದ್ದರು. ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿರೋ, ಸಿದ್ದಪ್ಪ ಬೀರವಳ್ಳಿಯವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.