ಕಾರವಾರ ಯುವಕನಿಗೆ ನಿಫಾ ವೈರಸ್ ಇಲ್ಲ, ಪುಣೆಯಿಂದ ಬಂದ ವರದಿ ನೆಗೆಟಿವ್..! ನಿಟ್ಟುಸಿರು ಬಿಟ್ಟ ಜಿಲ್ಲಾಡಳಿತ..!!

ಕಾರವಾರ ಯುವಕನಿಗೆ ನಿಫಾ ವೈರಸ್ ಇಲ್ಲ, ಪುಣೆಯಿಂದ ಬಂದ ವರದಿ ನೆಗೆಟಿವ್..! ನಿಟ್ಟುಸಿರು ಬಿಟ್ಟ ಜಿಲ್ಲಾಡಳಿತ..!!

ಕಾರವಾರ: ನಿಫಾ ವೈರಸ್ ಆತಂಕದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾರವಾರದ ಯುವಕ ಸದ್ಯ ರಿಲೀಫ್ ಆಗಿದ್ದಾನೆ. ಯಾಕಂದ್ರೆ, ನಿಫಾ ಆತಂಕಿತ ಯುವಕನ ನಿಫಾ ಟೆಸ್ಟ್ ವರದಿ ನೆಗೆಟಿವ್ ಬಂದಿದೆ. ಇದ್ರಿಂದ ನಿಫಾ ಆತಂಕಕ್ಕಿಡಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಯುವಕ ನಿಟ್ಟುಸಿರು ಬಿಟ್ಟಿದ್ದಾರೆ. ಹಾಗಂತ, ದಕ್ಷಿಣಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ಕಿಶೋರ್ ಕುಮಾರ್ ಮಾಹಿತಿ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಇಲಾಖೆ, ಕಾರವಾರ ಮೂಲದ ಯುವಕನ ಬ್ಲಡ್, ಯುರಿನ್ ಮತ್ತು ಸ್ವಾಬ್ ಸ್ಯಾಂಪಲನ್ನು ಟೆಸ್ಟ್ ಗೆ ಕಳಿಸಿತ್ತು. ಗೋವಾದಲ್ಲಿ ನಿಫಾ ಟೆಸ್ಟ್ ಕಿಟ್ ತಯಾರಿಕಾ ಲ್ಯಾಬ್‌ನಲ್ಲಿ ಕೆಲಸ ಮಾಡ್ತಿದ್ದ ಯುವಕ, ರಜೆಯಲ್ಲಿ ಕಾರವಾರಕ್ಕೆ ಬಂದ ಮೇಲೆ ಆತನಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ, ಕಳೆದ ಶನಿವಾರ ಸಂಜೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಯುವಕ ದಾಖಲಾಗಿದ್ದ. ಈ ಕಾರಣಕ್ಕಾಗಿ, ನಿಫಾ ಆತಂಕದಿಂದ ಸ್ಯಾಂಪಲ್ ಟೆಸ್ಟ್ ಗೆ ಕಳುಹಿಸಿದ್ದ ಆರೋಗ್ಯ‌ ಇಲಾಖೆಗೆ, ಇಂದು ಪುಣೆಯ ಲ್ಯಾಬ್ ನಿಂದ ವರದಿ ಬಂದಿದ್ದಿ, ನೆಗೆಟಿವ್ ಅಂತಾ ದಾಖಲಾಗಿದೆ.

ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ನೇಣಿಗೆ ಶರಣು..!

ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ನೇಣಿಗೆ ಶರಣು..!

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಮಂಗಳವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ನಗರದ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಆಶಾ ಶೆಟ್ಟಿ (48) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದು ಬಂದಿದೆ. ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ಕಣ್ಣುಗಳನ್ನು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಶವವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಡಗೋಡಿಗೆ ಸಿಮಾನಿ ಎಸ್.ಎಸ್. ನೂತನ ಪೊಲೀಸ್ ಇನ್ಸ್ ಪೆಕ್ಟರ್..!

ಮುಂಡಗೋಡಿಗೆ ಸಿಮಾನಿ ಎಸ್.ಎಸ್. ನೂತನ ಪೊಲೀಸ್ ಇನ್ಸ್ ಪೆಕ್ಟರ್..!

ಮುಂಡಗೋಡಿಗೆ ನೂತನ ಪಿಐ ಆಗಿ, ಸಿಮಾನಿ ಎಸ್.ಎಸ್. ಬರಲಿದ್ದಾರೆ. ಸದ್ಯ ವಿಜಯಪುರದ DCRE (Directorate of Civil Rights Enforcement) ನಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಮಾನಿ ಎಸ್.ಎಸ್. ರವರನ್ನು ತಕ್ಷಣವೇ ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪಿಐ ಆಗಿದ್ದ, ಪ್ರಭುಗೌಡ ಕಿರೆದಳ್ಳಿ, ಡಿವೈಎಸ್ಪಿಯಾಗಿ ಬಡ್ತಿ ಹೊಂದಿ ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಯಾಗಿದ್ದರು.

ಕಾತೂರಿನಲ್ಲಿ ಸರಳ ಗಣೇಶೋತ್ಸವ, ಸಂತೋಷ ಶೇಟ್ ರಾಯ್ಕರ್ ದಂಪತಿಯಿಂದ ವಿಶೇಷ ಪೂಜೆ..!

ಕಾತೂರಿನಲ್ಲಿ ಸರಳ ಗಣೇಶೋತ್ಸವ, ಸಂತೋಷ ಶೇಟ್ ರಾಯ್ಕರ್ ದಂಪತಿಯಿಂದ ವಿಶೇಷ ಪೂಜೆ..!

ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಗಣೇಶ ಚತುರ್ಥಿಯ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಳಗಿಯ ಸಂತೋಷ ಶೇಟ್ ರಾಯ್ಕರ್ ದಂಪತಿಗಳು ಪೂಜಾ ಕಾರ್ಯಕ್ರಮ ನೆರವೇರಿಸಿದ್ರು. ಕಾತೂರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಟಾಪಿಸಲಾಗಿರೋ ಗಣೇಶ ಮೂರ್ತಿಗೆ ಸಂತೋಷ ರಾಯ್ಕರ್ ದಂಪತಿಗಳು ಇಂದು ವಿಶೇಷ ಪೂಜೆ ಸಲ್ಲಿಸಿದ್ರು. ಈ ವೇಳೆ ಗ್ರಾಮದ ಹಲವು ಮುಖಂಡರು ಭಾಗಿಯಾಗಿದ್ರು. ****************** ಜಾಹೀರಾತು

ಹುನಗುಂದದಲ್ಲಿ ಸರಳವಾಗಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ..!

ಹುನಗುಂದದಲ್ಲಿ ಸರಳವಾಗಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ..!

  ಮುಂಡಗೋಡ: ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಿತು. ಕೋವಿಡ್ ಮಾರ್ಗಸೂಚಿಯ ಅನ್ವಯ ಸರಳವಾಗಿ ಆಚರಿಸಲಾದ ಗಣೇಶೋತ್ಸವಕ್ಕೆ, ಸರಳವಾದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ ನಡೆಸಲಾಯಿತು. ಅದಕ್ಕೂ ಮೊದಲು, ಇಂದು ಗಣೇಶನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಜನಾ ಪದಗಳ ಮೂಲಕ ಗಣೇಶನಿಗೆ ಜಯ ಘೋಷಗಳನ್ನು ಕೂಗಿ ಭಕ್ತಿ ಸಮರ್ಪಿಸಲಾಯಿತು..

ಮುಂಡಗೋಡಿನಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿಯ ಜಯಂತಿ ಕಾರ್ಯಕ್ರಮ..!

ಮುಂಡಗೋಡಿನಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿಯ ಜಯಂತಿ ಕಾರ್ಯಕ್ರಮ..!

ಮುಂಡಗೋಡ: ಪಟ್ಟಣದಲ್ಲಿ ಇಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಪುರೋಹಿತರ ಬಳಗದಿಂದ ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಬಸವಣ್ಣ ದೇವಸ್ಥಾನದಲ್ಲಿ ಸೇರಿದ್ದ ಪುರೋಹಿತರು ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕಾರ್ಯಕರ್ತರು ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಣೆ ಮಾಡಿದ್ರು. ವೀರಭದ್ರೇಶ್ವರ ನಾಮಾವಳಿ ಸೇರಿದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳ ಕುರಿತು ಚರ್ಚಿಸಿದ್ರು..

20 ಕೆಜಿ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ-ನಿರ್ದೇಶಕ ಶ್ರೀನಿ

20 ಕೆಜಿ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ-ನಿರ್ದೇಶಕ ಶ್ರೀನಿ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ನಟಿ ಶುಭಾಪುಂಜಾ ಇದೀಗ ಲಂಬಾಣಿ ಹುಡುಗಿಯಾಗಿ ಮತ್ತೆ ತೆರೆ ಮೇಲೆ ರಂಜಿಸಲು ಸಿದ್ದಾರಾಗಿದ್ದಾರೆ. 2018ರಲ್ಲಿ ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟಿಸಿ ಪ್ರೇಕ್ಷಕರನ್ನು ಗಮನಸೆಳೆದ ಕೆಲವು ದಿನಗಳ ನಂತರ ಎನ್ನುವ ಸಿನಿಮಾದ ನಿರ್ದೇಶಕ ಶ್ರೀನಿ ಇದೀಗ ಹೊಸತೊಂದು ಭಿನ್ನ ಪ್ರಯತ್ನಕ್ಕೆ ಕೈಹಾಕಿದ್ದಾರೆ. ಶ್ರೀನಿ ಭರವಸೆಯ ಯುವ ನಿರ್ದೇಶಕ ಎನ್ನುವುದನ್ನು ಕೆಲವು ದಿನಗಳ ನಂತರ ಸಿನಿಮಾದಲ್ಲಿ ಸಾಬೀತು ಮಾಡಿದ್ದಾರೆ, ಕಣ್ಣಿಗೆ ಕಟ್ಟುವ ಕಥೆಯನ್ನು ಸೃಷ್ಟಿ ಮಾಡುವುದರಲ್ಲಿ ಶ್ರೀನಿ ಎತ್ತಿದ ಕೈ ಹೊಸ ಆಲೋಚನೆಯ ಜೊತೆಗೆ ಭಿನ್ನತೆಯನ್ನು ಪ್ರೇಕ್ಷಕರಿಗೆ ನೀಡಬೇಕು ಎನ್ನುವ ಹಂಬಲ ಹೊತ್ತ ಭರವಸೆಯ ನಿರ್ದೇಶಕನ ಹೊಸ ಸಿನಿಮಾ ಅಂಬುಜದ ಪಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರತಂಡ. ಶುಭಾಪುಂಜಾ ಅಂಬುಜ ಚಿತ್ರದಲ್ಲಿ ಒಂದು ವಿಶೇಷ ಗೆಟಪ್ ನಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಲ್ಕಿದ್ದಾರೆ ಹಾಗೂ ಇವರ ಜೊತೆಗೆ ಪದ್ಮಜಾರಾವ್, ಕಾಮಿಡಿಕಿಲಾಡಿ ಗೋವಿಂದೇಗೌಡ, ಕಾಮಿಡಿಕಿಲಾಡಿ ನಿರ್ದೇಶಕ ಶರಣಯ್ಯ, ಸಂದೇಶ್ ಶೆಟ್ಟಿ ಅಜ್ರಿ, ಮಜಾಭಾರತದ...

ಅಗಡಿಯಲ್ಲಿ ತಮ್ಮ ನೆಚ್ಚಿನ ಹೋರಿಗೆ ಹುಟ್ಟು ಹಬ್ಬ ಆಚರಿಸಿದ ಗ್ರಾಮಸ್ಥರು..!

ಅಗಡಿಯಲ್ಲಿ ತಮ್ಮ ನೆಚ್ಚಿನ ಹೋರಿಗೆ ಹುಟ್ಟು ಹಬ್ಬ ಆಚರಿಸಿದ ಗ್ರಾಮಸ್ಥರು..!

ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದಲ್ಲಿ ಗಾಡಾ ಓಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರೋ ಹೋರಿಗೆ ಹುಟ್ಟು ಹಬ್ಬ ಆಚರಿಸಿದ್ರು. ಗ್ರಾಮಸ್ಥರೇಲ್ಲರೂ ಸೇರಿ ರಾಜಾ ಎಂಬ ಹೆಸರಿನ ಹೋರಿಗೆ ವಿಶೇಷ ಅಲಂಕಾರ ಮಾಡಿ, ತಳೀರು ತೋರಣ ಕಟ್ಟಿ, ಕೇಕ್ ಕತ್ತರಿಸಿ ಹುಟ್ಟು ಹಬ್ಬದ ಸಂಭ್ರಮಾಚರಣೆ ಮಾಡಿದ್ರು. ಅಲ್ಲದೇ ಗ್ರಾಮಸ್ಥರು ತಮ್ಮ‌ನೆಚ್ಚಿನ ಹೋರಿಗೆ ವಿಶೇಷ ಸಿಹಿ ತಿನ್ನಿಸಿ ಸಂಭ್ರಮಿಸಿದ್ರು. ಮಹಿಳೆಯರು ಆರತಿ ಬೆಳಗಿದರು, ಜಯಘೋಷಗಳೊಂದಿಗೆ ಕುಣಿದು ಕುಪ್ಪಳಿಸಿದ್ರು.

ತೈಲ ಬೆಲೆ ಇಳಿಸುವಂತೆ ಮಹಿಳಾ ಕಾಂಗ್ರೆಸ್ ಪ್ರತಿಭಟನೆ, ಮನವಿ ಸಲ್ಲಿಕೆ..!

ತೈಲ ಬೆಲೆ ಇಳಿಸುವಂತೆ ಮಹಿಳಾ ಕಾಂಗ್ರೆಸ್ ಪ್ರತಿಭಟನೆ, ಮನವಿ ಸಲ್ಲಿಕೆ..!

ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಇಂದು, ಗ್ಯಾಸ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸುವಂತೆ ಮುಂಡಗೋಡ ತಾಲೂಕಾ ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್ ಮುಖಾಂತರ ಮಾನ್ಯ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಭಾರತಿ ಮಣ್ಣಪ್ಪ ಗೌಡ್ರು, ಮಾಜಿ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಶಾರದಾ ಬಾಯಿ ರಾಠೋಡ್, ಧರ್ಮರಾಜ ನಡಗೇರಿ, ಎಂ. ಎನ್. ದುಂಡಸಿ, ಅಲಿ ಹಸನ್ ಬೆಂಡಿಗೇರಿ, ಮಲ್ಲಿಕಾರ್ಜುನ್ ಗೌಳಿ, ಜೈನು ಬೆಂಡಿಗೇರಿ, ಅಲ್ಲಾಉದ್ದೀನ್ ಕಮಡೊಳ್ಳಿ,ಪ್ರಶಾಂತ್ ಭದ್ರಾಪುರ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ..!

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ..!

ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ನಿಧನರಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದು, ಜುಲೈ 18ರಂದು ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದಿದ್ದ ಆಸ್ಕರ್ ಫರ್ನಾಂಡೀಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ವೇಳೆ ಮೆದುಳುಗೆ ಏಟು ಬಿದ್ದರೋದು ಬೆಳಕಿಗೆ ಬಂದಿತ್ತು, ಹೀಗಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಪರ್ನಾಂಡೀಸ್ ವಿಧಿವಶರಾಗಿದ್ದಾರೆ. 1941ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್, 1980ರಲ್ಲಿ ಮೊದಲ ಬಾರಿ ಉಡುಪಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಸ್ಕರ್ ಫರ್ನಾಂಡೀಸ್, ಕೇಂದ್ರ ಸಾರಿಗೆ, ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸೋನಿಯಾ ಗಾಂಧಿ ಕುಟುಂಬದ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು. ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ರಾಷ್ಟ್ರ ಹಾಗೂ ರಾಜ್ಯದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

error: Content is protected !!