ಮುಂಡಗೋಡ: ಹಡಪದ ಅಪ್ಪಣ್ಣ ಸಮಾಜದ ಬಾಂಧವರು ನಾಳೆ ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರೋ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಹಡಪದ ಅಪ್ಪಣ್ಣ ಸಮಾಜ ಬಾಂಧವರು ಸಾಂಕೇತಿಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಹಡಪದ ಅಪ್ಪಣ್ಣ ಸಮಾಜದ ಶ್ರೀಗಳು ಹಾಗೂ ಸುಕ್ಷೇತ್ರ ತಂಗಡಿಗಿ ಮಠದ ಪರಮಪೂಜ್ಯ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ನೇತೃತ್ವದಲ್ಲಿ ನಾಳೆ ಸುವರ್ಣ ಗಾರ್ಡನ್ ಟೆಂಟ್ ನಂಬರ್ 6 ರಲ್ಲಿ ನಡೆಯುವ ಹಡಪದ ಸಮಾಜದ ಬೃಹತ್ ಹೋರಾಟಕ್ಕೆ ರಾಜ್ಯಾದ್ಯಂತ ಸಮಾಜಬಾಂಧವರು ಆಗಮಿಸುತ್ತಿದ್ದಾರೆ ಕಾರಣ ಮುಂಡಗೋಡ ತಾಲೂಕಿನ ಸಮಾಜದ ಬಾಂಧವರೂ ಭಾಗಿಯಾಗುವಂತೆ ಮುಖಂಡ ಸಿದ್ದು ಹಡಪದ ಮನವಿ ಮಾಡಿದ್ದಾರೆ.
Top Stories
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ಬೆಳಗಾವಿಯಲ್ಲಿ ನಾಳೆ ಹಡಪದ ಅಪ್ಪಣ್ಣ ಸಮಾಜದಿಂದ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ..!
ಹಾವು ಹಿಡಿಯಲು ಹೋದವನಿಗೆ ಕಚ್ಚಿದ ಹಾವು, ಪೋಸು ಕೊಡುತ್ತಿದ್ದವ ಆಸ್ಪತ್ರೆ ಪಾಲು..!
ಯಾವೊಂದೂ ಮುಂಜಾಗ್ರತಾ ಕ್ರಮವಿಲ್ಲದೇ ಹಾವು ಹಿಡಿಯಲು ಹೋದ ವ್ಯಕ್ತಿಗೆ ಹಾವು ಕಚ್ಚಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತಡಸದಲ್ಲಿ ಘಟನೆ ನಡೆದಿದ್ದು, ರಾಜು ಕೌದಿ ಎಂಬ ವ್ಯಕ್ತಿಯೇ ಹಾವು ಕಚ್ಚಿಸಿಕೊಂಡಿದ್ದಾನೆ. ತಡಸ ಗ್ರಾಮದ ಇಟ್ಟಿಗೆ ಭಟ್ಟಿಯೊಂದರಲ್ಲಿ ಅವಿತು ಕುಳಿತಿದ್ದ ನಾಗರಹಾವನ್ನು ಹಿಡಿಯಲು ಮುಂದಾಗಿದ್ದ ರಾಜೂ ಕೌದಿ, ಕೋಲಿನಿಂದ ಇಟ್ಟಿಗೆ ಅಡಿಯಲ್ಲಿದ್ದ ನಾಗರಹಾವನ್ನು ಗಾಸಿಗೊಳಿಸಿದ್ದ. ಕೋಲಿನಿಂದ ಹಾವಿನ ಹೆಡೆಗೆ ಗಟ್ಟಿಯಾಗಿ ಹಿಡಿದು, ಆ ನಂತರದಲ್ಲಿ ಕೈಯಿಂದ ಹಿಡಿದುಕೊಂಡಿದ್ದ. ಈ ವೇಳೆ ಹಾವು ಆತನ ಕೈಗೆ ಬಲವಾಗಿ ಕಚ್ಚಿದೆ. ಪರಿಣಾಮ ಸಧ್ಯ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಒಟ್ನಲ್ಲಿ, ಹಾವು ಹಿಡಿಯೊ ಸಾಹಸ ಮಾಡಲು ಹೋದ ವ್ಯಕ್ತಿ ಪೌರುಷ ತೋರಲು ಹೋಗಿ ಆಸ್ಪತ್ರೆ ಪಾಲಾಗಿದ್ದಾನೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಡಿ.22 ಕ್ಕೆ ಅರಣ್ಯ ಅತಿಕ್ರಮಣದಾರ ರಿಂದ “ಬೆಳಗಾವಿ ಚಲೋ”
ಮುಂಡಗೋಡ: ತಾಲೂಕಿನ ವಿವಿಧ ಅರಣ್ಯ ಅತಿಕ್ರಮಣ ಪ್ರದೇಶಗಳ ಅತಿಕ್ರಮಣದಾರರು, ಇದೇ ಡಿ. 22 ಕ್ಕೆ ‘ಬೆಳಗಾವಿ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೀಗಾಗಿ ಇಂದು ಕಾರ್ಯಕ್ರಮದ ಪೂರ್ವಭಾವಿ ಸಭೆ ಮುಂಡಗೋಡಿನಲ್ಲಿ ಜರುಗಿತು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟನಲ್ಲಿ ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿ ತೀರಸ್ಕಾರವಾಗಿರುವ ಅರಣ್ಯವಾಸಿಗಳನ್ನು ಹಂತ, ಹಂತವಾಗಿ ಒಕ್ಕಲೆಸಲಾಗುವದು ಎಂಬ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳು ಅತಂತ್ರವಾಗಿರುವ ಆತಂಕದಲ್ಲಿ ಇರುವುದರಿಂದ, ಅರಣ್ಯವಾಸಿಗಳ ಪರ ಸರಕಾರ ನಿಲುವು ಪ್ರಕಟಿಸಬೇಕೆಂದು ಆಗ್ರಹಿಸಿ ಡಿ. 22 ರಂದು ‘ಬೆಳಗಾವಿ ಚಲೋ’ ಏರ್ಪಡಿಸಲಾಗಿದೆ ಅಂತಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ್ ತಿಳಿಸಿದರು.
ನಂದಿಕಟ್ಟಾದಲ್ಲಿ ನಟ ಪುನೀತ್ ನೆನಪಲ್ಲಿ, ಮುಕ್ತ ಕಬಡ್ಡಿ ಪಂದ್ಯಾವಳಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಸವಿನೆನಪಿಗಾಗಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಪಂದ್ಯಾವಳಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು. ಇನ್ನು ಕಬಡ್ಡಿ ಪಂದ್ಯಾವಳಿಗೆ ದೂರ ದೂರದ ಕಬಡ್ಡಿ ತಂಡಗಳು ಬಂದು ಭಾಗವಹಿಸಿವೆ. ಪ್ರಥಮ ಬಹುಮಾನವಾಗಿ 20 ಸಾವಿರ ರೂ. ಎರಡನೇ ಬಹುಮಾನವಾಗಿ 15 ಸಾವಿರ ರೂಪಾಯಿ ಮೂರನೇ ಬಹುಮಾನವಾಗೊ 10 ಸಾವಿರ ರೂಪಾಯಿ, ನಾಲ್ಕನೇ ಬಹುಮಾನವಾಗಿ 5 ಸಾವಿರ ರೂಪಾಯಿ ಇಡಲಾಗಿದೆ. ಇನ್ನು ಪದ್ಯಾವಳಿಯಲ್ಲಿ ಯಾರು ಬಹುಮಾನ ಪಡೆಯುತ್ತಾರೋ ಕಾದು ನೋಡಬೇಕಿದೆ.
ಅತ್ತಿವೇರಿಯಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆ ತೆರವು..!
ಮುಂಡಗೋಡ: ತಾಲೂಕಿನ ಅತ್ತಿವೇರಿ ದರ್ಗಾ ಹತ್ತಿರ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆಯನ್ನು ಹುನಗುಂದ ಗ್ರಾಮ ಪಂಚಾಯತಿಯವರು ತೆರವುಗೊಳಿಸಿದ್ರು. ಅತ್ತಿವೇರಿ ಗ್ರಾಮದಲ್ಲಿ ಮನೆ ಹೊಂದಿದ್ದರೂ ಸರ್ಕಾರದ ಗಾಂವಠಾಣ ಜಾಗದಲ್ಲಿ ಮತ್ತೊಂದು ಮನೆ ನಿರ್ಮಿಸಿಕೊಂಡಿದ್ದ ವ್ಯಕ್ತಿಗೆ ಗ್ರಾಮ ಪಂಚಾಯತಿಯಿಂದ ನೋಟೀಸ್ ನೀಡಲಾಗಿತ್ತು. ನೋಟೀಸ್ ಮೂಲಕ ಮನೆ ತೆರವು ಮಾಡಲು ಸೂಚನೆ ನೀಡಲಾಗಿತ್ತು. ಆದ್ರೂ ಸಹಿತ ಮನೆ ತೆರವು ಮಾಡಿಕೊಳ್ಳದ ಕಾರಣ ಇಂದು ಪೊಲೀಸರ ಸಹಾಯದೊಂದಿಗೆ ಅಕ್ರಮ ಮನೆ ತೆರವು ಮಾಡಲಾಯಿತು. ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓ ಸೇರಿದಂತೆ ಸಿಬ್ಬಂದಿಗಳು ಅಕ್ರಮ ಮನೆ ತೆರವು ಕಾರ್ಯಾಚರಣೆ ಮಾಡಿದ್ರು.
ವಡಗಟ್ಟಾ ಬಳಿ ಬೈಕ್ ಗೆ ಅಡ್ಡ ಬಂದ ಕಾಡುಹಂದಿ, ಬೈಕ್ ಬಿದ್ದು, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ ತಾಲೂಕಿನ ವಡಗಟ್ಟಾ- ಹುನಗುಂದ ರಸ್ತೆಯಲ್ಲಿ ಬೈಕ್ ಗೆ ಕಾಡು ಹಂದಿ ಅಡ್ಡ ಬಂದ ಪರಿಣಾಮ ಬೈಕ್ ಬಿದ್ದು ಸವಾರನಿಗೆ ಗಾಯವಾದ ಘಟನೆ ನಡೆದಿದೆ. ಪ್ರಸಾದ್ ಕುಂಜು (51) ಎಂಬುವವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ನಿನ್ನೆ ರಾತ್ರಿ ಹುನಗುಂದ ಹಾಗೂ ವಡಗಟ್ಟಾ ರಸ್ತೆಯಲ್ಲಿ ಬೈಕ್ ಮೇಲೆ ಬರುತ್ತಿರುವಾಗ ಘಟನೆ ನಡೆದಿದೆ. ಬೈಕ್ ಮೇಲಿಂದ ಬಿದ್ದು ಗಾಯಗೊಂಡು ಒದ್ದಾಡುತ್ತಿದ್ದ ವೇಳೆ ಗ್ರಾಮಸ್ಥರು ರಕ್ಷಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದೂರಿನಲ್ಲಿ ಪರಿಷತ್ ಗೆಲುವಿಗೆ ಬಿಜೆಪಿಗರ ಸಂಭ್ರಮ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲೂ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಪಡೆಯುತ್ತಿದ್ದಂತೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ರು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ರು. ಬಿಜೆಪಿ ಪರವಾಗಿ ಘೋಷಣೆ ಕೂಗಿದ್ರು..ಈ ವೇಳೆ ಗ್ರಾಮದ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು.
ಹುನಗುಂದ ಗ್ರಾಮದಲ್ಲೂ ಬಿಜೆಪಿಗರ ಸಂಭ್ರಮ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲೂ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಪಡೆಯುತ್ತಿದ್ದಂತೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ರು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ರು. ಬಿಜೆಪಿ ಪರವಾಗಿ ಘೋಷಣೆ ಕೂಗಿದ್ರು..ಈ ವೇಳೆ ಗ್ರಾಮದ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು..
ಅರಶಿಣಗೇರಿ ಕಾಲುವೆ ಕಾಮಗಾರಿ ಕಳಪೆ, ದುರಸ್ಥಿ ಮಾಡುವಂತೆ ರೈತರ ಆಗ್ರಹ..!
ಮುಂಡಗೋಡ: ತಾಲೂಕಿನ ಅರಶಿಣಗೇರಿ ಕೆರೆಯ ಕಾಲುವೆಯನ್ನು ಆದಷ್ಟು ಬೇಗ ದುರಸ್ತಿ ಮಾಡಿಸಿ ರೈತರಿಗೆ ಬೇಸಿಗೆ ಬೆಳೆ ಬೆಳೆಯಲು ಅನುವು ಮಾಡಿಕೊಡಬೇಕಾಗಿ ರೈತರು ಮನವಿ ಮಾಡ್ತಿದಾರೆ. ಅರಶಿಣಗೇರಿ, ಅಗಡಿ ಹುನಗುಂದ ಗ್ರಾಮಗಳ ರೈತರ ಜೀವನಾಡಿಯಾಗಿರೋ ಅರಶಿಣಗೇರಿ ಕೆರೆಯ ಕಾಲುವೆಯನ್ನು ಈಗಾಗಲೇ ದುರಸ್ಥಿ ಕಾರ್ಯ ಮಾಡಿರೋ ಚಿಕ್ಕ ನೀರಾವರಿ ಇಲಾಖೆ ಅರ್ದಮರ್ದ ಕೆಲಸ ಮಾಡಿ ಹೋಗಿದ್ದಾರೆ ಅಲ್ಲದೇ ಹಾಗೆ ಮಾಡಿರೋ ಕೆಲಸವನ್ನೂ ಕಳಪೆಯಾಗಿ ಮಾಡಿದ್ದಾರೆ. ಹೀಗಾಗಿ ಈ ಕೂಡಲೇ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಕಾಲುವೆಯ ದುರಸ್ತಿ ಮಾಡಿ, ಕಾಮಗಾರಿ ನಡೆಸಬೇಕು ಅಂತಾ ರೈತರು ಆಗ್ರಹಿಸಿದ್ದಾರೆ..
ನಂದಿಕಟ್ಟಾದಲ್ಲಿ ಎಗ್ ರೈಸ್ ಅಂಗಡಿ ಕಳ್ಳತನಕ್ಕೆ ವಿಫಲ ಯತ್ನ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ಎಗ್ ರೈಸ್ ಅಂಗಡಿ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ನಂದಿಕಟ್ಟಾ ಗ್ರಾಮದ ಮಂಜುನಾಥ್ ಎಂಬ ಯುವಕ ಕೆಲವರ್ಷಗಳಿಂದ ಎಗ್ ರೈಸ್ ಶಾಪ್ ನಡೆಸುತ್ತಿದ್ದ ನಿನ್ನೆ ಮಧ್ಯರಾತ್ರಿ ಕಳ್ಳರು ಕಳ್ಳತನ ಮಾಡಲು ಅಂಗಡಿಯ ಹಿಂದಿನ ಗೋಡೆಯನ್ನು ಒಡೆಯಲು ಯತ್ನಿಸಿದ್ದಾರೆ. ಆದ್ರೆ, ಅಂಗಡಿಯಲ್ಲಿ ಯಾವುದೇ ವಸ್ತುಗಳು ಕಳ್ಳತನವಾಗಿಲ್ಲ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಟ್ರ್ಯಾಕ್ಟರ್ ಟೇಪ್ ರಿಕಾರ್ಡರ್ ತೆಗೆದಿರೋ ಕಳ್ಳರು ಅದನ್ನ ಅಲ್ಲೇ ಬಿಟ್ಟು ಹೋಗಿದ್ದಾರೆ. ಅಂಗಡಿ ಹಿಂದುಗಡೆ ಗೋಡೆಗೆ ಕನ್ನ ಹಾಕಿರೋ ಕಳ್ಳರು ರಂದ್ರ ಕೊರೆಯಲು ಟ್ರ್ಯಾಕ್ಟರಿನ ಕಬ್ಬಿಣದ ರಾಡ್ ಉಪಯೋಗಿಸಿದ್ದಾರೆ ಅನ್ನೋದು ಮೇಲ್ನೊಟಕ್ಕೆ ಕಾಣುತ್ತಿದೆ.