ವಿಜಯಪುರ: ಇದು ಅಕ್ಷರಶಃ ಆನಲೈನ್ ನಲ್ಲೇ ಹುಟ್ಟಿ ಆನಲೈನ್ ನಲ್ಲೇ ಮುಗಿದು ಹೋದ ಮೋಸದ ಪ್ರೀತಿ. ಜೊತೆ ಉಂಡೂ ಹೋಗಿ ಕೊಂಡೂ ಹೋದ ಮಹಾಮೋಸದ ಸ್ಟೋರಿ. ಅಂದಹಾಗೆ ಇದು ನಡೆದದ್ದು ವಿಜಯಪುರ ಜಿಲ್ಲೆಯಲ್ಲಿ. ಅವಳು ಆತನಿಗೆ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ ಮಾಯಾಂಗನೆ..! ಮೋಸ ಮಾಡಲೇಂದೇ ಫೇಸ್ ಬುಕ್ ಆರಿಸಿಕೊಂಡಿದ್ದ ಐನಾತಿ ಮಹಿಳೆ. ಡಿಪಿ ಲುಕ್ಕು..! ಅಸಲು, ಅವಳ ಫೇಸ್ ಬುಕ್ ಪೊಟೋ ನೋಡಿದ್ರೆ ಎಂತವರಿಗೂ ಒಂದುಕ್ಷಣ ದಿಗಿಲಾಗತ್ತೆ. ಅಂತಹ ಮಾದಕತೆಯ ನೋಟ. ಹೀಗಾಗಿ, ಆ ಅಕೌಂಟಿನಿಂದ...
Top Stories
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
Tag: crime news
ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು
ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ...
ಯಲ್ಲಾಪುರದ ಅರಬೈಲು ಘಾಟಿನಲ್ಲಿ ನಡೆದಿದ್ದ ಭಯಾನಕ “ರಾಬರಿ” ಹಿಂದೆ ಕೇರಳದ ಕ್ರಿಮಿಗಳು, ಅಷ್ಟಕ್ಕೂ, ಸವಾಲಾಗಿದ್ದ ಕೇಸು ಬೇಧಿಸಿದ್ದು ಹೇಗೆ ಗೊತ್ತಾ..?
ಯಲ್ಲಾಪುರ ಪೊಲೀಸರು ಕಡೆಗೂ ತಮ್ಮ ಜಿದ್ದು ಸಾಧಿಸಿದ್ದಾರೆ. ಅರಬೈಲು ಘಟ್ಟದಲ್ಲಿ ಕೋಟಿ ಕೋಟಿ ಹಣ ರಾಬರಿ ಮಾಡಿದ್ದ ಖತರ್ನಾಕ ನಟೋರಿಯಸ್ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ. ಇದಕ್ಕಾಗಿ ಬರೋಬ್ಬರಿ ಒಂದು ತಿಂಗಳು,ಇಪ್ಪತ್ತು ದಿನಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ನಡೆದಿದ್ಧ ಭಯಾನಕ ರಾಬರಿಯನ್ನು ಅಂತದ್ದೇ ಸಿನಿಮಿಯ ರೀತಿಯಲ್ಲೇ ಟ್ರೇಸ್ ಮಾಡಿದ್ದಾರೆ ನಮ್ಮ ಪೊಲೀಸ್ರು.. ಅಂದಹಾಗೆ, ದರೋಡೆ ನಡೆದ ದಿನವೇ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಹಕೀಕತ್ತು ತಮ್ಮಮುಂದೆ ಇಟ್ಟಿತ್ತು. ಅವತ್ತು ಅಕ್ಟೋಬರ್ 1… ನಿಮಗೆ...
ಇಂದೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಇಂದೂರು ಗ್ರಾಮದ ಹೊರವಲಯದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಹ್ಮದ್ ಸಾಬ್ ಲಾಲ್ ಸಾಬ್ ಮುಲ್ಲಾನವರ್ (47) ಎಂಬುವವನೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಿಬೇಟಿಯನ್ ಕಾಲೋನಿ ಬಳಿ ಮರಕ್ಕೆ ಡಿಕ್ಕಿ ಹೊಡೆದ KTM ಬೈಕ್, ಮುಂಡಗೋಡಿನ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ ಸಮೀಪದ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಬಳಿ ಬೈಕ್ ಅಪಘಾತವಾಗಿದೆ. ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮುಂಡಗೋಡ ಪಟ್ಟಣದ ಸಂಜು ನರಸಪ್ಪ ಕಳಲಕೊಂಡ(32) ಮೃತ ಬೈಕ್ ಸವಾರ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಿಯಂತ್ರಣ ತಪ್ಪಿದ ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಕೂಡ ನುಜ್ಜುಗುಜ್ಜಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು...
ಪಾಳಾ ಭಾಗದಲ್ಲಿ ಹೆಜ್ಜೆ ಹೆಜ್ಜೆಗೂ ಮಟ ಮಟ ಮಟ್ಕಾ, ಅಸಲು, ದಂಧೆ ನಡಿತಿರೋದು ಯಾರ ನೆರಳಲ್ಲಿ ಗೊತ್ತಾ..? “ಮಟ್ಕಾಲಿ”ಯ ಅಡ್ಡಕಸುಬಿಗೆ ಶ್ರೀ ರಕ್ಷೆ ಯಾರದ್ದು..?
ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ. ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮತ್ತೆ ಮಟ್ಕಾ ಅನ್ನೊ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹೀರುತ್ತಿದೆ. ಅಂದಹಾಗೆ, ಇದು ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಬಂದಿರೋ ಎನ್.ವಿಷ್ಣುವರ್ಧನ್ ಸಾಹೇಬ್ರಿಗೆ “ಪಬ್ಲಿಕ್ ಫಸ್ಟ್” ನೀಡುತ್ತಿರೋ “ಫಸ್ಟ್ ಇನ್ಪರ್ಮೇಶನ್ ರಿಪೋರ್ಟ್” ಅಂದ್ರೆ ಮೊದಲ FIR ಮಟ್ಕಾ ಅಡ್ಡೆಗಳು..! ಎಸ್ಪಿ ಸಾಹೇಬ್ರೆ, ಈಗ್ಗೆ ಒಂದು ವರ್ಷವಾಯ್ತು. ಬಹುತೇಕ ಮುಂಡಗೋಡ...
ನಂದಿಗಟ್ಟಾದ ಗ್ರಾಮ ಪಂಚಾಯತಿ ಪಕ್ಕದಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!
ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಪಕ್ಕದಲ್ಲೇ ಬಾಡಿಗೆ ರೂಂ ಹಿಂದಿನ ಕಿಡಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ಮೂಲದ ಪ್ರಭಾಕರ್ (45)ಎಂಬ ವ್ಯಕ್ತಿಯೇ ನೇಣಿಗೆ ಶರಣಾದವನು ಎನ್ನಲಾಗಿದೆ. ಈತ ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿಗಟ್ಟಾ ಗ್ರಾಮದಲ್ಲಿ ಬಂದು ಅಂಗಡಿ ನಡೆಸುತ್ತಿದ್ದ. ಆದ್ರೆ ಅದೇನು ಕಾರಣವೋ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ....
ನಂದಿಗಟ್ಟಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಹೆಣವಾಗಿ ಪತ್ತೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ದುರ್ನಾತ ಬೀರುತ್ತಿದೆ. ಅಂದಹಾಗೆ, ಕಳೆದ ಎರಡು ದಿನಗಳಿಂದ ನಂದಿಗಟ್ಟಾ ಗ್ರಾಮದ ಮಾಬುಸಾಬ್ ಅತ್ತಿವೇರಿ (47) ಎಂಬುವ ವ್ಯಕ್ತಿ ನಾಪತ್ತೆಯಾಗಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಬುಸಾಬ್ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದ, ಆದ್ರೆ ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಏಕಾಏಕಿ ನಾಪತ್ತೆಯಾದವನು ಈಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಮುಂಡಗೋಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ರವಾನಿಸಿದ್ದು ಶವ ಹೊರ ತೆಗೆಯುವ ಕಾರ್ಯ...
ಬೈಕ್ ಗೆ ಗುದ್ದಿದ ಕಾರ್ 10 ಅಡಿ ದೂರ ಹಾರಿ ಬಿದ್ದ ಮಹಿಳೆ, ಸಿಸಿಟಿವಿಯಲ್ಲಿ ಭಯಾನಕ ದೃಷ್ಯ
ಧಾರವಾಡ: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ, ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುವಾಗ ಭಯಾನಕ ದುರ್ಘಟನೆ ನಡೆದಿದೆ. ರಸ್ತೆ ದಾಟಿ ಹೋಗುತ್ತಿದ್ದ ಬೈಕ್ ಗೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬ್ಲಾಕ್ ಕಲರ್ ಕಾರ್ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಮೇಲಿದ್ದ ಮಹಿಳೆ 10 ಅಡಿ ಹಾರಿ ಹೋಗಿ ಬಿದ್ದಿದ್ದಾಳೆ. ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಬಳಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ, ನೆಲ್ಲಿಹರವಿ ತಾಂಡಾದ ದಂಪತಿಗೆ ಗಾಯ
ಮುಂಡಗೋಡ ತಾಲೂಕಿನ ಇಂದೂರು ಬಳಿಯ ಷರೀಫ ದೇವಸ್ಥಾನದ ಬಳಿ ಅಪಘಾತವಾಗಿದೆ. ಟ್ರಾಕ್ಟರ್ ಹಾಗೂ ಬೈಕ್‌ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ದಂಪತಿಗೆ ಗಾಯವಾಗಿದೆ. ಕಲಘಟಗಿ ತಾಲೂಕಿನ ನೆಲ್ಲಿಹರವಿ ತಾಂಡಾದ ಆಕಾಶ್ ವಾಸಪ್ಪ ಲಮಾಣಿ (22) ಸಂಗೀತಾ ಆಕಾಶ್ ಲಮಾಣಿ (20) ಗಾಯಗೊಂಡವರಾಗಿದ್ದಾರೆ. ಇಂದೂರು ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ಮುಂಡಗೋಡ ಕಡೆಯಿಂದ ಬರುತ್ತಿದ್ದ ಟ್ರಾಕ್ಟರ್ ನಡುವೆ ಡಿಕ್ಕಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.