ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ದುರ್ನಾತ ಬೀರುತ್ತಿದೆ. ಅಂದಹಾಗೆ, ಕಳೆದ ಎರಡು ದಿನಗಳಿಂದ ನಂದಿಗಟ್ಟಾ ಗ್ರಾಮದ ಮಾಬುಸಾಬ್ ಅತ್ತಿವೇರಿ (47) ಎಂಬುವ ವ್ಯಕ್ತಿ ನಾಪತ್ತೆಯಾಗಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಬುಸಾಬ್ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದ, ಆದ್ರೆ ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಏಕಾಏಕಿ ನಾಪತ್ತೆಯಾದವನು ಈಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಮುಂಡಗೋಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ರವಾನಿಸಿದ್ದು ಶವ ಹೊರ ತೆಗೆಯುವ ಕಾರ್ಯ...
Top Stories
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
Tag: Police news
ಬೈಕ್ ಗೆ ಗುದ್ದಿದ ಕಾರ್ 10 ಅಡಿ ದೂರ ಹಾರಿ ಬಿದ್ದ ಮಹಿಳೆ, ಸಿಸಿಟಿವಿಯಲ್ಲಿ ಭಯಾನಕ ದೃಷ್ಯ
ಧಾರವಾಡ: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ, ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುವಾಗ ಭಯಾನಕ ದುರ್ಘಟನೆ ನಡೆದಿದೆ. ರಸ್ತೆ ದಾಟಿ ಹೋಗುತ್ತಿದ್ದ ಬೈಕ್ ಗೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬ್ಲಾಕ್ ಕಲರ್ ಕಾರ್ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಮೇಲಿದ್ದ ಮಹಿಳೆ 10 ಅಡಿ ಹಾರಿ ಹೋಗಿ ಬಿದ್ದಿದ್ದಾಳೆ. ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉತ್ತರ ಕನ್ನಡ ಎಸ್ಪಿ ಸುಮನಾ ಪೆನ್ನೇಕರ್ ಎತ್ತಂಗಡಿ, ವರ್ಗಾವಣೆಗೊಳಿಸಿ ಸರ್ಕಾರ ಆದೇಶ..!
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಎತ್ತಂಗಡಿಯಾಗಿದ್ದಾರೆ. ಒಂದೇ ಒಂದು ವರ್ಷದ ಅವದಿಯಲ್ಲೇ ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿ ಮೇಡಂ ವರ್ಗಾವಣೆ ಮಾಡಿದ್ದು ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂದಹಾಗೆ, ಪಬ್ಲಿಕ್ ಫಸ್ಟ್ ನ್ಯೂಸ್ ಕಳೆದ ಒಂದು ತಿಂಗಳ ಹಿಂದೆಯೇ ನುಡಿದಿದ್ದ ಭವಿಷ್ಯ ನಿಜವಾಗಿದ್ದು, ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ವರ್ಗಾವಣೆಗೊಂಡಿದ್ದಾರೆ. ಡಾ ಸುಮನಾ ಪೆನ್ನೇಕರ್ ಮೇಡಂ ಜಿಲ್ಲೆಗೆ ಎಂಟ್ರಿಯಾಗಿ ಬಂದಾಗಿನಿಂದ ಇಲ್ಲಿನ ಅಕ್ರಮಿಗಳು ಬಾಲ ಬಿಚ್ಚಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅದೇಷ್ಟೋ...
ಕಾತೂರು ನಂದಿಪುರದ ಬಳಿ ಭೀಕರ ಅಪಘಾತ, ಎರಡು ಬೈಕಿಗೆ ಕಾರು ಡಿಕ್ಕಿ ಮೂವರಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಭೀಕರ ಅಪಘಾತವಾಗಿದೆ. ರಾಂಗ್ ಸೈಡ್ ಬಂದ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೂ ಸೇರಿ ಮೂವರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಕಾರು, ಶಿರಸಿ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕಿನಲ್ಲಿದ್ದ ಹಾವೇರಿ ಮೂಲದ ಓರ್ವ ಮಹಿಳೆ ಹಾಗೂ ಪುರುಷನಿಗೆ ಗಂಭೀರ ಗಾಯವಾಗಿದೆ. ಹಾಗೆಯೇ ಮತ್ತೊಂದು ಬೈಕಿನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ. ಎಣ್ಣೆ ಏಟಲ್ಲಿ..?...
ಇಂದಿರಾನಗರದ ಬಳಿ ಬೈಕ್ ಅಪಘಾತ ಓರ್ವನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಇಂದಿರಾನಗರದ ಬಳಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಓರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡಿನಿಂದ ಕಲಘಟಗಿ ಕಡೆಗೆ ಹೋಗುತ್ತಿರುವಾಗ, ಇಂದಿರಾ ನಗರ ಹತ್ತಿರ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಬೈಕ್ ನಲ್ಲಿದ್ದ ಕುಂದಗೋಳ ತಾಲೂಕಿನ ಸುರೇಶ ಶಿವಪ್ಪ ಗುಡಿಯಾಳ್(33) ಎಂಬುವವರಿಗೆ ತಲೆಗೆ ಹಾಗೂ ಮುಖಕ್ಕೆ ಗಾಯವಾಗಿದೆ. ಅದೃಷ್ಟವಶಾತ್ ಮತ್ತೊರ್ವನಿಗೆ ಯಾವುದೇ ಗಾಯವಾಗದೆ ಸುರಕ್ಷಿತವಾಗಿದ್ದಾನೆ. ಇನ್ನು ಅಪಘಾತ ನಡೆದ ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿ...
ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?
ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನವಾಗಿದೆ. ಮನೆಯ ಹೆಂಚು ತೆರೆದು ಮನೇಲಿದ್ದ ಹಣ ಎಗರಿಸಿಕೊಂಡು ಹೋಗಿದ್ದಾರೆ. ರೇಣುಕಾ ಬಸವರಾಜ್ ಕುಕ್ಕಾಟಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಅಂದಹಾಗೆ, ದೀಪಾವಳಿ ಹಬ್ಬದ ಸಂಭ್ರಮ ಮುಗಿಸಿಕೊಂಡು ಹೊಳೆಯಮ್ಮ ದೇವಿಯ ದರ್ಶನಕ್ಕಾಗಿ ಹೋಗಿದ್ದರು ರೇಣುಕಾ. ಹೀಗಾಗಿ, ಕಳೆದ ಎರಡು ದಿನದಿಂದಲೂ ಮನೆಲಿ ಯಾರೂ ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಇಂದು ಮದ್ಯಾಹ್ನವೇ ಹೆಂಚು ತೆಗೆದು ಮನೆಯೊಳಗೆ ಹೊಕ್ಕಿದ್ದಾರೆ. ನಂತರ ಮನೆಯೊಳಗೆ ಟ್ರೆಂಕ್ ನಲ್ಲಿ...
ವಿಷಕಾರಿ ಹಾವು ಕಚ್ಚಿ ಗರ್ಭಿಣಿ ಮಹಿಳೆ ದಾರುಣ ಸಾವು..!
ವಿಜಯಪುರ: ವಿಷಕಾರಿ ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು ಕಂಡ ದಾರುಣ ಘಟನೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಹಾವು ಕಚ್ಚಿ ಸಾವು ಕಂಡಿದ್ದಾಳೆ. ಹಾವು ಕಚ್ಚಿದ ವೇಳೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾಳೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ...
ರಾತ್ರಿಯ ಭಯಂಕರ ಮಳೆಗೆ ಯುವತಿ ಬಲಿ, ಮನೆಯಲ್ಲಿದ್ದ ಯುವತಿಗೆ ಸಿಡಿಲು ಬಡಿದು ಸಾವು..!
ಕಲಘಟಗಿ: ತಾಲೂಕಿನ ಅಸ್ತಕಟ್ಟಿ ಗ್ರಾಮದಲ್ಲಿ ಸಿಡಿಲಿಗೆ ಓರ್ವ ಯುವತಿ ಬಲಿಯಾಗಿದ್ದಾಳೆ. ಕು.ಲಕ್ಷ್ಮೀ ವಿರೂಪಾಕ್ಷಪ್ಪ ಪಾಟೀಲ್(18) ಸಿಡಿಲಿಗೆ ಬಲಿಯಾದವಳಾಗಿದ್ದಾಳೆ. ನಿನ್ನೆ ರಾತ್ರಿ ಸುರಿದ ಗುಡುಗು, ಸಿಡಿಲು, ಮಿಂಚು ಸಹಿತ ಭಾರೀ ಮಳೆಗೆ ಯುವತಿ ಬಲಿಯಾಗಿದ್ದು ದುರಂತ ಸಾವು ಕಂಡಿದ್ದಾಳೆ. ಅಂದಹಾಗೆ, ಮೃತ ಲಕ್ಷ್ಮೀ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತಿದ್ದಳು. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಮನೆಯ ಒಳಗೆ ಇದ್ದಾಗ, ಏಕಾಏಕಿ ಲಕ್ಷ್ಮೀಯ ಎದೆಗೆ ಸಿಡಿಲು ಬಡಿದಿದೆ ಎನ್ನಲಾಗಿದೆ. ಹೀಗಾಗಿ, ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾಳೆ. ಕಳೆದ ಮೂರು...
ಬೈಕ್ ಅಪಘಾತ ಕರ್ತವ್ಯದಲ್ಲಿದ್ದ ಶಿಗ್ಗಾವಿಯ ಪೊಲೀಸ್ ಪೇದೆ ದಾರುಣ ಸಾವು..!
ಶಿಗ್ಗಾವಿ: ಬೈಕ್ ಅಪಘಾತದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೋರ್ವರು ದಾರುಣ ಸಾವು ಕಂಡ ಘಟನೆ ಶಿಗ್ಗಾವಿ ನಡೆದಿದೆ. ಶಿಗ್ಗಾವಿಯಲ್ಲಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಚನ್ನಪ್ಪ ದೊಡ್ಡಪ್ಪ ಸಂಶಿ(54) ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯಾಗಿದ್ದಾರೆ. ಇಂದು ಮದ್ಯಾಹ್ನ ಶಿಗ್ಗಾವಿ ತಾಲೂಕಿನ ಹನುಮರಳ್ಳಿ ಗ್ರಾಮದ ಬಳಿ ಬೈಕ್ ಅಪಘಾತವಾಗಿದೆ. ಸಮನ್ಸ್ ಜಾರಿ ಕುರಿತು ಕರ್ತವ್ಯ ನಿಮಿತ್ತ ಹೊರಟಾಗ ಶಿಗ್ಗಾವಿ ತಾಲ್ಲೂಕಿನ ಹನಮರಹಳ್ಳಿ ಗ್ರಾಮದ ಹತ್ತಿರ ಬೈಕ್ ಅಪಘಾತವಾಗಿ ಮೃತಪಟ್ಟಿದ್ದಾರೆ. ಮೂಲತಃ ಶಿಗ್ಗಾವಿ ತಾಲೂಕಿನ...