ಮುಂಡಗೋಡ: ವಿಷ ಸೇವಿಸಿದ ಮಹಿಳೆಯೋರ್ವಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ಕೋಡಂಬಿಯಲ್ಲಿ ನಡೆದಿದೆ. ಪ್ರೇಮಾ ಕೃಷ್ಣಪ್ಪ ಕೊರಗರ್ ಎಂಬುವ ಗೃಹಿಣಿಯೇ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವಳಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಮುಂಡಗೋಡಿನ 108 ಅಂಬ್ಯುಲೆನ್ಸ್ ಸಿಬ್ಬಂದಿ, ತಾಲ್ಲೂಕು ಆಸ್ಪತ್ರೆ ಮುಂಡಗೋಡಿಂದ ಹುಬ್ಬಳ್ಳಿ ಕಿಮ್ಸ್ ಗೆ,108 ಅಂಬ್ಯುಲೆನ್ಸ್ ಮುಖಾಂತರ ದಾಖಲಿಸಿದ್ದಾರೆ. 108 ಅಂಬ್ಯುಲೆನ್ಸ್ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಸಿ. ಬಳೂರು, ಚಾಲಕ ಕೆಂಚೇಶ್ ಇ. ಎನ್ ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಸೂಕ್ತ ಪ್ರಾಥಮಿಕ ಚಿಕಿತ್ಸೆ ನೀಡಿದರು.. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ಮಾಜಿ ಗ್ರಾಪಂ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ವಿಧಿವಶ, ಗ್ರಾಮಸ್ಥರ ಕಂಬನಿ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಮಾಜಿ ಗ್ರಾಮ ಪಂಚಾಯತ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದಾರೆ. ಮಂಗಳವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವ್ರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ರೈತರ ಬೋರವೆಲ್ ರಿಪೇರಿ ಮಾಡುತ್ತಿದ್ದ ಮರಿಯಪ್ಪ ಮೇತ್ರಿ ನಿಧನಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
72 ರ ಹರೆಯದಲ್ಲೂ ಬತ್ತದ ಕ್ರೀಡೋತ್ಸಾಹ, Y.R.ಗೇಟಿಯವರ್ ಸಾಧನೆಗೆ ಬೇಕಿದೆ ಇನ್ನಷ್ಟು ಪ್ರೋತ್ಸಾಹ..!
ಅವ್ರು 72 ವರ್ಷದ ಹಿರಿಯ ಕ್ರೀಡಾಪಟು.. ಇವತ್ತಿಗೂ ಆ ಹಿರಿಯ ಜೀವ ಓಟಕ್ಕೆ ನಿಂತರೆ ಸಾಕು ಯಾರಿಗೂ ಕಡಿಮೆಯಿಲ್ಲ ಅನ್ನೋ ಛಾಪು ಮೂಡಿಸ್ತಾರೆ. ಪ್ರಶಸ್ತಿಗಳನ್ನು ಬಾಚಿಕೊಳ್ತಾರೆ. ದಶಕಗಳಿಂದಲೂ ಕ್ರೀಡಾಕ್ಷೇತ್ರದಲ್ಲಿ ತಮ್ಮದೇ ಆದ ನಿರಂತರ ಸೇವೆ ಸಲ್ಲಿಸ್ತಿದಾರೆ. ಆದ್ರೆ, ಇವ್ರ ಸಾಧನೆಯ ಹೆಜ್ಜೆಗಳನ್ನು ಅದ್ಯಾಕೋ ಏನೋ ರಾಜ್ಯ ಸರ್ಕಾರ ಮಾತ್ರ ಇನ್ನೂ ಗುರುತಿಸಿಯೇ ಇಲ್ಲ. ಹೀಗಾಗಿ, ಈ ಹಿರಿಯ ಕ್ರೀಡಾಪಟುವಿಗೆ ಸದ್ಯ ರಾಜ್ಯೋತ್ಸವ ಪ್ರಶಸ್ತಿ ನೀಡಲೇ ಬೇಕು ಅಂತಾ ಉತ್ತರ ಕರ್ನಾಟಕದ ಅಸಂಖ್ಯ ಕ್ರೀಡಾಭಿಮಾನಿಗಳು ಅಭಿಯಾನ ಶುರು ಮಾಡಿದ್ದಾರೆ. ಹೌದು, ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿಯ, ಸದ್ಯ ಹುಬ್ಬಳ್ಳಿಯಲ್ಲಿ ವಾಸವಾಗಿರೋ, ವಾಯ್ ಆರ್ ಗೇಟಿಯವರ್, ಈ ಹೆಸ್ರು ಉತ್ತರ ಕರ್ನಾಟಕ ಭಾಗದ ಕ್ರೀಡಾಭಿಮಾನಿಗಳಿಗೆ ಅಚ್ಚು ಮೆಚ್ಚು. 72 ವರ್ಷ ವಯಸ್ಸಿನ ಈ ಇಳಿ ವಯಸ್ಸಿನಲ್ಲೂ ಗೇಟಿಯವರ್ ಅದ್ಭುತ ಕ್ರೀಡಾಪಟುವಾಗೇ ನಿರಂತರತೆ ಕಾಯ್ದುಕೊಂಡು, ಥೇಟು 18 ರ ನವಯುವಕನಂತೆ ಮೈದಾನಕ್ಕೀಳಿತಾರೆ. ತಮ್ಮ ಬದುಕಿನ ಅಷ್ಟೂ ಸಮಯವನ್ನು ರಾಜ್ಯ, ದೇಶವನ್ನು ಪ್ರತಿನಿಧಿಸಿ ನೂರಾರು...
ಅಯ್ಯೋ ಕರ್ಮವೇ, ಎಂಥಾ ಕಾಲ ಬಂತಪ್ಪಾ..? ಪೊಲೀಸರೇ ಇಲ್ಲಿ ಗಾಂಜಾ ವ್ಯಾಪಾರಿಗಳಂತೆ..!
ಹುಬ್ಬಳ್ಳಿ: ಇದು ಅಕ್ಷರಶಃ ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಾನೂನನ್ನು ರಕ್ಷಣೆ ಮಾಡಬೇಕಿದ್ದವರೆ ಇಲ್ಲಿ ಕಾನೂನನ್ನೇ ಮರೆತಂತೆ ಕಾಣುತ್ತೆ.. ಗಾಂಜಾ ಗಮ್ಮತ್ತು ಇದೀಗ ಎಲ್ಲೆಡೆ ಜೋರಾಗಿದ್ದು ಅದನ್ನ ತಡೆಹಿಡಿಯಬೇಕಾದವರೆ ಇದೀಗ ಅವರೇ ಮಾರಾಟ ಮಾಡಿ ತಗಲಾಕ್ಕೊಂಡಿದಾರೆ. ಸಸ್ಪೆಂಡ್ ಆಗಿ ಆಗಿದ್ದಾರೆ. ವಾಣಿಜ್ಯ ನಗರಿ, ಛೋಟಾ ಮುಂಬೈ ಅಂತೆಲ್ಲ ಕರೆಸಿಕೊಳ್ಳುವ ಹುಬ್ಬಳ್ಳಿ, ಇದೀಗ ಗಾಂಜಾ ನಗರಿಯಾಗುವತ್ತ ಸಾಗುತ್ತಿದೆ.. ವಿದ್ಯಾರ್ಥಿಗಳು, ಯುವಕರ ಗುಂಪು ಸದ್ದಿಲ್ಲದೆ ಗಾಂಜಾ ಗಮ್ಮತ್ತಿಗೆ ಒಳಗಾಗುತ್ತಿದ್ದಾರೆ.. ಇದಕ್ಕೆ ಕಡಿವಾಣ ಹಾಕಬೇಕು. ಯುವಕರನ್ನು ಸರಿದಾರಿಗೆ ತರಬೇಕಾದ ಖಾಕಿಯೇ ಇದೀಗ ಗಾಂಜಾ ಮಾರಾಟಕ್ಕೆ ಹೊರಟಿದೆ.. ಹೌದು ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ಸಿಬ್ಬಂದಿ ಸೇರಿದಂತೆ ಗೋಕುಲ ರಸ್ತೆಯ ಠಾಣೆಯ ಸಿಬ್ಬಂದಿ ಗಾಂಜಾ ಮಾರಾಟಕ್ಕೆ ಇಳಿದಿದ್ದು ಅವರೆಲ್ಲರನ್ನ ಸಸ್ಪೆಂಡ್ ಮಾಡುವ ಮೂಲಕ ಖಡಕ್ ಎಚ್ಚರಿಕೆಯನ್ನ ನಗರ ಪೊಲೀಸ್ ಕಮಿಷನರ್ ಕೊಟ್ಟಿದ್ದಾರೆ. ಗಾಂಜಾ ಮಾರಾಟ ಗಾರರನ್ನ ಬಂಧಿಸಿ ಅವರಿಂದಲೇ ಹಣ ಪಡೆದು ಬಿಟ್ಟ ಆರೋಪ ಕೇಳಿ ಬಂದ ಬೆನ್ನಲ್ಲೇ ಕಮಿಷನರ್ ರಿಂದ ಅಮಾನತ್ತು ಆದೇಶ ಹೊರಡಿಸಿದ್ದಾರೆ....
ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನವರಾತ್ರಿ ಸಂಭ್ರಮ, ಆಂಜನೇಯ ಸ್ವಾಮಿಗೆ ಹೋಮ, ಹವನ..!
ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತು ನವರಾತ್ರಿಯ ಸಂಭ್ರಮದಲ್ಲಿ, ಮಂತ್ರ ಘೋಷಗಳ ಸದ್ದು ರಿಂಗಣಿಸಿದೆ. ನವರಾತ್ರಿಯ ವಿಶೇಷ ಸಂದರ್ಭದಲ್ಲಿ, ಅದ್ರಲ್ಲೂ ಶನಿವಾರದ ದಿನ ಇಲ್ಲಿನ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ, ಹೋಮ, ಹವನ ನಡೆಸಲಾಗಿದೆ. ನೂತನವಾಗಿ ಅಧಿಕಾರ ವಹಿಸಿಕೊಂಡಿರೋ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು ಸೇರಿದಂತೆ ಠಾಣೆಯ ಎಲ್ಲಾ ಸಿಬ್ಬಂದಿಗಳು ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ರು.
ಮುಂಡಗೋಡ ತಾಲೂಕಿನಲ್ಲಿ ಎಲ್ಲೆಂದರಲ್ಲಿ ಮಟ್ಕಾ ದಂಧೆ..! “ಕ್ರಮ ಕೈಗೊಳ್ಳಿ ಸಾಹೇಬ್ರೇ” ಅಂತಾ ಎಸ್ಪಿಗೆ ದೂರು..!!
ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಮನೆ ಮಾತಾಗಿದೆ. ಹಳ್ಳಿ, ಹಳ್ಳಿಗಳಲ್ಲಿ ಹೆಜ್ಜೆಗೊಬ್ರು ಮಟ್ಕಾ ಬುಕ್ಕಿಗಳು ತಲೆ ಎತ್ತಿದ್ದಾರೆ, ಆದ್ರೆ ಇದನ್ನೇಲ್ಲ ಕಂಟ್ರೋಲ್ ಮಾಡಬೇಕಿದ್ದ ಪೊಲೀಸರು ಮಾತ್ರ ಏನೂ ಮಾಡದ ಸ್ಥಿತಿಯಲ್ಲಿದ್ದಾರೆ.. ಹಾಗಂತ, ನಾವು ಹೇಳ್ತಿಲ್ಲ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಂಡಗೋಡಿನ ಯುವ ಪಡೆ ಲಿಖಿತವಾಗಿ ದೂರು ನೀಡಿ, ಕ್ರಮಕ್ಕೆ ಆಗ್ರಹಿಸಿದೆ. ಯಸ್, ಮುಂಡಗೋಡ ಭಜರಂಗದಳದ ಕಾರ್ಯಕರ್ತ ಮಂಜುನಾಥ್ ಪವಾರ್ ಇಂತಹದ್ದೊಂದು ದೂರನ್ನು ಎಸ್ಪಿ ಸಾಹೇಬ್ರಿಗೆ ಸಲ್ಲಿಸಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಅನ್ನೋದು ಬಡ ಜನರ ಜೀವ ಹಿಂಡ್ತಿದೆ, ಯುವ ಜನರ ದಾರಿ ತಪ್ಪಿಸ್ತಿದೆ. ಅದೇಷ್ಟೋ ಬಡ ಹೆಣ್ಣುಮಕ್ಕಳು ತಮ್ಮ ಒಂದ್ಹೊತ್ತಿನ ತುತ್ತಿಗಾಗಿ ಪರದಾಡುತ್ತಿರುವಾಗ ಈ ಮಟ್ಕಾ, ಓಸಿ ದಂಧೆ ಮುಂಡಗೋಡ ತಾಲೂಕಿನ ಬಡವರ ರಕ್ತ ಹೀರುತ್ತಿದೆ ಅಂತಾ ಆರೋಪಿಸಿದ್ದಾರೆ. ಪೊಲೀಸರಿಗೆ ಕೈ ಕಟ್ಟಿದ್ಯಾರು..? ಇಲ್ಲಿ, ಗಮನಿಸಬೇಕಾದ ಅಂಶವೆಂದರೆ, ತಾಲೂಕಿನಾಧ್ಯಂತ ಮಟ್ಕಾ ದಂಧೆ ಅವ್ಯಾಹತವಾಗಿ ಚಾಲ್ತಿಯಲ್ಲಿದ್ದರೂ ಮುಂಡಗೋಡ ಪೊಲೀಸರು ಏನೂ ಮಾಡಲಾಗದ ಸ್ಥಿತಿಯಲ್ಲಿದ್ದಾರಂತೆ. ಹಾಗಂತ, ಮಂಜುನಾಥ್ ಪವಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ....
ಭಾರೀ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಜನರ ಸಾವು..!
ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯಲ್ಲಿದ್ದ 7 ಜನರು ಸಾವು ಕಂಡ ಹೃದಯ ವಿದ್ರಾವಕ ಘಟನೆ, ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದೆ. ಭೀಮಪ್ಪ ಖನಗಾಂವಿ ಎಂಬುವವರಿಗೆ ಸೇರಿದ ಮನೆ ಭಾರೀ ಮಳೆಯಿಂದ ಕುಸಿದು ಬಿದ್ದಿದ್ದು, 7 ವರ್ಷದ ಮಗು ಸೇರಿ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು, ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲು ಅಗ್ನಿಶಾಮಕ ದಳ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ
ವಯಸ್ಸಲ್ಲದ ವಯಸ್ಸಲ್ಲಿ ಎದ್ದು ನಡೆದೆಯಲ್ಲೋ ರಾಜೇಶ್..? ವಿಧಿಯೇ ನೀನೇಷ್ಟು ಕ್ರೂರಿ..?
ನಿಜ, ಆತ ಕಾಲ್ ಮಾಡಿದ್ದಾಗಲೇಲ್ಲ ಅಣ್ಣಾ ಅನ್ನದೇ ಮಾತಾಡ್ತಾನೇ ಇರಲಿಲ್ಲ. ಇತ್ತಿಚೆಗಷ್ಟೇ ಕಾಲ್ ಮಾಡಿದ್ದ, ಅದು ರಾತ್ರಿ ಹೊತ್ತು, ಕ್ಷೇತ್ರದ ರಾಜಕೀಯ, ಅದು, ಇದು ಅಂತೇಲ್ಲ ತುಂಬಾ ಮಾತಾಡಿದ್ದ. ತುಂಬಾ ಗೌರವಿಸ್ತಿದ್ದ, ನಿನ್ನ ಬರವಣಿಗೆಯ ಕಟ್ಟಾ ಅಭಿಮಾನಿಯಣ್ಣಾ ನಾನು ಅಂತಿದ್ದ. ಇಷ್ಟೇಲ್ಲ ಹೇಳಿದವನು ಈಗ ಏಕಾ ಏಕಿ ಯಾರಿಗೂ ಹೇಳದೇ ಕೇಳದೇ ಹೀಗೆ ನಿಂತ ಅರ ಗಳಿಗೆಯಲ್ಲೇ ಎದ್ದು ಹೊರಟು ಬಿಟ್ಟರೆ ಏನಂತಾ ಅನಕೊಳ್ಳೊದು ತಮ್ಮಾ..? ಯಾಕೆ, ರಾಜೇಶ್ ಹೀಗೆ ಮಾಡಿದೆ..? ಇಷ್ಟು ಬೇಗ ನಮ್ಮನ್ನೇಲ್ಲ ಅಗಲೋಕೆ ಮನಸ್ಸಾದ್ರೂ ಹೇಗೆ ಬಂತೋ ನಿಂಗೆ..? ಇದೇಲ್ಲ ನನ್ನೊಳಗಿನ ಕಣ್ಣೀರಿನ ಪ್ರಶ್ನೆ..! ನಿಜ, ತುಂಬಾ ಸಂಕಟವಾಗುತ್ತಿದೆ. ನೀನಿಲ್ಲ ಅನ್ನೋ ಸುದ್ದಿ ಅರಗಿಸಿಕೊಳ್ಳಲು ಸಾಧ್ಯವಾಗ್ತಿಲ್ಲ ತಮ್ಮಾ..! ಪ್ರಿಯ, ಓದುಗರೇ, ರಾಜೇಶ್ ತಳವಾರ್, ಮುಂಡಗೋಡ ತಾಲೂಕಿನ ಕಟ್ಟಕಡೆಯ ಗ್ರಾಮ ಅಗಡಿಯವನು. ಬದುಕಿನಲ್ಲಿ ಬಹುದೊಡ್ಡ ಕನಸುಗಳನ್ನು ಬೆನ್ನತ್ತಿದ್ದವ, ಶ್ರಮಜೀವಿ.. ಅದೇಷ್ಟೋ ಕಷ್ಟ ಕಾರ್ಪಣ್ಯಗಳನ್ನು ಮೆಟ್ಟಿ ಈಗಷ್ಟೇ ಸಮಾಜದ ಮೇಲ್ಪಂಕ್ತಿಗೆ ಬಂದಿದ್ದ, ಭರವಸೆಯ ನೀಲಿಗಣ್ಣಿನ ಹುಡುಗ. ಇಂದು ನಮ್ಮನ್ನೇಲ್ಲ ಅಗಲಿದ್ದಾನೆ....
ಚೌಡಳ್ಳಿ ಗ್ರಾಪಂ ನಲ್ಲಿ ಮಹಿಳಾ ಸದಸ್ಯರ ಬದಲು ಸಂಬಂಧಿಕರದ್ದೇ ದರ್ಬಾರು..! ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೂರು..!!
ಮುಂಡಗೋಡ: ತಾಲೂಕಿನ ಚೌಡಳ್ಳಿಯ ಹಲವು ಯುವಕರು ಸಿಡಿದು ನಿಂತಿದ್ದಾರೆ. ಗ್ರಾಮ ಪಂಚಾಯತಿಯಲ್ಲಿ, ಮಹಿಳಾ ಸದಸ್ಯರುಗಳ ಪತಿ, ಅಥವಾ ಸಂಬಂಧಿಕರೇ ದರ್ಬಾರು ನಡೆಸ್ತಿದಾರೆ ಅಂತಾ ಆರೋಪಿಸಿ ದೂರು ನೀಡಿದ್ದಾರೆ. ಯಸ್, ಮುಂಡಗೋಡ ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಗ್ರಾಮ ಪಂಚಾಯತ್ ಸದಸ್ಯರ ಪರವಾಗಿ, ಅವರ ಸಂಬಂಧಿಕರು ಹಾಗೂ ಮಹಿಳಾ ಸದಸ್ಯರ ಪತಿ, ಹೀಗೆ ಕುಟುಂಬಸ್ಥರು ಪಂಚಾಯತ್ ಕೆಲಸಕಾರ್ಯಗಳಲ್ಲಿ ತಾವು ಅವರ ಪರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದ್ದು, ಇದನ್ನ ಖಂಡಿಸಿ ಗ್ರಾಮದ ವಿದ್ಯಾಧರ್ ಶಿವಾಜಿ ಮಾದಾಪುರ ಎಂಬುವವರ ನೇತೃತ್ವದಲ್ಲಿ, ಯುವಕರು ದಿನಾಂಕ 29.9.2021 ರಂದು ನಡೆದ ಸಾಮಾನ್ಯ ಸಭೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಅದಿನಿಯಮ 1993, ಹಾಗೂ ಸರ್ಕಾರದ ಆದೇಶದ ಪ್ರಕಾರ ಮಹಿಳಾ ಸದಸ್ಯರ ಪರವಾಗಿ ಅವರ ಕುಟುಂಬಸ್ಥರು ಹಸ್ತಕ್ಷೇಪ ಮಾಡುವುದು ಅಕ್ಷಮ್ಯ ಅಪರಾಧವೆಂದು ಕಾನೂನು ಇದೆ. ಹೀಗಿದ್ದರೂ ಪಂಚಾಯತಿಯಲ್ಲಿ ಮಹಿಳಾ ಸದಸ್ಯರುಗಳ ಸಂಬಂಧಿಕರು ದರ್ಬಾರು ಮಾಡುತ್ತಿದ್ದು, ಕೂಡಲೇ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಅಂತಾ...
ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನ, ಹಾರ್ಡವೇರ್ ಅಂಗಡಿ ದೋಚಿದ ಖದೀಮರು..!
ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನವಾಗಿದೆ. ಹಾರ್ಡವೇರ್ ಅಂಗಡಿಯ ಸೆಟರ್ಸ್ ಮುರಿದು ಕಳ್ಳರು ಕೈಚಳಕ ತೋರಿದ್ದಾರೆ. ಅಂಗಡಿಯಲ್ಲಿದ್ದ 15 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶಿರಸಿ ರಸ್ತೆಯ ಪೆಟ್ರೊಲ್ ಬಂಕ್ ಪಕ್ಕದಲ್ಲೇ ಇರುವ ಹಾರ್ಡವೇರ್ ಅಂಗಡಿಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಹಾರ್ಡವೇರ್ ಅಂಗಡಿಯ ಕೌಂಟರಿನಲ್ಲಿದ್ದ 15 ಸಾವಿರ ರೂ. ನಗದು ದೋಚಿಕೊಂಡು ಹೋಗಿದ್ದಾರೆ. ಮುಂಡಗೋಡ ಪೊಲೀಸರು ಯಥಾರೀತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿನ್ನೆಯಷ್ಟೇ ತಾಲೂಕಿನ ಮಳಗಿಯಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆದಿತ್ತು. ಇವತ್ತು ಮತ್ತದೇ ರೀತಿ ಮತ್ತೊಂದು ಕಳ್ಳತನವಾಗಿದೆ. ಅಂದಹಾಗೆ, ಮುಂಡಗೋಡ ಪಟ್ಟಣದಲ್ಲಿ ಕಳೆದ ಎರಡು ತಿಂಗಳಲ್ಲಿ ಇದು ಮೂರನೇ ಕಳ್ಳತನ ಪ್ರಕರಣ. ಹೀಗಾಗಿ, ಸಾರ್ವಜನಿಕರು ಆತಂಕದಲ್ಲಿದ್ದಾರೆ.