ಮುಂಡಗೋಡ: ಪಟ್ಟಣದ ಅಯ್ಯಪ್ಪ ದೇವಸ್ಥಾನದ ಹತ್ತಿರ ನ್ಯಾಸರ್ಗಿಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕರು ಭಯದಲ್ಲೇ ಓಡಾಡುವ ಪರಿಸ್ಥಿತಿ ಇದೆ. ಯಾಕಂದ್ರೆ, ಇಲ್ಲಿ ಅದ್ಯಾರೋ ಮತಿಹೀನ ಆಸ್ಪತ್ರೆಯವರು ತಮ್ಮ ಆಸ್ಪತ್ರೆಯ ತ್ಯಾಜ್ಯಗಳನ್ನು ತಂದು ಎಲ್ಲೆಂದರಲ್ಲಿ ಬಿಸಾಡಿ ಹೋಗ್ತಿದಾರೆ. ಹೊಟ್ಟೆಗೇನು ಸೆಗಣಿ ತಿಂತಾರಾ..? ಹಾಗಂತ, ಇಲ್ಲಿನ ರಸ್ತೆಯಲ್ಲಿ ತಿರುಗಾಡೋ ನ್ಯಾಸರ್ಗಿಯ ಜನ ಆಕ್ರೋಶ ವ್ಯಕ್ತ ಪಡಿಸ್ತಿದಾರೆ. ಯಾಕಂದ್ರೆ, ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಳಸಿದ ಸಿರೀಂಜ್, ಸೂಜಿಗಳು ಸೇರಿದಂತೆ ಔಷಧಿಯ ಖಾಲಿ ಬಾಟಲ್ ಗಳನ್ನು ಇಲ್ಲಿ ತಂದು ಎಸೆದು ಹೋಗಲಾಗ್ತಿದೆ. ಹಾಗಿದ್ದಾಗ, ಅದ್ಯಾವ ವೈದ್ಯ ಮಹಾಶಯ ಹೀಗೆ ಅನಾಗರೀಕನ ಹಾಗೆ ನಡೆದುಕೊಳ್ತಿದಾನೆ..? ಅವನೇನು ಹೊಟ್ಟೆಗೆ ಸೆಗಣಿ ತಿಂತಾನಾ ಅಂತಾ ನಾಗರೀಕರು ಪ್ರಶ್ನಿಸುತ್ತಿದ್ದಾರೆ. ಓಡಾಡಲೂ ಭಯ..! ನಿಜ, ಹಾಗೆ ಎಸೆದು ಹೋಗಿರೋ ಆಸ್ಪತ್ರೆಯ ತ್ಯಾಜ್ಯಗಳಲ್ಲಿ ಅದ್ಯಾವ ರೋಗಿಯ ರೋಗಗಳು ಅಡಗಿವೆಯೋ..? ಅದ್ಯಾವ ಸಾಂಕ್ರಾಮಿಕ ರೋಗವು ಅಡಗಿ ಕುಳಿತಿವೆಯೋ..? ಅದ್ಯಾರ ಕಾಲಿಗೆ ಚುಚ್ಚಿ ಇನ್ನೇನು ಅನಾಹುತ ಸಂಭವಿಸತ್ತೋ ಅನ್ನೋ ಆತಂಕ ಇಲ್ಲಿ ಓಡಾಡುವ ಜನ್ರಿಗೆ ಶುರುವಾಗಿದೆ. ಅಂತಹ ತ್ಯಾಜ್ಯಗಳನ್ನು ತಂದು ಇಲ್ಲಿ...
Top Stories
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ಇವ್ರೇನು “ಯಮದೂತರಾ..? ತಮ್ಮ ಆಸ್ಪತ್ರೆಯ ತ್ಯಾಜ್ಯವನ್ನು ನ್ಯಾಸರ್ಗಿ ರಸ್ತೆಗೆ ಎಸಿತಾರಲ್ಲ, ನಾಚಿಕೆಯಾಗಲ್ವಾ..?
ರಸ್ತೆಯ ಅವ್ಯವಸ್ಥೆ ಕಣ್ಣಾರೆ ಕಂಡ PWD ಇಂಜಿನೀಯರ್..! ಫಿಲ್ಡಿಗೆ ಇಳಿದೇ ಬಿಟ್ರು ಸಾಹೇಬ್ರು..!!
ಮುಂಡಗೋಡ; ತಾಲೂಕಿನ ವಡಗಟ್ಟಾ ಅಗಡಿ ರಸ್ತೆ, ಹುನಗುಂದದ ದೇಶಪಾಂಡೆ ನಗರದಲ್ಲಿ ನಡೆದಾಡಲೂ ಆಗದ ಸ್ಥಿತಿಯಲ್ಲಿದೆ, PWD ಇಲಾಖೆಯ ಅಧಿಕಾರಿಗಳು ನಿರ್ಲಕ್ಷ ವಹಿಸ್ತಿದ್ದಾರೆ ಅನ್ನೋ ಸುದ್ದಿ ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಕಟಿಸುತ್ತಿದ್ದಂತೆ PWD ಇಂಜಿನೀಯರ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಬೆಳಿಗ್ಗೆ ರಸ್ತೆಯ ಅವ್ಯವಸ್ಥೆ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯ ಕುರಿತು ವಿಸ್ತೃತ ವರದಿ ಪ್ರಕಟವಾಗಿತ್ತು. ವರದಿ ಪ್ರಸಾರವಾದ ಅರ್ಧ ಗಂಟೆಯಲ್ಲೇ ಅಧಿಕಾರಿಗಳು ಬೇಟಿ ನೀಡಿ, ರಸ್ತೆಯ ಅವ್ಯವಸ್ಥೆ ಸರಿಪಡಿಸಲು ಮುಂದಾಗಿದ್ದಾರೆ. ಇನ್ನು PWD ಇಂಜಿನೀಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದರು. ಈ ವೇಳೆಯೇ ಹಲವು ಬೈಕ್ ಸವಾರರು ಕೆಸರಲ್ಲಿ ಸಿಲುಕಿ ಪರದಾಡುವ ದೃಷ್ಯ ಇಂಜಿನೀಯರ್ ನಾಗರಾಜ ಭಟ್ ಕಣ್ಣಾರೆ ಕಂಡರು. ಹೀಗಾಗಿ, ಕೆಸರನ್ನು ತೆರವುಗೊಳಿಸಿ ಖಡಿ ಹಾಕುವ ಕಾರ್ಯ ಮಾಡಲು ಅಣಿಯಾಗಿದ್ದಾರೆ.
ಮುಂಡಗೋಡ PWD “ಪ್ಯಾಚ್ ಪೇಮೆಂಟ್” ನಲ್ಲಿ ಹಡಾಲೆದ್ದು ಹೋದ ರಸ್ತೆಗಳೆಷ್ಟು..? ಇಂಜಿನೀಯರ್ ಎಲ್ಲಿದ್ದೀಯಪ್ಪಾ..?
ಮುಂಡಗೋಡ; ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ಅನ್ನೋದು ಇದೆಯಾ ಅಥವಾ ಬೀಗ ಜಡಕೊಂಡು ಎಲ್ಲಾದ್ರೂ ಹಾಳಾಗಿ ಹೋಗಿದೆಯಾ..? ಇಂತಹದ್ದೊಂದು ಪ್ರಶ್ನೆ ಮುಂಡಗೋಡ ತಾಲೂಕಿನ ಮಂದಿ ಕೇಳ್ತಿದಾರೆ. ಯಾಕಂದ್ರೆ ತಾಲೂಕಿನ ಬಹುತೇಕ ರಸ್ತೆಗಳ ಸ್ಥಿತಿ ಹಡಾಲೆದ್ದು ಹೋಗಿದೆ. ಆದ್ರೆ, PWD ಅನ್ನೋ ಇಲಾಖೆಯ ಅಧಿಕಾರಿಗಳು ಮಾತ್ರ ಅದೇಲ್ಲೋ ಹೋಗಿ ಗಡದ್ದಾಗಿ ನಿದ್ದೆ ಮಾಡ್ತಿದಾರೆ. ವಡಗಟ್ಟಾ- ಅಗಡಿ ರಸ್ತೆ ಕತೆ..! ನಿಜ, ಈ ಲೋಕೋಪಯೋಗಿ ಇಲಾಖೆಯ ಅಡಿಯಲ್ಲೇ ಬರುವ ವಡಗಟ್ಟಾ-ಅಗಡಿ ರಸ್ತೆ, ಹುನಗುಂದದ ದೇಶಪಾಂಡೆ ನಗರದ ಹತ್ತಿರ ಹದಗೆಟ್ಟು ಹಳ್ಳ ಹಿಡಿದಿದೆ. ಕಳೆದ ಎರಡು ತಿಂಗಳ ಹಿಂದೆ ಇದೇ, ಲೋಕೋಪಯೋಗಿ ಇಲಾಖೆಯವರ ನಿರ್ಲಕ್ಷದಿಂದ ಬಸವಳಿದಿದ್ದ ಅಲ್ಲಿನ ಜನ ರಸ್ತೆ ಅಗೆದು ಆಕ್ರೋಶ ವ್ಯಕ್ತ ಪಡಿಸಿದ್ರು. ಆದ್ರೆ ಅವಾಗಷ್ಟೇ ಅದ್ಯಾರೋ ಸಿಬ್ಬಂದಿಗಳನ್ನ ಕಳಿಸಿ ತೆಪೆ ಹಾಕಿ ಹೋಗಿದ್ದ ಇಲಾಖೆ, ಅಲ್ಲಿಂದ ಈ ವರೆಗೂ ಇತ್ತ ತಿರುಗಿ ನೋಡಿಯೇ ಇಲ್ಲ. ಕೈಕಾಲು ಮುರಿದು ಕೊಳ್ತಿದಾರೆ..! ಹಾಗೆ, ತೆಪೆ ಹಾಕಿದ್ದ ವಡಗಟ್ಟಾ-ಅಗಡಿ ರಸ್ತೆಯಲ್ಲಿ ನಡೆದಾಡಲೂ ಆಗದ ಸ್ಥಿತಿ ಇದೆ. ನಿತ್ಯವೂ...
ಸಮುದ್ರದಲ್ಲಿ ಮುಳುಗಿ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು..!
ಕುಮಟಾ: ಸಮುದ್ರದಲ್ಲಿ ಮುಳುಗಿ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳ ಸಾವು ಕಂಡ ಘಟನೆ ತಾಲೂಕಿನ ಬಾಡ ಬೀಚ್ ನಲ್ಲಿ ನಡೆದಿದೆ. ದಾವಣಗೇರೆ ಮೂಲದ ಮೇಘ ಎಂ(24) ಹಾಗೂ ರೇಣುಕಾ ಪ್ರಸಾದ್ (24) ಮೃತ ವಿದ್ಯಾರ್ಥಿಗಳು. ಇಂಜಿನಿಯರಿಂಗ್ ವಿದ್ಯಾಭ್ಯಾಸ ಈ ವರ್ಷ ಮುಗಿದಿತ್ತು. ಹೀಗಾಗಿ, ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಾಗ ದುರ್ಘಟನೆ ನಡೆದಿದೆ. ಮೇಘಾ ಮೃತದೇಹ ಸಿಕ್ಕಿದ್ದು, ರೇಣುಕಾ ಪ್ರಸಾದ್ ದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮೊಹರಂ ಹುಲಿವೇಷಧಾರಿ ಹಾಗೂ ತಮಟೆ ಕಲಾವಿದನ ಜುಗಲ್ ಬಂದಿ..!
ಮುಂಡಗೋಡ: ತಾಲೂಕಿನಲ್ಲಿ ಸದ್ಯ ಮೊಹರಂ ಆಚರಣೆ ಭಕ್ತಿ ಭಾವದಿಂದ ನೆರವೇರುತ್ತಿದೆ. ತಾಲೂಕಿನಾಧ್ಯಂತ ಪಂಜಾಗಳನ್ನು ಪ್ರತಿಷ್ಟಾಪಿಸಲಾಗಿದೆ. ಹೀಗಾಗಿ, ಹುಲಿ ವೇಷಧಾರಿಗಳ ಕುಣಿತವೂ ಎಲ್ಲೆಲ್ಲೂ ಕಂಡು ಬರುತ್ತಿದೆ. ಅದ್ರಂತೆ, ಇಂದು ಮುಂಡಗೋಡ ಪಟ್ಟಣದಲ್ಲಿ ಮೊಹರಂ ಹಬ್ಬದ ನಿಮಿತ್ತ ಹುಲಿವೇಷಧಾರಿ ಬಂದಿದ್ದರು. ಅದೇ ಸಂದರ್ಭದಲ್ಲಿ ಹುಬ್ಬಳ್ಳಿಯಿಂದ ಬಂದಿದ್ದ ಪ್ರಸಿದ್ಧ ತಮಟೆ ಕಲಾವಿದ ಪ್ರತಾಪ್ ಅವರು ತಮಟೆ ಬಾರಿಸಿದ್ರು. ತಮಟೆ ಶಬ್ದಕ್ಕೆ ಹುಲಿ ವೇಷಧಾರಿ ಸಕತ್ ಸ್ಟೆಪ್ ಹಾಕಿದ್ರು. ಮುಂಡಗೋಡಿನ ಶಿವಾಜಿ ಸರ್ಕಲ್ ಬಳಿ ಹುಲಿಯ ನೃತ್ಯಕ್ಕೆ ಜನರು ಫಿದಾ ಆಗಿ ಚಪ್ಪಾಳೆ ತಟ್ಟಿದ್ರು.
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡುವಂತೆ ಮನವಿ..!
ಮುಂಡಗೋಡ: ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪಿಸುವಂತೆ ಇಂದು ಮುಂಡಗೋಡಿನ ರಾಯಣ್ಣ ಅಭಿಮಾನಿ ಬಳಗದಿಂದ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕಳೆದ ಹಲವು ವರ್ಷಗಳಿಂದ ಪಟ್ಟಣದ ಯಲ್ಲಾಪುರ-ಬಂಕಾಪುರ ರಸ್ತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಸ್ತೆ ಅಂತಾ ನಾಮಕರಣ ಮಾಡಲಾಗಿದೆ. ಆ ಕುರಿತು ಪಟ್ಟಣ ಪಂಚಾಯತಿಯಲ್ಲಿ ದಾಖಲಾಗಿದೆ. ಆದ್ರೆ ತಾಲೂಕಿನ ಸುಮಾರು 50 ಕಿಮಿ ವ್ಯಾಪ್ತಿಯಲ್ಲಿ ಎಲ್ಲಿಯೂ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆಯಾಗಿಲ್ಲ. ಹೀಗಾಗಿ, ಪಟ್ಟಣದ ಕಂಬಾರಗಟ್ಟಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡಬೇಕು, ಮುಂದಿನ ಪೀಳಿಗೆಗೆ ರಾಯಣ್ಣನವರ ಆದರ್ಶ, ತ್ಯಾಗ ಹಾಗೂ ದೇಶಭಕ್ತಿಯ ಸಂದೇಶ ನೀಡುವಂತಾಗಬೇಕು ಅಂತಾ ರಾಯಣ್ಣನ ಅಭಿಮಾನಿ ಬಳಗ, ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ಮೂಲಕ ಸಿಎಂ ಗೆ ಮನವಿ ಅರ್ಪಿಸಿದ್ರು. ಈ ವೇಳೆ, ಅರುಣ ಬಜಂತ್ರಿ, ಶಿವಣ್ಣ ಕುಂದರಗಿ, ಅಯ್ಯಪ್ಪ ಬಜಂತ್ರಿ, ಬಸರಾಜ್ ಕುಂದರಗಿ, ಮಂಜುನಾಥ್ ಕುರುಬರ, ಮಂಜುನಾಥ್ ಕಟ್ಟಿಮನಿ, ಕೃಷ್ಣ ಕುಂದರಗಿ, ಪ್ರವೀಣ ಕಳಸಗೇರಿ, ಗುಡ್ಡಪ್ಪ ಸುಣಗಾರ, ರಾಜೇಶ್ ಕ್ಯಾಸಿನಕೆರಿ, ಆಸಿಫ್ ನದಾಫ್, ಸಂಕೇತ ಗೌಡ್ರು ಸೇರಿ...
ಇದು ಮುಂಡಗೋಡ ಪುಟಾಣಿಗಳ ಪವರ್ ಫುಲ್ ಸ್ಟೆಪ್..!
ಮುಂಡಗೋಡ; ಪಟ್ಟಣದಲ್ಲಿ ರವಿವಾರ 75 ನೇ ಸ್ವಾತಂತ್ರ ದಿನಾಚರಣೆ ಸಂಭ್ರಮ ಜೋರಾಗಿತ್ತು.. ಇಲ್ಲಿನ ಪ್ರತೀ ಗಲ್ಲಿಗಳಲ್ಲೂ ಭಾರತ ಮಾತೆಯ ತ್ರಿವರ್ಣಧ್ವಜ ರಾರಾಜಿಸುತ್ತಿತ್ತು.. ಪಟ್ಟಣದ ಸಂಘಸಂಸ್ಥೆಗಳು ವಿಶೇಷವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ರು..ಇನ್ನು ಸ್ವಾತಂತ್ರ ದಿನಾಚರಣೆ ನಿಮಿತ್ತ ಮುಂಡಗೋಡಿನ ಪುಟ್ಟ ಪುಟಾಣಿ ಮಕ್ಕಳು ದೇಶಭಕ್ತಿಗೀತೆಗೆ ಹೆಜ್ಜೆ ಹಾಕಿದ್ದಾರೆ.. ಸ್ವಾತಂತ್ರ ಸಂಭ್ರಮದ ಕ್ಷಣಗಳನ್ನು ವಿನೂತನ ಡ್ಯಾನ್ಸ್ ಮಾಡುವ ಮೂಲಕ ದೇಶಭಕ್ತಿಯ ಕಂಪು ಹರಿಸಿದ್ದಾರೆ.. ಹಾಗಾದ್ರೆ ಆ ಸಕತ್ ಸ್ಟೆಪ್ ಹೇಗಿದೆ ಗೊತ್ತಾ.. ನೀವೂ ನೋಡಿ..
ಕಲಘಟಗಿಯಲ್ಲಿ 2 ಕಿಮೀ ಉದ್ದದ ರಾಷ್ಟ್ರಧ್ವಜದ ಮೆರವಣಿಗೆ, ಸಂತೋಷ ಲಾಡ್ ನೇತೃತ್ವ..!
ಕಲಘಟಗಿ: ಕೋವಿಡ್ ಆತಂಕದ ನಡುವೆಯೇ ಕಲಘಟಗಿಯಲ್ಲಿ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಮಾಜಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ 2 ಕಿಮೀ ಉದ್ದದ 9 ಅಡಿ ಅಗಲ ಇರುವ ರಾಷ್ಟ್ರಧ್ವಜದ ಮೆರವಣಿಗೆ ನಡೆಯಿತು. ಮೆರವಣಿಗೆ ವೇಳೆ ಸಾವಿರಾರು ಜನರಿಂದ ರಾಷ್ಟ್ರಭಕ್ತಿಯ ಘೋಷಣೆಗಳು ಮೊಳಗಿದವು. ದೇಶಭಕ್ತಿಯ ಗೀತೆಗಳ ಮೂಲಕ, ಘೋಷಣೆ ಗಳ ಮೂಲಕ ವಿಶೇಷ ರಾಷ್ಟ್ರಧ್ವಜದ ಮೆರವಣಿಗೆ ನಡೆಸಲಾಯಿತು.
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಂಭ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಾಯಣ್ಣ ಅಭಿಮಾನಿಗಳ ಸಂಘದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ ಆಚರಿಸಲಾಯಿತು. ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ರಾಯಣ್ಣನವರ ಶೌರ್ಯ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ರಾಯಣ್ಣನವರ ಪರವಾಗಿ ಘೋಷಣೆ ಕೂಗಿ ಅಭಿಮಾನಿಗಳು ಸಂಭ್ರಮಿಸಿದ್ರು.
ಹುನಗುಂದದಲ್ಲಿ ರಾಯಣ್ಣ ಬಾಯ್ಸ್ ನಿಂದ ಸಂಭ್ರಮದ ಧ್ವಜಾರೋಹಣ..!
ಮುಂಡಗೋಡ; ತಾಲೂಕಿನ ಹುನಗುಂದ ಗ್ರಾಮದಲ್ಲಿ ರಾಯಣ್ಣ ಬಾಯ್ಸ್ ವತಿಯಿಂದ ಸಂಭ್ರಮದ ಧ್ವಜಾರೋಹಣ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದ್ರು. ಹುನಗುಂದದ ಮುಖ್ಯ ಸರ್ಕಲ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ದೇ ಸರ್ಕಲ್ ನಲ್ಲಿ ಇರುವ ಧ್ವಜಸ್ತಂಭದ ಮೇಲೆ ಭಗವಾ ಧ್ವಜವನ್ನೂ ಹಾರಿಸಲಾಯಿತು. ಈ ವೇಳೆ ಗ್ರಾಮದ ರಾಯಣ್ಣ ಬಾಯ್ಸ್ ಸೇರಿದಂತೆ ಹಲವರು ಭಾಗಿಯಾಗಿದ್ರು.