ಹಾನಗಲ್: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲೆ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಚೇತನ್ ಈಳಗೇರ್ (32) ಹಾಗೂ ಸುರೇಶ್ ಚಕ್ರಸಾಲಿ (33) ಮೃತ ಬೈಕ್ ಸವಾರರು. ಮೃತರಿಬ್ಬರೂ ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ನಿವಾಸಿಗಳು ಎನ್ನಲಾಗಿದೆ. ಹಾನಗಲ್ ನಿಂದ ಸ್ವಗ್ರಾಮ ಬೆಳೆಗಾಲಪೇಟೆ ಗೆ ಹೋಗುವಾಗ ದುರಂತ ನಡೆದಿದೆ. ಅಪಘಾತ ತೀವ್ರತೆಗೆ ದೇಹಗಳು ಚಿದ್ರಗೊಂಡಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲೆ ಸಾವು ಕಂಡಿದ್ದಾರೆ. ಸ್ಥಳಕ್ಕೆ ಹಾನಗಲ್ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾನಗಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ಭಲೇ ಬಹಾದ್ದೂರ್..! ಒಂದೇ ನಿಮಿಷದಲ್ಲಿ 100 ಅಡಿ ದೂರ ಟ್ರಾಕ್ಟರ್ ಎಳೆದ ಪೈಲ್ವಾನ್..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಇಂದು ನಾಗರ ಪಂಚಮಿ ಪ್ರಯುಕ್ತ ಖಾಲಿ ಟ್ರಾಕ್ಟರ್ ಇಂಜಿನ್ ಎಳೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಯಲ್ಲಪ್ಪ ಫಕ್ಕೀರಪ್ಪ ತುಳಜಾನವರ್ ಎಂಬುವ ಯುವಕ, ಕೇವಲ ಒಂದು ನಿಮಿಷದಲ್ಲಿ100 ಅಡಿ ದೂರ ಟ್ರಾಕ್ಟರ್ ಎಳೆದು ಸಾಹಸ ತೋರಿಸಿದ್ರು. ಹೀಗಾಗಿ, ಗ್ರಾಮಸ್ಥರ ಸಂಭ್ರಮಕ್ಕೆ ಕಾರಣರಾದ್ರು. ಜಯಶಾಲಿ ಯುವಕನಿಗೆ ಕೊಪ್ಪ ಗ್ರಾಮಸ್ಥರು ಸನ್ಮಾನಿಸಿ ಬಹುಮಾನ ನೀಡಿದ್ರು.
ಬೊಮ್ಮಾಯಿ ಸಂಪುಟದ ಮೊದಲ ವಿಕೆಟ್ ಪತನ..? ನೂತನ ಸಿಎಂ ಗೆ ಸಂಕಷ್ಟ ಶುರು..!
ವಿಜಯನಗರ: ತಾವು ಬಯಸದ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರೋ ಶಾಸಕ ಆನಂದ ಸಿಂಗ್ ಬುಧವಾರವೇ ತಮ್ಮ ಸಚಿವಸ್ಥಾನ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳಿವೆ. ಇನ್ನೊಂದು ಮೂಲಗಳ ಪ್ರಕಾರ ಅವರು ಈಗಾಗಲೆ ಮುಖ್ಯಮಂತ್ರಿಗಳಿಗೆ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ, ಜೀವಿಶಾಸ್ತ್ರ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರುವ ಆನಂದ ಸಿಂಗ್ ಈಗಾಗಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಖಾತೆ ಬದಲಾವಣೆ ಮಾಡಲು ವಿನಂತಿಸಿ, ಅದಕ್ಕೆ ಗಡುವನ್ನೂ ನೀಡಿದ್ದಾರೆ. ಗಡುವಿನೊಳಗೆ ಖಾತೆ ಬದಲಾಗದಿದ್ದರೆ ನನ್ನ ರಾಜಿನಾಮೆ ಅಂಗೀಕರಿಸಿ ಎಂದು ಪತ್ರವನ್ನೂ ಕೊಟ್ಟು ಬಂದಿದ್ದಾರೆ ಎನ್ನಲಾಗುತ್ತಿದೆ. ಶಾಸಕರ ಕಚೇರಿ ತೆರವು..! ಈ ಮಧ್ಯೆ ಮಂಗಳವಾರ ಸಂಜೆ ಹೊಸಪೆಟೆಯ ರಾಣಿಪೇಟೆಯಲ್ಲಿರುವ ಆನಂದ್ ಸಿಂಗ್ ಅವರ ಶಾಸಕರ ಕಚೇರಿಯ ನಾಮಫಲಕ ತೆರವುಗೊಳಿಸಲಾಗಿದೆ. ಬುಲ್ಡೋಜರ್ ಹಚ್ಚಿ ನಾಮಫಲಕ ತೆಗೆಯಲಾಗಿದೆ. ಬುಧವಾರದಿಂದ ಇಲ್ಲಿ ಶಾಸಕರು ಲಭ್ಯವಿರುವುದಿಲ್ಲ, ಸಾರ್ವಜನಿಕರ ಅಹವಾಲು ಸ್ವೀಕರಿಸುವುದಿಲ್ಲ ಎಂದು ತಿಳಿಸಲಾಗಿದೆ. ಧ್ವಜಾರೋಹಣವನ್ನೂ ಮಾಡಲ್ಲವಂತೆ..! ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಸಚಿವ...
ಇಬ್ಬರು ಅಂತರ್ ಜಿಲ್ಲಾ ಕಳ್ಳರ ಹೆಡೆಮುರಿ ಕಟ್ಟಿದ ಮುಂಡಗೋಡ ಪೊಲೀಸ್ರು..!
ಮುಂಡಗೋಡ: ಅವ್ರು ದೇವಸ್ಥಾನ, ಒಂಟಿ ಮನೆಗಳನ್ನು ಗುಡಿಸಿ ಗುಂಡಾಂತರ ಮಾಡೋ ಮಹಾನ್ ಖದೀಮರು, ಅವಕಾಶ ಸಿಕ್ರೆ ರಾಬರಿ ಮಾಡಿ ಬಾಚಿಕೊಂಡು ಹೋಗೋ ಖತರ್ನಾಕ ಕಿರಾತಕರು, ಆದ್ರೆ ಈಗ ಮುಂಡಗೋಡ ಪೊಲೀಸರ ಕೈಗೆ ತಗಲಾಕ್ಕೊಂಡು ಬಿಟ್ಟಿದ್ದಾರೆ. ತಾಲೂಕಿನ ಮಂದಿಗೆ ಒಂದಿಷ್ಟು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ದೇವರನ್ನೇ ಬಿಡದವರು..! ಯಸ್, ಇವ್ರು ಅಕ್ಷರಶಃ ಅಂತರ್ ಜಿಲ್ಲಾ ಪ್ರೊಫೆಷನಲ್ ಕಳ್ಳರು. ಮುಂಡಗೋಡ ತಾಲೂಕಿನಲ್ಲಿ ದೇವಸ್ಥಾನ, ಮನೆ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಸೇರಿ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದವರು. ಆದ್ರೆ ನಸೀಬು ಕೆಟ್ಟು ಮುಂಡಗೋಡ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪರಿಣಾಮ, ಸುಮಾರು 1 ಲಕ್ಷ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಇಲ್ಲಿನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂದಹಾಗೆ, ಇವ್ರಿಬ್ರೂ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನವ್ರು. ಅಬ್ದುಲ್ ಸತ್ತಾರ ಶೇಖ್ ಅಲಿಯಾಸ್ ಮಲಿಕ್, ಶ್ರೀಧರ ಅಲಿಯಾಸ್ ಸಿರಿ ಬಂಡಿವಡ್ಡರ ಬಂಧಿತ ಕಳ್ಳತನದ ಆರೋಪಿಗಳು. ಪಾಂಡುರಂಗನಿಗೇ ಕನ್ನ ಹಾಕಿದ್ರು..! ಈ ಖತರ್ನಾಕಿ ಕಿಲಾಡಿ ಜೋಡಿ, ತಾಲೂಕಿನ ಕೊಪ್ಪ ಗ್ರಾಮದ ಪಾಂಡುರಂಗ...
ಸವಣೂರಿನಲ್ಲಿ ನಿನ್ನೆ ನಡೆದ ಮರ್ಡರನ ಎದೆ ನಡುಗಿಸುವ ರಣಭೀಕರ ದೃಷ್ಯ..!
ಸವಣೂರು: ಇಲ್ಲಿನ ಕಾರಡಗಿ ಕ್ರಾಸ್ ಬಳಿ ನಿನ್ನೆ ರವಿವಾರ, ನಡು ರಸ್ತೆಯಲ್ಲೇ ನಡೆದಿದ್ದ ರೌಡಿಶೀಟರ್ ಬರ್ಬರ ಹತ್ಯೆಯ ಭಯಾನಕ ದೃಷ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಚ್ಚು ಹಾಗೂ ಕೊಡಲಿಯಿಂದ ಮನಸೊಯಿಚ್ಚೆ ಹೊಡೆದು ಕೊಂದು ಹಾಕಿದ್ದಾರೆ ಕೊಲೆ ಪಾತಕಿಗಳು. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಕಾರಡಗಿ ಕ್ರಾಸ್ ಬಳಿ ನಿನ್ನೆ ಸಂಜೆ ನಡೆದಿದ್ದ ಘಟನೆಯಲ್ಲಿ, ಅನ್ವರ ಶೇಕ್ ಅಲಿಯಾಸ್ ಹಜರತ್ ಅಲಿ ಮೂಮಿನ್ ಎಂಬುವ 40 ವರ್ಷ ವಯಸ್ಸಿನ ರೌಡಿಶೀಟರ್ ಬರ್ಬರ ಹತ್ಯೆಯಾಗಿದ್ದ. ಇಮ್ರಾನ್ ಚೌದರಿ (28) ಹಾಗೂ ಆತನ ಸಹಚರರು ಬರ್ಬರವಾಗಿ ಹತ್ಯೆ ಮಾಡಿದ್ರು. ಹಪ್ತಾ ವಸೂಲಿ ವಿಚಾರವಾಗಿ ಜಗಳವಾಡಿದ್ದ ಅನ್ವರ್ ಶೇಖ್ ಹಾಗೂ ಇಮ್ರಾನ್ ಚೌದರಿ, ಮದ್ಯೆ ಮಾತು ಮಾತಿಗೆ ಬೆಳೆದು, ಈ ವೇಳೆ ಜಗಳ ವಿಕೋಪಕ್ಕೆ ಹೋಗಿತ್ತು. ಆ ನಂತ್ರ ಕೊಡಲಿಯಿಂದ ಇಮ್ರಾನ್ ಹಾಗೂ ಸಹಚರರು ಅನ್ವರ್ ಶೇಖ್ ನನ್ನು ಅಟ್ಟಾಡಿಸಿ ಹೊಡೆದಿದ್ರು. ಈ ವೇಳೆ ಅಲ್ಲೇ ಇದ್ದವರೊಬ್ರು ತಮ್ಮ ಮೊಬೈಲ್ ನಲ್ಲಿ ದೃಷ್ಯ ಸೆರೆ ಹಿಡಿದಿದ್ದಾರೆ. ಆ...
ಎಸ್.ಎಸ್.ಎಲ್.ಸಿ ಫಲಿತಾಂಶ: ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಫಸ್ಟ್..!
ಶಿರಸಿ: ಇಂದು ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ. ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಸಿದ್ದಾಪುರದ ಪ್ರಶಾಂತಿ ವಿದ್ಯಾನಿಕೇತನದಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಹೇಮಾ ಉಮೇಶ ಹೆಗಡೆ ಹಾಗೂ ಸಿದ್ದಾಪುರದ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಎಸ್.ಎನ್.ಸುನೈ ಮತ್ತು ರೇಷ್ಮಾ ಹೆಗಡೆ 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಕಳೆದ ವರ್ಷ ಒಬ್ಬ ವಿದ್ಯಾರ್ಥಿನಿ 625 ಅಂಕ ಗಳಿಸಿ ಸಾಧನೆ ಮಾಡಿದ್ದಳು. ಆದರೆ ಈ ಬಾರಿ ಮೂವರು ವಿದ್ಯಾರ್ಥಿಗಳು 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರ ಸಾಧನೆಗೆ ಪಾಲಕರು ಹಾಗೂ ಶೈಕ್ಷಣಿಕ ಸಂಸ್ಥೆಯವರು ಸಂತೋಷ ವ್ಯಕ್ತಪಡಿಸಿದ್ದಾರೆ.
ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ..!
ಶಿಗ್ಗಾವಿ : ಅನ್ನದಾನತನ ಮೇಲೆ ಕರಡಿಯೊಂದು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ದುಂಢಶಿ ಗ್ರಾಮದ ಬಳಿ ನಡೆದಿದೆ. ಮಹಾವೀರ ಧರ್ಮಪ್ಪ ದಿಪ್ಪಣ್ಣನವರ (55) ಎಂಬುವವರೇ ಕರಡಿ ದಾಳಿಗೆ ತುತ್ತಾದವರು. ಇಂದು ತನ್ನ ಜಮೀನಿನಲ್ಲಿ ಕೆಲಸಕ್ಕೆ ಹೋದ ವೇಳೆ ದಾಳಿ ನಡೆಸಿದ ಕರಡಿ, ರೈತನ ಮುಖ,ತಲೆ, ಮೈಮೇಲೆ ಮನಬಂದಂತೆ ಕಚ್ಚಿದೆ. ಪರಿಣಾಮ ರೈತ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಕೆಲಹೊತ್ತು ನರಳಾಡುತ್ತ ಬಿದ್ದಿದ್ದಾನೆ. ನಂತರ, ಸ್ಥಳೀಯರು ಅಂಬ್ಯುಲೆನ್ಸ್ ಗೆ ಕರೆಮಾಡಿ ಗಂಭೀರ ಗಾಯಗೊಂಡ ರೈತನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಡಹಗಲೇ ನಡುರಸ್ತೆಯಲ್ಲೇ ಬಿತ್ತು ರೌಡಿಶೀಟರ್ ಹೆಣ..! ಭೀಕರ ಹತ್ಯೆ ಕಂಡು ಬೆಚ್ಚಿಬಿದ್ದ ಸವಣೂರಿನ ಜನ..!!
ಸವಣೂರು: ನಡು ರಸ್ತೆಯಲ್ಲೇ ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆಯಾಗಿದೆ. ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಕಾರಡಗಿ ಕ್ರಾಸ್ ಬಳಿ ಘಟನೆ ನಡೆದಿದೆ. ಅನ್ವರ ಶೇಕ್ ಅಲಿಯಾಸ್ ಹಜರತ್ ಅಲಿ, ಅಲಿಯಾಸ್ ಟೈಗರ್ ರಪೀಕ್, ಮಾಮಿನ್ (40) ಬರ್ಬರವಾಗಿ ಹತ್ಯೆಯಾಗಿರೋ ರೌಡಿಶೀಟರ್. ಗೋವಾದಲ್ಲಿ ವಾಸವಾಗಿದ್ದ ರೌಡಿಶೀಟರ್ ನನ್ನು ಇಮ್ರಾನ್ ಎನ್ನುವ 28 ವರ್ಷದ ವ್ಯಕ್ತಿ, ಭೀಕರವಾಗಿ ನಡುರಸ್ತೆಯಲ್ಲೇ ಅಟ್ಟಾಡಿಸಿ ಹತ್ಯೆ ಮಾಡಿದ್ದಾನೆ ಅಂತಾ ತಿಳಿದು ಬಂದಿದೆ. ಮೃತ ರೌಡಿಶೀಟರ್ ಹಪ್ತಾ ವಸೂಲಿ ಮಾಡಲು ಸವಣೂರಿಗೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಹಪ್ತಾ ವಸೂಲಿಯ ಸಲುವಾಗಿ ಆರೋಪಿ ಇಮ್ರಾನ್ ಹಾಗೂ ರೌಡಿಶೀಟರ್ ಅನ್ವರ್ ಶೇಖ್ ನಡುವೆ ಜಗಳ ನಡೆದಿದೆ. ಹಾಗೇ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ಪರಿಣಾಮ ಕೊಡಲಿಯಿಂದ ಕೊಚ್ಚಿ ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ ಅಂತಾ ಪ್ರಾಥಮಿಕ ತನಿಖೆಯ ವೇಳೆ ಮಾಹಿತಿ ಲಭ್ಯವಾಗಿದೆ. ಇನ್ನು, ಘಟನೆ ನಡೆದು ಕೇವಲ ಒಂದು ಗಂಟೆಯಲ್ಲೇ ಆರೋಪಿ ಅರೆಸ್ಟ್...
ಹೊನ್ನಾವರದಲ್ಲಿ ಶಂಕಿತ ಭಯೋತ್ಪಾದಕನ ಬಂಧನ; ಇಂದು ಕೋರ್ಟ್ ಗೆ ಹಾಜರು ಪಡಿಸಲಿರೋ ಪೊಲೀಸರು..!
ಹೊನ್ನಾವರ: ತಾಲೂಕಿನ ಮಂಕಿ ಗ್ರಾಮದಲ್ಲಿ ನಿನ್ನೆ ಬಂಧಿಸಿದ್ದ ಶಂಕಿತ ಭಯೋತ್ಪಾದಕನನ್ನು ಇಂದು ಪೊಲೀಸರು, ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿರೋ ಮಾಹಿತಿ ಲಭ್ಯವಾಗಿದೆ. ಜುಫ್ರಿ ಜವಾಹರ್ ದಾಮೂದಿ ಎನ್ನುವವನನ್ನ ನಿನ್ನೆ NIA ಹಾಗೂ ರಾಜ್ಯ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಐಸೀಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಜುಫ್ರಿ, ಐಸೀಸ್ ಮಾಸಿಕ ಪತ್ರಿಕೆ “ವಾಯ್ಸ್ ಆಫ್ ಹಿಂದ್” ನ್ನು ದಕ್ಷಿಣ ಭಾರತದಲ್ಲಿ ಭಾಷಾಂತರ ಮಾಡುತ್ತಿದ್ದ. ಸಾಮಾಜಿಕ ಜಾಲತಾಣ ಮೂಲಕ ಯುವಕರಿಗೆ ಪ್ರಚೋದನೆ ಕೊಡುತ್ತಿದ್ದ. ಹೀಗಾಗಿ, ಖಚಿತ ಮಾಹಿತಿ ಮೇರೆಗೆ ನಿನ್ನೆ ಶಂಕಿತ ಭಯೋತ್ಪಾದಕನನ್ನು ಎನ್.ಐ.ಎ ಅಧಿಕಾರಿಗಳು ಹಾಗೂ ರಾಜ್ಯ ಪೊಲೀಸರು ವಶಕ್ಕೆ ಪಡೆದಿದ್ದರು. ಇನ್ನು ಮತ್ತೊಬ್ಬ ಶಂಕಿತ ಅಮೀನ್ ಜುಹೈಬ್ ಎನ್ನುವವನ್ನು ವಿಚಾರಣೆ ನಡೆಸಿರೋ NIA ಅಧಿಕಾರಿಗಳು ಸದ್ಯ ಆತನನ್ನು ಬಿಟ್ಟು ಕಳಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಮಂಗಳೂರು ಭಾಗದಲ್ಲಿ NIA ಕೇಂದ್ರ ಸ್ಥಾಪಿಸಲು ಚರ್ಚೆ; ಸಚಿವ ಸುನಿಲ್ ಕುಮಾರ್
ಉಡುಪಿ: ಕರಾವಳಿ ಭಾಗದಲ್ಲಿ NIA ಕೇಂದ್ರ ಸ್ಥಾಪಿಸಲು ಹಿಂದೂ ಸಂಘಟನೆಗಳ ಒತ್ತಾಯ ಸರಿಯಾಗಿದೆ, ನಾನೂ ಲೋಕಸಭಾ ಸದಸ್ಯರ ಜೊತೆ ಮಾತನಾಡುತ್ತೇನೆ, ಮಂಗಳೂರು ಭಾಗದಲ್ಲಿ ಶಾಶ್ವತ NIA ಕೇಂದ್ರ ಸ್ಥಾಪನೆಗ ಸೂಕ್ತ ಕ್ರಮ ಕೈಗೊಳ್ಳಲು ಕೋರುತ್ತೇನೆ ಅಂತಾ ಉಡುಪಿಯಲ್ಲಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ರಾಷ್ಟ್ರವಿರೋಧಿ ಚಟುವಟಿಕೆಗೆ ಕುಮ್ಮಕ್ಕು ನೀಡಲಾಗುತ್ತಿದೆ ಈ ಹಿಂದಿನಿಂದಲೂ ಅಂತಹ ಅನೇಕ ಘಟನೆಗಳು ನಡೆದಿವೆ. ಸಿರಿಯಾ ಜೊತೆ ಕರಾವಳಿ ಸಂಪರ್ಕ ಅತ್ಯಂತ ಅಚ್ಚರಿ ತಂದಿದೆ ಇದು ಅತ್ಯಂತ ಖಂಡನೀಯ ವಾದ ಸಂಗತಿ ಭಯೋತ್ಪಾಧಕ ಕೃತ್ಯಕ್ಕೆ ಸಹಕಾರ ಕೊಟ್ಟವರ ಸಂಪೂರ್ಣ ವಿಚಾರಣೆ ಯಾಗಬೇಕು ಅಂತಾ ಸುನೀಲ್ ಕುಮಾರ್ ಒತ್ತಾಯಿಸಿದ್ರು. ಇನ್ನು ಈ ಕುರಿತು ರಾಜ್ಯ ಸರ್ಕಾರದಿಂದ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸುತ್ತೇನೆ, ಕರ್ನಾಟಕದಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆ ನಡೆಸೋದಕ್ಕೆ ಬಿಡೋದಿಲ್ಲ ಅಂತಾ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ರು.