ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಪಿಐ ಪ್ರಭುಗೌಡ ಹಾಗೂ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ, ಮಹ್ಮದ್ ಇರ್ಫಾನ್ ತಿಮ್ಮಾಪುರ, ಶೇಖ್ ಅಹ್ಮದ್ ಅಶ್ಪಕ್ ಬಂಧಿತ ಆರೋಪಿಗಳು. ಇನ್ನು, ಬಂಧಿತರಿಂದ 20 ಸಾವಿರ ಮೌಲ್ಯದ 628 ಗ್ರಾಂ ಗಾಂಜಾ ಹಾಗೂ 350 ರೂ. ನಗದು ಜಪ್ತಿ ಮಾಡಿದ್ದಾರೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Top Stories
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ನ್ಯಾಸರ್ಗಿ ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ..!
ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನ್ಯಾಸರ್ಗಿ ಸೂರ್ಯನಾರಾಯಣ, ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಬಾಚಣಕಿ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಬಾಚಣಕಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಇದ್ದರು, ಅಯ್ಯಪ್ಪ ಭಜಂತ್ರಿ, ಉದಯ ಶಿರಾಲಿ, ವೆಂಕಟೇಶ್ ಕಾಟ್ವೆಕರ್, ಮಾಂತೇಶ್ ಕೇಣಿ, ಅಣ್ಣಪ್ಪ ಬೋವಿ ಸೇರಿದಂತೆ ಹಲವರು ಮನವಿ ಅರ್ಪಿಸಿದ್ರು.
ಪ್ರಮಾಣ ವಚನಕ್ಕೆ ರೆಡಿಯಾಗಿರಿ; ಶಿವರಾಮ್ ಹೆಬ್ಬಾರ್ ಗೆ ಸಿಎಂ ರಿಂದ ಕರೆ..!
ಯಲ್ಲಾಪುರ: ಶಾಸಕ ಶಿವರಾಮ್ ಹೆಬ್ಬಾರ್ ಸಂಪುಟ ಸೇರ್ಪಡೆಗೊಳ್ಳೋದು ಬಹುತೇಕ ಖಚಿತವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರ್ಪಡೆಗೆ ರೆಡಿಯಾಗಿರಿ ಅಂತಾ ಈಗಾಗಲೇ ಶಿವರಾಮ್ ಹೆಬ್ಬಾರ್ ಗೆ ಕರೆ ಮಾಡಿದ್ದಾರೆ ಅನ್ನೋ ಖಚಿತ ಮಾಹಿತಿ ಲಭ್ಯವಾಗಿದೆ. ಸದ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿರೋ ಹೆಬ್ಬಾರ್ ಇನ್ನೇನು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ರೆಡಿಯಾಗ್ತಿದ್ದಾರೆ. ಕಾರ್ಮಿಕ ಸಚಿವರಾಗಿ ಯಶಸ್ವಿ ಕಾರ್ಯ ನಿರ್ವಹಿಸಿದ್ದ ಹೆಬ್ಬಾರ್ ರಿಗೆ, ವಲಸಿಗರ ಕೋಟಾದಲ್ಲಿ ಮತ್ತೊಮ್ಮೆ ಸಚಿವ ಸ್ಥಾನ ಪಡೆಯೊ ಅದೃಷ್ಟ ಒಲಿದಿದೆ.
ಸನವಳ್ಳಿಯ ಬಡವರ ನಿವೇಶನ ಅತಿಕ್ರಮಣ ಪ್ರಕರಣ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಕ್ರಮ..!
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಕೆಲವು ಬಡವರಿಗೆ ಸೂರು ಕಲ್ಪಿಸಿಕೊಳ್ಳಲು ಸರ್ಕಾರ ಗ್ರಾಮದ ಸರ್ವೆ ನಂಬರ್-51ರಲ್ಲಿ ಹಂಚಿದ್ದ 16 ನಿವೇಶನಗಳನ್ನು ಪಕ್ಕದ ಜಮೀನಿನ ಸರ್ವೆ ನಂಬರ್ 50 ಮತ್ತು 52 ರ ಮಾಲೀಕರು, ಅತಿಕ್ರಮಣ ಮಾಡಿಕೊಂಡಿದ್ದಾರೆ ಅಂತಾ ಅಲ್ಲಿನ ನಿವಾಸಿಗಳು ಆರೋಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳಕ್ಕೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅತಿಕ್ರಮಣ ಮಾಡಿಕೊಂಡಿದ್ದಾರೆ ಎನ್ನಾಲಾದ ಜಮೀನಿನ ಅಳತೆ ಮಾಡಿ, ಅಲ್ಲಿನ ನಿವಾಸಿಗಳಿಗೆ ನ್ಯಾಯ ಒದಗಿಸಿ ಕೊಡುವ ಕ್ರಮಕೈಗೊಂಡಿದ್ದಾರೆ. ಅತಿಕ್ರಮಣ ತೆರವು ಗೊಳಿಸಲು ಕ್ರಮ ಕೈಗೊಂಡಿರೋ ಅಧಿಕಾರಿಗಳಿಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ಸಾಥ್ ನೀಡಿದ್ರು..
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಖಡಕ್ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಾಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ, ಮಹ್ಮದ್ ಇರ್ಫಾನ್ ತಿಮ್ಮಾಪುರ, ಶೇಖ್ ಅಹ್ಮದ್ ಅಶ್ಪಕ್ ಬಂಧಿತ ಆರೋಪಿಗಳು. ಇನ್ನು, ಬಂಧಿತರಿಂದ 20 ಸಾವಿರ ಮೌಲ್ಯದ 628 ಗ್ರಾಂ ಗಾಂಜಾ ಹಾಗೂ 350 ರೂ. ನಗದು ಜಪ್ತಿ ಮಾಡಿದ್ದಾರೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾತೂರು ಬಳಿ ಲಾರಿ ಚಾಲಕನನ್ನು ಅಪಹರಿಸಿ 22 ಸಾವಿರ ಹಣ ದೋಚಿದ ಖದೀಮರು..!
ಮುಂಡಗೋಡ: ತಾಲೂಕಿನ ಕಾತೂರು ಸಮೀಪದಲ್ಲಿ ಲಾರಿ ಚಾಲಕನನ್ನು ಅಪಹರಿಸಿ ಅವನಲ್ಲಿದ್ದ 22 ಸಾವಿರ ಹಣ ದೋಚಿಕೊಂಡು ಹೋದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಅಬ್ದುಲ್ ಪೀರಸಾಬ್ ಶೇಖ್ ಎಂಬುವ ಲಾರಿ ಚಾಲಕನೇ ಹಣ ಕಳೆದುಕೊಂಡವನಾಗಿದ್ದಾನೆ. ಹುಬ್ಬಳ್ಳಿಯಿಂದಲೇ ಬೊಲೆರೋ ವಾಹನದಲ್ಲಿ ಹಿಂಬಾಲಿಸಿದ್ದ ನಾಲ್ಕು ಜನ ದುಷ್ಕರ್ಮಿಗಳು, ಲಾರಿ ಚಾಲಕ ಮೂತ್ರ ವಿಸರ್ಜನೆಗೆಂದು ಲಾರಿ ನಿಲ್ಲಿಸಿದಾಗ ಏಕಾಏಕಿ ಬಂದು ಅಟ್ಯಾಕ್ ಮಾಡಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿ ತಮ್ಮ ಬೊಲೆರೋ ವಾಹನದಲ್ಲೇ ಲಾರಿ ಚಾಲಕನನ್ನು ಹೊತ್ತೊಯ್ದಿದ್ದಾರೆ. ನಂತರ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ಒಯ್ದು ಹಣ ಕಿತ್ತುಕೊಂಡಿದ್ದಾರೆ. ಬಳಿಕ ಲಾರಿ ಚಾಲಕನನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ ಹಾಗಂತ, ಲಾರಿ ಚಾಲಕ ಮುಂಡಗೋಡ ಪೊಲೀಸರಿಗೆ ದೂರು ನೀಡಿದ್ದಾನೆ. ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಿದ್ಯುತ್ ತಗುಲಿ ಇಬ್ಬರು ರೈತರ ದಾರುಣ ಸಾವು..!
ಶಿಗ್ಗಾವಿ : ಪಂಪ್ ಸೆಟ್ ಚಾಲನೆಗೊಳಿಸಲು ಹೋದ ವೇಳೆ ವಿದ್ಯುತ್ ತಗಲಿ ಇಬ್ಬರು ರೈತರು ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ರಾತ್ರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಸವನಾಳ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ ರೈತರನ್ನು ರೇವಣಯ್ಯ ಪಂಚಾಕ್ಷರಿಮಠ (50) ಮತ್ತು ಯಲ್ಲಪ್ಪ ಹಡಪದ (55) ಎಂದು ಗುರುತಿಸಲಾಗಿದೆ. ತೋಟದಲ್ಲಿನ ಬೋರವೆಲ್ ಗೆ ಸ್ಟಾರ್ಟರ್ ಕೂಡಿಸಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದ್ದು. ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಇಬ್ಬರು ರೈತರು ಮೃತಪಟ್ಟಿದ್ದಾರೆ. ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದೇಶದಲ್ಲಿ ಸದ್ದಿಲ್ಲದೇ ಕೊರೋನಾ ಕೇಕೆ..! ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ..!!
ಬೆಂಗಳೂರು: ದೇಶಾದ್ಯಂತ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ಲಾಕ್ ಡೌನ್ ಭೀತಿ ಎದುರಾಗಿದೆ. ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಕೇರಳದಲ್ಲಿ 22,000 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಎರಡು ದಿನಗಳ ಲಾಕ್ ಡೌನ್ ಗೆ ಸರ್ಕಾರ ಮುಂದಾಗಿದೆ. ಕೇರಳದಲ್ಲಿ ಜುಲೈ 31 ಹಾಗೂ ಆಗಸ್ಟ್ 1ರಂದು ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ. ಕೇರಳದಲ್ಲಿ ಬುಧವಾರ ಒಂದೇ ದಿನ 22,129 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಕೋವಿಡ್ ಸಂಖ್ಯೆ ರಾಜ್ಯದಲ್ಲಿ ಏಕಾಏಕಿ ಏರಿಕೆಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ 6 ಸದಸ್ಯರ ತಂಡವನ್ನು ರವಾನಿಸಿದೆ. ಮಹಾರಾಷ್ಟ್ರದಲ್ಲೂ ಪ್ರತಿದಿನ ಆರು ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದುವಾರದಿಂದ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು,...
ನೆರೆಯಿಂದ ಹಾನಿಗೊಳಗಾದ ಜಿಲ್ಲೆಯ ರಸ್ತೆಗಳಿಗೆ ರೂ. 200 ಕೋಟಿ ಭರವಸೆ ನೀಡಿದ ಸಿಎಂ..!
ಅಂಕೋಲಾ: ನೆರೆಯಿಂದ ಹಾನಿಗೊಳಗಾದ ಉತ್ತರ ಕನ್ನಡ ಜಿಲ್ಲೆಯ ರಸ್ತೆಗಳಿಗೆ 200 ಕೋಟಿ ರೂ. ಬಿಡುಗಡೆಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ನೆರೆ ವೀಕ್ಷಣೆ ಬಳಿಕ ಅಂಕೋಲಾದಲ್ಲಿ ಸಭೆ ನಡೆಸಿದ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ರು. ಪಿಡಬ್ಲುಡಿ ಇಲಾಖೆಯಿಂದ 100 ಕೋಟಿ ರೂ., ಆರ್ಡಿಪಿಆರ್ ವತಿಯಿಂದ 100 ಕೋಟಿ ರೂ. ಹಣ ತುರ್ತು ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ. 10 ಸಾವಿರ ತಕ್ಷಣಕ್ಕೆ..! ಮನೆ ಕಳೆದುಕೊಂಡ ಅತಿಕ್ರಮಣದಾರರೂ ಸೇರಿ, ಮನೆ ಹಾನಿಗೆ ಕಳೆದ ಬಾರಿಯಂತೆ 10 ಸಾವಿರ ಹಣ, ಮನೆಬಳಕೆ ವಸ್ತುಗಳ ಖರೀದಿಗೆ ತುರ್ತು ಬಿಡುಗಡೆಗೊಳಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ರು. ಕಳಚೆ ಗ್ರಾಮ ಸ್ಥಳಾಂತರಕ್ಕೆ ಸೂಚನೆ..! ಇನ್ನು, ನೆರೆಯಿಂದ ತೀವ್ರ ಭೂಕುಸಿತವಾಗಿರುವ ಕಳಚೆ ಗ್ರಾಮ ವೀಕ್ಷಿಸಿದ್ದ ಸಿಎಂ, ತೀವ್ರ ಹಾನಿಗೊಳಗಾಗಿರುವ ಕಳಚೆ ಗ್ರಾಮವನ್ನು ಪೂರ್ಣ ಸ್ಥಳಾಂತರಕ್ಕೆ ಸೂಚನೆ ನೀಡಿದ್ರು. ಭೂಕುಸಿತದಿಂದ ಮನೆ ನಿರ್ಮಾಣ ಸಾಧ್ಯವಿಲ್ಲದ ಹಿನ್ನಲೆ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಇನ್ನು, ಗ್ರಾಮಕ್ಕೆ ಅಗತ್ಯವಿರುವ ಸುಮಾರು...
ಅಂಕೋಲಾದಲ್ಲಿ ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ಸಿಎಂ..!
ಅಂಕೋಲಾ: ಇಲ್ಲಿನ ತಾಲೂಕು ಕಚೇರಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು, ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಛರೆನ್ಸ್ ನಡೆಸಿದರು. ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿಗೆ ಮಾಹಿತಿ ನೀಡಿದ ಸಿಎಂ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿನ ಪ್ರವಾಹದ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ್ರು. ಈ ವೇಳೆ ಸಿಎಂ ಗೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು.