ಮುಂಡಗೋಡ;ತಾಲೂಕಿನ ಓಣಿಕೇರಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. 38 ವರ್ಷದ ಗಿರೀಶ್ ಕೃಷ್ಣಮೂರ್ತಿ ಅರ್ಕಸಾಲಿ ಎಂಬುವ ಯುವಕನೇ ನೇಣಿಗೆ ಶರಣಾದವನಾಗಿದ್ದು, ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ. ಎಷ್ಟೇ ಚಿಕಿತ್ಸೆ ನೀಡಿದ್ರೂ ಗುಣಮುಖ ಆಗಿರಲಿಲ್ಲ. ಹೀಗಾಗಿ ಅದನ್ನೇ ಮನಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ ಅಂತಾ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Top Stories
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!
ಇನ್ಮುಂದೆ ವೀಕೆಂಡ್ ಕರ್ಫ್ಯೂ ಇರಲ್ಲ: ದೇವಸ್ಥಾನ, ಬಾರ್, ಮಾಲ್ ಓಪನ್..!
ಬೆಂಗಳೂರು: ಸೋಮವಾರ 5 ನೇ ತಾರೀಖಿನಿಂದ ದೇವಸ್ಥಾನ, ಮಾಲ್, ಬಾರ್ ಓಪನ್ ಆಗತ್ತೆ. ಇನ್ಮುಂದೆ ವೀಕೆಂಡ್ ಕರ್ಫ್ಯೂ ಇರಲ್ಲ ಅಂತಾ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇಂದು ಅನಲಾಕ್ ಸಂಬಂಧ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನಿಸಲಾಗಿದ್ದು, ಸಭೆಯ ಬಳಿಕ ಸಿಎಂ ಯಡಿಯೂರಪ್ಪ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.
ಬಸಾಪುರದಲ್ಲಿ ಸಾಲಬಾಧೆಯಿಂದ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಬಸಾಪುರ ಗ್ರಾಮದಲ್ಲಿ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗಂಗಾರಾಮ್ ಸಿಂಗ್ ಶಂಕರಸಿಂಗ್ ರಜಪೂತ (55) ಎಂಬುವವರೇ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದು, ಸಾಲಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮ ಮೇಲೆ ಬಂದಿರೋ ಆರೋಪಗಳೇಲ್ಲ ಸುಳ್ಳು, ಸುಳ್ಳು, ಸುಳ್ಳು..! ಕಬನೂರು ಗ್ರಾಪಂ ಅಧ್ಯಕ್ಷರ ಸ್ಪಷ್ಟನೆ..!!
ಶಿಗ್ಗಾವಿ:ತಾಲೂಕಿನ ಕಬನೂರ ಪಂಚಾಯತಿಯಲ್ಲಿ ಅಧ್ಯಕ್ಷರು ಮತ್ತು ಕೆಲ ಸದಸ್ಯರ ಸರ್ವಾಧಿಕಾರಿ ಧೋರಣೆ ಆರೋಪಕ್ಕೆ ಸಂಬಂಧಿಸಿದಂತೆ, ಆರೋಪಕ್ಕೆ ಒಳಗಾಗಿದ್ದ ಅಧ್ಯಕ್ಷ ದೇವೇಂದ್ರಪ್ಪ ಸೊರಟೂರ ಅವರು ಬೆಂಬಲಿಗ 6 ಜನ ಸದಸ್ಯರೊಡನೆ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮೇಲೆ ಬಂದಿದ್ದ ಆರೋಪಗಳನ್ನು ಸಂಪೂರ್ಣವಾಗಿ ಅಲ್ಲಗಳೆದು ಆರೋಪ ಮಾಡಿರುವ ಸದಸ್ಯರ ಒಪ್ಪಿಗೆಯಿಂದಲೇ ಎಲ್ಲವೂ ನಡೆದಿದೆ ಎಂದು ದಾಖಲೆ ಸಮೇತ ಸ್ಪಷ್ಟೀಕರಣ ನೀಡಿದ್ದಾರೆ. ಕಳೆದ ಅಧ್ಯಕ್ಷರ ಆಯ್ಕೆಯಲ್ಲಿ ಅಸಮಾಧಾನ ಗೊಂಡಿರುವ ಸದಸ್ಯರು ಹಾಗೂ ಅದ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಕೋಟೆಪ್ಪ ಕಮ್ಮಾರ ಅವರು 3-4 ಸದಸ್ಯರನ್ನು ಗುಂಪು ಕಟ್ಟಿಕೊಂಡು ಗ್ರಾಮ ಪಂಚಾಯತಿಯ ಅಭಿವೃದ್ದಿಗೆ ಯೋಚಿಸಬೇಕಾದ ಅವರು ಕೇವಲ ಅಧ್ಯಕ್ಷ ಸ್ಥಾನ ದಕ್ಕಲಿಲ್ಲ ಎಂಬ ಹತಾಶೆ ಭಾವನೆಯಿಂದ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಅಲ್ಲದೇ ಅಭಿವೃದ್ದಿ ಕಾರ್ಯಗಳಲ್ಲಿ ಪ್ರತಿಯೊಂದರಲ್ಲೂ ಸಹಕಾರ ನೀಡಿ ಸಭೆಗಳಲ್ಲಿ ಮಾಹಿತಿ ನೀಡಿದರೂ ವಯಕ್ತಿಕ ವೈಶಮ್ಯದಿಂದ ಆರೋಪ ಮಾಡ್ತಿದಾರೆ. ಜೊತೆಗೆ ಪಂಚಾಯತಿ ಆಡಳಿತದ ಮೇಲೆ ಹಿಡಿತ ಸಾಧಿಸುವ ಮತ್ತು ಹಲವಾರು ಕಾರಣಗಳಿಂದ ಕಮ್ಮಾರ ಅವರ ಕೆಲ...
ಮಂಟಗಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ..!
ಸವಣೂರು: ತಾಲೂಕಿನ ಮಂಟಗಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಇಂದು “ಆರೋಗ್ಯ ತಪಾಸಣೆ ಶಿಬಿರ” ಏರ್ಪಡಿಸಲಾಗಿತ್ತು. ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕರು, ಗುರುಮಾತೆಯರು, ಆರೋಗ್ಯ ವೈದ್ಯಾಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಣ ಪ್ರೇಮಿಗಳು, ಹಾಗೂ ಗ್ರಾಮದ ಮುಖಂಡರುಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಲೆಯ ಮುಖ್ಯ ಶಿಕ್ಷಕರು, ಪ್ರಾಸ್ತಾವಿಕ ನುಡಿಗಳನ್ನು ಆಡಿ, ಈಗಿನ ಮಕ್ಕಳಿಗೆ ಆರೋಗ್ಯ ಚೆನ್ನಾಗಿದ್ದರೆ ಮುಂದೆ ಸದೃಢ ದೇಹ ಹಾಗೂ ದೇಶ ಕಟ್ಟಬಹುದು ಎಂಬುದನ್ನು ಮಾರ್ಮಿಕವಾಗಿ ನುಡಿದರು. ವೈದ್ಯಾಧಿಕಾರಿಗಳು ಮಕ್ಕಳನ್ನು ತಪಾಸಣೆ ಮಾಡಿ ಸೂಕ್ತ ಔಷಧಿಗಳನ್ನು ನೀಡಿ ಹಾಗೂ ಮಕ್ಕಳ ಪಾಲನೆ ಪೋಷಣೆ ಬಗ್ಗೆ ಮಾರ್ಗ ದರ್ಶನ ನೀಡಿದರು. ಸಹ ಶಿಕ್ಷಕರು ಗುರುಮಾತೆಯರು ವಂದನಾರ್ಪಣೆ ಸಲ್ಲಿಸಿದರು.
ಮದುವೆ ಆಗಿ ದೇವರಿಗೆ ಹೊರಟಿದ್ದ ಮದುಮಗಳ ಬಾಳಲ್ಲಿ ವಿಧಿಯ ಕ್ರೌರ್ಯ..! ಹೆಣವಾದ ಮದುಮಗಳು..!!
ವಿಜಯಪುರ: ಟೆಂಫೋ ಹಾಗೂ ಕ್ರೂಜರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಗಷ್ಟೆ ಮದುವೆ ಮುಗಿಸಿಕೊಂಡು ದೇವರಿಗೆ ಹೊರಟಿದ್ದ ಮದುಮಗಳು ಸ್ಥಳದಲ್ಲಿಯೇ ಮೃತಪಟ್ಟ ಧಾರುಣ ಘಟನೆ ನಡೆದಿದೆ. ಎಲ್ಲಿ..? ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬಿ.ಕೆ. ಯರಗಲ್ ಬಳಿ ಘಟನೆ ನಡೆದಿದ್ದು, ರಾಣಿ ಗಣೇಶ ಚವ್ಹಾಣ ಮೃತ ಮದುಮಗಳು. ಅಲ್ಲದೇ, ಮದುಮಗ ಗಣೇಶ ಚವ್ಹಾಣ ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ಸಿಂದಗಿ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮದುವೆ ಮನೆಯಿಂದ ಮಸಣಕ್ಕೆ..! ಇನ್ನು ಮದುವೆ ನಂತರ ಶಂಕರವಾಡಿಯಿಂದ ಕೊಕಟನೂರ ದೇವಸ್ಥಾನಕ್ಕೆ ಹೋಗುವ ವೇಳೆಯಲ್ಲಿ ಟೆಂಫೋ ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಸಿಂದಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ಸಂಪೂರ್ಣ ಚಿತ್ರಣ ಇಲ್ಲಿದೆ ನೋಡಿ.. ಈ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ..
ಕಾಂಗ್ರೆಸ್ ಸಿಎಂ ಅಭ್ಯರ್ಥಿ ಕುರಿತ ಚರ್ಚೆ ಅಪ್ರಸ್ತುತ; ಮಾಜಿ ಸಚಿವ ಆರ್.ವಿ. ದೇಶಪಾಂಡೆ
ಶಿರಸಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಚರ್ಚಿಸೋದು ಸರಿಯಲ್ಲ. ಒಗ್ಗಟ್ಟಾಗಿ ಇದ್ದೇವೆ. ಮುಂದೆಯೂ ಒಗ್ಗಟ್ಟಾಗಿ ಹೋಗ್ಬೇಕು ಅಂತ ಕಾಂಗ್ರೆಸ್ ನ ಹಿರಿಯ ರಾಜಕಾರಣಿ, ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ರು. ಶಿರಸಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಊಹಾಪೋಹ ಸೃಷ್ಟಿಸೋ ಕಾರ್ಯ ಸರಿಯಲ್ಲ. ಈ ಕುರಿತು ನಾಯಕರ ನಡುವೆಯೂ ಹೆಚ್ಚಿನ ಚರ್ಚೆಯ ಅಗತ್ಯವಿಲ್ಲ ಎಂದರು. ನಾನು ಯಾವತ್ತೂ ಮಂತ್ರಿ ಮಾಡಿ ಎಂದು ಹೇಳಿಲ್ಲ. ಅದೇ ರೀತಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿಯೂ ಕೂಡ ಈಗಿಂದ ಚರ್ಚೆ ಮಾಡೋದು ಸರಿಯಲ್ಲ. ಚುನಾವಣೆಗೆ ಇನ್ನೂ ಎರಡು ವರ್ಷಗಳಿದ್ದು, ಅಧಿಕಾರಕ್ಕೆ ಬಂದ ನಂತರ ಎಲ್ಲವೂ ನಿರ್ಧಾರ ಆಗಲಿದೆ ಎಂದರು. ಕಾಂಗ್ರೆಸ್ ನಿಯಮಾವಳಿಯಂತೆ ಕೆಲ ಜಿಲ್ಲೆಗಳ ಅಧ್ಯಕ್ಷರ ಸ್ಥಾನ ಬದಲಾವಣೆ ಮಾಡಲು ರಾಜ್ಯಾಧ್ಯಕ್ಷರು ನಿರ್ಣಯಿಸಿದ್ದಾರೆ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದ ಆರ್ವಿಡಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ವತಃ ನಾನೇ ಮುಖ್ಯಮಂತ್ರಿ ಯಾಗಿ ಮುಂದುವರೆಯುತ್ತೇನೆ ಅಂತ ಹೇಳಿಕೆ ನೀಡೋದು ಹಾಸ್ಯಾಸ್ಪದ. ಕಾಂಗ್ರೆಸ್ ಸರ್ಕಾರವಿದ್ದಾಗ ಮಂಜೂರಾದ...
ಇಂದೂರು ಜಿಪಂ ಕ್ಷೇತ್ರ: ಹೈ ವೊಲ್ಟೇಜ್ ಅಖಾಡದಲ್ಲಿ ಯಾರಿಗೆ ಒಲಿಯತ್ತೆ ಬಿಜೆಪಿ ಟಿಕೆಟ್..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಚುನಾವಣೆಯ ಅಭ್ಯರ್ಥಿಗಳ ಮೀಸಲಾತಿ ಪಟ್ಟಿ ಹೊರಬಿದ್ದಿದೆ. ಇದ್ರೊಂದಿಗೆ ತಾಲೂಕಿನಲ್ಲಿ ಮತ್ತೊಮ್ಮೆ ಚುನಾವಣೆಯ ಬಿಸಿ ಬಿಸಿ ಚರ್ಚೆಗಳು ಶುರುವಾಗಿದೆ. ಇನ್ನೇನು ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ಮುಂಡಗೋಡ ತಾಲೂಕಿನ 3 ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಈ ಬಾರಿ ಅಭ್ಯರ್ಥಿಗಳು ಯಾರಪ್ಪಾ ಅನ್ನೋ ಪೀಕಲಾಟಕ್ಕೆ ಎರಡೂ ರಾಜಕೀಯ ಪಕ್ಷಗಳೂ ಚರ್ಚೆ ಆರಂಭಿಸಿವೆ. ಅದ್ರಲ್ಲೂ ಆಡಳಿತಾರೂಢ ಬಿಜೆಪಿ ಪಾಲಿಗೆ ಸಧ್ಯದ ಜಿಪಂ ಹಾಗೂ ತಾಲೂಕು ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಒಂದಿಷ್ಟು ತಲೆ ನೋವಾಗಿ ಪರಿಣಮಿಸೋದ್ರಲ್ಲಿ ಎರಡು ಮಾತಿಲ್ಲ. ಇಂದೂರು ಕ್ಷೇತ್ರ ಪವರ್ ಫುಲ್..! ಇಂದೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಸಧ್ಯ ಚರ್ಚೆಯಲ್ಲಿರೋ ಪವರ್ ಪುಲ್, ಹೈ ವೊಲ್ಟೇಜ್ ಕ್ಷೇತ್ರ.. ಇಲ್ಲಿ ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ರೋಚಕ ಹಣಾಹಣಿಯಲ್ಲಿ ಗೆಲುವಿನ ಪತಾಕೆ ಹಾರಿಸಿದ್ದವರು ರವಿಗೌಡ ಪಾಟೀಲ್. ಅವತ್ತು ಶಿವರಾಮ್ ಹೆಬ್ಬಾರ್ ಆಶೀರ್ವಾದ ಹಾಗೂ ಸ್ಥಳೀಯ ಮಟ್ಟದಲ್ಲಿದ್ದ ವರ್ಚಸ್ಸು ರವಿಗೌಡ ಪಾಟೀಲರಿಗೆ ಗೆಲುವಿನ ದಡಕ್ಕೆ ತಂದು ನಿಲ್ಲಿಸಿತ್ತು. ಪಕ್ಷೇತರ...
ಇಂದೂರಿನಲ್ಲಿ “ಪರಿಸರ ಜಾಗ್ರತಿ” ಕಾರ್ಯಕ್ರಮ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿಂದು ಪರಿಸರ ಜಾಗ್ರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಪರಿಸರ ಸಂರಕ್ಷಣೆಯ ಕುರಿತು ಜಾಗ್ರತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸಿಖಂದರ್, SDMC ಅಧ್ಯಕ್ಷ ಮಂಜುನಾಥ ನಡಗೇರಿ ಸೇರಿದಂತೆ ಹಲವು ಪದಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಹುನಗುಂದ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ..!
ಮುಂಡಗೋಡ: ತಾಲೂಕಿನ ಹುನಗುಂದ ಸರಕಾರಿ ಪ್ರೌಢಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಕೆಲವು ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು. ಟಿಚ್ ಮೆಟ್ ಆಪ್ ಮೂಲಕ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಲಾಯಿತು. ಸರಕಾರಿ ಶಾಲೆಗಳು ನೀಡುವ ಸವಲತ್ತು, ಸೌಕರ್ಯಗಳ ಕುರಿತು ತಿಳಿಸಿ ಹೇಳುವ ಜೊತೆಗೆ ಪ್ಲೇಕ್ಸ್ ಬೋರ್ಡ ಅನ್ನು ಅನಾವರಣ ಗೊಳಿಸಲಾಯಿತು. ಕೋವಿಡ್-19 ರ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮುನ್ನೇಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. SDMC ಅಧ್ಯಕ್ಷರು, ಸದಸ್ಯರು, ಪಾಲಕರು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು. ******************* ಚೌಡಳ್ಳಿಯ ರೈತನ ಮಕ್ಕಳ ಸಾಹಸವನ್ನೂ ಸ್ವಲ್ಪ ನೋಡಿ..