ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮದ ಕಾಂಗ್ರೆಸ್ ಹಿರಿಯ ಮುಖಂಡ ಹನ್ಮಂತಪ್ಪ ಆಸ್ತಕಟ್ಟಿ ಇಂದು ವಿಧಿವಶರಾಗಿದ್ದಾರೆ. ಮಾಜಿ ಸಚಿವ ಆರ್.ವಿ.ದೇಶಪಾಂಡೆ ಯವರ ಕಟ್ಟಾ ಬೆಂಬಲಿಗರಾಗಿದ್ದ ಹನ್ಮಂತಪ್ಪ ಆಸ್ತಕಟ್ಟಿ, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಹನ್ಮಂತಪ್ಪ ಆಸ್ತಕಟ್ಟಿಯವರ ನಿಧನಕ್ಕೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ
Top Stories
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಮುಂಡಗೋಡ- ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಟಿ.ಆಸ್ತಕಟ್ಟಿ ವಿಧಿವಶ- ಗಣ್ಯರ ಸಂತಾಪ
ಮುಂಡಗೋಡ; ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮನೆಪಾಠ; ಹುನಗುಂದ ಶಾಲೆ ಶಿಕ್ಷಕರ ಅವಿರತ ಪ್ರಯತ್ನ
ಮುಂಡಗೋಡ- ಕೊರೋನಾ ಸಂಕಷ್ಟದ ಮದ್ಯೆ ಸದ್ಯ ಮನೆಯಲ್ಲಿರೋ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮೂಲಕವೇ ಶಿಕ್ಷಣ ನೀಡಲಾಗ್ತಿದೆ. ತಾಲೂಕಿನ ಹುನಗುಂದ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮೂಲಕವೇ ಮನೆ ಪಾಠ ನೀಡುತ್ತಿದ್ದು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯವರೆಗೂ ವಾಟ್ಸ್ ಅಪ್ ಮೂಲಕವೇ ಪಾಠ ಮಾಡ್ತಿರೋ ಶಿಕ್ಷಕರು, ತಮ್ಮ ವಿದ್ಯಾರ್ಥಿಗಳ ಜೊತೆ ವಾಟ್ಸ್ ಅಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಪಾಠ ಮಾಡ್ತಿದಾರೆ. ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಗೆ ವಾಟ್ಸ್ ಅಪ್ ಮೂಲಕವೇ ಉತ್ತರಿಸುತ್ತಿದ್ದಾರೆ. ಒಟ್ನಲ್ಲಿ, ಕೊರೋನಾದಿಂದ ನಿಂತು ಹೋಗಿದ್ದ ಶಿಕ್ಷಣ ಸದ್ಯ ವಾಟ್ಸ್ ಅಪ್ ಮೂಲಕ ಮತ್ತೆ ಚೇತರಿಕೆ ಕಂಡುಕೊಂಡಿದೆ
ಮುಂಡಗೋಡ- ಹುನಗುಂದದಲ್ಲಿ ಒಂದು ಪಾಸಿಟಿವ್: ಸೋಂಕಿತನ ಮನೆ ಸುತ್ತ ಸೀಲ್ ಡೌನ್
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮದಲ್ಲಿ ಇಂದು ಕೊರೋನಾ ಮೊದಲ ಪಾಸಿಟಿವ್ ಪ್ರಕರಣ ದೃಡವಾಗಿದ್ದು, ಸೋಂಕಿತನ ಮನೆ ಸುತ್ತ ಸೀಲ್ ಡೌನ್ ಮಾಡಲಾಗಿದೆ. ಇಂದು ಪ್ರಕರಣ ದೃಢವಾಗುತ್ತಿದ್ದಂತೆ ಹುನಗುಂದ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಸೀಲ್ ಡೌನ್ ಮಾಡಿದ್ರು. ಹುನಗುಂದ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಸೋಂಕಿತನ ಮನೆ ಸುತ್ತ ಮುತ್ತ ಫಾಗಿಂಗ್ ಮಾಡಿದ್ರು.
ಮುಂಡಗೋಡ; ಹುನಗುಂದ ಗ್ರಾಮಕ್ಕೂ ವಕ್ಕರಿಸಿದ ಕೊರೋನಾ..?
ಮುಂಡಗೋಡ- ಮಹಾರಾಷ್ಟ್ರದ ಪೂನಾದಿಂದ ಸ್ವಗ್ರಾಮ ಹುನಗುಂದಕ್ಕೆ ವಾಪಸ್ ಆಗಿದ್ದ ಇಬ್ಬರು ಯುವಕರ ಪೈಕಿ ಓರ್ವ ಯುವಕನಿಗೆ ಕೊರೋನಾ ಸೋಂಕು ದೃಢವಾಗಿದ್ದು ಮದ್ಯಾಹ್ನದ ಬಳಿಕ ಅಧಿಕೃತ ಘೋಷಣೆ ಹೊರಬೀಳಲಿದೆ. ಹೀಗಾಗಿ ಹುನಗುಂದ ಗ್ರಾಮದಲ್ಲಿ ಮೊದಲ ಪ್ರಕರಣ ಇದಾಗಿದ್ದು ಆತಂಕ ಶುರುವಾಗಿದೆ.
ಉತ್ತರ ಕನ್ನಡದಲ್ಲಿ ಮುಂದುವರೆದ ಮಳೆ, ನಾಳೆ ಸಚಿವ ಆರ್.ಅಶೋಕ್ ಜಿಲ್ಲೆಗೆ ಭೇಟಿ
ಕಾರವಾರ- ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಮತ್ತೆ ಮುಂದುವರೆದಿದೆ.. ಬೆಳಿಗ್ಗೆಯಿಂದ ಸ್ವಲ್ಪ ಬಿಡುವು ಕೊಟ್ಟಿದ್ದ ಮಳೆ ಸಂಜೆಗೆ ಮಲೆನಾಡು ತಾಲೂಕುಗಳಾದ ಸಿದ್ದಾಪುರ, ಶಿರಸಿ, ಯಲ್ಲಾಪುರ, ಮುಂಡಗೋಡು, ಹಳಿಯಾಳ ಗಳಲ್ಲಿ ಮತ್ತೆ ವರುಣನ ಅಬ್ಬರ ಪ್ರಾರಂಭವಾಗಿದೆ.. ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾಗುತ್ತಿರೋ ಹಿನ್ನೆಲೆ ಶರಾವತಿ, ಅಘನಾಶಿನಿ ನದಿಗಳ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಪ್ರವಾಹ ಪರಿಸ್ಥಿತಿ ಅವಲೋಕನಕ್ಕಾಗಿ ನಾಳೆ ಹೊನ್ನಾವರಕ್ಕೆ ಕಂದಾಯ ಆರ್.ಅಶೋಕ್ ಭೇಟಿ ನೀಡಲಿದ್ದಾರೆ. ಶರಾವತಿ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಲಿರೋ ಸಚಿವ ಅಶೋಕ, ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಉತ್ತರ ಕನ್ನಡ ಇಬ್ಬರು ಕಳ್ಳರ ಬಂಧನ
ಕುಮಟಾ ಹಾಗೂ ಹೊನ್ನಾವರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 14 ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದರಿಂದ ಶೀಘ್ರವೇ ಪ್ರಕರಣಗಳನ್ನು ಬೇಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಒಂದು ತಂಡವನ್ನು ರಚಿಸಿದ್ದರು. ಈ ತಂಡ ಆರೋಪಿಗಳಾದ ಚಂದಾವರದ ಸಜ್ಜಾದ ಅಹ್ಮದ್ ಹಾಗೂ ಮುಬಾಸೀರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಹೊನ್ನಾವರ ಪೊಲೀಸ್ ಠಾಣೆಯ 11 ಪ್ರಕರಣಗಳು ಹಾಗೂ ಕುಮಟಾ ಠಾಣೆಯ 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಆರೋಪಿತರ ಕಡೆಯಿಂದ ಜಪ್ತಿಪಡಿಸಿಕೊಳ್ಳಲಾಗಿದೆ. ಅಲ್ಲದೇ ಆರೋಪಿತರು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಸುಮಾರು 2,50,000 ರೂ. ಬೆಲೆಯ ಮಾರುತಿ ಕಂಪನಿಯ ರಿಟ್ಜ್ ಕಾರು ಹಾಗೂ ಸುಮಾರು 25,000 ರೂ. ಬೆಲೆಯ ಪಲ್ಸರ್ ಬೈಕ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಭಟ್ಕಳ ಉಪ ವಿಭಾಗದ ಎಎಸ್ ಪಿ ನಿಖಿಲ್ ಬಿ. ಮಾರ್ಗದರ್ಶನದಲ್ಲಿ ಹೊನ್ನಾವರ ಠಾಣೆಯ ಸಿಪಿಐ ವಸಂತ...
ಉತ್ತರ ಕನ್ನಡ; ಮಳೆ..ಮಳೆ..ಮಳೆ.. ಹಲವು ರಸ್ತೆ ಸಂಚಾರ ಬಂದ್
ಕಾರವಾರ- ಉತ್ತರ ಕನ್ನಡದಲ್ಲಿ ಗುರುವಾರವೂ ಮಳೆ ಮುಂದುವರೆದಿದೆ.. ಜಿಕ್ಕೆಯ ಹಲವು ಭಾಗಗಳಲ್ಲಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿಗಳು ತುಂಬಿ ಹರಿಯುತ್ತಿರೋ ಪರಿಣಾಮ ರಸ್ತೆಯಲ್ಲಿ ನೀರು ತುಂಬಿದೆ. ಹಲವೆಡೆ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಆಗಿದೆ.. ಇನ್ನು ಗಾಳಿಯ ಅಬ್ಬರಕ್ಕೆ ಮರಗಳು ಧರೆಗುರುಳಿದ್ದು, ಯಲ್ಲಾಪುರ-ಅಂಕೋಲಾ, ಶಿರಸಿ-ಕುಮಟಾ, ಸಿದ್ದಾಪುರ-ಕುಮಟಾ, ಸಿದ್ದಾಪುರ-ಸಾಗರ ರಾಜ್ಯ ಹೆದ್ದಾರಿಗಳು ತಾತ್ಕಾಲಿಕ ಸ್ಥಗಿತವಾಗಿವೆ..
ಉತ್ತರ ಕನ್ನಡ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಹಾಗೂ ಯಲ್ಲಾಪುರ ಸಂಪರ್ಕಿಸುವ ಸುಂಕಸಾಳ ಹೆದ್ದಾರಿಯಲ್ಲಿ ತುಂಬಿದ್ದ ನೆರೆ ನೀರಿನಲ್ಲಿ ಬೈಕ್ ಸವಾರ ಹಾಗೂ ಸಹ ಸವಾರನು ಕೊಚ್ಚಿಹೋಗಿದ್ದು ಕೊಚ್ಚಿಹೋದ ಸಹ ಸವಾರ ಕೇಶವ್ ನಾಯ್ಕ ಎಂಬುವವರನ್ನು ಅಂಕೋಲ ಪಿ.ಎಸ್.ಐ ಸಂಪತ್ ರವರು ರಕ್ಷಣೆಮಾಡಿ ಕರೆತಂದಿದ್ದಾರೆ. ಇನ್ನು ಬೈಕ್ ಸವಾರ ಹೊನ್ನಾವರ ಮೂಲದ ಸಂತೋಷ್ ನಾಯ್ಕ್ (30) ನೀರಿನಲ್ಲಿ ಕೊಚ್ಚಿ ಹೋಗಿದ್ದು ಈತನಿಗಾಗಿ ಅರಣ್ಯದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ರಸ್ತೆಯನ್ನು ಬೈಕ್ನಲ್ಲಿ ದಾಟುವಾಗ ಆಯತಪ್ಪಿ ಬಿದ್ದು ಕೊಚ್ಚಿ ಹೋದ ಸಂತೋಷ್ ನಾಯ್ಕ್ ಕಳೆದ 6 ತಿಂಗಳಿಂದ ಹೆಗ್ಗಾರದ ಕೇಶವ ನಾಯ್ಕ್ ಎಂಬವರ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ತನ್ನ ಕುಟುಂಬದೊಂದಿಗೆ ವಾಸ್ತವ್ಯ ಮಾಡಿಕೊಂಡಿದ್ದ ಸಂತೋಷ್ ಇಂದು ತನ್ನ ಮಾವನ ಜತೆ ದಿನಸಿ ಪದಾರ್ಥ ತರಲು ಗುಳ್ಳಾಪುರಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿದೆ. ಇನ್ನು ನೀರಿನಲ್ಲಿ ಕೊಚ್ಚಿಹೋದ ಸಂತೋಷ್ ದಟ್ಟ ಅರಣ್ಯದಲ್ಲಿ ಸಿಲುಕಿರುವ ಸಾಧ್ಯತೆಗಳಿದ್ದು ಈತನಿಗಾಗಿ ಹುಡುಕಾಟ ನಡೆದಿದೆ.
ಉತ್ತರ ಕನ್ನಡದಲ್ಲೂ ರಾಮಪೂಜೆ
ಅಯೋಧ್ಯೆಯಲ್ಲಿ ಇಂದು ಶ್ರೀರಾಮ ಮಂದಿರಕ್ಕೆ ಪ್ರಧಾನಿ ಮೋದಿಯವರು ಭೂಮಿಪೂಜೆ ನೆರವೇರಿಸಿದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕೂಡ ವಿಶೇಷ ಪೂಜೆಗಳು ನೆರವೇರಿದವು. ರಾಮ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನಿರ್ಮಾಣ ವಾಗಲಿ ಎಂದು ಕಾರವಾರದಲ್ಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಕಾರವಾರದ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಜೆಪಿ ಕಚೇರಿಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ಮಾಡಿದ ಕರಸೇವಕರನ್ನು ಸನ್ಮಾನಿಸಿದರು.
ಉತ್ತರ ಕನ್ನಡ, ಜಿಲ್ಲೆಯಲ್ಲಿ ವರುಣನ ಅರ್ಭಟ
ಕಾರವಾರ- ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆರಾಯನ ಅರ್ಭಟ ಜೋರಾಗಿದೆ..ನಿನ್ನೆ ರಾತ್ರಿಯಿಂದ ಎಡಬಿಡದೆ ಗಾಳಿ ಮಳೆ ಸುರಿಯುತ್ತಿದೆ..ಗಾಳಿ ಮಳೆಯ ಅಬ್ಬರಕ್ಕೆ ಉತ್ತರ ಕನ್ನಡ ಜಿಲ್ಲೆ ತತ್ತರಿಸಿದೆ.. ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ಭರ್ಜರಿ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಕಗ್ಗತ್ತಲಲ್ಲಿ ಮುಳುಗಿದೆ.. ಅಬ್ಬರಿಸುತ್ತಿರುವ ಗಾಳಿ ಮಳೆಯಿಂದ ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.. ಜಿಲ್ಲೆಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿತ್ತು.. ಜಿಲ್ಲೆಯ ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ..ಮಲೆನಾಡು ಭಾಗಗಳಲ್ಲಂತೂ ವ್ಯಾಪಕ ಮಳೆಯಾಗುತ್ತಿದೆ..ಗಾಳಿ ಮಳೆಯ ಅಬ್ಬರಕ್ಕೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ..ಭಾರೀ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ..