ಮುಂಡಗೋಡ: ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೋರ್ವ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮುಂಡಗೋಡ-ಹುಬ್ಬಳ್ಳಿ ರಸ್ತೆಯಲ್ಲಿ ನಡೆದಿದೆ. ಮುಂಡಗೋಡ ಗಣೇಶ ನಗರದ, ಬಸವರಾಜ್ ಬಾಲಪ್ಪ ಗೌಳಿ(36) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಹೈನುಗಾರಿಕೆ ಮಾಡುತ್ತಿದ್ದ ವ್ಯಕ್ತಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ, ಹೀಗಾಗಿ ಸಾಕಷ್ಟು ಚಿಕಿತ್ಸೆ ನೀಡಿದರೂ ನೋವು ಕಡಿಮೆಯಾಗಿರಲಿಲ್ಲ. ಹೀಗಾಗಿ, ಅದನ್ನೇ ಮನಸಿಗೆ ಹಚ್ಚಿಕೊಂಡು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಮೃತನ ಸಹೋದರ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Top Stories
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!
ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!
ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!
ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!
ಮೇ. 7 ಮಾಕ್ ಡ್ರಿಲ್, ಅಷ್ಟಕ್ಕೂ ಈ ಮಾಕ್ ಡ್ರಿಲ್ ಅಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!
ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್
ಶಿರಸಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ತಾಯಿ ಹೆಸ್ರಲ್ಲಿ ಗಿಡ ನೆಟ್ಟರು..!
ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?
ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ಪ್ರಶಸ್ತಿ
ಉತ್ತರ ಕನ್ನಡದಲ್ಲಿ ಮೇ.5 ರಿಂದ ಪ.ಜಾತಿ ಸಮುದಾಯದ ಸಮೀಕ್ಷೆ : ಜಿಲ್ಲಾಧಿಕಾರಿ
ಇಂದಿರಾನಗರಕ್ಕೂ ವಕ್ಕರಿಸಿದ ಕೊರೋನಾ..! ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತಿಮ ಸಂಸ್ಕಾರ..!!
ಮುಂಡಗೋಡ-ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಇಂದಿರಾನಗರದಲ್ಲಿ ಕೊರೋನಾ ಮಹಾಮಾರಿ ತನ್ನ ಕಬಂಧ ಬಾಹು ಚಾಚಿದೆ. ಅಂದಹಾಗೆ, ಇದುವರೆಗೂ ಒಂದೇ ಒಂದು ಪಾಸಿಟಿವ್ ಪ್ರಕರಣ ದಾಖಲಾಗದೇ ಸುರಕ್ಷಿತವಾಗಿದ್ದ ಹಳ್ಳಿಯಲ್ಲಿ ಈಗ ಕೊರೋನಾದಿಂದಲೇ ಒಂದು ಸಾವು ಸಂಭವಿಸಿದೆ. ನಿನ್ನೆ ಈ ಹಳ್ಳಿಯ 76 ವರ್ಷ ವಯಸ್ಸಿನ ವೃದ್ದ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾನೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವದ್ದನನ್ನು ಚಿಕಿತ್ಸೆಗಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ದ ಮೃತಪಟ್ಟಿದ್ದಾನೆ. ಹೀಗಾಗಿ, ಸೋಂಕಿತ ವೃದ್ಧನ ಅಂತಿಮ ಸಂಸ್ಕಾರ ಕೋವಿಡ್ ನಿಯಮಾನುಸಾರ, ಇಂದಿರಾನಗರದಲ್ಲಿ ನೆರವೇರಿಸಲಾಯಿತು. ಪಿಪಿಇ ಕಿಟ್ ಧರಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮುಂಡಗೋಡ ಕೋವಿಡ್ ಕೇರ್ ಸೆಂಟರ್ನಲ್ಲೇ ಕೊರೋನಾ ಸೋಂಕಿತನ ಡ್ಯಾನ್ಸ್..!
ಮುಂಡಗೋಡ: ಕೊರೋನಾ ಅನ್ನೋದು ಈಗ ಇಡೀ ದೇಶದ ಜನರ ಜೀವ ಹಿಂಡ್ತಿದೆ. ಅದ್ರಲ್ಲೂ ಕೊರೋನಾ ಸೋಂಕು ದೃಢಪಟ್ಟರೆ ಮುಗಿತು ಎಷ್ಟೊ ಸೋಂಕಿತರು ಭಯದಿಂದಲೇ ಪ್ರಾಣ ಕಳೆದುಕೊಳ್ತಿದಾರೆ. ಆದ್ರೆ ಇಲ್ಲೊಬ್ಬ ಸೋಂಕಿತ ಯುವಕ ಕೋವಿಡ್ ಕೇರ್ ಸೆಂಟರ್ ನಲ್ಲೇ ಕುಣಿದು ಕುಪ್ಪಳಿಸ್ತಿದಾನೆ. ಕೋವಿಡ್ ಅಂದ್ರೆ ಭಯ ಪಡೋ ಜನ್ರಿಗೆ ಧೈರ್ಯ ತುಂಬಿದ್ದಾನೆ. ತನ್ನ ಜೊತೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಅಡ್ಮಿಟ್ ಆಗಿದ್ದ ಇನ್ನಿತರ ರೋಗಿಗಳಿಗೂ ಆತ್ಮ ಸ್ಥೈರ್ಯ ತುಂಬಿದ್ದಾನೆ. ನಕ್ಕು ನಲಿಸಿದ್ದಾನೆ. ಕೊರೋನಾ ಅಂದ್ರೆ ಯಾರೂ ಭಯ ಪಡಬೇಡಿ ಅಂತಾ ಎಲ್ರಿಗೂ ತಿಳಿ ಹೇಳಿದ್ದಾನೆ.. ಅಂದಹಾಗೆ, ಈತನ ಹೆಸ್ರು ಮಹೇಂದ್ರ ಬಾಬು ಪಾಟೀಲ್ ಅಂತಾ ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದವನು.. ಕಳೆದ ನಾಲ್ಕು ದಿನದ ಹಿಂದೆ ಕೊರೋನಾ ಸೋಂಕು ಪೀಡಿತನಾಗಿ ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಿದ್ದಾನೆ.. ಆದ್ರೆ ಈತ ಇಲ್ಲಿ ಅಡ್ಮಿಟ್ ಆದ ನಂತರ ಇಲ್ಲಿನ ಇನ್ನಿತರ ಸೋಂಕಿತರಿಗೂ ಮನರಂಜನೆ ನೀಡ್ತಿದಾನೆ. ನಕ್ಕು ನಗಿಸ್ತಿದಾನೆ. ಈ ಮೂಲಕ ಸೋಂಕಿತರ...
ಅಳ್ನಾವರ- ತಾಲೂಕಿನ ಹುಲಿಕೇರಿಯಲ್ಲಿ ಕೋವಿಡ್ ಟೆಸ್ಟ್..!
ಅಳ್ನಾವರ- ತಾಲೂಕಿನ ಕಡಬಗಟ್ಟಿ ಗ್ರಾ.ಪಂಚಾಯತ ವ್ಯಾಪ್ತಿಯ ಹುಲಿಕೇರಿ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಮಾಡಲಾಯಿತು. ಈ ವೇಳೆ ಜನರಿಗೆ ತೊಂದರೆ ಆಗದಂತೆ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮಾವಳಿ ಪಾಲನೆಯನ್ನು ಮಾಡಲಾಯಿತು ಮತ್ತು ಮಾಸ್ಕ ಹಾಕದವರಿಗೆ ಜಾಗೃತಿ ಮೂಡಿಸಿ ನಿಯಮಾವಳಿಗಳನ್ನು ಪಾಲಿಸಲು ಸೂಚನೆ ನೀಡಲಾಯಿತು. ಜನರು ಭಯ ಪಡುವ ಅವಶ್ಯಕತೆ ಇಲ್ಲ ಕೋವಿಡ್ ಗುಣಲಕ್ಷಣಗಳು ಕಂಡು ಬಂದಲ್ಲಿ ಸರಕಾರಿ ಶಾಲೆಯನ್ನು ಕೋವಿಡ್ ಕಾಳಜಿ ಕೇಂದ್ರವನ್ನಾಗಿ ಪರಿವರ್ತನೆ ಮಾಡಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನಿಡಲಾಗುತ್ತದೆ ಅಂತಾ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಅಭೂಬಕರ ನದಾಪ ತಿಳಿಸಿದರು. ಈ ಸಂಧರ್ಭದಲ್ಲಿ ಗ್ರಾ.ಪಂಚಾಯತ ಸದಸ್ಯರಾದ ಶ್ರೀಮತಿ ಇಮಾಂಬಿ ನದಾಫ, ಗ್ರಾ.ಪಂ ಕಾರ್ಯದರ್ಶಿ ಷಣ್ಮುಖ ಸುಳಗೇಕರ ಪಂಚಾಯತ್ ಸಿಬ್ಬಂದಿ ವರ್ಗ ಮತ್ತು , ಬಸವರಾಜ ಇನಾಮದಾರ್, ದಾವಲ್, ತಹಶೀಲ್ದಾರ ಮಲ್ಲಿಕಾರ್ಜುನ ಕಲ್ಲೂರ, ಜಮಾಲ ಮುನವಳ್ಳಿ ಸದ್ದಾಂ ಬೋಗುರ, ಇಸ್ಮಾಯಿಲ್ ಪಠಾಣ್, ಶಕೀಲ್ ಗೌಂಡಿ, ಸಂತೋಷ ಹರಿಜನ, ಶಿಂದಬಹಾದ, ಹುಸೇನ್ ಹಾಜರಿದ್ದರು.
ಸೋಂದಾ ಸ್ವರ್ಣವಲ್ಲಿ ಮಠದಿಂದ ಅಶಕ್ತರಿಗೆ ದಿನಸಿ ಕಿಟ್ ವಿತರಣೆ..!
ಶಿರಸಿ: ಆಧ್ಯಾತ್ಮ ಸಾಧನೆಯ ಜೊತೆಗೆ ಸಮಾಜಮುಖಿ ಮಠವಾಗಿಯೂ ಗುರುತಿಸಿಕೊಂಡಿರೋ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನವು ಮಠದ ಸುತ್ತಲಿನ ಅಗತ್ಯವುಳ್ಳ ಜನರಿಗೆ ಉಚಿತವಾಗಿ ದಿನಸಿ ಸಾಮಗ್ರಿ ವಿತರಿಸಿತು. ಲಾಕ್ ಡೌನ್, ಕೋವಿಡ್ ಕಾರಣದಿಂದ ಬಡತನದಲ್ಲಿ ಇರೋ ಕುಟುಂಬಗಳಿಗೆ ಅಕ್ಕಿ, ಕಾಯಿ, ಬೆಲ್ಲ, ಬೇಳೆ, ಶ್ರೀದೇವರ ಪ್ರಸಾದವನ್ನ ಕೂಡ ಸ್ವರ್ಣವಲ್ಲೀ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ವಿತರಿಸಿದರು. ಇದೇ ವೇಳೆ ಈ ಸಂದಿಗ್ದ ಕಾಲವನ್ನು ಒಟ್ಟಾಗಿ ಎದುರಿಸಬೇಕಾಗಿದೆ. ಸಾಮಾಜಿಕ ಅಂತರ, ಮಾಸ್ಕ ಧಾರಣೆ ಮಾಡಬೇಕು. ಆಂತರಿಕ ಧೈರ್ಯಕ್ಕಾಗಿ ದೇವರ ಜಪ ಧ್ಯಾನ ಮಾಡಬೇಕು ಅಂತ ಸ್ವಾಮೀಜಿ ಆಶಿಸಿದರು. ಈ ವೇಳೆ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ, ಸೋಂದಾ ಗ್ರಾ.ಪಂ.ಅಧ್ಯಕ್ಷೆ ಮಮತಾ ಜೈನ್, ಮಠದ ವ್ಯವಸ್ಥಾಪಕ ಎಸ್.ಎನ್. ಗಾಂವಕರ ಇತರರು ಇದ್ದರು.
ಮುಂಡಗೋಡ ಪಟ್ಟಣದಲ್ಲಿ ಅಗತ್ಯ ವಸ್ತುಗಳ ಖರೀಧಿ ಭರಾಟೆ ಜೋರು..!
ಮುಂಡಗೋಡ- ಪಟ್ಟಣದಲ್ಲಿ ಇಂದಿನಿಂದ ವಾರದ 4 ದಿನಗಳ ಕಾಲ ಬೆಳಿಗ್ಗೆ 8 ಗಂಟೆಯಿಂದ ಮದ್ಯಾನ 12 ಗಂಟೆವರೆಗೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ಕಲ್ಪಿಸಿರೋ ಹಿನ್ನೆಲೆಯಲ್ಲಿ ತಾಲೂಕಿನೆಲ್ಲೆಡೆಯಿಂದ ಪಟ್ಟಣಕ್ಕೆ ಬೆಳಗಿನಿಂದಲೇ ಜನ ಬಂದಿದ್ರು. ಅಗತ್ಯ ವಸ್ತುಗಳ ಖರೀಧಿಗೆ ಬಂದ ಜನ ಅಗತ್ಯ ವಸ್ತಗಳಿಗಾಗಿ ಮುಗಿಬೀಳುತ್ತಿರೊ ದೃಷ್ಯಗಳು ಸಾಮಾನ್ಯವಾಗಿತ್ತು. ಹೀಗಾಗಿ ಪೊಲೀಸ್ರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಸಿದ್ರು. ಇನ್ನು ದಿನಸಿ ಅಂಗಡಿಗಳ ಮಾಲೀಕರಿಗೂ ಅಂಗಡಿಗಳ ಮುಂದೆ ಗ್ರಾಹಕರಿಗೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಬಳಸುವಂತೆ ಸೂಚಿಸಲು ಎಚ್ಚರಿಸಿದ್ರು.
ಮುಂಡಗೋಡ ಪಟ್ಟಣದಲ್ಲಿ ಅನಗತ್ಯ ತಿರುಗಾಡುವವರ ವಿರುದ್ಧ ಪೊಲೀಸರ ಕಠಿಣ ಕ್ರಮ..!
ಮುಂಡಗೋಡ- ಪಟ್ಟಣದಲ್ಲಿ ಅನಗತ್ಯ ತಿರುಗಾಡುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪರಿಶೀಲನೆಗೆ ಇಳಿದಿರೋ ಪೊಲೀಸ್ರು ಅನಗತ್ಯವಾಗಿ ತಿರುಗಾಡುವ ವಾಹನಗಳ ಬಗ್ಗೆ ಕಣ್ಣಿಟ್ಟಿದ್ರು. ಬೈಕ್ ಸವಾರರು, ಕಾರ್ ಸವಾರರು ಪಟ್ಟಣದ ಒಳಗೆ ಅಥವಾ ಪಟ್ಟಣದಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಅಂತವರನ್ನು ಪೊಲೀಸರು ಪರಿಶೀಲಿಸುತ್ತಿದ್ದರು. ಇನ್ನು ಮಾಸ್ಕ್ ಧರರಿಸದೇ ತಿರುಗಾಡುವ ಸವಾರರ ವಿರುದ್ಧ ಸಮರ ಸಾರಿರೋ ಪೊಲೀಸ್ರು, ಮಾಸ್ಕ್ ಧರಿಸದವರನ್ನು ತಡೆದು ಕ್ಲಾಸ್ ತೆಗೆದುಕೊಂಡರು, ಅಲ್ದೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ರು.
ಮುಂಡಗೋಡದ ಶಿವಾಜಿ ಸರ್ಕಲ್ ನಲ್ಲಿ ಜನವೋ ಜನ..! ಸಾಮಾಜಿಕ ಅಂತರ ಮಾಯ..!!
ಮುಂಡಗೋಡ- ಪಟ್ಟಣದಲ್ಲಿ ಇಂದು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿರೋ ಹಿನ್ನೆಲೆಯಲ್ಲಿ, ಮುಂಡಗೋಡ ಪಟ್ಟಣದ ಹೃದಯಭಾಗ ಶಿವಾಜಿ ಸರ್ಕಲ್ ನಲ್ಲಿ ಜನಸಂದಣಿ ಸೇರಿತ್ತು. ಅಗತ್ಯ ವಸ್ತುಗಳ ಖರೀಧಿಗೆ ತಾಲೂಕಿನ ಗ್ರಾಮೀಣ ಭಾಗಗಳಿಂದ ಬಂದಿದ್ದ ಜನ ಅಗತ್ಯ ವಸ್ತುಗಳ ಖರೀಧಿಯಲ್ಲಿ ಮುಳುಗಿದ್ರು. ಪಟ್ಟಣದ ಬಹುತೇಕ ದಿನಸಿ ಅಂಗಡಿಗಳು ಫುಲ್ ಆಗಿದ್ದವು. ಹೀಗಾಗಿ ಕೆಲವು ಕಡೆ ಸಾಮಾಜಿಕ ಅಂತರ ಅನ್ನೋದು ಮಂಗಮಾಯವಾಗಿತ್ತು. ಪೊಲೀಸರು ಎಷ್ಟೇ ಎಚ್ಚರಿಸಿದ್ರೂ ಜನ ಕ್ಯಾರೇ ಅನ್ನದೇ ಸಾಮಾಜಿಕ ಅಂತರ ಮರೆತು ಖರೀಧಿಯಲ್ಲಿ ಬ್ಯುಸಿಯಾಗಿದ್ರು.
LVK ಯಿಂದ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ರಕ್ಷಕ ಕಿಟ್, ದಿನಸಿ ಕಿಟ್ ವಿತರಣೆ..!
ಮುಂಡಗೋಡ- ತಾಲೂಕಿನ ಹುನಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ LVK ಮುಂಡಗೋಡ ವತಿಯಿಂದ ಆಶಾ ಕರ್ಯಕರ್ತೆಯರಿಗೆ ಸ್ಯಾನಿಟೈಸ್, ಮಾಸ್ಕ್ ಸೇರಿ ಆರೋಗ್ಯ ರಕ್ಷಕ ಕಿಟ್ ವಿತರಣೆ ಮಾಡಲಾಯಿತು. ಹಾಗೇ ಆಶಾ ಕರ್ಯಕರ್ತರಿಗೆ ದಿನಸಿ ಸಾಮಗ್ರಿಗಳ ಕಿಟ್ ನೀಡಲಾಯಿತು. ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ ಜವಾಬ್ದಾರಿಯ ಕಾರ್ಯಗಳನ್ನು ಮಾಡುತ್ತಿರೋ LVK ತಾಲೂಕಿನ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಇಂತಹದ್ದೊಂದು ಸೇವೆ ಮಾಡುತ್ತಿದೆ. ಇನ್ನು ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎಸ್.ವಿ. ಸುಳ್ಳದ, LVK ಸಂಚಾಲಕರು, ಆರೋಗ್ಯ ಸಿಬ್ಬಂದಿಗಳು ಹಾಜರಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆ, ನಡೆಯತ್ತಾ..? ರದ್ದಾಗತ್ತಾ..? ಸುಪ್ರೀಂ ನಲ್ಲಿ ಇಂದು ಭವಿಷ್ಯ..!!
ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿನ ಅಬ್ಬರ ಜೋರಾಗಿದೆ. ಈ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಾ, ಇಲ್ಲಾ ರದ್ದಾಗುತ್ತಾ ಅನ್ನೋ ಗೊಂದಲ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿಂದು ಸುಪ್ರೀಂ ಕೋರ್ಟ್ ಪರೀಕ್ಷೆಯ ಭವಿಷ್ಯ ನಿರ್ಧಾರ ಮಾಡಲಿದೆ. ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೇ ಬೇಡವೇ ಅನ್ನೋ ಕುರಿತು ಕೇಂದ್ರ ಸರಕಾರ ಕಳೆದ ವಾರ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕೇಂದ್ರ ಶಿಕ್ಷಣ ಇಲಾಖೆ ಜೂನ್ ತಿಂಗಳಿನಲ್ಲಿಯೇ ಸಿಬಿಎಸ್ಇ ಹಾಗೂ ಐಸಿಎಸ್ಇ ಸಿಲೆಬಸ್ ನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಾಗಿ ಘೋಷಣೆಯನ್ನು ಮಾಡಿದೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕು ಮಿತಿಮೀರಿರುವ ಹೊತ್ತಲ್ಲೇ ಪರೀಕ್ಷೆ ನಡೆಸುವುದಕ್ಕೆ ಕೇಂದ್ರ ಸರಕಾರ ಮುಂದಾಗುತ್ತಿದ್ದಂತೆಯೇ ವಕೀಲರಾದ ಮಮತಾ ಶರ್ಮಾ ಎಂಬವರು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...