Home Publicfirstnewz

Tag: Publicfirstnewz

Post
ತಾಲೂಕಿನಲ್ಲಿ ಮತ್ತೆ ಮಹಾಮಳೆ ಕಂಟಕ, ಬಡ್ಡಿಗೇರಿ ಹಳ್ಳದ ಬ್ರಿಡ್ಜ್  ಜಲಾವೃತ, ಸಂಚಾರ ಬಂದ್..!

ತಾಲೂಕಿನಲ್ಲಿ ಮತ್ತೆ ಮಹಾಮಳೆ ಕಂಟಕ, ಬಡ್ಡಿಗೇರಿ ಹಳ್ಳದ ಬ್ರಿಡ್ಜ್ ಜಲಾವೃತ, ಸಂಚಾರ ಬಂದ್..!

 ಮುಂಡಗೋಡ: ತಾಲೂಕಿನ ಹಲವು ಕಡೆ ಭರ್ಜರಿ ಮಳೆಯಾಗಿದೆ. ಸಂಜೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಇದ್ರಿಂದ ಯಲ್ಲಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ. ಮುಂಡಗೋಡ ತಾಲೂಕಿನ ಬಡ್ಡಿಗೇರಿ ಹಾಗೂ ಗುಂಜಾವತಿ ಮದ್ಯೆ ಬಡ್ಡಿಗೇರಿ ಹಳ್ಳ ತುಂಬಿದ ಪರಿಣಾಮ ಹಳ್ಳದ ನೀರು ರಸ್ತೆಯ ಮೇಲೆ ಹರಿದು, ಕಿರು ಸೇತುವೆ ಮುಳುಗಡೆಯಾಗಿದೆ. ಹೀಗಾಗಿ, ರಸ್ತೆ ಮೇಲೆ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಯಲ್ಲಾಪುರ ರಸ್ತೆಯ ಬಹುತೇಕ ಕಡೆ ಭಾರಿ ಮಳೆಯಾಗಿದ್ದು ,ಹಲವು ಹಳ್ಳಗಳಲ್ಲಿ ನೀರು ಭರ್ತಿಯಾಗಿ ಹರಿಯುತ್ತಿದೆ.

Post
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಲಕ್ಕೊಳ್ಳಿಯ ಯುವ ಕ್ರೀಡಾಪಟು ಎನ್.ಎಸ್. ಸಿಮಿ ಸಂಭ್ರಮದ ಹೆಜ್ಜೆ..!

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಲಕ್ಕೊಳ್ಳಿಯ ಯುವ ಕ್ರೀಡಾಪಟು ಎನ್.ಎಸ್. ಸಿಮಿ ಸಂಭ್ರಮದ ಹೆಜ್ಜೆ..!

 ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಯುವ ಕ್ರೀಡಾಪಟು ಎನ್.ಎಸ್.ಸಿಮಿ, ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ 4×100 ಮೀ ರಿಲೇ ಓಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅಲ್ಲಿಂದಲೇ, ವಿಡಿಯೋ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್ ಗೆ ಆಯ್ಕೆಯಾಗಿ ಮುಂಡಗೋಡ ತಾಲೂಕಿನ ಕೀರ್ತಿಯನ್ನು ಹಾಗೂ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಸದ್ಯ ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿರೊ ಎನ್.ಎಸ್.ಸಿಮಿ, ಹುರುಪಿನಿಂದಲೇ ಭಾರತ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ....

Post
ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!

ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!

 ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ಮರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರೇಶ ರಾಮಣ್ಣ ಗೊಲ್ಲರ್ ಎಂಬುವನ ಮೇಲೆ ಮಾರಣಾಂತಿಕ ದಾಳಿ ಮಾಡಿದೆ. ಮರಿಗಳೊಂದಿಗೆ ಆಹಾರ ಅರಸಿ ಬಂದಿದ್ದ ಕರಡಿ ರೈತನನ್ನು ನೋಡಿ ಪ್ರಾಣಭಯದಿಂದ ದಾಳಿ ಮಾಡಿದೆ ಎನ್ನಲಾಗಿದೆ. ಅಂದಹಾಗೆ, ಗದ್ದೆಯಲ್ಲಿ ಮಂಗಗಳ ಹಾವಳಿ ಕಾರಣಕ್ಕೆ ಗೋವಿನಜೋಳ ರಕ್ಷಣೆಗಾಗಿ ಕಟ್ಟಿದ್ದ ಶ್ವಾನಗಳಿಗೆ ಆಹಾರ ಕೊಡಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಸ್ಥಳೀಯರು ರೈತನ‌ ನೆರವಿಗೆ ಬಂದಿದ್ದಾರೆ....

Post
ಮುಂಡಗೋಡ ತಹಶೀಲ್ದಾರ್ ವಿರುದ್ಧ ದಲಿತರ ಅನಿರ್ಧಿಷ್ಟ ಧರಣಿ, ಸಾಹೇಬ್ರೇ ಇನ್ನೂ ಎಷ್ಟು ದಿನ..?

ಮುಂಡಗೋಡ ತಹಶೀಲ್ದಾರ್ ವಿರುದ್ಧ ದಲಿತರ ಅನಿರ್ಧಿಷ್ಟ ಧರಣಿ, ಸಾಹೇಬ್ರೇ ಇನ್ನೂ ಎಷ್ಟು ದಿನ..?

ನಿಜ, ಮುಂಡಗೋಡಿನ ಇತಿಹಾಸದಲ್ಲೇ ಇದು ಬಹುದೊಡ್ಡ ನಾಚಿಗ್ಗೇಡಿನ ಸಂಗತಿ ಅಂದ್ರೂ ತಪ್ಪಿಲ್ಲ ಅನಿಸತ್ತೆ. ತಾಲೂಕಿನ ದಂಡಾಧಿಕಾರಿಯೊಬ್ಬರ ವಿರುದ್ಧ ಈ ಪರಿಯ ಹೋರಾಟ ಬಹುಶಃ ಹಿಂದೆ ಎಂದೂ ನಡೆದಿರಲಿಲ್ಲವೆನೋ..? ಇಷ್ಟಾದ್ರೂ ಆ ಅಧಿಕಾರಿಯನ್ನ ಬಚಾವ್ ಮಾಡುವಲ್ಲಿ ತೆರೆ‌ಮರೆಯ ಕಸರತ್ತು ನಡೆಸ್ತಿರೋ “ದೊಡ್ಡ”ವರಿಗೆ ಏನೂ ಅನಿಸ್ತಾನೇ ಇಲ್ವಾ..? ಅದೂ ಹೋಗಲಿ, ತಮ್ಮ ಮೇಲೆ ಅಂತಹದ್ದೊಂದು ಭಯಂಕರ ಆರೋಪ ಬಂದು, ಪೊಲೀಸ್ ಠಾಣೆಯ ಮೆಟ್ಟಿಲೇರಿ ಜಗಜ್ಜಾಹೀರಾದಾಗಲೂ ಆ ಅಧಿಕಾರಿಗೆ ಮುಂಡಗೋಡಿಗರ ತಾಳ್ಮೆ ಅರ್ಥ ಆಗ್ತಿಲ್ವಾ..? ಇದು ಬಹುತೇಕ‌ ಮುಂಡಗೋಡಿನ ಪ್ರಜ್ಞಾವಂತರ ಪ್ರಶ್ನೆ..!...

Post
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..!

ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..!

ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..! ಮುಂಡಗೋಡ: ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾದ ಘಟನೆ ನಡೆದಿದೆ. ಆಕಸ್ಮಿವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಗದ್ದೆಗೂ ಹರಡುವ ಸಾಧ್ಯತೆ ಇದ್ದ ಕಾರಣಕ್ಕೆ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ರು‌. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದ್ದು ರೈತನ ಬದುಕು ಮೂರಾಬಟ್ಟೆಯಾಗಿದೆ‌ ಹೀಗಾಗಿ ರೈತನಿಗೆ ಪರಿಹಾರ...

Post
ಇಂದೂರಿನಲ್ಲಿ “ದೇವರ ಹಾವು” ಪ್ರತ್ಯಕ್ಷ..‌!

ಇಂದೂರಿನಲ್ಲಿ “ದೇವರ ಹಾವು” ಪ್ರತ್ಯಕ್ಷ..‌!

ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ನಡೆಯುತ್ತಿರೊ ಕಾಲುವೆ ಕಾಮಗಾರಿ ವೇಳೆ ಬೃಹತ್ ನಾಗರ ಹಾವು ಪ್ರತ್ಯಕ್ಷವಾಗಿ ಆತಂಕ ಮೂಡಿಸಿತ್ತು. ಜಲಾಶಯದ ಕಾಲುವೆ ಕಾಮಗಾರಿ ವೇಳೆ ಆಹಾರ ಅರಸಿ ಬಂದಿದ್ದ ಘಟ ಸರ್ಪ ನಿರಾತಂಕವಾಗಿ ಕಾಲುವೆಯಲ್ಲಿ ಆಟವಾಡುತ್ತಿತ್ತು. ಹೀಗಾಗಿ ಕೆಲಹೊತ್ತು, ಕಾರ್ಮಿಕರ ಆತಂಕಕ್ಕೆ ಕಾರಣವಾಗಿತ್ತು. ಹಾವನ್ನು ಸುರಕ್ಷಿತವಾಗಿ ಕಾಲುವೆಯಿಂದ ಹೊರಗೆ ಕಳಿಸುವಲ್ಲಿ ಜನರು ಯಶಸ್ವಿಯಾದ್ರು. ಅಲ್ಲದೆ ಈ ಹಾವು ದೇವರ ಹಾವು ಅಂತಾ ಅಲ್ಲಿದ್ದವರು ಕೈ ಮುಗಿದು ನಿಂತಿರೊ ದೃಷ್ಯ ಕಂಡು ಬಂತು. ಒಟ್ನಲ್ಲಿ ಹಾವು ಬಂದ ಕಾರಣಕ್ಕೆ ಸ್ಥಳದಲ್ಲಿ...

error: Content is protected !!